< יחזקאל 46 >

כֹּֽה־אָמַר אֲדֹנָי יְהוִה שַׁעַר הֶחָצֵר הַפְּנִימִית הַפֹּנֶה קָדִים יִהְיֶה סָגוּר שֵׁשֶׁת יְמֵי הַֽמַּעֲשֶׂה וּבְיוֹם הַשַּׁבָּת יִפָּתֵחַ וּבְיוֹם הַחֹדֶשׁ יִפָּתֵֽחַ׃ 1
“‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಒಳಗಿನ ಅಂಗಳದ ಪೂರ್ವದಿಕ್ಕಿನ ಎದುರಾಗಿರುವ ಬಾಗಿಲು ಕೆಲಸ ನಡೆಯುವ ಆರು ದಿವಸಗಳಲ್ಲಿ ಮುಚ್ಚಲಾಗಬೇಕು. ಆದರೆ ಸಬ್ಬತ್ ದಿನದಲ್ಲಿ ಅದು ತೆರೆದಿರಬೇಕು. ಅಮಾವಾಸ್ಯೆಯ ದಿನದಲ್ಲೂ ಅದು ತೆರೆದಿರಬೇಕು.
וּבָא הַנָּשִׂיא דֶּרֶךְ אוּלָם הַשַּׁעַר מִחוּץ וְעָמַד עַל־מְזוּזַת הַשַּׁעַר וְעָשׂוּ הַכֹּהֲנִים אֶת־עֽוֹלָתוֹ וְאֶת־שְׁלָמָיו וְהִֽשְׁתַּחֲוָה עַל־מִפְתַּן הַשַּׁעַר וְיָצָא וְהַשַּׁעַר לֹֽא־יִסָּגֵר עַד־הָעָֽרֶב׃ 2
ರಾಜಕುಮಾರನು ಆ ಬಾಗಿಲಿನ ದ್ವಾರಮಂಟಪ ಮಾರ್ಗವಾಗಿ ಹೊರಗಿನಿಂದ ಪ್ರವೇಶಿಸಿ ಬಾಗಿಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು. ಆಗ ಯಾಜಕರು ಅವನ ದಹನಬಲಿಯನ್ನು ಅವನ ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು. ಬಾಗಿಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಿಲು ಸಂಜೆಯವರೆಗೂ ಮುಚ್ಚದಿರಬೇಕು.
וְהִשְׁתַּחֲווּ עַם־הָאָרֶץ פֶּתַח הַשַּׁעַר הַהוּא בַּשַּׁבָּתוֹת וּבֶחֳדָשִׁים לִפְנֵי יְהוָֽה׃ 3
ದೇಶದ ಜನರು ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಈ ಬಾಗಿಲಿನ ಕದದ ಹತ್ತಿರ ಯೆಹೋವ ದೇವರ ಮುಂದೆ ಇದೇ ರೀತಿ ಆರಾಧಿಸಬೇಕು.
וְהָעֹלָה אֲשֶׁר־יַקְרִב הַנָּשִׂיא לַֽיהוָה בְּיוֹם הַשַּׁבָּת שִׁשָּׁה כְבָשִׂים תְּמִימִם וְאַיִל תָּמִֽים׃ 4
ರಾಜಕುಮಾರನು ಯೆಹೋವ ದೇವರಿಗೆ ಸಬ್ಬತ್ ದಿನದಲ್ಲಿ ಪೂರ್ಣಾಂಗವಾದ ಆರು ಕುರಿಮರಿಗಳು, ಪೂರ್ಣಾಂಗವಾದ ಒಂದು ಟಗರು ದಹನಬಲಿಯಾಗಿ ಅರ್ಪಿಸಬೇಕು.
וּמִנְחָה אֵיפָה לָאַיִל וְלַכְּבָשִׂים מִנְחָה מַתַּת יָדוֹ וְשֶׁמֶן הִין לָאֵיפָֽה׃ 5
ಟಗರಿನ ಜೊತೆಗೆ ಕೊಡುವ ಧಾನ್ಯ ಸಮರ್ಪಣೆಯು ಸುಮಾರು ಹದಿನಾರು ಕಿಲೋಗ್ರಾಂ ಆಗಿರಬೇಕು ಮತ್ತು ಕುರಿಮರಿಗಳ ಜೊತೆಗೆ ಕೊಡುವ ಧಾನ್ಯ ಸಮರ್ಪಣೆಯು ಅವನ ಕೈಲಾದಷ್ಟು ಆಗಿರಬೇಕು. ಇದರ ಜೊತೆಗೆ ಪ್ರತಿ ಎಫಾ ಪ್ರಮಾಣದ ಧಾನ್ಯ ಸಮರ್ಪಣೆಯಾಗಿ ಸುಮಾರು ಮೂರುವರೆ ಲೀಟರ್ ಎಣ್ಣೆಯನ್ನು ಅರ್ಪಿಸಬೇಕು.
וּבְיוֹם הַחֹדֶשׁ פַּר בֶּן־בָּקָר תְּמִימִם וְשֵׁשֶׁת כְּבָשִׂם וָאַיִל תְּמִימִם יִהְיֽוּ׃ 6
ಅಮಾವಾಸ್ಯೆಯ ದಿನದಲ್ಲಿ ಪೂರ್ಣಾಂಗವಾದ ಒಂದು ಎಳೆಯ ಹೋರಿ, ಆರು ಕುರಿಮರಿಗಳು, ಒಂದು ಟಗರನ್ನು ಅರ್ಪಿಸಬೇಕು. ಇವು ದೋಷವಿಲ್ಲದ್ದಾಗಿರಬೇಕು.
וְאֵיפָה לַפָּר וְאֵיפָה לָאַיִל יַעֲשֶׂה מִנְחָה וְלַכְּבָשִׂים כַּאֲשֶׁר תַּשִּׂיג יָדוֹ וְשֶׁמֶן הִין לָאֵיפָֽה׃ 7
ಅವನು ಹೋರಿಗೆ ಒಂದು ಎಫವನ್ನೂ ಟಗರಿಗೆ ಒಂದು ಎಫವನ್ನೂ ಮತ್ತು ಕುರಿಮರಿಗೆ ಅವನ ಕೈಲಾಗುವಷ್ಟನ್ನು ಎಫ ಒಂದಕ್ಕೆ ಎಣ್ಣೆಯ ಒಂದು ಹಿನ್ನಿನ ಜೊತೆಗೆ ಅವನು ಧಾನ್ಯ ಸಮರ್ಪಣೆಗಾಗಿ ಸಿದ್ಧಮಾಡಬೇಕು.
וּבְבוֹא הַנָּשִׂיא דֶּרֶךְ אוּלָם הַשַּׁעַר יָבוֹא וּבְדַרְכּוֹ יֵצֵֽא׃ 8
ರಾಜಕುಮಾರನು ಪ್ರವೇಶಿಸುವಾಗ, ಅವನು ಬಾಗಿಲಿನ ದ್ವಾರಮಂಟಪದ ಪ್ರಕಾರವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.
וּבְבוֹא עַם־הָאָרֶץ לִפְנֵי יְהוָה בַּמּֽוֹעֲדִים הַבָּא דֶּרֶךְ־שַׁעַר צָפוֹן לְהִֽשְׁתַּחֲוֺת יֵצֵא דֶּרֶךְ־שַׁעַר נֶגֶב וְהַבָּא דֶּרֶךְ־שַׁעַר נֶגֶב יֵצֵא דֶּרֶךְ־שַׁעַר צָפוֹנָה לֹא יָשׁוּב דֶּרֶךְ הַשַּׁעַר אֲשֶׁר־בָּא בוֹ כִּי נִכְחוֹ יצאו יֵצֵֽא׃ 9
“‘ಆದರೆ ದೇಶದ ಜನರು ನಿಶ್ಚಿತ ಹಬ್ಬಗಳಲ್ಲಿ ಯೆಹೋವ ದೇವರ ಮುಂದೆ ಬರುವಾಗ ಉತ್ತರದ ಬಾಗಿಲಿನಿಂದ ಪ್ರವೇಶಿಸಿ ಆರಾಧಿಸಿದ ಮೇಲೆ ಅವನು ದಕ್ಷಿಣದ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ಮತ್ತು ದಕ್ಷಿಣ ಬಾಗಿಲಿನ ಮಾರ್ಗವಾಗಿ ಪ್ರವೇಶಿಸುವವನು ಉತ್ತರ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ದಕ್ಷಿಣದ ಬಾಗಿಲಿನ ಮಾರ್ಗವಾಗಿ ಪ್ರವೇಶಿಸಿದ ಬಾಗಿಲಿನ ಮಾರ್ಗವಾಗಿಯೇ ತಿರುಗಿ ಹೊರಗೆ ಹೋಗಬಾರದು. ಆದರೆ ಅದಕ್ಕೆ ಎದುರಾಗಿರುವ ಬಾಗಿಲಿನಿಂದ ಹೊರಗೆ ಹೋಗಬೇಕು.
וְֽהַנָּשִׂיא בְּתוֹכָם בְּבוֹאָם יָבוֹא וּבְצֵאתָם יֵצֵֽאוּ׃ 10
ರಾಜಕುಮಾರನು ಅವರ ಮಧ್ಯದಲ್ಲೆ ಅವರು ಒಳಗೆ ಹೋಗುವಾಗ ಒಳಗೆ ಹೋಗಬೇಕು, ಹೊರಗೆ ಹೋಗುವಾಗ ಹೊರಗೆ ಬರಬೇಕು.
וּבַחַגִּים וּבַמּוֹעֲדִים תִּהְיֶה הַמִּנְחָה אֵיפָה לַפָּר וְאֵיפָה לָאַיִל וְלַכְּבָשִׂים מַתַּת יָדוֹ וְשֶׁמֶן הִין לָאֵיפָֽה׃ 11
ನಿಶ್ಚಿತ ಹಬ್ಬಗಳಲ್ಲಿಯೂ ಸಭೆಗಳಲ್ಲಿಯೂ ಧಾನ್ಯ ಸಮರ್ಪಣೆಗೆ ಹೋರಿಗೆ ಒಂದು ಎಫವೂ ಟಗರಿಗೆ ಒಂದು ಎಫವೂ ಕುರಿಮರಿಗಳಿಗೆ ಅವರ ಕೈಲಾಗುವಷ್ಟು ಕೊಡಬೇಕು. ಎಫ ಒಂದಕ್ಕೆ ಎಣ್ಣೆಯ ಒಂದು ಹಿನ್ನು ಇರಬೇಕು.
וְכִֽי־יַעֲשֶׂה הַנָּשִׂיא נְדָבָה עוֹלָה אֽוֹ־שְׁלָמִים נְדָבָה לַֽיהוָה וּפָתַֽח לוֹ אֶת הַשַּׁעַר הַפֹּנֶה קָדִים וְעָשָׂה אֶת־עֹֽלָתוֹ וְאֶת־שְׁלָמָיו כַּאֲשֶׁר יַעֲשֶׂה בְּיוֹם הַשַּׁבָּת וְיָצָא וְסָגַר אֶת־הַשַּׁעַר אַחֲרֵי צֵאתֽוֹ׃ 12
“‘ರಾಜಕುಮಾರನು ಉಚಿತವಾದ ದಹನಬಲಿಯನ್ನಾಗಲಿ ಸಮಾಧಾನದ ಬಲಿಗಳನ್ನಾಗಲಿ ಉಚಿತವಾಗಿ ಯೆಹೋವ ದೇವರಿಗೆ ಸಮರ್ಪಿಸುವಾಗ ಅವರು ಪೂರ್ವದಿಕ್ಕಿಗೆ ಎದುರಾಗಿರುವ ಬಾಗಿಲನ್ನು ಅವನಿಗೆ ತೆರೆಯಬೇಕು. ಆಗ ಅವನು ತನ್ನ ದಹನಬಲಿಯನ್ನು ತನ್ನ ಸಮಾಧಾನದ ಬಲಿಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಹಾಗೆ ಸಮರ್ಪಣೆಮಾಡಿ ಹೊರಗೆ ಹೋಗಬೇಕು, ಅವನು ಹೊರಗೆ ಹೋದ ಮೇಲೆ ಬಾಗಿಲನ್ನು ಮುಚ್ಚಬೇಕು.
וְכֶבֶשׂ בֶּן־שְׁנָתוֹ תָּמִים תַּעֲשֶׂה עוֹלָה לַיּוֹם לַֽיהֹוָה בַּבֹּקֶר בַּבֹּקֶר תַּעֲשֶׂה אֹתֽוֹ׃ 13
“‘ನೀನು ಪ್ರತಿದಿನವೂ ಯೆಹೋವ ದೇವರಿಗೆ ಒಂದು ವರ್ಷದ ದೋಷರಹಿತವಾದ ಕುರಿಮರಿಯ ದಹನಬಲಿಯನ್ನು ಸಿದ್ಧಮಾಡಬೇಕು. ಹೀಗೆ ಪ್ರತಿದಿನವೂ ಮುಂಜಾನೆ ನಡೆಯಬೇಕು.
וּמִנְחָה תַעֲשֶׂה עָלָיו בַּבֹּקֶר בַּבֹּקֶר שִׁשִּׁית הָֽאֵיפָה וְשֶׁמֶן שְׁלִישִׁית הַהִין לָרֹס אֶת־הַסֹּלֶת מִנְחָה לַֽיהוָה חֻקּוֹת עוֹלָם תָּמִֽיד׃ 14
ಅದಕ್ಕೆ ಅರ್ಪಣೆಯಾಗಿ ಪ್ರತಿದಿನದ ಮುಂಜಾನೆಯಲ್ಲಿ ನೀನು ಸುಮಾರು ಎರಡುವರೆ ಕಿಲೋಗ್ರಾಂ ಗೋಧಿ ಹಿಟ್ಟಿನಲ್ಲಿ ಕಲಿಸುವ ಹಾಗೆ ಸುಮಾರು ಒಂದುವರೆ ಲೀಟರ್ ಎಣ್ಣೆಯನ್ನು ಸಿದ್ಧಮಾಡಬೇಕು. ಇದು ಯೆಹೋವ ದೇವರಿಗೆ ನಿತ್ಯನಿಯಮದ ಪ್ರಕಾರ ಎಡೆಬಿಡದ ಧಾನ್ಯ ಸಮರ್ಪಣೆಯಾಗಿದೆ.
ועשו יַעֲשׂוּ אֶת־הַכֶּבֶשׂ וְאֶת־הַמִּנְחָה וְאֶת־הַשֶּׁמֶן בַּבֹּקֶר בַּבֹּקֶר עוֹלַת תָּמִֽיד׃ 15
ಹೀಗೆ ಅವರು ಕುರಿಮರಿಯನ್ನು ಧಾನ್ಯ ಸಮರ್ಪಣೆಯನ್ನು ಎಣ್ಣೆಯನ್ನು ಪ್ರತಿದಿನದ ಮುಂಜಾನೆಯಲ್ಲಿ ಎಡೆಬಿಡದ ದಹನಬಲಿಯನ್ನಾಗಿ ಸಿದ್ಧಮಾಡಬೇಕು.
כֹּה־אָמַר אֲדֹנָי יְהֹוִה כִּֽי־יִתֵּן הַנָּשִׂיא מַתָּנָה לְאִישׁ מִבָּנָיו נַחֲלָתוֹ הִיא לְבָנָיו תִּֽהְיֶה אֲחֻזָּתָם הִיא בְּנַחֲלָֽה׃ 16
“‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ರಾಜಕುಮಾರನು ತನ್ನ ಪುತ್ರರಲ್ಲಿ ಯಾವನಿಗಾದರೂ ದಾನವನ್ನು ಕೊಟ್ಟರೆ ಅದರ ಬಾಧ್ಯತೆಯು ಅವನ ಕುಮಾರರಿಗೆ ಸಲ್ಲಬೇಕು. ಏಕೆಂದರೆ ಅದು ಬಾಧ್ಯವಾಗಿ ಅವರ ಸೊತ್ತಾಗಿದೆ.
וְכִֽי־יִתֵּן מַתָּנָה מִנַּחֲלָתוֹ לְאַחַד מֵֽעֲבָדָיו וְהָיְתָה לּוֹ עַד־שְׁנַת הַדְּרוֹר וְשָׁבַת לַנָּשִׂיא אַךְ נַחֲלָתוֹ בָּנָיו לָהֶם תִּהְיֶֽה׃ 17
ಆದರೆ ಆತನು ತನ್ನ ಸೊತ್ತಿನೊಳಗಿಂದ ತನ್ನ ಸೇವಕರಲ್ಲಿ ಒಬ್ಬರಿಗೆ ದಾನವಾಗಿ ಕೊಟ್ಟರೆ, ಅದು ಬಿಡುಗಡೆ ವರ್ಷದವರೆಗೂ ಅವನಿಗಾಗಿದ್ದು ಆಮೇಲೆ ಮತ್ತೆ ರಾಜಕುಮಾರನಿಗೆ ಸೇರಬೇಕು. ಅವನ ಸೊತ್ತು ಅವನ ಮಕ್ಕಳಿಗೆ ಮಾತ್ರ ಸೇರಬೇಕು. ಇದು ಅವರದೇ.
וְלֹא־יִקַּח הַנָּשִׂיא מִנַּחֲלַת הָעָם לְהֽוֹנֹתָם מֵאֲחֻזָּתָם מֵאֲחֻזָּתוֹ יַנְחִל אֶת־בָּנָיו לְמַעַן אֲשֶׁר לֹֽא־יָפֻצוּ עַמִּי אִישׁ מֵאֲחֻזָּתֽוֹ׃ 18
ಇದಾದ ಮೇಲೆ ರಾಜಕುಮಾರನು ಜನರ ಸೊತ್ತನ್ನು ಬಲವಂತವಾಗಿ ತೆಗೆದುಕೊಂಡು ಬಾಧ್ಯತೆಯೊಳಗಿಂದ ಅವರನ್ನು ತಳ್ಳಬಾರದು. ನನ್ನ ಜನರು ತಮ್ಮ ತಮ್ಮ ಬಾಧ್ಯತೆಯನ್ನು ಕಳೆದುಕೊಳ್ಳಬಾರದು. ತಂದೆಯು ತನ್ನ ಸ್ವಂತ ಬಾಧ್ಯತೆಯಿಂದಲೇ ತನ್ನ ಪುತ್ರರಿಗೆ ಸೊತ್ತನ್ನು ಕೊಡಬೇಕು.’”
וַיְבִיאֵנִי בַמָּבוֹא אֲשֶׁר עַל־כֶּתֶף הַשַּׁעַר אֶל־הַלִּשְׁכוֹת הַקֹּדֶשׁ אֶל־הַכֹּהֲנִים הַפֹּנוֹת צָפוֹנָה וְהִנֵּה־שָׁם מָקוֹם בירכתם בַּיַּרְכָתַיִם יָֽמָּה׃ 19
ಆಮೇಲೆ ಅವನು ನನ್ನನ್ನು ಬಾಗಿಲಿನ ಪಕ್ಕದಲ್ಲಿದ್ದ ಪ್ರವೇಶವಿದ್ದ ಉತ್ತರಕ್ಕೆ ಅಭಿಮುಖವಾದ ಯಾಜಕರ ಪರಿಶುದ್ಧ ಕೊಠಡಿಗೆ ಕರೆದುಕೊಂಡು ಹೋದನು. ಅಲ್ಲಿ ಅವುಗಳ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.
וַיֹּאמֶר אֵלַי זֶה הַמָּקוֹם אֲשֶׁר יְבַשְּׁלוּ־שָׁם הַכֹּהֲנִים אֶת־הָאָשָׁם וְאֶת־הַחַטָּאת אֲשֶׁר יֹאפוּ אֶת־הַמִּנְחָה לְבִלְתִּי הוֹצִיא אֶל־הֶחָצֵר הַחִֽיצוֹנָה לְקַדֵּשׁ אֶת־הָעָֽם׃ 20
ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ ದೋಷಪರಿಹಾರ ಬಲಿಯನ್ನೂ ಬೇಯಿಸಿದ ಧಾನ್ಯ ಸಮರ್ಪಣೆಯನ್ನು ಸುಡುವಂತೆ ಏರ್ಪಡಿಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡುವುದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು,” ಎಂದು ಹೇಳಿದನು.
וַיּוֹצִיאֵנִי אֶל־הֶֽחָצֵר הַחִיצֹנָה וַיַּעֲבִירֵנִי אֶל־אַרְבַּעַת מִקְצוֹעֵי הֶחָצֵר וְהִנֵּה חָצֵר בְּמִקְצֹעַ הֶחָצֵר חָצֵר בְּמִקְצֹעַ הֶחָצֵֽר׃ 21
ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅಂಗಳದ ನಾಲ್ಕು ಮೂಲೆಗಳನ್ನು ಹಾದುಹೋಗುವಂತೆ ಮಾಡಿದನು. ಅಂಗಳದ ಒಂದೊಂದು ಮೂಲೆಯಲ್ಲಿ ಒಂದು ಅಂಗಳವನ್ನು ನಾನು ಕಂಡೆನು.
בְּאַרְבַּעַת מִקְצֹעוֹת הֶֽחָצֵר חֲצֵרוֹת קְטֻרוֹת אַרְבָּעִים אֹרֶךְ וּשְׁלֹשִׁים רֹחַב מִדָּה אַחַת לְאַרְבַּעְתָּם מְהֻקְצָעֽוֹת׃ 22
ಅಂಗಳದ ನಾಲ್ಕು ಮೂಲೆಯಲ್ಲಿ ನಲವತ್ತು ಮೊಳ ಉದ್ದವಾಗಿಯೂ ಮೂವತ್ತು ಮೊಳ ಅಗಲವಾಗಿಯೂ ಕೂಡಿಕೊಂಡಿದ್ದವು. ಆ ನಾಲ್ಕೂ ಮೂಲೆಗಳಿಗೂ ಒಂದೇ ಅಳತೆಯಾಗಿತ್ತು.
וְטוּר סָבִיב בָּהֶם סָבִיב לְאַרְבַּעְתָּם וּמְבַשְּׁלוֹת עָשׂוּי מִתַּחַת הַטִּירוֹת סָבִֽיב׃ 23
ಅವುಗಳಲ್ಲಿ ಎಂದರೆ ಆ ನಾಲ್ಕರಲ್ಲಿ ಸುತ್ತಲೂ ಸಾಲು ಇತ್ತು. ಆ ಸಾಲುಗಳ ಕೆಳಗೆ ಸುತ್ತಲೂ ಒಲೆಗಳಿದ್ದವು.
וַיֹּאמֶר אֵלָי אֵלֶּה בֵּית הַֽמְבַשְּׁלִים אֲשֶׁר יְבַשְּׁלוּ־שָׁם מְשָׁרְתֵי הַבַּיִת אֶת־זֶבַח הָעָֽם׃ 24
ಆಮೇಲೆ ಅವನು ನನಗೆ, “ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂಥ ಸ್ಥಳಗಳು ಎಂದು ಹೇಳಿದನು.”

< יחזקאל 46 >