+ בראשית 1 >

בְּרֵאשִׁית בָּרָא אֱלֹהִים אֵת הַשָּׁמַיִם וְאֵת הָאָֽרֶץ׃ 1
ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದರು.
וְהָאָרֶץ הָיְתָה תֹהוּ וָבֹהוּ וְחֹשֶׁךְ עַל־פְּנֵי תְהוֹם וְרוּחַ אֱלֹהִים מְרַחֶפֶת עַל־פְּנֵי הַמָּֽיִם׃ 2
ಭೂಮಿಯು ನಿರಾಕಾರವಾಗಿಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲೆ ಕವಿದಿತ್ತು. ದೇವರಾತ್ಮರು ಜಲ ಸಮೂಹಗಳ ಮೇಲೆ ಚಲಿಸುತ್ತಿದ್ದರು.
וַיֹּאמֶר אֱלֹהִים יְהִי אוֹר וַֽיְהִי־אֽוֹר׃ 3
ಆಗ ದೇವರು, “ಬೆಳಕಾಗಲಿ” ಎನ್ನಲು, ಬೆಳಕಾಯಿತು.
וַיַּרְא אֱלֹהִים אֶת־הָאוֹר כִּי־טוֹב וַיַּבְדֵּל אֱלֹהִים בֵּין הָאוֹר וּבֵין הַחֹֽשֶׁךְ׃ 4
ದೇವರು ಬೆಳಕನ್ನು ಒಳ್ಳೆಯದೆಂದು ಕಂಡರು. ದೇವರು ಬೆಳಕನ್ನು ಕತ್ತಲೆಯಿಂದ ಪ್ರತ್ಯೇಕಿಸಿದರು.
וַיִּקְרָא אֱלֹהִים ׀ לָאוֹר יוֹם וְלַחֹשֶׁךְ קָרָא לָיְלָה וַֽיְהִי־עֶרֶב וַֽיְהִי־בֹקֶר יוֹם אֶחָֽד׃ 5
ದೇವರು ಬೆಳಕಿಗೆ ಹಗಲು ಎಂದೂ ಕತ್ತಲೆಗೆ ರಾತ್ರಿ ಎಂದೂ ಕರೆದರು. ಆಗ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.
וַיֹּאמֶר אֱלֹהִים יְהִי רָקִיעַ בְּתוֹךְ הַמָּיִם וִיהִי מַבְדִּיל בֵּין מַיִם לָמָֽיִם׃ 6
ನಂತರ ದೇವರು, “ಜಲರಾಶಿಯ ನಡುವೆ ವಿಸ್ತಾರವಾದ ಗುಮ್ಮಟವಾಗಲಿ, ಅದು ನೀರಿನಿಂದ ಭೂಮಿಯನ್ನು ಪ್ರತ್ಯೇಕ ಮಾಡಲಿ,” ಎಂದರು.
וַיַּעַשׂ אֱלֹהִים אֶת־הָרָקִיעַ וַיַּבְדֵּל בֵּין הַמַּיִם אֲשֶׁר מִתַּחַת לָרָקִיעַ וּבֵין הַמַּיִם אֲשֶׁר מֵעַל לָרָקִיעַ וֽ͏ַיְהִי־כֵֽן׃ 7
ಹೀಗೆ ದೇವರು ವಿಸ್ತಾರವಾದ ಗುಮ್ಮಟವನ್ನು ಅದರ ಕೆಳಗಿದ್ದ ನೀರನ್ನೂ ಅದರ ಮೇಲಿದ್ದ ನೀರನ್ನೂ ಪ್ರತ್ಯೇಕಿಸಿದರು. ಅದು ಹಾಗೆಯೇ ಆಯಿತು.
וַיִּקְרָא אֱלֹהִים לָֽרָקִיעַ שָׁמָיִם וַֽיְהִי־עֶרֶב וַֽיְהִי־בֹקֶר יוֹם שֵׁנִֽי׃ 8
ದೇವರು ಆ ಗುಮ್ಮಟಕ್ಕೆ ಆಕಾಶ ಎಂದು ಕರೆದರು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು.
וַיֹּאמֶר אֱלֹהִים יִקָּווּ הַמַּיִם מִתַּחַת הַשָּׁמַיִם אֶל־מָקוֹם אֶחָד וְתֵרָאֶה הַיַּבָּשָׁה וַֽיְהִי־כֵֽן׃ 9
ಆಗ ದೇವರು, “ಆಕಾಶದ ಕೆಳಗಿರುವ ನೀರು ಒಂದೇ ಸ್ಥಳದಲ್ಲಿ ಕೂಡಿಕೊಳ್ಳಲಿ, ಒಣ ನೆಲವು ಕಾಣಿಸಲಿ,” ಎಂದರು. ಅದು ಹಾಗೆಯೇ ಆಯಿತು.
וַיִּקְרָא אֱלֹהִים ׀ לַיַּבָּשָׁה אֶרֶץ וּלְמִקְוֵה הַמַּיִם קָרָא יַמִּים וַיַּרְא אֱלֹהִים כִּי־טֽוֹב׃ 10
ದೇವರು ಒಣ ನೆಲಕ್ಕೆ “ಭೂಮಿ” ಎಂದೂ ಕೂಡಿಕೊಂಡಿದ್ದ ನೀರಿಗೆ “ಸಮುದ್ರ” ಎಂದೂ ಹೆಸರಿಟ್ಟರು. ದೇವರು ಅದನ್ನು ಒಳ್ಳೆಯದೆಂದು ಕಂಡರು.
וַיֹּאמֶר אֱלֹהִים תַּֽדְשֵׁא הָאָרֶץ דֶּשֶׁא עֵשֶׂב מַזְרִיעַ זֶרַע עֵץ פְּרִי עֹשֶׂה פְּרִי לְמִינוֹ אֲשֶׁר זַרְעוֹ־בוֹ עַל־הָאָרֶץ וַֽיְהִי־כֵֽן׃ 11
ಅನಂತರ ದೇವರು, “ಭೂಮಿಯು ಹುಲ್ಲನ್ನೂ ಬೀಜಬಿಡುವ ಗಿಡಗಳನ್ನೂ ಅದರದರ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳನ್ನೂ ಉತ್ಪತ್ತಿ ಮಾಡಲಿ,” ಎಂದು ಹೇಳಿದರು. ಅದು ಹಾಗೆಯೇ ಆಯಿತು.
וַתּוֹצֵא הָאָרֶץ דֶּשֶׁא עֵשֶׂב מַזְרִיעַ זֶרַע לְמִינֵהוּ וְעֵץ עֹֽשֶׂה־פְּרִי אֲשֶׁר זַרְעוֹ־בוֹ לְמִינֵהוּ וַיַּרְא אֱלֹהִים כִּי־טֽוֹב׃ 12
ಭೂಮಿಯ ಮೇಲೆ ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು ಮತ್ತು ಅದರದರ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳನ್ನು ಮೊಳೆಯಿಸಿದವು. ದೇವರು ಅದನ್ನು ಒಳ್ಳೆಯದೆಂದು ಕಂಡರು.
וֽ͏ַיְהִי־עֶרֶב וֽ͏ַיְהִי־בֹקֶר יוֹם שְׁלִישִֽׁי׃ 13
ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೂರನೆಯ ದಿನವಾಯಿತು.
וַיֹּאמֶר אֱלֹהִים יְהִי מְאֹרֹת בִּרְקִיעַ הַשָּׁמַיִם לְהַבְדִּיל בֵּין הַיּוֹם וּבֵין הַלָּיְלָה וְהָיוּ לְאֹתֹת וּלְמוֹעֲדִים וּלְיָמִים וְשָׁנִֽים׃ 14
ಅನಂತರ ದೇವರು, “ಹಗಲನ್ನು ರಾತ್ರಿಯಿಂದ ಪ್ರತ್ಯೇಕಿಸುವುದಕ್ಕೆ ಆಕಾಶಮಂಡಲದಲ್ಲಿ ಬೆಳಕುಗಳಿರಲಿ; ಅವು ಕಾಲಗಳನ್ನೂ ದಿನ ಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.
וְהָיוּ לִמְאוֹרֹת בִּרְקִיעַ הַשָּׁמַיִם לְהָאִיר עַל־הָאָרֶץ וֽ͏ַיְהִי־כֵֽן׃ 15
ಅವು ಭೂಮಿಗೆ ಬೆಳಕನ್ನು ಕೊಡುವುದಕ್ಕೆ ಆಕಾಶಮಂಡಲದಲ್ಲಿ ದೀಪಗಳಂತಿರಲಿ,” ಎಂದರು. ಅದು ಹಾಗೆಯೇ ಆಯಿತು.
וַיַּעַשׂ אֱלֹהִים אֶת־שְׁנֵי הַמְּאֹרֹת הַגְּדֹלִים אֶת־הַמָּאוֹר הַגָּדֹל לְמֶמְשֶׁלֶת הַיּוֹם וְאֶת־הַמָּאוֹר הַקָּטֹן לְמֶמְשֶׁלֶת הַלַּיְלָה וְאֵת הַכּוֹכָבִֽים׃ 16
ಹಗಲನ್ನಾಳುವುದಕ್ಕೆ ದೊಡ್ಡ ಬೆಳಕನ್ನು, ರಾತ್ರಿಯನ್ನಾಳುವುದಕ್ಕೆ ಚಿಕ್ಕ ಬೆಳಕನ್ನು ಎಂಬಂತೆ ದೇವರು ಎರಡು ದೊಡ್ಡ ಬೆಳಕುಗಳನ್ನು ಉಂಟುಮಾಡಿದರು. ದೇವರು ನಕ್ಷತ್ರಗಳನ್ನು ಸಹ ಉಂಟುಮಾಡಿದರು.
וַיִּתֵּן אֹתָם אֱלֹהִים בִּרְקִיעַ הַשָּׁמָיִם לְהָאִיר עַל־הָאָֽרֶץ׃ 17
ದೇವರು ಆ ಬೆಳಕುಗಳನ್ನು ಆಕಾಶದಲ್ಲಿಟ್ಟು ಭೂಮಿಗೆ ಬೆಳಕನ್ನು ಕೊಡುವುದಕ್ಕೂ
וְלִמְשֹׁל בַּיּוֹם וּבַלַּיְלָה וּֽלֲהַבְדִּיל בֵּין הָאוֹר וּבֵין הַחֹשֶׁךְ וַיַּרְא אֱלֹהִים כִּי־טֽוֹב׃ 18
ಹಗಲನ್ನು ಮತ್ತು ರಾತ್ರಿಯನ್ನು ಆಳುವುದಕ್ಕೂ ಬೆಳಕನ್ನು ಕತ್ತಲೆಯಿಂದ ಪ್ರತ್ಯೇಕಿಸುವುದಕ್ಕೂ ದೇವರು ಅವುಗಳನ್ನು ನೇಮಿಸಿದರು. ದೇವರು ಅದನ್ನು ಒಳ್ಳೆಯದೆಂದು ಕಂಡರು.
וַֽיְהִי־עֶרֶב וַֽיְהִי־בֹקֶר יוֹם רְבִיעִֽי׃ 19
ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ನಾಲ್ಕನೆಯ ದಿನವಾಯಿತು.
וַיֹּאמֶר אֱלֹהִים יִשְׁרְצוּ הַמַּיִם שֶׁרֶץ נֶפֶשׁ חַיָּה וְעוֹף יְעוֹפֵף עַל־הָאָרֶץ עַל־פְּנֵי רְקִיעַ הַשָּׁמָֽיִם׃ 20
ಆಮೇಲೆ ದೇವರು, “ನೀರಿನಲ್ಲಿ ಜೀವಜಂತುಗಳು ತುಂಬಿಕೊಳ್ಳಲಿ, ಭೂಮಿಯ ಮೇಲೆ ಆಕಾಶಮಂಡಲದಲ್ಲಿ ಪಕ್ಷಿಗಳು ಹಾರಾಡಲಿ,” ಎಂದರು.
וַיִּבְרָא אֱלֹהִים אֶת־הַתַּנִּינִם הַגְּדֹלִים וְאֵת כָּל־נֶפֶשׁ הֽ͏ַחַיָּה ׀ הָֽרֹמֶשֶׂת אֲשֶׁר שָׁרְצוּ הַמַּיִם לְמִֽינֵהֶם וְאֵת כָּל־עוֹף כָּנָף לְמִינֵהוּ וַיַּרְא אֱלֹהִים כִּי־טֽוֹב׃ 21
ಹೀಗೆ ದೇವರು ದೊಡ್ಡ ಜಲಚರಗಳನ್ನು, ನೀರಿನಲ್ಲಿ ತುಂಬಿರುವ ಎಲ್ಲಾ ಚಲಿಸುವ ಜೀವ ಜಂತುಗಳನ್ನು, ರೆಕ್ಕೆಗಳುಳ್ಳ ಪ್ರತಿಯೊಂದು ಪಕ್ಷಿಯನ್ನು ಅವುಗಳ ಜಾತಿಗನುಸಾರವಾಗಿ ಸೃಷ್ಟಿಸಿದರು. ದೇವರು ಅದನ್ನು ಒಳ್ಳೆಯದೆಂದು ಕಂಡರು.
וַיְבָרֶךְ אֹתָם אֱלֹהִים לֵאמֹר פְּרוּ וּרְבוּ וּמִלְאוּ אֶת־הַמַּיִם בַּיַּמִּים וְהָעוֹף יִרֶב בָּאָֽרֶץ׃ 22
ದೇವರು ಅವುಗಳನ್ನು ಆಶೀರ್ವದಿಸಿ ಅವುಗಳಿಗೆ, “ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಸಮುದ್ರಗಳಲ್ಲಿ ನೀರನ್ನು ತುಂಬಿರಿ, ಭೂಮಿಯ ಮೇಲೆ ಪಕ್ಷಿಗಳ ಸಂಖ್ಯೆ ಹೆಚ್ಚಾಗಲಿ,” ಎಂದರು.
וַֽיְהִי־עֶרֶב וַֽיְהִי־בֹקֶר יוֹם חֲמִישִֽׁי׃ 23
ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಐದನೆಯ ದಿನವಾಯಿತು.
וַיֹּאמֶר אֱלֹהִים תּוֹצֵא הָאָרֶץ נֶפֶשׁ חַיָּה לְמִינָהּ בְּהֵמָה וָרֶמֶשׂ וְחַֽיְתוֹ־אֶרֶץ לְמִינָהּ וַֽיְהִי־כֵֽן׃ 24
ಆಮೇಲೆ ದೇವರು, “ಭೂಮಿಯಿಂದ ಎಲ್ಲಾ ತರಹದ ಜೀವಿಗಳು ಉಂಟಾಗಲಿ: ಪಶುಗಳು, ನೆಲದ ಮೇಲೆ ಹರಿದಾಡುವ ಜೀವಿಗಳು, ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಉಂಟಾಗಲಿ,” ಎಂದರು. ಅದು ಹಾಗೆಯೇ ಆಯಿತು.
וַיַּעַשׂ אֱלֹהִים אֶת־חַיַּת הָאָרֶץ לְמִינָהּ וְאֶת־הַבְּהֵמָה לְמִינָהּ וְאֵת כָּל־רֶמֶשׂ הָֽאֲדָמָה לְמִינֵהוּ וַיַּרְא אֱלֹהִים כִּי־טֽוֹב׃ 25
ಹೀಗೆ ದೇವರು ಎಲ್ಲ ತರದ ಕಾಡುಮೃಗಗಳನ್ನೂ ಪಶುಗಳನ್ನೂ ನೆಲದ ಮೇಲೆ ಹರಿದಾಡುವ ಜೀವಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದರು. ದೇವರು ಅದನ್ನು ಒಳ್ಳೆಯದೆಂದು ಕಂಡರು.
וַיֹּאמֶר אֱלֹהִים נַֽעֲשֶׂה אָדָם בְּצַלְמֵנוּ כִּדְמוּתֵנוּ וְיִרְדּוּ בִדְגַת הַיָּם וּבְעוֹף הַשָּׁמַיִם וּבַבְּהֵמָה וּבְכָל־הָאָרֶץ וּבְכָל־הָרֶמֶשׂ הֽ͏ָרֹמֵשׂ עַל־הָאָֽרֶץ׃ 26
ತರುವಾಯ ದೇವರು, “ನಾವು ನಮ್ಮ ಸ್ವರೂಪದಲ್ಲಿ, ನಮ್ಮ ಹೋಲಿಕೆಯಲ್ಲಿ ಮನುಷ್ಯನನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ಮಾಡಲಿ,” ಎಂದರು.
וַיִּבְרָא אֱלֹהִים ׀ אֶת־הֽ͏ָאָדָם בְּצַלְמוֹ בְּצֶלֶם אֱלֹהִים בָּרָא אֹתוֹ זָכָר וּנְקֵבָה בָּרָא אֹתָֽם׃ 27
ಹೀಗೆ ದೇವರು ಮನುಷ್ಯನನ್ನು ತಮ್ಮ ಸ್ವರೂಪದಲ್ಲಿ ಸೃಷ್ಟಿ ಮಾಡಿದರು. ದೇವರ ಸ್ವರೂಪದಲ್ಲಿಯೇ ಅವರನ್ನು ಸೃಷ್ಟಿ ಮಾಡಿದರು. ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿ ಮಾಡಿದರು.
וַיְבָרֶךְ אֹתָם אֱלֹהִים וַיֹּאמֶר לָהֶם אֱלֹהִים פְּרוּ וּרְבוּ וּמִלְאוּ אֶת־הָאָרֶץ וְכִבְשֻׁהָ וּרְדוּ בִּדְגַת הַיָּם וּבְעוֹף הַשָּׁמַיִם וּבְכָל־חַיָּה הֽ͏ָרֹמֶשֶׂת עַל־הָאָֽרֶץ׃ 28
ದೇವರು ಅವರನ್ನು ಆಶೀರ್ವದಿಸಿ, “ನೀವು ಸಂತಾನವುಳ್ಳವರಾಗಿ, ಸಂಖ್ಯೆಯಲ್ಲಿ ಹೆಚ್ಚಿರಿ, ಭೂಮಿಯನ್ನು ತುಂಬಿಸಿ ಅದನ್ನು ಆಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ನೆಲದ ಮೇಲೆ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ನಡೆಸಿರಿ,” ಎಂದು ಅವರಿಗೆ ಹೇಳಿದರು.
וַיֹּאמֶר אֱלֹהִים הִנֵּה נָתַתִּי לָכֶם אֶת־כָּל־עֵשֶׂב ׀ זֹרֵעַ זֶרַע אֲשֶׁר עַל־פְּנֵי כָל־הָאָרֶץ וְאֶת־כָּל־הָעֵץ אֲשֶׁר־בּוֹ פְרִי־עֵץ זֹרֵעַ זָרַע לָכֶם יִֽהְיֶה לְאָכְלָֽה׃ 29
ದೇವರು, “ಇಗೋ, ಭೂಮಿಯ ಮೇಲಿರುವ ಬೀಜಬಿಡುವ ಸಕಲ ಸಸ್ಯಗಳನ್ನೂ ಬೀಜಬಿಡುವ ಸಕಲ ಹಣ್ಣಿನ ಮರಗಳನ್ನೂ ನಿಮಗೆ ಕೊಟ್ಟಿದ್ದೇನೆ. ಅವು ನಿಮಗೆ ಆಹಾರಕ್ಕಾಗಿರುವುವು.
וּֽלְכָל־חַיַּת הָאָרֶץ וּלְכָל־עוֹף הַשָּׁמַיִם וּלְכֹל ׀ רוֹמֵשׂ עַל־הָאָרֶץ אֲשֶׁר־בּוֹ נֶפֶשׁ חַיָּה אֶת־כָּל־יֶרֶק עֵשֶׂב לְאָכְלָה וַֽיְהִי־כֵֽן׃ 30
ಭೂಮಿಯಲ್ಲಿರುವ ಎಲ್ಲಾ ಜೀವಿಗಳಿಗೂ ಆಕಾಶದ ಪಕ್ಷಿಗಳಿಗೂ ನೆಲದ ಮೇಲೆ ಹರಿದಾಡುವ ಜೀವಿಗಳಿಗೂ ಉಸಿರನ್ನು ಹೊಂದಿರುವ ಪ್ರತಿಯೊಂದು ಜೀವಿಗಳಿಗೆ ಹಸಿರಾದ ಸಸ್ಯಗಳನ್ನೆಲ್ಲಾ ನಾನು ಆಹಾರವಾಗಿ ಕೊಟ್ಟಿದ್ದೇನೆ,” ಎಂದರು. ಅದು ಹಾಗೆಯೇ ಆಯಿತು.
וַיַּרְא אֱלֹהִים אֶת־כָּל־אֲשֶׁר עָשָׂה וְהִנֵּה־טוֹב מְאֹד וֽ͏ַיְהִי־עֶרֶב וֽ͏ַיְהִי־בֹקֶר יוֹם הַשִּׁשִּֽׁי׃ 31
ದೇವರು ತಾವು ಉಂಟು ಮಾಡಿದ್ದನ್ನೆಲ್ಲಾ ನೋಡಲು, ಅವೆಲ್ಲವೂ ಬಹಳ ಒಳ್ಳೆಯದಾಗಿದ್ದವು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.

+ בראשית 1 >