< חגי 1 >

בִּשְׁנַת שְׁתַּיִם לְדָרְיָוֶשׁ הַמֶּלֶךְ בַּחֹדֶשׁ הַשִּׁשִּׁי בְּיוֹם אֶחָד לַחֹדֶשׁ הָיָה דְבַר־יְהוָה בְּיַד־חַגַּי הַנָּבִיא אֶל־זְרֻבָּבֶל בֶּן־שְׁאַלְתִּיאֵל פַּחַת יְהוּדָה וְאֶל־יְהוֹשֻׁעַ בֶּן־יְהוֹצָדָק הַכֹּהֵן הַגָּדוֹל לֵאמֹֽר׃ 1
ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ, ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು.
כֹּה אָמַר יְהוָה צְבָאוֹת לֵאמֹר הָעָם הַזֶּה אָֽמְרוּ לֹא עֶת־בֹּא עֶת־בֵּית יְהוָה לְהִבָּנֽוֹת׃ 2
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಸಮಯವು ಇನ್ನು ಬಂದಿಲ್ಲ” ಎಂದು ಜನರು ಅಂದುಕೊಳ್ಳುತ್ತಾರಲ್ಲಾ.
וַֽיְהִי דְּבַר־יְהוָה בְּיַד־חַגַּי הַנָּבִיא לֵאמֹֽר׃ 3
ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ಹೇಳಿದನು,
הַעֵת לָכֶם אַתֶּם לָשֶׁבֶת בְּבָתֵּיכֶם סְפוּנִים וְהַבַּיִת הַזֶּה חָרֵֽב׃ 4
“ಈ ನನ್ನ ಆಲಯವು ಹಾಳು ಬಿದ್ದಿರುವಾಗ, ನೀವು ನಿಮ್ಮ ಒಳಗೋಡೆಗೆಲ್ಲಾ ಸುಂದರ ಹಲಿಗೆ ಹೊದಿಸಿಕೊಂಡ ಸ್ವಂತ ಮನೆಗಳಲ್ಲಿ ವಾಸಿಸುವುದಕ್ಕೆ ಈ ಸಮುಯವು ತಕ್ಕದ್ದೋ?”
וְעַתָּה כֹּה אָמַר יְהוָה צְבָאוֹת שִׂימוּ לְבַבְכֶם עַל־דַּרְכֵיכֶֽם׃ 5
ಈ ಸಮಯದಲ್ಲಿ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.
זְרַעְתֶּם הַרְבֵּה וְהָבֵא מְעָט אָכוֹל וְאֵין־לְשָׂבְעָה שָׁתוֹ וְאֵין־לְשָׁכְרָה לָבוֹשׁ וְאֵין־לְחֹם לוֹ וְהַמִּשְׂתַּכֵּר מִשְׂתַּכֵּר אֶל־צְרוֹר נָקֽוּב׃ 6
ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ಅದನ್ನು ಸೇವಿಸುವಿರಿ ತೃಪ್ತಿಯಾಗದು, ಕುಡಿಯುತ್ತೀರಿ ಆನಂದವಾಗದು; ಹೊದ್ದುಕೊಳ್ಳುವಿರಿ ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಾಗಿದೆ.”
כֹּה אָמַר יְהוָה צְבָאוֹת שִׂימוּ לְבַבְכֶם עַל־דַּרְכֵיכֶֽם׃ 7
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ; “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.
עֲלוּ הָהָר וַהֲבֵאתֶם עֵץ וּבְנוּ הַבָּיִת וְאֶרְצֶה־בּוֹ ואכבד וְאֶכָּבְדָה אָמַר יְהוָֽה׃ 8
ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ; ನಾನು ಅದಕ್ಕೆ ಮೆಚ್ಚಿ ನನ್ನ ಪ್ರಭಾವವನ್ನು ಅಲ್ಲಿ ಪ್ರಕಾಶಗೊಳಿಸುವೆನು” ಇದು ಯೆಹೋವನ ನುಡಿ.
פָּנֹה אֶל־הַרְבֵּה וְהִנֵּה לִמְעָט וַהֲבֵאתֶם הַבַּיִת וְנָפַחְתִּי בוֹ יַעַן מֶה נְאֻם יְהוָה צְבָאוֹת יַעַן בֵּיתִי אֲשֶׁר־הוּא חָרֵב וְאַתֶּם רָצִים אִישׁ לְבֵיתֽוֹ׃ 9
ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆದರೆ, ಸ್ವಲ್ಪ ಮಾತ್ರ ಮನೆಗೆ ಸಾಗಿಸಲು ಸಾಧ್ಯವಾಯಿತು; ಯಾಕೆಂದರೆ ನಾನು ಅದನ್ನು ಫಲಿಸಲು ಬಿಡಲಿಲ್ಲ. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಪಾಳು ಬಿದ್ದಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.”
עַל־כֵּן עֲלֵיכֶם כָּלְאוּ שָמַיִם מִטָּל וְהָאָרֶץ כָּלְאָה יְבוּלָֽהּ׃ 10
೧೦ನಿಮ್ಮ ನಿಮಿತ್ತವೇ ಆಕಾಶವು ಇಬ್ಬನಿಯನ್ನು ತಡೆದುಬಿಟ್ಟಿದೆ, ಭೂಮಿಯು ತನ್ನ ಫಲವನ್ನು ನಿಲ್ಲಿಸಿಬಿಟ್ಟಿದೆ;
וָאֶקְרָא חֹרֶב עַל־הָאָרֶץ וְעַל־הֶהָרִים וְעַל־הַדָּגָן וְעַל־הַתִּירוֹשׁ וְעַל־הַיִּצְהָר וְעַל אֲשֶׁר תּוֹצִיא הָאֲדָמָה וְעַל־הָֽאָדָם וְעַל־הַבְּהֵמָה וְעַל כָּל־יְגִיעַ כַּפָּֽיִם׃ 11
೧೧ಇದಲ್ಲದೆ ನಾನು ದೇಶ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ಎಣ್ಣೆ, ಭೂಮಿಯ ಉತ್ಪತ್ತಿ, ಮನುಷ್ಯ, ಪಶು, ನಾನಾ ಕೈದುಡಿತ ಇವುಗಳಿಗೆಲ್ಲಾ ಕ್ಷಾಮವನ್ನು ತಂದಿದ್ದೇನೆ.
וַיִּשְׁמַע זְרֻבָּבֶל ׀ בֶּֽן־שַׁלְתִּיאֵל וִיהוֹשֻׁעַ בֶּן־יְהוֹצָדָק הַכֹּהֵן הַגָּדוֹל וְכֹל ׀ שְׁאֵרִית הָעָם בְּקוֹל יְהוָה אֱלֹֽהֵיהֶם וְעַל־דִּבְרֵי חַגַּי הַנָּבִיא כַּאֲשֶׁר שְׁלָחוֹ יְהוָה אֱלֹהֵיהֶם וַיִּֽירְאוּ הָעָם מִפְּנֵי יְהוָֽה׃ 12
೧೨ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತ ಇಸ್ರಾಯೇಲ್ ಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ, ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.
וַיֹּאמֶר חַגַּי מַלְאַךְ יְהוָה בְּמַלְאֲכוּת יְהוָה לָעָם לֵאמֹר אֲנִי אִתְּכֶם נְאֻם־יְהוָֽה׃ 13
೧೩ಯೆಹೋವನ ದೂತನಾದ ಹಗ್ಗಾಯನು ಯೆಹೋವನ ಸಂದೇಶವನ್ನು ಜನರಿಗೆ ಈ ರೀತಿಯಾಗಿ ನುಡಿದನು, “ನಿಮ್ಮೊಂದಿಗೆ ಇದ್ದೇನೆ ಎಂದು ಯೆಹೋವನು ನುಡಿಯುತ್ತಿದ್ದಾನೆ.”
וַיָּעַר יְהוָה אֶת־רוּחַ זְרֻבָּבֶל בֶּן־שַׁלְתִּיאֵל פַּחַת יְהוּדָה וְאֶת־רוּחַ יְהוֹשֻׁעַ בֶּן־יְהוֹצָדָק הַכֹּהֵן הַגָּדוֹל וְֽאֶת־רוּחַ כֹּל שְׁאֵרִית הָעָם וַיָּבֹאוּ וַיַּעֲשׂוּ מְלָאכָה בְּבֵית־יְהוָה צְבָאוֹת אֱלֹהֵיהֶֽם׃ 14
೧೪ಕೂಡಲೇ ಶೆಯಲ್ತೀಯೇಲನು ಮಗನೂ, ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಮತ್ತು ಸಮಸ್ತ ಜನರೆಲ್ಲರ ಮನಸ್ಸುಗಳನ್ನು ಸೇನಾಧೀಶ್ವರನಾದ ಯೆಹೋವನು ಪ್ರೇರೇಪಿಸಲು,
בְּיוֹם עֶשְׂרִים וְאַרְבָּעָה לַחֹדֶשׁ בַּשִּׁשִּׁי בִּשְׁנַת שְׁתַּיִם לְדָרְיָוֶשׁ הַמֶּֽלֶךְ׃ 15
೧೫ಅವರು ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಬಂದು ತಮ್ಮ ದೇವರಾದ ಯೆಹೋವನ ಆಲಯದ ನಿರ್ಮಾಣ ಕಾರ್ಯಕ್ಕೆ ಕೈ ಹಾಕಿದರು.

< חגי 1 >