< הושע 5 >

שִׁמְעוּ־זֹאת הַכֹּהֲנִים וְהַקְשִׁיבוּ ׀ בֵּית יִשְׂרָאֵל וּבֵית הַמֶּלֶךְ הַאֲזִינוּ כִּי לָכֶם הַמִּשְׁפָּט כִּֽי־פַח הֱיִיתֶם לְמִצְפָּה וְרֶשֶׁת פְּרוּשָׂה עַל־תָּבֽוֹר׃ 1
“ಯಾಜಕರೇ, ಇದನ್ನು ನೀವು ಕೇಳಿರಿ; ಇಸ್ರಾಯೇಲಿನ ಮನೆತನದವರೇ ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರುಲಾಗಿಯೂ, ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದ ಕಾರಣ ನಿಮಗೆ ವಿರುದ್ಧವಾಗಿ ಈ ನ್ಯಾಯತೀರ್ಪು ಬಂದಿದೆ.
וְשַׁחֲטָה שֵׂטִים הֶעְמִיקוּ וַאֲנִי מוּסָר לְכֻלָּֽם׃ 2
ನನಗೆ ತಿರುಗಿಬಿದ್ದವರು ಅಗಾಧವಾದ ಕೊಲೆಯನ್ನು ಮಾಡುವುದರಲ್ಲಿ ಮಗ್ನರಾಗಿದ್ದರೆ. ಆದರೂ ನಾನು ಅವರೆಲ್ಲರನ್ನು ಶಿಕ್ಷಿಸುವವನಾಗಿದ್ದೇನೆ.
אֲנִי יָדַעְתִּי אֶפְרַיִם וְיִשְׂרָאֵל לֹֽא־נִכְחַד מִמֶּנִּי כִּי עַתָּה הִזְנֵיתָ אֶפְרַיִם נִטְמָא יִשְׂרָאֵֽל׃ 3
ನಾನು ಎಫ್ರಾಯೀಮನ್ನು ಬಲ್ಲೆನು, ಇಸ್ರಾಯೇಲು ನನಗೆ ಮರೆಯಾದದ್ದಲ್ಲ. ಏಕೆಂದರೆ ಎಫ್ರಾಯೀಮೇ, ನೀನು ಈಗಲೇ ವ್ಯಭಿಚಾರ ಮಾಡಲು ತಿರುಗಿಕೊಂಡಿದ್ದೀ. ಇಸ್ರಾಯೇಲು ಸಹ ಅಪವಿತ್ರವಾಯಿತು.
לֹא יִתְּנוּ מַעַלְלֵיהֶם לָשׁוּב אֶל־אֱלֹֽהֵיהֶם כִּי רוּחַ זְנוּנִים בְּקִרְבָּם וְאֶת־יְהוָה לֹא יָדָֽעוּ׃ 4
“ಅವರು ತಮ್ಮ ದೇವರ ಬಳಿಗೆ ತಿರುಗಿಕೊಳ್ಳದಂತೆ, ಅವರ ದುಷ್ಕೃತ್ಯಗಳು ಅವರಿಗೆ ಅಡ್ಡಿಯಾಗಿವೆ. ವ್ಯಭಿಚಾರದ ಆತ್ಮವು ಅವರ ಹೃದಯದಲ್ಲಿದೆ. ಅವರು ಯೆಹೋವ ದೇವರನ್ನು ಸ್ವೀಕರಿಸಿಕೊಳ್ಳುವುದಿಲ್ಲ.
וְעָנָה גְאֽוֹן־יִשְׂרָאֵל בְּפָנָיו וְיִשְׂרָאֵל וְאֶפְרַיִם יִכָּֽשְׁלוּ בַּעֲוֺנָם כָּשַׁל גַּם־יְהוּדָה עִמָּֽם׃ 5
ಇಸ್ರಾಯೇಲಿನ ಗರ್ವವು ಅವರ ಮುಖದ ಮುಂದೆ ಸಾಕ್ಷಿಕೊಡುತ್ತದೆ. ಇಸ್ರಾಯೇಲು ಮತ್ತು ಎಫ್ರಾಯೀಮು ತಮ್ಮ ಪಾಪದಲ್ಲಿ ಎಡವಿ ಬೀಳುವವು. ಯೆಹೂದವು ಸಹ ಅವರೊಂದಿಗೆ ಬೀಳುವುದು.
בְּצֹאנָם וּבִבְקָרָם יֵֽלְכוּ לְבַקֵּשׁ אֶת־יְהוָה וְלֹא יִמְצָאוּ חָלַץ מֵהֶֽם׃ 6
ಅವರು ಯೆಹೋವ ದೇವರನ್ನು ಹುಡುಕುವುದಕ್ಕೆ ತಮ್ಮ ದನಕುರಿಗಳೊಂದಿಗೂ ಹೋಗುವರು. ಆದರೆ ಆತನು ಅವರಿಂದ ತನ್ನನ್ನು ಹಿಂದೆಗೆದುಕೊಂಡಿದ್ದರಿಂದ, ಅವರು ಆತನನ್ನು ಕಾಣುವುದೇ ಇಲ್ಲ.
בַּיהוָה בָּגָדוּ כִּֽי־בָנִים זָרִים יָלָדוּ עַתָּה יֹאכְלֵם חֹדֶשׁ אֶת־חֶלְקֵיהֶֽם׃ 7
ಅವರು ಯೆಹೋವ ದೇವರಿಗೆ ಅಪನಂಬಿಗಸ್ತರಾಗಿದ್ದಾರೆ. ಅವರು ವ್ಯಭಿಚಾರದ ಮಕ್ಕಳನ್ನು ಪಡೆದಿದ್ದಾರೆ. ಅವರು ತಮ್ಮ ಅಮಾವಾಸ್ಯೆ ಹಬ್ಬಗಳನ್ನು ಆಚರಿಸಿದಾಗ, ಅವರ ಹೊಲಗಳು ನುಂಗಿಬಿಡಲಾಗುವವು.
תִּקְעוּ שׁוֹפָר בַּגִּבְעָה חֲצֹצְרָה בָּרָמָה הָרִיעוּ בֵּית אָוֶן אַחֲרֶיךָ בִּנְיָמִֽין׃ 8
“ಗಿಬೆಯದಲ್ಲಿ ತುತೂರಿಯನ್ನೂ ರಾಮದಲ್ಲಿ ಕೊಂಬನ್ನೂ ಊದಿರಿ. ಬೆನ್ಯಾಮೀನೇ, ನಿನ್ನ ಹಿಂದೆ ನೋಡು! ಬೇತಾವೆನಿನಲ್ಲಿ ಗಟ್ಟಿಯಾಗಿ ಕೂಗು.
אֶפְרַיִם לְשַׁמָּה תִֽהְיֶה בְּיוֹם תּֽוֹכֵחָה בְּשִׁבְטֵי יִשְׂרָאֵל הוֹדַעְתִּי נֶאֱמָנָֽה׃ 9
ಎಫ್ರಾಯೀಮು ಗದರಿಸುವ ದಿವಸದಲ್ಲೇ ಹಾಳಾಗುವುದು. ಇಸ್ರಾಯೇಲಿನ ಗೋತ್ರಗಳಲ್ಲಿ ನಾನು ನಿಶ್ಚಯವಾಗಿ ಆಗುವಂಥದ್ದನ್ನೇ ತಿಳಿಸಿದ್ದೇನೆ.
הָיוּ שָׂרֵי יְהוּדָה כְּמַסִּיגֵי גְּבוּל עֲלֵיהֶם אֶשְׁפּוֹךְ כַּמַּיִם עֶבְרָתִֽי׃ 10
ಯೆಹೂದದ ನಾಯಕರು ಮೇರೆಗಳನ್ನು ಸರಿಸುವವರ ಹಾಗೆ ಇದ್ದರು. ಅವರ ಮೇಲೆ, ನೀರಿನ ಪ್ರವಾಹದಂತೆ ನನ್ನ ಕೋಪವನ್ನು ಸುರಿಸುವೆನು.
עָשׁוּק אֶפְרַיִם רְצוּץ מִשְׁפָּט כִּי הוֹאִיל הָלַךְ אַחֲרֵי־צָֽו׃ 11
ಎಫ್ರಾಯೀಮು, ವಿಗ್ರಹಗಳನ್ನು ಅನುಸರಿಸಲು ಮನಸ್ಸು ಮಾಡಿದ ಕಾರಣ, ಅವನು ನ್ಯಾಯತೀರ್ಪಿಗೆ ಗುರಿಯಾಗಿ, ಹಿಂಸೆಗೆ ಒಳಗಾದನು.
וַאֲנִי כָעָשׁ לְאֶפְרָיִם וְכָרָקָב לְבֵית יְהוּדָֽה׃ 12
ನಾನು ಎಫ್ರಾಯೀಮಿಗೆ ನುಸಿಯ ಹಾಗೆಯೂ, ಯೆಹೂದದ ಮನೆತನದವರಿಗೆ ಕೊಳೆಯುವಿಕೆಯ ಹಾಗೆಯೂ ಇರುವೆನು.
וַיַּרְא אֶפְרַיִם אֶת־חָלְיוֹ וִֽיהוּדָה אֶת־מְזֹרוֹ וַיֵּלֶךְ אֶפְרַיִם אֶל־אַשּׁוּר וַיִּשְׁלַח אֶל־מֶלֶךְ יָרֵב וְהוּא לֹא יוּכַל לִרְפֹּא לָכֶם וְלֹֽא־יִגְהֶה מִכֶּם מָזֽוֹר׃ 13
“ಎಫ್ರಾಯೀಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ, ಎಫ್ರಾಯೀಮ್ ಅಸ್ಸೀರಿಯಕ್ಕೆ ತಿರುಗಿ, ಸಹಾಯಕ್ಕಾಗಿ ಮಹಾ ಅರಸನ ಬಳಿಗೆ ಕಳುಹಿಸಿತು. ಆದರೆ ನಿಮ್ಮನ್ನು ಗುಣಪಡಿಸಲು ಅವನು ಶಕ್ತನಲ್ಲ. ನಿಮ್ಮ ಗಾಯವನ್ನು ಗುಣಪಡಿಸಲಾರನು.
כִּי אָנֹכִי כַשַּׁחַל לְאֶפְרַיִם וְכַכְּפִיר לְבֵית יְהוּדָה אֲנִי אֲנִי אֶטְרֹף וְאֵלֵךְ אֶשָּׂא וְאֵין מַצִּֽיל׃ 14
ಏಕೆಂದರೆ ನಾನು ಎಫ್ರಾಯೀಮಿಗೆ ಸಿಂಹದ ಹಾಗೆಯೂ, ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ನಾನೇ ಅವರನ್ನು ಸೀಳಿಬಿಟ್ಟು ಹೋಗುವೆನು. ನಾನು ಎತ್ತಿಕೊಂಡು ಹೋಗಲು, ಅವರನ್ನು ಯಾರೂ ಬಿಡಿಸಲಾರರು.
אֵלֵךְ אָשׁוּבָה אֶל־מְקוֹמִי עַד אֲשֶֽׁר־יֶאְשְׁמוּ וּבִקְשׁוּ פָנָי בַּצַּר לָהֶם יְשַׁחֲרֻֽנְנִי׃ 15
ಅಪರಾಧಗಳನ್ನು ಅರಿಕೆಮಾಡಿ, ನನ್ನ ಮುಖವನ್ನು ಹುಡುಕುವವರೆಗೂ, ನಾನು ತಿರುಗಿಕೊಂಡು ನನ್ನ ಗುಹೆಗೆ ಹೋಗುವೆನು. ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.”

< הושע 5 >