< ישעה 31 >
הוֹי הַיֹּרְדִים מִצְרַיִם לְעֶזְרָה עַל־סוּסִים יִשָּׁעֵנוּ וַיִּבְטְחוּ עַל־רֶכֶב כִּי רָב וְעַל פָּֽרָשִׁים כִּֽי־עָצְמוּ מְאֹד וְלֹא שָׁעוּ עַל־קְדוֹשׁ יִשְׂרָאֵל וְאֶת־יְהוָה לֹא דָרָֽשׁוּ׃ | 1 |
೧ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.
וְגַם־הוּא חָכָם וַיָּבֵא רָע וְאֶת־דְּבָרָיו לֹא הֵסִיר וְקָם עַל־בֵּית מְרֵעִים וְעַל־עֶזְרַת פֹּעֲלֵי אָֽוֶן׃ | 2 |
೨ಇಗೋ, ಆತನು ವಿವೇಕಿ, ತನ್ನ ಮಾತನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು. ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.
וּמִצְרַיִם אָדָם וְֽלֹא־אֵל וְסוּסֵיהֶם בָּשָׂר וְלֹא־רוּחַ וַֽיהוָה יַטֶּה יָדוֹ וְכָשַׁל עוֹזֵר וְנָפַל עָזֻר וְיַחְדָּו כֻּלָּם יִכְלָיֽוּן׃ | 3 |
೩ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ. ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವಾದವುಗಳು. ಯೆಹೋವನು ತನ್ನ ಕೈ ಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯಪಡೆದವನು ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
כִּי כֹה אָֽמַר־יְהוָה ׀ אֵלַי כַּאֲשֶׁר יֶהְגֶּה הָאַרְיֵה וְהַכְּפִיר עַל־טַרְפּוֹ אֲשֶׁר יִקָּרֵא עָלָיו מְלֹא רֹעִים מִקּוֹלָם לֹא יֵחָת וּמֵֽהֲמוֹנָם לֹא יַֽעֲנֶה כֵּן יֵרֵד יְהוָה צְבָאוֹת לִצְבֹּא עַל־הַר־צִיּוֹן וְעַל־גִּבְעָתָֽהּ׃ | 4 |
೪ಯೆಹೋವನು ನನಗೆ ಹೀಗೆ ಹೇಳಿದ್ದಾನೆ, “ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ, ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವುದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.
כְּצִפֳּרִים עָפוֹת כֵּן יָגֵן יְהוָה צְבָאוֹת עַל־יְרֽוּשָׁלָ͏ִם גָּנוֹן וְהִצִּיל פָּסֹחַ וְהִמְלִֽיט׃ | 5 |
೫ಹಾರುವ ಪಕ್ಷಿಯಂತೆ ಸೇನಾಧೀಶ್ವರನಾದ ಯೆಹೋವನು ಯೆರೂಸಲೇಮನ್ನು ಕಾಪಾಡುವನು. ಅದನ್ನು ರಕ್ಷಿಸಿ ಕಾಯುವನು ಮತ್ತು ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು.
שׁוּבוּ לַאֲשֶׁר הֶעְמִיקוּ סָרָה בְּנֵי יִשְׂרָאֵֽל׃ | 6 |
೬“ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದಿರೋ ಆತನ ಕಡೆಗೆ ತಿರುಗಿಕೊಳ್ಳಿರಿ.
כִּי בַּיּוֹם הַהוּא יִמְאָסוּן אִישׁ אֱלִילֵי כַסְפּוֹ וֶאֱלִילֵי זְהָבוֹ אֲשֶׁר עָשׂוּ לָכֶם יְדֵיכֶם חֵֽטְא׃ | 7 |
೭ಏಕೆಂದರೆ ನೀವು ನಿಮ್ಮ ಸ್ವಂತ ಕೈಯಿಂದ ರೂಪಿಸಿಕೊಂಡಿರುವ ಪಾಪದ ಗುರುತಾದ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನೂ ಬಿಸಾಡುವನು.
וְנָפַל אַשּׁוּר בְּחֶרֶב לֹא־אִישׁ וְחֶרֶב לֹֽא־אָדָם תֹּֽאכֲלֶנּוּ וְנָס לוֹ מִפְּנֵי־חֶרֶב וּבַחוּרָיו לָמַס יִהְיֽוּ׃ | 8 |
೮ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು. ಅದು ಮನುಷ್ಯರ ಕತ್ತಿಯಲ್ಲ, ಖಡ್ಗವು ಅವರನ್ನು ನುಂಗುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಯಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಬಿಟ್ಟಿಯಾಗಿ ಹಿಡಿಯಲ್ಪಡುವರು.
וְסַלְעוֹ מִמָּגוֹר יַֽעֲבוֹר וְחַתּוּ מִנֵּס שָׂרָיו נְאֻם־יְהוָה אֲשֶׁר־אוּר לוֹ בְּצִיּוֹן וְתַנּוּר לוֹ בִּירוּשָׁלָֽ͏ִם׃ | 9 |
೯ಅವರು ಭಯದಿಂದ ತಮ್ಮ ಭರವಸೆಯನ್ನು ಕಳೆದುಕೊಳ್ಳುವರು. ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು” ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ.