< ישעה 34 >
קִרְבוּ גוֹיִם לִשְׁמֹעַ וּלְאֻמִּים הַקְשִׁיבוּ תִּשְׁמַע הָאָרֶץ וּמְלֹאָהּ תֵּבֵל וְכָל־צֶאֱצָאֶֽיהָ׃ | 1 |
೧ಜನಾಂಗಗಳೇ, ಸಮೀಪಕ್ಕೆ ಬಂದು ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂಮಿಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವುದೆಲ್ಲವೂ ಆಲಿಸಲಿ.
כִּי קֶצֶף לַֽיהוָה עַל־כָּל־הַגּוֹיִם וְחֵמָה עַל־כָּל־צְבָאָם הֶחֱרִימָם נְתָנָם לַטָּֽבַח׃ | 2 |
೨ಯೆಹೋವನು ಸಕಲ ಜನಾಂಗಗಳ ಮೇಲೆ ಕೋಪಗೊಂಡು, ಅವುಗಳ ಸೈನ್ಯದ ಮೇಲೆ ರೋಷಗೊಂಡು, ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ಸಂಹರಿಸಿದ್ದಾನೆ.
וְחַלְלֵיהֶם יֻשְׁלָכוּ וּפִגְרֵיהֶם יַעֲלֶה בָאְשָׁם וְנָמַסּוּ הָרִים מִדָּמָֽם׃ | 3 |
೩ಅವರಲ್ಲಿ ಹತರಾದವರು ಬಿಸಾಡಲ್ಪಡುವರು, ಅವರ ಶವಗಳ ದುರ್ವಾಸನೆಯು ಮೇಲಕ್ಕೆ ಏರುವುದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗುವವು.
וְנָמַקּוּ כָּל־צְבָא הַשָּׁמַיִם וְנָגֹלּוּ כַסֵּפֶר הַשָּׁמָיִם וְכָל־צְבָאָם יִבּוֹל כִּנְבֹל עָלֶה מִגֶּפֶן וּכְנֹבֶלֶת מִתְּאֵנָֽה׃ | 4 |
೪ನಕ್ಷತ್ರ ಸೈನ್ಯವೆಲ್ಲಾ ಗತಿಸಿ ಹೋಗುವುದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಮಾಗಿದ ಹಣ್ಣು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಕೆಳಗೆ ಉದುರುವುದು.
כִּֽי־רִוְּתָה בַשָּׁמַיִם חַרְבִּי הִנֵּה עַל־אֱדוֹם תֵּרֵד וְעַל־עַם חֶרְמִי לְמִשְׁפָּֽט׃ | 5 |
೫ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು.
חֶרֶב לַיהוָה מָלְאָה דָם הֻדַּשְׁנָה מֵחֵלֶב מִדַּם כָּרִים וְעַתּוּדִים מֵחֵלֶב כִּלְיוֹת אֵילִים כִּי זֶבַח לַֽיהוָה בְּבָצְרָה וְטֶבַח גָּדוֹל בְּאֶרֶץ אֱדֽוֹם׃ | 6 |
೬ಯೆಹೋವನ ಖಡ್ಗವು ರಕ್ತದಿಂದ ತುಂಬಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಲೇಪಿತವಾಗಿದೆ. ಏಕೆಂದರೆ ಯೆಹೋವನು ಬೊಚ್ರದಲ್ಲಿ ಬಲಿಯನ್ನೂ, ಎದೋಮ್ ಸೀಮೆಯಲ್ಲಿ ದೊಡ್ಡ ಹತ್ಯೆಯನ್ನೂ ಮಾಡಬೇಕೆಂದಿದ್ದಾನೆ.
וְיָרְדוּ רְאֵמִים עִמָּם וּפָרִים עִם־אַבִּירִים וְרִוְּתָה אַרְצָם מִדָּם וַעֲפָרָם מֵחֵלֶב יְדֻשָּֽׁן׃ | 7 |
೭ಈ ಯಜ್ಞಪಶುಗಳೊಂದಿಗೆ ಕಾಡುಕೋಣಗಳೂ ಮತ್ತು ಹೋರಿಗೂಳಿಗಳೂ ಹತವಾಗುವವು. ಆ ದೇಶವು ರಕ್ತದಿಂದ ತೊಯಿದಿರುವುದು, ಅಲ್ಲಿನ ಧೂಳು ಕೊಬ್ಬಿನಿಂದ ಜಿಡ್ಡಾಗಿರುವುದು.
כִּי יוֹם נָקָם לַֽיהוָה שְׁנַת שִׁלּוּמִים לְרִיב צִיּֽוֹן׃ | 8 |
೮ಏಕೆಂದರೆ ಅದು ಯೆಹೋವನು ಮುಯ್ಯಿತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರ್ಷವು ಒದಗಿದೆ.
וְנֶהֶפְכוּ נְחָלֶיהָ לְזֶפֶת וַעֲפָרָהּ לְגָפְרִית וְהָיְתָה אַרְצָהּ לְזֶפֶת בֹּעֵרָֽה׃ | 9 |
೯ಅಲ್ಲಿ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವವು, ಧೂಳು ಗಂಧಕವಾಗುವುದು, ದೇಶವೆಲ್ಲಾ ಉರಿಯುವ ಇಳಿಜಾರು ಪ್ರದೇಶವಾಗುವುದು.
לַיְלָה וְיוֹמָם לֹא תִכְבֶּה לְעוֹלָם יַעֲלֶה עֲשָׁנָהּ מִדּוֹר לָדוֹר תֶּחֱרָב לְנֵצַח נְצָחִים אֵין עֹבֵר בָּֽהּ׃ | 10 |
೧೦ಅದು ಹಗಲಿರುಳೂ ಆರುವುದಿಲ್ಲ. ಅದರ ಹೊಗೆಯು ನಿರಂತರವಾಗಿ ಏರುತ್ತಿರುವುದು. ದೇಶವು ತಲತಲಾಂತರಕ್ಕೂ ಹಾಳು ಬಿದ್ದಿರುವುದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದು ಹೋಗರು.
וִירֵשׁוּהָ קָאַת וְקִפּוֹד וְיַנְשׁוֹף וְעֹרֵב יִשְׁכְּנוּ־בָהּ וְנָטָה עָלֶיהָ קַֽו־תֹהוּ וְאַבְנֵי־בֹֽהוּ׃ | 11 |
೧೧ಆದರೆ ಕಾಡಿನ ಪಕ್ಷಿಗಳು, ಪ್ರಾಣಿಗಳು ಅಲ್ಲಿ ವಾಸಿಸುವವು. ಗೂಬೆ ಮತ್ತು ಕಾಗೆಗಳು ಅಲ್ಲಿ ವಾಸಿಸುವವು; ಯೆಹೋವನು ಅದರ ಮೇಲೆ ನಾಶ ಎಂಬ ನೂಲನ್ನೂ ಪಾಳು ಎಂಬ ಮಟ್ಟಗೋಲನ್ನೂ ಎಳೆಯುವನು.
חֹרֶיהָ וְאֵֽין־שָׁם מְלוּכָה יִקְרָאוּ וְכָל־שָׂרֶיהָ יִהְיוּ אָֽפֶס׃ | 12 |
೧೨ಅಲ್ಲಿ ಪಟ್ಟಕ್ಕೆ ಕರೆಯಲು ಪ್ರಮುಖರಲ್ಲಿ ಯಾರೂ ಸಿಕ್ಕುವುದಿಲ್ಲ; ದೇಶದಲ್ಲಿ ಪ್ರಧಾನರೇ ಇಲ್ಲದಂತಾಗುವರು.
וְעָלְתָה אַרְמְנֹתֶיהָ סִירִים קִמּוֹשׂ וָחוֹחַ בְּמִבְצָרֶיהָ וְהָיְתָה נְוֵה תַנִּים חָצִיר לִבְנוֹת יַעֲנָֽה׃ | 13 |
೧೩ಅಲ್ಲಿನ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು, ಅದರ ಕೋಟೆಗಳಲ್ಲಿ ಮುಳ್ಳುಗಿಡಗಳೂ, ದತ್ತೂರಿಯೂ ಹಬ್ಬಿಕೊಳ್ಳುವವು. ಅದು ನರಿಗಳಿಗೆ ಗುಹೆಯಾಗಿಯೂ, ಉಷ್ಟ್ರಪಕ್ಷಿಗಳಿಗೆ ನಿವಾಸವಾಗಿಯೂ ಇರುವುದು.
וּפָגְשׁוּ צִיִּים אֶת־אִיִּים וְשָׂעִיר עַל־רֵעֵהוּ יִקְרָא אַךְ־שָׁם הִרְגִּיעָה לִּילִית וּמָצְאָה לָהּ מָנֽוֹחַ׃ | 14 |
೧೪ಕಾಡುಮೃಗಗಳು ಮತ್ತು ನರಿಗಳು ಅಲ್ಲಿ ಸಂಧಿಸುವವು, ಕಾಡಿನ ಆಡುಗಳು ತನ್ನ ಜೊತೆಯನ್ನು ಕೂಗುವುದು, ಭೂತ ಪ್ರೇತಗಳು ಅಲ್ಲಿ ಹಾಯಾಗಿ ವಿಶ್ರಮಿಸಿಕೊಂಡು, ಆಸರೆಯನ್ನು ಕಂಡುಕೊಳ್ಳುವುದು.
שָׁמָּה קִנְּנָה קִפּוֹז וַתְּמַלֵּט וּבָקְעָה וְדָגְרָה בְצִלָּהּ אַךְ־שָׁם נִקְבְּצוּ דַיּוֹת אִשָּׁה רְעוּתָֽהּ׃ | 15 |
೧೫ಅಲ್ಲಿ ಗೂಬೆಯೂ ಗೂಡನ್ನು ಮಾಡಿಕೊಂಡು ಮೊಟ್ಟೆಯಿಟ್ಟು, ಮರಿಮಾಡಿ ಮರೆಯಲ್ಲಿ ಕೂಡಿಸಿಕೊಳ್ಳುವುದು. ಹೌದು, ಹದ್ದುಗಳು ಅಲ್ಲಿ ಜೋಡಿಜೋಡಿಯಾಗಿ ಸೇರಿಕೊಳ್ಳುವವು.
דִּרְשׁוּ מֵֽעַל־סֵפֶר יְהוָה וּֽקְרָאוּ אַחַת מֵהֵנָּה לֹא נֶעְדָּרָה אִשָּׁה רְעוּתָהּ לֹא פָקָדוּ כִּֽי־פִי הוּא צִוָּה וְרוּחוֹ הוּא קִבְּצָֽן׃ | 16 |
೧೬ಯೆಹೋವನ ಶಾಸ್ತ್ರದಲ್ಲಿ ಹುಡುಕಿ ಓದಿರಿ, ಇವುಗಳಲ್ಲಿ ಒಂದಾದರೂ ಇಲ್ಲದೆ ಇರುವುದಿಲ್ಲ, ಜೊತೆಯಿಲ್ಲದೆ ಒಂದೂ ಇಲ್ಲ. ಏಕೆಂದರೆ ಆತನ ಬಾಯಿಯೇ ಅದನ್ನು ಆಜ್ಞಾಪಿಸಿತು. ಆತನ ಆತ್ಮವು ಇವುಗಳನ್ನು ಒಟ್ಟುಗೂಡಿಸಿತು.
וְהֽוּא־הִפִּיל לָהֶן גּוֹרָל וְיָדוֹ חִלְּקַתָּה לָהֶם בַּקָּו עַד־עוֹלָם יִֽירָשׁוּהָ לְדוֹר וָדוֹר יִשְׁכְּנוּ־בָֽהּ׃ | 17 |
೧೭ಆತನೇ ಇವುಗಳಿಗೆ ಪಾಲು ಮಾಡಿಕೊಟ್ಟಿದ್ದಾನೆ. ಆತನ ಕೈಯೇ ಗೆರೆ ಹಾಕಿ ದೇಶವನ್ನು ಹಂಚಿಕೊಟ್ಟಿದೆ. ಅದು ಇವುಗಳಿಗೆ ನಿತ್ಯ ಸ್ವಾಸ್ತ್ಯವಾಗುವುದು, ಅವು ತಲಾತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.