< ישעה 36 >

וַיְהִי בְּאַרְבַּע עֶשְׂרֵה שָׁנָה לַמֶּלֶךְ חִזְקִיָּהוּ עָלָה סַנְחֵרִיב מֶֽלֶךְ־אַשּׁוּר עַל כָּל־עָרֵי יְהוּדָה הַבְּצֻרוֹת וַֽיִּתְפְּשֵֽׂם׃ 1
ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
וַיִּשְׁלַח מֶֽלֶךְ־אַשּׁוּר ׀ אֶת־רַב־שָׁקֵה מִלָּכִישׁ יְרוּשָׁלַ͏ְמָה אֶל־הַמֶּלֶךְ חִזְקִיָּהוּ בְּחֵיל כָּבֵד וַֽיַּעֲמֹד בִּתְעָלַת הַבְּרֵכָה הָעֶלְיוֹנָה בִּמְסִלַּת שְׂדֵה כוֹבֵֽס׃ 2
ಆಗ ಅಸ್ಸೀರಿಯದ ಅರಸನು ಲಾಕೀಷಿನಿಂದ ದೊಡ್ಡ ಸೈನ್ಯದೊಂದಿಗೆ ರಬ್ಷಾಕೆ ಎಂಬವನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವನು ಅಗಸರ ಹೊಲದ ಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಸಮೀಪದಲ್ಲಿ ನಿಂತುಕೊಂಡನು.
וַיֵּצֵא אֵלָיו אֶלְיָקִים בֶּן־חִלְקִיָּהוּ אֲשֶׁר עַל־הַבָּיִת וְשֶׁבְנָא הַסֹּפֵר וְיוֹאָח בֶּן־אָסָף הַמַּזְכִּֽיר׃ 3
ಆಗ ಅರಮನೆಯ ಕಾರ್ಯನಿರ್ವಾಹಕನಾದ ಹಿಲ್ಕೀಯನ ಮಗ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬುವರು ಅವನ ಬಳಿಗೆ ಬಂದರು.
וַיֹּאמֶר אֲלֵיהֶם רַב־שָׁקֵה אִמְרוּ־נָא אֶל־חִזְקִיָּהוּ כֹּֽה־אָמַר הַמֶּלֶךְ הַגָּדוֹל מֶלֶךְ אַשּׁוּר מָה הַבִּטָּחוֹן הַזֶּה אֲשֶׁר בָּטָֽחְתָּ׃ 4
ರಬ್ಷಾಕೆಯು ಅವರಿಗೆ, “ನೀವು ಹಿಜ್ಕೀಯನಿಗೆ ಹೀಗೆ ಹೇಳಬೇಕು: “‘ಮಹಾರಾಜನಾದ ಅಸ್ಸೀರಿಯದ ಅರಸನು ಹೇಳುವುದೇನೆಂದರೆ, ಈ ನಿನ್ನ ಭರವಸೆಗೆ ಆಧಾರ ಏನು?
אָמַרְתִּי אַךְ־דְּבַר־שְׂפָתַיִם עֵצָה וּגְבוּרָה לַמִּלְחָמָה עַתָּה עַל־מִי בָטַחְתָּ כִּי מָרַדְתָּ בִּֽי׃ 5
ಯುದ್ಧಕ್ಕೆ ಬೇಕಾದ ಆಲೋಚನೆಯೂ, ಪರಾಕ್ರಮವೂ ಉಂಟೆಂದು ಹೇಳುವ ನಿನ್ನ ಮಾತು ಬರೀ ವ್ಯರ್ಥವಾದ ಮಾತುಗಳೇ, ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀಯೆ?
הִנֵּה בָטַחְתָּ עַל־מִשְׁעֶנֶת הַקָּנֶה הָרָצוּץ הַזֶּה עַל־מִצְרַיִם אֲשֶׁר יִסָּמֵךְ אִישׁ עָלָיו וּבָא בְכַפּוֹ וּנְקָבָהּ כֵּן פַּרְעֹה מֶֽלֶךְ־מִצְרַיִם לְכָֽל־הַבֹּטְחִים עָלָֽיו׃ 6
ಇಗೋ! ನೀನು ಜಜ್ಜಿದ ದಂಟಿಗೆ ಸಮಾನವಾಗಿರುವ ಈಜಿಪ್ಟಿನ ಮೇಲೆ ಭರವಸೆ ಇಟ್ಟಿರುವಿಯಷ್ಟೆ, ಅದರ ಮೇಲೆ ಮನುಷ್ಯನು ಊರಿಕೊಂಡರೆ ಅದು ಅವನ ಕೈಯನ್ನೇ ಚುಚ್ಚಿ ಗಾಯ ಮಾಡುವುದು. ಈಜಿಪ್ಟಿನ ಅರಸನಾದ ಫರೋಹನಲ್ಲಿ ಭರವಸೆ ಇಟ್ಟವರೆಲ್ಲರಿಗೂ ಇದೇ ಗತಿಯಾಗುವದು.
וְכִי־תֹאמַר אֵלַי אֶל־יְהוָה אֱלֹהֵינוּ בָּטָחְנוּ הֲלוֹא־הוּא אֲשֶׁר הֵסִיר חִזְקִיָּהוּ אֶת־בָּמֹתָיו וְאֶת־מִזְבְּחֹתָיו וַיֹּאמֶר לִֽיהוּדָה וְלִירוּשָׁלִַם לִפְנֵי הַמִּזְבֵּחַ הַזֶּה תִּֽשְׁתַּחֲוֽוּ׃ 7
ಬಹುಶಃ ನೀವು, “ನಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿದ್ದೇವೆ,” ಎಂದು ಹೇಳಬಹುದು. “ಯೆರೂಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆ ಮಾಡಬೇಕು” ಎಂದು ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ ಹಿಜ್ಕೀಯನು ಆಜ್ಞಾಪಿಸಿ, ಆ ಯೆಹೋವ ದೇವರ ಪೂಜಾಸ್ಥಳಗಳನ್ನೂ, ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೇ?
וְעַתָּה הִתְעָרֶב נָא אֶת־אֲדֹנִי הַמֶּלֶךְ אַשּׁוּר וְאֶתְּנָה לְךָ אַלְפַּיִם סוּסִים אִם־תּוּכַל לָתֶת לְךָ רֹכְבִים עֲלֵיהֶֽם׃ 8
“‘ಹಾಗಾದರೆ, ಈಗ ನೀನು ಅಸ್ಸೀರಿಯದ ಅರಸನಾದ ನನ್ನ ಯಜಮಾನನೊಂದಿಗೆ ಒಪ್ಪಂದ ಮಾಡಿಕೋ, ಆಗ ನಿನಗೆ ಎರಡು ಸಾವಿರ ಕುದುರೆಸವಾರರನ್ನು ಬಳಸಲು ಸಾಮರ್ಥ್ಯವಿದ್ದರೆ ನಾನು ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ.
וְאֵיךְ תָּשִׁיב אֵת פְּנֵי פַחַת אַחַד עַבְדֵי אֲדֹנִי הַקְטַנִּים וַתִּבְטַח לְךָ עַל־מִצְרַיִם לְרֶכֶב וּלְפָרָשִֽׁים׃ 9
ಇದಾಗದಿದ್ದರೆ ನನ್ನ ಯಜಮಾನನ ಸೇವಕರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯನ್ನು ಹೇಗೆ ಎದುರಿಸುತ್ತೀ? ನೀನು ರಥಗಳಿಗೋಸ್ಕರವೂ, ರಾಹುತರಿಗೋಸ್ಕರವೂ ಈಜಿಪ್ಟಿನ ಮೇಲೆ ಭರವಸೆ ಇಟ್ಟಿದ್ದೀಯೋ?
וְעַתָּה הֲמִבַּלְעֲדֵי יְהוָה עָלִיתִי עַל־הָאָרֶץ הַזֹּאת לְהַשְׁחִיתָהּ יְהוָה אָמַר אֵלַי עֲלֵה אֶל־הָאָרֶץ הַזֹּאת וְהַשְׁחִיתָֽהּ׃ 10
ಈ ಸ್ಥಳವನ್ನು ನಾಶಮಾಡುವುದಕ್ಕೆ ಯೆಹೋವ ದೇವರ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಯೆಹೋವ ದೇವರೇ ನನಗೆ ಹೇಳಿದರು,’” ಎಂದನು.
וַיֹּאמֶר אֶלְיָקִים וְשֶׁבְנָא וְיוֹאָח אֶל־רַב־שָׁקֵה דַּבֶּר־נָא אֶל־עֲבָדֶיךָ אֲרָמִית כִּי שֹׁמְעִים אֲנָחְנוּ וְאַל־תְּדַבֵּר אֵלֵינוּ יְהוּדִית בְּאָזְנֵי הָעָם אֲשֶׁר עַל־הַחוֹמָֽה׃ 11
ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವರು ರಬ್ಷಾಕೆಗೆ, “ನೀನು ಮಾತನಾಡುವುದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ ಆದ್ದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು: ಅದು ನಮಗೆ ತಿಳಿಯುತ್ತದೆ ಆದರೆ ಹಿಬ್ರಿಯ ಭಾಷೆಯಲ್ಲಿ ಮಾತನಾಡಬೇಡ,” ಎಂದು ಹೇಳಿದರು.
וַיֹּאמֶר רַב־שָׁקֵה הַאֶל אֲדֹנֶיךָ וְאֵלֶיךָ שְׁלָחַנִי אֲדֹנִי לְדַבֵּר אֶת־הַדְּבָרִים הָאֵלֶּה הֲלֹא עַל־הָאֲנָשִׁים הַיֹּֽשְׁבִים עַל־הַחוֹמָה לֶאֱכֹל אֶת־חראיהם צוֹאָתָם וְלִשְׁתּוֹת אֶת־שיניהם מֵימֵי רַגְלֵיהֶם עִמָּכֶֽם׃ 12
ಆದರೆ ರಬ್ಷಾಕೆಯು ಅವರಿಗೆ, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಯಜಮಾನನ ಸಂಗಡವಾಗಲಿ ಮಾತ್ರ ಈ ಮಾತುಗಳನ್ನು ಹೇಳುವುದಕ್ಕೆ ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತ ಜನರ ಸಂಗಡವೂ ಮಾತನಾಡುವುದಕ್ಕಾಗಿ ಕಳುಹಿಸಿದ್ದಾರೆ. ಈ ಜನರು ನಿಮ್ಮ ಸಂಗಡ ಇದ್ದರೆ ನಿಮ್ಮ ಹಾಗೆ ಇವರೂ ಸಹ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ,” ಎಂದು ಹೇಳಿದನು.
וַֽיַּעֲמֹד רַב־שָׁקֵה וַיִּקְרָא בְקוֹל־גָּדוֹל יְהוּדִית וַיֹּאמֶר שִׁמְעוּ אֶת־דִּבְרֵי הַמֶּלֶךְ הַגָּדוֹל מֶלֶךְ אַשּֽׁוּר׃ 13
ಆಗ ರಬ್ಷಾಕೆ ನಿಂತುಕೊಂಡು ಯೆಹೂದ್ಯರ ಭಾಷೆಯಾದ ಹಿಬ್ರಿಯದಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿದ್ದೇನೆಂದರೆ, “ನೀವು ಅಸ್ಸೀರಿಯದ ಮಹಾರಾಜನ ಮಾತನ್ನು ಕೇಳಿರಿ.
כֹּה אָמַר הַמֶּלֶךְ אַל־יַשִּׁא לָכֶם חִזְקִיָּהוּ כִּי לֹֽא־יוּכַל לְהַצִּיל אֶתְכֶֽם׃ 14
ಅರಸನು ಹೇಳುವುದೇನೆಂದರೆ: ಹಿಜ್ಕೀಯನ ಮಾತನ್ನು ಕೇಳಿ ಮೋಸಹೋಗಬೇಡಿರಿ ಏಕೆಂದರೆ ಅವನು ನಿಮ್ಮನ್ನು ಬಿಡಿಸಲು ಶಕ್ತನಲ್ಲ.
וְאַל־יַבְטַח אֶתְכֶם חִזְקִיָּהוּ אֶל־יְהוָה לֵאמֹר הַצֵּל יַצִּילֵנוּ יְהוָה לֹא תִנָּתֵן הָעִיר הַזֹּאת בְּיַד מֶלֶךְ אַשּֽׁוּר׃ 15
ಇದಲ್ಲದೆ, ‘ಯೆಹೋವ ದೇವರು ನಮ್ಮನ್ನು ನಿಶ್ಚಯವಾಗಿ ರಕ್ಷಿಸುವರೆಂದೂ, ಈ ಪಟ್ಟಣವು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲವೆಂದೂ ಹಿಜ್ಕೀಯನು ನಿಮಗೆ ಯೆಹೋವ ದೇವರಲ್ಲಿ ಭರವಸೆ ಇಡುವಂತೆ ಮಾಡುವರು.’
אַֽל־תִּשְׁמְעוּ אֶל־חִזְקִיָּהוּ כִּי כֹה אָמַר הַמֶּלֶךְ אַשּׁוּר עֲשֽׂוּ־אִתִּי בְרָכָה וּצְאוּ אֵלַי וְאִכְלוּ אִישׁ־גַּפְנוֹ וְאִישׁ תְּאֵנָתוֹ וּשְׁתוּ אִישׁ מֵי־בוֹרֽוֹ׃ 16
“ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ. ಏಕೆಂದರೆ ಅಸ್ಸೀರಿಯದ ಅರಸನು ಹೇಳುವುದೇನೆಂದರೆ, ನನ್ನ ಸಂಗಡ ಒಡಂಬಡಿಕೆ ಮಾಡಿಕೊಂಡು, ನನ್ನ ಬಳಿಗೆ ಹೊರಟುಬನ್ನಿರಿ, ಆಗ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷಾಫಲವನ್ನೂ, ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.
עַד־בֹּאִי וְלָקַחְתִּי אֶתְכֶם אֶל־אֶרֶץ כְּאַרְצְכֶם אֶרֶץ דָּגָן וְתִירוֹשׁ אֶרֶץ לֶחֶם וּכְרָמִֽים׃ 17
ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು.
פֶּן־יַסִּית אֶתְכֶם חִזְקִיָּהוּ לֵאמֹר יְהוָה יַצִּילֵנוּ הַהִצִּילוּ אֱלֹהֵי הַגּוֹיִם אִישׁ אֶת־אַרְצוֹ מִיַּד מֶלֶךְ אַשּֽׁוּר׃ 18
“‘ಯೆಹೋವ ದೇವರು ನಮ್ಮನ್ನು ರಕ್ಷಿಸುವರು,’ ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆಯಾಗಿರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಸ್ಸೀರಿಯದ ಅರಸನ ಕೈಯಿಂದ ಬಿಡಿಸಿದ್ದು ಉಂಟೋ?
אַיֵּה אֱלֹהֵי חֲמָת וְאַרְפָּד אַיֵּה אֱלֹהֵי סְפַרְוָיִם וְכִֽי־הִצִּילוּ אֶת־שֹׁמְרוֹן מִיָּדִֽי׃ 19
ಹಮಾತ್, ಅರ್ಪಾದ್, ಸೆಫರ್ವಯಿಮಿನ ದೇವರುಗಳು ಎಲ್ಲಿ? ಅವರು ಸಮಾರ್ಯವನ್ನು ನನ್ನ ಕೈಯಿಂದ ಬಿಡಿಸಿಕೊಂಡರೋ?
מִי בְּכָל־אֱלֹהֵי הָֽאֲרָצוֹת הָאֵלֶּה אֲשֶׁר־הִצִּילוּ אֶת־אַרְצָם מִיָּדִי כִּֽי־יַצִּיל יְהוָה אֶת־יְרוּשָׁלַ͏ִם מִיָּדִֽי׃ 20
ಈ ದೇಶಗಳ ಸಮಸ್ತ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ, ಯೆಹೋವ ದೇವರು ಯೆರೂಸಲೇಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ?” ಎಂದು ಹೇಳಿದನು.
וַֽיַּחֲרִישׁוּ וְלֹֽא־עָנוּ אֹתוֹ דָּבָר כִּֽי־מִצְוַת הַמֶּלֶךְ הִיא לֵאמֹר לֹא תַעֲנֻֽהוּ׃ 21
ಆದರೆ ಜನರು ಅವನಿಗೆ ಪ್ರತ್ಯುತ್ತರ ಕೊಡದೆ ಸುಮ್ಮನಿದ್ದರು. ಏಕೆಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು.
וַיָּבֹא אֶלְיָקִים בֶּן־חִלְקִיָּהוּ אֲשֶׁר־עַל־הַבַּיִת וְשֶׁבְנָא הַסּוֹפֵר וְיוֹאָח בֶּן־אָסָף הַמַּזְכִּיר אֶל־חִזְקִיָּהוּ קְרוּעֵי בְגָדִים וַיַּגִּידוּ לוֹ אֵת דִּבְרֵי רַב־שָׁקֵֽה׃ 22
ಆಗ ಅರಮನೆಯ ಮೇಲ್ವಿಚಾರಕನಾದ ಹಿಲ್ಕೀಯನ ಮಗ ಎಲ್ಯಾಕೀಮನೂ ಕಾರ್ಯದರ್ಶಿಯಾದ ಶೆಬ್ನನೂ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬವನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಸೈನ್ಯಾಧಿಕಾರಿಯಾದ ರಬ್ಷಾಕೆ ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.

< ישעה 36 >