< ישעה 43 >
וְעַתָּה כֹּֽה־אָמַר יְהוָה בֹּרַאֲךָ יַעֲקֹב וְיֹצֶרְךָ יִשְׂרָאֵל אַל־תִּירָא כִּי גְאַלְתִּיךָ קָרָאתִי בְשִׁמְךָ לִי־אָֽתָּה׃ | 1 |
೧ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.
כִּֽי־תַעֲבֹר בַּמַּיִם אִתְּךָ־אָנִי וּבַנְּהָרוֹת לֹא יִשְׁטְפוּךָ כִּֽי־תֵלֵךְ בְּמוֹ־אֵשׁ לֹא תִכָּוֶה וְלֶהָבָה לֹא תִבְעַר־בָּֽךְ׃ | 2 |
೨ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.
כִּי אֲנִי יְהוָה אֱלֹהֶיךָ קְדוֹשׁ יִשְׂרָאֵל מוֹשִׁיעֶךָ נָתַתִּי כָפְרְךָ מִצְרַיִם כּוּשׁ וּסְבָא תַּחְתֶּֽיךָ׃ | 3 |
೩ಏಕೆಂದರೆ ಯೆಹೋವನೆಂಬ ನಾನು ನಿನ್ನ ದೇವರು, ಇಸ್ರಾಯೇಲರ ಸದಮಲಸ್ವಾಮಿಯಾದ ನಾನು ನಿನ್ನ ರಕ್ಷಕನು. ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ. ನಿನ್ನ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.
מֵאֲשֶׁר יָקַרְתָּ בְעֵינַי נִכְבַּדְתָּ וַאֲנִי אֲהַבְתִּיךָ וְאֶתֵּן אָדָם תַּחְתֶּיךָ וּלְאֻמִּים תַּחַת נַפְשֶֽׁךָ׃ | 4 |
೪ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ, ಪ್ರಿಯನೂ ಆಗಿರುವುದರಿಂದ, ನಾನು ನಿನ್ನ ಬದಲಾಗಿ ಮನುಷ್ಯರನ್ನೂ, ನಿನ್ನ ಪ್ರಾಣಕ್ಕೆ ಪ್ರತಿಯಾಗಿ ಜನಾಂಗಗಳನ್ನೂ ಕೊಡುವೆನು.
אַל־תִּירָא כִּי אִתְּךָ־אָנִי מִמִּזְרָח אָבִיא זַרְעֶךָ וּמִֽמַּעֲרָב אֲקַבְּצֶֽךָּ׃ | 5 |
೫ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ; ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು, ನಿನ್ನವರನ್ನು ಪಶ್ಚಿಮದಿಂದ ಕೂಡಿಸುವೆನು.
אֹמַר לַצָּפוֹן תֵּנִי וּלְתֵימָן אַל־תִּכְלָאִי הָבִיאִי בָנַי מֵרָחוֹק וּבְנוֹתַי מִקְצֵה הָאָֽרֶץ׃ | 6 |
೬‘ಅವರನ್ನು ಒಪ್ಪಿಸಿಬಿಡು’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ’ ಎಂದು ದಕ್ಷಿಣಕ್ಕೂ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ,
כֹּל הַנִּקְרָא בִשְׁמִי וְלִכְבוֹדִי בְּרָאתִיו יְצַרְתִּיו אַף־עֲשִׂיתִֽיו׃ | 7 |
೭ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.
הוֹצִיא עַם־עִוֵּר וְעֵינַיִם יֵשׁ וְחֵרְשִׁים וְאָזְנַיִם לָֽמוֹ׃ | 8 |
೮ಕಣ್ಣಿದ್ದರೂ ಕುರುಡಾದ, ಕಿವಿಯಿದ್ದರೂ ಕಿವುಡಾದ ಜನರನ್ನು ಕರೆ.
כָּֽל־הַגּוֹיִם נִקְבְּצוּ יַחְדָּו וְיֵאָֽסְפוּ לְאֻמִּים מִי בָהֶם יַגִּיד זֹאת וְרִֽאשֹׁנוֹת יַשְׁמִיעֻנוּ יִתְּנוּ עֵֽדֵיהֶם וְיִצְדָּקוּ וְיִשְׁמְעוּ וְיֹאמְרוּ אֱמֶֽת׃ | 9 |
೯ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು? ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವುದಕ್ಕೆ ಸಾಕ್ಷಿಗಳನ್ನು ಕರೆದುತರಲಿ. ಆ ಸಾಕ್ಷಿಗಳು ಇವರ ಮಾತನ್ನು ಕೇಳಿ ‘ಇದು ನಿಜ’ ಎಂದು ಹೇಳಲಿ.
אַתֶּם עֵדַי נְאֻם־יְהוָה וְעַבְדִּי אֲשֶׁר בָּחָרְתִּי לְמַעַן תֵּדְעוּ וְתַאֲמִינוּ לִי וְתָבִינוּ כִּֽי־אֲנִי הוּא לְפָנַי לֹא־נוֹצַר אֵל וְאַחֲרַי לֹא יִהְיֶֽה׃ | 10 |
೧೦ಯೆಹೋವನ ಮಾತೇನೆಂದರೆ, ‘ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು. ನೀವು ನನ್ನನ್ನು ತಿಳಿದು ನಂಬಿ, ನನ್ನನ್ನೇ ದೇವರು ಎಂದು ಗ್ರಹಿಸುವ ಹಾಗೆ ಇದನ್ನು ನಡೆಸಿದೆನು. ನನಗಿಂತ ಮೊದಲು ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವುದಿಲ್ಲ.
אָנֹכִי אָנֹכִי יְהוָה וְאֵין מִבַּלְעָדַי מוֹשִֽׁיעַ׃ | 11 |
೧೧ನಾನೇ, ನಾನೇ ಯೆಹೋವನು, ನನ್ನ ಹೊರತು ಯಾವ ರಕ್ಷಕನೂ ಇಲ್ಲ.
אָנֹכִי הִגַּדְתִּי וְהוֹשַׁעְתִּי וְהִשְׁמַעְתִּי וְאֵין בָּכֶם זָר וְאַתֶּם עֵדַי נְאֻם־יְהוָה וַֽאֲנִי־אֵֽל׃ | 12 |
೧೨ನಾನೇ ರಕ್ಷಣೆಯನ್ನು ಮುಂತಿಳಿಸಿ ನೆರವೇರಿಸಿ ಪ್ರಕಟಿಸಿದ್ದೇನೆ, ನಿಮ್ಮಲ್ಲಿ ಅನ್ಯದೇವರು ಯಾರೂ ಇರಲಿಲ್ಲವಲ್ಲ; ನೀವೇ ನನ್ನ ಸಾಕ್ಷಿಗಳು, ನಾನೊಬ್ಬನೇ ದೇವರು.
גַּם־מִיּוֹם אֲנִי הוּא וְאֵין מִיָּדִי מַצִּיל אֶפְעַל וּמִי יְשִׁיבֶֽנָּה׃ | 13 |
೧೩ಹೌದು, ಇಂದಿನಿಂದ ನಾನೇ ದೇವರು. ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ. ನನ್ನ ಕೆಲಸಕ್ಕೆ ಯಾರು ಅಡ್ಡಿ ಬರುವರು?’” ಎಂಬುದೇ ಯೆಹೋವನ ಮಾತು.
כֹּֽה־אָמַר יְהוָה גֹּאַלְכֶם קְדוֹשׁ יִשְׂרָאֵל לְמַעַנְכֶם שִׁלַּחְתִּי בָבֶלָה וְהוֹרַדְתִּי בָֽרִיחִים כֻּלָּם וְכַשְׂדִּים בָּאֳנִיּוֹת רִנָּתָֽם׃ | 14 |
೧೪ನಿಮ್ಮ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮಗೋಸ್ಕರ ದೂತನನ್ನು ಬಾಬಿಲೋನಿಗೆ ಕಳುಹಿಸಿ, ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯನ ಮಾಡುವಂತೆ ಅಟ್ಟಿಬಿಡುವೆನು.
אֲנִי יְהוָה קְדֽוֹשְׁכֶם בּוֹרֵא יִשְׂרָאֵל מַלְכְּכֶֽם׃ | 15 |
೧೫ನಾನು ಯೆಹೋವನು, ನಿಮ್ಮ ಸದಮಲಸ್ವಾಮಿಯು, ಇಸ್ರಾಯೇಲನ್ನು ಸೃಷ್ಟಿಸಿದವನು, ನಿಮ್ಮ ಅರಸನೂ ಆಗಿದ್ದೇನೆ.
כֹּה אָמַר יְהוָה הַנּוֹתֵן בַּיָּם דָּרֶךְ וּבְמַיִם עַזִּים נְתִיבָֽה׃ | 16 |
೧೬ಯಾರು ಸಮುದ್ರದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ,
הַמּוֹצִיא רֶֽכֶב־וָסוּס חַיִל וְעִזּוּז יַחְדָּו יִשְׁכְּבוּ בַּל־יָקוּמוּ דָּעֲכוּ כַּפִּשְׁתָּה כָבֽוּ׃ | 17 |
೧೭ಯಾರು ರಥಗಳನ್ನು, ಕುದರೆಗಳನ್ನು, ಸೈನ್ಯಗಳನ್ನು, ಪರಾಕ್ರಮಶಾಲಿಗಳನ್ನು ಹೊರಡಿಸಿ, ಅವು ಬಿದ್ದು ಏಳಲಾರದಂತೆಯೂ, ದೀಪದೋಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿದವನು” ಯೆಹೋವನು ಹೀಗೆನ್ನುತ್ತಾನೆ,
אַֽל־תִּזְכְּרוּ רִֽאשֹׁנוֹת וְקַדְמֹנִיּוֹת אַל־תִּתְבֹּנָֽנוּ׃ | 18 |
೧೮ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ, ಪುರಾತನ ಕಾರ್ಯಗಳನ್ನು ಮರೆತುಬಿಡಿರಿ.
הִנְנִי עֹשֶׂה חֲדָשָׁה עַתָּה תִצְמָח הֲלוֹא תֵֽדָעוּהָ אַף אָשִׂים בַּמִּדְבָּר דֶּרֶךְ בִּֽישִׁמוֹן נְהָרֽוֹת׃ | 19 |
೧೯ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ, ಅರಣ್ಯದಲ್ಲಿ ನದಿಗಳನ್ನು ಹರಿಸುವೆನು.
תְּכַבְּדֵנִי חַיַּת הַשָּׂדֶה תַּנִּים וּבְנוֹת יַֽעֲנָה כִּֽי־נָתַתִּי בַמִּדְבָּר מַיִם נְהָרוֹת בִּֽישִׁימֹן לְהַשְׁקוֹת עַמִּי בְחִירִֽי׃ | 20 |
೨೦ಬಯಲಿನ ಮೃಗಗಳು, ನರಿಗಳು, ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅರಣ್ಯದಲ್ಲಿ ನೀರನ್ನು, ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವುದಕ್ಕೆ ಕೊಟ್ಟೆನು. ನಾನು ಸೃಷ್ಟಿಸಿಕೊಂಡ ಆಪ್ತಜನರ ಜಲಪಾನಕ್ಕಾಗಿ,
עַם־זוּ יָצַרְתִּי לִי תְּהִלָּתִי יְסַפֵּֽרוּ׃ | 21 |
೨೧ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ಸೃಷ್ಟಿಸಿಕೊಂಡಿದ್ದೇನೆ.
וְלֹא־אֹתִי קָרָאתָ יַֽעֲקֹב כִּֽי־יָגַעְתָּ בִּי יִשְׂרָאֵֽל׃ | 22 |
೨೨“ಯಾಕೋಬೇ, ನೀನಾದರೋ ನನ್ನನ್ನು ಪ್ರಾರ್ಥಿಸಲಿಲ್ಲ, ಇಸ್ರಾಯೇಲೇ, ನೀನು ನನ್ನ ವಿಷಯದಲ್ಲಿ ಬೇಸರಗೊಂಡಿದ್ದಿ.
לֹֽא־הֵבֵיאתָ לִּי שֵׂה עֹלֹתֶיךָ וּזְבָחֶיךָ לֹא כִבַּדְתָּנִי לֹא הֶעֱבַדְתִּיךָ בְּמִנְחָה וְלֹא הוֹגַעְתִּיךָ בִּלְבוֹנָֽה׃ | 23 |
೨೩ನೀನು ನನಗೆ ಹೋಮಕ್ಕಾಗಿ ಕುರಿ ಮೇಕೆಗಳನ್ನು ತಂದು ಯಜ್ಞಗಳಿಂದ ನನ್ನನ್ನು ಘನಪಡಿಸಲಿಲ್ಲ. ಕಾಣಿಕೆಗಳನ್ನು ಕೇಳಿ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.
לֹא־קָנִיתָ לִּי בַכֶּסֶף קָנֶה וְחֵלֶב זְבָחֶיךָ לֹא הִרְוִיתָנִי אַךְ הֶעֱבַדְתַּנִי בְּחַטֹּאותֶיךָ הוֹגַעְתַּנִי בַּעֲוֺנֹתֶֽיךָ׃ | 24 |
೨೪ನೀನು ನನಗೋಸ್ಕರ ಹಣಕೊಟ್ಟು ತೈಲವನ್ನು ತರಲಿಲ್ಲ, ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಗೆ ಗುರಿಮಾಡಿರುವೆ. ನಿನ್ನ ದೋಷಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.
אָנֹכִי אָנֹכִי הוּא מֹחֶה פְשָׁעֶיךָ לְמַעֲנִי וְחַטֹּאתֶיךָ לֹא אֶזְכֹּֽר׃ | 25 |
೨೫ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.
הַזְכִּירֵנִי נִשָּׁפְטָה יָחַד סַפֵּר אַתָּה לְמַעַן תִּצְדָּֽק׃ | 26 |
೨೬ನನಗೆ ನನ್ನ ಪಾಪಗಳನ್ನು ಜ್ಞಾಪಕಪಡಿಸು, ನಾವಿಬ್ಬರೂ ನಿನ್ನ ಅಪಾರಾಧ ಕುರಿತು ವಾದಿಸುವ, ನಿನ್ನ ಸದ್ಧರ್ಮವು ಗೊತ್ತಾಗುವಂತೆ ನಿನ್ನ ನ್ಯಾಯವನ್ನು ತೋರ್ಪಡಿಸು.
אָבִיךָ הָרִאשׁוֹן חָטָא וּמְלִיצֶיךָ פָּשְׁעוּ בִֽי׃ | 27 |
೨೭ನಿನ್ನ ಮೂಲಪಿತೃ ಪಾಪಮಾಡಿದ್ದಾನೆ, ನಿನ್ನ ಬೋಧಕರು ನನಗೆ ದ್ರೋಹಮಾಡಿದ್ದಾರೆ.
וַאֲחַלֵּל שָׂרֵי קֹדֶשׁ וְאֶתְּנָה לַחֵרֶם יַעֲקֹב וְיִשְׂרָאֵל לְגִדּוּפִֽים׃ | 28 |
೨೮ಆದಕಾರಣ ನಾನು ಪವಿತ್ರಾಲಯದ ಪ್ರಧಾನರನ್ನು ಹೊಲಸಿಗೆ ತಂದು ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗೂ ಒಪ್ಪಿಸಿಬಿಟ್ಟಿದ್ದೇನೆ.”