< ישעה 48 >

שִׁמְעוּ־זֹאת בֵּֽית־יַעֲקֹב הַנִּקְרָאִים בְּשֵׁם יִשְׂרָאֵל וּמִמֵּי יְהוּדָה יָצָאוּ הַֽנִּשְׁבָּעִים ׀ בְּשֵׁם יְהוָה וּבֵאלֹהֵי יִשְׂרָאֵל יַזְכִּירוּ לֹא בֶאֱמֶת וְלֹא בִצְדָקָֽה׃ 1
ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ. ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ.
כִּֽי־מֵעִיר הַקֹּדֶשׁ נִקְרָאוּ וְעַל־אֱלֹהֵי יִשְׂרָאֵל נִסְמָכוּ יְהוָה צְבָאוֹת שְׁמֽוֹ׃ 2
ಇವರು ತಮ್ಮನ್ನು ಪರಿಶುದ್ಧ ಪಟ್ಟಣದವರು ಎಂದುಕೊಂಡು, ದೇವರು ಇಸ್ರಾಯೇಲಿನವನೇ ಎಂದು ಆತನ ಮೇಲೆ ಭರವಸವಿಟ್ಟುಕೊಂಡಿರುತ್ತಾರೆ. ಆತನ ಹೆಸರೋ ಸಕಲ ಸೈನ್ಯಗಳ ಸರ್ವಶಕ್ತನಾದ ಯೆಹೋವನು ಎಂಬುದು.
הָרִֽאשֹׁנוֹת מֵאָז הִגַּדְתִּי וּמִפִּי יָצְאוּ וְאַשְׁמִיעֵם פִּתְאֹם עָשִׂיתִי וַתָּבֹֽאנָה׃ 3
ಯಾಕೋಬನ ಮನೆತನವೇ, ಕೇಳು, ಈವರೆಗೂ ನಡೆದ ಸಂಗತಿಗಳನ್ನು ಪುರಾತನಕಾಲದಲ್ಲಿಯೇ ತಿಳಿಸಿದೆನು. ಹೌದು, ನನ್ನ ಬಾಯಿಂದ ಹೊರಟವು, ನಾನು ಅವುಗಳನ್ನು ಪ್ರಕಟಿಸಿದೆನು. ನಾನು ತಟ್ಟನೆ ನಡೆಸಲು ಅವು ನೆರವೇರಿದವು.
מִדַּעְתִּי כִּי קָשֶׁה אָתָּה וְגִיד בַּרְזֶל עָרְפֶּךָ וּמִצְחֲךָ נְחוּשָֽׁה׃ 4
ಏಕೆಂದರೆ ನೀನು ಹಟವಾದಿ ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು.
וָאַגִּיד לְךָ מֵאָז בְּטֶרֶם תָּבוֹא הִשְׁמַעְתִּיךָ פֶּן־תֹּאמַר עָצְבִּי עָשָׂם וּפִסְלִי וְנִסְכִּי צִוָּֽם׃ 5
ಆದುದರಿಂದಲೇ, “ಈ ಕಾರ್ಯಗಳನ್ನು ನನ್ನ ವಿಗ್ರಹವು ನಡೆಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ” ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನಕಾಲದಲ್ಲಿಯೇ ತಿಳಿಸಿದೆನು. ನಡೆಯುವುದಕ್ಕೆ ಮೊದಲೇ ಪ್ರಕಟಿಸಿದೆನು.
שָׁמַעְתָּֽ חֲזֵה כֻּלָּהּ וְאַתֶּם הֲלוֹא תַגִּידוּ הִשְׁמַעְתִּיךָ חֲדָשׁוֹת מֵעַתָּה וּנְצֻרוֹת וְלֹא יְדַעְתָּֽם׃ 6
ನಡೆದ ಸಂಗತಿಗಳನ್ನು ನೀನು ಕೇಳಿದಿಯಲ್ಲಾ, ನಡೆದದ್ದನ್ನೆಲ್ಲಾ ನೋಡು, ನಿನ್ನವರೇ ಪ್ರಸಿದ್ಧಿಪಡಿಸಲಿ. ಇಂದಿನಿಂದ ಹೊಸ ಸಂಗತಿಗಳನ್ನು, ನೀನು ತಿಳಿಯದಿದ್ದ ಗುಪ್ತವಿಷಯಗಳನ್ನು ನಿನಗೆ ತಿಳಿಸುತ್ತೇನೆ.
עַתָּה נִבְרְאוּ וְלֹא מֵאָז וְלִפְנֵי־יוֹם וְלֹא שְׁמַעְתָּם פֶּן־תֹּאמַר הִנֵּה יְדַעְתִּֽין׃ 7
ಈಗಲೇ ಉಂಟಾಗುತ್ತಿವೆ, ಪುರಾತನಕಾಲದಲ್ಲಿ ಆಗಿಲ್ಲ, “ಮೊದಲೇ ನಾನು ತಿಳಿದುಕೊಂಡಿದ್ದೆನು” ಎಂದು, ನೀನು ಅಂದುಕೊಳ್ಳದ ಹಾಗೆ ಈ ದಿನಕ್ಕೆ ಮೊದಲು ನಾನು ನಿನಗೆ ಕೇಳಗೊಡಿಸಲಿಲ್ಲ.
גַּם לֹֽא־שָׁמַעְתָּ גַּם לֹא יָדַעְתָּ גַּם מֵאָז לֹא־פִתְּחָה אָזְנֶךָ כִּי יָדַעְתִּי בָּגוֹד תִּבְגּוֹד וּפֹשֵׁעַ מִבֶּטֶן קֹרָא לָֽךְ׃ 8
ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ದ್ರೋಹಿಯೆಂದು ನಾನು ತಿಳಿದುಕೊಂಡಿದ್ದೇನೆ.
לְמַעַן שְׁמִי אַאֲרִיךְ אַפִּי וּתְהִלָּתִי אֶחֱטָם־לָךְ לְבִלְתִּי הַכְרִיתֶֽךָ׃ 9
ನನ್ನ ಹೆಸರು ಕೆಡದಂತೆ ನಿನ್ನ ಮೇಲಣ ಕೋಪವನ್ನು ತಡೆದು, ನನ್ನ ಕೀರ್ತಿಗೆ ಕಳಂಕ ಬಾರದಂತೆ ನಿನ್ನನ್ನು ನಿರ್ಮೂಲಮಾಡದೆ ಸಹಿಸಿಕೊಳ್ಳುವೆನು.
הִנֵּה צְרַפְתִּיךָ וְלֹא בְכָסֶף בְּחַרְתִּיךָ בְּכוּר עֹֽנִי׃ 10
೧೦ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ, ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ.
לְמַעֲנִי לְמַעֲנִי אֶעֱשֶׂה כִּי אֵיךְ יֵחָל וּכְבוֹדִי לְאַחֵר לֹֽא־אֶתֵּֽן׃ 11
೧೧ನನಗಾಗಿ, ನನಗೋಸ್ಕರವೇ, ಇದನ್ನು ಮಾಡುವೆನು. ಏಕೆಂದರೆ ನನ್ನ ಹೆಸರು ಹೇಗೆ ಅಪವಿತ್ರವಾಗುವುದು? ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು.
שְׁמַע אֵלַי יַֽעֲקֹב וְיִשְׂרָאֵל מְקֹרָאִי אֲנִי־הוּא אֲנִי רִאשׁוֹן אַף אֲנִי אַחֲרֽוֹן׃ 12
೧೨ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು. ನಾನೇ ಪರಮಾತ್ಮನು, ನಾನೇ ಆದಿಯೂ, ನಾನೇ ಅಂತ್ಯ
אַף־יָדִי יָסְדָה אֶרֶץ וִֽימִינִי טִפְּחָה שָׁמָיִם קֹרֵא אֲנִי אֲלֵיהֶם יַעַמְדוּ יַחְדָּֽו׃ 13
೧೩ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಕರೆದ ಕೂಡಲೆ ಅವೆರಡೂ ಒಟ್ಟಾಗಿ ನಿಲ್ಲುವವು.
הִקָּבְצוּ כֻלְּכֶם וּֽשֲׁמָעוּ מִי בָהֶם הִגִּיד אֶת־אֵלֶּה יְהוָה אֲהֵבוֹ יַעֲשֶׂה חֶפְצוֹ בְּבָבֶל וּזְרֹעוֹ כַּשְׂדִּֽים׃ 14
೧೪ನೀವೆಲ್ಲರು ಕೂಡಿಕೊಂಡು ಕೇಳಿರಿ! ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವನು ಯಾರು? ಯೆಹೋವನ ಪ್ರೀತಿಪಾತ್ರನು, ಬಾಬೆಲಿನಲ್ಲಿ ಆತನ ಇಷ್ಟವನ್ನು ನೆರವೇರಿಸುವನು. ಕಸ್ದೀಯರ ಮೇಲೆ ಕೈಮಾಡುವನು.
אֲנִי אֲנִי דִּבַּרְתִּי אַף־קְרָאתִיו הֲבִיאֹתִיו וְהִצְלִיחַ דַּרְכּֽוֹ׃ 15
೧೫ನಾನೇ, ನಾನೇ ಬಾಯಿಬಿಟ್ಟು ಅವನನ್ನು ಕರೆದು ಬರಮಾಡಿದ್ದೇನೆ. ಅವನ ಮಾರ್ಗವು ಸಾರ್ಥಕವಾಗುವುದು.
קִרְבוּ אֵלַי שִׁמְעוּ־זֹאת לֹא מֵרֹאשׁ בַּסֵּתֶר דִּבַּרְתִּי מֵעֵת הֱיוֹתָהּ שָׁם אָנִי וְעַתָּה אֲדֹנָי יְהוִה שְׁלָחַנִי וְרוּחֽוֹ׃ 16
೧೬ನನ್ನ ಬಳಿಗೆ ಬಂದು ಇದನ್ನು ಕೇಳಿರಿ, ಆದಿಯಿಂದಲೂ ನಾನು ಗುಟ್ಟಾಗಿ ಮಾತನಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ನಾನು ಅಲ್ಲಿ ಇದ್ದೇನೆ. ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ.
כֹּֽה־אָמַר יְהוָה גֹּאַלְךָ קְדוֹשׁ יִשְׂרָאֵל אֲנִי יְהוָה אֱלֹהֶיךָ מְלַמֶּדְךָ לְהוֹעִיל מַדְרִֽיכֲךָ בְּדֶרֶךְ תֵּלֵֽךְ׃ 17
೧೭ನಿನ್ನ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವೆನು.
לוּא הִקְשַׁבְתָּ לְמִצְוֺתָי וַיְהִי כַנָּהָר שְׁלוֹמֶךָ וְצִדְקָתְךָ כְּגַלֵּי הַיָּֽם׃ 18
೧೮ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ, ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು.
וַיְהִי כַחוֹל זַרְעֶךָ וְצֶאֱצָאֵי מֵעֶיךָ כִּמְעֹתָיו לֹֽא־יִכָּרֵת וְֽלֹא־יִשָּׁמֵד שְׁמוֹ מִלְּפָנָֽי׃ 19
೧೯ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ, ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳಂತೆ ಅಸಂಖ್ಯಾತರಾಗುತ್ತಿದ್ದರು. ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ.
צְאוּ מִבָּבֶל בִּרְחוּ מִכַּשְׂדִּים בְּקוֹל רִנָּה הַגִּידוּ הַשְׁמִיעוּ זֹאת הוֹצִיאוּהָ עַד־קְצֵה הָאָרֶץ אִמְרוּ גָּאַל יְהוָה עַבְדּוֹ יַעֲקֹֽב׃ 20
೨೦ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ! ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. ‘ಯೆಹೋವನು ತನ್ನ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾನೆ’” ಎಂದು ಹೇಳಿರಿ.
וְלֹא צָמְאוּ בָּחֳרָבוֹת הֽוֹלִיכָם מַיִם מִצּוּר הִזִּיל לָמוֹ וַיִּבְקַע־צוּר וַיָּזֻבוּ מָֽיִם׃ 21
೨೧ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು.
אֵין שָׁלוֹם אָמַר יְהוָה לָרְשָׁעִֽים׃ 22
೨೨“ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ಯೆಹೋವನು ನುಡಿಯುತ್ತಾನೆ.

< ישעה 48 >