< ישעה 55 >
הוֹי כָּל־צָמֵא לְכוּ לַמַּיִם וַאֲשֶׁר אֵֽין־לוֹ כָּסֶף לְכוּ שִׁבְרוּ וֶֽאֱכֹלוּ וּלְכוּ שִׁבְרוּ בְּלוֹא־כֶסֶף וּבְלוֹא מְחִיר יַיִן וְחָלָֽב׃ | 1 |
೧“ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.
לָמָּה תִשְׁקְלוּ־כֶסֶף בְּֽלוֹא־לֶחֶם וִיגִיעֲכֶם בְּלוֹא לְשָׂבְעָה שִׁמְעוּ שָׁמוֹעַ אֵלַי וְאִכְלוּ־טוֹב וְתִתְעַנַּג בַּדֶּשֶׁן נַפְשְׁכֶֽם׃ | 2 |
೨ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೆಯದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.
הַטּוּ אָזְנְכֶם וּלְכוּ אֵלַי שִׁמְעוּ וּתְחִי נַפְשְׁכֶם וְאֶכְרְתָה לָכֶם בְּרִית עוֹלָם חַֽסְדֵי דָוִד הַנֶּאֱמָנִֽים׃ | 3 |
೩ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.
הֵן עֵד לְאוּמִּים נְתַתִּיו נָגִיד וּמְצַוֵּה לְאֻמִּֽים׃ | 4 |
೪ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ, ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇಮಿಸಿದೆನು.
הֵן גּוֹי לֹֽא־תֵדַע תִּקְרָא וְגוֹי לֹֽא־יְדָעוּךָ אֵלֶיךָ יָרוּצוּ לְמַעַן יְהוָה אֱלֹהֶיךָ וְלִקְדוֹשׁ יִשְׂרָאֵל כִּי פֵאֲרָֽךְ׃ | 5 |
೫ಎಲೈ, ಇಸ್ರಾಯೇಲೇ, ಅವನಂತೆ ನೀನೂ ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾಮಿ ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವುದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವುದು.
דִּרְשׁוּ יְהוָה בְּהִמָּצְאוֹ קְרָאֻהוּ בִּֽהְיוֹתוֹ קָרֽוֹב׃ | 6 |
೬ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.
יַעֲזֹב רָשָׁע דַּרְכּוֹ וְאִישׁ אָוֶן מַחְשְׁבֹתָיו וְיָשֹׁב אֶל־יְהוָה וִֽירַחֲמֵהוּ וְאֶל־אֱלֹהֵינוּ כִּֽי־יַרְבֶּה לִסְלֽוֹחַ׃ | 7 |
೭ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.
כִּי לֹא מַחְשְׁבוֹתַי מַחְשְׁבוֹתֵיכֶם וְלֹא דַרְכֵיכֶם דְּרָכָי נְאֻם יְהוָֽה׃ | 8 |
೮ಯೆಹೋವನು ಹೀಗೆನ್ನುತ್ತಾನೆ, “ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ, ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.
כִּֽי־גָבְהוּ שָׁמַיִם מֵאָרֶץ כֵּן גָּבְהוּ דְרָכַי מִדַּרְכֵיכֶם וּמַחְשְׁבֹתַי מִמַּחְשְׁבֹתֵיכֶֽם׃ | 9 |
೯ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ನಿಮ್ಮ ಮಾರ್ಗಗಳಿಗಿಂತ ನನ್ನ ಮಾರ್ಗಗಳೂ, ನಿಮ್ಮ ಆಲೋಚನೆಗಳಿಗಿಂತ ನನ್ನ ಆಲೋಚನೆಗಳೂ ಅಷ್ಟು ಉನ್ನತವಾಗಿವೆ.
כִּי כַּאֲשֶׁר יֵרֵד הַגֶּשֶׁם וְהַשֶּׁלֶג מִן־הַשָּׁמַיִם וְשָׁמָּה לֹא יָשׁוּב כִּי אִם־הִרְוָה אֶת־הָאָרֶץ וְהוֹלִידָהּ וְהִצְמִיחָהּ וְנָתַן זֶרַע לַזֹּרֵעַ וְלֶחֶם לָאֹכֵֽל׃ | 10 |
೧೦ಮಳೆಯೂ, ಹಿಮವೂ ಆಕಾಶದಿಂದ ಬಿದ್ದು, ಭೂಮಿಯನ್ನು ತೋಯಿಸಿ, ಹಸರುಗೊಳಿಸಿ ಫಲಿಸುವಂತೆ ಮಾಡಿ, ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವುದಿಲ್ಲವೋ,
כֵּן יִֽהְיֶה דְבָרִי אֲשֶׁר יֵצֵא מִפִּי לֹֽא־יָשׁוּב אֵלַי רֵיקָם כִּי אִם־עָשָׂה אֶת־אֲשֶׁר חָפַצְתִּי וְהִצְלִיחַ אֲשֶׁר שְׁלַחְתִּֽיו׃ | 11 |
೧೧ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.
כִּֽי־בְשִׂמְחָה תֵצֵאוּ וּבְשָׁלוֹם תּֽוּבָלוּן הֶהָרִים וְהַגְּבָעוֹת יִפְצְחוּ לִפְנֵיכֶם רִנָּה וְכָל־עֲצֵי הַשָּׂדֶה יִמְחֲאוּ־כָֽף׃ | 12 |
೧೨ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟ ಗುಡ್ಡಗಳು ನಿಮ್ಮ ಮುಂದೆ ಜಯಘೋಷ ಮಾಡುವವು.
תַּחַת הַֽנַּעֲצוּץ יַעֲלֶה בְרוֹשׁ תחת וְתַחַת הַסִּרְפַּד יַעֲלֶה הֲדַס וְהָיָה לַֽיהוָה לְשֵׁם לְאוֹת עוֹלָם לֹא יִכָּרֵֽת׃ | 13 |
೧೩ಮುಳ್ಳಿಗೆ ಬದಲಾಗಿ ತುರಾಯಿಯೂ, ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; ಆ ವನವು ಯೆಹೋವನ ನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.”