< ירמיה 50 >

הַדָּבָר אֲשֶׁר דִּבֶּר יְהוָה אֶל־בָּבֶל אֶל־אֶרֶץ כַּשְׂדִּים בְּיַד יִרְמְיָהוּ הַנָּבִֽיא׃ 1
ಯೆಹೋವನು ಪ್ರವಾದಿಯಾದ ಯೆರೆಮೀಯನ ಮೂಲಕ ಕಸ್ದೀಯರ ದೇಶವಾದ ಬಾಬೆಲಿನ ವಿಷಯವಾಗಿ ಪ್ರಕಟಿಸಿದ ವಾಕ್ಯ.
הַגִּידוּ בַגּוֹיִם וְהַשְׁמִיעוּ וּֽשְׂאוּ־נֵס הַשְׁמִיעוּ אַל־תְּכַחֵדוּ אִמְרוּ נִלְכְּדָה בָבֶל הֹבִישׁ בֵּל חַת מְרֹדָךְ הֹבִישׁוּ עֲצַבֶּיהָ חַתּוּ גִּלּוּלֶֽיהָ׃ 2
“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.
כִּי עָלָה עָלֶיהָ גּוֹי מִצָּפוֹן הֽוּא־יָשִׁית אֶת־אַרְצָהּ לְשַׁמָּה וְלֹֽא־יִהְיֶה יוֹשֵׁב בָּהּ מֵאָדָם וְעַד־בְּהֵמָה נָדוּ הָלָֽכוּ׃ 3
ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬರುತ್ತಿದೆ, ಅದು ಬಾಬೆಲ್ ದೇಶವನ್ನು ಹಾಳುಮಾಡುವುದು, ಅಲ್ಲಿ ಯಾರೂ ವಾಸಿಸರು, ಪಶುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.
בַּיָּמִים הָהֵמָּה וּבָעֵת הַהִיא נְאֻם־יְהוָה יָבֹאוּ בְנֵֽי־יִשְׂרָאֵל הֵמָּה וּבְנֵֽי־יְהוּדָה יַחְדָּו הָלוֹךְ וּבָכוֹ יֵלֵכוּ וְאֶת־יְהוָה אֱלֹהֵיהֶם יְבַקֵּֽשׁוּ׃ 4
ಯೆಹೋವನು ಇಂತೆನ್ನುತ್ತಾನೆ, ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲರೂ ಮತ್ತು ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು, ತಮ್ಮ ದೇವರಾದ ಯೆಹೋವನಲ್ಲಿ ಮೊರೆಹೋಗುವರು.
צִיּוֹן יִשְׁאָלוּ דֶּרֶךְ הֵנָּה פְנֵיהֶם בֹּאוּ וְנִלְווּ אֶל־יְהוָה בְּרִית עוֹלָם לֹא תִשָּׁכֵֽחַ׃ 5
ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ, ಬನ್ನಿರಿ, ಯೆಹೋವನನ್ನು ಆಶ್ರಯಿಸಿ, ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.
צֹאן אֹֽבְדוֹת היה הָיוּ עַמִּי רֹעֵיהֶם הִתְעוּם הָרִים שובבים שֽׁוֹבְבוּם מֵהַר אֶל־גִּבְעָה הָלָכוּ שָׁכְחוּ רִבְצָֽם׃ 6
ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.
כָּל־מוֹצְאֵיהֶם אֲכָלוּם וְצָרֵיהֶם אָמְרוּ לֹא נֶאְשָׁם תַּחַת אֲשֶׁר חָטְאוּ לַֽיהוָה נְוֵה־צֶדֶק וּמִקְוֵה אֲבֽוֹתֵיהֶם יְהוָֽה׃ 7
ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ, ಅವರು ಸತ್ಯಸ್ವರೂಪನಾದ ಯೆಹೋವನಿಗೆ, ಹೌದು, ತಮ್ಮ ಪೂರ್ವಿಕರ ನಿರೀಕ್ಷೆಯಾದ ಯೆಹೋವನಿಗೆ ಪಾಪ ಮಾಡಿದರಲ್ಲಾ’ ಅಂದುಕೊಂಡರು.
נֻדוּ מִתּוֹךְ בָּבֶל וּמֵאֶרֶץ כַּשְׂדִּים יצאו צֵאוּ וִהְיוּ כְּעַתּוּדִים לִפְנֵי־צֹֽאן׃ 8
ಬಾಬೆಲ್ ದೇಶದೊಳಗಿಂದ ಓಡಿಹೋಗಿರಿ, ಕಸ್ದೀಯರ ಸೀಮೆಯಿಂದ ಹೊರಡಿರಿ; ಹಿಂಡುಗಳ ಮುಂದೆ ಹೋಗುವ ಹೋತಗಳಂತಿರಿ.
כִּי הִנֵּה אָנֹכִי מֵעִיר וּמַעֲלֶה עַל־בָּבֶל קְהַל־גּוֹיִם גְּדֹלִים מֵאֶרֶץ צָפוֹן וְעָרְכוּ לָהּ מִשָּׁם תִּלָּכֵד חִצָּיו כְּגִבּוֹר מַשְׁכִּיל לֹא יָשׁוּב רֵיקָֽם׃ 9
ಇಗೋ, ನಾನು ಮಹಾ ಜನಾಂಗಗಳ ಸಮೂಹವನ್ನು ಎಬ್ಬಿಸಿ ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬೀಳಮಾಡುವೆನು; ಅವು ಬಾಬಿಲೋನಿಗೆ ವಿರುದ್ಧವಾಗಿ ವ್ಯೂಹಕಟ್ಟಿ ಅದನ್ನು ಅದರ ಸ್ಥಳದೊಳಗಿಂದ ನಿರ್ಮೂಲಮಾಡುವವು; ಅವುಗಳ ಬಾಣಗಳು ಸುಮ್ಮನೆ ಹಿಂದಿರುಗದ ಯುದ್ಧಪ್ರವೀಣರಾದ ಶೂರನಂತಿರುವವು.
וְהָיְתָה כַשְׂדִּים לְשָׁלָל כָּל־שֹׁלְלֶיהָ יִשְׂבָּעוּ נְאֻם־יְהוָֽה׃ 10
೧೦ಕಸ್ದೀಯ ರಾಜ್ಯವು ಸೂರೆಯಾಗುವುದು; ಸೂರೆಗಾರರೆಲ್ಲರೂ ತೃಪ್ತಿಗೊಳ್ಳವರು, ಇದು ಯೆಹೋವನ ನುಡಿ” ಎಂಬುದೇ.
כִּי תשמחי תִשְׂמְחוּ כִּי תעלזי תַֽעֲלְזוּ שֹׁסֵי נַחֲלָתִי כִּי תפושי תָפוּשׁוּ כְּעֶגְלָה דָשָׁה ותצהלי וְתִצְהֲלוּ כָּאֲבִּרִֽים׃ 11
೧೧“ನನ್ನ ಸ್ವತ್ತನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ, ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ, ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವುದರಿಂದ
בּוֹשָׁה אִמְּכֶם מְאֹד חָפְרָה יֽוֹלַדְתְּכֶם הִנֵּה אַחֲרִית גּוֹיִם מִדְבָּר צִיָּה וַעֲרָבָֽה׃ 12
೧೨ನಿಮ್ಮ ಮಾತೃಭೂಮಿಯು ಮಾನಭಂಗಕ್ಕೆ ಈಡಾಗುವುದು, ನಿಮ್ಮನ್ನು ಹೆತ್ತ ರಾಜ್ಯವು ನಾಚಿಕೊಳ್ಳುವುದು; ಆಹಾ, ಅದು ಕಾಡು, ಕಗ್ಗಾಡು, ಬೆಗ್ಗಾಡು, ಜನಾಂಗಗಳಲ್ಲಿ ಕನಿಷ್ಠವೂ ಆಗುವುದು.
מִקֶּצֶף יְהוָה לֹא תֵשֵׁב וְהָיְתָה שְׁמָמָה כֻּלָּהּ כֹּל עֹבֵר עַל־בָּבֶל יִשֹּׁם וְיִשְׁרֹק עַל־כָּל־מַכּוֹתֶֽיהָ׃ 13
೧೩ಯೆಹೋವನ ರೋಷದ ದೆಸೆಯಿಂದ ಅದು ನಿರ್ಜನವಾಗಿ ತೀರಾ ಹಾಳುಬೀಳುವುದು; ಬಾಬೆಲನ್ನು ಹಾದು ಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಪರಿಹಾಸ್ಯ ಮಾಡುವರು.
עִרְכוּ עַל־בָּבֶל ׀ סָבִיב כָּל־דֹּרְכֵי קֶשֶׁת יְדוּ אֵלֶיהָ אַֽל־תַּחְמְלוּ אֶל־חֵץ כִּי לַֽיהוָה חָטָֽאָה׃ 14
೧೪ಬಿಲ್ಲುಗಾರರೇ, ನೀವೆಲ್ಲರೂ ವ್ಯೂಹಕಟ್ಟಿ ಬಾಬಿಲೋನಿಗೆ ಮುತ್ತಿಗೆ ಹಾಕಿರಿ, ಬಾಣಗಳನ್ನು ಉಳಿಸದೆ ಎಸೆಯಿರಿ; ಅದು ಯೆಹೋವನಿಗೆ ಪಾಪ ಮಾಡಿತಲ್ಲಾ.
הָרִיעוּ עָלֶיהָ סָבִיב נָתְנָה יָדָהּ נָֽפְלוּ אשויתיה אָשְׁיוֹתֶיהָ נֶהֶרְסוּ חֽוֹמוֹתֶיהָ כִּי נִקְמַת יְהוָה הִיא הִנָּקְמוּ בָהּ כַּאֲשֶׁר עָשְׂתָה עֲשׂוּ־לָֽהּ׃ 15
೧೫ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲುಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು. ಯೆಹೋವನು ಅದಕ್ಕೆ ಮುಯ್ಯಿತೀರಿಸಿದ್ದಾನೆ; ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ.
כִּרְתוּ זוֹרֵעַ מִבָּבֶל וְתֹפֵשׂ מַגָּל בְּעֵת קָצִיר מִפְּנֵי חֶרֶב הַיּוֹנָה אִישׁ אֶל־עַמּוֹ יִפְנוּ וְאִישׁ לְאַרְצוֹ יָנֻֽסוּ׃ 16
೧೬ಬೀಜ ಬಿತ್ತುವವನನ್ನೂ ಮತ್ತು ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನಿಂದ ನಿರ್ಮೂಲಮಾಡಿರಿ; ಪ್ರತಿಯೊಬ್ಬ ವಿದೇಶೀಯನು ಹಿಂಸೆಯ ಖಡ್ಗದ ದೆಸೆಯಿಂದ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.
שֶׂה פְזוּרָה יִשְׂרָאֵל אֲרָיוֹת הִדִּיחוּ הָרִאשׁוֹן אֲכָלוֹ מֶלֶךְ אַשּׁוּר וְזֶה הָאַחֲרוֹן עִצְּמוֹ נְבוּכַדְרֶאצַּר מֶלֶךְ בָּבֶֽל׃ 17
೧೭ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.
לָכֵן כֹּֽה־אָמַר יְהוָה צְבָאוֹת אֱלֹהֵי יִשְׂרָאֵל הִנְנִי פֹקֵד אֶל־מֶלֶךְ בָּבֶל וְאֶל־אַרְצוֹ כַּאֲשֶׁר פָּקַדְתִּי אֶל־מֶלֶךְ אַשּֽׁוּר׃ 18
೧೮ಹೀಗಿರಲು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಅಶ್ಶೂರದ ಅರಸನನ್ನು ದಂಡಿಸಿದಂತೆ ಬಾಬೆಲಿನ ಅರಸನನ್ನೂ ಮತ್ತು ಅವನ ದೇಶವನ್ನೂ ದಂಡಿಸುವೆನು.
וְשֹׁבַבְתִּי אֶת־יִשְׂרָאֵל אֶל־נָוֵהוּ וְרָעָה הַכַּרְמֶל וְהַבָּשָׁן וּבְהַר אֶפְרַיִם וְהַגִּלְעָד תִּשְׂבַּע נַפְשֽׁוֹ׃ 19
೧೯ಇಸ್ರಾಯೇಲನ್ನು ಪುನಃ ಅದರ ಹುಲ್ಗಾವಲಿಗೆ ಸೇರಿಸುವೆನು; ಅದು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವುದು; ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತೃಪ್ತಿಗೊಳ್ಳುವುದು.
בַּיָּמִים הָהֵם וּבָעֵת הַהִיא נְאֻם־יְהוָה יְבֻקַּשׁ אֶת־עֲוֺן יִשְׂרָאֵל וְאֵינֶנּוּ וְאֶת־חַטֹּאת יְהוּדָה וְלֹא תִמָּצֶאינָה כִּי אֶסְלַח לַאֲשֶׁר אַשְׁאִֽיר׃ 20
೨೦ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ಹುಡುಕಿದರೂ ಸಿಕ್ಕುವುದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷಮಿಸುವೆನಲ್ಲವೆ. ಇದು ಯೆಹೋವನ ನುಡಿ.”
עַל־הָאָרֶץ מְרָתַיִם עֲלֵה עָלֶיהָ וְאֶל־יוֹשְׁבֵי פְּקוֹד חֲרֹב וְהַחֲרֵם אַֽחֲרֵיהֶם נְאֻם־יְהוָה וַעֲשֵׂה כְּכֹל אֲשֶׁר צִוִּיתִֽיךָ׃ 21
೨೧ಯೆಹೋವನು ಇಂತೆನ್ನುತ್ತಾನೆ, “ಮೆರಾಥಯಿಮ್ ದೇಶಕ್ಕೂ ಮತ್ತು ಪೆಕೋದಿನ ನಿವಾಸಿಗಳಿಗೂ ವಿರುದ್ಧವಾಗಿ ದಂಡೆತ್ತಿ ಹೋಗಿ, ಅವರನ್ನು ಸಂಹರಿಸಿ, ಅನಂತರ ದೇಶವನ್ನು ತೀರಾ ಹಾಳುಮಾಡಿ, ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸು.
קוֹל מִלְחָמָה בָּאָרֶץ וְשֶׁבֶר גָּדֽוֹל׃ 22
೨೨ಯುದ್ಧದ ಆರ್ಭಟವೂ ಮಹಾನಾಶನದ ಶಬ್ದವೂ ದೇಶದೊಳಗೆ ಕೇಳಿಸುತ್ತವೆ.
אֵיךְ נִגְדַּע וַיִּשָּׁבֵר פַּטִּישׁ כָּל־הָאָרֶץ אֵיךְ הָיְתָה לְשַׁמָּה בָּבֶל בַּגּוֹיִֽם׃ 23
೨೩ಆಹಾ, ಲೋಕವನ್ನೆಲ್ಲಾ ಹೊಡೆದ ಚಮಟಿಗೆಯು ಮುರಿದು ತುಂಡುತುಂಡಾಯಿತು! ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ!
יָקֹשְׁתִּי לָךְ וְגַם־נִלְכַּדְתְּ בָּבֶל וְאַתְּ לֹא יָדָעַתְּ נִמְצֵאת וְגַם־נִתְפַּשְׂתְּ כִּי בַֽיהוָה הִתְגָּרִֽית׃ 24
೨೪ಬಾಬೆಲೇ, ನಾನು ನಿನಗೆ ಉರುಲೊಡ್ಡಿದೆನು; ನೀನು ತಿಳಿಯದೆ ಸಿಕ್ಕಿಕೊಂಡಿ; ನೀನು ಯೆಹೋವನೊಂದಿಗೆ ಹೋರಾಡಿದ್ದರಿಂದ ಬೋನಿಗೆ ಬಿದ್ದು ವಶವಾದಿ.
פָּתַח יְהוָה אֶת־אוֹצָרוֹ וַיּוֹצֵא אֶת־כְּלֵי זַעְמוֹ כִּי־מְלָאכָה הִיא לַֽאדֹנָי יְהוִה צְבָאוֹת בְּאֶרֶץ כַּשְׂדִּֽים׃ 25
೨೫ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕಸ್ದೀಯರ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದುಂಟು; ಅದಕ್ಕಾಗಿ ಯೆಹೋವನು ತನ್ನ ಆಯುಧ ಶಾಲೆಯನ್ನು ತೆರೆದು ತನ್ನ ರೋಷದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ.
בֹּֽאוּ־לָהּ מִקֵּץ פִּתְחוּ מַאֲבֻסֶיהָ סָלּוּהָ כְמוֹ־עֲרֵמִים וְהַחֲרִימוּהָ אַל־תְּהִי־לָהּ שְׁאֵרִֽית׃ 26
೨೬ಲೋಕದ ಕಟ್ಟಕಡೆಯಿಂದ ಬಾಬಿಲೋನಿಗೆ ಬನ್ನಿರಿ, ಅದರ ಕಣಜಗಳನ್ನು ತೆರೆಯಿರಿ; ಪಟ್ಟಣವನ್ನು ಹಾಳುದಿಬ್ಬಗಳಾಗಿ ಮಾಡಿ ಪೂರ್ಣವಾಗಿ ನಾಶಪಡಿಸಿರಿ; ಏನೂ ಉಳಿಯದಿರಲಿ.
חִרְבוּ כָּל־פָּרֶיהָ יֵרְדוּ לַטָּבַח הוֹי עֲלֵיהֶם כִּֽי־בָא יוֹמָם עֵת פְּקֻדָּתָֽם׃ 27
೨೭ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ; ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.
קוֹל נָסִים וּפְלֵטִים מֵאֶרֶץ בָּבֶל לְהַגִּיד בְּצִיּוֹן אֶת־נִקְמַת יְהוָה אֱלֹהֵינוּ נִקְמַת הֵיכָלֽוֹ׃ 28
೨೮ಓಹೋ, ಬಾಬೆಲಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಯೆಹೋವನು ತನ್ನ ಆಲಯವನ್ನು ನಾಶ ಮಾಡಿದವರಿಗೆ ಮುಯ್ಯಿತೀರಿಸಿದ್ದಾನೆ ಎಂಬ ಸಮಾಚಾರವನ್ನು ಚೀಯೋನಿನಲ್ಲಿ ಪ್ರಕಟಿಸುವುದಕ್ಕೆ ಹೋಗುತ್ತಾರಲ್ಲಾ.
הַשְׁמִיעוּ אֶל־בָּבֶל ׀ רַבִּים כָּל־דֹּרְכֵי קֶשֶׁת חֲנוּ עָלֶיהָ סָבִיב אַל־יְהִי־לָהּ פְּלֵטָה שַׁלְּמוּ־לָהּ כְּפָעֳלָהּ כְּכֹל אֲשֶׁר עָשְׂתָה עֲשׂוּ־לָהּ כִּי אֶל־יְהוָה זָדָה אֶל־קְדוֹשׁ יִשְׂרָאֵֽל׃ 29
೨೯ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.
לָכֵן יִפְּלוּ בַחוּרֶיהָ בִּרְחֹבֹתֶיהָ וְכָל־אַנְשֵׁי מִלְחַמְתָּהּ יִדַּמּוּ בַּיּוֹם הַהוּא נְאֻם־יְהוָֽה׃ 30
೩೦ಆದಕಾರಣ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು; ಇದು ಯೆಹೋವನ ನುಡಿ” ಎಂಬುದೇ.
הִנְנִי אֵלֶיךָ זָדוֹן נְאֻם־אֲדֹנָי יְהוִה צְבָאוֹת כִּי בָּא יוֹמְךָ עֵת פְּקַדְתִּֽיךָ׃ 31
೩೧ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ, “ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನ್ನ ವಿರುದ್ಧವಾಗಿದ್ದೇನೆ; ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ.
וְכָשַׁל זָדוֹן וְנָפַל וְאֵין לוֹ מֵקִים וְהִצַּתִּי אֵשׁ בְּעָרָיו וְאָכְלָה כָּל־סְבִיבֹתָֽיו׃ 32
೩೨ಸೊಕ್ಕಿನ ರಾಜ್ಯವು ಎಡವಿ ಬೀಳುವುದು, ಅದನ್ನು ಯಾರೂ ಎತ್ತರು; ಅದರ ಪಟ್ಟಣಗಳಿಗೆ ಬೆಂಕಿಹೊತ್ತಿಸುವೆನು, ಅದು ಸುತ್ತಲಿರುವುದನ್ನು ನುಂಗಿಬಿಡುವುದು.”
כֹּה אָמַר יְהוָה צְבָאוֹת עֲשׁוּקִים בְּנֵי־יִשְׂרָאֵל וּבְנֵי־יְהוּדָה יַחְדָּו וְכָל־שֹֽׁבֵיהֶם הֶחֱזִיקוּ בָם מֵאֲנוּ שַׁלְּחָֽם׃ 33
೩೩ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮತ್ತು ಯೆಹೂದ್ಯರು ಉಭಯರೂ ಹಿಂಸೆಗೆ ಗುರಿಯಾಗಿದ್ದಾರೆ; ಅವರನ್ನು ಸೆರೆ ಒಯ್ದವರೆಲ್ಲರೂ ಅವರನ್ನು ಬಿಡಿಸಲೊಲ್ಲದೆ ಬಿಗಿಹಿಡಿದಿದ್ದಾರೆ.
גֹּאֲלָם ׀ חָזָק יְהוָה צְבָאוֹת שְׁמוֹ רִיב יָרִיב אֶת־רִיבָם לְמַעַן הִרְגִּיעַ אֶת־הָאָרֶץ וְהִרְגִּיז לְיֹשְׁבֵי בָבֶֽל׃ 34
೩೪ಅವರ ರಕ್ಷಕನು ಬಲಿಷ್ಠನು; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ನಾಮಧೇಯ; ಆತನು ಅವರ ವ್ಯಾಜ್ಯವನ್ನು ಜಯಿಸಿ, ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು.”
חֶרֶב עַל־כַּשְׂדִּים נְאֻם־יְהוָה וְאֶל־יֹשְׁבֵי בָבֶל וְאֶל־שָׂרֶיהָ וְאֶל־חֲכָמֶֽיהָ׃ 35
೩೫ಯೆಹೋವನು ಇಂತೆನ್ನುತ್ತಾನೆ, “ಖಡ್ಗವು ಕಸ್ದೀಯರ ಮೇಲೆ ಬೀಳಲಿ! ಬಾಬೆಲಿನ ಸಾಮಾನ್ಯ ಜನರು, ಪ್ರಧಾನರು, ಪಂಡಿತರು, ಇವರನ್ನೆಲ್ಲಾ ಹತಿಸಲಿ!
חֶרֶב אֶל־הַבַּדִּים וְנֹאָלוּ חֶרֶב אֶל־גִּבּוֹרֶיהָ וָחָֽתּוּ׃ 36
೩೬ಖಡ್ಗವು ಕೊಚ್ಚಿಕೊಳ್ಳುವವರನ್ನು ಇರಿಯಲಿ! ಅವರ ಬುದ್ಧಿಹೀನತೆಯು ಬಯಲಿಗೆ ಬರುವುದು. ಖಡ್ಗವು ಬಾಬೆಲಿನ ಶೂರರನ್ನು ಸಂಹರಿಸಲಿ! ಅವರು ಬೆಚ್ಚಿಬೀಳುವರು.
חֶרֶב אֶל־סוּסָיו וְאֶל־רִכְבּוֹ וְאֶל־כָּל־הָעֶרֶב אֲשֶׁר בְּתוֹכָהּ וְהָיוּ לְנָשִׁים חֶרֶב אֶל־אוֹצְרֹתֶיהָ וּבֻזָּֽזוּ׃ 37
೩೭ಖಡ್ಗವು ಅವರ ಅಶ್ವಗಳನ್ನೂ, ರಥಗಳನ್ನೂ, ಬಾಬೆಲಿನಲ್ಲಿರುವ ಬಗೆಬಗೆಯ ವಿದೇಶೀಯರನ್ನೆಲ್ಲ ಹೊಡೆಯಲಿ! ಅವರು ಹೆಂಗಸರಂತೆ ಬೆದರುವರು, ಖಡ್ಗವು ಅವರ ಸಂಪತ್ತನ್ನು ನುಂಗಲಿ! ಅವರು ಸೂರೆಗೆ ಈಡಾಗುವರು.
חֹרֶב אֶל־מֵימֶיהָ וְיָבֵשׁוּ כִּי אֶרֶץ פְּסִלִים הִיא וּבָאֵימִים יִתְהֹלָֽלוּ׃ 38
೩೮ಬರಗಾಲವು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವುದು. ಅದು ಬೊಂಬೆಗಳಿಂದ ತುಂಬಿದ ದೇಶ, ಅದರ ಜನರು ತಮ್ಮ ಭಯಂಕರವಾದ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ;
לָכֵן יֵשְׁבוּ צִיִּים אֶת־אִיִּים וְיָשְׁבוּ בָהּ בְּנוֹת יַֽעֲנָה וְלֹֽא־תֵשֵׁב עוֹד לָנֶצַח וְלֹא תִשְׁכּוֹן עַד־דּוֹר וָדֽוֹר׃ 39
೩೯ಆದಕಾರಣ ತೋಳ ಮುಂತಾದ ಕಾಡುಮೃಗಗಳು ಅಲ್ಲಿ ಬೀಡು ಮಾಡಿಕೊಳ್ಳುವವು, ಉಷ್ಟ್ರಪಕ್ಷಿಗಳು ತಂಗುವವು; ಅದು ಎಂದಿಗೂ ವಾಸಸ್ಥಳವಾಗದು, ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಇರುವುದಿಲ್ಲ.
כְּמַהְפֵּכַת אֱלֹהִים אֶת־סְדֹם וְאֶת־עֲמֹרָה וְאֶת־שְׁכֵנֶיהָ נְאֻם־יְהוָה לֹֽא־יֵשֵׁב שָׁם אִישׁ וְלֹֽא־יָגוּר בָּהּ בֶּן־אָדָֽם׃ 40
೪೦ದೇವರು ಕೆಡವಿದ ಸೊದೋಮ್, ಗೊಮೋರ ಪಟ್ಟಣಗಳಲ್ಲಿಯೂ ಮತ್ತು ಸುತ್ತಣ ಊರುಗಳಲ್ಲಿಯೂ ಹೇಗೋ, ಹಾಗೆಯೇ ಬಾಬೆಲಿನಲ್ಲಿಯೂ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲೆ ನಿಲ್ಲುವುದಿಲ್ಲ.
הִנֵּה עַם בָּא מִצָּפוֹן וְגוֹי גָּדוֹל וּמְלָכִים רַבִּים יֵעֹרוּ מִיַּרְכְּתֵי־אָֽרֶץ׃ 41
೪೧ಆಹಾ, ಉತ್ತರ ದಿಕ್ಕಿನಿಂದ ಒಂದು ಜನಾಂಗವು ಬರುತ್ತೆ, ಮಹಾ ಜನವೂ, ಬಹು ಮಂದಿ ಅರಸರೂ ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಬರುತ್ತಾರೆ.
קֶשֶׁת וְכִידֹן יַחֲזִיקוּ אַכְזָרִי הֵמָּה וְלֹא יְרַחֵמוּ קוֹלָם כַּיָּם יֶהֱמֶה וְעַל־סוּסִים יִרְכָּבוּ עָרוּךְ כְּאִישׁ לַמִּלְחָמָה עָלַיִךְ בַּת־בָּבֶֽל׃ 42
೪೨ಬಿಲ್ಲನ್ನೂ ಮತ್ತು ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ಅನ್ನುತ್ತಾನೆ.
שָׁמַע מֶֽלֶךְ־בָּבֶל אֶת־שִׁמְעָם וְרָפוּ יָדָיו צָרָה הֶחֱזִיקַתְהוּ חִיל כַּיּוֹלֵדָֽה׃ 43
೪೩ಬಾಬೆಲಿನ ಅರಸನು ಅದರ ಸುದ್ದಿಯನ್ನು ಕೇಳಿದನು, ಅವನ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ಅವನನ್ನು ಹಿಡಿದಿದೆ.
הִנֵּה כְּאַרְיֵה יַעֲלֶה מִגְּאוֹן הַיַּרְדֵּן אֶל־נְוֵה אֵיתָן כִּֽי־אַרְגִּעָה ארוצם אֲרִיצֵם מֵֽעָלֶיהָ וּמִי בָחוּר אֵלֶיהָ אֶפְקֹד כִּי מִי כָמוֹנִי וּמִי יוֹעִדֶנִּי וּמִֽי־זֶה רֹעֶה אֲשֶׁר יַעֲמֹד לְפָנָֽי׃ 44
೪೪ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ ಕಸ್ದೀಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲನು?
לָכֵן שִׁמְעוּ עֲצַת־יְהוָה אֲשֶׁר יָעַץ אֶל־בָּבֶל וּמַחְשְׁבוֹתָיו אֲשֶׁר חָשַׁב אֶל־אֶרֶץ כַּשְׂדִּים אִם־לֹא יִסְחָבוּם צְעִירֵי הַצֹּאן אִם־לֹא יַשִּׁים עֲלֵיהֶם נָוֶֽה׃ 45
೪೫ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ಕಸ್ದೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ, ಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶಕ್ಕೆ ಬೆದರುವುದು.
מִקּוֹל נִתְפְּשָׂה בָבֶל נִרְעֲשָׁה הָאָרֶץ וּזְעָקָה בַּגּוֹיִם נִשְׁמָֽע׃ 46
೪೬ಬಾಬೆಲು ಶತ್ರುವಶವಾಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುತ್ತದೆ, ಅದರ ಮೊರೆಯು ಜನಾಂಗಗಳಲ್ಲಿ ಕೇಳಿಸುತ್ತದೆ.

< ירמיה 50 >