< ירמיה 8 >
בָּעֵת הַהִיא נְאֻם־יְהוָה ויציאו יוֹצִיאוּ אֶת־עַצְמוֹת מַלְכֵֽי־יְהוּדָה וְאֶת־עַצְמוֹת־שָׂרָיו וְאֶת־עַצְמוֹת הַכֹּהֲנִים וְאֵת ׀ עַצְמוֹת הַנְּבִיאִים וְאֵת עַצְמוֹת יוֹשְׁבֵֽי־יְרוּשָׁלָ͏ִם מִקִּבְרֵיהֶֽם׃ | 1 |
೧ಯೆಹೋವನು ಹೀಗೆನ್ನುತ್ತಾನೆ, “ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇಮಿನ ನಿವಾಸಿಗಳು, ಇವರೆಲ್ಲರ ಎಲುಬುಗಳನ್ನು ಸಮಾಧಿಗಳೊಳಗಿಂದ ತೆಗೆದುಬಿಡುವರು.
וּשְׁטָחוּם לַשֶּׁמֶשׁ וְלַיָּרֵחַ וּלְכֹל ׀ צְבָא הַשָּׁמַיִם אֲשֶׁר אֲהֵבוּם וַאֲשֶׁר עֲבָדוּם וַֽאֲשֶׁר הָלְכוּ אַֽחֲרֵיהֶם וַאֲשֶׁר דְּרָשׁוּם וַאֲשֶׁר הִֽשְׁתַּחֲווּ לָהֶם לֹא יֵאָֽסְפוּ וְלֹא יִקָּבֵרוּ לְדֹמֶן עַל־פְּנֵי הָאֲדָמָה יִֽהְיֽוּ׃ | 2 |
೨ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.
וְנִבְחַר מָוֶת מֵֽחַיִּים לְכֹל הַשְּׁאֵרִית הַנִּשְׁאָרִים מִן־הַמִּשְׁפָּחָה הָֽרָעָה הַזֹּאת בְּכָל־הַמְּקֹמוֹת הַנִּשְׁאָרִים אֲשֶׁר הִדַּחְתִּים שָׁם נְאֻם יְהוָה צְבָאֽוֹת׃ | 3 |
೩ನಾನು ಯಾವ ಸ್ಥಳಗಳಿಗೆ ಈ ದುಷ್ಟ ವಂಶದವರನ್ನು ಅಟ್ಟಿಬಿಟ್ಟಿದ್ದೆನೋ ಅಲ್ಲಿ ಉಳಿದವರೆಲ್ಲರೂ ಜೀವಿಸುವುದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು” ಇದು ಯೆಹೋವನ ನುಡಿ.
וְאָמַרְתָּ אֲלֵיהֶם כֹּה אָמַר יְהוָה הֲיִפְּלוּ וְלֹא יָקוּמוּ אִם־יָשׁוּב וְלֹא יָשֽׁוּב׃ | 4 |
೪ನೀನು ಅವರಿಗೆ ಹೀಗೆ ಹೇಳಬೇಕು, “ಯೆಹೋವನು ಇಂತೆನ್ನುತ್ತಾನೆ, ಬಿದ್ದವರು ಏಳದಿರುವರೋ? ಬಿಟ್ಟುಹೋದವನು ತಿರುಗಿ ಬರುವುದಿಲ್ಲವೋ?
מַדּוּעַ שׁוֹבְבָה הָעָם הַזֶּה יְרוּשָׁלַ͏ִם מְשֻׁבָה נִצַּחַת הֶחֱזִיקוּ בַּתַּרְמִית מֵאֲנוּ לָשֽׁוּב׃ | 5 |
೫ಈ ಜನರು, ಯೆರೂಸಲೇಮ್ ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರುಗಿ ಬರುವುದಿಲ್ಲ.
הִקְשַׁבְתִּי וָֽאֶשְׁמָע לוֹא־כֵן יְדַבֵּרוּ אֵין אִישׁ נִחָם עַל־רָעָתוֹ לֵאמֹר מֶה עָשִׂיתִי כֻּלֹּה שָׁב במרצותם בִּמְרוּצָתָם כְּסוּס שׁוֹטֵף בַּמִּלְחָמָֽה׃ | 6 |
೬ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತನಾಡಿಕೊಳ್ಳುತ್ತಿರಲಿಲ್ಲ; ಯಾರು ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು ‘ಆಹಾ, ನಾನು ಎಂಥಾ ಕೆಲಸ ಮಾಡಿದೆ’ ಎಂದುಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೆ ತ್ವರೆಪಡುತ್ತಾನೆ.
גַּם־חֲסִידָה בַשָּׁמַיִם יָֽדְעָה מֽוֹעֲדֶיהָ וְתֹר וסוס וְסִיס וְעָגוּר שָׁמְרוּ אֶת־עֵת בֹּאָנָה וְעַמִּי לֹא יָֽדְעוּ אֵת מִשְׁפַּט יְהוָֽה׃ | 7 |
೭ಆಕಾಶದಲ್ಲಿ ಹಾರುವ ಬಕವೂ ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿಯೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನ ಸಮಯಗಳನ್ನು ಗಮನಿಸುತ್ತವೆ. ಆದರೆ ನನ್ನ ಜನರಾದರೋ ಯೆಹೋವನ ನಿಯಮವನ್ನು ತಿಳಿಯರು.
אֵיכָה תֹֽאמְרוּ חֲכָמִים אֲנַחְנוּ וְתוֹרַת יְהוָה אִתָּנוּ אָכֵן הִנֵּה לַשֶּׁקֶר עָשָׂה עֵט שֶׁקֶר סֹפְרִֽים׃ | 8 |
೮ಹೀಗಿರಲು ‘ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ’ ಎಂದು ನೀವು ಅಂದುಕೊಳ್ಳುವುದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳಾಗಿ ಮಾಡಿದೆ.
הֹבִישׁוּ חֲכָמִים חַתּוּ וַיִּלָּכֵדוּ הִנֵּה בִדְבַר־יְהוָה מָאָסוּ וְחָכְמַֽת־מֶה לָהֶֽם׃ | 9 |
೯ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.
לָכֵן אֶתֵּן אֶת־נְשֵׁיהֶם לַאֲחֵרִים שְׂדֽוֹתֵיהֶם לְיוֹרְשִׁים כִּי מִקָּטֹן וְעַד־גָּדוֹל כֻּלֹּה בֹּצֵעַ בָּצַע מִנָּבִיא וְעַד־כֹּהֵן כֻּלֹּה עֹשֶׂה שָּֽׁקֶר׃ | 10 |
೧೦ಅವರ ಜ್ಞಾನವು ಎಷ್ಟರದು? ಆದುದರಿಂದ ನಾನು ಇವರ ಹೆಂಡತಿಯರನ್ನು ಅನ್ಯರಿಗೂ ಮತ್ತು ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳಿಂದ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.
וַיְרַפּוּ אֶת־שֶׁבֶר בַּת־עַמִּי עַל־נְקַלָּה לֵאמֹר שָׁלוֹם ׀ שָׁלוֹם וְאֵין שָׁלֽוֹם׃ | 11 |
೧೧ಸಮಾಧಾನವಿಲ್ಲದ್ದಿದ್ದರೂ, ‘ಸಮಾಧಾನ’ ಎಂದು ಹೇಳಿ ನನ್ನ ಪ್ರಜೆಯೆಂಬಾಕೆಯ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.
הֹבִשׁוּ כִּי תוֹעֵבָה עָשׂוּ גַּם־בּוֹשׁ לֹֽא־יֵבֹשׁוּ וְהִכָּלֵם לֹא יָדָעוּ לָכֵן יִפְּלוּ בַנֹּפְלִים בְּעֵת פְּקֻדָּתָם יִכָּשְׁלוּ אָמַר יְהוָֽה׃ | 12 |
೧೨ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.
אָסֹף אֲסִיפֵם נְאֻם־יְהֹוָה אֵין עֲנָבִים בַּגֶּפֶן וְאֵין תְּאֵנִים בַּתְּאֵנָה וְהֶֽעָלֶה נָבֵל וָאֶתֵּן לָהֶם יַעַבְרֽוּם׃ | 13 |
೧೩ನಾನು ಇವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಿಬಿಡುವೆನು. ದ್ರಾಕ್ಷಿಯ ಬಳ್ಳಿಯಲ್ಲಿಯೂ, ಅಂಜೂರದ ಮರದಲ್ಲಿಯೂ ಹಣ್ಣಿರುವುದಿಲ್ಲ, ಎಲೆಯು ಬಾಡುವುದು; ನಾನು ಹಾಳುಮಾಡುವವರನ್ನು ಅವರಿಗೆ ನೇಮಿಸುವೆನು” ಇದು ಯೆಹೋವನ ನುಡಿ.
עַל־מָה אֲנַחְנוּ יֹֽשְׁבִים הֵֽאָסְפוּ וְנָבוֹא אֶל־עָרֵי הַמִּבְצָר וְנִדְּמָה־שָּׁם כִּי יְהוָה אֱלֹהֵינוּ הֲדִמָּנוּ וַיַּשְׁקֵנוּ מֵי־רֹאשׁ כִּי חָטָאנוּ לַיהוָֽה׃ | 14 |
೧೪ಆ ಕಾಲದಲ್ಲಿ ಜನರು, “ಸುಮ್ಮನೆ ಕುಳಿತಿರುವುದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ. ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.
קַוֵּה לְשָׁלוֹם וְאֵין טוֹב לְעֵת מַרְפֵּה וְהִנֵּה בְעָתָֽה׃ | 15 |
೧೫ನಾವು ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!
מִדָּן נִשְׁמַע נַחְרַת סוּסָיו מִקּוֹל מִצְהֲלוֹת אַבִּירָיו רָעֲשָׁה כָּל־הָאָרֶץ וַיָּבוֹאוּ וַיֹּֽאכְלוּ אֶרֶץ וּמְלוֹאָהּ עִיר וְיֹשְׁבֵי בָֽהּ׃ | 16 |
೧೬ವೈರಿಯ ಕುದುರೆಗಳ ಬುಸುಗಾಟವು ದಾನನಿಂದ ಕೇಳಿಬರುತ್ತದೆ; ತುರಂಗಗಳ (ಯುದ್ಧದ ಕುದುರೆ) ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ. ಶತ್ರುಗಳು ಬಂದರು, ಸೀಮೆಯನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ, ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು” ಎಂದು ಹೇಳುವರು.
כִּי הִנְנִי מְשַׁלֵּחַ בָּכֶם נְחָשִׁים צִפְעֹנִים אֲשֶׁר אֵין־לָהֶם לָחַשׁ וְנִשְּׁכוּ אֶתְכֶם נְאֻם־יְהוָֽה׃ | 17 |
೧೭ಅದಕ್ಕೆ ಯೆಹೋವನು, “ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು, ಮಂತ್ರಕ್ಕೆ ಅಧೀನವಾಗದ ನಾಗಗಳನ್ನು ಬಿಡುವೆನು; ಅವು ನಿಮ್ಮನ್ನು ಕಚ್ಚುವವು” ಎಂದು ನುಡಿದಿದ್ದಾನೆ.
מַבְלִיגִיתִי עֲלֵי יָגוֹן עָלַי לִבִּי דַוָּֽי׃ | 18 |
೧೮ಅಯ್ಯೋ, ನನ್ನ ದುಃಖಕ್ಕೆ ಕೊನೆಯಿಲ್ಲವೇ? ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ.
הִנֵּה־קוֹל שַֽׁוְעַת בַּת־עַמִּי מֵאֶרֶץ מַרְחַקִּים הַֽיהוָה אֵין בְּצִיּוֹן אִם־מַלְכָּהּ אֵין בָּהּ מַדּוּעַ הִכְעִסוּנִי בִּפְסִלֵיהֶם בְּהַבְלֵי נֵכָֽר׃ | 19 |
೧೯ಆಹಾ, ನನ್ನ ಪ್ರಜೆಯೆಂಬಾಕೆಯು, “ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ?” ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. ಅದಕ್ಕೆ ಯೆಹೋವನು, “ಇವರು ತಮ್ಮ ವಿಗ್ರಹಗಳಿಂದಲೂ, ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ” ಎಂದು ನುಡಿಯುತ್ತಾನೆ.
עָבַר קָצִיר כָּלָה קָיִץ וַאֲנַחְנוּ לוֹא נוֹשָֽׁעְנוּ׃ | 20 |
೨೦ಸುಗ್ಗಿ ತೀರಿತು, ಹಣ್ಣಿನ ಕಾಲ ಮುಗಿಯಿತು, ನಮಗೆ ಉದ್ಧಾರವೇ ಆಗಲಿಲ್ಲ.
עַל־שֶׁבֶר בַּת־עַמִּי הָשְׁבָּרְתִּי קָדַרְתִּי שַׁמָּה הֶחֱזִקָֽתְנִי׃ | 21 |
೨೧ನನ್ನ ಪ್ರಜೆಯೆಂಬಾಕೆಯ ವೇದನೆಯಿಂದ ನನಗೆ ಮನೋಯಾತನೆಯಾಯಿತು, ನಾನು ಶೋಕಿಸಿದೆನು, ಭಯವು ನನ್ನನ್ನು ಹಿಡಿದಿದೆ.
הַצֳרִי אֵין בְּגִלְעָד אִם־רֹפֵא אֵין שָׁם כִּי מַדּוּעַ לֹא עָֽלְתָה אֲרֻכַת בַּת־עַמִּֽי׃ | 22 |
೨೨ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?