< איוב 1 >
אִישׁ הָיָה בְאֶֽרֶץ־עוּץ אִיּוֹב שְׁמוֹ וְהָיָה ׀ הָאִישׁ הַהוּא תָּם וְיָשָׁר וִירֵא אֱלֹהִים וְסָר מֵרָֽע׃ | 1 |
೧ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.
וַיִּוָּלְדוּ לוֹ שִׁבְעָה בָנִים וְשָׁלוֹשׁ בָּנֽוֹת׃ | 2 |
೨ಅವನಿಗೆ ಏಳು ಮಂದಿ ಗಂಡುಮಕ್ಕಳೂ, ಮೂರು ಮಂದಿ ಹೆಣ್ಣುಮಕ್ಕಳೂ ಇದ್ದರು.
וַיְהִי מִקְנֵהוּ שִֽׁבְעַת אַלְפֵי־צֹאן וּשְׁלֹשֶׁת אַלְפֵי גְמַלִּים וַחֲמֵשׁ מֵאוֹת צֶֽמֶד־בָּקָר וַחֲמֵשׁ מֵאוֹת אֲתוֹנוֹת וַעֲבֻדָּה רַבָּה מְאֹד וַיְהִי הָאִישׁ הַהוּא גָּדוֹל מִכָּל־בְּנֵי־קֶֽדֶם׃ | 3 |
೩ಅವನಿಗೆ ಏಳು ಸಾವಿರ ಕುರಿಗಳೂ, ಮೂರು ಸಾವಿರ ಒಂಟೆಗಳೂ, ಐನೂರು ಜೋಡಿ ಎತ್ತುಗಳೂ, ಐನೂರು ಹೆಣ್ಣು ಕತ್ತೆಗಳೂ, ಬಹುಮಂದಿ ಸೇವಕರೂ ಇದ್ದುದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವತ್ತುಳ್ಳವನಾಗಿದ್ದನು.
וְהָלְכוּ בָנָיו וְעָשׂוּ מִשְׁתֶּה בֵּית אִישׁ יוֹמוֹ וְשָׁלְחוּ וְקָרְאוּ לִשְׁלֹשֶׁת אחיתיהם אַחְיֽוֹתֵיהֶם לֶאֱכֹל וְלִשְׁתּוֹת עִמָּהֶֽם׃ | 4 |
೪ಅವನ ಗಂಡು ಮಕ್ಕಳು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ನಡೆಸುತ್ತಾ ಆ ಭೋಜನಕ್ಕೆ ತಮ್ಮ ಮೂವರು ಅಕ್ಕತಂಗಿಯರನ್ನೂ ಕರೆಕಳುಹಿಸುತ್ತಿದ್ದರು.
וַיְהִי כִּי הִקִּיפֽוּ יְמֵי הַמִּשְׁתֶּה וַיִּשְׁלַח אִיּוֹב וַֽיְקַדְּשֵׁם וְהִשְׁכִּים בַּבֹּקֶר וְהֶעֱלָה עֹלוֹת מִסְפַּר כֻּלָּם כִּי אָמַר אִיּוֹב אוּלַי חָטְאוּ בָנַי וּבֵרֲכוּ אֱלֹהִים בִּלְבָבָם כָּכָה יַעֲשֶׂה אִיּוֹב כָּל־הַיָּמִֽים׃ | 5 |
೫ಔತಣದ ಸರದಿ ತೀರಿದ ನಂತರ ಯೋಬನು, “ನನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು” ಎಂದು ಅವರನ್ನು ಕರೆಯಿಸಿ ಶುದ್ಧಿಪಡಿಸಿ, ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುವುದು ದೈನಂದಿನ ಕ್ರಮವಾಗಿತ್ತು.
וַיְהִי הַיּוֹם וַיָּבֹאוּ בְּנֵי הָאֱלֹהִים לְהִתְיַצֵּב עַל־יְהוָה וַיָּבוֹא גַֽם־הַשָּׂטָן בְּתוֹכָֽם׃ | 6 |
೬ಒಂದು ದಿನ ದೇವದೂತರು ಯೆಹೋವನ ಸನ್ನಿಧಿಗೆ ಬರುವಾಗ ಸೈತಾನನು (ಆಪಾದಕ ದೂತನು) ಅವರ ಜೊತೆಯಲ್ಲಿ ಬಂದನು.
וַיֹּאמֶר יְהוָה אֶל־הַשָּׂטָן מֵאַיִן תָּבֹא וַיַּעַן הַשָּׂטָן אֶת־יְהוָה וַיֹּאמַר מִשּׁוּט בָּאָרֶץ וּמֵֽהִתְהַלֵּךְ בָּֽהּ׃ | 7 |
೭ಯೆಹೋವನು ಸೈತಾನನನ್ನು, “ಎಲ್ಲಿಂದ ಬಂದೆ?” ಎಂದು ಕೇಳಲು ಸೈತಾನನು ಯೆಹೋವನಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು” ಎಂದು ಹೇಳಿದನು.
וַיֹּאמֶר יְהוָה אֶל־הַשָּׂטָן הֲשַׂמְתָּ לִבְּךָ עַל־עַבְדִּי אִיּוֹב כִּי אֵין כָּמֹהוּ בָּאָרֶץ אִישׁ תָּם וְיָשָׁר יְרֵא אֱלֹהִים וְסָר מֵרָֽע׃ | 8 |
೮ಆಗ ಯೆಹೋವನು, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ, ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ” ಎಂದು ಸೈತಾನನಿಗೆ ಹೇಳಿದನು.
וַיַּעַן הַשָּׂטָן אֶת־יְהוָה וַיֹּאמַר הַֽחִנָּם יָרֵא אִיּוֹב אֱלֹהִֽים׃ | 9 |
೯ಅದಕ್ಕೆ ಸೈತಾನನು, “ಯೋಬನು ನಿನ್ನಲ್ಲಿ ಭಯಭಕ್ತಿಯನ್ನು ಲಾಭವಿಲ್ಲದೆ ಇಟ್ಟಿದ್ದಾನೋ?
הֲלֹֽא־את אַתָּה שַׂכְתָּ בַעֲדוֹ וּבְעַד־בֵּיתוֹ וּבְעַד כָּל־אֲשֶׁר־לוֹ מִסָּבִיב מַעֲשֵׂה יָדָיו בֵּרַכְתָּ וּמִקְנֵהוּ פָּרַץ בָּאָֽרֶץ׃ | 10 |
೧೦ನೀನು ಅವನಿಗೂ, ಅವನ ಮನೆಗೂ, ಅವನ ಎಲ್ಲಾ ಸ್ವತ್ತಿಗೂ ಸುತ್ತು ಮುತ್ತಲು ನಿನ್ನ ಕೃಪೆಯ ಬೇಲಿಯನ್ನು ಹಾಕಿದ್ದೀಯಲ್ಲಾ. ಅವನು ಕೈಹಾಕಿದ ಕೆಲಸವನ್ನು ನೀನು ಸಫಲಪಡಿಸುತ್ತಿರುವುದರಿಂದ ಅವನ ಸಂಪತ್ತು ದೇಶದಲ್ಲಿ ವೃದ್ಧಿಯಾಗುತ್ತಾ ಬಂದಿದೆ.
וְאוּלָם שְֽׁלַֽח־נָא יָֽדְךָ וְגַע בְּכָל־אֲשֶׁר־לוֹ אִם־לֹא עַל־פָּנֶיךָ יְבָרֲכֶֽךָּ׃ | 11 |
೧೧ಆದರೆ ನಿನ್ನ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡು. ಆಗ ಅವನು ನಿನ್ನ ಎದುರಿಗೆ ನಿನ್ನನ್ನು ದೂಷಿಸದೇ ಬಿಡುವನೇ?” ಎಂದನು.
וַיֹּאמֶר יְהוָה אֶל־הַשָּׂטָן הִנֵּה כָל־אֲשֶׁר־לוֹ בְּיָדֶךָ רַק אֵלָיו אַל־תִּשְׁלַח יָדֶךָ וַיֵּצֵא הַשָּׂטָן מֵעִם פְּנֵי יְהוָֽה׃ | 12 |
೧೨ಯೆಹೋವನು ಸೈತಾನನಿಗೆ, “ನೋಡು, ಅವನ ಸ್ವಾಸ್ತ್ಯವೆಲ್ಲಾ ನಿನ್ನ ಕೈಯಲ್ಲಿದೆ. ಆದರೆ ಅವನ ಮೈಮೇಲೆ ಮಾತ್ರ ಕೈಹಾಕಬೇಡ” ಎಂದು ಅಪ್ಪಣೆಕೊಟ್ಟನು. ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟುಹೋದನು.
וַיְהִי הַיּוֹם וּבָנָיו וּבְנֹתָיו אֹֽכְלִים וְשֹׁתִים יַיִן בְּבֵית אֲחִיהֶם הַבְּכֽוֹר׃ | 13 |
೧೩ಇದಾದ ಬಳಿಕ ಒಂದು ದಿನ ಯೋಬನ ಗಂಡು ಹೆಣ್ಣು ಮಕ್ಕಳು ಹಿರಿಯವನ ಮನೆಯಲ್ಲಿ ಔತಣದಲ್ಲಿ ಊಟಮಾಡಿ ಕುಡಿಯುತ್ತಿರುವಾಗ,
וּמַלְאָךְ בָּא אֶל־אִיּוֹב וַיֹּאמַר הַבָּקָר הָיוּ חֹֽרְשׁוֹת וְהָאֲתֹנוֹת רֹעוֹת עַל־יְדֵיהֶֽם׃ | 14 |
೧೪ಒಬ್ಬ ದೂತನು ಯೋಬನ ಬಳಿಗೆ ಬಂದು, “ನಿನ್ನ ಎತ್ತುಗಳು ಉಳುತ್ತಾ ಇರುವಾಗ ಅವುಗಳ ಹತ್ತಿರ ಕತ್ತೆಗಳು ಮೇಯುತ್ತಾ ಇದ್ದವು.
וַתִּפֹּל שְׁבָא וַתִּקָּחֵם וְאֶת־הַנְּעָרִים הִכּוּ לְפִי־חָרֶב וָֽאִמָּלְטָה רַק־אֲנִי לְבַדִּי לְהַגִּיד לָֽךְ׃ | 15 |
೧೫ಶೆಬದವರು ಅವುಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು. ಇದಲ್ಲದೆ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು. ಈ ಸುದ್ದಿಯನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದು ಹೇಳಿದನು.
עוֹד ׀ זֶה מְדַבֵּר וְזֶה בָּא וַיֹּאמַר אֵשׁ אֱלֹהִים נָֽפְלָה מִן־הַשָּׁמַיִם וַתִּבְעַר בַּצֹּאן וּבַנְּעָרִים וַתֹּאכְלֵם וָאִמָּלְטָה רַק־אֲנִי לְבַדִּי לְהַגִּיד לָֽךְ׃ | 16 |
೧೬ಅವನು ಮಾತನಾಡುತ್ತಿರುವಾಗಲೇ ಮತ್ತೊಬ್ಬನು ಬಂದು, “ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿಗಳನ್ನೂ, ಆಳುಗಳನ್ನೂ ದಹಿಸಿ ನುಂಗಿಬಿಟ್ಟಿದೆ. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.
עוֹד ׀ זֶה מְדַבֵּר וְזֶה בָּא וַיֹּאמַר כַּשְׂדִּים שָׂמוּ ׀ שְׁלֹשָׁה רָאשִׁים וַֽיִּפְשְׁטוּ עַל־הַגְּמַלִּים וַיִּקָּחוּם וְאֶת־הַנְּעָרִים הִכּוּ לְפִי־חָרֶב וָאִמָּלְטָה רַק־אֲנִי לְבַדִּי לְהַגִּיד לָֽךְ׃ | 17 |
೧೭ಅಷ್ಟರಲ್ಲಿ ಇನ್ನೊಬ್ಬನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು ಒಂಟೆಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು. ಇದಲ್ಲದೆ ಆಳುಗಳನ್ನು ಕತ್ತಿಯಿಂದ ಹತ್ಯೆ ಮಾಡಿದರು. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.
עַד זֶה מְדַבֵּר וְזֶה בָּא וַיֹּאמַר בָּנֶיךָ וּבְנוֹתֶיךָ אֹֽכְלִים וְשֹׁתִים יַיִן בְּבֵית אֲחִיהֶם הַבְּכֽוֹר׃ | 18 |
೧೮ಅವನು ಇನ್ನು ಮಾತನಾಡುತ್ತಿರುವಾಗಲೆ ಬೇರೊಬ್ಬನು ಬಂದು, “ನಿನ್ನ ಗಂಡು, ಹೆಣ್ಣು ಮಕ್ಕಳು ತಮ್ಮ ಅಣ್ಣನ ಮನೆಯಲ್ಲಿ ತಿಂದು ಕುಡಿಯುತ್ತಿರುವಾಗ,
וְהִנֵּה רוּחַ גְּדוֹלָה בָּאָה ׀ מֵעֵבֶר הַמִּדְבָּר וַיִּגַּע בְּאַרְבַּע פִּנּוֹת הַבַּיִת וַיִּפֹּל עַל־הַנְּעָרִים וַיָּמוּתוּ וָאִמָּלְטָה רַק־אֲנִי לְבַדִּי לְהַגִּיד לָֽךְ׃ | 19 |
೧೯ಅರಣ್ಯದ ಕಡೆಯಿಂದ ಬಿರುಗಾಳಿಯು ಬೀಸಿ ಮನೆಯ ನಾಲ್ಕು ಮೂಲೆಗಳಿಗೆ ಬಡಿದು, ಮನೆಯು ಯೌವನಸ್ಥರ ಮೇಲೆ ಬಿದ್ದಿತು. ಅವರೆಲ್ಲರು ಸತ್ತು ಹೋದರು. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.
וַיָּקָם אִיּוֹב וַיִּקְרַע אֶת־מְעִלוֹ וַיָּגָז אֶת־רֹאשׁוֹ וַיִּפֹּל אַרְצָה וַיִּשְׁתָּֽחוּ׃ | 20 |
೨೦ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು, ತಲೆ ಬೋಳಿಸಿಕೊಂಡು ನೆಲದ ಮೇಲೆ ಅಡ್ಡಬಿದ್ದು ದೇವರನ್ನು ಆರಾಧಿಸಿ,
וַיֹּאמֶר עָרֹם יצתי יָצָאתִי מִבֶּטֶן אִמִּי וְעָרֹם אָשׁוּב שָׁמָה יְהוָה נָתַן וַיהוָה לָקָח יְהִי שֵׁם יְהוָה מְבֹרָֽךְ׃ | 21 |
೨೧“ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ” ಎಂದು ಹೇಳಿದನು.
בְּכָל־זֹאת לֹא־חָטָא אִיּוֹב וְלֹא־נָתַן תִּפְלָה לֵאלֹהִֽים׃ | 22 |
೨೨ಇದೆಲ್ಲದರಲ್ಲಿಯೂ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪುಹೊರಿಸಲೂ ಇಲ್ಲ.