< איוב 14 >
אָדָם יְלוּד אִשָּׁה קְצַר יָמִים וּֽשְׂבַֽע־רֹֽגֶז׃ | 1 |
೧“ಮಾನವ ಜನ್ಮ ಪಡೆದವನು, ಅಲ್ಪಾಯುಷ್ಯನಾಗಿಯೂ, ಕಳವಳದಿಂದ ತುಂಬಿದವನಾಗಿಯೂ ಇರುವನು.
כְּצִיץ יָצָא וַיִּמָּל וַיִּבְרַח כַּצֵּל וְלֹא יַעֲמֽוֹד׃ | 2 |
೨ಹೂವಿನ ಹಾಗೆ ಅರಳಿ ಬಾಡುವನು, ನೆರಳಿನಂತೆ ನಿಲ್ಲದೆ ಓಡಿಹೋಗುವನು.
אַף־עַל־זֶה פָּקַחְתָּ עֵינֶךָ וְאֹתִי תָבִיא בְמִשְׁפָּט עִמָּֽךְ׃ | 3 |
೩ನೀನು ಇಂಥವನಾದ ನನ್ನ ಮೇಲೆ ಕಣ್ಣಿಟ್ಟು, ನಿನ್ನ ನ್ಯಾಯಸ್ಥಾನಕ್ಕೆ ನನ್ನನ್ನು ಬರಮಾಡುವಿಯಾ?
מִֽי־יִתֵּן טָהוֹר מִטָּמֵא לֹא אֶחָֽד׃ | 4 |
೪ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.
אִם חֲרוּצִים ׀ יָמָיו מִֽסְפַּר־חֳדָשָׁיו אִתָּךְ חקו חֻקָּיו עָשִׂיתָ וְלֹא יַעֲבֽוֹר׃ | 5 |
೫ಮನುಷ್ಯನ ದಿನಗಳು ಇಷ್ಟೇ ಎಂಬುದು ತೀರ್ಮಾನವಾಗಿದೆಯಲ್ಲಾ; ಅವನ ತಿಂಗಳುಗಳ ಲೆಕ್ಕವು ನಿನಗೆ ಗೊತ್ತು; ದಾಟಲಾರದ ಗಡಿಗಳನ್ನು ಅವನಿಗೆ ನೇಮಿಸಿದ್ದಿ.
שְׁעֵה מֵעָלָיו וְיֶחְדָּל עַד־יִרְצֶה כְּשָׂכִיר יוֹמֽוֹ׃ | 6 |
೬ನಿನ್ನ ದೃಷ್ಟಿಯನ್ನು ಅವನ ಕಡೆಯಿಂದ ತಿರುಗಿಸು, ಅವನಿಗೆ ಸ್ವಲ್ಪ ವಿರಾಮವಿರಲಿ, ಕೂಲಿಯವನಿಗಿರುವಷ್ಟು ಸಂತೋಷದಿಂದಾದರೂ ತನ್ನ ದಿನವನ್ನು ಕಳೆಯಲಿ.
כִּי יֵשׁ לָעֵץ תִּקְוָה אִֽם־יִכָּרֵת וְעוֹד יַחֲלִיף וְיֹֽנַקְתּוֹ לֹא תֶחְדָּֽל׃ | 7 |
೭ಕಡಿದ ಮರವೂ, ತಾನು ಮೊಳೆಯುವುದನ್ನು ನಿಲ್ಲಿಸದೆ, ಮತ್ತೆ ಚಿಗುರುವೆನೆಂದು ನಿರೀಕ್ಷಿಸುತ್ತದಲ್ಲವೇ!
אִם־יַזְקִין בָּאָרֶץ שָׁרְשׁוֹ וּבֶעָפָר יָמוּת גִּזְעֽוֹ׃ | 8 |
೮ನೆಲದಲ್ಲಿ ಅದರ ಬೇರು ಹಳೆಯದಾದರೂ, ಮಣ್ಣಿನಲ್ಲಿ ಸತ್ತರೂ,
מֵרֵיחַ מַיִם יַפְרִחַ וְעָשָׂה קָצִיר כְּמוֹ־נָֽטַע׃ | 9 |
೯ಮಳೆ ನೀರಿನ ವಾಸನೆಯಿಂದಲೇ ಅದು ಮೊಳೆತು, ಚಿಗುರಿ ಗಿಡದ ಹಾಗೆ ಕವಲೊಡೆಯುವುದು.
וְגֶבֶר יָמוּת וַֽיֶּחֱלָשׁ וַיִּגְוַע אָדָם וְאַיּֽוֹ׃ | 10 |
೧೦ಮನುಷ್ಯನಾದರೋ ಸತ್ತು ಬೋರಲುಬೀಳುವನು, ಪ್ರಾಣಹೋಗಲು ಅವನ ಅಂತ್ಯವಾಗುತ್ತದೆ.
אָֽזְלוּ־מַיִם מִנִּי־יָם וְנָהָר יֶחֱרַב וְיָבֵֽשׁ׃ | 11 |
೧೧ಸರೋವರದ ನೀರು ಬತ್ತುವಂತೆ, ನದಿಯ ನೀರು ಆವಿಯಾಗಿ ಒಣಗುವ ಹಾಗೆ,
וְאִישׁ שָׁכַב וְֽלֹא־יָקוּם עַד־בִּלְתִּי שָׁמַיִם לֹא יָקִיצוּ וְלֹֽא־יֵעֹרוּ מִשְּׁנָתָֽם׃ | 12 |
೧೨ಮನುಷ್ಯರು ಮಲಗಿಕೊಂಡು ಏಳದೇ ಇರುವರು; ಆಕಾಶವು ಅಳಿದು ಹೋಗುವ ತನಕ ಅವರು ನಿದ್ರೆಯನ್ನು, ತಿಳಿಯುವುದಿಲ್ಲ, ಎಬ್ಬಿಸಲ್ಪಡುವುದಿಲ್ಲ.
מִי יִתֵּן ׀ בִּשְׁאוֹל תַּצְפִּנֵנִי תַּסְתִּירֵנִי עַד־שׁוּב אַפֶּךָ תָּשִׁית לִי חֹק וְתִזְכְּרֵֽנִי׃ (Sheol ) | 13 |
೧೩ನಿನ್ನ ಕೋಪವು ಇಳಿಯುವ ವರೆಗೆ ನನ್ನನ್ನು ಮರೆಮಾಡಿ, ನೀನು ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟು, ನನಗೆ ಅವಧಿಯನ್ನು ಗೊತ್ತುಮಾಡಿ ಕಡೆಯಲ್ಲಿ ನನ್ನನ್ನು ಜ್ಞಾಪಿಸಿಕೊಂಡರೆ ಎಷ್ಟೋ ಒಳ್ಳೇದು! (Sheol )
אִם־יָמוּת גֶּבֶר הֲיִחְיֶה כָּל־יְמֵי צְבָאִי אֲיַחֵל עַד־בּוֹא חֲלִיפָתִֽי׃ | 14 |
೧೪ಒಬ್ಬ ಮನುಷ್ಯನು ಸತ್ತು ಪುನಃ ಬದುಕುವನೇ? ಹಾಗಾಗುವುದಾದರೆ ನನಗೆ ಬಿಡುಗಡೆಯಾಗುವವರೆಗೆ, ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು.
תִּקְרָא וְאָנֹכִי אֶֽעֱנֶךָּ לְֽמַעֲשֵׂה יָדֶיךָ תִכְסֹֽף׃ | 15 |
೧೫ನೀನು ಕರೆದರೆ ಉತ್ತರಕೊಡುವೆನು, ನೀನು ಸೃಷ್ಟಿಸಿದ ನನ್ನ ಮೇಲೆ ನಿನಗೆ ಪ್ರೀತಿ ಹುಟ್ಟೀತು.
כִּֽי־עַתָּה צְעָדַי תִּסְפּוֹר לֹֽא־תִשְׁמוֹר עַל־חַטָּאתִֽי׃ | 16 |
೧೬ಈಗ ನೀನು ನನ್ನ ಹೆಜ್ಜೆಗಳನ್ನು ಲೆಕ್ಕಿಸಿ, ನನ್ನ ಪಾಪದ ಮೇಲೆ ಕಾವಲಾಗಿದ್ದೀಯಲ್ಲಾ!
חָתֻם בִּצְרוֹר פִּשְׁעִי וַתִּטְפֹּל עַל־עֲוֺנִֽי׃ | 17 |
೧೭ನನ್ನ ದ್ರೋಹವನ್ನು ಚೀಲದಲ್ಲಿಟ್ಟು ಮುದ್ರಿಸಿ, ನನ್ನ ದೋಷವನ್ನು ಭದ್ರವಾಗಿ ಕಟ್ಟಿದ್ದೀ.
וְאוּלָם הַר־נוֹפֵל יִבּוֹל וְצוּר יֶעְתַּק מִמְּקֹמֽוֹ׃ | 18 |
೧೮ಆದರೆ ಪರ್ವತವೂ ಬಿದ್ದು ಕರಗಿಹೋಗುವುದು, ಬಂಡೆಯು ತನ್ನ ಸ್ಥಳದಿಂದ ಜರುಗುವುದು,
אֲבָנִים ׀ שָׁחֲקוּ מַיִם תִּשְׁטֹֽף־סְפִיחֶיהָ עֲפַר־אָרֶץ וְתִקְוַת אֱנוֹשׁ הֶאֱבַֽדְתָּ׃ | 19 |
೧೯ನೀರು ಕಲ್ಲುಗಳನ್ನು ಸವೆಯಿಸುವುದು, ಜಲಪ್ರವಾಹಗಳು ಭೂಮಿಯ ಮಣ್ಣನ್ನು ಕೊಚ್ಚಿಕೊಂಡು ಹೋಗುವವು. ಹೀಗೆಯೇ ಮನುಷ್ಯರ ನಿರೀಕ್ಷೆಯನ್ನು ಹಾಳುಮಾಡುವಿ.
תִּתְקְפֵהוּ לָנֶצַח וַֽיַּהֲלֹךְ מְשַׁנֶּה פָנָיו וַֽתְּשַׁלְּחֵֽהוּ׃ | 20 |
೨೦ನೀನು ಅವನಿಗೆ ಶಾಶ್ವತವಾದ ಅಪಜಯವನ್ನುಂಟು ಮಾಡಿದ್ದರಿಂದ ಅವನು ಗತಿಸಿ ಹೋಗುವನು. ನೀನು ಅವನ ಮುಖವನ್ನು ಮಾರ್ಪಡಿಸಿ ಅವನನ್ನು ತೊಲಗಿಸಿಬಿಡುವಿ.
יִכְבְּדוּ בָנָיו וְלֹא יֵדָע וְיִצְעֲרוּ וְֽלֹא־יָבִין לָֽמוֹ׃ | 21 |
೨೧ಅವನ ಮಕ್ಕಳು ಘನತೆಯನ್ನು ಹೊಂದುವುದು ಅವನಿಗೆ ತಿಳಿಯುವುದಿಲ್ಲ. ಅವರು ಅಧೋಗತಿಗೆ ಗುರಿಯಾದರೂ ಅವನಿಗೆ ಗೋಚರವಾಗುವುದಿಲ್ಲ.
אַךְ־בְּשָׂרוֹ עָלָיו יִכְאָב וְנַפְשׁוֹ עָלָיו תֶּאֱבָֽל׃ | 22 |
೨೨ಆದರೂ ಅವನ ದೇಹದ ಕಣಕಣವು ನೋವನ್ನು ಅನುಭವಿಸುವುದು, ಅವನ ಆತ್ಮವು ಪ್ರಲಾಪಿಸುವುದು.”