< איוב 7 >

הֲלֹא־צָבָא לֶאֱנוֹשׁ על־עֲלֵי־אָרֶץ וְכִימֵי שָׂכִיר יָמָֽיו׃ 1
“ಮನುಷ್ಯರಿಗೆ ಭೂಮಿಯಲ್ಲಿ ಕಠಿಣ ದುಡಿತ ಇಲ್ಲವೇ? ಮಾನವನ ದಿನಗಳು ಜೀತದಾಳಿನ ದಿನಗಳ ಹಾಗಲ್ಲವೋ?
כְּעֶבֶד יִשְׁאַף־צֵל וּכְשָׂכִיר יְקַוֶּה פָעֳלֽוֹ׃ 2
ಗುಲಾಮನು ಸಾಯಂಕಾಲದ ನೆರಳನ್ನು ಅಪೇಕ್ಷಿಸುವ ಪ್ರಕಾರವೂ, ನಾನು ಕೂಲಿಯವನು ತನ್ನ ಕೂಲಿಯನ್ನು ಕೋರುವ ಪ್ರಕಾರವೂ ಇದ್ದೇನೆ.
כֵּן הָנְחַלְתִּי לִי יַרְחֵי־שָׁוְא וְלֵילוֹת עָמָל מִנּוּ־לִֽי׃ 3
ನನಗೆ ನಿರರ್ಥಕತೆಯ ತಿಂಗಳುಗಳನ್ನು ನೀಡಲಾಗಿದೆ; ಬೇಸರಿಕೆಯ ರಾತ್ರಿಗಳು ನನಗೆ ನೇಮಕವಾಗಿವೆ.
אִם־שָׁכַבְתִּי וְאָמַרְתִּי מָתַי אָקוּם וּמִדַּד־עָרֶב וְשָׂבַעְתִּי נְדֻדִים עֲדֵי־נָֽשֶׁף׃ 4
ಮಲಗುವ ವೇಳೆಯಲ್ಲಿ, ‘ಯಾವಾಗ ಏಳುವೆನೋ?’ ಅಂದುಕೊಳ್ಳುವೆನು, ರಾತ್ರಿ ಬೆಳೆಯುತ್ತಾ ಹೋಗುತ್ತದೆ; ಉದಯದವರೆಗೂ ಹೊರಳಿ ಹೊರಳಿ ಸಾಕಾಗುತ್ತದೆ.
לָבַשׁ בְּשָׂרִי רִמָּה וגיש וְגוּשׁ עָפָר עוֹרִי רָגַע וַיִּמָּאֵֽס׃ 5
ನನ್ನ ದೇಹವು ಹುಳಹಕ್ಕಳೆಗಳನ್ನೂ ಧರಿಸಿಕೊಂಡಿದೆ; ನನ್ನ ಚರ್ಮವು ಕಜ್ಜಿಯಿಂದ ಬಿರಿದು ಹೋಗಿದೆ.
יָמַי קַלּוּ מִנִּי־אָרֶג וַיִּכְלוּ בְּאֶפֶס תִּקְוָֽה׃ 6
“ನನ್ನ ದಿನಗಳು ಮಗ್ಗದ ಲಾಳಿಗಿಂತ ತ್ವರೆಯಾಗಿವೆ; ದಿನಗಳು ನಿರೀಕ್ಷೆ ಇಲ್ಲದೆ ಮುಗಿಯುತ್ತವೆ.
זְכֹר כִּי־רוּחַ חַיָּי לֹא־תָשׁוּב עֵינִי לִרְאוֹת טֽוֹב׃ 7
ಓ ದೇವರೇ, ನನ್ನ ಜೀವವು ಕೇವಲ ಉಸಿರೆಂದು ನೆನಪುಮಾಡಿಕೊಳ್ಳಿರಿ. ನನ್ನ ಕಣ್ಣು ತಿರುಗಿ ಸಂತೋಷವನ್ನು ಕಾಣುವುದಿಲ್ಲ.
לֹֽא־תְשׁוּרֵנִי עֵין רֹאִי עֵינֶיךָ בִּי וְאֵינֶֽנִּי׃ 8
ನನ್ನನ್ನು ನೋಡುವವನ ಕಣ್ಣು, ಇನ್ನು ಮೇಲೆ ನನ್ನನ್ನು ನೋಡದು; ನೀವು ನನ್ನನ್ನು ನೋಡಿದರೂ, ನಾನು ಬದುಕಿರುವುದಿಲ್ಲ.
כָּלָה עָנָן וַיֵּלַךְ כֵּן יוֹרֵד שְׁאוֹל לֹא יַעֲלֽ͏ֶה׃ (Sheol h7585) 9
ಮೋಡವು ಕರಗಿ ಹೋಗುವ ಹಾಗೆಯೇ, ಪಾತಾಳಕ್ಕೆ ಇಳಿದವನು ಹಿಂತಿರುಗಿ ಬರಲಾರನು. (Sheol h7585)
לֹא־יָשׁוּב עוֹד לְבֵיתוֹ וְלֹא־יַכִּירֶנּוּ עוֹד מְקֹמֽוֹ׃ 10
ಇನ್ನು ಅವನು ತನ್ನ ಮನೆಗೆ ತಿರುಗಿಕೊಳ್ಳುವುದಿಲ್ಲ; ಅವನ ಸ್ಥಳವು ಇನ್ನು ಅವನ ಗುರುತನ್ನು ಅರಿಯದು.
גַּם־אֲנִי לֹא אֶחֱשָׂךְ פִּי אֲ‍ֽדַבְּרָה בְּצַר רוּחִי אָשִׂיחָה בְּמַר נַפְשִֽׁי׃ 11
“ಆದ್ದರಿಂದ ನಾನು ನನ್ನ ಬಾಯಿ ಮುಚ್ಚುವುದಿಲ್ಲ; ಆತ್ಮವೇದನೆಯಿಂದ ಮಾತಾಡುವೆನು, ನನ್ನ ಆತ್ಮದ ಕಹಿಯಲ್ಲಿ ನಾನು ವಾದಿಸುವೆನು.
הֲ‍ֽיָם־אָנִי אִם־תַּנִּין כִּֽי־תָשִׂים עָלַי מִשְׁמָֽר׃ 12
ನೀವು ನನಗೆ ಕಾವಲಿಡುವುದಕ್ಕೆ ನಾನೇನು ಸಮುದ್ರವೋ? ಇಲ್ಲವೆ ತಿಮಿಂಗಿಲವೋ?
כִּֽי־אָמַרְתִּי תְּנַחֲמֵנִי עַרְשִׂי יִשָּׂא בְשִׂיחִי מִשְׁכָּבִֽי׃ 13
ನನ್ನ ಹಾಸಿಗೆಯು ನನ್ನನ್ನು ಸಂತೈಸುವುದು; ನನ್ನ ಮಂಚವು ನನ್ನ ಚಿಂತೆಯನ್ನು ಶಮನ ಮಾಡಲಿ ಎಂದುಕೊಳ್ಳುವಾಗ,
וְחִתַּתַּנִי בַחֲלֹמוֹת וּֽמֵחֶזְיֹנוֹת תְּבַעֲתַֽנִּי׃ 14
ನೀವು ಸ್ವಪ್ನಗಳಿಂದ ನನ್ನನ್ನು ಹೆದರಿಸುತ್ತೀರಿ; ದರ್ಶನಗಳಿಂದ ನನ್ನನ್ನು ಭಯಪಡಿಸುತ್ತೀರಿ.
וַתִּבְחַר מַחֲנָק נַפְשִׁי מָוֶת מֵֽעַצְמוֹתָֽי׃ 15
ಆದ್ದರಿಂದ ನನ್ನ ದೇಹದಲ್ಲಿ ಸಂಕಟಪಡುವುದಕ್ಕಿಂತಲೂ ಉಸಿರುಕಟ್ಟಿ, ನಾನು ನನ್ನ ಪ್ರಾಣಬಿಡುವುದು ಲೇಸು.
מָאַסְתִּי לֹא־לְעֹלָם אֶֽחְיֶה חֲדַל מִמֶּנִּי כִּי־הֶבֶל יָמָֽי׃ 16
ನಾನು ನನ್ನ ಜೀವನವನ್ನು ದ್ವೇಷಿಸುತ್ತೇನೆ; ನಿರಂತರ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟುಬಿಡಿರಿ; ನನ್ನ ಬಾಳಿನ ದಿನಗಳಿಗೆ ಅರ್ಥವಿಲ್ಲ.
מָֽה־אֱנוֹשׁ כִּי תְגַדְּלֶנּוּ וְכִי־תָשִׁית אֵלָיו לִבֶּֽךָ׃ 17
“ದೇವರೇ, ಮಾನವನು ಎಷ್ಟರವನು? ನೀವು ಮಾನವನಿಗೆ ಬಹು ಗೌರವ ಕೊಡುತ್ತೀರಿ, ಅವನ ಕಡೆಗೆ ಗಮನಹರಿಸುತ್ತೀರಿ.
וַתִּפְקְדֶנּוּ לִבְקָרִים לִרְגָעִים תִּבְחָנֶֽנּוּ׃ 18
ಮನುಷ್ಯನನ್ನು ಪ್ರತಿ ಉದಯದಲ್ಲಿ ವಿಚಾರಿಸುತ್ತೀರಿ, ನೀವು ಕ್ಷಣಕ್ಷಣಕ್ಕೆ ಅವನನ್ನು ಪರೀಕ್ಷಿಸುವುದೇಕೆ?
כַּמָּה לֹא־תִשְׁעֶה מִמֶּנִּי לֹֽא־תַרְפֵּנִי עַד־בִּלְעִי רֻקִּֽי׃ 19
ನೀವು ನನ್ನ ಕಡೆಯಿಂದ ದೃಷ್ಟಿಯನ್ನು ತೊಲಗಿಸುವುದಿಲ್ಲವೋ? ನಾನು ಒಂದು ಕ್ಷಣ ಉಗುಳು ನುಂಗುವುದಕ್ಕೂ ನನ್ನನ್ನು ಬಿಡುವುದಿಲ್ಲ?
חָטָאתִי מָה אֶפְעַל ׀ לָךְ נֹצֵר הָאָדָם לָמָה שַׂמְתַּנִי לְמִפְגָּע לָךְ וָאֶהְיֶה עָלַי לְמַשָּֽׂא׃ 20
ಮನುಷ್ಯರನ್ನು ಕಾಯುವವರೇ, ನಾನು ಪಾಪಮಾಡಿದ್ದರೆ, ನಾವು ಮಾಡುವ ಪ್ರತಿಯೊಂದನ್ನೂ ನೋಡುವವರೇ, ನಾನು ನಿಮಗೆ ಏನು ಮಾಡಿದೆ? ನಾನು ನಿಮಗೆ ಭಾರವಾಗಿದ್ದೇನೋ? ನನ್ನನ್ನು ನಿಮ್ಮ ಗುರಿಯಾಗಿ ಇಟ್ಟುಕೊಳ್ಳುವುದು ಏಕೆ?
וּמֶה ׀ לֹא־תִשָּׂא פִשְׁעִי וְתַעֲבִיר אֶת־עֲוֺנִי כִּֽי־עַתָּה לֶעָפָר אֶשְׁכָּב וְשִׁחֲרְתַּנִי וְאֵינֶֽנִּי׃ 21
ನೀವು ನನ್ನ ಅಪರಾಧವನ್ನು ಪರಿಹರಿಸಬಾರದೇ? ನನ್ನ ಪಾಪವನ್ನು ಕ್ಷಮಿಸಬಾರದೇ? ನಾನು ಬೇಗ ಮಣ್ಣಿಗೆ ಸೇರಿಬಿಡುವೆನು; ನೀವು ನನ್ನನ್ನು ಹುಡುಕಿದರೆ ನಾನು ಇರುವುದಿಲ್ಲ.”

< איוב 7 >