< יהושע 3 >
וַיַּשְׁכֵּם יְהוֹשֻׁעַ בַּבֹּקֶר וַיִּסְעוּ מֵֽהַשִׁטִּים וַיָּבֹאוּ עַד־הַיַּרְדֵּן הוּא וְכָל־בְּנֵי יִשְׂרָאֵל וַיָּלִנוּ שָׁם טֶרֶם יַעֲבֹֽרוּ׃ | 1 |
೧ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು; ಅವನೊಂದಿಗೆ ಇಸ್ರಾಯೇಲ್ಯರೆಲ್ಲರೂ ಶಿಟ್ಟೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು.
וַיְהִי מִקְצֵה שְׁלֹשֶׁת יָמִים וַיַּעַבְרוּ הַשֹּׁטְרִים בְּקֶרֶב הַֽמַּחֲנֶֽה׃ | 2 |
೨ಮೂರು ದಿನಗಳಾದ ಮೇಲೆ ಜನಾಧಿಪತಿಗಳು ಪಾಳೆಯದ ಎಲ್ಲಾ ಕಡೆಗೂ ಹೋಗಿ ಜನರಿಗೆ
וַיְצַוּוּ אֶת־הָעָם לֵאמֹר כִּרְאֽוֹתְכֶם אֵת אֲרוֹן בְּרִית־יְהוָה אֱלֹהֵיכֶם וְהַכֹּֽהֲנִים הַלְוִיִּם נֹשְׂאִים אֹתוֹ וְאַתֶּם תִּסְעוּ מִמְּקוֹמְכֶם וַהֲלַכְתֶּם אַחֲרָֽיו׃ | 3 |
೩“ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತಿರುವುದನ್ನು ಕಂಡ ಕೂಡಲೆ ನೀವು ನಿಮ್ಮ ಸ್ಥಳಗಳನ್ನು ಬಿಟ್ಟು ಅದನ್ನು ಹಿಂಬಾಲಿಸಿರಿ.
אַךְ ׀ רָחוֹק יִהְיֶה בֵּֽינֵיכֶם ובינו וּבֵינָיו כְּאַלְפַּיִם אַמָּה בַּמִּדָּה אַֽל־תִּקְרְבוּ אֵלָיו לְמַעַן אֲשֶׁר־תֵּֽדְעוּ אֶת־הַדֶּרֶךְ אֲשֶׁר תֵּֽלְכוּ־בָהּ כִּי לֹא עֲבַרְתֶּם בַּדֶּרֶךְ מִתְּמוֹל שִׁלְשֽׁוֹם׃ | 4 |
೪ಆದರೆ ನಿಮಗೂ ಮಂಜೂಷಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರವಿರಬೇಕು; ಹತ್ತಿರ ಹೋಗಬಾರದು. ಹೀಗೆ ನೀವು ಹೋಗಬೇಕಾದ ಮಾರ್ಗವು ನಿಮಗೆ ಗೊತ್ತಾಗುವುದು; ಏಕೆಂದರೆ ನೀವು ಆ ಮಾರ್ಗವಾಗಿ ಇಲ್ಲಿಯವರೆಗೆ ಪ್ರಯಾಣ ಮಾಡಿರುವುದಿಲ್ಲ” ಅಂದರು.
וַיֹּאמֶר יְהוֹשֻׁעַ אֶל־הָעָם הִתְקַדָּשׁוּ כִּי מָחָר יַעֲשֶׂה יְהוָה בְּקִרְבְּכֶם נִפְלָאֽוֹת׃ | 5 |
೫ಇದಲ್ಲದೆ ಯೆಹೋಶುವನು ಜನರಿಗೆ “ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ; ಯೆಹೋವನು ನಾಳೆ ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ನಡಿಸುವನು” ಎಂದು ಹೇಳಿದನು.
וַיֹּאמֶר יְהוֹשֻׁעַ אֶל־הַכֹּהֲנִים לֵאמֹר שְׂאוּ אֶת־אֲרוֹן הַבְּרִית וְעִבְרוּ לִפְנֵי הָעָם וַיִּשְׂאוּ אֶת־אֲרוֹן הַבְּרִית וַיֵּלְכוּ לִפְנֵי הָעָֽם׃ | 6 |
೬ನಂತರ ಯೆಹೋಶುವನು ಯಾಜಕರಿಗೆ “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ಹೊಳೆ ದಾಟಿರಿ” ಎಂದು ಆಜ್ಞಾಪಿಸಲು ಅವರು ಆ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ಹೋದರು.
וַיֹּאמֶר יְהוָה אֶל־יְהוֹשֻׁעַ הַיּוֹם הַזֶּה אָחֵל גַּדֶּלְךָ בְּעֵינֵי כָּל־יִשְׂרָאֵל אֲשֶׁר יֵֽדְעוּן כִּי כַּאֲשֶׁר הָיִיתִי עִם־מֹשֶׁה אֶהְיֶה עִמָּֽךְ׃ | 7 |
೭ಆಗ ಯೆಹೋವನು ಯೆಹೋಶುವನಿಗೆ “ನಾನು ಈ ದಿನ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂದು ಅವರಿಗೆ ಗೊತ್ತಾಗುವುದು.
וְאַתָּה תְּצַוֶּה אֶת־הַכֹּהֲנִים נֹשְׂאֵי אֲרֽוֹן־הַבְּרִית לֵאמֹר כְּבֹאֲכֶם עַד־קְצֵה מֵי הַיַּרְדֵּן בַּיַּרְדֵּן תַּעֲמֹֽדוּ׃ | 8 |
೮ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ನದಿಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು” ಎಂದು ಹೇಳಿದನು.
וַיֹּאמֶר יְהוֹשֻׁעַ אֶל־בְּנֵי יִשְׂרָאֵל גֹּשׁוּ הֵנָּה וְשִׁמְעוּ אֶת־דִּבְרֵי יְהוָה אֱלֹֽהֵיכֶֽם׃ | 9 |
೯ಆಗ ಯೆಹೋಶುವನು ಇಸ್ರಾಯೇಲ್ಯರಿಗೆ “ಇಲ್ಲಿಗೆ ಬಂದು ನಿಮ್ಮ ದೇವರಾದ ಯೆಹೋವನ ಮಾತುಗಳನ್ನು ಕೇಳಿರಿ” ಎಂದು ಹೇಳಿ,
וַיֹּאמֶר יְהוֹשֻׁעַ בְּזֹאת תֵּֽדְעוּן כִּי אֵל חַי בְּקִרְבְּכֶם וְהוֹרֵשׁ יוֹרִישׁ מִפְּנֵיכֶם אֶת־הַכְּנַעֲנִי וְאֶת־הַחִתִּי וְאֶת־הַחִוִּי וְאֶת־הַפְּרִזִּי וְאֶת־הַגִּרְגָּשִׁי וְהָאֱמֹרִי וְהַיְבוּסִֽי׃ | 10 |
೧೦“ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು.
הִנֵּה אֲרוֹן הַבְּרִית אֲדוֹן כָּל־הָאָרֶץ עֹבֵר לִפְנֵיכֶם בַּיַּרְדֵּֽן׃ | 11 |
೧೧ಹೇಗೆಂದರೆ ಸರ್ವಲೋಕದ ಒಡೆಯನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದಾಗಿ ಹೋಗಿ ಯೊರ್ದನಿನಲ್ಲಿ ಇಳಿಯವುದು.
וְעַתָּה קְחוּ לָכֶם שְׁנֵי עָשָׂר אִישׁ מִשִּׁבְטֵי יִשְׂרָאֵל אִישׁ־אֶחָד אִישׁ־אֶחָד לַשָּֽׁבֶט׃ | 12 |
೧೨ಆಗ ನೀನು ಇಸ್ರಾಯೇಲರ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಳ್ಳಬೇಕು.
וְהָיָה כְּנוֹחַ כַּפּוֹת רַגְלֵי הַכֹּהֲנִים נֹשְׂאֵי אֲרוֹן יְהוָה אֲדוֹן כָּל־הָאָרֶץ בְּמֵי הַיַּרְדֵּן מֵי הַיַּרְדֵּן יִכָּרֵתוּן הַמַּיִם הַיֹּרְדִים מִלְמָעְלָה וְיַעַמְדוּ נֵד אֶחָֽד׃ | 13 |
೧೩ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ ಮೇಲಿನಿಂದ ಹರಿದು ಬರುವ ನೀರು ಮುಂದೆ ಸಾಗದೆ, ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು” ಎಂದು ತಿಳಿಸಿದನು.
וַיְהִי בִּנְסֹעַ הָעָם מֵאָהֳלֵיהֶם לַעֲבֹר אֶת־הַיַּרְדֵּן וְהַכֹּהֲנִים נֹֽשְׂאֵי הָאָרוֹן הַבְּרִית לִפְנֵי הָעָֽם׃ | 14 |
೧೪ಜನರು ಯೊರ್ದನ್ ನದಿಯನ್ನು ದಾಟುವುದಕ್ಕೋಸ್ಕರ ತಮ್ಮ ಡೇರೆಗಳನ್ನು ಬಿಚ್ಚಿಕೊಂಡು ಹೊರಟರು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಅವರ ಮುಂದೆ ಇದ್ದರು.
וּכְבוֹא נֹשְׂאֵי הָֽאָרוֹן עַד־הַיַּרְדֵּן וְרַגְלֵי הַכֹּֽהֲנִים נֹשְׂאֵי הָֽאָרוֹן נִטְבְּלוּ בִּקְצֵה הַמָּיִם וְהַיַּרְדֵּן מָלֵא עַל־כָּל־גְּדוֹתָיו כֹּל יְמֵי קָצִֽיר׃ | 15 |
೧೫ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು, ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡಮೀರಿ ಹರಿಯುತ್ತಿದ್ದ ಯೊರ್ದನ್ ನದಿಯ ನೀರು ನಿಂತುಹೋಯಿತು.
וַיַּעַמְדוּ הַמַּיִם הַיֹּרְדִים מִלְמַעְלָה קָמוּ נֵד־אֶחָד הַרְחֵק מְאֹד באדם מֵֽאָדָם הָעִיר אֲשֶׁר מִצַּד צָֽרְתָן וְהַיֹּרְדִים עַל יָם הָעֲרָבָה יָם־הַמֶּלַח תַּמּוּ נִכְרָתוּ וְהָעָם עָבְרוּ נֶגֶד יְרִיחֽוֹ׃ | 16 |
೧೬ಮೇಲಿನಿಂದ ಹರಿದು ಬರುತ್ತಿದ್ದ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದು ಹೋಯಿತು ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.
וַיַּעַמְדוּ הַכֹּהֲנִים נֹשְׂאֵי הָאָרוֹן בְּרִית־יְהוָה בֶּחֽ͏ָרָבָה בְּתוֹךְ הַיַּרְדֵּן הָכֵן וְכָל־יִשְׂרָאֵל עֹֽבְרִים בֶּחָרָבָה עַד אֲשֶׁר־תַּמּוּ כָּל־הַגּוֹי לַעֲבֹר אֶת־הַיַּרְדֵּֽן׃ | 17 |
೧೭ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲರೂ ಯೊರ್ದನಿನ ಆಚೆಗೆ ತಲುಪಿದರು.