< שופטים 18 >

בַּיָּמִים הָהֵם אֵין מֶלֶךְ בְּיִשְׂרָאֵל וּבַיָּמִים הָהֵם שֵׁבֶט הַדָּנִי מְבַקֶּשׁ־לוֹ נַֽחֲלָה לָשֶׁבֶת כִּי לֹֽא־נָפְלָה לּוֹ עַד־הַיּוֹם הַהוּא בְּתוֹךְ־שִׁבְטֵי יִשְׂרָאֵל בְּנַחֲלָֽה׃ 1
ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ. ದಾನ್ ಕುಲದವರಿಗೆ ಆ ವರೆಗೂ ಇಸ್ರಾಯೇಲರಲ್ಲಿ ಸ್ವತ್ತು ದೊರಕಿರಲಿಲ್ಲ, ಅವರು ತಮಗೋಸ್ಕರ ವಾಸಸ್ಥಳವನ್ನು ಹುಡುಕುತ್ತಿದ್ದರು.
וַיִּשְׁלְחוּ בְנֵי־דָן ׀ מִֽמִּשְׁפַּחְתָּם חֲמִשָּׁה אֲנָשִׁים מִקְצוֹתָם אֲנָשִׁים בְּנֵי־חַיִל מִצָּרְעָה וּמֵֽאֶשְׁתָּאֹל לְרַגֵּל אֶת־הָאָרֶץ וּלְחָקְרָהּ וַיֹּאמְרוּ אֲלֵהֶם לְכוּ חִקְרוּ אֶת־הָאָרֶץ וַיָּבֹאוּ הַר־אֶפְרַיִם עַד־בֵּית מִיכָה וַיָּלִינוּ שָֽׁם׃ 2
ಅವರು ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದು ಮಂದಿ ಪರಾಕ್ರಮಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ, “ನೀವು ಹೋಗಿ ಲಯಿಷ್ ದೇಶವನ್ನು ಸಂಚರಿಸಿ ನೋಡಿರಿ” ಎಂದು ಆಜ್ಞಾಪಿಸಿ ಕಳುಹಿಸಿದರು. ಇವರು ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು.
הֵמָּה עִם־בֵּית מִיכָה וְהֵמָּה הִכִּירוּ אֶת־קוֹל הַנַּעַר הַלֵּוִי וַיָּסוּרוּ שָׁם וַיֹּאמְרוּ לוֹ מִֽי־הֱבִיאֲךָ הֲלֹם וּמָֽה־אַתָּה עֹשֶׂה בָּזֶה וּמַה־לְּךָ פֹֽה׃ 3
ಇವರು ಮೀಕನ ಮನೆಯ ಹತ್ತಿರದಲ್ಲಿ ಆ ಯೌವನಸ್ಥನಾದ ಲೇವಿಯನು ಮಾತನಾಡುವುದನ್ನು ಕೇಳಿ, ಗುರುತುಹಿಡಿದು, ಅವನ ಬಳಿಗೆ ಹೋಗಿ, “ನಿನ್ನನ್ನು ಇಲ್ಲಿಗೆ ಕರೆತಂದವರಾರು? ಇಲ್ಲಿ ಏನು ಕೆಲಸ ಮಾಡುತ್ತೀ? ಏನು ಸಿಕ್ಕುತ್ತದೆ” ಎಂದು ಅವನನ್ನು ಕೇಳಲು ಅವನು,
וַיֹּאמֶר אֲלֵהֶם כָּזֹה וְכָזֶה עָשָׂה לִי מִיכָה וַיִּשְׂכְּרֵנִי וָאֱהִי־לוֹ לְכֹהֵֽן׃ 4
ಮೀಕನು ತನಗೆ ಇಂಥಿಂಥವುಗಳನ್ನು ಸಂಬಳವಾಗಿ ಕೊಡುತ್ತಾನೆಂದೂ, ತಾನು ಅವನ ಯಾಜಕನಾಗಿದ್ದೇನೆಂದೂ ಹೇಳಿದನು.
וַיֹּאמְרוּ לוֹ שְׁאַל־נָא בֵאלֹהִים וְנֵדְעָה הֲתַצְלִיחַ דַּרְכֵּנוּ אֲשֶׁר אֲנַחְנוּ הֹלְכִים עָלֶֽיהָ׃ 5
ಆಗ ಅವರು ಅವನಿಗೆ, “ದಯವಿಟ್ಟು ನಮ್ಮ ಪ್ರಯಾಣವು ಸಫಲವಾಗುವುದೋ ಇಲ್ಲವೋ ಎಂಬುದನ್ನು ದೇವರ ಸನ್ನಿಧಿಯಲ್ಲಿ ವಿಚಾರಿಸು” ಎಂದು ಬೇಡಿಕೊಳ್ಳಲು
וַיֹּאמֶר לָהֶם הַכֹּהֵן לְכוּ לְשָׁלוֹם נֹכַח יְהוָה דַּרְכְּכֶם אֲשֶׁר תֵּֽלְכוּ־בָֽהּ׃ 6
ಅವನು, “ಸಮಾಧಾನದಿಂದ ಹೋಗಿರಿ; ಯೆಹೋವನು ನಿಮ್ಮ ಪ್ರಯಾಣವನ್ನು ಕಟಾಕ್ಷಿಸುವನು” ಅಂದನು.
וַיֵּלְכוּ חֲמֵשֶׁת הָאֲנָשִׁים וַיָּבֹאוּ לָיְשָׁה וַיִּרְאוּ אֶת־הָעָם אֲשֶׁר־בְּקִרְבָּהּ יוֹשֶֽׁבֶת־לָבֶטַח כְּמִשְׁפַּט צִדֹנִים שֹׁקֵט ׀ וּבֹטֵחַ וְאֵין־מַכְלִים דָּבָר בָּאָרֶץ יוֹרֵשׁ עֶצֶר וּרְחֹקִים הֵמָּה מִצִּדֹנִים וְדָבָר אֵין־לָהֶם עִם־אָדָֽם׃ 7
ಆ ಐದು ಮಂದಿ ಹೊರಟು ಲಯಿಷಿಗೆ ಬಂದು, ಅಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖ ಸಮಾಧಾನಗಳಿಂದ ಜೀವಿಸುತ್ತಾರೆ; ಅವರನ್ನು ಅಡಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಒಡನಾಟವಿಲ್ಲದವರು ಎಂಬುದನ್ನು ತಿಳಿದುಕೊಂಡು
וַיָּבֹאוּ אֶל־אֲחֵיהֶם צָרְעָה וְאֶשְׁתָּאֹל וַיֹּאמְרוּ לָהֶם אֲחֵיהֶם מָה אַתֶּֽם׃ 8
ಹಿಂದಿರುಗಿ ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಲ್ಲಿರುವ ತಮ್ಮ ಬಂಧುಗಳ ಬಳಿಗೆ ಬಂದರು. ಅವರ ಬಂಧುಗಳು, “ನೀವು ಯಾವ ವರ್ತಮಾನ ತಂದಿದ್ದೀರಿ” ಎಂದು ಅವರನ್ನು ಕೇಳಲು
וַיֹּאמְרוּ קוּמָה וְנַעֲלֶה עֲלֵיהֶם כִּי רָאִינוּ אֶת־הָאָרֶץ וְהִנֵּה טוֹבָה מְאֹד וְאַתֶּם מַחְשִׁים אַל־תֵּעָצְלוּ לָלֶכֶת לָבֹא לָרֶשֶׁת אֶת־הָאָֽרֶץ׃ 9
ಅವರು, “ಏಳಿರಿ, ಅವರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ. ನಾವು ಆ ದೇಶವನ್ನು ನೋಡಿದೆವು; ಅದು ಬಹು ಉತ್ತಮದೇಶ. ನೀವು ಸುಮ್ಮನೆ ಕುಳಿತುಕೊಳ್ಳುವುದೇಕೆ? ತಡಮಾಡದೆ ಹೊರಡಿರಿ; ಆ ದೇಶವನ್ನು ಸ್ವಾಧೀನಪಡಿಸಿಕೊಳ್ಳೋಣ.
כְּבֹאֲכֶם תָּבֹאוּ ׀ אֶל־עַם בֹּטֵחַ וְהָאָרֶץ רַחֲבַת יָדַיִם כִּֽי־נְתָנָהּ אֱלֹהִים בְּיֶדְכֶם מָקוֹם אֲשֶׁר אֵֽין־שָׁם מַחְסוֹר כָּל־דָּבָר אֲשֶׁר בָּאָֽרֶץ׃ 10
೧೦ನೀವು ಅಲ್ಲಿಗೆ ಹೋಗುವುದಾದರೆ ಅಲ್ಲಿನ ಜನರು ನಿರ್ಭಯದಿಂದ ಜೀವಿಸುವವರೆಂದೂ, ಅವರ ದೇಶವು ಬಹು ವಿಸ್ತಾರವಾಗಿದೆ ಎಂದೂ ತಿಳಿದುಕೊಳ್ಳುವಿರಿ. ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ; ಅದರಲ್ಲಿ ದೊರಕದಿರುವ ಪದಾರ್ಥಗಳು ಲೋಕದಲ್ಲಿ ಸಿಕ್ಕುವುದಿಲ್ಲ” ಅಂದರು.
וַיִּסְעוּ מִשָּׁם מִמִּשְׁפַּחַת הַדָּנִי מִצָּרְעָה וּמֵאֶשְׁתָּאֹל שֵֽׁשׁ־מֵאוֹת אִישׁ חָגוּר כְּלֵי מִלְחָמָֽה׃ 11
೧೧ಆಗ ಚೊರ್ಗಾ ಎಷ್ಟಾವೋಲ್ ಊರುಗಳಿಂದ ಆರುನೂರು ಮಂದಿ ದಾನ್ ಕುಲದವರು ಯುದ್ಧ ಸನ್ನದ್ಧರಾಗಿ ಹೊರಟು,
וַֽיַּעֲלוּ וַֽיַּחֲנוּ בְּקִרְיַת יְעָרִים בִּֽיהוּדָה עַל־כֵּן קָרְאוּ לַמָּקוֹם הַהוּא מַחֲנֵה־דָן עַד הַיּוֹם הַזֶּה הִנֵּה אַחֲרֵי קִרְיַת יְעָרִֽים׃ 12
೧೨ಗಟ್ಟಾಹತ್ತಿ ಯೆಹೂದದ ಕಿರ್ಯತ್ಯಾರೀಮಿನ ಬಳಿಯಲ್ಲಿ ಇಳಿದುಕೊಂಡರು. ಆದುದರಿಂದ ಆ ಸ್ಥಳಕ್ಕೆ ಇಂದಿನವರೆಗೂ ದಾನ್ಯರ ಪಾಳೆಯವೆಂಬ ಹೆಸರಿದೆ; ಅದು ಕಿರ್ಯತ್ಯಾರೀಮಿನ ಪಶ್ಚಿಮದಲ್ಲಿರುತ್ತದೆ.
וַיַּעַבְרוּ מִשָּׁם הַר־אֶפְרָיִם וַיָּבֹאוּ עַד־בֵּית מִיכָֽה׃ 13
೧೩ಅವರು ಅಲ್ಲಿಂದ ಮುಂದೆ ಪ್ರಯಾಣಮಾಡಿ ಎಫ್ರಾಯೀಮ್ ಪರ್ವತಪ್ರದೇಶದಲ್ಲಿದ್ದ ಮೀಕನ ಮನೆಯ ಹತ್ತಿರ ಬಂದರು.
וַֽיַּעֲנוּ חֲמֵשֶׁת הָאֲנָשִׁים הַהֹלְכִים לְרַגֵּל אֶת־הָאָרֶץ לַיִשׁ וַיֹּֽאמְרוּ אֶל־אֲחֵיהֶם הַיְדַעְתֶּם כִּי יֵשׁ בַּבָּתִּים הָאֵלֶּה אֵפוֹד וּתְרָפִים וּפֶסֶל וּמַסֵּכָה וְעַתָּה דְּעוּ מַֽה־תַּעֲשֽׂוּ׃ 14
೧೪ಆಗ ಲಯಿಷ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಐದು ಮಂದಿ ತಮ್ಮ ಬಂಧುಗಳಿಗೆ, “ಈ ಗ್ರಾಮದಲ್ಲಿ ಒಂದು ಏಫೋದೂ, ದೇವತಾಪ್ರತಿಮೆಗಳೂ, ಕೆತ್ತನೆಯ ಮತ್ತು ಎರಕದ ವಿಗ್ರಹಗಳೂ ಇರುತ್ತವೆಂಬುದು ನಿಮಗೆ ಗೊತ್ತುಂಟೋ?
וַיָּסוּרוּ שָׁמָּה וַיָּבֹאוּ אֶל־בֵּֽית־הַנַּעַר הַלֵּוִי בֵּית מִיכָה וַיִּשְׁאֲלוּ־לוֹ לְשָׁלֽוֹם׃ 15
೧೫ಈ ವಿಷಯದಲ್ಲಿ ಏನು ಮಾಡಬೇಕೆಂಬುದನ್ನು ಆಲೋಚಿಸಿರಿ” ಎಂದು ಹೇಳಿ ತಾವು ಅಲ್ಲಿಂದ ಮೀಕನ ಮನೆಯಲ್ಲಿದ್ದ ಆ ಯೌವನಸ್ಥನಾದ ಲೇವಿಯನ ಬಳಿಗೆ ಬಂದು ಅವನ ಕ್ಷೇಮಸಮಾಚಾರವನ್ನು ವಿಚಾರಿಸ ತೊಡಗಿದರು.
וְשֵׁשׁ־מֵאוֹת אִישׁ חֲגוּרִים כְּלֵי מִלְחַמְתָּם נִצָּבִים פֶּתַח הַשָּׁעַר אֲשֶׁר מִבְּנֵי־דָֽן׃ 16
೧೬ಇಷ್ಟರಲ್ಲಿ ಯುದ್ಧಸನ್ನದ್ಧರಾದ ಆರುನೂರು ಮಂದಿ ದಾನ್ಯರು ಬಂದು ಬಾಗಿಲಲ್ಲಿ ನಿಂತರು.
וֽ͏ַיַּעֲלוּ חֲמֵשֶׁת הָאֲנָשִׁים הַהֹלְכִים לְרַגֵּל אֶת־הָאָרֶץ בָּאוּ שָׁמָּה לָקְחוּ אֶת־הַפֶּסֶל וְאֶת־הָאֵפוֹד וְאֶת־הַתְּרָפִים וְאֶת־הַמַּסֵּכָה וְהַכֹּהֵן נִצָּב פֶּתַח הַשַּׁעַר וְשֵׁשׁ־מֵאוֹת הָאִישׁ הֶחָגוּר כְּלֵי הַמִּלְחָמָֽה׃ 17
೧೭ಯಾಜಕನೂ ಬಂದು ಇವರೊಡನೆ ಬಾಗಿಲಲ್ಲಿ ನಿಂತಿದ್ದಾಗ, ಆ ಐದು ಮಂದಿ ಮನೆಯನ್ನು ಹೊಕ್ಕು, ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ, ಏಫೋದನ್ನೂ, ದೇವತಾಪ್ರತಿಮೆಗಳನ್ನೂ ತೆಗೆದುಕೊಂಡರು.
וְאֵלֶּה בָּאוּ בֵּית מִיכָה וַיִּקְחוּ אֶת־פֶּסֶל הָאֵפוֹד וְאֶת־הַתְּרָפִים וְאֶת־הַמַּסֵּכָה וַיֹּאמֶר אֲלֵיהֶם הַכֹּהֵן מָה אַתֶּם עֹשִֽׂים׃ 18
೧೮ಅವರು ಮೀಕನ ಮನೆಯನ್ನು ಹೊಕ್ಕು ಅವುಗಳನ್ನು ತೆಗೆದುಕೊಂಡು ಬರುವಾಗ ಯಾಜಕನು ಅದನ್ನು ಕಂಡು ಅವರಿಗೆ, “ನೀವು ಮಾಡಿದ್ದೇನು” ಅಂದನು.
וַיֹּאמְרוּ לוֹ הַחֲרֵשׁ שִֽׂים־יָדְךָ עַל־פִּיךָ וְלֵךְ עִמָּנוּ וֶֽהְיֵה־לָנוּ לְאָב וּלְכֹהֵן הֲטוֹב ׀ הֱיוֹתְךָ כֹהֵן לְבֵית אִישׁ אֶחָד אוֹ הֱיוֹתְךָ כֹהֵן לְשֵׁבֶט וּלְמִשְׁפָּחָה בְּיִשְׂרָאֵֽל׃ 19
೧೯ಅವರು ಅವನಿಗೆ, “ಸುಮ್ಮನಿರು; ಬಾಯಿ ಮುಚ್ಚಿಕೊಂಡು; ನಮ್ಮ ಜೊತೆಯಲ್ಲಿ ಬಂದು ನಮಗೆ ತಂದೆಯೂ, ಯಾಜಕನೂ ಆಗಿರು. ಒಂದು ಮನೆಗೆ ಯಾಜಕನಾಗಿರುವುದು ಉತ್ತಮವೋ ಅಥವಾ ಇಸ್ರಾಯೇಲ್ಯರ ಒಂದು ಕುಲಕ್ಕೂ, ಗೋತ್ರಕ್ಕೂ ಯಾಜಕನಾಗಿರುವುದು ಉತ್ತಮವೋ?” ಎಂದು ಕೇಳಿದರು.
וַיִּיטַב לֵב הַכֹּהֵן וַיִּקַּח אֶת־הָאֵפוֹד וְאֶת־הַתְּרָפִים וְאֶת־הַפָּסֶל וַיָּבֹא בְּקֶרֶב הָעָֽם׃ 20
೨೦ಯಾಜಕನು ಈ ಮಾತನ್ನು ಕೇಳಿ ಸಂತೋಷಪಟ್ಟು ಏಫೋದನ್ನೂ ದೇವತಾಪ್ರತಿಮೆಗಳನ್ನೂ, ಕೆತ್ತನೆಯ ವಿಗ್ರಹವನ್ನೂ, ತೆಗೆದುಕೊಂಡು ಅವರ ಬಳಿಗೆ ಬಂದನು.
וַיִּפְנוּ וַיֵּלֵכוּ וַיָּשִׂימוּ אֶת־הַטַּף וְאֶת־הַמִּקְנֶה וְאֶת־הַכְּבוּדָּה לִפְנֵיהֶֽם׃ 21
೨೧ತರುವಾಯ ಅವರು ತಮ್ಮ ಹೆಂಡತಿ ಮಕ್ಕಳನ್ನೂ, ಕುರಿದನ ಮೊದಲಾದ ಸೊತ್ತನ್ನೂ ಮುಂದಾಗಿ ಕಳುಹಿಸಿ ತಾವು ಹಿಂದಿನಿಂದ ಹೊರಟರು.
הֵמָּה הִרְחִיקוּ מִבֵּית מִיכָה וְהָאֲנָשִׁים אֲשֶׁר בַּבָּתִּים אֲשֶׁר עִם־בֵּית מִיכָה נִֽזְעֲקוּ וַיַּדְבִּיקוּ אֶת־בְּנֵי־דָֽן׃ 22
೨೨ಅವರು ಮೀಕನ ಮನೆಯಿಂದ ದೂರವಾದ ಮೇಲೆ ಮೀಕನೂ ಅವನ ನೆರೆಹೊರೆಯವರೆಲ್ಲರೂ ದಾನ್ಯರನ್ನು ಹಿಂದಟ್ಟಿ
וַֽיִּקְרְאוּ אֶל־בְּנֵי־דָן וַיַּסֵּבּוּ פְּנֵיהֶם וַיֹּאמְרוּ לְמִיכָה מַה־לְּךָ כִּי נִזְעָֽקְתָּ׃ 23
೨೩ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂದಿರುಗಿ ನೋಡಿ ಮೀಕನಿಗೆ, “ನಿನಗೇನಾಯಿತು? ಗುಂಪನ್ನು ಕೂಡಿಸಿಕೊಂಡು ಬಂದದ್ದೇಕೆ” ಎಂದು ಕೇಳಲು
וַיֹּאמֶר אֶת־אֱלֹהַי אֲשֶׁר־עָשִׂיתִי לְקַחְתֶּם וְֽאֶת־הַכֹּהֵן וַתֵּלְכוּ וּמַה־לִּי עוֹד וּמַה־זֶּה תֹּאמְרוּ אֵלַי מַה־לָּֽךְ׃ 24
೨೪ಅವನು, “ನೀವು ಯಾಜಕನನ್ನೂ ನಾವು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವುದು ಹೇಗೆ?” ಅಂದನು.
וַיֹּאמְרוּ אֵלָיו בְּנֵי־דָן אַל־תַּשְׁמַע קוֹלְךָ עִמָּנוּ פֶּֽן־יִפְגְּעוּ בָכֶם אֲנָשִׁים מָרֵי נֶפֶשׁ וְאָסַפְתָּה נַפְשְׁךָ וְנֶפֶשׁ בֵּיתֶֽךָ׃ 25
೨೫ದಾನ್ಯರು ಅವನಿಗೆ, “ನಮ್ಮಲ್ಲಿ ಕೆಲವರು ತುಂಬಾ ಕೋಪಿಸಿಕೊಳ್ಳುವವರಿದ್ದಾರೆ; ಅವರು ನಿಮ್ಮ ಮೇಲೆ ಬಿದ್ದರೆ ನೀನೂ, ನಿನ್ನ ಮನೆಯವರೂ ಪ್ರಾಣವನ್ನು ಕಳೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಬಾಯಿಮುಚ್ಚಿಕೊಂಡು ಹೋಗು” ಎಂದು ಹೇಳಿ ಮುಂದೆ ನಡೆದರು.
וַיֵּלְכוּ בְנֵי־דָן לְדַרְכָּם וַיַּרְא מִיכָה כִּי־חֲזָקִים הֵמָּה מִמֶּנּוּ וַיִּפֶן וַיָּשָׁב אֶל־בֵּיתֽוֹ׃ 26
೨೬ಅವರು ತನಗಿಂತ ಬಲಿಷ್ಠರೆಂದು ತಿಳಿದುಕೊಂಡು ಮೀಕನು ಹಿಂದಿರುಗಿ ಮನೆಗೆ ಹೋದನು.
וְהֵמָּה לָקְחוּ אֵת אֲשֶׁר־עָשָׂה מִיכָה וְֽאֶת־הַכֹּהֵן אֲשֶׁר הָיָה־לוֹ וַיָּבֹאוּ עַל־לַיִשׁ עַל־עַם שֹׁקֵט וּבֹטֵחַ וַיַּכּוּ אוֹתָם לְפִי־חָרֶב וְאֶת־הָעִיר שָׂרְפוּ בָאֵֽשׁ׃ 27
೨೭ದಾನ್ಯರು ಮೀಕನು ಮಾಡಿಸಿದ್ದ ವಿಗ್ರಹಗಳನ್ನೂ ಅವನ ಯಾಜಕನನ್ನೂ ಅಪಹರಿಸಿಕೊಂಡು ಲಯಿಷಿಗೆ ಹೋಗಿ ಸುಖದಿಂದಲೂ, ನಿರ್ಭಯದಿಂದಲೂ ವಾಸವಾಗಿದ್ದ ಅಲ್ಲಿನ ಜನರ ಮೇಲೆ ಬಿದ್ದು, ಅವರನ್ನು ಕತ್ತಿಯಿಂದ ಸಂಹರಿಸಿ, ಅವರ ಪಟ್ಟಣವನ್ನು ಸುಟ್ಟುಬಿಟ್ಟರು.
וְאֵין מַצִיל כִּי רְֽחוֹקָה־הִיא מִצִּידוֹן וְדָבָר אֵין־לָהֶם עִם־אָדָם וְהִיא בָּעֵמֶק אֲשֶׁר לְבֵית־רְחוֹב וַיִּבְנוּ אֶת־הָעִיר וַיֵּשְׁבוּ בָֽהּ׃ 28
೨೮ಆ ಪಟ್ಟಣವು ಚೀದೋನಿಗೆ ದೂರವಾಗಿದ್ದುದರಿಂದಲೂ, ಸಮೀಪದಲ್ಲಿ ಪರಿಚಯಸ್ಥರು ಯಾರು ಇಲ್ಲದೆ ಇದ್ದುದರಿಂದಲೂ, ಅವರಿಗೆ ಸಹಾಯದೊರಕಲಿಲ್ಲ. ಬೇತ್‌ರೆಹೋಬಿನ ತಗ್ಗಿನಲ್ಲಿದ್ದ ಈ ಪಟ್ಟಣವನ್ನು ದಾನ್ಯರು ಪುನಃ ಕಟ್ಟಿಸಿ ಅದರಲ್ಲಿ ವಾಸಿಸಿದರು.
וַיִּקְרְאוּ שֵׁם־הָעִיר דָּן בְּשֵׁם דָּן אֲבִיהֶם אֲשֶׁר יוּלַּד לְיִשְׂרָאֵל וְאוּלָם לַיִשׁ שֵׁם־הָעִיר לָרִאשֹׁנָֽה׃ 29
೨೯ಮೊದಲು ಲಯಿಷ್ ಎಂಬ ಹೆಸರಿದ್ದ ಆ ಪಟ್ಟಣಕ್ಕೆ ಈಗ ದಾನ್ ಎಂದು ಹೆಸರಿಟ್ಟರು. ದಾನ್ ಎಂಬುದು ಇವರ ಮೂಲಪುರುಷನೂ ಇಸ್ರಾಯೇಲನ ಮಗನೂ ಆದ ದಾನನ ಹೆಸರು.
וַיָּקִימוּ לָהֶם בְּנֵי־דָן אֶת־הַפָּסֶל וִיהוֹנָתָן בֶּן־גֵּרְשֹׁם בֶּן־מְנַשֶּׁה הוּא וּבָנָיו הָיוּ כֹהֲנִים לְשֵׁבֶט הַדָּנִי עַד־יוֹם גְּלוֹת הָאָֽרֶץ׃ 30
೩೦ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಾಯೇಲರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆದ ಯೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು.
וַיָּשִׂימוּ לָהֶם אֶת־פֶּסֶל מִיכָה אֲשֶׁר עָשָׂה כָּל־יְמֵי הֱיוֹת בֵּית־הָאֱלֹהִים בְּשִׁלֹֽה׃ 31
೩೧ಶೀಲೋವಿನಲ್ಲಿ ದೇವದರ್ಶನ ಗುಡಾರವಿದ್ದ ಕಾಲದಲ್ಲೆಲ್ಲಾ ದಾನ್ಯರಲ್ಲಿ ಮೀಕನು ಮಾಡಿಸಿದ ವಿಗ್ರಹವಿತ್ತು.

< שופטים 18 >