< שופטים 1 >
וַיְהִי אַחֲרֵי מוֹת יְהוֹשֻׁעַ וַֽיִּשְׁאֲלוּ בְּנֵי יִשְׂרָאֵל בַּיהוָה לֵאמֹר מִי יַעֲלֶה־לָּנוּ אֶל־הַֽכְּנַעֲנִי בַּתְּחִלָּה לְהִלָּחֶם בּֽוֹ׃ | 1 |
೧ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವನನ್ನು ಕೇಳಲು
וַיֹּאמֶר יְהוָה יְהוּדָה יַעֲלֶה הִנֵּה נָתַתִּי אֶת־הָאָרֶץ בְּיָדֽוֹ׃ | 2 |
೨ಆತನು ಅವರಿಗೆ “ಯೆಹೂದ್ಯರು ಹೋಗಲಿ; ಇಗೋ, ದೇಶವನ್ನು ಅವರಿಗೆ ಒಪ್ಪಿಸಿದ್ದೇನೆ” ಅಂದನು.
וַיֹּאמֶר יְהוּדָה לְשִׁמְעוֹן אָחִיו עֲלֵה אִתִּי בְגוֹרָלִי וְנִֽלָּחֲמָה בַּֽכְּנַעֲנִי וְהָלַכְתִּי גַם־אֲנִי אִתְּךָ בְּגוֹרָלֶךָ וַיֵּלֶךְ אִתּוֹ שִׁמְעֽוֹן׃ | 3 |
೩ಆಗ ಯೆಹೂದ್ಯರು ತಮ್ಮ ಸಹೋದರರಾದ ಸಿಮೆಯೋನ್ಯರಿಗೆ, “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೋಸ್ಕರ ನೀವು ನಮ್ಮ ಸಂಗಡ ನಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬನ್ನಿರಿ; ಅನಂತರ ನಾವೂ ನಿಮ್ಮ ಸಂಗಡ ನಿಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬರುವೆವು” ಎಂದು ಹೇಳಿದರು.
וַיַּעַל יְהוּדָה וַיִּתֵּן יְהוָה אֶת־הַכְּנַעֲנִי וְהַפְּרִזִּי בְּיָדָם וַיַּכּוּם בְּבֶזֶק עֲשֶׂרֶת אֲלָפִים אִֽישׁ׃ | 4 |
೪ಅವರು ಒಪ್ಪಿ ಯೆಹೂದ್ಯರ ಜೊತೆಯಲ್ಲಿ ಯುದ್ಧಕ್ಕೆ ಹೋದರು. ಆಗ ಯೆಹೋವನು ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಅವರ ಕೈಗೆ ಒಪ್ಪಿಸಿದ್ದರಿಂದ ಅವರು ಅವರಲ್ಲಿ ಹತ್ತು ಸಾವಿರ ಮಂದಿಯನ್ನು ಬೆಜೆಕ್ ಎಂಬ ಸ್ಥಳದಲ್ಲಿ ಹತ್ಯೆಮಾಡಿದರು.
וַֽיִּמְצְאוּ אֶת־אֲדֹנִי בֶזֶק בְּבֶזֶק וַיִּֽלָּחֲמוּ בּוֹ וַיַּכּוּ אֶת־הַֽכְּנַעֲנִי וְאֶת־הַפְּרִזִּֽי׃ | 5 |
೫ಅವರು ಅಲ್ಲಿ ಅದೋನೀ ಬೆಜೆಕನನ್ನು ಸಂಧಿಸಿ, ಅವನೊಡನೆ ಯುದ್ಧಮಾಡಿ ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಸೋಲಿಸಿದರು.
וַיָּנָס אֲדֹנִי בֶזֶק וַֽיִּרְדְּפוּ אַחֲרָיו וַיֹּאחֲזוּ אֹתוֹ וַֽיְקַצְּצוּ אֶת־בְּהֹנוֹת יָדָיו וְרַגְלָֽיו׃ | 6 |
೬ಅದೋನೀಬೆಜೆಕನು ಓಡಿಹೋಗಲು ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು.
וַיֹּאמֶר אֲדֹֽנִי־בֶזֶק שִׁבְעִים ׀ מְלָכִים בְּֽהֹנוֹת יְדֵיהֶם וְרַגְלֵיהֶם מְקֻצָּצִים הָיוּ מְלַקְּטִים תַּחַת שֻׁלְחָנִי כַּאֲשֶׁר עָשִׂיתִי כֵּן שִׁלַּם־לִי אֱלֹהִים וַיְבִיאֻהוּ יְרוּשָׁלַ͏ִם וַיָּמָת שָֽׁם׃ | 7 |
೭ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು.
וַיִּלָּחֲמוּ בְנֵֽי־יְהוּדָה בִּירוּשָׁלִַם וַיִּלְכְּדוּ אוֹתָהּ וַיַּכּוּהָ לְפִי־חָרֶב וְאֶת־הָעִיר שִׁלְּחוּ בָאֵֽשׁ׃ | 8 |
೮ಯೆಹೂದ್ಯರು ಯೆರೂಸಲೇಮಿನವರೊಡನೆ ಯುದ್ಧಮಾಡಿ, ಅಲ್ಲಿನ ಜನರನ್ನು ಹಿಡಿದು ಕತ್ತಿಯಿಂದ ಸಂಹರಿಸಿ ಪಟ್ಟಣಕ್ಕೆ ಬೆಂಕಿಯಿಟ್ಟರು.
וְאַחַר יָֽרְדוּ בְּנֵי יְהוּדָה לְהִלָּחֵם בַּֽכְּנַעֲנִי יוֹשֵׁב הָהָר וְהַנֶּגֶב וְהַשְּׁפֵלָֽה׃ | 9 |
೯ತರುವಾಯ ಯೆಹೂದ್ಯರು ಹೋಗಿ ಪರ್ವತಪ್ರದೇಶ, ದಕ್ಷಿಣಸೀಮೆ ಹಾಗೂ ಕಣಿವೆ ಪ್ರದೇಶಗಳಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು.
וַיֵּלֶךְ יְהוּדָה אֶל־הַֽכְּנַעֲנִי הַיּוֹשֵׁב בְּחֶבְרוֹן וְשֵׁם־חֶבְרוֹן לְפָנִים קִרְיַת אַרְבַּע וַיַּכּוּ אֶת־שֵׁשַׁי וְאֶת־אֲחִימַן וְאֶת־תַּלְמָֽי׃ | 10 |
೧೦ಅವರು ಮೊದಲು ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು, ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬುವರನ್ನು ಸೋಲಿಸಿದರು.
וַיֵּלֶךְ מִשָּׁם אֶל־יוֹשְׁבֵי דְּבִיר וְשֵׁם־דְּבִיר לְפָנִים קִרְיַת־סֵֽפֶר׃ | 11 |
೧೧ಅಲ್ಲಿಂದ ದೆಬೀರಿನವರಿಗೆ ವಿರೋಧವಾಗಿ ಹೋದರು; ದೆಬೀರಕ್ಕೆ ಮೊದಲು ಕಿರ್ಯತಸೇಫೆರ್ ಎಂಬ ಹೆಸರಿತ್ತು.
וַיֹּאמֶר כָּלֵב אֲשֶׁר־יַכֶּה אֶת־קִרְיַת־סֵפֶר וּלְכָדָהּ וְנָתַתִּי לוֹ אֶת־עַכְסָה בִתִּי לְאִשָּֽׁה׃ | 12 |
೧೨ಕಿರ್ಯತಸೇಫೆರ ಎಂಬ ಪಟ್ಟಣವನ್ನು ವಶಪಡಿಸಿಕೊಳ್ಳುವವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಡುತ್ತೇನೆಂದು ಕಾಲೇಬನು ಹೇಳಿದನು.
וַֽיִּלְכְּדָהּ עָתְנִיאֵל בֶּן־קְנַז אֲחִי כָלֵב הַקָּטֹן מִמֶּנּוּ וַיִּתֶּן־לוֹ אֶת־עַכְסָה בִתּוֹ לְאִשָּֽׁה׃ | 13 |
೧೩ಅವನ ತಮ್ಮನೂ, ಕೆನಜನ ಮಗನೂ ಆದ ಒತ್ನೀಯೇಲನು ಕಿರ್ಯತ್ ಸೇಫೆರನ್ನು ವಶಪಡಿಸಿಕೊಂಡನು. ಆಗ ಕಾಲೇಬನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿಕೊಟ್ಟನು.
וַיְהִי בְּבוֹאָהּ וַתְּסִיתֵהוּ לִשְׁאוֹל מֵֽאֵת־אָבִיהָ הַשָּׂדֶה וַתִּצְנַח מֵעַל הַחֲמוֹר וַיֹּֽאמֶר־לָהּ כָּלֵב מַה־לָּֽךְ׃ | 14 |
೧೪ಆಕೆಯು ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಹೊಲವನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯಿಂದ ಇಳಿದಳು. ಕಾಲೇಬನು, “ನಿನಗೇನು ಬೇಕು?” ಎಂದು ಆಕೆಯನ್ನು ಕೇಳಲು
וַתֹּאמֶר לוֹ הָֽבָה־לִּי בְרָכָה כִּי אֶרֶץ הַנֶּגֶב נְתַתָּנִי וְנָתַתָּה לִי גֻּלֹּת מָיִם וַיִּתֶּן־לָהּ כָּלֵב אֵת גֻּלֹּת עִלִּית וְאֵת גֻּלֹּת תַּחְתִּֽית׃ | 15 |
೧೫ಆಕೆಯು, “ನನಗೊಂದು ದಾನಕೊಡಬೇಕು; ನೀನು ನನ್ನನ್ನು ದಕ್ಷಿಣ ಪ್ರಾಂತ್ಯಕ್ಕೆ ಕೊಟ್ಟುಬಿಟ್ಟಿಯಲ್ಲಾ, ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಅಂದಳು. ಆಗ ಅವನು ಆಕೆಗೆ ಮೇಲಣ ಬುಗ್ಗೆ ಮತ್ತು ಕೆಳಗಣ ಪ್ರದೇಶದ ಬುಗ್ಗೆಗಳನ್ನು ಕೊಟ್ಟನು.
וּבְנֵי קֵינִי חֹתֵן מֹשֶׁה עָלוּ מֵעִיר הַתְּמָרִים אֶת־בְּנֵי יְהוּדָה מִדְבַּר יְהוּדָה אֲשֶׁר בְּנֶגֶב עֲרָד וַיֵּלֶךְ וַיֵּשֶׁב אֶת־הָעָֽם׃ | 16 |
೧೬ಮೋಶೆಯ ಮಾವನಾದ ಕೇನ್ಯನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅಡವಿಗೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.
וַיֵּלֶךְ יְהוּדָה אֶת־שִׁמְעוֹן אָחִיו וַיַּכּוּ אֶת־הַֽכְּנַעֲנִי יוֹשֵׁב צְפַת וַיַּחֲרִימוּ אוֹתָהּ וַיִּקְרָא אֶת־שֵׁם־הָעִיר חָרְמָֽה׃ | 17 |
೧೭ತರುವಾಯ ಯೆಹೂದ್ಯರು ತಮ್ಮ ಬಂಧುಗಳಾದ ಸಿಮೆಯೋನ್ಯರ ಸಂಗಡ ಹೋಗಿ ಚೆಫತ್ ಎಂಬ ಪಟ್ಟಣದಲ್ಲಿದ್ದ ಕಾನಾನ್ಯರನ್ನು ಸೋಲಿಸಿ, ಆ ಪಟ್ಟಣವನ್ನು ಹಾಳುಮಾಡಿ ಅದನ್ನು ಹೊರ್ಮಾ ಎಂದು ಕರೆದರು.
וַיִּלְכֹּד יְהוּדָה אֶת־עַזָּה וְאֶת־גְּבוּלָהּ וְאֶֽת־אַשְׁקְלוֹן וְאֶת־גְּבוּלָהּ וְאֶת־עֶקְרוֹן וְאֶת־גְּבוּלָֽהּ׃ | 18 |
೧೮ಅನಂತರ ಅವರು ಗಾಜಾ, ಅಷ್ಕೆಲೋನ್, ಎಕ್ರೋನ್ ಎಂಬ ಪಟ್ಟಣಗಳನ್ನೂ ಅವುಗಳ ಮೇರೆಗಳನ್ನೂ ಸ್ವಾಧೀನಮಾಡಿಕೊಂಡರು.
וַיְהִי יְהוָה אֶתּ־יְהוּדָה וַיֹּרֶשׁ אֶת־הָהָר כִּי לֹא לְהוֹרִישׁ אֶת־יֹשְׁבֵי הָעֵמֶק כִּי־רֶכֶב בַּרְזֶל לָהֶֽם׃ | 19 |
೧೯ಯೆಹೋವನು ಯೆಹೂದ್ಯರ ಸಂಗಡ ಇದ್ದುದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದುದರಿಂದ ಅವರನ್ನು ಹೊರಡಿಸುವುದಕ್ಕೆ ಆಗಲಿಲ್ಲ.
וַיִּתְּנוּ לְכָלֵב אֶת־חֶבְרוֹן כּֽ͏ַאֲשֶׁר דִּבֶּר מֹשֶׁה וַיּוֹרֶשׁ מִשָּׁם אֶת־שְׁלֹשָׁה בְּנֵי הָעֲנָֽק׃ | 20 |
೨೦ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು. ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.
וְאֶת־הַיְבוּסִי יֹשֵׁב יְרֽוּשָׁלִַם לֹא הוֹרִישׁוּ בְּנֵי בִנְיָמִן וַיֵּשֶׁב הַיְבוּסִי אֶת־בְּנֵי בִנְיָמִן בִּירוּשָׁלִַם עַד הַיּוֹם הַזֶּֽה׃ | 21 |
೨೧ಯೆರೂಸಲೇಮಿನಲ್ಲಿದ್ದ ಯೆಬೂಸಿಯರನ್ನು ಬೆನ್ಯಾಮೀನ್ಯರು ಹೊರಡಿಸಿಬಿಡಲಿಲ್ಲ. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇಮಿನಲ್ಲಿಯೇ ವಾಸವಾಗಿದ್ದಾರೆ.
וַיַּעֲלוּ בֵית־יוֹסֵף גַּם־הֵם בֵּֽית־אֵל וַֽיהוָה עִמָּֽם׃ | 22 |
೨೨ಇವರ ಹಾಗೆಯೇ ಯೋಸೇಫನ ವಂಶದವರೂ ಹೊರಟು ಬೇತೇಲಿಗೆ ಬಂದರು. ಯೆಹೋವನು ಅವರ ಸಂಗಡ ಇದ್ದನು.
וַיָּתִירוּ בֵית־יוֹסֵף בְּבֵֽית־אֵל וְשֵׁם־הָעִיר לְפָנִים לֽוּז׃ | 23 |
೨೩ಅವರು ಲೂಜ್ ಎಂದು ಕರೆಯುತ್ತಿದ್ದ ಬೇತೇಲ್ ಊರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದರು.
וַיִּרְאוּ הַשֹּׁמְרִים אִישׁ יוֹצֵא מִן־הָעִיר וַיֹּאמְרוּ לוֹ הַרְאֵנוּ נָא אֶת־מְבוֹא הָעִיר וְעָשִׂינוּ עִמְּךָ חָֽסֶד׃ | 24 |
೨೪ಅವರು ಆ ಊರೊಳಗಿನಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ, “ದಯವಿಟ್ಟು ಪಟ್ಟಣದೊಳಗೆ ನುಗ್ಗಬಹುದಾದ ದಾರಿಯನ್ನು ನಮಗೆ ತೋರಿಸು; ನಾವೂ ನಿನಗೆ ದಯೆತೋರಿಸುವೆವು” ಎಂದು ಹೇಳಲು ಅವನು ಅವರಿಗೆ ಆ ದಾರಿಯನ್ನು ತೋರಿಸಿದನು.
וַיַּרְאֵם אֶת־מְבוֹא הָעִיר וַיַּכּוּ אֶת־הָעִיר לְפִי־חָרֶב וְאֶת־הָאִישׁ וְאֶת־כָּל־מִשְׁפַּחְתּוֹ שִׁלֵּֽחוּ׃ | 25 |
೨೫ಆಗ ಅವರು ಆ ಪಟ್ಟಣವನ್ನು ಕತ್ತಿಯಿಂದ ಸಂಹರಿಸಿದರು. ಆದರೆ ಆ ಮನುಷ್ಯನನ್ನೂ ಅವನ ಕುಟುಂಬವನ್ನೂ ಏನು ಮಾಡದೆ ಕಳುಹಿಸಿಬಿಟ್ಟರು.
וַיֵּלֶךְ הָאִישׁ אֶרֶץ הַחִתִּים וַיִּבֶן עִיר וַיִּקְרָא שְׁמָהּ לוּז הוּא שְׁמָהּ עַד הַיּוֹם הַזֶּֽה׃ | 26 |
೨೬ಅವನು ಹಿತ್ತಿಯರ ದೇಶಕ್ಕೆ ಹೋಗಿ ಒಂದು ಪಟ್ಟಣವನ್ನು ಕಟ್ಟಿಕೊಂಡು ಅದಕ್ಕೆ ಲೂಜ್ ಎಂದು ಹೆಸರಿಟ್ಟನು; ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ.
וְלֹא־הוֹרִישׁ מְנַשֶּׁה אֶת־בֵּית־שְׁאָן וְאֶת־בְּנוֹתֶיהָ וְאֶת־תַּעְנַךְ וְאֶת־בְּנֹתֶיהָ וְאֶת־ישב יֹשְׁבֵי דוֹר וְאֶת־בְּנוֹתֶיהָ וְאֶת־יוֹשְׁבֵי יִבְלְעָם וְאֶת־בְּנֹתֶיהָ וְאֶת־יוֹשְׁבֵי מְגִדּוֹ וְאֶת־בְּנוֹתֶיהָ וַיּוֹאֶל הַֽכְּנַעֲנִי לָשֶׁבֶת בָּאָרֶץ הַזֹּֽאת׃ | 27 |
೨೭ಮನಸ್ಸೆಯವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ವಾಸವಾಗಿದ್ದವರನ್ನು ಹೊರಡಿಸಿಬಿಡಲಿಲ್ಲ. ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ದೃಢಮಾಡಿಕೊಂಡರು.
וֽ͏ַיְהִי כִּֽי־חָזַק יִשְׂרָאֵל וַיָּשֶׂם אֶת־הַֽכְּנַעֲנִי לָמַס וְהוֹרֵישׁ לֹא הוֹרִישֽׁוֹ׃ | 28 |
೨೮ಇಸ್ರಾಯೇಲ್ಯರು ಬಲಗೊಂಡ ಮೇಲೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಂಡರೇ ಹೊರತು ಅಲ್ಲಿಂದ ಓಡಿಸಲಿಲ್ಲ.
וְאֶפְרַיִם לֹא הוֹרִישׁ אֶת־הַֽכְּנַעֲנִי הַיּוֹשֵׁב בְּגָזֶר וַיֵּשֶׁב הַֽכְּנַעֲנִי בְּקִרְבּוֹ בְּגָֽזֶר׃ | 29 |
೨೯ಎಫ್ರಾಯೀಮ್ಯರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಆದ್ದರಿಂದ ಕಾನಾನ್ಯರು ಎಫ್ರಾಯೀಮ್ಯರ ಮಧ್ಯದಲ್ಲೇ ವಾಸಿಸುವವರಾದರು.
זְבוּלֻן לֹא הוֹרִישׁ אֶת־יוֹשְׁבֵי קִטְרוֹן וְאֶת־יוֹשְׁבֵי נַהֲלֹל וַיֵּשֶׁב הַֽכְּנַעֲנִי בְּקִרְבּוֹ וַיִּֽהְיוּ לָמַֽס׃ | 30 |
೩೦ಜೆಬುಲೂನ್ಯರು ಕಿತ್ರೋನ್, ನಹಲೋಲ್ ಎಂಬ ಪಟ್ಟಣಗಳ ನಿವಾಸಿಗಳನ್ನು ಓಡಿಸಲಿಲ್ಲ. ಇದರಿಂದ ಕಾನಾನ್ಯರು ಅವರ ಮಧ್ಯದಲ್ಲೇ ವಾಸಮಾಡುವವರಾದರು. ಆದರೆ ಜೆಬುಲೂನ್ಯರು ಕಾನಾನ್ಯರನ್ನು ಗುಲಾಮರನ್ನಾಗಿ ಮಾಡಿಕೊಂಡರು.
אָשֵׁר לֹא הוֹרִישׁ אֶת־יֹשְׁבֵי עַכּוֹ וְאֶת־יוֹשְׁבֵי צִידוֹן וְאֶת־אַחְלָב וְאֶת־אַכְזִיב וְאֶת־חֶלְבָּה וְאֶת־אֲפִיק וְאֶת־רְחֹֽב׃ | 31 |
೩೧ಆಶೇರ್ಯರು ಅಕ್ಕೋ, ಚೀದೋನ್, ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಎಂಬ ಪಟ್ಟಣಗಳಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿಬಿಡಲಿಲ್ಲ;
וַיֵּשֶׁב הָאָשֵׁרִי בְּקֶרֶב הַֽכְּנַעֲנִי יֹשְׁבֵי הָאָרֶץ כִּי לֹא הוֹרִישֽׁוֹ׃ | 32 |
೩೨ಹೀಗಾಗಿ ಆಶೇರ್ಯರು ಕಾನಾನ್ಯರನ ಮಧ್ಯದಲ್ಲೇ ವಾಸಮಾಡಿದರು.
נַפְתָּלִי לֹֽא־הוֹרִישׁ אֶת־יֹשְׁבֵי בֵֽית־שֶׁמֶשׁ וְאֶת־יֹשְׁבֵי בֵית־עֲנָת וַיֵּשֶׁב בְּקֶרֶב הַֽכְּנַעֲנִי יֹשְׁבֵי הָאָרֶץ וְיֹשְׁבֵי בֵֽית־שֶׁמֶשׁ וּבֵית עֲנָת הָיוּ לָהֶם לָמַֽס׃ | 33 |
೩೩ನಫ್ತಾಲಿ ಕುಲದವರು ಬೇತ್ ಷೆಮೆಷ್, ಬೇತನಾತ್ ಎಂಬ ಊರುಗಳಲ್ಲಿ ಸ್ವಾಧೀನ ಮಾಡಿಕೊಳ್ಳದೆ ಅಲ್ಲಿಯ ನಿವಾಸಿಗಳಾದ ಕಾನಾನ್ಯರ ಮಧ್ಯದಲ್ಲೇ ವಾಸಮಾಡಿದರು ಮತ್ತು ಬೇತ್ ಷೆಮೆಷ್, ಬೇತನಾತ್ ಊರುಗಳ ಜನರು ಅವರಿಗೆ ಗುಲಾಮರಾದರು.
וַיִּלְחֲצוּ הָאֱמֹרִי אֶת־בְּנֵי־דָן הָהָרָה כִּי־לֹא נְתָנוֹ לָרֶדֶת לָעֵֽמֶק׃ | 34 |
೩೪ಇದಲ್ಲದೆ ಅಮೋರಿಯರು ದಾನ್ ಕುಲದವರನ್ನು ತಗ್ಗಿನ ಪ್ರದೇಶಕ್ಕೆ ಇಳಿಯಗೊಡದೆ ಹಿಂದಟ್ಟಿ ಬೆಟ್ಟಗಳಿಗೆ ಓಡಿಸಿಬಿಟ್ಟರು.
וַיּוֹאֶל הָֽאֱמֹרִי לָשֶׁבֶת בְּהַר־חֶרֶס בְּאַיָּלוֹן וּבְשַֽׁעַלְבִים וַתִּכְבַּד יַד בֵּית־יוֹסֵף וַיִּהְיוּ לָמַֽס׃ | 35 |
೩೫ಹೀಗೆ ಅಮೋರಿಯರು ಅಯ್ಯಾಲೋನ್, ಶಾಲ್ಬೀಮ್ ಎಂಬ ಊರುಗಳ ಬಳಿ ಇದ್ದ ಹರ್ ಹೆರೆಸ್ ಎಂಬ ಬೆಟ್ಟದ ಹತ್ತಿರ ವಾಸಿಸಲು ನಿರ್ಧಾರಮಾಡಿಕೊಂಡರು. ಆದರೆ ಯೋಸೇಫನ ಕುಲದವರು ಅವರನ್ನು ಸೋಲಿಸಿ ಗುಲಾಮರನ್ನಾಗಿ ಮಾಡಿಕೊಂಡರು.
וּגְבוּל הָאֱמֹרִי מִֽמַּעֲלֵה עַקְרַבִּים מֵהַסֶּלַע וָמָֽעְלָה׃ | 36 |
೩೬ಅಮೋರಿಯರ ಮೇರೆಯು ಅಕ್ರಬ್ಬೀಮ್ ಮೇಲುದಿಣ್ಣೆಯಿಂದ ಸೇಲಾ ಊರಿನಿಂದ ಮೇಲಕ್ಕೆ ವಿಸ್ತರಿಸಿಕೊಂಡಿದೆ.