< ויקרא 16 >
וַיְדַבֵּר יְהוָה אֶל־מֹשֶׁה אַחֲרֵי מוֹת שְׁנֵי בְּנֵי אַהֲרֹן בְּקָרְבָתָם לִפְנֵי־יְהוָה וַיָּמֻֽתוּ׃ | 1 |
ಆರೋನನ ಇಬ್ಬರು ಗಂಡು ಮಕ್ಕಳು ಯೆಹೋವ ದೇವರ ಸನ್ನಿಧಿಗೆ ಬಂದು ಸತ್ತಾಗ ಮೋಶೆಯಂದಿಗೆ ಯೆಹೋವ ದೇವರು ಮಾತನಾಡಿದರು.
וַיֹּאמֶר יְהוָה אֶל־מֹשֶׁה דַּבֵּר אֶל־אַהֲרֹן אָחִיךָ וְאַל־יָבֹא בְכָל־עֵת אֶל־הַקֹּדֶשׁ מִבֵּית לַפָּרֹכֶת אֶל־פְּנֵי הַכַּפֹּרֶת אֲשֶׁר עַל־הָאָרֹן וְלֹא יָמוּת כִּי בֶּֽעָנָן אֵרָאֶה עַל־הַכַּפֹּֽרֶת׃ | 2 |
ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನಿನ್ನ ಅಣ್ಣನಾದ ಆರೋನನು ಮಂಜೂಷದ ಮೇಲಿರುವ ಕರುಣಾಸನದ ಮುಂದಿರುವ ತೆರೆಯ ಒಳಗೆ ಮಹಾಪರಿಶುದ್ಧ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ, ಇಲ್ಲವಾದರೆ ಅವನು ಸಾಯುತ್ತಾನೆ, ಏಕೆಂದರೆ ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.
בְּזֹאת יָבֹא אַהֲרֹן אֶל־הַקֹּדֶשׁ בְּפַר בֶּן־בָּקָר לְחַטָּאת וְאַיִל לְעֹלָֽה׃ | 3 |
“ಈ ಸೂಚನೆಗಳನ್ನು ಸಂಪೂರ್ಣವಾಗಿ ಅನುಸರಿಸಿದ ನಂತರವೇ ಆರೋನನು ಮಹಾಪರಿಶುದ್ಧ ಸ್ಥಳಕ್ಕೆ ಪ್ರವೇಶಿಸಬೇಕು: ಪಾಪ ಪರಿಹಾರದ ಬಲಿಗಾಗಿ ಒಂದು ಹೋರಿಯನ್ನು ಮತ್ತು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಬರಬೇಕು.
כְּתֹֽנֶת־בַּד קֹדֶשׁ יִלְבָּשׁ וּמִֽכְנְסֵי־בַד יִהְיוּ עַל־בְּשָׂרוֹ וּבְאַבְנֵט בַּד יַחְגֹּר וּבְמִצְנֶפֶת בַּד יִצְנֹף בִּגְדֵי־קֹדֶשׁ הֵם וְרָחַץ בַּמַּיִם אֶת־בְּשָׂרוֹ וּלְבֵשָֽׁם׃ | 4 |
ಅವನು ಪರಿಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟುಕೊಂಡು, ತನ್ನ ಶರೀರದ ಮೇಲೆ ನಾರುಬಟ್ಟೆಯ ಒಳಉಡುಪನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು, ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು. ಆದಕಾರಣ ಅವನು ನೀರಿನಿಂದ ಸ್ನಾನಮಾಡಿ ಅವುಗಳನ್ನು ಧರಿಸಿಕೊಳ್ಳಬೇಕು.
וּמֵאֵת עֲדַת בְּנֵי יִשְׂרָאֵל יִקַּח שְׁנֵֽי־שְׂעִירֵי עִזִּים לְחַטָּאת וְאַיִל אֶחָד לְעֹלָֽה׃ | 5 |
ಅವನು ಇಸ್ರಾಯೇಲರ ಸಭೆಯ ಕಡೆಯಿಂದ ಪಾಪ ಪರಿಹಾರದ ಬಲಿಗಾಗಿ ಎರಡು ಹೋತಗಳನ್ನು, ದಹನಬಲಿಗಾಗಿ ಒಂದು ಟಗರನ್ನೂ ತೆಗೆದುಕೊಳ್ಳಬೇಕು.
וְהִקְרִיב אַהֲרֹן אֶת־פַּר הַחַטָּאת אֲשֶׁר־לוֹ וְכִפֶּר בַּעֲדוֹ וּבְעַד בֵּיתֽוֹ׃ | 6 |
“ಇದಲ್ಲದೆ ಆರೋನನು ತನಗೋಸ್ಕರ ಪಾಪ ಪರಿಹಾರದ ಬಲಿಗಾಗಿ ತನ್ನ ಹೋರಿಯನ್ನು ಸಮರ್ಪಿಸಿ, ತನ್ನ ಮನೆಯವರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು.
וְלָקַח אֶת־שְׁנֵי הַשְּׂעִירִם וְהֶעֱמִיד אֹתָם לִפְנֵי יְהוָה פֶּתַח אֹהֶל מוֹעֵֽד׃ | 7 |
ಅವನು ಎರಡು ಹೋತಗಳನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲ ಬಳಿಗೆ ತಂದು, ಅವುಗಳನ್ನು ಯೆಹೋವ ದೇವರ ಎದುರಿನಲ್ಲಿ ನಿಲ್ಲಿಸಬೇಕು.
וְנָתַן אַהֲרֹן עַל־שְׁנֵי הַשְּׂעִירִם גּוֹרָלוֹת גּוֹרָל אֶחָד לַיהוָה וְגוֹרָל אֶחָד לַעֲזָאזֵֽל׃ | 8 |
ಆರೋನನು ಆ ಎರಡು ಹೋತಗಳಿಗಾಗಿ ಚೀಟುಹಾಕಬೇಕು. ಒಂದು ಚೀಟು ಯೆಹೋವ ದೇವರಿಗೋಸ್ಕರ, ಮತ್ತೊಂದು ಚೀಟು ಬಲಿಪಶುವಿಗೋಸ್ಕರ.
וְהִקְרִיב אַהֲרֹן אֶת־הַשָּׂעִיר אֲשֶׁר עָלָה עָלָיו הַגּוֹרָל לַיהוָה וְעָשָׂהוּ חַטָּֽאת׃ | 9 |
ಆರೋನನು ಯೆಹೋವ ದೇವರ ಚೀಟು ಬಿದ್ದ ಹೋತವನ್ನು ತಂದು, ಅದನ್ನು ಪಾಪ ಪರಿಹಾರದ ಬಲಿಗಾಗಿ ಸಮರ್ಪಿಸಬೇಕು.
וְהַשָּׂעִיר אֲשֶׁר עָלָה עָלָיו הַגּוֹרָל לַעֲזָאזֵל יָֽעֳמַד־חַי לִפְנֵי יְהוָה לְכַפֵּר עָלָיו לְשַׁלַּח אֹתוֹ לַעֲזָאזֵל הַמִּדְבָּֽרָה׃ | 10 |
ಆದರೆ ಬಲಿಪಶುವಿಗಾಗಿ ಚೀಟು ಬಿದ್ದ ಆ ಹೋತವನ್ನು ತನ್ನೊಂದಿಗೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ಸಜೀವವಾಗಿ ನಿಲ್ಲಿಸಿ, ಅದನ್ನು ಬಲಿಪಶುವಾಗಿ ಕಾಡಿನಲ್ಲಿ ಹೋಗುವಂತೆ ಬಿಟ್ಟುಬಿಡಬೇಕು.
וְהִקְרִיב אַהֲרֹן אֶת־פַּר הַֽחַטָּאת אֲשֶׁר־לוֹ וְכִפֶּר בַּֽעֲדוֹ וּבְעַד בֵּיתוֹ וְשָׁחַט אֶת־פַּר הֽ͏ַחַטָּאת אֲשֶׁר־לֽוֹ׃ | 11 |
“ಇದಲ್ಲದೆ ಆರೋನನು ಪಾಪ ಪರಿಹಾರದ ಬಲಿಯಾಗಿರುವ ಹೋರಿಯನ್ನು ತಂದು, ತನಗೋಸ್ಕರ ಮತ್ತು ತನ್ನ ಮನೆತನದವರಿಗೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ತನಗೋಸ್ಕರ ದೋಷಪರಿಹಾರಕ ಬಲಿಯಾಗಿ ಆ ಹೋರಿಯನ್ನು ವಧಿಸಬೇಕು.
וְלָקַח מְלֹֽא־הַמַּחְתָּה גַּֽחֲלֵי־אֵשׁ מֵעַל הַמִּזְבֵּחַ מִלִּפְנֵי יְהוָה וּמְלֹא חָפְנָיו קְטֹרֶת סַמִּים דַּקָּה וְהֵבִיא מִבֵּית לַפָּרֹֽכֶת׃ | 12 |
ಅವನು ಯೆಹೋವ ದೇವರ ಸನ್ನಿಧಿಯಲ್ಲಿರುವ ಬಲಿಪೀಠದಿಂದ ಬೆಂಕಿಯ ಕೆಂಡಗಳನ್ನು ಧೂಪ ಸುಡುವ ಪಾತ್ರೆಯಲ್ಲಿ ತುಂಬಿಸಿ, ತನ್ನ ಎರಡು ಕೈತುಂಬ ಪರಿಮಳ ಧೂಪದ್ರವ್ಯದ ಚೂರ್ಣವನ್ನು ತೆಗೆದುಕೊಂಡು, ತೆರೆಯನ್ನು ದಾಟಿ ತರಬೇಕು.
וְנָתַן אֶֽת־הַקְּטֹרֶת עַל־הָאֵשׁ לִפְנֵי יְהוָה וְכִסָּה ׀ עֲנַן הַקְּטֹרֶת אֶת־הַכַּפֹּרֶת אֲשֶׁר עַל־הָעֵדוּת וְלֹא יָמֽוּת׃ | 13 |
ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕರುಣಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಯೆಹೋವ ದೇವರ ಎದುರಿನಲ್ಲಿ ಬೆಂಕಿಯ ಮೇಲೆ ಹಾಕಬೇಕು.
וְלָקַח מִדַּם הַפָּר וְהִזָּה בְאֶצְבָּעוֹ עַל־פְּנֵי הַכַּפֹּרֶת קֵדְמָה וְלִפְנֵי הַכַּפֹּרֶת יַזֶּה שֶֽׁבַע־פְּעָמִים מִן־הַדָּם בְּאֶצְבָּעֽוֹ׃ | 14 |
ಆ ಹೋರಿಯ ರಕ್ತದಿಂದ ಸ್ವಲ್ಪ ತೆಗೆದುಕೊಂಡು, ಕರುಣಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು, ಕರುಣಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೇಕು.
וְשָׁחַט אֶת־שְׂעִיר הַֽחַטָּאת אֲשֶׁר לָעָם וְהֵבִיא אֶת־דָּמוֹ אֶל־מִבֵּית לַפָּרֹכֶת וְעָשָׂה אֶת־דָּמוֹ כַּאֲשֶׁר עָשָׂה לְדַם הַפָּר וְהִזָּה אֹתוֹ עַל־הַכַּפֹּרֶת וְלִפְנֵי הַכַּפֹּֽרֶת׃ | 15 |
“ತರುವಾಯ ಅವನು ಜನರಿಗೋಸ್ಕರ ಪಾಪ ಪರಿಹಾರದ ಬಲಿಯಾಗಿರುವ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯ ಒಳಗಡೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಕರುಣಾಸನದ ಮೇಲೆಯೂ, ಕರುಣಾಸನದ ಮುಂದೆಯೂ ಚಿಮುಕಿಸಬೇಕು.
וְכִפֶּר עַל־הַקֹּדֶשׁ מִטֻּמְאֹת בְּנֵי יִשְׂרָאֵל וּמִפִּשְׁעֵיהֶם לְכָל־חַטֹּאתָם וְכֵן יַעֲשֶׂה לְאֹהֶל מוֹעֵד הַשֹּׁכֵן אִתָּם בְּתוֹךְ טֻמְאֹתָֽם׃ | 16 |
ಇಸ್ರಾಯೇಲರ ಅಶುದ್ಧತ್ವದ ನಿಮಿತ್ತವಾಗಿಯೂ, ಎಲ್ಲಾ ಅಪರಾಧಗಳಿಗಾಗಿಯೂ ಅವನು ಮಹಾಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಅವರು ಅಶುದ್ಧತ್ವದ ಮಧ್ಯದಲ್ಲಿ ಉಳಿದವರಿಗೋಸ್ಕರ ದೇವದರ್ಶನದ ಗುಡಾರಕ್ಕೂ ಅದರಂತೆಯೇ ಮಾಡಬೇಕು.
וְכָל־אָדָם לֹא־יִהְיֶה ׀ בְּאֹהֶל מוֹעֵד בְּבֹאוֹ לְכַפֵּר בַּקֹּדֶשׁ עַד־צֵאתוֹ וְכִפֶּר בַּעֲדוֹ וּבְעַד בֵּיתוֹ וּבְעַד כָּל־קְהַל יִשְׂרָאֵֽל׃ | 17 |
ಅವನು ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಮಹಾಪರಿಶುದ್ಧ ಸ್ಥಳಕ್ಕೆ ಹೋಗಿರುವಾಗ ತನಗೋಸ್ಕರವೂ, ತನ್ನ ಮನೆಯವರಿಗೆಲ್ಲರಿಗೋಸ್ಕರವೂ, ಇಸ್ರಾಯೇಲರ ಸಭೆಯವರೆಲ್ಲರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಿ ಹೊರಗೆ ಬರುವ ತನಕ ದೇವದರ್ಶನದ ಗುಡಾರದಲ್ಲಿ ಒಬ್ಬ ಮನುಷ್ಯನೂ ಇರಬಾರದು.
וְיָצָא אֶל־הַמִּזְבֵּחַ אֲשֶׁר לִפְנֵֽי־יְהוָה וְכִפֶּר עָלָיו וְלָקַח מִדַּם הַפָּר וּמִדַּם הַשָּׂעִיר וְנָתַן עַל־קַרְנוֹת הַמִּזְבֵּחַ סָבִֽיב׃ | 18 |
“ಅವನು ಯೆಹೋವ ದೇವರ ಎದುರಿನಲ್ಲಿರುವ ಬಲಿಪೀಠದ ಬಳಿಗೆ ಬಂದು, ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಹೋರಿಯ ರಕ್ತವನ್ನೂ, ಹೋತದ ರಕ್ತವನ್ನೂ ತೆಗೆದುಕೊಂಡು ಬಲಿಪೀಠದ ಸುತ್ತಲೂ ಇರುವ ಕೊಂಬುಗಳಿಗೆ ಹಚ್ಚಬೇಕು.
וְהִזָּה עָלָיו מִן־הַדָּם בְּאֶצְבָּעוֹ שֶׁבַע פְּעָמִים וְטִהֲרוֹ וְקִדְּשׁוֹ מִטֻּמְאֹת בְּנֵי יִשְׂרָאֵֽל׃ | 19 |
ಅವನು ಏಳು ಸಾರಿ ಅದರ ಮೇಲೆ ರಕ್ತವನ್ನು ಚಿಮುಕಿಸಿ, ಅದನ್ನು ಶುದ್ಧಮಾಡಬೇಕು ಮತ್ತು ಇಸ್ರಾಯೇಲರ ಅಶುದ್ಧತೆಯನ್ನು ಹೋಗಲಾಡಿಸಿ, ಅದನ್ನು ಪರಿಶುದ್ಧ ಮಾಡಬೇಕು.
וְכִלָּה מִכַּפֵּר אֶת־הַקֹּדֶשׁ וְאֶת־אֹהֶל מוֹעֵד וְאֶת־הַמִּזְבֵּחַ וְהִקְרִיב אֶת־הַשָּׂעִיר הֶחָֽי׃ | 20 |
“ಹೀಗೆ ಮಹಾಪರಿಶುದ್ಧ ಸ್ಥಳಕ್ಕೂ, ಸಭೆಯ ಗುಡಾರಕ್ಕೂ, ಬಲಿಪೀಠಕ್ಕೂ ಸಂಧಾನದ ಕೊನೆಯಲ್ಲಿ ಅವನು ಒಂದು ಜೀವವುಳ್ಳ ಹೋತವನ್ನು ತರಬೇಕು.
וְסָמַךְ אַהֲרֹן אֶת־שְׁתֵּי ידו יָדָיו עַל רֹאשׁ הַשָּׂעִיר הַחַי וְהִתְוַדָּה עָלָיו אֶת־כָּל־עֲוֺנֹת בְּנֵי יִשְׂרָאֵל וְאֶת־כָּל־פִּשְׁעֵיהֶם לְכָל־חַטֹּאתָם וְנָתַן אֹתָם עַל־רֹאשׁ הַשָּׂעִיר וְשִׁלַּח בְּיַד־אִישׁ עִתִּי הַמִּדְבָּֽרָה׃ | 21 |
ಆರೋನನು ಆ ಜೀವವುಳ್ಳ ಹೋತದ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು, ಅದರ ಮೇಲೆ ಇಸ್ರಾಯೇಲರ ಎಲ್ಲಾ ಅಕ್ರಮಗಳನ್ನೂ, ಅವರ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆಮಾಡಿ ಅವುಗಳನ್ನು ಹೋತದ ತಲೆಯ ಮೇಲೆ ಇರಿಸಿ, ನೇಮಕವಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು.
וְנָשָׂא הַשָּׂעִיר עָלָיו אֶת־כָּל־עֲוֺנֹתָם אֶל־אֶרֶץ גְּזֵרָה וְשִׁלַּח אֶת־הַשָּׂעִיר בַּמִּדְבָּֽר׃ | 22 |
ಆ ಹೋತ ಅವರ ಎಲ್ಲಾ ಪಾಪಗಳನ್ನೂ ತನ್ನ ಮೇಲೆ ಹೊತ್ತುಕೊಂಡು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಮನುಷ್ಯನು ಹೋತವನ್ನು ಅಡವಿಗೆ ತೆಗೆದುಕೊಂಡುಹೋಗಿ ಅಲ್ಲೇ ಬಿಟ್ಟುಬಿಡಬೇಕು.
וּבָא אַהֲרֹן אֶל־אֹהֶל מוֹעֵד וּפָשַׁט אֶת־בִּגְדֵי הַבָּד אֲשֶׁר לָבַשׁ בְּבֹאוֹ אֶל־הַקֹּדֶשׁ וְהִנִּיחָם שָֽׁם׃ | 23 |
“ಆರೋನನು ದೇವದರ್ಶನದ ಗುಡಾರದೊಳಗೆ ಬಂದು, ತಾನು ಮಹಾಪರಿಶುದ್ಧ ಸ್ಥಳದೊಳಕ್ಕೆ ಹೋಗುವಾಗ ತೊಟ್ಟುಕೊಂಡಿದ್ದ ನಾರಿನ ಬಟ್ಟೆಗಳನ್ನು ತೆಗೆದುಹಾಕಿ ಅವುಗಳನ್ನು ಅಲ್ಲಿಯೇ ಬಿಡಬೇಕು.
וְרָחַץ אֶת־בְּשָׂרוֹ בַמַּיִם בְּמָקוֹם קָדוֹשׁ וְלָבַשׁ אֶת־בְּגָדָיו וְיָצָא וְעָשָׂה אֶת־עֹֽלָתוֹ וְאֶת־עֹלַת הָעָם וְכִפֶּר בַּעֲדוֹ וּבְעַד הָעָֽם׃ | 24 |
ಅವನು ಪರಿಶುದ್ಧ ಸ್ಥಳದಲ್ಲಿ ನೀರಿನಲ್ಲಿ ಸ್ನಾನಮಾಡಿ, ತನ್ನ ಬಳಕೆಯ ಬಟ್ಟೆಗಳನ್ನು ಧರಿಸಿಕೊಂಡು, ಹೊರಗೆ ಬಂದು ತನ್ನ ದಹನಬಲಿಯನ್ನೂ, ಜನರ ದಹನಬಲಿಯನ್ನೂ ಸಮರ್ಪಿಸಿ ತನಗೋಸ್ಕರವೂ, ಜನರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು.
וְאֵת חֵלֶב הַֽחַטָּאת יַקְטִיר הַמִּזְבֵּֽחָה׃ | 25 |
ಪಾಪ ಪರಿಹಾರದ ಬಲಿಯ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು.
וְהַֽמְשַׁלֵּחַ אֶת־הַשָּׂעִיר לַֽעֲזָאזֵל יְכַבֵּס בְּגָדָיו וְרָחַץ אֶת־בְּשָׂרוֹ בַּמָּיִם וְאַחֲרֵי־כֵן יָבוֹא אֶל־הַֽמַּחֲנֶֽה׃ | 26 |
“ಬಲಿಪಶುವಿಗಾಗಿ ಹೋತವನ್ನು ಹೋಗಲು ಬಿಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಿದ ಮೇಲೆ ಅವನು ಪಾಳೆಯದೊಳಕ್ಕೆ ಬರಬೇಕು.
וְאֵת פַּר הֽ͏ַחַטָּאת וְאֵת ׀ שְׂעִיר הַֽחַטָּאת אֲשֶׁר הוּבָא אֶת־דָּמָם לְכַפֵּר בַּקֹּדֶשׁ יוֹצִיא אֶל־מִחוּץ לַֽמַּחֲנֶה וְשָׂרְפוּ בָאֵשׁ אֶת־עֹרֹתָם וְאֶת־בְּשָׂרָם וְאֶת־פִּרְשָֽׁם׃ | 27 |
ಇದಲ್ಲದೆ ಮಹಾಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯಾವುದರ ರಕ್ತವು ತರಲಾಗಿತ್ತೋ, ಆ ಪಾಪ ಪರಿಹಾರದ ಬಲಿಯ ಹೋರಿಯನ್ನು ಮತ್ತು ದೋಷಪರಿಹಾರ ಬಲಿಯ ಹೋತವನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಅವುಗಳ ಚರ್ಮವನ್ನೂ, ಮಾಂಸವನ್ನೂ, ಸಗಣಿಯನ್ನೂ ಸುಡಬೇಕು.
וְהַשֹּׂרֵף אֹתָם יְכַבֵּס בְּגָדָיו וְרָחַץ אֶת־בְּשָׂרוֹ בַּמָּיִם וְאַחֲרֵי־כֵן יָבוֹא אֶל־הַֽמַּחֲנֶֽה׃ | 28 |
ಅವುಗಳನ್ನು ಸುಡುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಿದ ನಂತರ ಪಾಳೆಯದೊಳಕ್ಕೆ ಬರಬೇಕು.
וְהָיְתָה לָכֶם לְחֻקַּת עוֹלָם בַּחֹדֶשׁ הַשְּׁבִיעִי בֶּֽעָשׂוֹר לַחֹדֶשׁ תְּעַנּוּ אֶת־נַפְשֹֽׁתֵיכֶם וְכָל־מְלָאכָה לֹא תַעֲשׂוּ הָֽאֶזְרָח וְהַגֵּר הַגָּר בְּתוֹכְכֶֽם׃ | 29 |
“ಇದು ನಿಮಗೆ ಶಾಶ್ವತವಾದ ನಿಯಮ: ಸ್ವದೇಶೀಯರಾದ ನೀವೂ, ನಿಮ್ಮೊಡನೆ ವಾಸಿಸುತ್ತಿರುವ ಪರಕೀಯರೂ, ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಎಲ್ಲಾ ಕೆಲಸಗಳನ್ನು ಬಿಟ್ಟು, ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು.
כִּֽי־בַיּוֹם הַזֶּה יְכַפֵּר עֲלֵיכֶם לְטַהֵר אֶתְכֶם מִכֹּל חַטֹּאתֵיכֶם לִפְנֵי יְהוָה תִּטְהָֽרוּ׃ | 30 |
ನೀವು ಯೆಹೋವ ದೇವರ ಸನ್ನಿಧಿಯಲ್ಲಿ ನಿಮ್ಮ ಎಲ್ಲಾ ಪಾಪಗಳಿಂದ ಶುದ್ಧರಾಗಿರುವಂತೆ ನಿಮ್ಮನ್ನು ಶುದ್ಧೀಕರಿಸುವ ಹಾಗೆ, ಆ ದಿನದಲ್ಲಿ ಯಾಜಕನು ನಿಮಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡುವನು.
שַׁבַּת שַׁבָּתוֹן הִיא לָכֶם וְעִנִּיתֶם אֶת־נַפְשֹׁתֵיכֶם חֻקַּת עוֹלָֽם׃ | 31 |
ಇದೇ ನಿಮಗೆ ಸಬ್ಬತ್ ದಿನವಾಗಿರುವುದು. ನಿಮಗೆ ನಿತ್ಯವಾದ ನಿಯಮವಿರುವಂತೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ.
וְכִפֶּר הַכֹּהֵן אֲשֶׁר־יִמְשַׁח אֹתוֹ וַאֲשֶׁר יְמַלֵּא אֶת־יָדוֹ לְכַהֵן תַּחַת אָבִיו וְלָבַשׁ אֶת־בִּגְדֵי הַבָּד בִּגְדֵי הַקֹּֽדֶשׁ׃ | 32 |
ಯಾವನು ತನ್ನ ತಂದೆಯ ಬದಲಾಗಿ ಮಹಾಯಾಜಕ ಉದ್ಯೋಗಕ್ಕೋಸ್ಕರ ಅಭಿಷಿಕ್ತನಾಗಿ ಪ್ರತಿಷ್ಟಿಸಲಾಗಿದ್ದಾನೋ, ಆ ಮಹಾಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅವನು ಪರಿಶುದ್ಧ ಉಡುಪುಗಳಾದ ನಾರು ಬಟ್ಟೆಗಳನ್ನು ಧರಿಸಿಕೊಳ್ಳಬೇಕು.
וְכִפֶּר אֶת־מִקְדַּשׁ הַקֹּדֶשׁ וְאֶת־אֹהֶל מוֹעֵד וְאֶת־הַמִּזְבֵּחַ יְכַפֵּר וְעַל הַכֹּהֲנִים וְעַל־כָּל־עַם הַקָּהָל יְכַפֵּֽר׃ | 33 |
ಹೀಗೆ ಅವನು ಮಹಾಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಇದಲ್ಲದೆ ಸಭೆಯ ಗುಡಾರಕ್ಕಾಗಿಯೂ, ಬಲಿಪೀಠಕ್ಕಾಗಿಯೂ ಪ್ರಾಯಶ್ಚಿತ್ತ ಮಾಡಬೇಕು. ಯಾಜಕರಿಗಾಗಿಯೂ, ಸಭೆಯ ಎಲ್ಲಾ ಜನರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು.
וְהָֽיְתָה־זֹּאת לָכֶם לְחֻקַּת עוֹלָם לְכַפֵּר עַל־בְּנֵי יִשְׂרָאֵל מִכָּל־חַטֹּאתָם אַחַת בַּשָּׁנָה וַיַּעַשׂ כַּאֲשֶׁר צִוָּה יְהוָה אֶת־מֹשֶֽׁה׃ | 34 |
“ಹೀಗೆ ಇಸ್ರಾಯೇಲರ ಎಲ್ಲಾ ಪಾಪಗಳಿಗಾಗಿ ವರ್ಷಕ್ಕೊಂದಾವರ್ತಿ ಪ್ರಾಯಶ್ಚಿತ್ತ ಮಾಡುವುದು, ನಿಮಗೆ ನಿರಂತರವಾದ ನಿಯಮವಾಗಿರುವುದು,” ಎಂದು ಹೇಳಿದರು. ಯೆಹೋವ ದೇವರು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು.