< ויקרא 18 >
וַיְדַבֵּר יְהוָה אֶל־מֹשֶׁה לֵּאמֹֽר׃ | 1 |
ಯೆಹೋವ ದೇವರು ಮೋಶೆಗೆ,
דַּבֵּר אֶל־בְּנֵי יִשְׂרָאֵל וְאָמַרְתָּ אֲלֵהֶם אֲנִי יְהוָה אֱלֹהֵיכֶֽם׃ | 2 |
“ನೀನು ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳಬೇಕು, ‘ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
כְּמַעֲשֵׂה אֶֽרֶץ־מִצְרַיִם אֲשֶׁר יְשַׁבְתֶּם־בָּהּ לֹא תַעֲשׂוּ וּכְמַעֲשֵׂה אֶֽרֶץ־כְּנַעַן אֲשֶׁר אֲנִי מֵבִיא אֶתְכֶם שָׁמָּה לֹא תַעֲשׂוּ וּבְחֻקֹּתֵיהֶם לֹא תֵלֵֽכוּ׃ | 3 |
ನೀವು ವಾಸವಾಗಿದ್ದ ಈಜಿಪ್ಟ್ ದೇಶದ ಆಚಾರಗಳನ್ನು ಅನುಸರಿಸಬಾರದು. ನಿಮ್ಮನ್ನು ಸೇರಿಸಲಿರುವ ಕಾನಾನ್ ದೇಶದವರ ಆಚಾರಗಳನ್ನು ನೀವು ಮಾಡಬಾರದು. ಇಲ್ಲವೆ ನೀವು ಅವರ ಪದ್ಧತಿಗಳನುಸಾರ ನಡೆಯಬಾರದು.
אֶת־מִשְׁפָּטַי תַּעֲשׂוּ וְאֶת־חֻקֹּתַי תִּשְׁמְרוּ לָלֶכֶת בָּהֶם אֲנִי יְהוָה אֱלֹהֵיכֶֽם׃ | 4 |
ನೀವು ನನ್ನ ನಿರ್ಣಯಗಳನ್ನು ಕೈಗೊಂಡು ಕಟ್ಟಳೆಗಳ ಪ್ರಕಾರ ನಡೆಯಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
וּשְׁמַרְתֶּם אֶת־חֻקֹּתַי וְאֶת־מִשְׁפָּטַי אֲשֶׁר יַעֲשֶׂה אֹתָם הָאָדָם וָחַי בָּהֶם אֲנִי יְהוָֽה׃ | 5 |
ಆದ್ದರಿಂದ ನೀವು ನನ್ನ ನಿಯಮಗಳನ್ನೂ, ನನ್ನ ನಿರ್ಣಯಗಳನ್ನೂ ಕೈಗೊಳ್ಳಿರಿ. ಇವುಗಳನ್ನು ಅನುಸರಿಸುವವರು ನಿಯಮಗಳ ಮೂಲಕವೇ ಬದುಕುವರು, ನಾನೇ ಯೆಹೋವ ದೇವರು.
אִישׁ אִישׁ אֶל־כָּל־שְׁאֵר בְּשָׂרוֹ לֹא תִקְרְבוּ לְגַלּוֹת עֶרְוָה אֲנִי יְהוָֽה׃ | 6 |
“‘ನಿಮ್ಮಲ್ಲಿ ಯಾವನಾದರೂ ತನ್ನ ಹತ್ತಿರ ಸಂಬಂಧಿಯೊಡನೆ ಲೈಂಗಿಕ ಸಂಬಂಧ ಬೆಳೆಸಬಾರದು, ನಾನೇ ಯೆಹೋವ ದೇವರು.
עֶרְוַת אָבִיךָ וְעֶרְוַת אִמְּךָ לֹא תְגַלֵּה אִמְּךָ הִוא לֹא תְגַלֶּה עֶרְוָתָֽהּ׃ | 7 |
“‘ನಿನ್ನ ತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾಡಿ, ನಿನ್ನ ತಂದೆಯನ್ನು ಅಗೌರವಿಸಬೇಡ. ಆಕೆ ನಿನ್ನ ತಾಯಿ: ಆಕೆಯೊಂದಿಗೆ ಇಂಥ ಸಂಬಂಧ ಬೇಡ.
עֶרְוַת אֵֽשֶׁת־אָבִיךָ לֹא תְגַלֵּה עֶרְוַת אָבִיךָ הִֽוא׃ | 8 |
“‘ನಿನ್ನ ಮಲತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನ್ನ ತಂದೆಗೆ ಅಗೌರವವನ್ನುಂಟು ಮಾಡುವುದು.
עֶרְוַת אֲחֽוֹתְךָ בַת־אָבִיךָ אוֹ בַת־אִמֶּךָ מוֹלֶדֶת בַּיִת אוֹ מוֹלֶדֶת חוּץ לֹא תְגַלֶּה עֶרְוָתָֽן׃ | 9 |
“‘ನಿನ್ನ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ತಂದೆಯ ಮಗಳಾಗಿರಬಹುದು ಇಲ್ಲವೆ ತಾಯಿಯ ಮಗಳಾಗಿರಬಹುದು. ಆಕೆ ಒಂದೇ ಮನೆಯಲ್ಲಿ ಹುಟ್ಟಿರಬಹುದು ಇಲ್ಲವೆ ಬೇರೆ ಕಡೆಯಲ್ಲಿ ಹುಟ್ಟಿರಬಹುದು ಆಕೆಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ.
עֶרְוַת בַּת־בִּנְךָ אוֹ בַֽת־בִּתְּךָ לֹא תְגַלֶּה עֶרְוָתָן כִּי עֶרְוָתְךָ הֵֽנָּה׃ | 10 |
“‘ನಿನ್ನ ಮಗನ ಮಗಳ ಕೂಡ, ಇಲ್ಲವೆ ಮಗಳ ಮಗಳ ಕೂಡ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನಗೆ ಅಗೌರವವಾಗಿದೆ.
עֶרְוַת בַּת־אֵשֶׁת אָבִיךָ מוֹלֶדֶת אָבִיךָ אֲחוֹתְךָ הִוא לֹא תְגַלֶּה עֶרְוָתָֽהּ׃ | 11 |
“‘ನಿನ್ನ ತಂದೆಯಿಂದ ಜನಿಸಿದ ನಿನ್ನ ತಂದೆಯ ಮಗಳೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ಸಹೋದರಿ.
עֶרְוַת אֲחוֹת־אָבִיךָ לֹא תְגַלֵּה שְׁאֵר אָבִיךָ הִֽוא׃ | 12 |
“‘ನಿನ್ನ ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ತಂದೆಯ ಸಮೀಪ ಬಂಧು.
עֶרְוַת אֲחֽוֹת־אִמְּךָ לֹא תְגַלֵּה כִּֽי־שְׁאֵר אִמְּךָ הִֽוא׃ | 13 |
“‘ನಿನ್ನ ತಾಯಿಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅವಳು ನಿನ್ನ ತಾಯಿಗೆ ಹತ್ತಿರದ ಸಂಬಂಧಿಯಾಗಿದ್ದಾಳೆ.
עֶרְוַת אֲחִֽי־אָבִיךָ לֹא תְגַלֵּה אֶל־אִשְׁתּוֹ לֹא תִקְרָב דֹּדָֽתְךָ הִֽוא׃ | 14 |
“‘ನಿನ್ನ ತಂದೆಯ ಸಹೋದರನ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಬೇಡ. ನಿನ್ನ ತಂದೆಯ ಸಹೋದರನನ್ನು ಅಗೌರವಿಸಬೇಡ. ಆಕೆ ನಿನ್ನ ದೊಡ್ಡಮ್ಮ.
עֶרְוַת כַּלָּֽתְךָ לֹא תְגַלֵּה אֵשֶׁת בִּנְךָ הִוא לֹא תְגַלֶּה עֶרְוָתָֽהּ׃ | 15 |
“‘ನಿನ್ನ ಸೊಸೆಯೊಂದಿಗೆ ಲೈಂಗಿಕ ಸಂಪರ್ಕ ಬೇಡ. ಆಕೆ ನಿನ್ನ ಮಗನ ಹೆಂಡತಿ. ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.
עֶרְוַת אֵֽשֶׁת־אָחִיךָ לֹא תְגַלֵּה עֶרְוַת אָחִיךָ הִֽוא׃ | 16 |
“‘ನೀನು ನಿನ್ನ ಸಹೋದರನ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನ್ನ ಸಹೋದರನನ್ನು ಅಗೌರವಿಸುವುದು.
עֶרְוַת אִשָּׁה וּבִתָּהּ לֹא תְגַלֵּה אֶֽת־בַּת־בְּנָהּ וְאֶת־בַּת־בִּתָּהּ לֹא תִקַּח לְגַלּוֹת עֶרְוָתָהּ שַׁאֲרָה הֵנָּה זִמָּה הִֽוא | 17 |
“‘ಸ್ತ್ರೀಯೊಂದಿಗೂ, ಆಕೆಯ ಮಗಳೊಂದಿಗೂ ಒಟ್ಟಿಗೆ ಲೈಂಗಿಕ ಸಂಪರ್ಕ ಬೇಡ. ಆಕೆಯ ಮಗನ ಮಗಳೊಂದಿಗಾದರೂ, ಮಗಳ ಮಗಳೊಂದಿಗಾದರೂ ಲೈಂಗಿಕ ಸಂಪರ್ಕ ಬೇಡ. ಅವರು ಆಕೆಯ ಹತ್ತಿರ ಸಂಬಂಧಿಗಳು. ಅದು ದುಷ್ಟತನ.
וְאִשָּׁה אֶל־אֲחֹתָהּ לֹא תִקָּח לִצְרֹר לְגַלּוֹת עֶרְוָתָהּ עָלֶיהָ בְּחַיֶּֽיהָ׃ | 18 |
“‘ನಿನ್ನ ಹೆಂಡತಿಗೆ ವೈರಿಯಾಗುವ ಹಾಗೆ ಅವಳ ಸಹೋದರಿಯನ್ನು ಹೆಂಡತಿಯಾಗಿ ತೆಗೆದುಕೊಳ್ಳಬೇಡ. ಒಬ್ಬಳು ಜೀವಂತವಾಗಿರುವಾಗ ಮತ್ತೊಬ್ಬಳೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ.
וְאֶל־אִשָּׁה בְּנִדַּת טֻמְאָתָהּ לֹא תִקְרַב לְגַלּוֹת עֶרְוָתָֽהּ׃ | 19 |
“‘ಮುಟ್ಟಿನಿಂದ ಅಶುದ್ಧಳಾದ ಸ್ತ್ರೀಯ ಸಂಪರ್ಕ ಮಾಡಬೇಡ.
וְאֶל־אֵשֶׁת עֲמִֽיתְךָ לֹא־תִתֵּן שְׁכָבְתְּךָ לְזָרַע לְטָמְאָה־בָֽהּ׃ | 20 |
“‘ಪರರ ಹೆಂಡತಿಯೊಂದಿಗೆ ನೀನು ಸಂಗಮಿಸಿ ಅಶುದ್ಧನಾಗಬೇಡ.
וּמִֽזַּרְעֲךָ לֹא־תִתֵּן לְהַעֲבִיר לַמֹּלֶךְ וְלֹא תְחַלֵּל אֶת־שֵׁם אֱלֹהֶיךָ אֲנִי יְהוָֽה׃ | 21 |
“‘ನಿನ್ನ ಮಕ್ಕಳಲ್ಲಿ ಯಾರನ್ನೂ ಮೋಲೆಕ್ ದೇವತೆಗೆ ಸಮರ್ಪಿಸಿ, ನಿನ್ನ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು. ನಾನು ಯೆಹೋವ ದೇವರು.
וְאֶת־זָכָר לֹא תִשְׁכַּב מִשְׁכְּבֵי אִשָּׁה תּוֹעֵבָה הִֽוא׃ | 22 |
“‘ಸ್ತ್ರೀಯೊಂದಿಗೆ ಮಲಗಿಕೊಳ್ಳುವಂತೆ ಪುರುಷನೊಂದಿಗೆ ಮಲಗಬಾರದು. ಅದು ಅಸಹ್ಯವಾದದ್ದು.
וּבְכָל־בְּהֵמָה לֹא־תִתֵּן שְׁכָבְתְּךָ לְטָמְאָה־בָהּ וְאִשָּׁה לֹֽא־תַעֲמֹד לִפְנֵי בְהֵמָה לְרִבְעָהּ תֶּבֶל הֽוּא׃ | 23 |
“‘ಇದಲ್ಲದೆ ಪಶುವಿನೊಂದಿಗೆ ನೀನು ಮಲಗಿ ನಿನ್ನನ್ನು ಅಶುದ್ಧಮಾಡಿಕೊಳ್ಳಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು. ಅದು ಸ್ವಭಾವಕ್ಕೆ ವ್ಯತಿರಿಕ್ತವಾದದ್ದು.
אַל־תִּֽטַּמְּאוּ בְּכָל־אֵלֶּה כִּי בְכָל־אֵלֶּה נִטְמְאוּ הַגּוֹיִם אֲשֶׁר־אֲנִי מְשַׁלֵּחַ מִפְּנֵיכֶֽם׃ | 24 |
“‘ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು. ಏಕೆಂದರೆ ನಿಮ್ಮ ಮುಂದೆಯೇ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಿಂದ ಹೊಲೆಯಾಗಿವೆ.
וַתִּטְמָא הָאָרֶץ וָאֶפְקֹד עֲוֺנָהּ עָלֶיהָ וַתָּקִא הָאָרֶץ אֶת־יֹשְׁבֶֽיהָ׃ | 25 |
ದೇಶವೂ ಅಶುದ್ಧವಾಗಿದೆ. ಆದ್ದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು. ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವುದು.
וּשְׁמַרְתֶּם אַתֶּם אֶת־חֻקֹּתַי וְאֶת־מִשְׁפָּטַי וְלֹא תַעֲשׂוּ מִכֹּל הַתּוֹעֵבֹת הָאֵלֶּה הָֽאֶזְרָח וְהַגֵּר הַגָּר בְּתוֹכְכֶֽם׃ | 26 |
ಆದ್ದರಿಂದ ನೀವು ನನ್ನ ನಿಯಮಗಳನ್ನು, ನನ್ನ ನಿರ್ಣಯಗಳನ್ನು ಕೈಗೊಳ್ಳಬೇಕು. ಸ್ವದೇಶದವರಲ್ಲಿ ಯಾವನಾಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನೂ ಮಾಡಬಾರದು.
כִּי אֶת־כָּל־הַתּוֹעֵבֹת הָאֵל עָשׂוּ אַנְשֵֽׁי־הָאָרֶץ אֲשֶׁר לִפְנֵיכֶם וַתִּטְמָא הָאָֽרֶץ׃ | 27 |
ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲಾ ಅಸಹ್ಯವಾದವುಗಳನ್ನು ಮಾಡಿದ್ದರಿಂದ ದೇಶವೂ ಅಶುದ್ಧವಾಯಿತು.
וְלֹֽא־תָקִיא הָאָרֶץ אֶתְכֶם בְּטַֽמַּאֲכֶם אֹתָהּ כַּאֲשֶׁר קָאָה אֶת־הַגּוֹי אֲשֶׁר לִפְנֵיכֶֽם׃ | 28 |
ನೀವೂ ಅದನ್ನು ಅಶುದ್ಧಮಾಡಿದರೆ, ಅದು ನಿಮಗಿಂತ ಮೊದಲಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವುದು.
כִּי כָּל־אֲשֶׁר יַעֲשֶׂה מִכֹּל הַתּוֹעֵבוֹת הָאֵלֶּה וְנִכְרְתוּ הַנְּפָשׁוֹת הָעֹשֹׂת מִקֶּרֶב עַמָּֽם׃ | 29 |
“‘ಏಕೆಂದರೆ ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವುದನ್ನಾದರೂ ಮಾಡಿದರೆ, ಅವನನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
וּשְׁמַרְתֶּם אֶת־מִשְׁמַרְתִּי לְבִלְתִּי עֲשׂוֹת מֵחֻקּוֹת הַתּֽוֹעֵבֹת אֲשֶׁר נַעֲשׂוּ לִפְנֵיכֶם וְלֹא תִֽטַּמְּאוּ בָּהֶם אֲנִי יְהוָה אֱלֹהֵיכֶֽם׃ | 30 |
ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’”