< ויקרא 23 >
וַיְדַבֵּר יְהוָה אֶל־מֹשֶׁה לֵּאמֹֽר׃ | 1 |
ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
דַּבֵּר אֶל־בְּנֵי יִשְׂרָאֵל וְאָמַרְתָּ אֲלֵהֶם מוֹעֲדֵי יְהוָה אֲשֶׁר־תִּקְרְאוּ אֹתָם מִקְרָאֵי קֹדֶשׁ אֵלֶּה הֵם מוֹעֲדָֽי׃ | 2 |
“ಇಸ್ರಾಯೇಲರೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು, ‘ನೀವು ಪರಿಶುದ್ಧ ಸಭೆಗಳಾಗಿ ಸೇರಿ ಯೆಹೋವ ದೇವರಾಗಿರುವ ನನಗೋಸ್ಕರ ನೇಮಕವಾದ ಈ ಹಬ್ಬಗಳನ್ನು ಪ್ರಕಟಿಸಬೇಕು.
שֵׁשֶׁת יָמִים תֵּעָשֶׂה מְלָאכָה וּבַיּוֹם הַשְּׁבִיעִי שַׁבַּת שַׁבָּתוֹן מִקְרָא־קֹדֶשׁ כָּל־מְלָאכָה לֹא תַעֲשׂוּ שַׁבָּת הִוא לַֽיהוָה בְּכֹל מֽוֹשְׁבֹתֵיכֶֽם׃ | 3 |
“‘ಆರು ದಿವಸ ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ಸಬ್ಬತ್ ದಿನ. ಆ ದಿನವು ಪರಿಶುದ್ಧ ದಿನವಾಗಿರುವುದು. ನೀವು ಆ ದಿನದಲ್ಲಿ ಕೆಲಸಮಾಡಬಾರದು. ನಿಮ್ಮ ಎಲ್ಲಾ ನಿವಾಸಗಳಲ್ಲಿಯೂ ಅದು ಯೆಹೋವ ದೇವರ ಸಬ್ಬತ್ ದಿನವಾಗಿರುವುದು.
אֵלֶּה מוֹעֲדֵי יְהוָה מִקְרָאֵי קֹדֶשׁ אֲשֶׁר־תִּקְרְאוּ אֹתָם בְּמוֹעֲדָֽם׃ | 4 |
“‘ಇವು ಯೆಹೋವ ದೇವರ ಹಬ್ಬಗಳು: ನೀವು ನೇಮಕವಾದ ಕಾಲಗಳಲ್ಲಿ ನಿಮ್ಮ ಪವಿತ್ರ ಸಭಾ ಕೂಟಗಳಲ್ಲಿ ಈ ಹಬ್ಬಗಳನ್ನು ಪ್ರಕಟಿಸಬೇಕು.
בַּחֹדֶשׁ הָרִאשׁוֹן בְּאַרְבָּעָה עָשָׂר לַחֹדֶשׁ בֵּין הָעַרְבָּיִם פֶּסַח לַיהוָֽה׃ | 5 |
ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯಲ್ಲಿ ಯೆಹೋವ ದೇವರ ಪಸ್ಕಹಬ್ಬವಾಗಬೇಕು.
וּבַחֲמִשָּׁה עָשָׂר יוֹם לַחֹדֶשׁ הַזֶּה חַג הַמַּצּוֹת לַיהוָה שִׁבְעַת יָמִים מַצּוֹת תֹּאכֵֽלוּ׃ | 6 |
ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಯೆಹೋವ ದೇವರಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.
בַּיּוֹם הָֽרִאשׁוֹן מִקְרָא־קֹדֶשׁ יִהְיֶה לָכֶם כָּל־מְלֶאכֶת עֲבֹדָה לֹא תַעֲשֽׂוּ׃ | 7 |
ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಯಾವ ತರವಾದ ಉದ್ಯೋಗವನ್ನು ನೀವು ಆ ದಿನದಲ್ಲಿ ಮಾಡಬೇಡಿರಿ.
וְהִקְרַבְתֶּם אִשֶּׁה לַיהוָה שִׁבְעַת יָמִים בַּיּוֹם הַשְּׁבִיעִי מִקְרָא־קֹדֶשׁ כָּל־מְלֶאכֶת עֲבֹדָה לֹא תַעֲשֽׂוּ׃ | 8 |
ಆದರೆ ಏಳು ದಿವಸ ನೀವು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ಪರಿಶುದ್ಧ ಸಭಾಕೂಟವಿರುವುದು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.’”
וַיְדַבֵּר יְהוָה אֶל־מֹשֶׁה לֵּאמֹֽר׃ | 9 |
ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
דַּבֵּר אֶל־בְּנֵי יִשְׂרָאֵל וְאָמַרְתָּ אֲלֵהֶם כִּֽי־תָבֹאוּ אֶל־הָאָרֶץ אֲשֶׁר אֲנִי נֹתֵן לָכֶם וּקְצַרְתֶּם אֶת־קְצִירָהּ וַהֲבֵאתֶם אֶת־עֹמֶר רֵאשִׁית קְצִירְכֶם אֶל־הַכֹּהֵֽן׃ | 10 |
“ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿಯನ್ನು ಕೊಯ್ದರೆ, ನಿಮ್ಮ ಸುಗ್ಗಿಯ ಪ್ರಥಮ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.
וְהֵנִיף אֶת־הָעֹמֶר לִפְנֵי יְהוָה לִֽרְצֹנְכֶם מִֽמָּחֳרַת הַשַּׁבָּת יְנִיפֶנּוּ הַכֹּהֵֽן׃ | 11 |
ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಅರ್ಪಿಸಬೇಕು. ಸಬ್ಬತ್ ದಿನವಾದ ಮಾರನೆಯ ದಿನ ಯಾಜಕನು ಅದನ್ನು ಅರ್ಪಿಸಬೇಕು.
וַעֲשִׂיתֶם בְּיוֹם הֲנִֽיפְכֶם אֶת־הָעֹמֶר כֶּבֶשׂ תָּמִים בֶּן־שְׁנָתוֹ לְעֹלָה לַיהוָֽה׃ | 12 |
ನೀವು ಸಿವುಡನ್ನು ಅರ್ಪಿಸುವ ದಿನದಲ್ಲಿ ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವಂತೆ ಒಂದು ವರ್ಷದ ಮತ್ತು ಕಳಂಕರಹಿತವಾದ ಕುರಿಮರಿಯನ್ನು ಅರ್ಪಿಸಬೇಕು.
וּמִנְחָתוֹ שְׁנֵי עֶשְׂרֹנִים סֹלֶת בְּלוּלָה בַשֶּׁמֶן אִשֶּׁה לַיהוָה רֵיחַ נִיחֹחַ וְנִסְכֹּה יַיִן רְבִיעִת הַהִֽין׃ | 13 |
ಇದರೊಂದಿಗೆ, ಧಾನ್ಯ ಸಮರ್ಪಣೆಯಲ್ಲಿ ಬೆರೆಸಿದ ಎಣ್ಣೆ ಮತ್ತು ಮೂರು ಕಿಲೋಗ್ರಾಂ ನಯವಾದ ಹಿಟ್ಟನ್ನು ಆಹ್ಲಾದಕರವಾದ ಪರಿಮಳದ ರೂಪದಲ್ಲಿ ಯೆಹೋವ ದೇವರಿಗೆ ಅರ್ಪಿಸಬೇಕು. ಇದಲ್ಲದೆ ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಸುಮಾರು ಒಂದು ಲೀಟರ್ ದ್ರಾಕ್ಷಾರಸ ಆಗಿರಬೇಕು.
וְלֶחֶם וְקָלִי וְכַרְמֶל לֹא תֹֽאכְלוּ עַד־עֶצֶם הַיּוֹם הַזֶּה עַד הֲבִיאֲכֶם אֶת־קָרְבַּן אֱלֹהֵיכֶם חֻקַּת עוֹלָם לְדֹרֹתֵיכֶם בְּכֹל מֹשְׁבֹֽתֵיכֶֽם׃ | 14 |
ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಬಲಿಯನ್ನು ತರುವವರೆಗೆ ರೊಟ್ಟಿಯನ್ನಾಗಲಿ, ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿಯೂ ಶಾಶ್ವತವಾದ ನಿಯಮವಾಗಿರಬೇಕು.
וּסְפַרְתֶּם לָכֶם מִמָּחֳרַת הַשַּׁבָּת מִיּוֹם הֲבִיאֲכֶם אֶת־עֹמֶר הַתְּנוּפָה שֶׁבַע שַׁבָּתוֹת תְּמִימֹת תִּהְיֶֽינָה׃ | 15 |
“‘ಸಬ್ಬತ್ ದಿನದ ಮಾರನೆಯ ದಿನ ನೀವು ನೈವೇದ್ಯವಾಗಿ ನಿವಾಳಿಸಿದ ಸಿವುಡನ್ನು ತಂದ ದಿನದಿಂದ ಏಳು ವಾರಗಳು ಪೂರ್ಣವಾಗುವವರೆಗೆ ಲೆಕ್ಕಿಸಬೇಕು.
עַד מִֽמָּחֳרַת הַשַּׁבָּת הַשְּׁבִיעִת תִּסְפְּרוּ חֲמִשִּׁים יוֹם וְהִקְרַבְתֶּם מִנְחָה חֲדָשָׁה לַיהוָֽה׃ | 16 |
ಏಳನೆಯ ಸಬ್ಬತ್ ದಿನದ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಯೆಹೋವ ದೇವರಿಗೆ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸಬೇಕು.
מִמּוֹשְׁבֹתֵיכֶם תָּבִיאּוּ ׀ לֶחֶם תְּנוּפָה שְׁתַּיִם שְׁנֵי עֶשְׂרֹנִים סֹלֶת תִּהְיֶינָה חָמֵץ תֵּאָפֶינָה בִּכּוּרִים לֽ͏ַיהוָֽה׃ | 17 |
ಇದಲ್ಲದೆ ನೀವು ನಿಮ್ಮ ಮನೆಗಳಿಂದ ತಂದ ಹಿಟ್ಟಿನಲ್ಲಿ ಎರಡೆರಡು ಓಮರ್ ಹಿಟ್ಟಿನಿಂದ ಎರಡು ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋಧಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವ ದೇವರಿಗೆ ನೈವೇದ್ಯವಾಗಿ ನಿವಾಳಿಸಬೇಕು.
וְהִקְרַבְתֶּם עַל־הַלֶּחֶם שִׁבְעַת כְּבָשִׂים תְּמִימִם בְּנֵי שָׁנָה וּפַר בֶּן־בָּקָר אֶחָד וְאֵילִם שְׁנָיִם יִהְיוּ עֹלָה לַֽיהוָה וּמִנְחָתָם וְנִסְכֵּיהֶם אִשֵּׁה רֵֽיחַ־נִיחֹחַ לַיהוָֽה׃ | 18 |
ಇದಲ್ಲದೆ ನೀವು ರೊಟ್ಟಿಯೊಂದಿಗೆ ಕಳಂಕರಹಿತವಾದ ಒಂದು ವರ್ಷದ ಏಳು ಕುರಿಮರಿಗಳನ್ನೂ ಒಂದು ಎಳೆಯ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸಬೇಕು. ಅವು ಯೆಹೋವ ದೇವರಿಗೆ ದಹನಬಲಿಗಳಾಗುವುವು. ಅವುಗಳೊಂದಿಗೆ ಆಹಾರ ಬಲಿಯು ಮತ್ತು ಪಾನಾರ್ಪಣೆಗಳು, ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು.
וַעֲשִׂיתֶם שְׂעִיר־עִזִּים אֶחָד לְחַטָּאת וּשְׁנֵי כְבָשִׂים בְּנֵי שָׁנָה לְזֶבַח שְׁלָמִֽים׃ | 19 |
ತರುವಾಯ ಹೋತವನ್ನು ಪಾಪ ಪರಿಹಾರದ ಬಲಿಯಾಗಿಯೂ ಮತ್ತು ಸಮಾಧಾನ ಬಲಿಯಾಗಿ ಒಂದು ವರ್ಷದ ಎರಡು ಕುರಿಮರಿಗಳನ್ನು ಬಲಿಯಾಗಿ ಅರ್ಪಿಸಬೇಕು.
וְהֵנִיף הַכֹּהֵן ׀ אֹתָם עַל לֶחֶם הַבִּכּוּרִים תְּנוּפָה לִפְנֵי יְהוָה עַל־שְׁנֵי כְּבָשִׂים קֹדֶשׁ יִהְיוּ לַיהוָה לַכֹּהֵֽן׃ | 20 |
ಯಾಜಕನು ಯೆಹೋವ ದೇವರ ಸನ್ನಿಧಿಯಲ್ಲಿ ಪ್ರಥಮ ಫಲದ ರೊಟ್ಟಿಯೊಂದಿಗೂ, ಎರಡು ಕುರಿಮರಿಗಳೊಂದಿಗೂ ಅವುಗಳನ್ನು ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವ ದೇವರಿಗೆ ಪರಿಶುದ್ಧವಾಗಿದ್ದು ಯಾಜಕನಿಗೋಸ್ಕರ ಇರಬೇಕು.
וּקְרָאתֶם בְּעֶצֶם ׀ הַיּוֹם הַזֶּה מִֽקְרָא־קֹדֶשׁ יִהְיֶה לָכֶם כָּל־מְלֶאכֶת עֲבֹדָה לֹא תַעֲשׂוּ חֻקַּת עוֹלָם בְּכָל־מוֹשְׁבֹתֵיכֶם לְדֹרֹֽתֵיכֶֽם׃ | 21 |
ಅದೇ ದಿನದಲ್ಲಿ ಪವಿತ್ರ ಸಭೆ ಕೂಡುವುದೆಂದು ಪ್ರಕಟಿಸಬೇಕು ಮತ್ತು ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ, ನೀವು ಎಲ್ಲೇ ಇದ್ದರೂ ಪಾಲಿಸಬೇಕಾದ ಶಾಶ್ವತ ನಿಯಮ.
וּֽבְקֻצְרְכֶם אֶת־קְצִיר אַרְצְכֶם לֹֽא־תְכַלֶּה פְּאַת שָֽׂדְךָ בְּקֻצְרֶךָ וְלֶקֶט קְצִירְךָ לֹא תְלַקֵּט לֶֽעָנִי וְלַגֵּר תַּעֲזֹב אֹתָם אֲנִי יְהוָה אֱלֹהֵיכֶֽם׃ | 22 |
“‘ನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯುವಾಗ, ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು, ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನೂ ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’”
וַיְדַבֵּר יְהוָה אֶל־מֹשֶׁה לֵּאמֹֽר׃ | 23 |
ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
דַּבֵּר אֶל־בְּנֵי יִשְׂרָאֵל לֵאמֹר בַּחֹדֶשׁ הַשְּׁבִיעִי בְּאֶחָד לַחֹדֶשׁ יִהְיֶה לָכֶם שַׁבָּתוֹן זִכְרוֹן תְּרוּעָה מִקְרָא־קֹֽדֶשׁ׃ | 24 |
“ಇಸ್ರಾಯೇಲರೊಂದಿಗೆ ಮಾತನಾಡಿ: ‘ಏಳನೆಯ ತಿಂಗಳಿನಲ್ಲಿ ಮೊದಲನೆಯ ದಿನದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥವಾದ ಸಬ್ಬತ್ ದಿನವಾಗಿರಬೇಕು. ಆ ದಿನ ಪರಿಶುದ್ಧ ಸಭೆಯ ಕೂಟವೂ ಇರಬೇಕು.
כָּל־מְלֶאכֶת עֲבֹדָה לֹא תַעֲשׂוּ וְהִקְרַבְתֶּם אִשֶּׁה לַיהוָֽה׃ | 25 |
ನೀವು ಅದರಲ್ಲಿ ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ದಹನಬಲಿಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು,’” ಎಂದು ಹೇಳಿದರು.
וַיְדַבֵּר יְהוָה אֶל־מֹשֶׁה לֵּאמֹֽר׃ | 26 |
ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
אַךְ בֶּעָשׂוֹר לַחֹדֶשׁ הַשְּׁבִיעִי הַזֶּה יוֹם הַכִּפֻּרִים הוּא מִֽקְרָא־קֹדֶשׁ יִהְיֶה לָכֶם וְעִנִּיתֶם אֶת־נַפְשֹׁתֵיכֶם וְהִקְרַבְתֶּם אִשֶּׁה לַיהוָֽה׃ | 27 |
“ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿರುವುದು. ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವುದು. ನೀವು ಉಪವಾಸ ಮಾಡಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು.
וְכָל־מְלָאכָה לֹא תַעֲשׂוּ בְּעֶצֶם הַיּוֹם הַזֶּה כִּי יוֹם כִּפֻּרִים הוּא לְכַפֵּר עֲלֵיכֶם לִפְנֵי יְהוָה אֱלֹהֵיכֶֽם׃ | 28 |
ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಏಕೆಂದರೆ ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಯೆಹೋವ ದೇವರ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿರುವುದು.
כִּי כָל־הַנֶּפֶשׁ אֲשֶׁר לֹֽא־תְעֻנֶּה בְּעֶצֶם הַיּוֹם הַזֶּה וְנִכְרְתָה מֵֽעַמֶּֽיהָ׃ | 29 |
ಅದೇ ದಿವಸದಲ್ಲಿ ಯಾರಾದರೂ ಉಪವಾಸ ಮಾಡದೆ ಇದ್ದಲ್ಲಿ, ಅವರು ತಮ್ಮ ಜನರೊಳಗಿಂದ ಸಂಪೂರ್ಣವಾಗಿ ತೆಗೆಯಲಾಗುವುದು.
וְכָל־הַנֶּפֶשׁ אֲשֶׁר תַּעֲשֶׂה כָּל־מְלָאכָה בְּעֶצֶם הַיּוֹם הַזֶּה וְהַֽאֲבַדְתִּי אֶת־הַנֶּפֶשׁ הַהִוא מִקֶּרֶב עַמָּֽהּ׃ | 30 |
ಅದೇ ದಿವಸದಲ್ಲಿ ಯಾರಾದರೂ ಕೆಲಸವನ್ನು ಮಾಡಿದರೆ, ಅವರನ್ನು ನಾನು ಅವರ ಜನರ ಮಧ್ಯದಿಂದ ನಾಶಮಾಡುವೆನು.
כָּל־מְלָאכָה לֹא תַעֲשׂוּ חֻקַּת עוֹלָם לְדֹרֹתֵיכֶם בְּכֹל מֹֽשְׁבֹֽתֵיכֶֽם׃ | 31 |
ನೀವು ಯಾವ ತರಹದ ಕೆಲಸವನ್ನೂ ಮಾಡಬಾರದು. ಇದು ನಿಮ್ಮ ಸಂತತಿಗೆ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.
שַׁבַּת שַׁבָּתוֹן הוּא לָכֶם וְעִנִּיתֶם אֶת־נַפְשֹׁתֵיכֶם בְּתִשְׁעָה לַחֹדֶשׁ בָּעֶרֶב מֵעֶרֶב עַד־עֶרֶב תִּשְׁבְּתוּ שַׁבַּתְּכֶֽם׃ | 32 |
ಇದು ನಿಮಗೆ ಸಬ್ಬತ್ ದಿನವಾಗಿರುವುದು. ನೀವು ನಿಮ್ಮನ್ನು ಉಪವಾಸ ಇಡಬೇಕು. ಆ ತಿಂಗಳಿನ ಒಂಬತ್ತನೆಯ ದಿವಸದ ಸಾಯಂಕಾಲದಿಂದ ಹಿಡಿದು ಮರುದಿನದ ಸಂಜೆಯವರೆಗೆ ಸಬ್ಬತ್ ದಿನವನ್ನು ಆಚರಿಸಬೇಕು,” ಎಂಬದೇ.
וַיְדַבֵּר יְהוָה אֶל־מֹשֶׁה לֵּאמֹֽר׃ | 33 |
ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
דַּבֵּר אֶל־בְּנֵי יִשְׂרָאֵל לֵאמֹר בַּחֲמִשָּׁה עָשָׂר יוֹם לַחֹדֶשׁ הַשְּׁבִיעִי הַזֶּה חַג הַסֻּכּוֹת שִׁבְעַת יָמִים לַיהֹוָֽה׃ | 34 |
“ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳವರೆಗೆ ಯೆಹೋವ ದೇವರಿಗೆ ಗುಡಾರಗಳ ಹಬ್ಬವಾಗಿರುವುದು.
בַּיּוֹם הָרִאשׁוֹן מִקְרָא־קֹדֶשׁ כָּל־מְלֶאכֶת עֲבֹדָה לֹא תַעֲשֽׂוּ׃ | 35 |
ಮೊದಲನೆಯ ದಿವಸದಲ್ಲಿ ಪರಿಶುದ್ಧ ಸಭೆಯ ಕೂಟವಿರುವುದು. ನೀವು ಅದರಲ್ಲಿ ಕಷ್ಟಕರವಾದ ಕೆಲಸಗಳನ್ನು ಮಾಡಬಾರದು.
שִׁבְעַת יָמִים תַּקְרִיבוּ אִשֶּׁה לַיהוָה בַּיּוֹם הַשְּׁמִינִי מִקְרָא־קֹדֶשׁ יִהְיֶה לָכֶם וְהִקְרַבְתֶּם אִשֶּׁה לַֽיהוָה עֲצֶרֶת הִוא כָּל־מְלֶאכֶת עֲבֹדָה לֹא תַעֲשֽׂוּ׃ | 36 |
ಏಳು ದಿವಸ ನೀವು ಬೆಂಕಿಯ ಮೂಲಕ ಬಲಿಗಳನ್ನು ಯೆಹೋವ ದೇವರಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿಶುದ್ಧ ಕೂಟವಾಗಿರುವುದು. ನೀವು ಬೆಂಕಿಯ ಮೂಲಕ ಬಲಿಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು. ಅದೊಂದು ಗಂಭೀರ ಸಭೆಯಾಗಿರುವುದು. ಅದರಲ್ಲಿ ನೀವು ಕಷ್ಟಕರವಾದ ಕೆಲಸಗಳನ್ನು ಮಾಡಬಾರದು.
אֵלֶּה מוֹעֲדֵי יְהוָה אֲשֶׁר־תִּקְרְאוּ אֹתָם מִקְרָאֵי קֹדֶשׁ לְהַקְרִיב אִשֶּׁה לַיהוָה עֹלָה וּמִנְחָה זֶבַח וּנְסָכִים דְּבַר־יוֹם בְּיוֹמֽוֹ׃ | 37 |
“‘ನೀವು ಪರಿಶುದ್ಧ ಸಭೆಯಾಗಿ ಯೆಹೋವ ದೇವರ ನೇಮಕವಾದ ಹಬ್ಬಗಳು ಇವೇ. ಇವುಗಳ ಒಂದೊಂದು ದಿವಸದಲ್ಲಿ ಯೆಹೋವ ದೇವರಿಗೆ ದಹನಬಲಿಯನ್ನೂ, ಧಾನ್ಯ ಸಮರ್ಪಣೆಯನ್ನೂ, ಯಜ್ಞವನ್ನೂ, ಪಾನದ್ರವ್ಯ ಬಲಿಗಳನ್ನೂ ಅರ್ಪಿಸಬೇಕು.
מִלְּבַד שַׁבְּתֹת יְהוָה וּמִלְּבַד מַתְּנֽוֹתֵיכֶם וּמִלְּבַד כָּל־נִדְרֵיכֶם וּמִלְּבַד כָּל־נִדְבוֹתֵיכֶם אֲשֶׁר תִּתְּנוּ לַיהוָֽה׃ | 38 |
ಯೆಹೋವ ದೇವರ ವಿಶ್ರಾಂತಿಯ ದಿನಗಳ ಹೊರತಾಗಿಯೂ, ನೀವು ಯೆಹೋವ ದೇವರಿಗೆ ಸಮರ್ಪಿಸುವ ನಿಮ್ಮ ದಾನಗಳ ಹೊರತಾಗಿಯೂ, ನಿಮ್ಮ ಎಲ್ಲಾ ಹರಕೆಗಳ ಹೊರತಾಗಿಯೂ, ನಿಮ್ಮ ಎಲ್ಲಾ ಸ್ವಯಿಚ್ಛೆಯ ಕಾಣಿಕೆಗಳ ಹೊರತಾಗಿಯೂ ಸಲ್ಲಿಸಬೇಕಾದ ಅರ್ಪಣೆಗಳಿರುತ್ತವೆ.
אַךְ בַּחֲמִשָּׁה עָשָׂר יוֹם לַחֹדֶשׁ הַשְּׁבִיעִי בְּאָסְפְּכֶם אֶת־תְּבוּאַת הָאָרֶץ תָּחֹגּוּ אֶת־חַג־יְהוָה שִׁבְעַת יָמִים בַּיּוֹם הָֽרִאשׁוֹן שַׁבָּתוֹן וּבַיּוֹם הַשְּׁמִינִי שַׁבָּתֽוֹן׃ | 39 |
“‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಭೂಮಿಯ ಫಲವನ್ನು ಕೂಡಿಸಿದಾಗ, ಯೆಹೋವ ದೇವರಿಗೆ ಏಳು ದಿವಸಗಳ ಹಬ್ಬವನ್ನು ಕೈಗೊಳ್ಳಬೇಕು. ಮೊದಲನೆಯ ದಿನವು ಸಬ್ಬತ್ ದಿನವಾಗಿರಬೇಕು ಮತ್ತು ಎಂಟನೆಯ ದಿನವು ಸಬ್ಬತ್ ದಿನವಾಗಿರಬೇಕು.
וּלְקַחְתֶּם לָכֶם בַּיּוֹם הָרִאשׁוֹן פְּרִי עֵץ הָדָר כַּפֹּת תְּמָרִים וַעֲנַף עֵץ־עָבֹת וְעַרְבֵי־נָחַל וּשְׂמַחְתֶּם לִפְנֵי יְהוָה אֱלֹהֵיכֶם שִׁבְעַת יָמִֽים׃ | 40 |
ಮೊದಲನೆಯ ದಿವಸದಲ್ಲಿ ನೀವು ಸುಂದರವಾದ ಮರಗಳ ರೆಂಬೆಗಳನ್ನೂ, ಖರ್ಜೂರ ಮರಗಳ ರೆಂಬೆಗಳನ್ನೂ, ದಟ್ಟವಾದ ಮರಗಳ ರೆಂಬೆಗಳನ್ನೂ, ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳವರೆಗೆ ನಿಮ್ಮ ದೇವರಾಗಿರುವ ಯೆಹೋವ ದೇವರ ಎದುರಿನಲ್ಲಿ ಸಂತೋಷ ಪಡಬೇಕು.
וְחַגֹּתֶם אֹתוֹ חַג לַֽיהוָה שִׁבְעַת יָמִים בַּשָּׁנָה חֻקַּת עוֹלָם לְדֹרֹתֵיכֶם בַּחֹדֶשׁ הַשְּׁבִיעִי תָּחֹגּוּ אֹתֽוֹ׃ | 41 |
ವರ್ಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಯೆಹೋವ ದೇವರಿಗಾಗಿ ಕೈಗೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು. ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು.
בַּסֻּכֹּת תֵּשְׁבוּ שִׁבְעַת יָמִים כָּל־הָֽאֶזְרָח בְּיִשְׂרָאֵל יֵשְׁבוּ בַּסֻּכֹּֽת׃ | 42 |
ಏಳು ದಿವಸಗಳವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು. ಸ್ವದೇಶೀಯರಾದ ಇಸ್ರಾಯೇಲರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸಬೇಕು.
לְמַעַן יֵדְעוּ דֹרֹֽתֵיכֶם כִּי בַסֻּכּוֹת הוֹשַׁבְתִּי אֶת־בְּנֵי יִשְׂרָאֵל בְּהוֹצִיאִי אוֹתָם מֵאֶרֶץ מִצְרָיִם אֲנִי יְהוָה אֱלֹהֵיכֶֽם׃ | 43 |
ಏಕೆಂದರೆ ನಾನು ಇಸ್ರಾಯೇಲರನ್ನು ಈಜಿಪ್ಟ್ ದೇಶದೊಳಗಿನಿಂದ ಹೊರಗೆ ಬರಮಾಡಿದಾಗ, ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’”
וַיְדַבֵּר מֹשֶׁה אֶת־מֹעֲדֵי יְהוָה אֶל־בְּנֵי יִשְׂרָאֵֽל׃ | 44 |
ಹೀಗೆ ಮೋಶೆಯು ಇಸ್ರಾಯೇಲರಿಗೆ ಯೆಹೋವ ದೇವರ ಹಬ್ಬಗಳನ್ನು ನೇಮಕಮಾಡಿದನು.