< ויקרא 26 >
לֹֽא־תַעֲשׂוּ לָכֶם אֱלִילִם וּפֶסֶל וּמַצֵּבָה לֹֽא־תָקִימוּ לָכֶם וְאֶבֶן מַשְׂכִּית לֹא תִתְּנוּ בְּאַרְצְכֶם לְהִֽשְׁתַּחֲוֺת עָלֶיהָ כִּי אֲנִי יְהוָה אֱלֹהֵיכֶֽם׃ | 1 |
“‘ನೀವು ನಿಮಗಾಗಿ ವಿಗ್ರಹಗಳನ್ನಾಗಲಿ, ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ, ಇಲ್ಲವೆ ನಿಲ್ಲಿಸುವ ಪ್ರತಿಮೆಯನ್ನು ಮಾಡಿಕೊಳ್ಳಬೇಡಿರಿ, ಕಲ್ಲಿನ ವಿಗ್ರಹಗಳನ್ನು ನಿಮ್ಮ ದೇಶದಲ್ಲಿಟ್ಟುಕೊಂಡು ಅದಕ್ಕೆ ಅಡ್ಡಬೀಳಬೇಡಿರಿ. ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
אֶת־שַׁבְּתֹתַי תִּשְׁמֹרוּ וּמִקְדָּשִׁי תִּירָאוּ אֲנִי יְהוָֽה׃ | 2 |
“‘ನನ್ನ ವಿಶ್ರಾಂತಿಯ ದಿನಗಳನ್ನು ನೀವು ಆಚರಿಸಬೇಕು. ನನ್ನ ಪರಿಶುದ್ಧಸ್ಥಳದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನೇ ಯೆಹೋವ ದೇವರು.
אִם־בְּחֻקֹּתַי תֵּלֵכוּ וְאֶת־מִצְוֺתַי תִּשְׁמְרוּ וַעֲשִׂיתֶם אֹתָֽם׃ | 3 |
“‘ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು, ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳಂತೆ ನಡೆದರೆ,
וְנָתַתִּי גִשְׁמֵיכֶם בְּעִתָּם וְנָתְנָה הָאָרֶץ יְבוּלָהּ וְעֵץ הַשָּׂדֶה יִתֵּן פִּרְיֽוֹ׃ | 4 |
ನಿಮಗೆ ಮಳೆಯನ್ನು ತಕ್ಕ ಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವುದು. ಭೂಮಿಯ ಮರಗಳು ಅವುಗಳ ಫಲವನ್ನು ಕೊಡುವವು.
וְהִשִּׂיג לָכֶם דַּיִשׁ אֶת־בָּצִיר וּבָצִיר יַשִּׂיג אֶת־זָרַע וַאֲכַלְתֶּם לַחְמְכֶם לָשֹׂבַע וִֽישַׁבְתֶּם לָבֶטַח בְּאַרְצְכֶֽם׃ | 5 |
ಕಣ ತುಳಿಸುವ ಕೆಲಸವು ದ್ರಾಕ್ಷಿ ಬೆಳೆಯುವವರೆಗೂ ದ್ರಾಕ್ಷಿ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿಯನ್ನು ತಿಂದು, ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.
וְנָתַתִּי שָׁלוֹם בָּאָרֶץ וּשְׁכַבְתֶּם וְאֵין מַחֲרִיד וְהִשְׁבַּתִּי חַיָּה רָעָה מִן־הָאָרֶץ וְחֶרֶב לֹא־תַעֲבֹר בְּאַרְצְכֶֽם׃ | 6 |
“‘ನಾನು ದೇಶದಲ್ಲಿ ಶಾಂತಿಯನ್ನು ಕೊಡುವೆನು, ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ. ದೇಶದಲ್ಲಿ ದುಷ್ಟಮೃಗಗಳು ಇಲ್ಲದ ಹಾಗೆ ನಾನು ಮಾಡುವೆನು. ಖಡ್ಗ ನಿಮ್ಮ ದೇಶದಲ್ಲಿ ಹಾದು ಹೋಗುವುದಿಲ್ಲ.
וּרְדַפְתֶּם אֶת־אֹיְבֵיכֶם וְנָפְלוּ לִפְנֵיכֶם לֶחָֽרֶב | 7 |
ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ, ಅವರು ಖಡ್ಗದಿಂದ ನಿಮ್ಮ ಮುಂದೆ ಬೀಳುವರು.
וְרָדְפוּ מִכֶּם חֲמִשָּׁה מֵאָה וּמֵאָה מִכֶּם רְבָבָה יִרְדֹּפוּ וְנָפְלוּ אֹיְבֵיכֶם לִפְנֵיכֶם לֶחָֽרֶב׃ | 8 |
ನಿಮ್ಮಲ್ಲಿಯ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿಯ ನೂರು ಮಂದಿ, ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ಖಡ್ಗದಿಂದ ನಿಮ್ಮ ಮುಂದೆ ಬೀಳುವರು.
וּפָנִיתִי אֲלֵיכֶם וְהִפְרֵיתִי אֶתְכֶם וְהִרְבֵּיתִי אֶתְכֶם וַהֲקִימֹתִי אֶת־בְּרִיתִי אִתְּכֶֽם׃ | 9 |
“‘ನಾನು ನಿಮ್ಮನ್ನು ಲಕ್ಷಿಸಿ, ನಿಮ್ಮನ್ನು ಅಭಿವೃದ್ಧಿ ಮಾಡಿ, ನಿಮ್ಮನ್ನು ಹೆಚ್ಚಿಸಿ, ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು.
וַאֲכַלְתֶּם יָשָׁן נוֹשָׁן וְיָשָׁן מִפְּנֵי חָדָשׁ תּוֹצִֽיאוּ׃ | 10 |
ನೀವು ಹಳೆಯ ಧಾನ್ಯವನ್ನು ತಿಂದು, ಹೊಸದು ಬಂದಾಗ ಹಳೆಯದನ್ನು ಹೊರಗೆ ತರುವಿರಿ.
וְנָתַתִּי מִשְׁכָּנִי בְּתוֹכְכֶם וְלֹֽא־תִגְעַל נַפְשִׁי אֶתְכֶֽם׃ | 11 |
ಇದಲ್ಲದೆ ನಾನು ನನ್ನ ಗುಡಾರವನ್ನು ನಿಮ್ಮ ಮಧ್ಯದಲ್ಲಿ ಮಾಡಿಕೊಳ್ಳುವೆನು. ನನ್ನ ಪ್ರಾಣವು ನಿಮ್ಮನ್ನು ತಿರಸ್ಕರಿಸುವುದಿಲ್ಲ.
וְהִתְהַלַּכְתִּי בְּתוֹכְכֶם וְהָיִיתִי לָכֶם לֵֽאלֹהִים וְאַתֶּם תִּהְיוּ־לִי לְעָֽם׃ | 12 |
ನಾನು ನಿಮ್ಮ ಮಧ್ಯದಲ್ಲಿ ನಡೆದು ನಿಮ್ಮ ದೇವರಾಗಿರುವೆನು. ನೀವು ನನ್ನ ಜನರಾಗಿರುವಿರಿ.
אֲנִי יְהוָה אֱלֹֽהֵיכֶם אֲשֶׁר הוֹצֵאתִי אֶתְכֶם מֵאֶרֶץ מִצְרַיִם מִֽהְיֹת לָהֶם עֲבָדִים וָאֶשְׁבֹּר מֹטֹת עֻלְּכֶם וָאוֹלֵךְ אֶתְכֶם קֽוֹמְמִיּֽוּת׃ | 13 |
ಈಜಿಪ್ಟ್ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ನಿಮ್ಮ ನೊಗದ ಕಟ್ಟುಗಳನ್ನು ಮುರಿದು, ನಿಮ್ಮನ್ನು ತಲೆಯೆತ್ತಿ ನಡೆಯುವಂತೆ ಮಾಡಿದ ನಿಮ್ಮ ದೇವರಾದ ಯೆಹೋವ ದೇವರು ನಾನೇ.
וְאִם־לֹא תִשְׁמְעוּ לִי וְלֹא תַעֲשׂוּ אֵת כָּל־הַמִּצְוֺת הָאֵֽלֶּה׃ | 14 |
“‘ನೀವು ನನ್ನ ಮಾತನ್ನು ಕೇಳದೆ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ,
וְאִם־בְּחֻקֹּתַי תִּמְאָסוּ וְאִם אֶת־מִשְׁפָּטַי תִּגְעַל נַפְשְׁכֶם לְבִלְתִּי עֲשׂוֹת אֶת־כָּל־מִצְוֺתַי לְהַפְרְכֶם אֶת־בְּרִיתִֽי׃ | 15 |
ನನ್ನ ನಿಯಮಗಳನ್ನು ನೀವು ತಿರಸ್ಕರಿಸಿದರೆ, ನನ್ನ ನಿರ್ಣಯಗಳಿಗೆ ಅಸಹ್ಯಪಟ್ಟರೆ, ನೀವು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ,
אַף־אֲנִי אֽ͏ֶעֱשֶׂה־זֹּאת לָכֶם וְהִפְקַדְתִּי עֲלֵיכֶם בֶּֽהָלָה אֶת־הַשַּׁחֶפֶת וְאֶת־הַקַּדַּחַת מְכַלּוֹת עֵינַיִם וּמְדִיבֹת נָפֶשׁ וּזְרַעְתֶּם לָרִיק זַרְעֲכֶם וַאֲכָלֻהוּ אֹיְבֵיכֶֽם׃ | 16 |
ನಾನು ಸಹ ಇದನ್ನು ನಿಮಗೆ ಮಾಡುವೆನು: ನಿಮ್ಮ ಮೇಲೆ ಭೀತಿಯನ್ನು ಉಂಟುಮಾಡುವ, ಕಣ್ಣುಗಳನ್ನು ಕ್ಷೀಣಿಸುವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗುವಂತೆಯೂ ಮಾಡುವ ಕ್ಷಯರೋಗವನ್ನೂ ಚಳಿಜ್ವರವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ಬೀಜವನ್ನು ಬಿತ್ತುವಿರಿ. ಏಕೆಂದರೆ ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.
וְנָתַתִּי פָנַי בָּכֶם וְנִגַּפְתֶּם לִפְנֵי אֹיְבֵיכֶם וְרָדוּ בָכֶם שֹֽׂנְאֵיכֶם וְנַסְתֶּם וְאֵין־רֹדֵף אֶתְכֶֽם׃ | 17 |
ನಾನು ನಿಮಗೆ ವಿಮುಖನಾಗಿರುವೆನು. ಆದ್ದರಿಂದ ನೀವು ನಿಮ್ಮ ವೈರಿಗಳಿಂದ ಸೋತುಹೋಗುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗಲೂ ಓಡಿಹೋಗುವಿರಿ.
וְאִם־עַד־אֵלֶּה לֹא תִשְׁמְעוּ לִי וְיָסַפְתִּי לְיַסְּרָה אֶתְכֶם שֶׁבַע עַל־חַטֹּאתֵיכֶֽם׃ | 18 |
“‘ಹೀಗೂ ನನ್ನ ಮಾತನ್ನು ಕೇಳದೆ ಹೋದರೆ, ನಾನು ನಿಮ್ಮನ್ನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ಶಿಕ್ಷಿಸುವೆನು.
וְשָׁבַרְתִּי אֶת־גְּאוֹן עֻזְּכֶם וְנָתַתִּי אֶת־שְׁמֵיכֶם כַּבַּרְזֶל וְאֶֽת־אַרְצְכֶם כַּנְּחֻשָֽׁה׃ | 19 |
ನಿಮ್ಮ ಬಲದ ಗರ್ವವನ್ನು ಮುರಿದುಹಾಕಿ, ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಕಂಚಿನಂತೆಯೂ ಮಾಡುವೆನು.
וְתַם לָרִיק כֹּחֲכֶם וְלֹֽא־תִתֵּן אַרְצְכֶם אֶת־יְבוּלָהּ וְעֵץ הָאָרֶץ לֹא יִתֵּן פִּרְיֽוֹ׃ | 20 |
ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದುಹೋಗುವುದು. ಏಕೆಂದರೆ ನಿಮ್ಮ ಭೂಮಿಯು ತನ್ನ ಬೆಳೆಯನ್ನು ಕೊಡದೆ ಇರುವುದು ಭೂಮಿಯ ಮರಗಳು ತಮ್ಮ ಫಲಗಳನ್ನು ಕೊಡುವುದಿಲ್ಲ.
וְאִם־תֵּֽלְכוּ עִמִּי קֶרִי וְלֹא תֹאבוּ לִשְׁמֹעַֽ לִי וְיָסַפְתִּי עֲלֵיכֶם מַכָּה שֶׁבַע כְּחַטֹּאתֵיכֶֽם׃ | 21 |
“‘ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ, ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ಬಾಧಿಸುವೆನು.
וְהִשְׁלַחְתִּי בָכֶם אֶת־חַיַּת הַשָּׂדֶה וְשִׁכְּלָה אֶתְכֶם וְהִכְרִיתָה אֶת־בְּהֶמְתְּכֶם וְהִמְעִיטָה אֶתְכֶם וְנָשַׁמּוּ דַּרְכֵיכֶֽם׃ | 22 |
ಕಾಡುಮೃಗಗಳು ನಿಮ್ಮ ಮೇಲೆ ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದವರನ್ನಾಗಿ ಮಾಡಿ, ನಿಮ್ಮ ದನಗಳನ್ನು ತಿಂದುಬಿಡುವವು. ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವುವು. ನಿಮ್ಮ ಮಾರ್ಗಗಳು ಹಾಳಾಗಿ ಹೋಗುವುವು.
וְאִם־בְּאֵלֶּה לֹא תִוָּסְרוּ לִי וַהֲלַכְתֶּם עִמִּי קֶֽרִי׃ | 23 |
“‘ನನ್ನಿಂದಾಗುವ ಇವುಗಳಿಂದ ನೀವು ಶಿಕ್ಷಿತರಾಗದೆ ನನಗೆ ವಿರೋಧವಾಗಿ ನಡೆದರೆ,
וְהָלַכְתִּי אַף־אֲנִי עִמָּכֶם בְּקֶרִי וְהִכֵּיתִי אֶתְכֶם גַּם־אָנִי שֶׁבַע עַל־חַטֹּאתֵיכֶֽם׃ | 24 |
ನಾನು ಸಹ ನಿಮಗೆ ವಿರೋಧವಾಗಿ ನಡೆದು, ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ, ಏಳರಷ್ಟು ಶಿಕ್ಷಿಸುವೆನು.
וְהֵבֵאתִי עֲלֵיכֶם חֶרֶב נֹקֶמֶת נְקַם־בְּרִית וְנֶאֱסַפְתֶּם אֶל־עָרֵיכֶם וְשִׁלַּחְתִּי דֶבֶר בְּתוֹכְכֶם וְנִתַּתֶּם בְּיַד־אוֹיֵֽב׃ | 25 |
ಒಡಂಬಡಿಕೆಯನ್ನು ಮುರಿದದ್ದಕ್ಕಾಗಿ, ಮುಯ್ಯಿಗೆ ಮುಯ್ಯಿ ತೀರಿಸುವ ಖಡ್ಗವನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಸೇರಿದಾಗ, ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನಿಮ್ಮನ್ನು ಶತ್ರುವಿನ ಕೈಗೆ ಒಪ್ಪಿಸಲಾಗುವುದು.
בְּשִׁבְרִי לָכֶם מַטֵּה־לֶחֶם וְאָפוּ עֶשֶׂר נָשִׁים לַחְמְכֶם בְּתַנּוּר אֶחָד וְהֵשִׁיבוּ לַחְמְכֶם בַּמִּשְׁקָל וַאֲכַלְתֶּם וְלֹא תִשְׂבָּֽעוּ׃ | 26 |
ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿದಾಗ, ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು, ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ, ನಿಮಗೆ ತೃಪ್ತಿಯಾಗುವುದಿಲ್ಲ.
וְאִם־בְּזֹאת לֹא תִשְׁמְעוּ לִי וַהֲלַכְתֶּם עִמִּי בְּקֶֽרִי׃ | 27 |
“‘ಇದೆಲ್ಲಾ ಆದರೂ, ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ,
וְהָלַכְתִּי עִמָּכֶם בַּחֲמַת־קֶרִי וְיִסַּרְתִּי אֶתְכֶם אַף־אָנִי שֶׁבַע עַל־חַטֹּאתֵיכֶם׃ | 28 |
ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು, ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.
וַאֲכַלְתֶּם בְּשַׂר בְּנֵיכֶם וּבְשַׂר בְּנֹתֵיכֶם תֹּאכֵֽלוּ׃ | 29 |
ನೀವು ನಿಮ್ಮ ಪುತ್ರಪುತ್ರಿಯರ ಮಾಂಸವನ್ನು ತಿನ್ನುವಿರಿ.
וְהִשְׁמַדְתִּי אֶת־בָּמֹֽתֵיכֶם וְהִכְרַתִּי אֶת־חַמָּנֵיכֶם וְנָֽתַתִּי אֶת־פִּגְרֵיכֶם עַל־פִּגְרֵי גִּלּוּלֵיכֶם וְגָעֲלָה נַפְשִׁי אֶתְכֶֽם׃ | 30 |
ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಧೂಪವೇದಿಗಳನ್ನು ಕಡಿದುಹಾಕಿ, ನಿಮ್ಮ ಹೆಣಗಳನ್ನು ನಿಮ್ಮ ವಿಗ್ರಹಗಳ ಮೇಲೆ ಹಾಕುವೆನು. ನಿಮ್ಮ ಬಗ್ಗೆ ನಾನು ಅಸಹ್ಯಪಡುವೆನು.
וְנָתַתִּי אֶת־עָֽרֵיכֶם חָרְבָּה וַהֲשִׁמּוֹתִי אֶת־מִקְדְּשֵׁיכֶם וְלֹא אָרִיחַ בְּרֵיחַ נִיחֹֽחֲכֶֽם׃ | 31 |
ನಿಮ್ಮ ಪಟ್ಟಣಗಳನ್ನು ನಾನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಸುವಾಸನೆಗಳನ್ನು ಮೂಸಿ ನೋಡದೆ ಇರುವೆನು.
וַהֲשִׁמֹּתִי אֲנִי אֶת־הָאָרֶץ וְשָֽׁמְמוּ עָלֶיהָ אֹֽיְבֵיכֶם הַיֹּשְׁבִים בָּֽהּ׃ | 32 |
ನಾನು ದೇಶವನ್ನು ಹಾಳುಮಾಡುವೆನು. ಅದರಲ್ಲಿ ವಾಸವಾಗುವ ನಿಮ್ಮ ಶತ್ರುಗಳೂ ಅದಕ್ಕೆ ಆಶ್ಚರ್ಯಪಡುವರು.
וְאֶתְכֶם אֱזָרֶה בַגּוֹיִם וַהֲרִיקֹתִי אַחֲרֵיכֶם חָרֶב וְהָיְתָה אַרְצְכֶם שְׁמָמָה וְעָרֵיכֶם יִהְיוּ חָרְבָּֽה׃ | 33 |
ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ನಿಮ್ಮ ಹಿಂದೆ ಖಡ್ಗವನ್ನು ಬೀಸುವೆನು. ನಿಮ್ಮ ಭೂಮಿ ಹಾಳಾಗಿರುವುದು, ನಿಮ್ಮ ಪಟ್ಟಣಗಳು ನಾಶವಾಗಿರುವುವು.
אָז תִּרְצֶה הָאָרֶץ אֶת־שַׁבְּתֹתֶיהָ כֹּל יְמֵי הֳשַׁמָּה וְאַתֶּם בְּאֶרֶץ אֹיְבֵיכֶם אָז תִּשְׁבַּת הָאָרֶץ וְהִרְצָת אֶת־שַׁבְּתֹתֶֽיהָ׃ | 34 |
ಆಗ ನಾಡು ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವವರೆಗೂ, ನಾಡು ತನ್ನ ಸಬ್ಬತ್ ಕಾಲವನ್ನು ಅನುಭವಿಸುವುದು. ಆಗ ನೆಲವು ವಿಶ್ರಮಿಸಿಕೊಂಡು ತನ್ನ ವಿಶ್ರಾಂತಿಯ ಕಾಲವನ್ನು ಅನುಭವಿಸುವುದು.
כָּל־יְמֵי הָשַׁמָּה תִּשְׁבֹּת אֵת אֲשֶׁר לֹֽא־שָׁבְתָה בְּשַׁבְּתֹתֵיכֶם בְּשִׁבְתְּכֶם עָלֶֽיהָ׃ | 35 |
ನೀವು ನಿಮ್ಮ ಶತ್ರುಗಳ ದೇಶದಲ್ಲಿ ವಾಸವಾಗಿದ್ದಾಗ, ಹಾಳುಬಿದ್ದ ನಿಮ್ಮ ನಾಡು ತಾನು ಹೊಂದದ ವಿಶ್ರಾಂತಿಯನ್ನು ಈಗ ಸುದೀರ್ಘವಾಗಿ ಹೊಂದಿಕೊಳ್ಳುವುದು.
וְהַנִּשְׁאָרִים בָּכֶם וְהֵבֵאתִי מֹרֶךְ בִּלְבָבָם בְּאַרְצֹת אֹיְבֵיהֶם וְרָדַף אֹתָם קוֹל עָלֶה נִדָּף וְנָסוּ מְנֻֽסַת־חֶרֶב וְנָפְלוּ וְאֵין רֹדֵֽף׃ | 36 |
“‘ನಿಮ್ಮಲ್ಲಿ ಯಾರು ಉಳಿದು ಶತ್ರುಗಳ ದೇಶದಲ್ಲಿ ಇರುವರೋ, ಅವರ ಹೃದಯದಲ್ಲಿ ಭೀತಿಯನ್ನು ಹುಟ್ಟಿಸುವೆನು. ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವುದು. ಖಡ್ಗಕ್ಕೆ ಓಡಿ ಹೋದ ಹಾಗೆ ಓಡಿಹೋಗುವರು.
וְכָשְׁלוּ אִישׁ־בְּאָחִיו כְּמִפְּנֵי־חֶרֶב וְרֹדֵף אָיִן וְלֹא־תִֽהְיֶה לָכֶם תְּקוּמָה לִפְנֵי אֹֽיְבֵיכֶֽם׃ | 37 |
ಓಡಿಸುವವನಿಲ್ಲದೆ ಒಬ್ಬರ ಮೇಲೊಬ್ಬರು ಖಡ್ಗದ ಭಯದಿಂದಾದ ಹಾಗೆ ಬೀಳುವರು. ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವುದು ನಿಮ್ಮಿಂದಾಗದು.
וַאֲבַדְתֶּם בַּגּוֹיִם וְאָכְלָה אֶתְכֶם אֶרֶץ אֹיְבֵיכֶֽם׃ | 38 |
ಜನಾಂಗಗಳೊಳಗೆ ನಾಶವಾಗುವಿರಿ. ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವುದು.
וְהַנִּשְׁאָרִים בָּכֶם יִמַּקּוּ בּֽ͏ַעֲוֺנָם בְּאַרְצֹת אֹיְבֵיכֶם וְאַף בַּעֲוֺנֹת אֲבֹתָם אִתָּם יִמָּֽקּוּ׃ | 39 |
ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು, ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು.
וְהִתְוַדּוּ אֶת־עֲוֺנָם וְאֶת־עֲוֺן אֲבֹתָם בְּמַעֲלָם אֲשֶׁר מָֽעֲלוּ־בִי וְאַף אֲשֶׁר־הֽ͏ָלְכוּ עִמִּי בְּקֶֽרִי׃ | 40 |
“‘ಆದರೆ ಅವರು ನನಗೆ ಮಾಡಿದ ತಮ್ಮ ದುಷ್ಕೃತ್ಯದಲ್ಲಿರುವ ತಮ್ಮ ಅಕ್ರಮವನ್ನೂ, ತಮ್ಮ ಪಿತೃಗಳ ಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದುಕೊಂಡದ್ದನ್ನೂ,
אַף־אֲנִי אֵלֵךְ עִמָּם בְּקֶרִי וְהֵבֵאתִי אֹתָם בְּאֶרֶץ אֹיְבֵיהֶם אוֹ־אָז יִכָּנַע לְבָבָם הֶֽעָרֵל וְאָז יִרְצוּ אֶת־עֲוֺנָֽם׃ | 41 |
ನಾನು ಸಹ ಅವರಿಗೆ ವಿರೋಧವಾಗಿ ನಡೆದುಕೊಂಡು ಅವರನ್ನು ತಮ್ಮ ಶತ್ರುಗಳ ದೇಶದಲ್ಲಿ ಬರಮಾಡಿದ್ದನ್ನೂ ಅರಿಕೆಮಾಡಿದರೆ, ಆಗಲೇ ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆಬಾಗಿ, ಅವರು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಒಪ್ಪಿಕೊಳ್ಳುವುದಾದರೆ,
וְזָכַרְתִּי אֶת־בְּרִיתִי יַעֲקוֹב וְאַף אֶת־בְּרִיתִי יִצְחָק וְאַף אֶת־בְּרִיתִי אַבְרָהָם אֶזְכֹּר וְהָאָרֶץ אֶזְכֹּֽר׃ | 42 |
ನಾನು ಯಾಕೋಬನಿಗೆ, ಇಸಾಕನಿಗೆ ಮತ್ತು ಅಬ್ರಹಾಮನಿಗೆ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ದೇಶವನ್ನು ದಯೆಯಿಂದ ನೆನಪಿಸಿಕೊಳ್ಳುವೆನು.
וְהָאָרֶץ תֵּעָזֵב מֵהֶם וְתִרֶץ אֶת־שַׁבְּתֹתֶיהָ בָּהְּשַׁמָּה מֵהֶם וְהֵם יִרְצוּ אֶת־עֲוֺנָם יַעַן וּבְיַעַן בְּמִשְׁפָּטַי מָאָסוּ וְאֶת־חֻקֹּתַי גָּעֲלָה נַפְשָֽׁם׃ | 43 |
ಅವರು ಬಿಟ್ಟುಹೋದ ಸ್ವದೇಶವು ಯಾರೂ ಇಲ್ಲದೆ ಹಾಳಾದ ವೇಳೆಯಲ್ಲಿ ತನ್ನ ವಿಶ್ರಾಂತಿಯನ್ನು ಅನುಭವಿಸುವುದು. ಆದರೆ ಅವರು ತಮ್ಮ ಪಾಪಗಳಿಗಾಗಿ ಶಿಕ್ಷೆಯನ್ನು ಅನುಭವಿಸುವರು. ಅದು ಏಕೆಂದರೆ, ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ತಾತ್ಸಾರ ಮಾಡಿದ್ದರಿಂದಲೇ.
וְאַף־גַּם־זֹאת בִּֽהְיוֹתָם בְּאֶרֶץ אֹֽיְבֵיהֶם לֹֽא־מְאַסְתִּים וְלֹֽא־גְעַלְתִּים לְכַלֹּתָם לְהָפֵר בְּרִיתִי אִתָּם כִּי אֲנִי יְהוָה אֱלֹהֵיהֶֽם׃ | 44 |
ಆದರೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ಧಿಕ್ಕರಿಸದೆ, ಅವರನ್ನು ಅಸಹ್ಯಪಡದೆ, ಅವರನ್ನು ಸಂಪೂರ್ಣವಾಗಿ ನಾಶಮಾಡದೆಯೂ, ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು. ಏಕೆಂದರೆ ಅವರ ದೇವರಾಗಿರುವ ಯೆಹೋವ ದೇವರು ನಾನೇ.
וְזָכַרְתִּי לָהֶם בְּרִית רִאשֹׁנִים אֲשֶׁר הוֹצֵֽאתִי־אֹתָם מֵאֶרֶץ מִצְרַיִם לְעֵינֵי הַגּוֹיִם לִהְיֹת לָהֶם לֵאלֹהִים אֲנִי יְהוָֽה׃ | 45 |
ನಾನು ಅವರ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು, ಅವರಿಗೆ ಹಿತವನ್ನೇ ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದೇ, ಅವರ ಪಿತೃಗಳನ್ನು ಎಲ್ಲಾ ಜನಾಂಗಗಳ ಮುಂದೆ ಈಜಿಪ್ಟಿನಿಂದ ಬರಮಾಡಿದೆನು. ನಾನೇ ಯೆಹೋವ ದೇವರು.’”
אֵלֶּה הַֽחֻקִּים וְהַמִּשְׁפָּטִים וְהַתּוֹרֹת אֲשֶׁר נָתַן יְהוָה בֵּינוֹ וּבֵין בְּנֵי יִשְׂרָאֵל בְּהַר סִינַי בְּיַד־מֹשֶֽׁה׃ | 46 |
ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ, ಇಸ್ರಾಯೇಲರಿಗೂ ಮಧ್ಯದಲ್ಲಿ ಇಟ್ಟ ನಿಯಮಗಳೂ, ನ್ಯಾಯಗಳೂ, ಆಜ್ಞಾವಿಧಿಗಳೂ ಇವೇ.