< נחום 2 >
עָלָה מֵפִיץ עַל־פָּנַיִךְ נָצוֹר מְצֻרָה צַפֵּה־דֶרֶךְ חַזֵּק מָתְנַיִם אַמֵּץ כֹּחַ מְאֹֽד׃ | 1 |
೧ನಿನವೆಯೇ, ನಿನ್ನನ್ನು ಚದರಿಸುವವನು ನಿನಗೆ ಮುಖಾಮುಖಿಯಾಗಿ ಬಂದಿದ್ದಾನೆ; ಪೌಳಿಗೋಡೆಯನ್ನು ರಕ್ಷಿಸಲು ಸಿದ್ಧನಾಗು. ದಾರಿಯ ಮೇಲೆ ಕಣ್ಣಿಡು, ನಿನ್ನ ಸೊಂಟವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಚೆನ್ನಾಗಿ ದೃಢಮಾಡಿಕೋ.
כִּי שָׁב יְהוָה אֶת־גְּאוֹן יַעֲקֹב כִּגְאוֹן יִשְׂרָאֵל כִּי בְקָקוּם בֹּֽקְקִים וּזְמֹרֵיהֶם שִׁחֵֽתוּ׃ | 2 |
೨ಆಹಾ, ಯೆಹೋವನು ಯಾಕೋಬಿನ ಅತಿಶಯವನ್ನು, ಇಸ್ರಾಯೇಲಿನ ಅತಿಶಯದಂತೆ ಪುನರುಜ್ಜೀವನಗೋಳಿಸುವನು; ಕೊಳ್ಳೆಹೊಡೆಯುವವರು ಆ ಅತಿಶಯವನ್ನು ಸೂರೆಗೈದು ಅವುಗಳ ದ್ರಾಕ್ಷಾಲತೆಗಳನ್ನು ಹಾಳುಮಾಡಿದ್ದಾರೆ.
מָגֵן גִּבֹּרֵיהוּ מְאָדָּם אַנְשֵׁי־חַיִל מְתֻלָּעִים בְּאֵשׁ־פְּלָדוֹת הָרֶכֶב בְּיוֹם הֲכִינוֹ וְהַבְּרֹשִׁים הָרְעָֽלוּ׃ | 3 |
೩ಶತ್ರುವಿನ ಶೂರರ ಗುರಾಣಿಯು ರಕ್ತವರ್ಣವಾಗಿದೆ, ಪರಾಕ್ರಮಿಗಳ ಉಡುಪುಗಳು ಕಿರಿಮಂಜಿನಂತೆ; ಅವನ ಸಿದ್ಧತೆಯ ದಿನಗಳಲ್ಲಿ ಸೈಪ್ರಸ್ ಮರದದಿಂದ ಮಾಡಿದ ಈಟಿಗಳು ಝಳಪಿಸುತ್ತವೆ ಮತ್ತು ಪಟ್ಟಣದಲ್ಲಿ ಅವರು ನಡೆದು ಹೋಗುವಾಗ ಅವರ ರಥಗಳ ಉಕ್ಕು ಥಳಥಳಿಸುತ್ತದೆ.
בַּֽחוּצוֹת יִתְהוֹלְלוּ הָרֶכֶב יִֽשְׁתַּקְשְׁקוּן בָּרְחֹבוֹת מַרְאֵיהֶן כַּלַּפִּידִם כַּבְּרָקִים יְרוֹצֵֽצוּ׃ | 4 |
೪ಪಟ್ಟಣದ ಹೊರಗೆ ರಥಗಳು ರಭಸದಿಂದ ತಿರುಗಾಡುತ್ತವೆ, ಮೈದಾನಗಳಲ್ಲಿ ಧಡಧಡ ಓಡಾಡುತ್ತವೆ; ಪಂಜುಗಳಂತೆ ಬೆಳಗುತ್ತವೆ, ಮಿಂಚುಗಳ ಹಾಗೆ ಹಾರುತ್ತವೆ.
יִזְכֹּר אַדִּירָיו יִכָּשְׁלוּ בהלכותם בַּהֲלִֽיכָתָם יְמַֽהֲרוּ חֽוֹמָתָהּ וְהֻכַן הַסֹּכֵֽךְ׃ | 5 |
೫ಪಟ್ಟಣದ ಅರಸನು ತನ್ನ ಸರದಾರರನ್ನು ಕರೆಕಳುಹಿಸಿದ್ದಾನೆ; ಅವರು ಓಡಿ ಹೋಗುತ್ತಾ ಮುಗ್ಗರಿಸುತ್ತಾರೆ; ಪೌಳಿಗೋಡೆ ಕಡೆಗೆ ತ್ವರೆಯಾಗಿ ಓಡುತ್ತಾರೆ; ಮರೆಯು ನಿಲ್ಲಿಸಲ್ಪಟ್ಟಿದೆ.
שַׁעֲרֵי הַנְּהָרוֹת נִפְתָּחוּ וְהַֽהֵיכָל נָמֽוֹג׃ | 6 |
೬ನದಿ ದ್ವಾರಗಳು ತೆರೆಯಲ್ಪಟ್ಟಿವೆ; ಅರಮನೆಯ ಗೋಡೆ ಕುಸಿದುಬಿದ್ದಿದೆ.
וְהֻצַּב גֻּלְּתָה הֹֽעֲלָתָה וְאַמְהֹתֶיהָ מְנַֽהֲגוֹת כְּקוֹל יוֹנִים מְתֹפְפֹת עַל־לִבְבֵהֶֽן׃ | 7 |
೭ವಸ್ತ್ರವನ್ನು ಕಿತ್ತು ರಾಣಿಯನ್ನು ಬಯಲಿಗೆ ತರಲು ಆಕೆಯ ಸೇವಕಿಯರು ಎದೆ ಬಡೆದುಕೊಂಡು ಪಾರಿವಾಳಗಳಂತೆ ರೋದಿಸುತ್ತಾರೆ.
וְנִינְוֵה כִבְרֵֽכַת־מַיִם מִימֵי הִיא וְהֵמָּה נָסִים עִמְדוּ עֲמֹדוּ וְאֵין מַפְנֶֽה׃ | 8 |
೮ಪುರಾತನ ಕಾಲದಿಂದ ನಿನವೆ ಪಟ್ಟಣವೂ ಕಟ್ಟೆ ಒಡೆದು ನೀರು ತುಂಬಿದ ಕೆರೆಯಂತೆ ಇದೆ. ಆಹಾ! ಹರಿದು ಓಡುವ ನೀರಿನಂತೆ ಅದರ ನಿವಾಸಿಗಳು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಎಂದು ಅಪ್ಪಣೆಯಾದರೂ ಯಾರೂ ಹಿಂದೆ ನೋಡರು.
בֹּזּוּ כֶסֶף בֹּזּוּ זָהָב וְאֵין קֵצֶה לַתְּכוּנָה כָּבֹד מִכֹּל כְּלִי חֶמְדָּֽה׃ | 9 |
೯ಬೆಳ್ಳಿಯನ್ನು ಸೂರೆಮಾಡಿರಿ, ಬಂಗಾರವನ್ನು ಕೊಳ್ಳೆ ಹೊಡೆಯಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧವಾದ ಶ್ರೇಷ್ಠವಸ್ತುಗಳ ನಿಧಿಗೂ ಮಿತಿಯೇ ಇಲ್ಲ.
בּוּקָה וּמְבוּקָה וּמְבֻלָּקָה וְלֵב נָמֵס וּפִק בִּרְכַּיִם וְחַלְחָלָה בְּכָל־מָתְנַיִם וּפְנֵי כֻלָּם קִבְּצוּ פָארֽוּר׃ | 10 |
೧೦ನಿನವೆಯು ಬರಿದಾಗಿದೆ, ಬಟ್ಟಬರಿದಾಗಿ ಬೀಳುಬಿದ್ದಿದೆ; ಎದೆಯು ಕರಗಿ ನೀರಾಗಿ ಹೋಗಿದೆ, ಮೊಣಕಾಲುಗಳು ಅದರುತ್ತವೆ, ಎಲ್ಲರ ಸೊಂಟಗಳಿಗೂ ವೇದನೆಯಾಗಿದೆ, ಎಲ್ಲರ ಮುಖಗಳೂ ಬಾಡಿವೆ.
אַיֵּה מְעוֹן אֲרָיוֹת וּמִרְעֶה הוּא לַכְּפִרִים אֲשֶׁר הָלַךְ אַרְיֵה לָבִיא שָׁם גּוּר אַרְיֵה וְאֵין מַחֲרִֽיד׃ | 11 |
೧೧ಮೃಗರಾಜರ ಪ್ರಾಯದ ಸಿಂಹಗಳ ಗವಿ ಎಲ್ಲಿ? ಸಿಂಹ, ಸಿಂಹಿಣಿ, ಸಿಂಹದ ಮರಿ ಇವುಗಳು ಯಾರಿಗೂ ಹೆದರದೆ ತಿರುಗುತ್ತಿದ್ದ ಸ್ಥಳವೆಲ್ಲಿ?
אַרְיֵה טֹרֵף בְּדֵי גֹֽרוֹתָיו וּמְחַנֵּק לְלִבְאֹתָיו וַיְמַלֵּא־טֶרֶף חֹרָיו וּמְעֹֽנֹתָיו טְרֵפָֽה׃ | 12 |
೧೨ಅಲ್ಲಿ ಸಿಂಹವು ತನ್ನ ಮರಿಗಳಿಗಾಗಿ ಬೇಕಾದಷ್ಟು ಬೇಟೆಯನ್ನು ಸೀಳುತ್ತಿತ್ತು, ತನ್ನ ಸಿಂಹಿಣಿಗಳಿಗಾಗಿ ಮೃಗಗಳ ಕುತ್ತಿಗೆಯನ್ನು ಸೀಳುತಿತ್ತು; ತನ್ನ ಗವಿಗಳನ್ನು ಬೇಟೆಯಿಂದಲೂ ತನ್ನ ಗುಹೆಯನ್ನು ಕೊಂದ ಮೃಗಗಳಿಂದಲೂ ತುಂಬಿಸಿತು.
הִנְנִי אֵלַיִךְ נְאֻם יְהוָה צְבָאוֹת וְהִבְעַרְתִּי בֶֽעָשָׁן רִכְבָּהּ וּכְפִירַיִךְ תֹּאכַל חָרֶב וְהִכְרַתִּי מֵאֶרֶץ טַרְפֵּךְ וְלֹֽא־יִשָּׁמַע עוֹד קוֹל מַלְאָכֵֽכֵה׃ | 13 |
೧೩ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ! ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ರಥಗಳನ್ನು ಸುಟ್ಟು ಹೊಗೆಹಾಯಿಸುವೆನು, ಕತ್ತಿಯು ನಿನ್ನ ಪ್ರಾಯದ ಸಿಂಹಗಳನ್ನು ಸೀಳಿ ನುಂಗಿ ಬಿಡುವವು; ನಿನಗೆ ಸಿಕ್ಕಿದ ಬೇಟೆಯನ್ನು ಲೋಕದೊಳಗಿಂದ ನಿರ್ಮೂಲಮಾಡುವೆನು; ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸುವುದಿಲ್ಲ.”