< במדבר 25 >
וַיֵּשֶׁב יִשְׂרָאֵל בַּשִּׁטִּים וַיָּחֶל הָעָם לִזְנוֹת אֶל־בְּנוֹת מוֹאָֽב׃ | 1 |
೧ಇಸ್ರಾಯೇಲರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಅವರು ಮೋವಾಬ್ ಸ್ತ್ರೀಯರೊಡನೆ ಸಹವಾಸ ಮಾಡುವವರಾದರು.
וַתִּקְרֶאןָ לָעָם לְזִבְחֵי אֱלֹהֵיהֶן וַיֹּאכַל הָעָם וַיִּֽשְׁתַּחֲוּוּ לֵֽאלֹהֵיהֶֽן׃ | 2 |
೨ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲರನ್ನು ಆಹ್ವಾನಿಸಿದರು. ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು.
וַיִּצָּמֶד יִשְׂרָאֵל לְבַעַל פְּעוֹר וַיִּֽחַר־אַף יְהוָה בְּיִשְׂרָאֵֽל׃ | 3 |
೩ಹೀಗೆ ಇಸ್ರಾಯೇಲರು ಪೆಗೋರದ ಬಾಳನ ಭಕ್ತರಾದರು. ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು.
וַיֹּאמֶר יְהוָה אֶל־מֹשֶׁה קַח אֶת־כָּל־רָאשֵׁי הָעָם וְהוֹקַע אוֹתָם לַיהוָה נֶגֶד הַשָּׁמֶשׁ וְיָשֹׁב חֲרוֹן אַף־יְהוָה מִיִּשְׂרָאֵֽל׃ | 4 |
೪ಆದುದರಿಂದ ಯೆಹೋವನು ಮೋಶೆಗೆ, “ನೀನು ಜನರ ಮುಖಂಡರೆಲ್ಲರನ್ನೂ ಹಿಡಿಸಿ ಅವರನ್ನು ಯೆಹೋವನಿಗೋಸ್ಕರ ಬಹಿರಂಗವಾಗಿ ಕೊಲ್ಲಿಸಬೇಕು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರಾಯೇಲರಿಂದ ತೊಲಗಿಸಬೇಕು” ಎಂದು ಹೇಳಿದನು.
וַיֹּאמֶר מֹשֶׁה אֶל־שֹׁפְטֵי יִשְׂרָאֵל הִרְגוּ אִישׁ אֲנָשָׁיו הַנִּצְמָדִים לְבַעַל פְּעֽוֹר׃ | 5 |
೫ಆದಕಾರಣ ಮೋಶೆ ಇಸ್ರಾಯೇಲರ ಮುಖಂಡರಿಗೆ, “ಪೆಗೋರದ ಬಾಳ್ ನನ್ನು ಪೂಜಿಸುವ ಜನರು ನಿಮ್ಮ ವಶದಲ್ಲಿದ್ದರೆ ಅಂಥವನಿಗೆ ಮರಣ ಶಿಕ್ಷೆಯನ್ನು ವಿಧಿಸಬೇಕು” ಎಂದು ಆಜ್ಞಾಪಿಸಿದನು.
וְהִנֵּה אִישׁ מִבְּנֵי יִשְׂרָאֵל בָּא וַיַּקְרֵב אֶל־אֶחָיו אֶת־הַמִּדְיָנִית לְעֵינֵי מֹשֶׁה וּלְעֵינֵי כָּל־עֲדַת בְּנֵי־יִשְׂרָאֵל וְהֵמָּה בֹכִים פֶּתַח אֹהֶל מוֹעֵֽד׃ | 6 |
೬ಇಸ್ರಾಯೇಲರಲ್ಲಿ ಒಬ್ಬನು ಮೋಶೆ ಮತ್ತು ಇಸ್ರಾಯೇಲರ ಸರ್ವಸಮೂಹದವರ ಎದುರಿನಲ್ಲಿಯೇ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತನ್ನ ಮನೆಯೊಳಗೆ ಕರೆದುಕೊಂಡು ಬಂದನು.
וַיַּרְא פִּֽינְחָס בֶּן־אֶלְעָזָר בֶּֽן־אַהֲרֹן הַכֹּהֵן וַיָּקָם מִתּוֹךְ הָֽעֵדָה וַיִּקַּח רֹמַח בְּיָדֽוֹ׃ | 7 |
೭ಕೂಡಲೆ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ಸಭೆಯ ಮಧ್ಯದಲ್ಲಿ ಎದ್ದು ಈಟಿಯನ್ನು ಕೈಯಲ್ಲಿ ಹಿಡಿದುಕೊಂಡನು.
וַיָּבֹא אַחַר אִֽישׁ־יִשְׂרָאֵל אֶל־הַקֻּבָּה וַיִּדְקֹר אֶת־שְׁנֵיהֶם אֵת אִישׁ יִשְׂרָאֵל וְאֶת־הָאִשָּׁה אֶל־קֳבָתָהּ וַתֵּֽעָצַר הַמַּגֵּפָה מֵעַל בְּנֵי יִשְׂרָאֵֽל׃ | 8 |
೮ಅವನು ಇಸ್ರಾಯೇಲನ ಹಿಂದೆ ಹೋಗಿ ಅವನು ಮಲಗುವ ಕೋಣೆಯನ್ನು ಪ್ರವೇಶಿಸಿ ಅವರಿಬ್ಬರನ್ನೂ ಅಂದರೆ ಆ ಇಸ್ರಾಯೇಲನನ್ನೂ ಮತ್ತು ಆ ಸ್ತ್ರೀಯನ್ನೂ ಒಂದೇ ಬಾರಿಗೆ ಹೊಟ್ಟೆಯನ್ನು ತಿವಿದು ಕೊಂದುಹಾಕಿದನು. ಆಗ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತು ಹೋಯಿತು.
וַיִּהְיוּ הַמֵּתִים בַּמַּגֵּפָה אַרְבָּעָה וְעֶשְׂרִים אָֽלֶף׃ | 9 |
೯ಈಗಾಗಲೇ ಆ ವ್ಯಾಧಿಯಿಂದ ಇಪ್ಪತ್ತನಾಲ್ಕು ಸಾವಿರ ಮಂದಿ ಮರಣ ಹೊಂದಿದರು.
וַיְדַבֵּר יְהוָה אֶל־מֹשֶׁה לֵּאמֹֽר׃ | 10 |
೧೦ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ,
פִּֽינְחָס בֶּן־אֶלְעָזָר בֶּן־אַהֲרֹן הַכֹּהֵן הֵשִׁיב אֶת־חֲמָתִי מֵעַל בְּנֵֽי־יִשְׂרָאֵל בְּקַנְאוֹ אֶת־קִנְאָתִי בְּתוֹכָם וְלֹא־כִלִּיתִי אֶת־בְּנֵֽי־יִשְׂרָאֵל בְּקִנְאָתִֽי׃ | 11 |
೧೧“ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವ ಪ್ರಕಾರ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ನನ್ನ ಗೌರವವನ್ನು ಕಾಪಾಡಿದ್ದರಿಂದ ಇಸ್ರಾಯೇಲರ ಮೇಲಿದ್ದ ನನ್ನ ಕೋಪವನ್ನು ತೊಲಗಿಸಿದ್ದಾನೆ. ಹೀಗಿರುವುದರಿಂದ ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವುದಕ್ಕಾಗಿ ಇಸ್ರಾಯೇಲರನ್ನು ನಿರ್ಮೂಲಮಾಡಬೇಕಾದ ಅಗತ್ಯವಿಲ್ಲ.
לָכֵן אֱמֹר הִנְנִי נֹתֵן לוֹ אֶת־בְּרִיתִי שָׁלֽוֹם׃ | 12 |
೧೨ಆದಕಾರಣ ನಾನು ಅವನ ಸಂಗಡ ಸ್ನೇಹದ ಒಡಂಬಡಿಕೆ ಮಾಡಿಕೊಳ್ಳುತ್ತೇನೆ ಎಂದು ಎಲ್ಲರಿಗೂ ತಿಳಿಸು.
וְהָיְתָה לּוֹ וּלְזַרְעוֹ אַחֲרָיו בְּרִית כְּהֻנַּת עוֹלָם תַּחַת אֲשֶׁר קִנֵּא לֵֽאלֹהָיו וַיְכַפֵּר עַל־בְּנֵי יִשְׂרָאֵֽל׃ | 13 |
೧೩ಅವನಿಗೂ, ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಒಡಂಬಡಿಕೆ ಮಾಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಹೆಚ್ಚಿಸಿ ಇಸ್ರಾಯೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದುದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.
וְשֵׁם אִישׁ יִשְׂרָאֵל הַמֻּכֶּה אֲשֶׁר הֻכָּה אֶת־הַמִּדְיָנִית זִמְרִי בֶּן־סָלוּא נְשִׂיא בֵֽית־אָב לַשִּׁמְעֹנִֽי׃ | 14 |
೧೪ಆ ಮಿದ್ಯಾನ್ ಸ್ತ್ರೀಯೊಡನೆ ಹತವಾದವನ ಆ ಇಸ್ರಾಯೇಲಿನವನ ಹೆಸರು ಜಿಮ್ರಿ, ಅವನು ಸಿಮೆಯೋನ್ಯ ಕುಲದವರಲ್ಲಿ ಗೋತ್ರ ಪ್ರಧಾನನಾದ ಸಾಲೂ ಎಂಬುವನ ಮಗನು.
וְשֵׁם הָֽאִשָּׁה הַמֻּכָּה הַמִּדְיָנִית כָּזְבִּי בַת־צוּר רֹאשׁ אֻמּוֹת בֵּֽית־אָב בְּמִדְיָן הֽוּא׃ | 15 |
೧೫ಹತವಾದ ಆ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ, ಅವಳು ಮಿದ್ಯಾನ್ಯರಲ್ಲಿ ಗೋತ್ರ ಪ್ರಧಾನನಾದ ಚೂರ್ ಎಂಬುವನ ಮಗಳು.
וַיְדַבֵּר יְהוָה אֶל־מֹשֶׁה לֵּאמֹֽר׃ | 16 |
೧೬ತರುವಾಯ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,
צָרוֹר אֶת־הַמִּדְיָנִים וְהִכִּיתֶם אוֹתָֽם׃ | 17 |
೧೭“ನೀನು ಮಿದ್ಯಾನ್ಯರನ್ನು ವೈರಿಯೆಂದು ತಿಳಿದು ಸಂಹರಿಸಬೇಕು.
כִּי צֹרְרִים הֵם לָכֶם בְּנִכְלֵיהֶם אֲשֶׁר־נִכְּלוּ לָכֶם עַל־דְּבַר־פְּעוֹר וְעַל־דְּבַר כָּזְבִּי בַת־נְשִׂיא מִדְיָן אֲחֹתָם הַמֻּכָּה בְיוֹם־הַמַּגֵּפָה עַל־דְּבַר־פְּעֽוֹר׃ | 18 |
೧೮ಅವರು ಪೆಗೋರದ ವಿಷಯದಲ್ಲಿಯೂ, ಮಿದ್ಯಾನ್ಯರ ಅಧಿಪತಿಯ ಮಗಳಾದ ಕೊಜ್ಬೀ ಎಂಬ ಸ್ತ್ರೀಯ ವಿಷಯದಲ್ಲಿಯೂ ನಿಮ್ಮನ್ನು ಮೋಸಗೊಳಿಸಿ ಹಿಂಸಿಸಿದ್ದಾರೆ. ಆ ಸ್ತ್ರೀಯು ಪೆಗೋರದ ಘಟನೆಗಳ ನಿಮಿತ್ತ ಘೋರ ವ್ಯಾಧಿ ಉಂಟಾದಾಗ ಹತಳಾದವಳು.”