< במדבר 6 >
וַיְדַבֵּר יְהוָה אֶל־מֹשֶׁה לֵּאמֹֽר׃ | 1 |
೧ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
דַּבֵּר אֶל־בְּנֵי יִשְׂרָאֵל וְאָמַרְתָּ אֲלֵהֶם אִישׁ אֽוֹ־אִשָּׁה כִּי יַפְלִא לִנְדֹּר נֶדֶר נָזִיר לְהַזִּיר לַֽיהוָֽה׃ | 2 |
೨“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರರ ಹರಕೆಯನ್ನು ಅಂದರೆ ಯೆಹೋವನಿಗೆ ತನ್ನನ್ನು ಪ್ರತಿಷ್ಠಿಸಿಕೊಳ್ಳುವ,
מִיַּיִן וְשֵׁכָר יַזִּיר חֹמֶץ יַיִן וְחֹמֶץ שֵׁכָר לֹא יִשְׁתֶּה וְכָל־מִשְׁרַת עֲנָבִים לֹא יִשְׁתֶּה וַעֲנָבִים לַחִים וִיבֵשִׁים לֹא יֹאכֵֽל׃ | 3 |
೩ವಿಶೇಷವಾದ ಹರಕೆಯನ್ನು ಮಾಡಿದಾಗ ದ್ರಾಕ್ಷಾರಸವನ್ನೂ ಮತ್ತು ಮದ್ಯಪಾನವನ್ನೂ ಮುಟ್ಟಬಾರದು. ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯಪಾನದ ಹುಳಿಯನ್ನಾಗಲಿ ಕುಡಿಯಬಾರದು. ದ್ರಾಕ್ಷಿ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು. ಹಸಿ ಅಥವಾ ಒಣಗಿದ ದ್ರಾಕ್ಷಿ ಹಣ್ಣನ್ನೂ ತಿನ್ನಬಾರದು.
כֹּל יְמֵי נִזְרוֹ מִכֹּל אֲשֶׁר יֵעָשֶׂה מִגֶּפֶן הַיַּיִן מֵחַרְצַנִּים וְעַד־זָג לֹא יֹאכֵֽל׃ | 4 |
೪ಅವನು ಹರಕೆಮಾಡಿ ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ದ್ರಾಕ್ಷಾಲತೆಯಿಂದ ಬೆಳೆದ ಬೀಜವನ್ನಾಗಲಿ, ಸಿಪ್ಪೆಯನ್ನಾಗಲಿ ತಿನ್ನಬಾರದು.
כָּל־יְמֵי נֶדֶר נִזְרוֹ תַּעַר לֹא־יַעֲבֹר עַל־רֹאשׁוֹ עַד־מְלֹאת הַיָּמִם אֲשֶׁר־יַזִּיר לַיהוָה קָדֹשׁ יִהְיֶה גַּדֵּל פֶּרַע שְׂעַר רֹאשֽׁוֹ׃ | 5 |
೫“ಅವನು ತನ್ನ ಹರಕೆಯ ದಿನಗಳಲ್ಲಿ ಕ್ಷೌರಮಾಡಿಸಿಕೊಳ್ಳಬಾರದು. ಅವನು ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ತಾನು ದೇವರಿಗೆ ಮೀಸಲಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬಿಡಬೇಕು.
כָּל־יְמֵי הַזִּירוֹ לַיהוָה עַל־נֶפֶשׁ מֵת לֹא יָבֹֽא׃ | 6 |
೬ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳಲ್ಲಿ ಯಾವ ಶವವನ್ನೂ ಮುಟ್ಟಬಾರದು.
לְאָבִיו וּלְאִמּוֹ לְאָחִיו וּלְאַחֹתוֹ לֹא־יִטַּמָּא לָהֶם בְּמֹתָם כִּי נֵזֶר אֱלֹהָיו עַל־רֹאשֽׁוֹ׃ | 7 |
೭ತಾಯಿ, ತಂದೆ, ಅಣ್ಣ, ತಮ್ಮ, ಅಕ್ಕ, ತಂಗಿ ಇವರಲ್ಲಿ ಯಾರು ಸತ್ತರೂ ಅವರ ನಿಮಿತ್ತ ಅವನು ತನ್ನನ್ನು ದೇವರಿಂದ ಪ್ರತ್ಯೇಕಿಸಿ ಅಪವಿತ್ರಮಾಡಿಕೊಳ್ಳಬಾರದು. ಏಕೆಂದರೆ ತಾನು ದೇವರಿಗೆ ಮೀಸಲಾಗಿ ಬಿಟ್ಟ ಕೂದಲು ತಲೆಯ ಮೇಲೆ ಇದೆಯಲ್ಲಾ.
כֹּל יְמֵי נִזְרוֹ קָדֹשׁ הוּא לַֽיהוָֽה׃ | 8 |
೮ತಾನು ಪ್ರತಿಷ್ಠಿಸಿಕೊಂಡಿರುವ ದಿನಗಳೆಲ್ಲೆಲ್ಲಾ ಅವನು ಯೆಹೋವನಿಗೆ ಮೀಸಲಾಗಿಯೇ ಇರಬೇಕು.
וְכִֽי־יָמוּת מֵת עָלָיו בְּפֶתַע פִּתְאֹם וְטִמֵּא רֹאשׁ נִזְרוֹ וְגִלַּח רֹאשׁוֹ בְּיוֹם טָהֳרָתוֹ בַּיּוֹם הַשְּׁבִיעִי יְגַלְּחֶֽנּוּ׃ | 9 |
೯ಯಾರಾದರೂ ಆಕಸ್ಮಾತ್ತಾಗಿ ಅವನ ಬಳಿಯಲ್ಲೇ ಸತ್ತರೆ, ತಾನು ಪ್ರತಿಷ್ಠಿಸಿಕೊಂಡ ತಲೆಯ ಕೂದಲು ಅಪವಿತ್ರವಾದರೆ ಏಳನೆಯ ದಿನದಲ್ಲಿ ಅಂದರೆ ಶುದ್ಧನಾಗುವ ದಿನದಲ್ಲಿ ತಲೆಯನ್ನು ಕ್ಷೌರಮಾಡಿಸಿಕೊಳ್ಳಬೇಕು.
וּבַיּוֹם הַשְּׁמִינִי יָבִא שְׁתֵּי תֹרִים אוֹ שְׁנֵי בְּנֵי יוֹנָה אֶל־הַכֹּהֵן אֶל־פֶּתַח אֹהֶל מוֹעֵֽד׃ | 10 |
೧೦ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.
וְעָשָׂה הַכֹּהֵן אֶחָד לְחַטָּאת וְאֶחָד לְעֹלָה וְכִפֶּר עָלָיו מֵאֲשֶׁר חָטָא עַל־הַנָּפֶשׁ וְקִדַּשׁ אֶת־רֹאשׁוֹ בַּיּוֹם הַהֽוּא׃ | 11 |
೧೧ಯಾಜಕನು ಒಂದನ್ನು ದೋಷಪರಿಹಾರ ಯಜ್ಞವಾಗಿ, ಇನ್ನೊಂದನ್ನು ಸರ್ವಾಂಗಹೋಮವಾಗಿ ಸಮರ್ಪಿಸಿ ಶವಸೋಂಕಿದವನಿಗಾಗಿ ದೋಷಪರಿಹಾರ ಮಾಡಿ ಅವನ ತಲೆಯ ಕೂದಲನ್ನು ಆ ದಿನದಿಂದ ಪವಿತ್ರವೆಂದು ನಿರ್ಣಯಿಸಬೇಕು.
וְהִזִּיר לַֽיהוָה אֶת־יְמֵי נִזְרוֹ וְהֵבִיא כֶּבֶשׂ בֶּן־שְׁנָתוֹ לְאָשָׁם וְהַיָּמִים הָרִאשֹׁנִים יִפְּלוּ כִּי טָמֵא נִזְרֽוֹ׃ | 12 |
೧೨ಅವನು ಎಷ್ಟು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದಾನೋ, ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತಯಜ್ಞವಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ಹರಕೆಗೆ ವಿಘ್ನಪ್ರಾಪ್ತವಾದುದರಿಂದ ಕಳೆದುಹೋದ ದಿನಗಳು ವ್ಯರ್ಥವಾದುದೆಂದು ಪರಿಗಣಿಸಬೇಕು.
וְזֹאת תּוֹרַת הַנָּזִיר בְּיוֹם מְלֹאת יְמֵי נִזְרוֹ יָבִיא אֹתוֹ אֶל־פֶּתַח אֹהֶל מוֹעֵֽד׃ | 13 |
೧೩ನಾಜೀರನು ತನ್ನ ವ್ರತದಿನಗಳು ಮುಗಿದಾಗ ತನ್ನನ್ನು ಸಮರ್ಪಿಸಬೇಕಾದ ಕ್ರಮವನ್ನು ಅನುಸರಿಸಬೇಕು. ಅವನು ದೇವದರ್ಶನದ ಗುಡಾರದ ಬಾಗಿಲಿಗೆ ಬರಬೇಕು.
וְהִקְרִיב אֶת־קָרְבָּנוֹ לַיהוָה כֶּבֶשׂ בֶּן־שְׁנָתוֹ תָמִים אֶחָד לְעֹלָה וְכַבְשָׂה אַחַת בַּת־שְׁנָתָהּ תְּמִימָה לְחַטָּאת וְאַֽיִל־אֶחָד תָּמִים לִשְׁלָמִֽים׃ | 14 |
೧೪ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆಗಳು ಯಾವುವೆಂದರೆ: ಅವನು ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಟಗರಿನ ಮರಿಯನ್ನು, ದೋಷಪರಿಹಾರ ಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಹೆಣ್ಣು ಕುರಿಮರಿಯನ್ನು, ಸಮಾಧಾನಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಟಗರನ್ನು ತರಬೇಕು.
וְסַל מַצּוֹת סֹלֶת חַלֹּת בְּלוּלֹת בַּשֶּׁמֶן וּרְקִיקֵי מַצּוֹת מְשֻׁחִים בַּשָּׁמֶן וּמִנְחָתָם וְנִסְכֵּיהֶֽם׃ | 15 |
೧೫ಇದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಧಾನ್ಯದ್ರವ್ಯ, ಪಾನದ್ರವ್ಯಗಳೊಡನೆ ತರಬೇಕು.
וְהִקְרִיב הַכֹּהֵן לִפְנֵי יְהוָה וְעָשָׂה אֶת־חַטָּאתוֹ וְאֶת־עֹלָתֽוֹ׃ | 16 |
೧೬ಯಾಜಕನು ಇವುಗಳನ್ನು ಯೆಹೋವನ ಸನ್ನಿಧಿಗೆ ತಂದು ನಾಜೀರನ ದೋಷಪರಿಹಾರಕ ಯಜ್ಞವನ್ನೂ ಮತ್ತು ಸರ್ವಾಂಗಹೋಮವನ್ನೂ ಸಮರ್ಪಿಸಬೇಕು.
וְאֶת־הָאַיִל יַעֲשֶׂה זֶבַח שְׁלָמִים לַֽיהוָה עַל סַל הַמַּצּוֹת וְעָשָׂה הַכֹּהֵן אֶת־מִנְחָתוֹ וְאֶת־נִסְכּֽוֹ׃ | 17 |
೧೭ಆ ಟಗರನ್ನೂ, ಪುಟ್ಟಿ ತುಂಬಾ ಹುಳಿಯಿಲ್ಲದ ರೊಟ್ಟಿಗಳನ್ನೂ, ಯಾಜಕನು ಯೆಹೋವನಿಗೆ ಸಮಾಧಾನಯಜ್ಞವಾಗಿ ಸಮರ್ಪಿಸಬೇಕು. ಅವನು ತಂದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ನೈವೇದ್ಯಮಾಡಬೇಕು.
וְגִלַּח הַנָּזִיר פֶּתַח אֹהֶל מוֹעֵד אֶת־רֹאשׁ נִזְרוֹ וְלָקַח אֶת־שְׂעַר רֹאשׁ נִזְרוֹ וְנָתַן עַל־הָאֵשׁ אֲשֶׁר־תַּחַת זֶבַח הַשְּׁלָמִֽים׃ | 18 |
೧೮ಆಗ ನಾಜೀರನು ತನ್ನ ಸಮರ್ಪಣೆಯ ದೀಕ್ಷೆಯನ್ನು ಸೂಚಿಸುವ ತಲೆಯ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.
וְלָקַח הַכֹּהֵן אֶת־הַזְּרֹעַ בְּשֵׁלָה מִן־הָאַיִל וְֽחַלַּת מַצָּה אַחַת מִן־הַסַּל וּרְקִיק מַצָּה אֶחָד וְנָתַן עַל־כַּפֵּי הַנָּזִיר אַחַר הִֽתְגַּלְּחוֹ אֶת־נִזְרֽוֹ׃ | 19 |
೧೯ತರುವಾಯ ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ, ಪುಟ್ಟಿಯಲ್ಲಿನ ಹುಳಿಯಿಲ್ಲದ ಒಂದು ರೊಟ್ಟಿಯನ್ನು, ಹಾಗೂ ಹುಳಿಯಿಲ್ಲದ ಒಂದು ಕಡುಬನ್ನೂ ತೆಗೆದುಕೊಂಡು ನಾಜೀರನು ಕ್ಷೌರಮಾಡಿಸಿಕೊಂಡ ನಂತರ ಅವನ ಕೈಯಲ್ಲಿ ಅರ್ಪಿಸಬೇಕು.
וְהֵנִיף אוֹתָם הַכֹּהֵן ׀ תְּנוּפָה לִפְנֵי יְהוָה קֹדֶשׁ הוּא לַכֹּהֵן עַל חֲזֵה הַתְּנוּפָה וְעַל שׁוֹק הַתְּרוּמָה וְאַחַר יִשְׁתֶּה הַנָּזִיר יָֽיִן׃ | 20 |
೨೦ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸಿ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಿಸಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬೇಕು.
זֹאת תּוֹרַת הַנָּזִיר אֲשֶׁר יִדֹּר קָרְבָּנוֹ לַֽיהוָה עַל־נִזְרוֹ מִלְּבַד אֲשֶׁר־תַּשִּׂיג יָדוֹ כְּפִי נִדְרוֹ אֲשֶׁר יִדֹּר כֵּן יַעֲשֶׂה עַל תּוֹרַת נִזְרֽוֹ׃ | 21 |
೨೧ಹರಕೆಮಾಡಿಕೊಂಡ ನಾಜೀರರ ವ್ರತ ನಿಯಮವು ಇದೇ. ಅವರು ತಮ್ಮ ವ್ರತಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತಿಗನುಸಾರ ಹೆಚ್ಚಾಗಿಯೂ ಕೊಡಬಹುದು. ಆದರೆ ತಾವು ಕೊಡುತ್ತೆವೆಂದು ಹರಕೆಮಾಡಿದಷ್ಟು ವ್ರತವಿಧಿಗನುಸಾರವಾಗಿ ಕೊಡಲೇಬೇಕು.”
וַיְדַבֵּר יְהוָה אֶל־מֹשֶׁה לֵּאמֹֽר׃ | 22 |
೨೨ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
דַּבֵּר אֶֽל־אַהֲרֹן וְאֶל־בָּנָיו לֵאמֹר כֹּה תְבָרֲכוּ אֶת־בְּנֵי יִשְׂרָאֵל אָמוֹר לָהֶֽם׃ | 23 |
೨೩“ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು, ‘ನೀವು ಇಸ್ರಾಯೇಲರನ್ನು ಹೀಗೆ ಆಶೀರ್ವದಿಸಬೇಕು. ಈ ಪ್ರಕಾರ ಅವರಿಗೆ ಹೇಳಬೇಕು,
יְבָרֶכְךָ יְהוָה וְיִשְׁמְרֶֽךָ׃ | 24 |
೨೪ಯೆಹೋವನು ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ;
יָאֵר יְהוָה ׀ פָּנָיו אֵלֶיךָ וִֽיחֻנֶּֽךָּ׃ | 25 |
೨೫ಯೆಹೋವನು ಪ್ರಸನ್ನಮುಖದಿಂದ ನಿಮ್ಮನ್ನು ನೋಡಿ ನಿಮ್ಮ ಮೇಲೆ ದಯವಿಡಲಿ;
יִשָּׂא יְהוָה ׀ פָּנָיו אֵלֶיךָ וְיָשֵׂם לְךָ שָׁלֽוֹם׃ | 26 |
೨೬ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ’ ಎಂಬುದೇ.
וְשָׂמוּ אֶת־שְׁמִי עַל־בְּנֵי יִשְׂרָאֵל וַאֲנִי אֲבָרֲכֵֽם׃ | 27 |
೨೭ಹೀಗೆ ಅವರು ಇಸ್ರಾಯೇಲರನ್ನು ಕುರಿತು ನನ್ನ ಹೆಸರನ್ನು ಉಚ್ಚರಿಸುವಾಗ ನಾನು ಅವರನ್ನು ಆಶೀರ್ವದಿಸುವೆನು.”