< במדבר 9 >
וַיְדַבֵּר יְהוָה אֶל־מֹשֶׁה בְמִדְבַּר־סִינַי בַּשָּׁנָה הַשֵּׁנִית לְצֵאתָם מֵאֶרֶץ מִצְרַיִם בַּחֹדֶשׁ הָרִאשׁוֹן לֵאמֹֽר׃ | 1 |
ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ಎರಡನೆಯ ವರ್ಷದ ಮೊದಲನೆಯ ತಿಂಗಳಿನಲ್ಲಿ ಯೆಹೋವ ದೇವರು ಸೀನಾಯಿ ಮರುಭೂಮಿಯಲ್ಲಿ ಮೋಶೆಯ ಸಂಗಡ ಮಾತನಾಡಿ ಹೀಗೆ ಹೇಳಿದರು:
וְיַעֲשׂוּ בְנֵי־יִשְׂרָאֵל אֶת־הַפָּסַח בְּמוֹעֲדֽוֹ׃ | 2 |
“ಇಸ್ರಾಯೇಲರು ಪಸ್ಕವನ್ನು ನೇಮಿಸಿದ ಸಮಯದಲ್ಲಿ ಆಚರಿಸಬೇಕು.
בְּאַרְבָּעָה עָשָֽׂר־יוֹם בַּחֹדֶשׁ הַזֶּה בֵּין הָֽעֲרְבַּיִם תַּעֲשׂוּ אֹתוֹ בְּמוֹעֲדוֹ כְּכָל־חֻקֹּתָיו וּכְכָל־מִשְׁפָּטָיו תַּעֲשׂוּ אֹתֽוֹ׃ | 3 |
ಈ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆಯಲ್ಲಿ ಅದನ್ನು ಆಚರಿಸಬೇಕು. ಅದರ ಆಜ್ಞಾವಿಧಿಗಳ ಪ್ರಕಾರವಾಗಿಯೂ, ಅದರ ಎಲ್ಲಾ ನಿಯಮಗಳ ಪ್ರಕಾರವಾಗಿಯೂ ಅದನ್ನು ಆಚರಿಸಿರಿ.”
וַיְדַבֵּר מֹשֶׁה אֶל־בְּנֵי יִשְׂרָאֵל לַעֲשֹׂת הַפָּֽסַח׃ | 4 |
ಆಗ ಮೋಶೆಯು ಪಸ್ಕವನ್ನು ಆಚರಿಸುವುದಕ್ಕೆ ಇಸ್ರಾಯೇಲರ ಸಂಗಡ ಮಾತನಾಡಿದನು.
וַיַּעֲשׂוּ אֶת־הַפֶּסַח בָּרִאשׁוֹן בְּאַרְבָּעָה עָשָׂר יוֹם לַחֹדֶשׁ בֵּין הָעַרְבַּיִם בְּמִדְבַּר סִינָי כְּכֹל אֲשֶׁר צִוָּה יְהוָה אֶת־מֹשֶׁה כֵּן עָשׂוּ בְּנֵי יִשְׂרָאֵֽל׃ | 5 |
ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆ ಸೀನಾಯಿ ಮರುಭೂಮಿಯಲ್ಲಿ ಪಸ್ಕವನ್ನು ಆಚರಿಸಿದರು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ, ಇಸ್ರಾಯೇಲರು ಮಾಡಿದರು.
וַיְהִי אֲנָשִׁים אֲשֶׁר הָיוּ טְמֵאִים לְנֶפֶשׁ אָדָם וְלֹא־יָכְלוּ לַעֲשֹׂת־הַפֶּסַח בַּיּוֹם הַהוּא וַֽיִּקְרְבוּ לִפְנֵי מֹשֶׁה וְלִפְנֵי אַהֲרֹן בַּיּוֹם הַהֽוּא׃ | 6 |
ಆದರೆ ಕೆಲವು ಜನರು ಮನುಷ್ಯನ ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿ ಆ ದಿವಸದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗಲಿಲ್ಲ ಅದಕ್ಕೆ ಅದೇ ದಿನ ಅವರು ಮೋಶೆ ಮತ್ತು ಆರೋನರ ಬಳಿಗೆ ಬಂದು
וַיֹּאמְרוּ הָאֲנָשִׁים הָהֵמָּה אֵלָיו אֲנַחְנוּ טְמֵאִים לְנֶפֶשׁ אָדָם לָמָּה נִגָּרַע לְבִלְתִּי הַקְרִב אֶת־קָרְבַּן יְהוָה בְּמֹעֲדוֹ בְּתוֹךְ בְּנֵי יִשְׂרָאֵֽל׃ | 7 |
ಮೋಶೆಯ ಸಂಗಡ ಮಾತನಾಡಿ, “ನಾವು ಮನುಷ್ಯನ ಶವದ ಸೋಂಕಿನಿಂದ ಅಶುದ್ಧರಾಗಿದ್ದೇವೆ. ಆದ್ದರಿಂದ ನಾವು ಇಸ್ರಾಯೇಲರೊಡನೆ ನೇಮಕವಾದ ಸಮಯದಲ್ಲಿ ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸಲು ನಮಗೆ ಏಕೆ ಅಡ್ಡಿಯಾಗಬೇಕು,” ಎಂದರು.
וַיֹּאמֶר אֲלֵהֶם מֹשֶׁה עִמְדוּ וְאֶשְׁמְעָה מַה־יְצַוֶּה יְהוָה לָכֶֽם׃ | 8 |
ಮೋಶೆ ಅವರಿಗೆ, “ಸ್ವಲ್ಪ ಕಾಯಿರಿ, ಯೆಹೋವ ದೇವರು ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುತ್ತಾರೋ ನಾನು ಕೇಳುತ್ತೇನೆ,” ಎಂದನು.
וַיְדַבֵּר יְהוָה אֶל־מֹשֶׁה לֵּאמֹֽר׃ | 9 |
ಯೆಹೋವ ದೇವರು ಮೋಶೆ ಸಂಗಡ ಮಾತನಾಡಿ ಅವನಿಗೆ,
דַּבֵּר אֶל־בְּנֵי יִשְׂרָאֵל לֵאמֹר אִישׁ אִישׁ כִּי־יִהְיֶֽה־טָמֵא ׀ לָנֶפֶשׁ אוֹ בְדֶרֶךְ רְחֹקָה לָכֶם אוֹ לְדֹרֹתֵיכֶם וְעָשָׂה פֶסַח לַיהוָֽה׃ | 10 |
ನೀನು ಇಸ್ರಾಯೇಲರಿಗೆ, “ನಿಮ್ಮಲ್ಲಿಯೂ, ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಶವದ ಸೋಂಕಿನಿಂದ ಅಶುದ್ಧನಾಗಿದ್ದರೂ, ಇಲ್ಲವೆ ದೂರ ಪ್ರಯಾಣದಲ್ಲಿದ್ದರೂ ಯೆಹೋವ ದೇವರಿಗೆ ಪಸ್ಕಹಬ್ಬವನ್ನು ಆಚರಿಸಬೇಕು.
בַּחֹדֶשׁ הַשֵּׁנִי בְּאַרְבָּעָה עָשָׂר יוֹם בֵּין הָעַרְבַּיִם יַעֲשׂוּ אֹתוֹ עַל־מַצּוֹת וּמְרֹרִים יֹאכְלֻֽהוּ׃ | 11 |
ಆದರೆ ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆಯಲ್ಲಿ ಆಚರಿಸಲಿ. ಆ ಕುರಿಯನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡ ಕಹಿಯಾದ ಸೊಪ್ಪುಗಳೊಂದಿಗೆ ಊಟಮಾಡಬೇಕು.
לֹֽא־יַשְׁאִירוּ מִמֶּנּוּ עַד־בֹּקֶר וְעֶצֶם לֹא יִשְׁבְּרוּ־בוֹ כְּכָל־חֻקַּת הַפֶּסַח יַעֲשׂוּ אֹתֽוֹ׃ | 12 |
ಅವರು ಅದರಿಂದ ಮರುದಿವಸಕ್ಕೆ ಏನನ್ನೂ ಉಳಿಸಬಾರದು. ಅದರಲ್ಲಿ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು, ಪಸ್ಕದ ಸಮಸ್ತ ಕಟ್ಟಳೆಗಳ ಪ್ರಕಾರವಾಗಿ ಅದನ್ನು ಆಚರಿಸಬೇಕು.
וְהָאִישׁ אֲשֶׁר־הוּא טָהוֹר וּבְדֶרֶךְ לֹא־הָיָה וְחָדַל לַעֲשׂוֹת הַפֶּסַח וְנִכְרְתָה הַנֶּפֶשׁ הַהִוא מֵֽעַמֶּיהָ כִּי ׀ קָרְבַּן יְהוָה לֹא הִקְרִיב בְּמֹעֲדוֹ חֶטְאוֹ יִשָּׂא הָאִישׁ הַהֽוּא׃ | 13 |
ಆದರೆ ಒಬ್ಬ ಮನುಷ್ಯನೂ ಆಚಾರವಾಗಿ ಶುದ್ಧನಾದವನು, ಪ್ರಯಾಣ ಮಾಡದವನಾಗಿದ್ದು ಪಸ್ಕವನ್ನು ಆಚರಿಸಲು ತಪ್ಪಿದರೆ, ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು. ಅವನು ಯೆಹೋವ ದೇವರ ಅರ್ಪಣೆಯನ್ನು ಅದರ ಸಮಯದಲ್ಲಿ ತರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
וְכִֽי־יָגוּר אִתְּכֶם גֵּר וְעָשָֽׂה פֶסַח לַֽיהוָה כְּחֻקַּת הַפֶּסַח וּכְמִשְׁפָּטוֹ כֵּן יַעֲשֶׂה חֻקָּה אַחַת יִהְיֶה לָכֶם וְלַגֵּר וּלְאֶזְרַח הָאָֽרֶץ׃ | 14 |
“ಪರದೇಶಿಯಾದವನು ನಿಮ್ಮ ಸಂಗಡ ಇದ್ದು, ಯೆಹೋವ ದೇವರಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಬಯಸಿದರೆ, ಅದರ ಆಜ್ಞಾವಿಧಿಗಳ ಪ್ರಕಾರವೇ ಆಚರಿಸಲಿ. ಸ್ಥಳೀಯ ಮೂಲದ ಇಸ್ರಾಯೇಲರಿಗೂ ಮತ್ತು ನಿಮ್ಮ ನಡುವೆ ವಾಸಿಸುವ ಪರದೇಶಸ್ತನಿಗೂ ಒಂದೇ ನಿಯಮ ಇರಬೇಕು,” ಎಂದು ಹೇಳಿದರು.
וּבְיוֹם הָקִים אֶת־הַמִּשְׁכָּן כִּסָּה הֶֽעָנָן אֶת־הַמִּשְׁכָּן לְאֹהֶל הָעֵדֻת וּבָעֶרֶב יִהְיֶה עַֽל־הַמִּשְׁכָּן כְּמַרְאֵה־אֵשׁ עַד־בֹּֽקֶר׃ | 15 |
ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರವನ್ನು ಮುಚ್ಚಿತು. ಸಂಜೆಯಿಂದ ಮುಂಜಾನೆಯವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು.
כֵּן יִהְיֶה תָמִיד הֶעָנָן יְכַסֶּנּוּ וּמַרְאֵה־אֵשׁ לָֽיְלָה׃ | 16 |
ಈ ಪ್ರಕಾರ ಯಾವಾಗಲೂ, ಮೇಘವು ರಾತ್ರಿಯಲ್ಲಿ ಬೆಂಕಿಯಂತೆ ಅದನ್ನು ಮುಚ್ಚುತ್ತಿತ್ತು.
וּלְפִי הֵעָלֹת הֶֽעָנָן מֵעַל הָאֹהֶל וְאַחֲרֵי כֵן יִסְעוּ בְּנֵי יִשְׂרָאֵל וּבִמְקוֹם אֲשֶׁר יִשְׁכָּן־שָׁם הֶֽעָנָן שָׁם יַחֲנוּ בְּנֵי יִשְׂרָאֵֽל׃ | 17 |
ಆ ಮೇಘವು ಗುಡಾರದ ಮೇಲಿನಿಂದ ಹೋದಾಗ, ಇಸ್ರಾಯೇಲರು ಪ್ರಯಾಣ ಮಾಡುತ್ತಿದ್ದರು, ಮೇಘವು ನೆಲಸಿದ ಸ್ಥಳದಲ್ಲಿ ಇಸ್ರಾಯೇಲರು ತಮ್ಮ ಗುಡಾರಗಳನ್ನು ಹಾಕಿಕೊಳ್ಳುತ್ತಿದ್ದರು.
עַל־פִּי יְהוָה יִסְעוּ בְּנֵי יִשְׂרָאֵל וְעַל־פִּי יְהוָה יַחֲנוּ כָּל־יְמֵי אֲשֶׁר יִשְׁכֹּן הֶעָנָן עַל־הַמִּשְׁכָּן יַחֲנֽוּ׃ | 18 |
ಯೆಹೋವ ದೇವರ ಆಜ್ಞೆಯ ಪ್ರಕಾರ ಇಸ್ರಾಯೇಲರು ಪ್ರಯಾಣಮಾಡಿದರು. ಯೆಹೋವ ದೇವರ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು.
וּבְהַאֲרִיךְ הֶֽעָנָן עַל־הַמִּשְׁכָּן יָמִים רַבִּים וְשָׁמְרוּ בְנֵי־יִשְׂרָאֵל אֶת־מִשְׁמֶרֶת יְהוָה וְלֹא יִסָּֽעוּ׃ | 19 |
ಮೇಘವು ದೇವದರ್ಶನದ ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ, ಇಸ್ರಾಯೇಲರು ಯೆಹೋವ ದೇವರ ಅಪ್ಪಣೆಯನ್ನು ಅನುಸರಿಸಿ ಪ್ರಯಾಣ ಮಾಡದೆ ಇರುತ್ತಿದ್ದರು.
וְיֵשׁ אֲשֶׁר יִהְיֶה הֶֽעָנָן יָמִים מִסְפָּר עַל־הַמִּשְׁכָּן עַל־פִּי יְהוָה יַחֲנוּ וְעַל־פִּי יְהוָה יִסָּֽעוּ׃ | 20 |
ಇದಲ್ಲದೆ ಮೇಘವು ಗುಡಾರದ ಮೇಲೆ ಸ್ವಲ್ಪ ದಿವಸಗಳು ಇರುವಾಗ, ಅವರು ಯೆಹೋವ ದೇವರ ಆಜ್ಞೆಯ ಪ್ರಕಾರ ಇಳಿದುಕೊಳ್ಳುತ್ತಿದ್ದರು. ಯೆಹೋವ ದೇವರ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಿದ್ದರು.
וְיֵשׁ אֲשֶׁר־יִהְיֶה הֶֽעָנָן מֵעֶרֶב עַד־בֹּקֶר וְנַעֲלָה הֶֽעָנָן בַּבֹּקֶר וְנָסָעוּ אוֹ יוֹמָם וָלַיְלָה וְנַעֲלָה הֶעָנָן וְנָסָֽעוּ׃ | 21 |
ಮೇಘವು ಸಂಜೆಯಿಂದ ಮುಂಜಾನೆಯವರೆಗೆ ಇದ್ದು, ಬೆಳಿಗ್ಗೆ ಮೇಲಕ್ಕೆ ಎದ್ದಾಗ, ಅವರು ಪ್ರಯಾಣ ಮಾಡುತ್ತಿದ್ದರು, ಹಗಲುರಾತ್ರಿ ಇದ್ದು ಮೇಘವು ಮೇಲಕ್ಕೇರಿದಾಗ ಅವರು ಪ್ರಯಾಣ ಮಾಡುತ್ತಿದ್ದರು.
אֽוֹ־יֹמַיִם אוֹ־חֹדֶשׁ אוֹ־יָמִים בְּהַאֲרִיךְ הֶעָנָן עַל־הַמִּשְׁכָּן לִשְׁכֹּן עָלָיו יַחֲנוּ בְנֵֽי־יִשְׂרָאֵל וְלֹא יִסָּעוּ וּבְהֵעָלֹתוֹ יִסָּֽעוּ׃ | 22 |
ಆ ಮೇಘವು ಎರಡು ದಿವಸಗಳಾದರೂ, ಒಂದು ತಿಂಗಳಾದರೂ, ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾಯೇಲರು ಪ್ರಯಾಣ ಮಾಡದೆ ಅಲ್ಲೇ ಇಳಿದುಕೊಳ್ಳುತ್ತಿದ್ದರು. ಅದು ಮೇಲೆ ಎದ್ದಾಗ ಮಾತ್ರ ಅವರು ಪ್ರಯಾಣ ಮಾಡುತ್ತಿದ್ದರು.
עַל־פִּי יְהוָה יַחֲנוּ וְעַל־פִּי יְהוָה יִסָּעוּ אֶת־מִשְׁמֶרֶת יְהוָה שָׁמָרוּ עַל־פִּי יְהוָה בְּיַד־מֹשֶֽׁה׃ | 23 |
ಯೆಹೋವ ದೇವರ ಆಜ್ಞೆಯ ಪ್ರಕಾರ ಅವರು ಇಳಿದುಕೊಳ್ಳುತ್ತಾ, ಯೆಹೋವ ದೇವರ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಯೆಹೋವ ದೇವರು ಆಜ್ಞಾಪಿಸಿದಂತೆ ಯೆಹೋವ ದೇವರ ಅಪ್ಪಣೆಯನ್ನು ಕೈಗೊಳ್ಳುತ್ತಿದ್ದರು.