< מִשְׁלֵי 14 >
חַכְמוֹת נָשִׁים בָּנְתָה בֵיתָהּ וְאִוֶּלֶת בְּיָדֶיהָ תֶהֶרְסֶֽנּוּ׃ | 1 |
೧ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು, ಜ್ಞಾನಹೀನಳು ಅದನ್ನು ಸ್ವಂತ ಕೈಯಿಂದ ನಾಶಮಾಡುವಳು.
הוֹלֵךְ בְּיָשְׁרוֹ יְרֵא יְהוָה וּנְלוֹז דְּרָכָיו בּוֹזֵֽהוּ׃ | 2 |
೨ಸರಳಮಾರ್ಗಿಯು ಯೆಹೋವನಿಗೆ ಭಯಪಡುವನು, ವಕ್ರಮಾರ್ಗಿಯು ಆತನನ್ನು ಅಸಡ್ಡೆಮಾಡುವನು.
בְּֽפִי־אֱוִיל חֹטֶר גַּאֲוָה וְשִׂפְתֵי חֲכָמִים תִּשְׁמוּרֵֽם׃ | 3 |
೩ಮೂರ್ಖನ ಮಾತುಗಳು ಅವನ ಬೆನ್ನಿಗೆ ಬೆತ್ತ, ಜ್ಞಾನಿಗಳ ತುಟಿಗಳು ಅವರನ್ನು ಕಾಯುವವು.
בְּאֵין אֲלָפִים אֵבוּס בָּר וְרָב־תְּבוּאוֹת בְּכֹחַ שֽׁוֹר׃ | 4 |
೪ಎತ್ತುಗಳಿಲ್ಲದಿರುವಾಗ ಗೋದಲಿಯು ಶುದ್ಧ, ಆದರೆ ಎತ್ತಿನ ಶಕ್ತಿಯಿಂದಲೇ ಬೆಳೆಯ ವೃದ್ಧಿಯಾಗುವುದು.
עֵד אֱמוּנִים לֹא יְכַזֵּב וְיָפִיחַ כְּזָבִים עֵד שָֽׁקֶר׃ | 5 |
೫ಸತ್ಯಸಾಕ್ಷಿಯು ಸುಳ್ಳಾಡನು, ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು.
בִּקֶּשׁ־לֵץ חָכְמָה וָאָיִן וְדַעַת לְנָבוֹן נָקָֽל׃ | 6 |
೬ಧರ್ಮನಿಂದಕನಲ್ಲಿ ಹುಡುಕಿದರೂ ಜ್ಞಾನವು ಸಿಕ್ಕದು, ವಿವೇಕಿಗೆ ತಿಳಿವಳಿಕೆಯು ಸುಲಭವಾಗಿ ದೊರೆಯುವುದು.
לֵךְ מִנֶּגֶד לְאִישׁ כְּסִיל וּבַל־יָדַעְתָּ שִׂפְתֵי־דָֽעַת׃ | 7 |
೭ನೀನು ಜ್ಞಾನಹೀನನ ಬಳಿಗೆ ಹೋದರೆ ಅವನ ತುಟಿಗಳಲ್ಲಿ ಯಾವ ತಿಳಿವಳಿಕೆಯನ್ನೂ ಕಾಣಲಾರೆ.
חָכְמַת עָרוּם הָבִין דַּרְכּוֹ וְאִוֶּלֶת כְּסִילִים מִרְמָֽה׃ | 8 |
೮ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ.
אֱוִלִים יָלִיץ אָשָׁם וּבֵין יְשָׁרִים רָצֽוֹן׃ | 9 |
೯ಮೂರ್ಖರನ್ನು ಅವರ ದೋಷವೇ ಹಾಸ್ಯಮಾಡುವುದು, ಯಥಾರ್ಥವಂತರಲ್ಲಿ (ದೇವರ) ದಯೆಯಿರುವುದು.
לֵב יוֹדֵעַ מָרַּת נַפְשׁוֹ וּבְשִׂמְחָתוֹ לֹא־יִתְעָרַב זָֽר׃ | 10 |
೧೦ಪ್ರತಿಯೊಬ್ಬನು ತನ್ನ ಹೃದಯದ ವ್ಯಾಕುಲವನ್ನು ತಾನು ಗ್ರಹಿಸಿಕೊಳ್ಳುವನು, ಅವನ ಆನಂದದಲ್ಲಿಯೂ ಬೇರೆಯವರು ಪಾಲುಗಾರರಾಗುವುದಿಲ್ಲ.
בֵּית רְשָׁעִים יִשָּׁמֵד וְאֹהֶל יְשָׁרִים יַפְרִֽיחַ׃ | 11 |
೧೧ದುಷ್ಟರ ಮನೆಗೆ ನಾಶನ, ಶಿಷ್ಟರ ಗುಡಾರಕ್ಕೆ ಏಳಿಗೆ.
יֵשׁ דֶּרֶךְ יָשָׁר לִפְנֵי־אִישׁ וְאַחֲרִיתָהּ דַּרְכֵי־מָֽוֶת׃ | 12 |
೧೨ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ.
גַּם־בִּשְׂחוֹק יִכְאַב־לֵב וְאַחֲרִיתָהּ שִׂמְחָה תוּגָֽה׃ | 13 |
೧೩ನಗುವವನಿಗೂ ಮನೋವ್ಯಥೆಯುಂಟು, ಉಲ್ಲಾಸದ ಅಂತ್ಯವು ವ್ಯಾಕುಲವೇ.
מִדְּרָכָיו יִשְׂבַּע סוּג לֵב וּמֵעָלָיו אִישׁ טֽוֹב׃ | 14 |
೧೪ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು, ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.
פֶּתִי יַאֲמִין לְכָל־דָּבָר וְעָרוּם יָבִין לַאֲשֻׁרֽוֹ׃ | 15 |
೧೫ಮೂಢನು ಯಾವ ಮಾತನ್ನಾದರೂ ನಂಬುವನು, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.
חָכָם יָרֵא וְסָר מֵרָע וּכְסִיל מִתְעַבֵּר וּבוֹטֵֽחַ׃ | 16 |
೧೬ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು.
קְֽצַר־אַפַּיִם יַעֲשֶׂה אִוֶּלֶת וְאִישׁ מְזִמּוֹת יִשָּׂנֵֽא׃ | 17 |
೧೭ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುವನು, ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು.
נָחֲלוּ פְתָאיִם אִוֶּלֶת וַֽעֲרוּמִים יַכְתִּרוּ דָֽעַת׃ | 18 |
೧೮ಮೂರ್ಖರಿಗೆ ಮೂರ್ಖತನವೇ ಸ್ವತ್ತು, ಜಾಣರಿಗೆ ಜ್ಞಾನವೇ ಕಿರೀಟ.
שַׁחוּ רָעִים לִפְנֵי טוֹבִים וּרְשָׁעִים עַֽל־שַׁעֲרֵי צַדִּֽיק׃ | 19 |
೧೯ಕೆಟ್ಟವರು ಒಳ್ಳೆಯವರಿಗೆ ಬಾಗುವರು, ದುಷ್ಟರು ಶಿಷ್ಟರ ಬಾಗಿಲಲ್ಲಿ ಅಡ್ಡಬೀಳುವರು.
גַּם־לְרֵעֵהוּ יִשָּׂנֵא רָשׁ וְאֹהֲבֵי עָשִׁיר רַבִּֽים׃ | 20 |
೨೦ಬಡವನು ನೆರೆಯವನಿಗೂ ಅಸಹ್ಯ, ಧನವಂತನಿಗೆ ಬಹು ಜನ ಮಿತ್ರರು.
בָּז־לְרֵעֵהוּ חוֹטֵא וּמְחוֹנֵן עניים עֲנָוִים אַשְׁרָֽיו׃ | 21 |
೨೧ನೆರೆಯವನನ್ನು ತಿರಸ್ಕರಿಸುವವನು ದೋಷಿ, ದರಿದ್ರನನ್ನು ಕನಿಕರಿಸುವವನು ಧನ್ಯನು.
הֲֽלוֹא־יִתְעוּ חֹרְשֵׁי רָע וְחֶסֶד וֶאֱמֶת חֹרְשֵׁי טֽוֹב׃ | 22 |
೨೨ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ, ಒಳ್ಳೆಯದನ್ನು ಕಲ್ಪಿಸುವವರು ಪ್ರೀತಿಸತ್ಯತೆಗಳಿಗೆ ಪಾತ್ರರು.
בְּכָל־עֶצֶב יִהְיֶה מוֹתָר וּדְבַר־שְׂפָתַיִם אַךְ־לְמַחְסֽוֹר׃ | 23 |
೨೩ಶ್ರಮೆಯಿಂದ ಸಮೃದ್ಧಿ, ಹರಟೆಯಿಂದ ಕೊರತೆ.
עֲטֶרֶת חֲכָמִים עָשְׁרָם אִוֶּלֶת כְּסִילִים אִוֶּֽלֶת׃ | 24 |
೨೪ಜ್ಞಾನಿಗಳ ಜ್ಞಾನಕಿರೀಟವೇ ಅವರ ಶ್ರೇಷ್ಠ ಸಂಪತ್ತು, ಜ್ಞಾನಹೀನರ ಮೂರ್ಖತನವು ಬರೀ ಮೂರ್ಖತನವೇ.
מַצִּיל נְפָשׁוֹת עֵד אֱמֶת וְיָפִחַ כְּזָבִים מִרְמָֽה׃ | 25 |
೨೫ಸತ್ಯಸಾಕ್ಷಿಯು ಪ್ರಾಣರಕ್ಷಕ, ಸುಳ್ಳುಸಾಕ್ಷಿಯು ವಂಚಕ.
בְּיִרְאַת יְהוָה מִבְטַח־עֹז וּלְבָנָיו יִהְיֶה מַחְסֶֽה׃ | 26 |
೨೬ಯೆಹೋವನಿಗೆ ಭಯಪಡುವುದರಿಂದ ಕೇವಲ ನಿರ್ಭಯ, ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವುದು.
יִרְאַת יְהוָה מְקוֹר חַיִּים לָסוּר מִמֹּקְשֵׁי מָֽוֶת׃ | 27 |
೨೭ಯೆಹೋವನ ಭಯ ಜೀವದ ಬುಗ್ಗೆ, ಮೃತ್ಯುಪಾಶದಿಂದ ತಪ್ಪಿಸಿಕೊಳ್ಳಲು ಅದು ಸಾಧನವಾಗಿದೆ.
בְּרָב־עָם הַדְרַת־מֶלֶךְ וּבְאֶפֶס לְאֹם מְחִתַּת רָזֽוֹן׃ | 28 |
೨೮ಪ್ರಜೆಗಳ ವೃದ್ಧಿ ರಾಜನ ಮಹಿಮೆ, ಪ್ರಜೆಗಳ ನಾಶ ಪ್ರಭುವಿಗೆ ಭಯ.
אֶרֶךְ אַפַּיִם רַב־תְּבוּנָה וּקְצַר־רוּחַ מֵרִים אִוֶּֽלֶת׃ | 29 |
೨೯ದೀರ್ಘಶಾಂತನು ಕೇವಲ ಬುದ್ಧಿವಂತನು, ಮುಂಗೋಪಿಯು ಮೂರ್ಖತನವನ್ನು ಧ್ವಜವಾಗಿ ಎತ್ತುವನು.
חַיֵּי בְשָׂרִים לֵב מַרְפֵּא וּרְקַב עֲצָמוֹת קִנְאָֽה׃ | 30 |
೩೦ಶಾಂತಗುಣವು ದೇಹಕ್ಕೆ ಜೀವಾಧಾರವು, ಕ್ರೋಧವು ಎಲುಬಿಗೆ ಕ್ಷಯವು.
עֹשֵֽׁק דָּל חֵרֵף עֹשֵׂהוּ וּמְכַבְּדוֹ חֹנֵן אֶבְיֽוֹן׃ | 31 |
೩೧ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.
בְּֽרָעָתוֹ יִדָּחֶה רָשָׁע וְחֹסֶה בְמוֹתוֹ צַדּֽ͏ִיק׃ | 32 |
೩೨ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.
בְּלֵב נָבוֹן תָּנוּחַ חָכְמָה וּבְקֶרֶב כְּסִילִים תִּוָּדֵֽעַ׃ | 33 |
೩೩ವಿವೇಕಿಯ ಹೃದಯ ಜ್ಞಾನಾಶ್ರಯ, ಜ್ಞಾನಹೀನನ ಹೃದಯದಲ್ಲಿ ಅದು ಕಾಣದು.
צְדָקָה תְרֽוֹמֵֽם־גּוֹי וְחֶסֶד לְאֻמִּים חַטָּֽאת׃ | 34 |
೩೪ಪ್ರಜೆಗೆ ಧರ್ಮವು ಉನ್ನತಿ, ಅಧರ್ಮವು ಅವಮಾನ.
רְֽצוֹן־מֶלֶךְ לְעֶבֶד מַשְׂכִּיל וְעֶבְרָתוֹ תִּהְיֶה מֵבִֽישׁ׃ | 35 |
೩೫ಜಾಣನಾದ ಸೇವಕನಿಗೆ ರಾಜನ ಕೃಪೆ, ಮಾನಗೇಡಿಗೆ ರಾಜನ ರೌದ್ರ.