< מִשְׁלֵי 2 >
בְּנִי אִם־תִּקַּח אֲמָרָי וּמִצְוֺתַי תִּצְפֹּן אִתָּֽךְ׃ | 1 |
೧ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ, ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ,
לְהַקְשִׁיב לַֽחָכְמָה אָזְנֶךָ תַּטֶּה לִבְּךָ לַתְּבוּנָֽה׃ | 2 |
೨ನಿನ್ನ ಕಿವಿಯನ್ನು ಜ್ಞಾನದ ಕಡೆಗೂ, ಹೃದಯವನ್ನು ವಿವೇಕದ ಕಡೆಗೂ ತಿರುಗಿಸು;
כִּי אִם לַבִּינָה תִקְרָא לַתְּבוּנָה תִּתֵּן קוֹלֶֽךָ׃ | 3 |
೩ಬುದ್ಧಿಗಾಗಿ ಮೊರೆಯಿಟ್ಟು, ವಿವೇಕಕ್ಕಾಗಿ ಕೂಗಿಕೋ.
אִם־תְּבַקְשֶׁנָּה כַכָּסֶף וְֽכַמַּטְמוֹנִים תַּחְפְּשֶֽׂנָּה׃ | 4 |
೪ಅದನ್ನು ಬೆಳ್ಳಿಯಂತೆಯು ಮತ್ತು ನಿಕ್ಷೇಪದಂತೆಯು ಹುಡುಕು;
אָז תָּבִין יִרְאַת יְהוָה וְדַעַת אֱלֹהִים תִּמְצָֽא׃ | 5 |
೫ಆಗ ನೀನು ಯೆಹೋವನ ಭಯವನ್ನು ಅರಿತು, ದೈವಜ್ಞಾನವನ್ನು ಪಡೆದುಕೊಳ್ಳುವಿ.
כִּֽי־יְהוָה יִתֵּן חָכְמָה מִפִּיו דַּעַת וּתְבוּנָֽה׃ | 6 |
೬ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ.
וצפן יִצְפֹּן לַיְשָׁרִים תּוּשִׁיָּה מָגֵן לְהֹלְכֵי תֹֽם׃ | 7 |
೭ಆತನು ಯಥಾರ್ಥಚಿತ್ತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು. ದೋಷವಿಲ್ಲದೆ ನಡೆಯುವವರಿಗೆ ಗುರಾಣಿಯಾಗಿದ್ದು,
לִנְצֹר אָרְחוֹת מִשְׁפָּט וְדֶרֶךְ חסידו חֲסִידָיו יִשְׁמֹֽר׃ | 8 |
೮ನ್ಯಾಯಮಾರ್ಗವನ್ನು ರಕ್ಷಿಸುತ್ತಾ, ತನ್ನ ಭಕ್ತರ ದಾರಿಯನ್ನು ನೋಡಿಕೊಳ್ಳುವನು.
אָז תָּבִין צֶדֶק וּמִשְׁפָּט וּמֵישָׁרִים כָּל־מַעְגַּל־טֽוֹב׃ | 9 |
೯ಹೀಗಿರಲು ನೀನು ನೀತಿ, ನ್ಯಾಯ, ಧರ್ಮವನ್ನೂ ಅಂದರೆ ಸಕಲ ಸನ್ಮಾರ್ಗಗಳನ್ನು ತಿಳಿದುಕೊಳ್ಳುವಿ.
כִּֽי־תָבוֹא חָכְמָה בְלִבֶּךָ וְדַעַת לְֽנַפְשְׁךָ יִנְעָֽם׃ | 10 |
೧೦ಜ್ಞಾನವು ನಿನ್ನ ಹೃದಯದೊಳಗೆ ಪ್ರವೇಶಿಸುವುದು, ತಿಳಿವಳಿಕೆಯು ನಿನ್ನ ಆತ್ಮಕ್ಕೆ ಹಿತಕರವಾಗಿರುವುದು.
מְזִמָּה תִּשְׁמֹר עָלֶיךָ תְּבוּנָה תִנְצְרֶֽכָּה׃ | 11 |
೧೧ಬುದ್ಧಿಯು ನಿನಗೆ ಕಾವಲಾಗಿರುವುದು, ವಿವೇಕವು ನಿನ್ನನ್ನು ಕಾಪಾಡುವುದು.
לְהַצִּילְךָ מִדֶּרֶךְ רָע מֵאִישׁ מְדַבֵּר תַּהְפֻּכֽוֹת׃ | 12 |
೧೨ಇದರಿಂದ ನೀನು ದುರ್ಮಾರ್ಗದಿಂದಲೂ, ಕೆಟ್ಟ ಮಾತನಾಡುವವರಿಂದಲೂ ತಪ್ಪಿಸಿಕೊಳ್ಳುವಿ.
הַעֹזְבִים אָרְחוֹת יֹשֶׁר לָלֶכֶת בְּדַרְכֵי־חֹֽשֶׁךְ׃ | 13 |
೧೩ಅವರಾದರೋ ಕತ್ತಲೆಯ ಮಾರ್ಗಗಳನ್ನು ಹಿಡಿಯಬೇಕೆಂದು, ಧರ್ಮಮಾರ್ಗಗಳನ್ನು ತೊರೆದುಬಿಡುವರು.
הַשְּׂמֵחִים לַעֲשׂוֹת רָע יָגִילוּ בְּֽתַהְפֻּכוֹת רָֽע׃ | 14 |
೧೪ಅವರು ಕೆಟ್ಟದ್ದನ್ನು ಮಾಡುವುದರಲ್ಲಿ ಸಂತೋಷಿಸಿ, ಕೆಟ್ಟವರ ದುಷ್ಟತನದಲ್ಲಿ ಆನಂದಿಸುವರು.
אֲשֶׁר אָרְחֹתֵיהֶם עִקְּשִׁים וּנְלוֹזִים בְּמַעְגְּלוֹתָֽם׃ | 15 |
೧೫ಅವರ ಮಾರ್ಗಗಳು ವಕ್ರವಾಗಿವೆ. ಅವರ ನಡತೆಗಳು ದುರ್ನಡತೆಗಳೇ.
לְהַצִּילְךָ מֵאִשָּׁה זָרָה מִנָּכְרִיָּה אֲמָרֶיהָ הֶחֱלִֽיקָה׃ | 16 |
೧೬ವಿವೇಕವು ನಿನ್ನನ್ನು ಜಾರಳಿಂದ ಅಂದರೆ ಸವಿಮಾತನಾಡುವ ಪರಸ್ತ್ರೀಯಿಂದ ತಪ್ಪಿಸುವುದು.
הַעֹזֶבֶת אַלּוּף נְעוּרֶיהָ וְאֶת־בְּרִית אֱלֹהֶיהָ שָׁכֵֽחָה׃ | 17 |
೧೭ಅವಳು ತನ್ನ ಯೌವನಕಾಲದ ಕಾಂತನನ್ನು ತ್ಯಜಿಸಿ, ತನ್ನ ದೇವರ ಮುಂದೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಟ್ಟಿದ್ದಾಳೆ.
כִּי שָׁחָה אֶל־מָוֶת בֵּיתָהּ וְאֶל־רְפָאִים מַעְגְּלֹתֶֽיהָ׃ | 18 |
೧೮ಅವಳ ಮನೆಯು ಪಾತಾಳಕ್ಕೆ ಇಳಿಯುವ ದಾರಿ, ಅವಳ ಮಾರ್ಗಗಳು ಪ್ರೇತಲೋಕಕ್ಕೆ ಹೋಗುತ್ತವೆ.
כָּל־בָּאֶיהָ לֹא יְשׁוּבוּן וְלֹֽא־יַשִּׂיגוּ אָרְחוֹת חַיִּֽים׃ | 19 |
೧೯ಅವಳ ಬಳಿಗೆ ಹೋಗುವವರು ಯಾರೂ ಹಿಂದಿರುಗುವುದಿಲ್ಲ, ಅವರಿಗೆ ಜೀವದ ಮಾರ್ಗವು ದೊರೆಯುವುದೇ ಇಲ್ಲ.
לְמַעַן תֵּלֵךְ בְּדֶרֶךְ טוֹבִים וְאָרְחוֹת צַדִּיקִים תִּשְׁמֹֽר׃ | 20 |
೨೦ಒಳ್ಳೆಯವರ ನಡತೆಯನ್ನು ಅನುಸರಿಸುವಂತೆ ವಿವೇಕವು ನಿನ್ನನ್ನು ಪ್ರೇರೇಪಿಸಿ, ನೀತಿವಂತರ ದಾರಿಗಳನ್ನು ಹಿಡಿಯುವ ಹಾಗೆ ಮಾಡುವುದು.
כִּֽי־יְשָׁרִים יִשְׁכְּנוּ אָרֶץ וּתְמִימִים יִוָּתְרוּ בָֽהּ׃ | 21 |
೨೧ಯಥಾರ್ಥವಂತರು ದೇಶದಲ್ಲಿ ಸ್ವತಂತ್ರರಾಗಿರುವರು, ನಿರ್ದೋಷಿಗಳು ಅದರಲ್ಲಿ ನೆಲೆಯಾಗಿರುವರು.
וּרְשָׁעִים מֵאֶרֶץ יִכָּרֵתוּ וּבוֹגְדִים יִסְּחוּ מִמֶּֽנָּה׃ | 22 |
೨೨ದುಷ್ಟರಾದರೋ ದೇಶದೊಳಗಿಂದ ತೆಗೆದುಹಾಕಲ್ಪಡುವರು, ದ್ರೋಹಿಗಳು ನಿರ್ಮೂಲರಾಗುವರು.