< תהילים 104 >
בָּרֲכִי נַפְשִׁי אֶת־יְהוָה יְהוָה אֱלֹהַי גָּדַלְתָּ מְּאֹד הוֹד וְהָדָר לָבָֽשְׁתָּ׃ | 1 |
೧ನನ್ನ ಮನವೇ, ಯೆಹೋವನನ್ನು ಕೊಂಡಾಡು. ಯೆಹೋವನೇ, ನನ್ನ ದೇವರೇ, ನೀನು ಸರ್ವೋತ್ತಮನು; ಪ್ರಭಾವ ಮತ್ತು ಮಹತ್ವಗಳಿಂದ ಭೂಷಿತನಾಗಿರುವೆ.
עֹֽטֶה־אוֹר כַּשַּׂלְמָה נוֹטֶה שָׁמַיִם כַּיְרִיעָֽה׃ | 2 |
೨ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿರುವೆ; ಆಕಾಶವನ್ನು ಗುಡಾರದಂತೆ ಎತ್ತಿ ಹರಡಿರುವೆ.
הַמְקָרֶֽה בַמַּיִם עֲֽלִיּוֹתָיו הַשָּׂם־עָבִים רְכוּבוֹ הַֽמְהַלֵּךְ עַל־כַּנְפֵי־רֽוּחַ׃ | 3 |
೩ನೀರಿನ ಮೇಲೆ ತೊಳೆಗಳನ್ನು ನಿಲ್ಲಿಸಿ ಉಪ್ಪರಿಗೆಗಳನ್ನು ಕಟ್ಟಿಕೊಂಡು; ಮೋಡಗಳನ್ನು ವಾಹನವಾಗಿ ಮಾಡಿಕೊಂಡಿರುವೆ; ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ.
עֹשֶׂה מַלְאָכָיו רוּחוֹת מְשָׁרְתָיו אֵשׁ לֹהֵֽט׃ | 4 |
೪ಗಾಳಿಯನ್ನು ನಿನ್ನ ದೂತರನ್ನಾಗಿಯೂ, ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ.
יָֽסַד־אֶרֶץ עַל־מְכוֹנֶיהָ בַּל־תִּמּוֹט עוֹלָם וָעֶֽד׃ | 5 |
೫ಭೂಮಿಯು ಯುಗಯುಗಾಂತರಕ್ಕೂ ಕದಲದ ಹಾಗೆ ಅದನ್ನು ದೃಢವಾದ ಅಸ್ತಿವಾರದ ಮೇಲೆ ಸ್ಥಾಪಿಸಿದ್ದೀ.
תְּהוֹם כַּלְּבוּשׁ כִּסִּיתוֹ עַל־הָרִים יַֽעַמְדוּ־מָֽיִם׃ | 6 |
೬ನೀನು ಅದನ್ನು ಆದಿಸಾಗರವೆಂಬ ವಸ್ತ್ರದಿಂದ ಹೊದಿಸಿದ್ದೀ; ನೀರು ಪರ್ವತಗಳನ್ನೂ ಮುಚ್ಚಿಬಿಟ್ಟಿತ್ತು.
מִן־גַּעֲרָתְךָ יְנוּסוּן מִן־קוֹל רַֽעַמְךָ יֵחָפֵזֽוּן׃ | 7 |
೭ನೀನು ಗದರಿಸಲು ಅದು ಓಡಿಹೋಯಿತು; ನಿನ್ನ ಗರ್ಜನೆಗೆ ಹೆದರಿ ನೀನು ನೇಮಿಸಿದ ಸ್ಥಳಕ್ಕೆ ಹೋಗಲು,
יַעֲלוּ הָרִים יֵרְדוּ בְקָעוֹת אֶל־מְקוֹם זֶה ׀ יָסַדְתָּ לָהֶֽם׃ | 8 |
೮ಪರ್ವತಗಳು ಎದ್ದವು; ತಗ್ಗುಗಳು ಇಳಿದವು.
גְּֽבוּל־שַׂמְתָּ בַּל־יֽ͏ַעֲבֹרוּן בַּל־יְשׁוּבוּן לְכַסּוֹת הָאָֽרֶץ׃ | 9 |
೯ಜಲರಾಶಿಗಳು ಬಂದು ಪುನಃ ಭೂಮಿಯನ್ನು ಮುಚ್ಚಿಕೊಳ್ಳದ ಹಾಗೆ, ನೀನು ಮೇರೆಗಳನ್ನು ಗೊತ್ತುಮಾಡಿದಿ.
הַֽמְשַׁלֵּחַ מַעְיָנִים בַּנְּחָלִים בֵּין הָרִים יְהַלֵּכֽוּן׃ | 10 |
೧೦ಬುಗ್ಗೆಗಳನ್ನು ತಗ್ಗುಗಳಿಗೆ ಬರಮಾಡುತ್ತೀ; ಅವು ಪರ್ವತಗಳ ನಡುವೆ ಹರಿದುಹೋಗುತ್ತವೆ.
יַשְׁקוּ כָּל־חַיְתוֹ שָׂדָי יִשְׁבְּרוּ פְרָאִים צְמָאָֽם׃ | 11 |
೧೧ಅವು ಅಡವಿಯ ಮೃಗಗಳಿಗೆ ನೀರುಕೊಡುತ್ತವೆ; ಕಾಡುಕತ್ತೆಗಳು ದಾಹ ತೀರಿಸಿಕೊಳ್ಳುತ್ತವೆ.
עֲלֵיהֶם עוֹף־הַשָּׁמַיִם יִשְׁכּוֹן מִבֵּין עֳפָאיִם יִתְּנוּ־קֽוֹל׃ | 12 |
೧೨ಪಕ್ಷಿಗಳು ಅವುಗಳ ಬಳಿಯ ಮರಗಳ ಕೊಂಬೆಗಳಲ್ಲಿ ವಾಸವಾಗಿದ್ದು ಗಾನಮಾಡುತ್ತವೆ.
מַשְׁקֶה הָרִים מֵעֲלִיּוֹתָיו מִפְּרִי מַעֲשֶׂיךָ תִּשְׂבַּע הָאָֽרֶץ׃ | 13 |
೧೩ನೀನು ನಿನ್ನ ಮೇಲಂತಸ್ತುಗಳಿಂದ ಪರ್ವತಗಳಿಗೆ ನೀರು ಕೊಡುತ್ತೀ; ನಿನ್ನ ಕಾರ್ಯಫಲದಿಂದ ಭೂಮಿಯು ತೃಪ್ತಿಹೊಂದುತ್ತದೆ.
מַצְמִיחַ חָצִיר ׀ לַבְּהֵמָה וְעֵשֶׂב לַעֲבֹדַת הָאָדָם לְהוֹצִיא לֶחֶם מִן־הָאָֽרֶץ׃ | 14 |
೧೪ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ; ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ. ಅವರು ಭೂವ್ಯವಸಾಯಮಾಡಿ ಆಹಾರವನ್ನು,
וְיַיִן ׀ יְשַׂמַּח לְֽבַב־אֱנוֹשׁ לְהַצְהִיל פָּנִים מִשָּׁמֶן וְלֶחֶם לְֽבַב־אֱנוֹשׁ יִסְעָֽד׃ | 15 |
೧೫ಹೃದಯಾನಂದಕರವಾದ ದ್ರಾಕ್ಷಾರಸವನ್ನು, ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು, ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ.
יִשְׂבְּעוּ עֲצֵי יְהוָה אַֽרְזֵי לְבָנוֹן אֲשֶׁר נָטָֽע׃ | 16 |
೧೬ಯೆಹೋವನು ನೆಟ್ಟ ಮರಗಳಾದ ಲೆಬನೋನಿನ ದೇವದಾರು ವೃಕ್ಷಗಳಿಗೆ ಬೇಕಾದಷ್ಟು ಜಲವಿರುತ್ತದೆ.
אֲשֶׁר־שָׁם צִפֳּרִים יְקַנֵּנוּ חֲסִידָה בְּרוֹשִׁים בֵּיתָֽהּ׃ | 17 |
೧೭ಪಕ್ಷಿಗಳು ಅವುಗಳಲ್ಲಿ ಗೂಡು ಕಟ್ಟಿಕೊಳ್ಳುತ್ತವೆ; ತುರಾಯಿ ಮರಗಳಲ್ಲಿ ಬಕಪಕ್ಷಿಗಳು ವಾಸಿಸುತ್ತವೆ.
הָרִים הַגְּבֹהִים לַיְּעֵלִים סְלָעִים מַחְסֶה לַֽשְׁפַנִּֽים׃ | 18 |
೧೮ಕಾಡಕುರಿಗಳಿಗೆ ಉನ್ನತವಾದ ಪರ್ವತಗಳೂ, ಬೆಟ್ಟದ ಮೊಲಗಳಿಗೆ ಬಂಡೆಗಳೂ ಆಶ್ರಯಸ್ಥಾನಗಳಾಗಿವೆ.
עָשָׂה יָרֵחַ לְמוֹעֲדִים שֶׁמֶשׁ יָדַע מְבוֹאֽוֹ׃ | 19 |
೧೯ವಿಶೇಷಕಾಲಗಳ ಸೂಚನೆಗಾಗಿ ಚಂದ್ರನನ್ನು ನಿರ್ಮಿಸಿರುವೆ; ಸೂರ್ಯನು ತನ್ನ ಅಸ್ತಮಾನ ಸಮಯವನ್ನು ಬಲ್ಲನು.
תָּֽשֶׁת־חֹשֶׁךְ וִיהִי לָיְלָה בּֽוֹ־תִרְמֹשׂ כָּל־חַיְתוֹ־יָֽעַר׃ | 20 |
೨೦ನೀನು ಕತ್ತಲೆಯನ್ನು ಬರಮಾಡಲು ರಾತ್ರಿಯಾಗುತ್ತದೆ. ಆಗ ಕಾಡಿನ ಮೃಗಗಳೆಲ್ಲಾ ಹೊರಬರುತ್ತವೆ.
הַכְּפִירִים שֹׁאֲגִים לַטָּרֶף וּלְבַקֵּשׁ מֵאֵל אָכְלָֽם׃ | 21 |
೨೧ಪ್ರಾಯದ ಸಿಂಹಗಳು ಬೇಟೆಗಾಗಿ ಗರ್ಜಿಸುತ್ತವೆ; ದೇವರಿಂದ ಆಹಾರವನ್ನು ಕೇಳಿಕೊಳ್ಳುತ್ತವೆ.
תִּזְרַח הַשֶּׁמֶשׁ יֵאָסֵפוּן וְאֶל־מְעוֹנֹתָם יִרְבָּצֽוּן׃ | 22 |
೨೨ಸೂರ್ಯೋದಯವಾಗಲು ಅವು ಬಂದು ತಮ್ಮ ಗವಿಗಳಲ್ಲಿ ಮಲಗಿಕೊಳ್ಳುತ್ತವೆ.
יֵצֵא אָדָם לְפָעֳלוֹ וְֽלַעֲבֹדָתוֹ עֲדֵי־עָֽרֶב׃ | 23 |
೨೩ಮನುಷ್ಯನು ತನ್ನ ಕೆಲಸಕ್ಕೆ ಹೊರಟು ಹೋಗುತ್ತಾನೆ; ಸಾಯಂಕಾಲದವರೆಗೆ ದುಡಿಯುತ್ತಾನೆ.
מָֽה־רַבּוּ מַעֲשֶׂיךָ ׀ יְֽהוָה כֻּלָּם בְּחָכְמָה עָשִׂיתָ מָלְאָה הָאָרֶץ קִנְיָנֶֽךָ׃ | 24 |
೨೪ಯೆಹೋವನೇ, ನಿನ್ನ ಕೈಕೆಲಸಗಳು ಬಗೆ ಬಗೆಯಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿರುವೆ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.
זֶה ׀ הַיָּם גָּדוֹל וּרְחַב יָדָיִם שָֽׁם־רֶמֶשׂ וְאֵין מִסְפָּר חַיּוֹת קְטַנּוֹת עִם־גְּדֹלֽוֹת׃ | 25 |
೨೫ಇಗೋ, ಬಹುವಿಶಾಲವಾದ ಸಮುದ್ರವು! ಅದರೊಳಗೆ ಲೆಕ್ಕವಿಲ್ಲದಷ್ಟು ಸಣ್ಣ, ದೊಡ್ಡ ಜೀವಜಂತುಗಳು ಚಲಿಸುತ್ತಿರುತ್ತವೆ.
שָׁם אֳנִיּוֹת יְהַלֵּכוּן לִוְיָתָן זֶֽה־יָצַרְתָּ לְשַֽׂחֶק־בּֽוֹ׃ | 26 |
೨೬ಅದರಲ್ಲಿ ಹಡಗುಗಳು ಸಂಚರಿಸುತ್ತವೆ ನೀನು ಉಂಟುಮಾಡಿದ ಲಿವ್ಯಾತಾನವು ಅದರಲ್ಲಿ ಆಡುತ್ತದೆ.
כֻּלָּם אֵלֶיךָ יְשַׂבֵּרוּן לָתֵת אָכְלָם בְּעִתּֽוֹ׃ | 27 |
೨೭ಇವುಗಳು ಹೊತ್ತುಹೊತ್ತಿಗೆ ಆಹಾರಕ್ಕೋಸ್ಕರ ನಿನ್ನನ್ನೇ ನಿರೀಕ್ಷಿಸುತ್ತವೆ.
תִּתֵּן לָהֶם יִלְקֹטוּן תִּפְתַּח יָֽדְךָ יִשְׂבְּעוּן טֽוֹב׃ | 28 |
೨೮ನೀನು ಕೊಡಲು ಅವು ತೆಗೆದುಕೊಳ್ಳುತ್ತವೆ; ನೀನು ಕೈತೆರೆಯಲು ಅವು ಒಳ್ಳೇಯದನ್ನು ಹೊಂದಿ ತೃಪ್ತಿಗೊಳ್ಳುತ್ತವೆ.
תַּסְתִּיר פָּנֶיךָ יִֽבָּהֵלוּן תֹּסֵף רוּחָם יִגְוָעוּן וְֽאֶל־עֲפָרָם יְשׁוּבֽוּן׃ | 29 |
೨೯ನೀನು ವಿಮುಖನಾಗಲು ತಲ್ಲಣಿಸುತ್ತವೆ; ಅವುಗಳ ಶ್ವಾಸವನ್ನು ತೆಗೆದುಬಿಡಲು ಅವು ಸತ್ತು ತಿರುಗಿ ಮಣ್ಣಿಗೆ ಸೇರುತ್ತವೆ.
תְּשַׁלַּח רוּחֲךָ יִבָּרֵאוּן וּתְחַדֵּשׁ פְּנֵי אֲדָמָֽה׃ | 30 |
೩೦ನೀನು ಜೀವಶ್ವಾಸವನ್ನು ಊದಲು ಅವು ಹೊಸದಾಗಿ ಹುಟ್ಟುತ್ತವೆ. ನೀನು ಭೂಮಿಯನ್ನು ನೂತನಪಡಿಸುತ್ತಿರುತ್ತಿ.
יְהִי כְבוֹד יְהוָה לְעוֹלָם יִשְׂמַח יְהוָה בְּמַעֲשָֽׂיו׃ | 31 |
೩೧ಯೆಹೋವನ ಮಹಿಮೆಯು ಸದಾಕಾಲವೂ ಇರಲಿ; ಯೆಹೋವನಿಗೆ ಆತನ ಸೃಷ್ಟಿಗಳಿಂದ ಸಂತೋಷವಾಗಲಿ.
הַמַּבִּיט לָאָרֶץ וַתִּרְעָד יִגַּע בֶּהָרִים וְֽיֶעֱשָֽׁנוּ׃ | 32 |
೩೨ಆತನು ದೃಷ್ಟಿಸಿದ ಮಾತ್ರದಿಂದಲೇ ಭೂಮಿಯು ಕಂಪಿಸುತ್ತದೆ; ಮುಟ್ಟುತ್ತಲೇ ಪರ್ವತಗಳು ಹೊಗೆಹಾಯುತ್ತವೆ.
אָשִׁירָה לַיהוָה בְּחַיָּי אֲזַמְּרָה לֵאלֹהַי בְּעוֹדִֽי׃ | 33 |
೩೩ನಾನು ಬದುಕಿರುವವರೆಗೂ ಯೆಹೋವನನ್ನು ಕೀರ್ತಿಸುತ್ತಿರುವೆನು; ಜೀವಮಾನವೆಲ್ಲಾ ನನ್ನ ದೇವರನ್ನು ಭಜಿಸುತ್ತಿರುವೆನು.
יֶעֱרַב עָלָיו שִׂיחִי אָנֹכִי אֶשְׂמַח בַּיהוָֽה׃ | 34 |
೩೪ನನ್ನ ಧ್ಯಾನದಿಂದ ಆತನಿಗೆ ಮೆಚ್ಚಿಕೆಯಾಗಲಿ; ನಾನಾದರೋ ಯೆಹೋವನಲ್ಲಿ ಆನಂದಿಸುವೆನು.
יִתַּמּוּ חַטָּאִים ׀ מִן־הָאָרֶץ וּרְשָׁעִים ׀ עוֹד אֵינָם בָּרֲכִי נַפְשִׁי אֶת־יְהוָה הַֽלְלוּ־יָֽהּ׃ | 35 |
೩೫ಪಾಪಾತ್ಮರು ಭೂಲೋಕದಲ್ಲಿ ಮುಗಿದುಹೋಗಲಿ; ದುಷ್ಟರು ನಿರ್ಮೂಲವಾಗಲಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ಯೆಹೋವನಿಗೆ ಸ್ತೋತ್ರ.