< תהילים 127 >
שִׁיר הַֽמַּֽעֲלוֹת לִשְׁלֹמֹה אִם־יְהוָה ׀ לֹא־יִבְנֶה בַיִת שָׁוְא ׀ עָמְלוּ בוֹנָיו בּוֹ אִם־יְהוָה לֹֽא־יִשְׁמָר־עִיר שָׁוְא ׀ שָׁקַד שׁוֹמֵֽר׃ | 1 |
ಸೊಲೊಮೋನನ ಯಾತ್ರಾ ಗೀತೆ. ಯೆಹೋವ ದೇವರು ಮನೆಯನ್ನು ಕಟ್ಟದೆ ಇದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಪ್ರಯಾಸಪಡುತ್ತಾರೆ; ಯೆಹೋವ ದೇವರು ಪಟ್ಟಣವನ್ನು ಕಾಯದೆ ಇದ್ದರೆ, ಅದನ್ನು ಕಾಯುವವರು ವ್ಯರ್ಥವಾಗಿ ಕಾಯುತ್ತಾರೆ.
שָׁוְא לָכֶם ׀ מַשְׁכִּימֵי קוּם מְאַֽחֲרֵי־שֶׁבֶת אֹכְלֵי לֶחֶם הָעֲצָבִים כֵּן יִתֵּן לִֽידִידוֹ שֵׁנָֽא׃ | 2 |
ನೀವು ಆಹಾರಕ್ಕಾಗಿ ಶ್ರಮೆಪಟ್ಟು, ಬೆಳಿಗ್ಗೆ ಬೇಗ ಏಳುವುದೂ, ರಾತ್ರಿ ತಡವಾಗಿ ಮಲಗುವುದೂ ವ್ಯರ್ಥವೇ, ದೇವರು ತಮ್ಮನ್ನು ಪ್ರೀತಿಸುವವರಿಗೆ ನಿದ್ರೆಯಿಂದಿರುವಾಗಲೂ ಅವಶ್ಯಕತೆಗಳನ್ನು ಒದಗಿಸಿಕೊಡುತ್ತಾರೆ.
הִנֵּה נַחֲלַת יְהוָה בָּנִים שָׂכָר פְּרִי הַבָּֽטֶן׃ | 3 |
ಮಕ್ಕಳು ಯೆಹೋವ ದೇವರು ಕೊಟ್ಟ ಸೊತ್ತು. ಗರ್ಭಫಲವು ದೇವರ ಬಹುಮಾನ.
כְּחִצִּים בְּיַד־גִּבּוֹר כֵּן בְּנֵי הַנְּעוּרִֽים׃ | 4 |
ಯೌವನದಲ್ಲಿ ಹುಟ್ಟಿದ ಮಕ್ಕಳು, ಯುದ್ಧವೀರನ ಕೈಯಲ್ಲಿಯ ಬಾಣಗಳಂತಿದ್ದಾರೆ.
אַשְׁרֵי הַגֶּבֶר אֲשֶׁר מִלֵּא אֶת־אַשְׁפָּתוֹ מֵהֶם לֹֽא־יֵבֹשׁוּ כִּֽי־יְדַבְּרוּ אֶת־אוֹיְבִים בַּשָּֽׁעַר׃ | 5 |
ಬಾಣಗಳನ್ನು ಬತ್ತಳಿಕೆಯಿಂದ ತುಂಬಿಸಿಕೊಂಡಿರುವವರು ಧನ್ಯರು, ಶತ್ರುಗಳ ಸಂಗಡ ನ್ಯಾಯಾಲಯದಲ್ಲಿ ವಾದಿಸುವಾಗ ಅವರು ನಾಚಿಕೆಪಡರು.