< תהילים 141 >

מִזְמוֹר לְדָוִד יְהוָה קְרָאתִיךָ חוּשָׁה לִּי הַאֲזִינָה קוֹלִי בְּקָרְאִי־לָֽךְ׃ 1
ದಾವೀದನ ಕೀರ್ತನೆ. ಯೆಹೋವ ದೇವರೇ, ನಿಮಗೆ ಮೊರೆಯಿಡುತ್ತೇನೆ, ನನ್ನ ಬಳಿಗೆ ಬರಲು ತ್ವರೆಪಡಿರಿ. ನಾನು ನಿಮ್ಮನ್ನು ಕರೆಯುವಾಗ, ನನಗೆ ಕಿವಿಗೊಡಿರಿ.
תִּכּוֹן תְּפִלָּתִי קְטֹרֶת לְפָנֶיךָ מַֽשְׂאַת כַּפַּי מִנְחַת־עָֽרֶב׃ 2
ನನ್ನ ಪ್ರಾರ್ಥನೆ ನಿಮ್ಮ ಮುಂದೆ ಧೂಪವಾಗಿರಲಿ, ನಾನು ನಿಮ್ಮ ಕಡೆ ಕೈ ಎತ್ತುವುದು ಸಾಯಂಕಾಲದ ಬಲಿಯಂತೆ ನಿಮಗೆ ಸಮರ್ಪಕವಾಗಿರಲಿ.
שִׁיתָה יְהוָה שָׁמְרָה לְפִי נִצְּרָה עַל־דַּל שְׂפָתָֽי׃ 3
ಯೆಹೋವ ದೇವರೇ, ನನ್ನ ಬಾಯಿಗೆ ಕಾವಲಿಡಿರಿ; ನನ್ನ ತುಟಿಗಳ ಕದವನ್ನು ಕಾಯಿರಿ;
אַל־תַּט־לִבִּי לְדָבָר ׀ רָע לְהִתְעוֹלֵל עֲלִלוֹת ׀ בְּרֶשַׁע אֶת־אִישִׁים פֹּֽעֲלֵי־אָוֶן וּבַל־אֶלְחַם בְּמַנְעַמֵּיהֶֽם׃ 4
ಅಪರಾಧ ಮಾಡುವವರ ಸಂಗಡ ನಾನು ಸಹ ಸೇರಿಕೊಂಡು ಕೆಟ್ಟ ಕಾರ್ಯಗಳನ್ನು ಮಾಡಲು ನನ್ನ ಹೃದಯ ಸೆಳೆಯದಂತೆ ಕಾಪಾಡಿರಿ; ಅವರ ಸವಿ ಊಟಗಳನ್ನು ನಾನು ಉಣ್ಣದಿರಲಿ.
יֶֽהֶלְמֵֽנִי־צַדִּיק ׀ חֶסֶד וְֽיוֹכִיחֵנִי שֶׁמֶן רֹאשׁ אַל־יָנִי רֹאשִׁי כִּי־עוֹד וּתְפִלָּתִי בְּרָעוֹתֵיהֶֽם׃ 5
ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ. ಅವರು ನನ್ನನ್ನು ಗದರಿಸಲಿ, ಅದು ನನ್ನ ತಲೆಗೆ ಅಭಿಷೇಕ; ನನ್ನ ತಲೆ ಅದನ್ನು ಬೇಡವೆನ್ನದಿರಲಿ; ಆದರೂ ನನ್ನ ಪ್ರಾರ್ಥನೆ ಯಾವಾಗಲೂ ದುಷ್ಟರ ಕಾರ್ಯಗಳಿಗೆ ವಿರೋಧವಾಗಿಯೇ ಇರುವುದು.
נִשְׁמְטוּ בִֽידֵי־סֶלַע שֹׁפְטֵיהֶם וְשָׁמְעוּ אֲמָרַי כִּי נָעֵֽמוּ׃ 6
ಅವರ ನ್ಯಾಯಾಧಿಪತಿಗಳು ಉನ್ನತ ಸ್ಥಳದಿಂದ ಕೆಳಬಿದ್ದಾಗ ಅವರು ನನ್ನ ಮಾತು ಕೇಳುವರು.
כְּמוֹ פֹלֵחַ וּבֹקֵעַ בָּאָרֶץ נִפְזְרוּ עֲצָמֵינוּ לְפִי שְׁאֽוֹל׃ (Sheol h7585) 7
ಅವರು ಹೀಗೆ ಹೇಳುವರು, “ಒಬ್ಬನು ಹೊಲವನ್ನು ಉತ್ತು, ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ ನಮ್ಮ ಎಲುಬುಗಳು ಪಾತಾಳ ದ್ವಾರದಲ್ಲಿ ಎರಚಲಾಗುವುದು.” (Sheol h7585)
כִּי אֵלֶיךָ ׀ יְהֹוִה אֲדֹנָי עֵינָי בְּכָה חָסִיתִי אַל־תְּעַר נַפְשִֽׁי׃ 8
ಆದರೆ ಸಾರ್ವಭೌಮ ಯೆಹೋವ ದೇವರೇ, ನನ್ನ ಕಣ್ಣುಗಳು ನಿಮ್ಮ ಕಡೆ ಇವೆ; ನಿಮ್ಮನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡಿರಿ.
שָׁמְרֵנִי מִידֵי פַח יָקְשׁוּ לִי וּמֹקְשׁוֹת פֹּעֲלֵי אָֽוֶן׃ 9
ಅವರು ನನಗೆ ಒಡ್ಡಿದ ಉರುಲಿನಿಂದಲೂ, ಅಪರಾಧಗಳ ನೇಣುಗಳಿಂದಲೂ ನನ್ನನ್ನು ಕಾಪಾಡಿರಿ.
יִפְּלוּ בְמַכְמֹרָיו רְשָׁעִים יַחַד אָנֹכִי עַֽד־אֶעֱבֽוֹר׃ 10
ನಾನು ತಪ್ಪಿಸಿಕೊಂಡು ಸುರಕ್ಷಿತವಾಗಿ ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿಯೇ ಬೀಳಲಿ.

< תהילים 141 >