< תהילים 46 >
לַמְנַצֵּחַ לִבְנֵי־קֹרַח עַֽל־עֲלָמוֹת שִֽׁיר׃ אֱלֹהִים לָנוּ מַחֲסֶה וָעֹז עֶזְרָה בְצָרוֹת נִמְצָא מְאֹֽד׃ | 1 |
೧ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಗೀತೆ; ತಾರಕಸ್ಥಾಯಿಯಲ್ಲಿ ಹಾಡತಕ್ಕದ್ದು. ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
עַל־כֵּן לֹא־נִירָא בְּהָמִיר אָרֶץ וּבְמוֹט הָרִים בְּלֵב יַמִּֽים׃ | 2 |
೨ಆದುದರಿಂದ ಭೂಮಿಯು ಮಾರ್ಪಟ್ಟರೂ, ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ, ನಮಗೇನೂ ಭಯವಿಲ್ಲ.
יֶהֱמוּ יֶחְמְרוּ מֵימָיו יִֽרְעֲשֽׁוּ־הָרִים בְּגַאֲוָתוֹ סֶֽלָה׃ | 3 |
೩ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು? ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ? (ಸೆಲಾ)
נָהָר פְּלָגָיו יְשַׂמְּחוּ עִיר־אֱלֹהִים קְדֹשׁ מִשְׁכְּנֵי עֶלְיֽוֹן׃ | 4 |
೪ಒಂದು ನದಿ ಇದೆ; ಅದರ ಕಾಲುವೆಗಳು, ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ, ದೇವರ ನಗರವನ್ನು ಸಂತೋಷಪಡಿಸುತ್ತವೆ.
אֱלֹהִים בְּקִרְבָּהּ בַּל־תִּמּוֹט יַעְזְרֶהָ אֱלֹהִים לִפְנוֹת בֹּֽקֶר׃ | 5 |
೫ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.
הָמוּ גוֹיִם מָטוּ מַמְלָכוֹת נָתַן בְּקוֹלוֹ תָּמוּג אָֽרֶץ׃ | 6 |
೬ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.
יְהוָה צְבָאוֹת עִמָּנוּ מִשְׂגָּֽב־לָנוּ אֱלֹהֵי יַעֲקֹב סֶֽלָה׃ | 7 |
೭ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. (ಸೆಲಾ)
לְֽכוּ־חֲזוּ מִפְעֲלוֹת יְהוָה אֲשֶׁר־שָׂם שַׁמּוֹת בָּאָֽרֶץ׃ | 8 |
೮ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; ಆತನು ಭೂಲೋಕದಲ್ಲಿ ಎಂಥಾ ವಿನಾಶವನ್ನು ಉಂಟುಮಾಡಿದ್ದಾನೆ.
מַשְׁבִּית מִלְחָמוֹת עַד־קְצֵה הָאָרֶץ קֶשֶׁת יְשַׁבֵּר וְקִצֵּץ חֲנִית עֲגָלוֹת יִשְׂרֹף בָּאֵֽשׁ׃ | 9 |
೯ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.
הַרְפּוּ וּדְעוּ כִּי־אָנֹכִי אֱלֹהִים אָרוּם בַּגּוֹיִם אָרוּם בָּאָֽרֶץ׃ | 10 |
೧೦“ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.
יְהוָה צְבָאוֹת עִמָּנוּ מִשְׂגָּֽב־לָנוּ אֱלֹהֵי יַעֲקֹב סֶֽלָה׃ | 11 |
೧೧ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. (ಸೆಲಾ)