< תהילים 59 >

לַמְנַצֵּחַ אַל־תַּשְׁחֵת לְדָוִד מִכְתָּם בִּשְׁלֹחַ שָׁאוּל וַֽיִּשְׁמְרוּ אֶת־הַבַּיִת לַהֲמִיתֽוֹ׃ הַצִּילֵנִי מֵאֹיְבַי ׀ אֱלֹהָי מִּמִתְקוֹמְמַי תְּשַׂגְּבֵֽנִי׃ 1
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ಸೌಲನ ಕಡೆಯವರು ದಾವೀದನ ಜೀವತೆಗೆಯಬೇಕೆಂದು ಅವನ ಮನೆಯ ಸುತ್ತಲೂ ಹೊಂಚುಹಾಕುತ್ತಿದ್ದಾಗ ಅವನು ರಚಿಸಿದ ಕಾವ್ಯ. ನನ್ನ ದೇವರೇ, ಶತ್ರುಗಳ ಕೈಯಿಂದ ನನ್ನನ್ನು ಬಿಡಿಸು; ನನಗೆ ವಿರುದ್ಧವಾಗಿ ಎದ್ದಿರುವವರಿಗೆ ನನ್ನನ್ನು ತಪ್ಪಿಸಿ ಭದ್ರಸ್ಥಳದಲ್ಲಿರಿಸು.
הַצִּילֵנִי מִפֹּעֲלֵי אָוֶן וּֽמֵאַנְשֵׁי דָמִים הוֹשִׁיעֵֽנִי׃ 2
ಕೆಡುಕರಿಂದ ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು.
כִּי הִנֵּה אָֽרְבוּ לְנַפְשִׁי יָגוּרוּ עָלַי עַזִים לֹא־פִשְׁעִי וְלֹא־חַטָּאתִי יְהוָֽה׃ 3
ಇಗೋ, ಅವರು ನನ್ನ ಜೀವಕ್ಕೆ ಹೊಂಚುಹಾಕುತ್ತಾರೆ; ಬಲಿಷ್ಠರು ನನಗೆ ವಿರುದ್ಧವಾಗಿ ಗುಂಪುಕೂಡಿದ್ದಾರೆ. ಯೆಹೋವನೇ, ನಾನು ನಿರ್ದೋಷಿಯೂ ನಿರಪರಾಧಿಯೂ ಅಲ್ಲವೇ!
בְּֽלִי־עָוֺן יְרוּצוּן וְיִכּוֹנָנוּ עוּרָה לִקְרָאתִי וּרְאֵה׃ 4
ನಿಷ್ಕಾರಣವಾಗಿ ನನ್ನ ಮೇಲೆ ಬೀಳಲು ಮುತ್ತಿಗೆ ಹಾಕಿ ನಿಂತಿದ್ದಾರೆ; ಎದ್ದು ಬಂದು ಪರಾಂಬರಿಸಿ ನನಗೆ ಸಹಾಯಮಾಡು.
וְאַתָּה יְהוָֽה־אֱלֹהִים ׀ צְבָאוֹת אֱלֹהֵי יִשְׂרָאֵל הָקִיצָה לִפְקֹד כָּֽל־הַגּוֹיִם אַל־תָּחֹן כָּל־בֹּגְדֵי אָוֶן סֶֽלָה׃ 5
ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, ನೀನು ಎಚ್ಚರವಾಗಿ ಎಲ್ಲಾ ಅನ್ಯಜನಾಂಗಗಳನ್ನು ದಂಡಿಸು. ದುಷ್ಟದ್ರೋಹಿಗಳಲ್ಲಿ ಒಬ್ಬನಿಗೂ ದಯತೋರಿಸಬೇಡ. (ಸೆಲಾ)
יָשׁוּבוּ לָעֶרֶב יֶהֱמוּ כַכָּלֶב וִיסוֹבְבוּ עִֽיר׃ 6
ಅವರು ಪ್ರತಿಸಾಯಂಕಾಲವೂ ಬಂದು ಬಂದು ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಿದ್ದಾರೆ.
הִנֵּה ׀ יַבִּיעוּן בְּפִיהֶם חֲרָבוֹת בְּשִׂפְתוֹתֵיהֶם כִּי־מִי שֹׁמֵֽעַ׃ 7
ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ; ಅವೆಲ್ಲಾ ಹರಿತವಾದ ಕತ್ತಿಗಳಂತಿವೆ, ಅವರು, “ನಮ್ಮನ್ನು ಕೇಳುವವರು ಯಾರು?” ಅಂದುಕೊಳ್ಳುತ್ತಾರೆ.
וְאַתָּה יְהוָה תִּשְׂחַק־לָמוֹ תִּלְעַג לְכָל־גּוֹיִֽם׃ 8
ಯೆಹೋವನೇ, ನೀನಾದರೋ ಅವರನ್ನು ನೋಡಿ ನಗುವಿ; ಎಲ್ಲಾ ಅನ್ಯಜನಾಂಗಗಳನ್ನು ಪರಿಹಾಸ್ಯಮಾಡುವಿ.
עֻזּוֹ אֵלֶיךָ אֶשְׁמֹרָה כִּֽי־אֱלֹהִים מִשְׂגַּבִּֽי׃ 9
ನನ್ನ ಬಲವೇ, ನಿನ್ನನ್ನು ನಿರೀಕ್ಷಿಸುತ್ತಿದ್ದೇನೆ. ನನ್ನ ಆಶ್ರಯದುರ್ಗವು ದೇವರೇ.
אֱלֹהֵי חסדו חַסְדִּי יְקַדְּמֵנִי אֱלֹהִים יַרְאֵנִי בְשֹׁרְרָֽי׃ 10
೧೦ನನ್ನ ದೇವರು ತನ್ನ ಮಹಾ ಪ್ರೀತಿಯಿಂದ ನನಗೆ ಸಹಾಯಮಾಡುವನು; ನನ್ನ ವಿರೋಧಿಗಳಿಗುಂಟಾದ ಶಿಕ್ಷೆಯನ್ನು ನಾನು ನೋಡುವಂತೆ ಮಾಡುವನು.
אַל־תַּהַרְגֵם ׀ פֶּֽן־יִשְׁכְּחוּ עַמִּי הֲנִיעֵמוֹ בְחֵילְךָ וְהוֹרִידֵמוֹ מָֽגִנֵּנוּ אֲדֹנָֽי׃ 11
೧೧ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ. ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ. ನಿನ್ನ ಸೇನಾಬಲದಿಂದ ಚದುರಿಸಿ, ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು.
חַטַּאת־פִּימוֹ דְּֽבַר־שְׂפָתֵימוֹ וְיִלָּכְדוּ בִגְאוֹנָם וּמֵאָלָה וּמִכַּחַשׁ יְסַפֵּֽרוּ׃ 12
೧೨ಅವರ ಬಾಯಿಂದ ಬರುವುದೆಲ್ಲಾ ಪಾಪದ ಮಾತೇ. ಅವರ ಅಹಂಕಾರದಿಂದಲೇ ಅವರು ಸಿಕ್ಕಿಬೀಳಲಿ.
כַּלֵּה בְחֵמָה כַּלֵּה וְֽאֵינֵמוֹ וְֽיֵדְעוּ כִּֽי־אֱלֹהִים מֹשֵׁל בְּיַעֲקֹב לְאַפְסֵי הָאָרֶץ סֶֽלָה׃ 13
೧೩ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ, ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬುದು, ಭೂಲೋಕದಲ್ಲೆಲ್ಲಾ ಗೊತ್ತಾಗಲಿ. (ಸೆಲಾ)
וְיָשׁוּבוּ לָעֶרֶב יֶהֱמוּ כַכָּלֶב וִיסוֹבְבוּ עִֽיר׃ 14
೧೪ಅವರು ಪ್ರತಿಸಾಯಂಕಾಲವೂ ಬಂದು ಬಂದು, ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಾ ಇದ್ದಾರೆ.
הֵמָּה ינועון יְנִיעוּן לֶאֱכֹל אִם־לֹא יִשְׂבְּעוּ וַיָּלִֽינוּ׃ 15
೧೫ಆಹಾರಕ್ಕಾಗಿ ಅತ್ತಿತ್ತ ತಿರುಗುತ್ತಾರೆ; ಹೊಟ್ಟೆಗಿಲ್ಲದಿದ್ದರೆ ಗುಣುಗುಟ್ಟುತ್ತಾರೆ.
וַאֲנִי ׀ אָשִׁיר עֻזֶּךָ וַאֲרַנֵּן לַבֹּקֶר חַסְדֶּךָ כִּֽי־הָיִיתָ מִשְׂגָּב לִי וּמָנוֹס בְּיוֹם צַר־לִֽי׃ 16
೧೬ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು; ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು.
עֻזִּי אֵלֶיךָ אֲזַמֵּרָה כִּֽי־אֱלֹהִים מִשְׂגַּבִּי אֱלֹהֵי חַסְדִּֽי׃ 17
೧೭ನನ್ನ ಬಲವೇ, ನಿನ್ನನ್ನು ಹಾಡಿಹರಸುವೆನು, ನನ್ನ ಆಶ್ರಯದುರ್ಗವೂ ಕೃಪಾನಿಧಿಯೂ ದೇವರೇ.

< תהילים 59 >