< תהילים 75 >
לַמְנַצֵּחַ אַל־תַּשְׁחֵת מִזְמוֹר לְאָסָף שִֽׁיר׃ הוֹדִינוּ לְּךָ ׀ אֱֽלֹהִים הוֹדִינוּ וְקָרוֹב שְׁמֶךָ סִפְּרוּ נִפְלְאוֹתֶֽיךָ׃ | 1 |
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ಕೀರ್ತನೆ; ಹಾಡು; ಆಸಾಫನದು. ದೇವರೇ, ಕೊಂಡಾಡುತ್ತೇವೆ; ನಿನ್ನನ್ನು ಕೊಂಡಾಡುತ್ತೇವೆ. ನಿನ್ನ ನಾಮ ಮಹತ್ವವನ್ನು ನೆನಪುಮಾಡಿಕೊಂಡು; ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುತ್ತೇವೆ.
כִּי אֶקַּח מוֹעֵד אֲנִי מֵישָׁרִים אֶשְׁפֹּֽט׃ | 2 |
೨ದೇವರು ನುಡಿದದ್ದು, “ನಿಯಮಿತ ಕಾಲವು ಬಂದಾಗ, ನಾನೇ ನೀತಿಯಿಂದ ತೀರ್ಪುಕೊಡುವೆನು.
נְֽמֹגִים אֶרֶץ וְכָל־יֹשְׁבֶיהָ אָנֹכִי תִכַּנְתִּי עַמּוּדֶיהָ סֶּֽלָה׃ | 3 |
೩ಎಲ್ಲಾ ನಿವಾಸಿಗಳೊಡನೆ ಭೂಮಿಯು ಕರಗಿ ಹೋದರೂ, ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ” ಎಂಬುದು. (ಸೆಲಾ)
אָמַרְתִּי לַֽהוֹלְלִים אַל־תָּהֹלּוּ וְלָרְשָׁעִים אַל־תָּרִימוּ קָֽרֶן׃ | 4 |
೪ನಾನು ಹೆಮ್ಮೆಗಾರರಿಗೆ, “ಕೊಚ್ಚಿಕೊಳ್ಳಬೇಡಿರಿ” ಎಂದು; ದುಷ್ಟರಿಗೆ, “ನಿಮ್ಮ ಕೊಂಬುಗಳನ್ನು ಮೇಲೆತ್ತಬೇಡಿರಿ;
אַל־תָּרִימוּ לַמָּרוֹם קַרְנְכֶם תְּדַבְּרוּ בְצַוָּאר עָתָֽק׃ | 5 |
೫ಕೊಂಬುಗಳನ್ನು ಮೇಲೆತ್ತಬೇಡಿರಿ; ಸೊಕ್ಕಿನಿಂದ ಮಾತನಾಡಬೇಡಿರಿ” ಎಂದು ಹೇಳುವೆನು.
כִּי לֹא מִמּוֹצָא וּמִֽמַּעֲרָב וְלֹא מִמִּדְבַּר הָרִֽים׃ | 6 |
೬ಏಕೆಂದರೆ ಉದ್ಧಾರವು ಪೂರ್ವದಿಂದಾಗಲಿ, ಪಶ್ಚಿಮದಿಂದಾಗಲಿ, ಅರಣ್ಯದಿಂದಾಗಲಿ ಬರುವುದಿಲ್ಲ.
כִּֽי־אֱלֹהִים שֹׁפֵט זֶה יַשְׁפִּיל וְזֶה יָרִֽים׃ | 7 |
೭ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು, ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ.
כִּי כוֹס בְּֽיַד־יְהוָה וְיַיִן חָמַר ׀ מָלֵא מֶסֶךְ וַיַּגֵּר מִזֶּה אַךְ־שְׁמָרֶיהָ יִמְצוּ יִשְׁתּוּ כֹּל רִשְׁעֵי־אָֽרֶץ׃ | 8 |
೮ಯೆಹೋವನ ಕೈಯಲ್ಲಿ ಪಾತ್ರೆ ಇದೆ; ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.
וַאֲנִי אַגִּיד לְעֹלָם אֲזַמְּרָה לֵאלֹהֵי יַעֲקֹֽב׃ | 9 |
೯ನಾನಾದರೋ ಸದಾ ವರ್ಣಿಸುವವನಾಗಿ, ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುತ್ತಾ ವರ್ಣಿಸಿ ಹಾಡುವೆನು.
וְכָל־קַרְנֵי רְשָׁעִים אֲגַדֵּעַ תְּרוֹמַמְנָה קַֽרְנוֹת צַדִּֽיק׃ | 10 |
೧೦ದುಷ್ಟರ ಕೊಂಬುಗಳನ್ನೆಲ್ಲಾ ಮುರಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳನ್ನು ಉನ್ನತಮಟ್ಟಕ್ಕೆ ಎತ್ತಲ್ಪಡುವವು.