< תהילים 89 >
מַשְׂכִּיל לְאֵיתָן הָֽאֶזְרָחִֽי׃ חַֽסְדֵי יְהוָה עוֹלָם אָשִׁירָה לְדֹר וָדֹר ׀ אוֹדִיעַ אֱמוּנָתְךָ בְּפִֽי׃ | 1 |
೧ಜೇರಹ ಕುಲದವನಾದ ಏತಾನನ ಪದ್ಯ. ಯೆಹೋವನೇ, ನಿತ್ಯವೂ ನಿನ್ನ ಕೃಪಾತಿಶಯವನ್ನು ಹಾಡಿಹರಸುವೆನು; ನನ್ನ ಬಾಯಿ ನಿನ್ನ ಸತ್ಯವನ್ನು, ಮುಂದಣ ಸಂತಾನದವರೆಲ್ಲರಿಗೂ ತಿಳಿಯಮಾಡುವುದು.
כִּֽי־אָמַרְתִּי עוֹלָם חֶסֶד יִבָּנֶה שָׁמַיִם ׀ תָּכִן אֱמוּנָתְךָ בָהֶֽם׃ | 2 |
೨ನಿನ್ನ ಪ್ರೀತಿಸಂಕಲ್ಪವು ನಿತ್ಯವು ಸಿದ್ಧಿಗೆ ಬರುತ್ತಲೇ ಇರುವುದು; ಆಕಾಶದಲ್ಲಿ ನಿನ್ನ ಸತ್ಯತೆಯನ್ನು ಸ್ಥಾಪಿಸುವಿ ಎಂದು ತಿಳಿದುಕೊಂಡಿದ್ದೇನೆ.
כָּרַתִּֽי בְרִית לִבְחִירִי נִשְׁבַּעְתִּי לְדָוִד עַבְדִּֽי׃ | 3 |
೩ನೀನು ನುಡಿದದ್ದೇನೆಂದರೆ, “ನಾನು ಆರಿಸಿಕೊಂಡ ಸೇವಕನಾದ ದಾವೀದನ ಸಂಗಡ ಒಡಂಬಡಿಕೆ ಮಾಡಿಕೊಂಡು ಆಣೆಯಿಟ್ಟು,
עַד־עוֹלָם אָכִין זַרְעֶךָ וּבָנִיתִי לְדֹר־וָדוֹר כִּסְאֲךָ סֶֽלָה׃ | 4 |
೪‘ಶಾಶ್ವತವಾಗಿ ನಿನ್ನ ಸಂತತಿಯನ್ನು ಸ್ಥಾಪಿಸುವೆನು, ತಲತಲಾಂತರಗಳಿಗೂ ನಿನ್ನ ಸಿಂಹಾಸನವನ್ನು ಸ್ಥಿರಪಡಿಸುವೆನು ಎಂದು ಹೇಳಿದ್ದೇನೆ’” ಎಂಬುವುದೇ. (ಸೆಲಾ)
וְיוֹדוּ שָׁמַיִם פִּלְאֲךָ יְהוָה אַף־אֱמֽוּנָתְךָ בִּקְהַל קְדֹשִֽׁים׃ | 5 |
೫ಯೆಹೋವನೇ, ಗಗನವು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವುದು; ನಿನ್ನ ಸತ್ಯವನ್ನು ಪರಿಶುದ್ಧರ ಸಭೆಯಲ್ಲಿ ಕೀರ್ತಿಸುವೆನು.
כִּי מִי בַשַּׁחַק יַעֲרֹךְ לַיהוָה יִדְמֶה לַיהוָה בִּבְנֵי אֵלִים׃ | 6 |
೬ಮೇಘಮಂಡಲದಲ್ಲಿ ಯೆಹೋವನಿಗೆ ಸಮಾನರು ಯಾರು? ದೇವದೂತರಲ್ಲಿ ಯೆಹೋವನಿಗೆ ಸರಿಯಾದವರು ಯಾರು?
אֵל נַעֲרָץ בְּסוֹד־קְדֹשִׁים רַבָּה וְנוֹרָא עַל־כָּל־סְבִיבָֽיו׃ | 7 |
೭ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.
יְהוָה ׀ אֱלֹהֵי צְבָאוֹת מִֽי־כָֽמוֹךָ חֲסִין ׀ יָהּ וֶאֱמֽוּנָתְךָ סְבִיבוֹתֶֽיךָ׃ | 8 |
೮ಯೆಹೋವನೇ, ಸೇನಾಧೀಶ್ವರನಾದ ದೇವರೇ, ನಿನಗೆ ಸಮಾನರು ಯಾರು? ಯಾಹುವೇ, ನೀನು ಶಕ್ತನು, ಸತ್ಯತೆಯಿಂದ ಆವರಿಸಲ್ಪಟ್ಟವನು.
אַתָּה מוֹשֵׁל בְּגֵאוּת הַיָּם בְּשׂוֹא גַלָּיו אַתָּה תְשַׁבְּחֵֽם׃ | 9 |
೯ಸಮುದ್ರದ ಅಲ್ಲಕಲ್ಲೋಲಗಳನ್ನು ಅಧೀನದಲ್ಲಿ ಇಟ್ಟುಕೊಂಡಿರುವವನು ನೀನು; ತೆರೆಗಳು ಏಳುವಾಗ ಅವುಗಳನ್ನು ತಡೆಯುವವನು ನೀನು.
אַתָּה דִכִּאתָ כֶחָלָל רָהַב בִּזְרוֹעַ עֻזְּךָ פִּזַּרְתָּ אוֹיְבֶֽיךָ׃ | 10 |
೧೦ರಹಬನ್ನು ಛೇದಿಸಿ ಸಾಯಿಸಿದವನು ನೀನು; ನಿನ್ನ ಭುಜಬಲದಿಂದ ಶತ್ರುಗಳನ್ನು ಚದರಿಸಿಬಿಟ್ಟಿದ್ದಿ.
לְךָ שָׁמַיִם אַף־לְךָ אָרֶץ תֵּבֵל וּמְלֹאָהּ אַתָּה יְסַדְתָּֽם׃ | 11 |
೧೧ಆಕಾಶವೂ ನಿನ್ನದು, ಭೂಮಿಯೂ ನಿನ್ನದೇ; ಲೋಕವನ್ನೂ ಅದರಲ್ಲಿರುವುದೆಲ್ಲವನ್ನೂ ನಿರ್ಮಿಸಿದವನು ನೀನು.
צָפוֹן וְיָמִין אַתָּה בְרָאתָם תָּבוֹר וְחֶרְמוֹן בְּשִׁמְךָ יְרַנֵּֽנוּ׃ | 12 |
೧೨ದಕ್ಷಿಣೋತ್ತರ ದಿಕ್ಕುಗಳನ್ನು ಉಂಟುಮಾಡಿದವನು ನೀನು. ತಾಬೋರ್, ಹೆರ್ಮೋನ್ ಪರ್ವತಗಳು ನಿನ್ನ ನಾಮದಲ್ಲಿ ಆನಂದಧ್ವನಿ ಮಾಡುತ್ತವೆ.
לְךָ זְרוֹעַ עִם־גְּבוּרָה תָּעֹז יָדְךָ תָּרוּם יְמִינֶֽךָ׃ | 13 |
೧೩ನಿನ್ನ ಭುಜಬಲವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು; ನಿನ್ನ ಬಲಗೈ ಮಹತ್ತುಗಳನ್ನು ನಡೆಸುತ್ತದೆ.
צֶדֶק וּמִשְׁפָּט מְכוֹן כִּסְאֶךָ חֶסֶד וֶאֱמֶת יְֽקַדְּמוּ פָנֶֽיךָ׃ | 14 |
೧೪ನೀತಿ ಮತ್ತು ನ್ಯಾಯಗಳು ನಿನ್ನ ಸಿಂಹಾಸನದ ಅಸ್ತಿವಾರವು; ನಿನ್ನ ಸಾನ್ನಿಧ್ಯದೂತರು ಪ್ರೀತಿ ಮತ್ತು ಸತ್ಯತೆಗಳೇ.
אַשְׁרֵי הָעָם יוֹדְעֵי תְרוּעָה יְהוָה בְּֽאוֹר־פָּנֶיךָ יְהַלֵּכֽוּן׃ | 15 |
೧೫ಉತ್ಸಾಹಧ್ವನಿಯನ್ನು ತಿಳಿದಿರುವ ಜನರು ಧನ್ಯರು; ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ.
בְּשִׁמְךָ יְגִילוּן כָּל־הַיּוֹם וּבְצִדְקָתְךָ יָרֽוּמוּ׃ | 16 |
೧೬ಯಾವಾಗಲೂ ನಿನ್ನ ನಾಮದಲ್ಲಿ ಆನಂದಿಸುತ್ತಾರೆ; ನಿನ್ನ ನೀತಿಯಿಂದ ಏಳಿಗೆ ಹೊಂದುತ್ತಾರೆ.
כִּֽי־תִפְאֶרֶת עֻזָּמוֹ אָתָּה וּבִרְצֹנְךָ תרים תָּרוּם קַרְנֵֽנוּ׃ | 17 |
೧೭ಅವರು ಹಿಗ್ಗುವ ಬಲವು ನೀನೇ. ನಿನ್ನ ಕರುಣೆಯ ಕಟಾಕ್ಷದಿಂದ ನಮ್ಮ ಕೊಂಬು ಎತ್ತಲ್ಪಟ್ಟಿರುವುದು.
כִּי לַֽיהוָה מָֽגִנֵּנוּ וְלִקְדוֹשׁ יִשְׂרָאֵל מַלְכֵּֽנוּ׃ | 18 |
೧೮ನಮಗೆ ಗುರಾಣಿಯಂತಿರುವ ನಮ್ಮ ಅರಸನು ಯೆಹೋವನೇ; ಅವನು ಇಸ್ರಾಯೇಲರ ಸದಮಲಸ್ವಾಮಿಯ, ಸ್ವಕೀಯನು.
אָז דִּבַּרְתָּֽ־בְחָזוֹן לַֽחֲסִידֶיךָ וַתֹּאמֶר שִׁוִּיתִי עֵזֶר עַל־גִּבּוֹר הֲרִימוֹתִי בָחוּר מֵעָֽם׃ | 19 |
೧೯ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ, “ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.
מָצָאתִי דָּוִד עַבְדִּי בְּשֶׁמֶן קָדְשִׁי מְשַׁחְתִּֽיו׃ | 20 |
೨೦ನನ್ನ ಸೇವಕನಾದ ದಾವೀದನನ್ನು ಕಂಡು, ಪರಿಶುದ್ಧ ತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ.
אֲשֶׁר יָדִי תִּכּוֹן עִמּוֹ אַף־זְרוֹעִי תְאַמְּצֶֽנּוּ׃ | 21 |
೨೧ನನ್ನ ಹಸ್ತವು ಅವನ ಮೇಲೆ ಸ್ಥಿರವಾಗಿರುವುದು; ನನ್ನ ಭುಜವು ಅವನನ್ನು ಬಲಪಡಿಸುವುದು.
לֹֽא־יַשִּׁא אוֹיֵב בּוֹ וּבֶן־עַוְלָה לֹא יְעַנֶּֽנּוּ׃ | 22 |
೨೨ವೈರಿಯ ಕುತಂತ್ರವು ಅವನಲ್ಲಿ ಸಾಗದು; ಯಾವ ಕೆಡುಕನೂ ಅವನನ್ನು ಕುಗ್ಗಿಸಲಾರನು.
וְכַתּוֹתִי מִפָּנָיו צָרָיו וּמְשַׂנְאָיו אֶגּֽוֹף׃ | 23 |
೨೩ಅವನ ವಿರೋಧಿಗಳನ್ನು ಅವನ ಮುಂದೆಯೇ ಜಜ್ಜಿ ಹಾಕುವೆನು; ಅವನ ದ್ವೇಷಿಗಳನ್ನು ಹತಮಾಡಿಬಿಡುವೆನು.
וֶֽאֶֽמוּנָתִי וְחַסְדִּי עִמּוֹ וּבִשְׁמִי תָּרוּם קַרְנֽוֹ׃ | 24 |
೨೪ಆದರೆ ನನ್ನ ಪ್ರೀತಿ ಮತ್ತು ಸತ್ಯತೆಗಳು ಅವನೊಡನೆ ಇರುವವು; ನನ್ನ ಹೆಸರಿನಿಂದ ಅವನ ಕೊಂಬು ಎತ್ತಲ್ಪಡುವುದು.
וְשַׂמְתִּי בַיָּם יָדוֹ וּֽבַנְּהָרוֹת יְמִינֽוֹ׃ | 25 |
೨೫ಸಮುದ್ರದಿಂದ ನದಿಗಳವರೆಗೂ ಅವನ ಹಸ್ತಕ್ಕೆ ಅಧಿಕಾರವನ್ನು ಕೊಡುವೆನು.
הוּא יִקְרָאֵנִי אָבִי אָתָּה אֵלִי וְצוּר יְשׁוּעָתִֽי׃ | 26 |
೨೬ಅವನು ನನಗೆ, ‘ನನ್ನ ತಂದೆಯೂ, ದೇವರೂ, ಆಶ್ರಯದುರ್ಗವೂ ನೀನೇ’ ಎಂದು ಹೇಳುವನು.
אַף־אָנִי בְּכוֹר אֶתְּנֵהוּ עֶלְיוֹן לְמַלְכֵי־אָֽרֶץ׃ | 27 |
೨೭ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನಾಗಿಯೂ, ಭೂರಾಜರಲ್ಲಿ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.
לְעוֹלָם אשמור־אֶשְׁמָר־לוֹ חַסְדִּי וּבְרִיתִי נֶאֱמֶנֶת לֽוֹ׃ | 28 |
೨೮ನನ್ನ ಕೃಪೆಯು ಅವನಲ್ಲಿ ಶಾಶ್ವತವಾಗಿ ಇರುವುದು; ನನ್ನ ಒಡಂಬಡಿಕೆಯು ಅವನಲ್ಲಿ ಸ್ಥಿರವಾಗಿರುವುದು.
וְשַׂמְתִּי לָעַד זַרְעוֹ וְכִסְאוֹ כִּימֵי שָׁמָֽיִם׃ | 29 |
೨೯ಅವನ ಸಂತಾನವನ್ನು ಯಾವಾಗಲೂ ಉಳಿಸುವೆನು. ಅವನ ಸಿಂಹಾಸನವು ಆಕಾಶವಿರುವವರೆಗೂ ಇರುವುದು.
אִם־יַֽעַזְבוּ בָנָיו תּוֹרָתִי וּבְמִשְׁפָּטַי לֹא יֵלֵכֽוּן׃ | 30 |
೩೦ಅವನ ಸಂತಾನದವರು ನನ್ನ ಧರ್ಮಶಾಸ್ತ್ರವನ್ನು ಬಿಟ್ಟು, ನನ್ನ ಆಜ್ಞೆಗಳಲ್ಲಿ ನಡೆಯದೆ,
אִם־חֻקֹּתַי יְחַלֵּלוּ וּמִצְוֺתַי לֹא יִשְׁמֹֽרוּ׃ | 31 |
೩೧ನನ್ನ ವಿಧಿಗಳನ್ನು ಮೀರಿ, ನನ್ನ ನೇಮಗಳನ್ನು ಪಾಲಿಸದೆ ಹೋದರೆ,
וּפָקַדְתִּי בְשֵׁבֶט פִּשְׁעָם וּבִנְגָעִים עֲוֺנָֽם׃ | 32 |
೩೨ಆಗ ನಾನು ಅವರ ದ್ರೋಹಕ್ಕಾಗಿ ಅವರನ್ನು ಬೆತ್ತದಿಂದ ಹೊಡೆಯುವೆನು; ಅವರ ಅಪರಾಧಕ್ಕಾಗಿ ಪೆಟ್ಟುಕೊಡುವೆನು.
וְחַסְדִּי לֹֽא־אָפִיר מֵֽעִמּוֹ וְלֹֽא־אֲשַׁקֵּר בֶּאֱמוּנָתִֽי׃ | 33 |
೩೩ಆದರೂ ನಾನು ಅವನಲ್ಲಿಟ್ಟಿರುವ ಕೃಪೆಯನ್ನು ತಪ್ಪಿಸುವುದಿಲ್ಲ; ನನ್ನ ನಂಬಿಗಸ್ತಿಕೆಯಿಂದ ಜಾರುವುದಿಲ್ಲ.
לֹא־אֲחַלֵּל בְּרִיתִי וּמוֹצָא שְׂפָתַי לֹא אֲשַׁנֶּֽה׃ | 34 |
೩೪ನನ್ನ ಒಡಂಬಡಿಕೆಯನ್ನು ಭಂಗಪಡಿಸುವುದಿಲ್ಲ; ನನ್ನ ಮಾತನ್ನು ಬದಲಿಸುವುದಿಲ್ಲ.
אַחַת נִשְׁבַּעְתִּי בְקָדְשִׁי אִֽם־לְדָוִד אֲכַזֵּֽב׃ | 35 |
೩೫ನನ್ನ ಪವಿತ್ರತ್ವದಲ್ಲಿ ಆಣೆಯಿಟ್ಟು ಒಂದು ಸಂಗತಿಯನ್ನು ಹೇಳಿದ್ದೇನೆ; ಅದರ ವಿಷಯದಲ್ಲಿ ನಾನು ದಾವೀದನಿಗೆ ಸುಳ್ಳುಗಾರನಾಗುವುದಿಲ್ಲ.
זַרְעוֹ לְעוֹלָם יִהְיֶה וְכִסְאוֹ כַשֶּׁמֶשׁ נֶגְדִּֽי׃ | 36 |
೩೬ಅದೇನೆಂದರೆ, ಅವನ ಸಂತತಿಯು ಶಾಶ್ವತವಾಗಿ ಇರುವುದು; ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು,
כְּיָרֵחַ יִכּוֹן עוֹלָם וְעֵד בַּשַּׁחַק נֶאֱמָן סֶֽלָה׃ | 37 |
೩೭ಚಂದ್ರನಂತೆ ನಿತ್ಯಕ್ಕೂ ಸ್ಥಿರವಾಗಿರುವುದು. ಪರಲೋಕದ ಸಾಕ್ಷಿ ಸತ್ಯವೇ ಸರಿ.” (ಸೆಲಾ)
וְאַתָּה זָנַחְתָּ וַתִּמְאָס הִתְעַבַּרְתָּ עִם־מְשִׁיחֶֽךָ׃ | 38 |
೩೮ಹೀಗೆ ಹೇಳಿದ ನೀನು ನಿನ್ನ ಅಭಿಷಿಕ್ತನ ಮೇಲೆ ಕೋಪಗೊಂಡವನಾಗಿ, ಅವನನ್ನು ಅಸಹ್ಯಿಸಿ ತಳ್ಳಿಬಿಟ್ಟಿದ್ದೀ.
נֵאַרְתָּה בְּרִית עַבְדֶּךָ חִלַּלְתָּ לָאָרֶץ נִזְרֽוֹ׃ | 39 |
೩೯ನೀನು ನಿನ್ನ ಸೇವಕನ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಅಪವಿತ್ರಮಾಡಿದ್ದೀ.
פָּרַצְתָּ כָל־גְּדֵרֹתָיו שַׂמְתָּ מִבְצָרָיו מְחִתָּה׃ | 40 |
೪೦ಅವನ ದೇಶದ ಮೇರೆಗಳನ್ನು ಕೆಡವಿ, ಕೋಟೆಗಳನ್ನು ಹಾಳುಮಾಡಿದ್ದೀ.
שַׁסֻּהוּ כָּל־עֹבְרֵי דָרֶךְ הָיָה חֶרְפָּה לִשְׁכֵנֽ͏ָיו׃ | 41 |
೪೧ದಾರಿಗರೆಲ್ಲರೂ ಅವನನ್ನು ಸುಲಿಗೆ ಮಾಡುತ್ತಾರೆ; ಅವನು ನೆರೆಹೊರೆಯವರ ಪರಿಹಾಸ್ಯಕ್ಕೆ ಗುರಿಯಾಗಿದ್ದಾನೆ.
הֲרִימוֹתָ יְמִין צָרָיו הִשְׂמַחְתָּ כָּל־אוֹיְבָֽיו׃ | 42 |
೪೨ಅವನ ವಿರೋಧಿಗಳ ಹಸ್ತವನ್ನು ಉನ್ನತಪಡಿಸಿದ್ದೀ; ಅವನ ವೈರಿಗಳಿಗೆಲ್ಲಾ ಆನಂದವಾಗುವಂತೆ ಮಾಡಿದ್ದೀ.
אַף־תָּשִׁיב צוּר חַרְבּוֹ וְלֹא הֲקֵימֹתוֹ בַּמִּלְחָמָֽה׃ | 43 |
೪೩ಇದಲ್ಲದೆ ಅವನ ಕತ್ತಿಯನ್ನು ತಿರುಗಿಸಿಬಿಟ್ಟಿದ್ದೀ; ಅವನನ್ನು ಯುದ್ಧದಲ್ಲಿ ನಿಲ್ಲದಂತೆ ಮಾಡಿದ್ದೀ.
הִשְׁבַּתָּ מִטְּהָרוֹ וְכִסְאוֹ לָאָרֶץ מִגַּֽרְתָּה׃ | 44 |
೪೪ಅವನ ವೈಭವವನ್ನು ತಡೆದುಬಿಟ್ಟಿದ್ದೀ; ಅವನ ಸಿಂಹಾಸನವನ್ನು ನೆಲಕ್ಕುರುಳಿಸಿದ್ದೀ.
הִקְצַרְתָּ יְמֵי עֲלוּמָיו הֶֽעֱטִיתָ עָלָיו בּוּשָׁה סֶֽלָה׃ | 45 |
೪೫ಅವನ ಯೌವನದ ದಿನಗಳನ್ನು ಬೇಗ ಮುಗಿಸಿ, ನಾಚಿಕೆಯು ಅವನನ್ನು ಕವಿಯುವಂತೆ ಮಾಡಿದ್ದಿ. (ಸೆಲಾ)
עַד־מָה יְהוָה תִּסָּתֵר לָנֶצַח תִּבְעַר כְּמוֹ־אֵשׁ חֲמָתֶֽךָ׃ | 46 |
೪೬ಯೆಹೋವನೇ, ಇನ್ನೆಷ್ಟರವರೆಗೆ ಮರೆಯಾಗಿರುವಿ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಸದಾ ಉರಿಯುತ್ತಿರಬೇಕೋ?
זְכָר־אֲנִי מֶה־חָלֶד עַל־מַה־שָּׁוְא בָּרָאתָ כָל־בְּנֵי־אָדָֽם׃ | 47 |
೪೭ನನ್ನ ಆಯುಷ್ಯವು ಎಷ್ಟು ಅಲ್ಪವೆಂದೂ, ಎಂಥಾ ವ್ಯರ್ಥ ಜೀವಿತಕ್ಕಾಗಿ ಮನುಷ್ಯರನ್ನು ನಿರ್ಮಿಸಿದ್ದಿ ಎಂದೂ ಜ್ಞಾಪಿಸಿಕೋ.
מִי גֶבֶר יִֽחְיֶה וְלֹא יִרְאֶה־מָּוֶת יְמַלֵּט נַפְשׁוֹ מִיַּד־שְׁאוֹל סֶֽלָה׃ (Sheol ) | 48 |
೪೮ತಮ್ಮನ್ನು ಪಾತಾಳಕ್ಕೆ ತಪ್ಪಿಸಿಕೊಂಡು, ಮರಣಹೊಂದದೆ ಚಿರಂಜೀವಿಯಾಗಿರುವವರು ಯಾರು? (ಸೆಲಾ) (Sheol )
אַיֵּה ׀ חֲסָדֶיךָ הָרִאשֹׁנִים ׀ אֲדֹנָי נִשְׁבַּעְתָּ לְדָוִד בֶּאֱמוּנָתֶֽךָ׃ | 49 |
೪೯ಕರ್ತನೇ, ನೀನು ನಿನ್ನ ಸತ್ಯತೆಯಲ್ಲಿ ಆಣೆಯಿಟ್ಟು, ದಾವೀದನಿಗೆ ವಾಗ್ದಾನಮಾಡಿ ನಡೆಸುತ್ತಿದ್ದ ಹಿಂದಿನ ಕೃಪಾಕಾರ್ಯಗಳು ಎಲ್ಲಿ?
זְכֹר אֲדֹנָי חֶרְפַּת עֲבָדֶיךָ שְׂאֵתִי בְחֵיקִי כָּל־רַבִּים עַמִּֽים׃ | 50 |
೫೦ಯೆಹೋವನೇ, ನಿನ್ನ ವೈರಿಗಳು ನಿಂದಿಸುತ್ತಾರೆ; ನಿನ್ನ ಅಭಿಷಿಕ್ತನನ್ನು ಹೆಜ್ಜೆ ಹೆಜ್ಜೆಗೂ ಅಪಮಾನ ಮಾಡುತ್ತಾರೆ.
אֲשֶׁר חֵרְפוּ אוֹיְבֶיךָ ׀ יְהוָה אֲשֶׁר חֵרְפוּ עִקְּבוֹת מְשִׁיחֶֽךָ׃ | 51 |
೫೧ಕರ್ತನೇ, ನಿನ್ನ ಸೇವಕರಿಗಾಗುವ ಅಪವಾದವನ್ನೂ, ನಾನು ಎಲ್ಲಾ ಜನಾಂಗಗಳ ನಿಂದಾಭಾರವನ್ನು ಉಡಿಲಲ್ಲಿ ಕಟ್ಟಿರುವುದನ್ನೂ ಜ್ಞಾಪಿಸಿಕೋ.
בָּרוּךְ יְהוָה לְעוֹלָם אָמֵן ׀ וְאָמֵֽן׃ | 52 |
೫೨ಯೆಹೋವನಿಗೆ ಸದಾಕಾಲವೂ ಕೊಂಡಾಟವಾಗಲಿ. ಆಮೆನ್, ಆಮೆನ್.