< תהילים 99 >
יְהוָה מָלָךְ יִרְגְּזוּ עַמִּים יֹשֵׁב כְּרוּבִים תָּנוּט הָאָֽרֶץ׃ | 1 |
ಯೆಹೋವ ದೇವರು ಆಳಿಕೆ ಮಾಡುತ್ತಾರೆ. ರಾಷ್ಟ್ರಗಳು ನಡುಗಲಿ. ಅವರು ಕೆರೂಬಿಗಳ ಮಧ್ಯದಲ್ಲಿ ಕೂತಿದ್ದಾರೆ. ಭೂಮಿಯು ಕದಲಲಿ.
יְהוָה בְּצִיּוֹן גָּדוֹל וְרָם הוּא עַל־כָּל־הָֽעַמִּֽים׃ | 2 |
ಯೆಹೋವ ದೇವರು ಚೀಯೋನಿನಲ್ಲಿ ಮಹೋನ್ನತರಾಗಿದ್ದಾರೆ. ಎಲ್ಲಾ ಜನಗಳ ಮೇಲೆ ಉನ್ನತರಾಗಿದ್ದಾರೆ.
יוֹדוּ שִׁמְךָ גָּדוֹל וְנוֹרָא קָדוֹשׁ הֽוּא׃ | 3 |
ನಿಮ್ಮ ಅತಿಶಯವಾದ ಹೆಸರನ್ನು ಜನರು ಕೊಂಡಾಡಲಿ. ದೇವರು ಪರಿಶುದ್ಧರು.
וְעֹז מֶלֶךְ מִשְׁפָּט אָהֵב אַתָּה כּוֹנַנְתָּ מֵישָׁרִים מִשְׁפָּט וּצְדָקָה בְּיַעֲקֹב ׀ אַתָּה עָשִֽׂיתָ׃ | 4 |
ನ್ಯಾಯ ಪ್ರಿಯ ರಾಜರೇ, ನೀವು ನೀತಿಯನ್ನು ಸ್ಥಿರಪಡಿಸುತ್ತೀರಿ. ನ್ಯಾಯವನ್ನೂ ನೀತಿಯನ್ನೂ ಯಾಕೋಬ್ಯರಲ್ಲಿ ನೀವು ಮನದಟ್ಟಾಗಿಸಿರುವಿರಿ.
רֽוֹמְמוּ יְהוָה אֱלֹהֵינוּ וְֽהִשְׁתַּחֲווּ לַהֲדֹם רַגְלָיו קָדוֹשׁ הֽוּא׃ | 5 |
ನಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ಅವರ ಪಾದಪೀಠದಲ್ಲಿ ಆರಾಧಿಸಿರಿ. ಏಕೆಂದರೆ ಅವರು ಪರಿಶುದ್ಧರಾಗಿದ್ದಾರೆ.
מֹשֶׁה וְאַהֲרֹן ׀ בְּֽכֹהֲנָיו וּשְׁמוּאֵל בְּקֹרְאֵי שְׁמוֹ קֹרִאים אֶל־יְהוָה וְהוּא יַעֲנֵֽם׃ | 6 |
ಯೆಹೋವ ದೇವರ ಯಾಜಕರಲ್ಲಿ ಮೋಶೆಯೂ ಆರೋನನೂ ಇದ್ದಾರೆ. ದೇವರ ಹೆಸರೆತ್ತಿ ಕರೆದವರಲ್ಲಿ ಸಮುಯೇಲನೂ ಸಹ ಒಬ್ಬನು. ಇವರೆಲ್ಲರೂ ಯೆಹೋವ ದೇವರನ್ನು ಕರೆದರು. ದೇವರು ಅವರಿಗೆ ಉತ್ತರಕೊಟ್ಟರು.
בְּעַמּוּד עָנָן יְדַבֵּר אֲלֵיהֶם שָׁמְרוּ עֵדֹתָיו וְחֹק נָֽתַן־לָֽמוֹ׃ | 7 |
ಮೇಘಸ್ತಂಭದಿಂದ ಅವರ ಸಂಗಡ ಮಾತನಾಡಿದರು. ದೇವರು ಅವರಿಗೆ ಕೊಟ್ಟ ಶಾಸನಗಳನ್ನೂ ತೀರ್ಪುಗಳನ್ನೂ ಅವರು ಕೈಗೊಂಡರು.
יְהוָה אֱלֹהֵינוּ אַתָּה עֲנִיתָם אֵל נֹשֵׂא הָיִיתָ לָהֶם וְנֹקֵם עַל־עֲלִילוֹתָֽם׃ | 8 |
ನಮ್ಮ ದೇವರಾದ ಯೆಹೋವ ದೇವರೇ, ನೀವು ಅವರಿಗೆ ಉತ್ತರಕೊಟ್ಟಿದ್ದೀರಿ. ನೀವು ದುಷ್ಕೃತ್ಯಗಳಿಗಾಗಿ ಇಸ್ರಾಯೇಲರನ್ನು ದಂಡಿಸಿದರೂ ಅವರನ್ನು ಕ್ಷಮಿಸುವ ದೇವರಾಗಿದ್ದೀರಿ.
רֽוֹמְמוּ יְהוָה אֱלֹהֵינוּ וְהִֽשְׁתַּחֲווּ לְהַר קָדְשׁוֹ כִּֽי־קָדוֹשׁ יְהוָה אֱלֹהֵֽינוּ׃ | 9 |
ನಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ದೇವರ ಪರಿಶುದ್ಧ ಪರ್ವತದಲ್ಲಿ ಆರಾಧಿಸಿರಿ. ನಮ್ಮ ದೇವರಾದ ಯೆಹೋವ ದೇವರು ಪರಿಶುದ್ಧರು.