< רות 1 >
וַיְהִי בִּימֵי שְׁפֹט הַשֹּׁפְטִים וַיְהִי רָעָב בָּאָרֶץ וַיֵּלֶךְ אִישׁ מִבֵּית לֶחֶם יְהוּדָה לָגוּר בִּשְׂדֵי מוֹאָב הוּא וְאִשְׁתּוֹ וּשְׁנֵי בָנָֽיו׃ | 1 |
೧ನ್ಯಾಯಸ್ಥಾಪಕರು ಆಳುತ್ತಿದ್ದ ಕಾಲದಲ್ಲಿ ಒಮ್ಮೆ ದೇಶದಲ್ಲಿ ಬರ ಬಂದಿದ್ದರಿಂದ ಯೆಹೂದ ಪ್ರಾಂತ್ಯದ ಬೇತ್ಲೆಹೇಮಿನವನೊಬ್ಬನು ತನ್ನ ಹೆಂಡತಿ, ಇಬ್ಬರು ಪುತ್ರರ ಸಹಿತವಾಗಿ ಮೋವಾಬ್ ದೇಶದಲ್ಲಿ ವಾಸಮಾಡುವುದಕ್ಕಾಗಿ ಹೊರಟುಹೋದನು.
וְשֵׁם הָאִישׁ אֱֽלִימֶלֶךְ וְשֵׁם אִשְׁתּוֹ נָעֳמִי וְשֵׁם שְׁנֵֽי־בָנָיו ׀ מַחְלוֹן וְכִלְיוֹן אֶפְרָתִים מִבֵּית לֶחֶם יְהוּדָה וַיָּבֹאוּ שְׂדֵי־מוֹאָב וַיִּֽהְיוּ־שָֽׁם׃ | 2 |
೨ಆ ಮನುಷ್ಯನ ಹೆಸರು ಎಲೀಮೆಲೆಕ, ಅವನ ಹೆಂಡತಿ ನವೊಮಿ. ಅವನ ಇಬ್ಬರು ಮಕ್ಕಳ ಹೆಸರು ಮಹ್ಲೋನ್ ಮತ್ತು ಕಿಲ್ಯೋನ್. ಯೆಹೂದ ದೇಶಕ್ಕೆ ಸೇರಿದ ಎಫ್ರಾತದಲ್ಲಿರುವ ಬೇತ್ಲೆಹೇಮಿನವರಾದ ಇವರು ಮೋವಾಬ್ ದೇಶದಲ್ಲಿ ಬಂದು ವಾಸವಾಗಿದ್ದಾಗ
וַיָּמָת אֱלִימֶלֶךְ אִישׁ נָעֳמִי וַתִּשָּׁאֵר הִיא וּשְׁנֵי בָנֶֽיהָ׃ | 3 |
೩ನವೊಮಿಯ ಗಂಡನಾದ ಎಲೀಮೆಲೆಕನು ಮರಣ ಹೊಂದಿದನು. ಆಕೆಯು ಇಬ್ಬರು ಮಕ್ಕಳೊಡನೆ ಅಲ್ಲಿಯೇ ಉಳಿದಳು.
וַיִּשְׂאוּ לָהֶם נָשִׁים מֹֽאֲבִיּוֹת שֵׁם הָֽאַחַת עָרְפָּה וְשֵׁם הַשֵּׁנִית רוּת וַיֵּשְׁבוּ שָׁם כְּעֶשֶׂר שָׁנִֽים׃ | 4 |
೪ಈ ಮಕ್ಕಳು ಒರ್ಫಾ, ರೂತ್ ಎಂಬ ಹೆಸರಿನ ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡು ಸುಮಾರು ಹತ್ತು ವರ್ಷಗಳ ಕಾಲ ಅಲ್ಲಿ ವಾಸವಾಗಿದ್ದರು.
וַיָּמוּתוּ גַם־שְׁנֵיהֶם מַחְלוֹן וְכִלְיוֹן וַתִּשָּׁאֵר הָֽאִשָּׁה מִשְּׁנֵי יְלָדֶיהָ וּמֵאִישָֽׁהּ׃ | 5 |
೫ಅವರು ಅಲ್ಲಿದ್ದಾಗ ನವೊಮಿಯ ಮಕ್ಕಳಾದ ಮಹ್ಲೋನ್ ಮತ್ತು ಕಿಲ್ಯೋನ್ ಇಬ್ಬರೂ ತೀರಿಹೋದರು. ಹೀಗೆ ನವೊಮಿ ಗಂಡನನ್ನೂ, ಇಬ್ಬರು ಮಕ್ಕಳನ್ನೂ ಕಳೆದುಕೊಂಡು ಸೊಸೆಯರೊಂದಿಗೆ ಅಲ್ಲೇ ಉಳಿದಳು.
וַתָּקָם הִיא וְכַלֹּתֶיהָ וַתָּשָׁב מִשְּׂדֵי מוֹאָב כִּי שָֽׁמְעָה בִּשְׂדֵה מוֹאָב כִּֽי־פָקַד יְהוָה אֶת־עַמּוֹ לָתֵת לָהֶם לָֽחֶם׃ | 6 |
೬ಯೆಹೋವನು ತನ್ನ ಜನರನ್ನು ಸಂದರ್ಶಿಸಿ ಅವರಿಗೆ ಆಹಾರವನ್ನು ಅನುಗ್ರಹಿಸಿದ್ದಾನೆಂಬ ವರ್ತಮಾನವನ್ನು ಕೇಳಿದ ನವೊಮಿಯು ತನ್ನ ಸೊಸೆಯರೊಡನೆ ಮೋವಾಬ್ ದೇಶದಿಂದ ಯೆಹೂದ ದೇಶಕ್ಕೆ ಹೋಗಬೇಕೆಂದು ನಿರ್ಧರಿಸಿದಳು.
וַתֵּצֵא מִן־הַמָּקוֹם אֲשֶׁר הָיְתָה־שָׁמָּה וּשְׁתֵּי כַלֹּתֶיהָ עִמָּהּ וַתֵּלַכְנָה בַדֶּרֶךְ לָשׁוּב אֶל־אֶרֶץ יְהוּדָֽה׃ | 7 |
೭ಆಕೆಯು ಇಬ್ಬರು ಸೊಸೆಯರೊಡನೆ ತಾನಿದ್ದ ಸ್ಥಳದಿಂದ ಯೆಹೂದ ದೇಶಕ್ಕೆ ಹೋಗುವ ದಾರಿಯಲ್ಲಿ ಹೋಗುತ್ತಿರುವಾಗ
וַתֹּאמֶר נָעֳמִי לִשְׁתֵּי כַלֹּתֶיהָ לֵכְנָה שֹּׁבְנָה אִשָּׁה לְבֵית אִמָּהּ יעשה יַעַשׂ יְהוָה עִמָּכֶם חֶסֶד כַּאֲשֶׁר עֲשִׂיתֶם עִם־הַמֵּתִים וְעִמָּדִֽי׃ | 8 |
೮ಅವರಿಗೆ, “ನೀವು ತಿರುಗಿ ನಿಮ್ಮ ನಿಮ್ಮ ತವರುಮನೆಗಳಿಗೆ ಹೋಗಿರಿ, ನೀವು ನನ್ನನ್ನೂ, ಮರಣಹೊಂದಿದ ನನ್ನ ಮಕ್ಕಳನ್ನು ಪ್ರೀತಿಸಿದಂತೆ ಯೆಹೋವನು ನಿಮ್ಮನ್ನು ಪ್ರೀತಿಸಿ ನಿಮಗೆ ಕೃಪೆತೋರಿಸಲಿ.
יִתֵּן יְהוָה לָכֶם וּמְצֶאןָ מְנוּחָה אִשָּׁה בֵּית אִישָׁהּ וַתִּשַּׁק לָהֶן וַתִּשֶּׂאנָה קוֹלָן וַתִּבְכֶּֽינָה׃ | 9 |
೯ನೀವಿಬ್ಬರೂ ಮದುವೆಯಾಗಿ ಗಂಡನ ಮನೆಯಲ್ಲಿ ಸುಖವಾಗಿರುವಂತೆ ಯೆಹೋವನು ಅನುಗ್ರಹಿಸಲಿ” ಎಂದು ಹೇಳಿ ಅವರಿಗೆ ಮುದ್ದಿಟ್ಟಳು.
וַתֹּאמַרְנָה־לָּהּ כִּי־אִתָּךְ נָשׁוּב לְעַמֵּֽךְ׃ | 10 |
೧೦ಆಗ ಅವರು ಬಹಳ ದುಃಖದಿಂದ ಗಟ್ಟಿಯಾಗಿ ಅತ್ತು ನಾವೂ ನಿನ್ನ ಜೊತೆಯಲ್ಲೇ ನಿನ್ನ ಸ್ವಜನರ ಬಳಿಗೆ ಬರುತ್ತೇವೆ ಅನ್ನಲು,
וַתֹּאמֶר נָעֳמִי שֹׁבְנָה בְנֹתַי לָמָּה תֵלַכְנָה עִמִּי הַֽעֽוֹד־לִי בָנִים בְּֽמֵעַי וְהָיוּ לָכֶם לַאֲנָשִֽׁים׃ | 11 |
೧೧ಆಕೆಯು, “ನನ್ನ ಮಕ್ಕಳೇ, ನೀವು ನನ್ನೊಡನೆ ಬರುವುದೇಕೆ? ಹಿಂದಿರುಗಿ ಹೋಗಿರಿ. ನಿಮಗೆ ಗಂಡಂದಿರನ್ನು ಕೊಡುವುದಕ್ಕೆ ನನ್ನ ಗರ್ಭದಲ್ಲಿ ಬೇರೆ ಮಕ್ಕಳಿಲ್ಲವಲ್ಲಾ.
שֹׁבְנָה בְנֹתַי לֵכְןָ כִּי זָקַנְתִּי מִהְיוֹת לְאִישׁ כִּי אָמַרְתִּי יֶשׁ־לִי תִקְוָה גַּם הָיִיתִי הַלַּיְלָה לְאִישׁ וְגַם יָלַדְתִּי בָנִֽים׃ | 12 |
೧೨ನಾನು ಮತ್ತೊಬ್ಬನನ್ನು ಪುನಃ ಮದುವೆಮಾಡಿಕೊಳ್ಳುವ ಪ್ರಾಯವೂ ನನಗೆ ದಾಟಿಹೋಗಿದೆ. ಆದುದರಿಂದ ನನ್ನ ಮಕ್ಕಳೇ, ನೀವು ಹಿಂದಿರುಗಿ ಹೋಗಿರಿ. ಒಂದು ವೇಳೆ ಆ ನಿರೀಕ್ಷೆಯಿಂದ ಈ ಹೊತ್ತೇ ನಾನು ಪುನಃ ಮದುವೆಯಾಗಿ ಮಕ್ಕಳನ್ನು ಹೆತ್ತರೂ,
הֲלָהֵן ׀ תְּשַׂבֵּרְנָה עַד אֲשֶׁר יִגְדָּלוּ הֲלָהֵן תֵּֽעָגֵנָה לְבִלְתִּי הֱיוֹת לְאִישׁ אַל בְּנֹתַי כִּֽי־מַר־לִי מְאֹד מִכֶּם כִּֽי־יָצְאָה בִי יַד־יְהוָֽה׃ | 13 |
೧೩ಅವರು ದೊಡ್ಡವರಾಗುವ ತನಕ ನೀವು ಕಾದಿರುವಿರೋ? ಅಲ್ಲಿಯ ವರೆಗೂ ಗಂಡಂದಿರಿಲ್ಲದೆ ಇರುವಿರೋ? ನನ್ನ ಮಕ್ಕಳೇ, ಹಾಗೆ ಮಾಡಬೇಡಿರಿ; ಯೆಹೋವನ ಹಸ್ತವು ನನ್ನಿಂದ ದೂರವಾಗಿರುವುದರಿಂದ ನಾನು ನಿಮಗಿಂತ ಹೆಚ್ಚಾಗಿ ದುಃಖಪಡುತ್ತೇನೆ” ಅಂದಳು.
וַתִּשֶּׂנָה קוֹלָן וַתִּבְכֶּינָה עוֹד וַתִּשַּׁק עָרְפָּה לַחֲמוֹתָהּ וְרוּת דָּבְקָה בָּֽהּ׃ | 14 |
೧೪ಆಗ ಅವರು ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು. ಒರ್ಫಳು ಅತ್ತೆಯನ್ನು ಮುದ್ದಿಟ್ಟು ಹೊರಟು ತನ್ನ ತವರಿಗೆ ಹೋದಳು; ರೂತಳಾದರೋ ಅತ್ತೆಯನ್ನು ತೊರೆದುಹೋಗದೆ ಅವಳೊಂದಿಗೆ ಇದ್ದಳು.
וַתֹּאמֶר הִנֵּה שָׁבָה יְבִמְתֵּךְ אֶל־עַמָּהּ וְאֶל־אֱלֹהֶיהָ שׁוּבִי אַחֲרֵי יְבִמְתֵּֽךְ׃ | 15 |
೧೫ನವೊಮಿಯು ರೂತಳಿಗೆ, ಇಗೋ, ನಿನ್ನ ಓರಗಿತ್ತಿಯು ತಿರುಗಿ ತನ್ನ ಜನರ ಬಳಿಗೂ, ತನ್ನ ಕುಲ ದೇವರುಗಳ ಬಳಿಗೂ ಹೋಗಿದ್ದಾಳೆ. ನೀನೂ ಆಕೆಯಂತೆ ನಿನ್ನ ಜನರ ಬಳಿಗೆ ಹೋಗು ಅಂದಾಗ,
וַתֹּאמֶר רוּת אַל־תִּפְגְּעִי־בִי לְעָזְבֵךְ לָשׁוּב מֵאַחֲרָיִךְ כִּי אֶל־אֲשֶׁר תֵּלְכִי אֵלֵךְ וּבַאֲשֶׁר תָּלִינִי אָלִין עַמֵּךְ עַמִּי וֵאלֹהַיִךְ אֱלֹהָֽי׃ | 16 |
೧೬ಆಕೆಯು, “ನಿನ್ನನ್ನು ಬಿಟ್ಟು ಹಿಂದಿರುಗಿ ಹೋಗಬೇಕೆಂದು ನನ್ನನ್ನು ಒತ್ತಾಯಪಡಿಸಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು; ನೀನು ವಾಸಿಸುವಲ್ಲೇ ನಾನೂ ವಾಸಿಸುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.
בַּאֲשֶׁר תָּמוּתִי אָמוּת וְשָׁם אֶקָּבֵר כֹּה יַעֲשֶׂה יְהוָה לִי וְכֹה יֹסִיף כִּי הַמָּוֶת יַפְרִיד בֵּינִי וּבֵינֵֽךְ׃ | 17 |
೧೭ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲೇ ನನಗೆ ಸಮಾಧಿಯಾಗಬೇಕು. ಮರಣದಿಂದಲ್ಲದೆ ನಾನು ನಿನ್ನನ್ನು ಅಗಲಿದರೆ ಯೆಹೋವನು ನನ್ನನ್ನು ಹೆಚ್ಚಾಗಿ ಶಿಕ್ಷಿಸಲಿ” ಎಂದಳು.
וַתֵּרֶא כִּֽי־מִתְאַמֶּצֶת הִיא לָלֶכֶת אִתָּהּ וַתֶּחְדַּל לְדַבֵּר אֵלֶֽיהָ׃ | 18 |
೧೮ಆಕೆಯು ತನ್ನ ಜೊತೆಯಲ್ಲಿ ಬರುವುದಕ್ಕೆ ನಿರ್ಧರಿಸಿದ್ದಾಳೆಂದು ನವೊಮಿಯು ತಿಳಿದು ಸುಮ್ಮನಾದಳು.
וַתֵּלַכְנָה שְׁתֵּיהֶם עַד־בֹּאָנָה בֵּית לָחֶם וַיְהִי כְּבֹאָנָה בֵּית לֶחֶם וַתֵּהֹם כָּל־הָעִיר עֲלֵיהֶן וַתֹּאמַרְנָה הֲזֹאת נָעֳמִֽי׃ | 19 |
೧೯ಹಾಗೆಯೇ ಪ್ರಯಾಣಮಾಡಿಕೊಂಡು ಅವರಿಬ್ಬರೂ ಬೇತ್ಲೆಹೇಮಿಗೆ ಬಂದು ಊರೊಳಕ್ಕೆ ಹೋದಾಗ ಅಲ್ಲಿಯ ಜನರಲ್ಲಿ ಕುತೂಹಲ ಮೂಡಿತು. ಸ್ತ್ರೀಯರು, “ಈಕೆಯು ನವೊಮಿಯಲ್ಲವೇ?” ಎಂದು ವಿಚಾರಿಸಲು
וַתֹּאמֶר אֲלֵיהֶן אַל־תִּקְרֶאנָה לִי נָעֳמִי קְרֶאןָ לִי מָרָא כִּי־הֵמַר שַׁדַּי לִי מְאֹֽד׃ | 20 |
೨೦ಆಕೆಯು ಅವರಿಗೆ, “ನನ್ನನ್ನು ನವೊಮಿಯೆಂದು ಕರೆಯಬೇಡಿರಿ; ನನ್ನನ್ನು ‘ಮಾರಾ’ (ಕಹಿ) ಎಂದು ಕರೆಯಿರಿ. ಏಕೆಂದರೆ, ಸರ್ವಶಕ್ತನಾದ ದೇವರು ಬಹಳ ತೀಕ್ಷ್ಣವಾಗಿ ನನ್ನ ಜೀವಿತವನ್ನು ಮಾರ್ಪಡಿಸಿದ್ದಾನೆ.
אֲנִי מְלֵאָה הָלַכְתִּי וְרֵיקָם הֱשִׁיבַנִי יְהוָה לָמָּה תִקְרֶאנָה לִי נָעֳמִי וַֽיהוָה עָנָה בִי וְשַׁדַּי הֵרַֽע לִֽי׃ | 21 |
೨೧ಸಿರಿವಂತಳಾಗಿ ಹೋದೆನು; ಯೆಹೋವನು ನನ್ನನ್ನು ಗತಿಹೀನಳನ್ನಾಗಿ ಹಿಂತಿರುಗುವಂತೆ ಮಾಡಿದನು. ಯೆಹೋವನು ನನಗೆ ವಿರೋಧವಾಗಿದ್ದಾನೆ, ಸರ್ವಶಕ್ತನು ನನ್ನನ್ನು ಬಾಧಿಸಿದ್ದಾನೆ. ಹೀಗಿರುವಾಗ ನೀವು ನನ್ನನ್ನು ನವೊಮಿಯೆಂದು ಕರೆಯುವುದು ಸರಿಯೇ” ಅಂದಳು.
וַתָּשָׁב נָעֳמִי וְרוּת הַמּוֹאֲבִיָּה כַלָּתָהּ עִמָּהּ הַשָּׁבָה מִשְּׂדֵי מוֹאָב וְהֵמָּה בָּאוּ בֵּית לֶחֶם בִּתְחִלַּת קְצִיר שְׂעֹרִֽים׃ | 22 |
೨೨ಹೀಗೆ, ನವೊಮಿಯು ಮೋವಾಬ್ಯಳಾದ ತನ್ನ ಸೊಸೆ ರೂತಳೊಡನೆ ಬೇತ್ಲೆಹೇಮಿಗೆ ಬಂದಳು. ಆಗ ಜವೆಗೋದಿಯ ಸುಗ್ಗಿಯು ಪ್ರಾರಂಭವಾಗಿತ್ತು.