< רות 3 >
וַתֹּאמֶר לָהּ נָעֳמִי חֲמוֹתָהּ בִּתִּי הֲלֹא אֲבַקֶּשׁ־לָךְ מָנוֹחַ אֲשֶׁר יִֽיטַב־לָֽךְ׃ | 1 |
೧ನವೊಮಿಯು ಸೊಸೆಗೆ, “ನನ್ನ ಮಗಳೇ, ನಿನಗೆ ಒಳ್ಳೆಯದಾಗುವುದಕ್ಕಾಗಿ, ನೀನು ಗೃಹಿಣಿಯಾಗಿ ಸುಖದಿಂದಿರುವುದಕ್ಕೋಸ್ಕರ ನಾನು ಪ್ರಯತ್ನಿಸಬೇಕಲ್ಲವೇ?
וְעַתָּה הֲלֹא בֹעַז מֹֽדַעְתָּנוּ אֲשֶׁר הָיִית אֶת־נַעֲרוֹתָיו הִנֵּה־הוּא זֹרֶה אֶת־גֹּרֶן הַשְּׂעֹרִים הַלָּֽיְלָה׃ | 2 |
೨ಈಗ ನೀನು ಯಾರ ಹೆಣ್ಣಾಳುಗಳ ಜೊತೆಯಲ್ಲಿರುತ್ತೀಯೋ ಆ ಬೋವಜನು ನಮ್ಮ ಸಂಬಂಧಿಕನಲ್ಲವೇ? ಅವನು ಈ ರಾತ್ರಿ ಕಣದಲ್ಲಿ ಜವೆಗೋದಿಯನ್ನು ತೂರುವನು.
וְרָחַצְתְּ ׀ וָסַכְתְּ וְשַׂמְתְּ שמלתך שִׂמְלֹתַיִךְ עָלַיִךְ וירדתי וְיָרַדְתְּ הַגֹּרֶן אַל־תִּוָּדְעִי לָאִישׁ עַד כַּלֹּתוֹ לֶאֱכֹל וְלִשְׁתּֽוֹת׃ | 3 |
೩ನೀನು ಸ್ನಾನಮಾಡಿ, ಸುಗಂಧತೈಲವನ್ನು ಹಚ್ಚಿಕೊಂಡು, ಶ್ರೇಷ್ಠವಸ್ತ್ರಗಳನ್ನು ಧರಿಸಿಕೊಂಡು ಅಲ್ಲಿಗೆ ಹೋಗು; ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವರೆಗೂ ಮರೆಯಾಗಿದ್ದು.
וִיהִי בְשָׁכְבוֹ וְיָדַעַתְּ אֶת־הַמָּקוֹם אֲשֶׁר יִשְׁכַּב־שָׁם וּבָאת וְגִלִּית מַרְגְּלֹתָיו ושכבתי וְשָׁכָבְתְּ וְהוּא יַגִּיד לָךְ אֵת אֲשֶׁר תַּעַשִֽׂין׃ | 4 |
೪ಅವನು ಮಲಗಿದ ಸ್ಥಳವನ್ನು ತಿಳಿದುಕೊಂಡು ಹೋಗಿ ಅವನ ಕಾಲುಗಳ ಮೇಲಣ ಹೊದಿಕೆಯನ್ನು ತೆಗೆದು ಬಿಟ್ಟು ಅಲ್ಲೇ ಮಲಗಿಕೋ; ಆ ಮೇಲೆ ಮಾಡತಕ್ಕದ್ದನ್ನು ಅವನು ನಿನಗೆ ತಿಳಿಸುವನು” ಅಂದಳು.
וַתֹּאמֶר אֵלֶיהָ כֹּל אֲשֶׁר־תֹּאמְרִי אֵלַי אֶֽעֱשֶֽׂה׃ | 5 |
೫ಅದಕ್ಕೆ ರೂತಳು “ನೀನು ಹೇಳಿದ ಹಾಗೆಯೇ ಮಾಡುವೆನು” ಎಂದು ಹೇಳಿದಳು.
וַתֵּרֶד הַגֹּרֶן וַתַּעַשׂ כְּכֹל אֲשֶׁר־צִוַּתָּה חֲמוֹתָֽהּ׃ | 6 |
೬ಅತ್ತೆಯ ಆಜ್ಞೆಯಂತೆಯೇ ಕಣಕ್ಕೆ ಹೋಗಿ,
וַיֹּאכַל בֹּעַז וַיֵּשְׁתְּ וַיִּיטַב לִבּוֹ וַיָּבֹא לִשְׁכַּב בִּקְצֵה הָעֲרֵמָה וַתָּבֹא בַלָּט וַתְּגַל מַרְגְּלֹתָיו וַתִּשְׁכָּֽב׃ | 7 |
೭ಬೋವಜನು ಅನ್ನಪಾನಗಳನ್ನು ತೆಗೆದುಕೊಂಡು ಸಂತುಷ್ಟನಾಗಿ ರಾಶಿಯ ಬಳಿಯಲ್ಲಿ ಮಲಗಿದ ಮೇಲೆ ರಹಸ್ಯವಾಗಿ ಬಂದು ಅವನ ಕಾಲುಗಳ ಮೇಲಣ ಹೊದಿಕೆಯನ್ನು ತೆಗೆದುಬಿಟ್ಟು, ಕಾಲ್ಬದಿಯಲ್ಲಿ ಮಲಗಿದಳು.
וַיְהִי בַּחֲצִי הַלַּיְלָה וַיֶּחֱרַד הָאִישׁ וַיִּלָּפֵת וְהִנֵּה אִשָּׁה שֹׁכֶבֶת מַרְגְּלֹתָֽיו׃ | 8 |
೮ಮಧ್ಯರಾತ್ರಿಯಲ್ಲಿ ಎಚ್ಚರವಾದಾಗ ಬೋವಜನು ತನ್ನ ಕಾಲುಗಳ ಬಳಿಯಲ್ಲಿ ಮಲಗಿರುವ ಹೆಂಗಸನ್ನು ಕಂಡು,
וַיֹּאמֶר מִי־אָתּ וַתֹּאמֶר אָנֹכִי רוּת אֲמָתֶךָ וּפָרַשְׂתָּ כְנָפֶךָ עַל־אֲמָתְךָ כִּי גֹאֵל אָֽתָּה׃ | 9 |
೯ಹೆದರಿ ಆಕೆಯನ್ನು “ನೀನು ಯಾರು?” ಎಂದು ಕೇಳಲು ಆಕೆಯು “ನಾನು ನಿನ್ನ ದಾಸಿಯಾದ ರೂತಳು, ನೀನು ಸಮೀಪಬಂಧುವಾಗಿರುವುದರಿಂದ ನಿನ್ನ ಹೊದಿಕೆಯ ಅಂಚನ್ನು ನನ್ನ ಮೇಲೆ ಹಾಕು” ಅಂದಳು.
וַיֹּאמֶר בְּרוּכָה אַתְּ לַֽיהוָה בִּתִּי הֵיטַבְתְּ חַסְדֵּךְ הָאַחֲרוֹן מִן־הָרִאשׁוֹן לְבִלְתִּי־לֶכֶת אַחֲרֵי הַבַּחוּרִים אִם־דַּל וְאִם־עָשִֽׁיר׃ | 10 |
೧೦ಆಗ ಅವನು “ಮಗಳೇ, ಯೆಹೋವನಿಂದ ನಿನಗೆ ಆಶೀರ್ವಾದವಾಗಲಿ; ನೀನು ಬಡವರೂ ಅಥವಾ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ಹೋಗಲಿಲ್ಲ. ಈಗ ನಿನ್ನ ಪತಿಭಕ್ತಿಯು ಮೊದಲಗಿಂತ ವಿಶೇಷವಾಗಿ ಪ್ರತ್ಯಕ್ಷವಾಯಿತು.
וְעַתָּה בִּתִּי אַל־תִּירְאִי כֹּל אֲשֶׁר־תֹּאמְרִי אֶֽעֱשֶׂה־לָּךְ כִּי יוֹדֵעַ כָּל־שַׁעַר עַמִּי כִּי אֵשֶׁת חַיִל אָֽתְּ׃ | 11 |
೧೧ನನ್ನ ಮಗಳೇ, ಈಗ ಭಯಪಡಬೇಡ. ನೀನು ಗುಣವಂತೆಯೆಂಬುದು ಊರಿನವರಿಗೆಲ್ಲಾ ತಿಳಿದಿದೆ; ಆದ್ದರಿಂದ ನೀನು ಹೇಳಿದ್ದನ್ನೆಲ್ಲಾ ಮಾಡುವೆನು.
וְעַתָּה כִּי אָמְנָם כִּי אם גֹאֵל אָנֹכִי וְגַם יֵשׁ גֹּאֵל קָרוֹב מִמֶּֽנִּי׃ | 12 |
೧೨ನಾನು ಸಮೀಪಬಂಧುವೆಂಬುದು ನಿಜ; ಆದರೂ ನನಗಿಂತ ಸಮೀಪ ಬಂಧು ಒಬ್ಬನಿದ್ದಾನೆ.
לִינִי ׀ הַלַּיְלָה וְהָיָה בַבֹּקֶר אִם־יִגְאָלֵךְ טוֹב יִגְאָל וְאִם־לֹא יַחְפֹּץ לְגָֽאֳלֵךְ וּגְאַלְתִּיךְ אָנֹכִי חַי־יְהוָה שִׁכְבִי עַד־הַבֹּֽקֶר׃ | 13 |
೧೩ಈ ರಾತ್ರಿ ಇಲ್ಲೇ ಇರು; ನಾಳೆ ಅವನು ಮೈದುನಧರ್ಮವನ್ನು ನೆರವೇರಿಸಿದರೆ ಸರಿ; ಇಲ್ಲವಾದರೆ ಯೆಹೋವನಾಣೆ, ನಾನೇ ಅದನ್ನು ನೆರವೇರಿಸುವೆನು. ಬೆಳಗಾಗುವ ತನಕ ಇಲ್ಲೇ ಮಲಗಿಕೋ” ಎಂದು ಹೇಳಿದನು.
וַתִּשְׁכַּב מרגלתו מַרְגְּלוֹתָיוֹ עַד־הַבֹּקֶר וַתָּקָם בטרום בְּטֶרֶם יַכִּיר אִישׁ אֶת־רֵעֵהוּ וַיֹּאמֶר אַל־יִוָּדַע כִּי־בָאָה הָאִשָּׁה הַגֹּֽרֶן׃ | 14 |
೧೪ಆಕೆಯು ಆ ವರೆಗೂ ಅವನ ಕಾಲುಗಳ ಬಳಿಯಲ್ಲೇ ಮಲಗಿಕೊಂಡಿದ್ದಳು. ಒಬ್ಬ ಹೆಂಗಸು ಕಣಕ್ಕೆ ಬಂದಿದ್ದಳೆಂಬುವುದು ಯಾರಿಗೂ ಗೊತ್ತಾಗಬಾರದೆಂದು ಅವನು ಹೇಳಿದ್ದರಿಂದ ಗುರುತು ಹಿಡಿಯಲಾರದಷ್ಟು ಕತ್ತಲಿರುವಾಗಲೇ ಆಕೆಯು ಎದ್ದಳು.
וַיֹּאמֶר הָבִי הַמִּטְפַּחַת אֲשֶׁר־עָלַיִךְ וְאֶֽחֳזִי־בָהּ וַתֹּאחֶז בָּהּ וַיָּמָד שֵׁשׁ־שְׂעֹרִים וַיָּשֶׁת עָלֶיהָ וַיָּבֹא הָעִֽיר׃ | 15 |
೧೫ಆಗ ಅವನು ಆಕೆಗೆ “ನಿನ್ನ ಮೇಲ್ಹೊದಿಕೆಯನ್ನು ಹಾಸು” ಎಂದು ಹೇಳಿದನು, ಆಕೆ ಹಾಸಲು ಅದರಲ್ಲಿ ಆರು ಪಡಿ ಜವೆಗೋದಿಯನ್ನು ಹಾಕಿ ಹೊರಿಸಿ ಕಳುಹಿಸಿದನು. ಆಕೆಯು ಊರೊಳಕ್ಕೆ ಹೋದಳು.
וַתָּבוֹא אֶל־חֲמוֹתָהּ וַתֹּאמֶר מִי־אַתְּ בִּתִּי וַתַּגֶּד־לָהּ אֵת כָּל־אֲשֶׁר עָֽשָׂה־לָהּ הָאִֽישׁ׃ | 16 |
೧೬ಅತ್ತೆಯ ಬಳಿಗೆ ಬಂದಾಗ, ಅತ್ತೆಯು “ನನ್ನ ಮಗಳೇ, ನೀನು ಹೋಗಿದ್ದ ಕಾರ್ಯವೇನಾಯಿತು?” ಎಂದು ಕೇಳಲು ಆಕೆಯು ಆ ಮನುಷ್ಯನು ಮಾಡಿದ್ದೆಲ್ಲವನ್ನೂ ತಿಳಿಸಿ,
וַתֹּאמֶר שֵׁשׁ־הַשְּׂעֹרִים הָאֵלֶּה נָתַן לִי כִּי אָמַר אֵלַי אַל־תָּבוֹאִי רֵיקָם אֶל־חֲמוֹתֵֽךְ׃ | 17 |
೧೭“‘ನೀನು ಬರಿಗೈಯಿಂದ ಅತ್ತೆಯ ಬಳಿಗೆ ಹೋಗಬಾರದೆಂದು’ ಹೇಳಿ ಈ ಆರು ಪಡಿ ಜವೆಗೋದಿಯನ್ನು ಕೊಟ್ಟನು” ಅಂದಳು.
וַתֹּאמֶר שְׁבִי בִתִּי עַד אֲשֶׁר תֵּֽדְעִין אֵיךְ יִפֹּל דָּבָר כִּי לֹא יִשְׁקֹט הָאִישׁ כִּֽי־אִם־כִּלָּה הַדָּבָר הַיּֽוֹם׃ | 18 |
೧೮ಅತ್ತೆಯು “ನನ್ನ ಮಗಳೇ, ಈ ಕಾರ್ಯವು ಏನಾಗುವುದೆಂದು ಗೊತ್ತಾಗುವವರೆಗೂ ಸುಮ್ಮನಿರು; ಈ ವಿಷಯವನ್ನು ಇತ್ಯರ್ಥ ಮಾಡುವವರೆಗೂ ಅವನಿಗೆ ಸಮಾಧಾನವಿರಲಾರದು” ಎಂದು ಹೇಳಿದಳು.