< 1 דִּבְרֵי הַיָּמִים 21 >
וַיַּֽעֲמֹ֥ד שָׂטָ֖ן עַל־יִשְׂרָאֵ֑ל וַיָּ֙סֶת֙ אֶת־דָּוִ֔יד לִמְנ֖וֹת אֶת־יִשְׂרָאֵֽל׃ | 1 |
೧ಸೈತಾನನು ಇಸ್ರಾಯೇಲರಿಗೆ ವಿರುದ್ಧ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.
וַיֹּ֨אמֶר דָּוִ֤יד אֶל־יוֹאָב֙ וְאֶל־שָׂרֵ֣י הָעָ֔ם לְכ֗וּ סִפְרוּ֙ אֶת־יִשְׂרָאֵ֔ל מִבְּאֵ֥ר שֶׁ֖בַע וְעַד־דָּ֑ן וְהָבִ֣יאוּ אֵלַ֔י וְאֵדְעָ֖ה אֶת־מִסְפָּרָֽם׃ | 2 |
೨ದಾವೀದನು ಯೋವಾಬನನ್ನೂ ಮತ್ತು ಜನಾಧಿಪತಿಗಳನ್ನೂ ಕರೆದು, “ನನಗೆ ಜನರ ಲೆಕ್ಕ ಗೊತ್ತಾಗುವ ಹಾಗೆ ನೀವು ಬೇರ್ಷೆಬದಿಂದ ದಾನ್ ಊರಿನವರೆಗೂ ಸಂಚರಿಸಿ, ಇಸ್ರಾಯೇಲರನ್ನು ಲೆಕ್ಕ ಮಾಡಿಕೊಂಡು ಬನ್ನಿರಿ” ಎಂದು ಆಜ್ಞಾಪಿಸಿದನು.
וַיֹּ֣אמֶר יוֹאָ֗ב יוֹסֵף֩ יְהוָ֨ה עַל־עַמּ֤וֹ ׀ כָּהֵם֙ מֵאָ֣ה פְעָמִ֔ים הֲלֹא֙ אֲדֹנִ֣י הַמֶּ֔לֶךְ כֻּלָּ֥ם לַאדֹנִ֖י לַעֲבָדִ֑ים לָ֣מָּה יְבַקֵּ֥שׁ זֹאת֙ אֲדֹנִ֔י לָ֛מָּה יִהְיֶ֥ה לְאַשְׁמָ֖ה לְיִשְׂרָאֵֽל׃ | 3 |
೩ಆಗ ಯೋವಾಬನು, “ನನ್ನ ಒಡೆಯನಾದ ಅರಸನೇ, ಯೆಹೋವನು ತನ್ನ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ. ಅವರೆಲ್ಲರೂ ನನ್ನ ಒಡೆಯನ ದಾಸರಷ್ಟೆ. ಒಡೆಯನು ಇಂಥದ್ದನ್ನು ಅಪೇಕ್ಷಿಸುವುದೇನು? ಇಸ್ರಾಯೇಲರನ್ನು ಅಪರಾಧಕ್ಕೆ ಗುರಿಮಾಡುವುದೇಕೆ” ಎಂದನು.
וּדְבַר־הַמֶּ֖לֶךְ חָזַ֣ק עַל־יוֹאָ֑ב וַיֵּצֵ֣א יוֹאָ֗ב וַיִּתְהַלֵּךְ֙ בְּכָל־יִשְׂרָאֵ֔ל וַיָּבֹ֖א יְרוּשָׁלִָֽם׃ | 4 |
೪ಆದರೆ ಅರಸನು ಯೋವಾಬನಿಗೆ ಕಿವಿಗೊಡದೆ ತನ್ನ ಮಾತನ್ನೇ ನಡೆಸಿದ್ದರಿಂದ ಅವನು ಹೊರಟುಹೋಗಿ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಲ್ಲಿ ಸಂಚರಿಸಿ ಯೆರೂಸಲೇಮಿಗೆ ಹಿಂದಿರುಗಿದನು.
וַיִּתֵּ֥ן יוֹאָ֛ב אֶת־מִסְפַּ֥ר מִפְקַד־הָעָ֖ם אֶל־דָּוִ֑יד וַיְהִ֣י כָֽל־יִשְׂרָאֵ֡ל אֶ֣לֶף אֲלָפִים֩ וּמֵאָ֨ה אֶ֤לֶף אִישׁ֙ שֹׁ֣לֵֽף חֶ֔רֶב וִֽיהוּדָ֕ה אַרְבַּע֩ מֵא֨וֹת וְשִׁבְעִ֥ים אֶ֛לֶף אִ֖ישׁ שֹׁ֥לֵֽף חָֽרֶב׃ | 5 |
೫ಯೋವಾಬನು ದಾವೀದನಿಗೆ ಒಪ್ಪಿಸಿದ ಜನಗಣತಿಯ ಸಂಖ್ಯೆಯು ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಹನ್ನೊಂದು ಲಕ್ಷ ಮತ್ತು ಯೆಹೂದ್ಯರಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ.
וְלֵוִי֙ וּבִנְיָמִ֔ן לֹ֥א פָקַ֖ד בְּתוֹכָ֑ם כִּֽי־נִתְעַ֥ב דְּבַר־הַמֶּ֖לֶךְ אֶת־יוֹאָֽב׃ | 6 |
೬ಅರಸನ ಅಪ್ಪಣೆಯು ಯೋವಾಬನಿಗೆ ಅಸಹ್ಯವಾಗಿದ್ದುದರಿಂದ ಅವನು ಲೇವಿ ಮತ್ತು ಬೆನ್ಯಾಮೀನ್ ಕುಲಗಳವರ ಜನಗಣತಿಯನ್ನು ಮಾಡಲಿಲ್ಲ.
וַיֵּ֙רַע֙ בְּעֵינֵ֣י הָאֱלֹהִ֔ים עַל־הַדָּבָ֖ר הַזֶּ֑ה וַיַּ֖ךְ אֶת־יִשְׂרָאֵֽל׃ פ | 7 |
೭ಜನಗಣತಿ ಮಾಡಿದ್ದು ದೇವರಿಗೆ ಕೆಟ್ಟದ್ದೆಂದು ಕಂಡದ್ದರಿಂದ ಆತನು ಇಸ್ರಾಯೇಲರನ್ನು ಬಾಧಿಸಿದನು.
וַיֹּ֤אמֶר דָּוִיד֙ אֶל־הָ֣אֱלֹהִ֔ים חָטָ֣אתִֽי מְאֹ֔ד אֲשֶׁ֥ר עָשִׂ֖יתִי אֶת־הַדָּבָ֣ר הַזֶּ֑ה וְעַתָּ֗ה הַֽעֲבֶר־נָא֙ אֶת־עֲו֣וֹן עַבְדְּךָ֔ כִּ֥י נִסְכַּ֖לְתִּי מְאֹֽד׃ פ | 8 |
೮ಆಗ ದಾವೀದನು, “ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾಗಿದ್ದೇನೆ. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ದೇವರನ್ನು ಪ್ರಾರ್ಥಿಸಿದನು.
וַיְדַבֵּ֤ר יְהוָה֙ אֶל־גָּ֔ד חֹזֵ֥ה דָוִ֖יד לֵאמֹֽר׃ | 9 |
೯ಯೆಹೋವನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನೆಂದರೆ,
לֵךְ֩ וְדִבַּרְתָּ֨ אֶל־דָּוִ֜יד לֵאמֹ֗ר כֹּ֚ה אָמַ֣ר יְהוָ֔ה שָׁל֕וֹשׁ אֲנִ֖י נֹטֶ֣ה עָלֶ֑יךָ בְּחַר־לְךָ֛ אַחַ֥ת מֵהֵ֖נָּה וְאֶֽעֱשֶׂה־לָּֽךְ׃ | 10 |
೧೦ಯೆಹೋವನು ಇಂತೆನ್ನುತ್ತಾನೆ, “ನಾನು ಮೂರು ವಿಧವಾದ ಶಿಕ್ಷೆಯನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂಬುದಾಗಿ ದಾವೀದನಿಗೆ ಹೇಳು” ಎಂದನು.
וַיָּ֥בֹא גָ֖ד אֶל־דָּוִ֑יד וַיֹּ֥אמֶר ל֛וֹ כֹּֽה־אָמַ֥ר יְהוָ֖ה קַבֶּל־לָֽךְ׃ | 11 |
೧೧ಆಗ ಗಾದನು ದಾವೀದನ ಬಳಿಗೆ ಹೋಗಿ ಅವನಿಗೆ, “ಯೆಹೋವನು ಹೇಳುವುದೇನೆಂದರೆ,
אִם־שָׁל֨וֹשׁ שָׁנִ֜ים רָעָ֗ב וְאִם־שְׁלֹשָׁ֨ה חֳדָשִׁ֜ים נִסְפֶּ֥ה מִפְּנֵי־צָרֶיךָ֮ וְחֶ֣רֶב אוֹיְבֶ֣ךָ ׀ לְמַשֶּׂגֶת֒ וְאִם־שְׁלֹ֣שֶׁת יָ֠מִים חֶ֣רֶב יְהוָ֤ה וְדֶ֙בֶר֙ בָּאָ֔רֶץ וּמַלְאַ֣ךְ יְהוָ֔ה מַשְׁחִ֖ית בְּכָל־גְּב֣וּל יִשְׂרָאֵ֑ל וְעַתָּ֣ה רְאֵ֔ה מָֽה־אָשִׁ֥יב אֶת־שֹׁלְחִ֖י דָּבָֽר׃ פ | 12 |
೧೨‘ಮೂರು ವರ್ಷಗಳ ವರೆಗೆ ಬರಗಾಲ ಉಂಟಾಗಬೇಕೋ, ಇಲ್ಲವೆ ನೀನು ಮೂರು ತಿಂಗಳು ನಿನ್ನ ಶತ್ರುಗಳ ಚಿತ್ರಹಿಂಸೆಗೆ ಬಲಿಯಾಗುವುದು ಬೇಕೋ, ಇಲ್ಲವೆ ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ ಯೆಹೋವನು ಕಳುಹಿಸಿದ ಸಂಹಾರದೂತನಿಂದ ಉಂಟಾಗುವ ಮೂರು ದಿನಗಳ ಘೋರವ್ಯಾಧಿಯ ರೂಪವಾದ ಯೆಹೋವನ ಶಿಕ್ಷೆ ಬೇಕೋ, ಈ ಮೂರರಲ್ಲಿ ಒಂದನ್ನು ಆರಿಸಿಕೊ’ ಎಂಬುದೇ. ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು ಆಲೋಚಿಸಿ ಹೇಳು” ಎಂದು ಹೇಳಿದನು.
וַיֹּ֧אמֶר דָּוִ֛יד אֶל־גָּ֖ד צַר־לִ֣י מְאֹ֑ד אֶפְּלָה־נָּ֣א בְיַד־יְהוָ֗ה כִּֽי־רַבִּ֤ים רַחֲמָיו֙ מְאֹ֔ד וּבְיַד־אָדָ֖ם אַל־אֶפֹּֽל׃ | 13 |
೧೩ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಮನುಷ್ಯರ ಕೈಯಲ್ಲಿ ಬೀಳುವುದಕ್ಕಿಂತ ಯೆಹೋವನ ಹಸ್ತದಲ್ಲಿ ಬೀಳುವುದು ಮೇಲು. ಆತನು ಕೃಪಾಪೂರ್ಣನು” ಎಂದು ಹೇಳಿದನು.
וַיִּתֵּ֧ן יְהוָ֛ה דֶּ֖בֶר בְּיִשְׂרָאֵ֑ל וַיִּפֹּל֙ מִיִּשְׂרָאֵ֔ל שִׁבְעִ֥ים אֶ֖לֶף אִֽישׁ׃ | 14 |
೧೪ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅವರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.
וַיִּשְׁלַח֩ הָאֱלֹהִ֨ים ׀ מַלְאָ֥ךְ ׀ לִֽירוּשָׁלִַם֮ לְהַשְׁחִיתָהּ֒ וּכְהַשְׁחִ֗ית רָאָ֤ה יְהוָה֙ וַיִּנָּ֣חֶם עַל־הָֽרָעָ֔ה וַיֹּ֨אמֶר לַמַּלְאָ֤ךְ הַמַּשְׁחִית֙ רַ֔ב עַתָּ֖ה הֶ֣רֶף יָדֶ֑ךָ וּמַלְאַ֤ךְ יְהוָה֙ עֹמֵ֔ד עִם־גֹּ֖רֶן אָרְנָ֥ן הַיְבוּסִֽי׃ ס | 15 |
೧೫ದೇವರು ಯೆರೂಸಲೇಮನ್ನು ನಾಶಪಡಿಸುವುದಕ್ಕೆ ದೂತರನ್ನು ಕಳುಹಿಸಿದನು. ಆದರೆ ಆ ದೂತನು ನಾಶಪಡಿಸುವುದಕ್ಕಿದ್ದಾಗ ಯೆಹೋವನು ಅದನ್ನು ಕಂಡು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರ ದೂತನಿಗೆ, “ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು.
וַיִּשָּׂ֨א דָוִ֜יד אֶת־עֵינָ֗יו וַיַּ֞רְא אֶת־מַלְאַ֤ךְ יְהוָה֙ עֹמֵ֗ד בֵּ֤ין הָאָ֙רֶץ֙ וּבֵ֣ין הַשָּׁמַ֔יִם וְחַרְבּ֤וֹ שְׁלוּפָה֙ בְּיָד֔וֹ נְטוּיָ֖ה עַל־יְרוּשָׁלִָ֑ם וַיִּפֹּ֨ל דָּוִ֧יד וְהַזְּקֵנִ֛ים מְכֻסִּ֥ים בַּשַּׂקִּ֖ים עַל־פְּנֵיהֶֽם׃ | 16 |
೧೬ದಾವೀದನು ಕಣ್ಣೆತ್ತಿ ನೋಡಿ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ, ಚಾಚಿದ ಕೈಯಲ್ಲಿ ಯೆರೂಸಲೇಮಿಗೆ ವಿರುದ್ಧವಾಗಿ ಹಿರಿದ ಕತ್ತಿಯಿರುವುದನ್ನೂ ಕಂಡಾಗ ಅವನೂ, ಹಿರಿಯರೂ ಗೋಣಿತಟ್ಟನ್ನು ಹೊದ್ದುಕೊಂಡು ಬೋರಲು ಬಿದ್ದರು.
וַיֹּ֣אמֶר דָּוִ֣יד אֶֽל־הָאֱלֹהִ֡ים הֲלֹא֩ אֲנִ֨י אָמַ֜רְתִּי לִמְנ֣וֹת בָּעָ֗ם וַאֲנִי־ה֤וּא אֲשֶׁר־חָטָ֙אתִי֙ וְהָרֵ֣עַ הֲרֵע֔וֹתִי וְאֵ֥לֶּה הַצֹּ֖אן מֶ֣ה עָשׂ֑וּ יְהוָ֣ה אֱלֹהַ֗י תְּהִ֨י נָ֤א יָֽדְךָ֙ בִּ֚י וּבְבֵ֣ית אָבִ֔י וּֽבְעַמְּךָ֖ לֹ֥א לְמַגֵּפָֽה׃ ס | 17 |
೧೭ಮತ್ತು ದಾವೀದನು ದೇವರಿಗೆ, “ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೋ. ಮಹಾಪಾಪಮಾಡಿದವನು ನಾನೇ. ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಯೆಹೋವನೇ, ನನ್ನ ದೇವರೇ, ನಿನ್ನ ಹಸ್ತವು ನಿನ್ನ ಜನರನ್ನು ಬಾಧಿಸುವುದಕ್ಕೆ ಅವರಿಗೆ ವಿರುದ್ಧವಾಗಿರದೆ ನನಗೂ ನನ್ನ ಮನೆಯವರಿಗೂ ವಿರುದ್ಧವಾಗಿರಲಿ” ಎಂದು ಬೇಡಿಕೊಂಡನು.
וּמַלְאַ֧ךְ יְהוָ֛ה אָמַ֥ר אֶל־גָּ֖ד לֵאמֹ֣ר לְדָוִ֑יד כִּ֣י ׀ יַעֲלֶ֣ה דָוִ֗יד לְהָקִ֤ים מִזְבֵּ֙חַ֙ לַיהוָ֔ה בְּגֹ֖רֶן אָרְנָ֥ן הַיְבֻסִֽי׃ | 18 |
೧೮ಆಗ ಯೆಹೋವನ ದೂತನು ಗಾದನಿಗೆ, “ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುವುದಕ್ಕೆ ಹೋಗಬೇಕು ಎಂದು ದಾವೀದನಿಗೆ ಹೇಳು” ಎಂದು ಆಜ್ಞಾಪಿಸಿದನು.
וַיַּ֤עַל דָּוִיד֙ בִּדְבַר־גָּ֔ד אֲשֶׁ֥ר דִּבֶּ֖ר בְּשֵׁ֥ם יְהוָֽה׃ | 19 |
೧೯ದಾವೀದನು ಗಾದನ ಮುಖಾಂತರವಾಗಿ ತನಗಾದ ಯೆಹೋವನ ಅಪ್ಪಣೆಯಂತೆ ಹೊರಟನು.
וַיָּ֣שָׁב אָרְנָ֗ן וַיַּרְא֙ אֶת־הַמַּלְאָ֔ךְ וְאַרְבַּ֧עַת בָּנָ֛יו עִמּ֖וֹ מִֽתְחַבְּאִ֑ים וְאָרְנָ֖ן דָּ֥שׁ חִטִּֽים׃ | 20 |
೨೦ಅಷ್ಟರಲ್ಲಿ ಗೋದಿಯನ್ನು ತುಳಿಸುತ್ತಿದ್ದ ಒರ್ನಾನನು ತಿರುಗಿಕೊಂಡು ದೂತನನ್ನು ನೋಡಿದ್ದನು. ಅವನ ಜೊತೆಯಲ್ಲಿದ್ದ ಅವನ ನಾಲ್ಕು ಮಕ್ಕಳು ಅಡಗಿಕೊಂಡಿದ್ದರು.
וַיָּבֹ֥א דָוִ֖יד עַד־אָרְנָ֑ן וַיַּבֵּ֤ט אָרְנָן֙ וַיַּ֣רְא אֶת־דָּוִ֔יד וַיֵּצֵא֙ מִן־הַגֹּ֔רֶן וַיִּשְׁתַּ֧חוּ לְדָוִ֛יד אַפַּ֖יִם אָֽרְצָה׃ | 21 |
೨೧ದಾವೀದನು ತನ್ನ ಬಳಿಗೆ ಬರುವುದನ್ನು ಒರ್ನಾನನು ಕಂಡು ಕಣವನ್ನು ಬಿಟ್ಟು ಹೋಗಿ ಅವನಿಗೆ ಅಡ್ಡ ಬಿದ್ದನು.
וַיֹּ֨אמֶר דָּוִ֜יד אֶל־אָרְנָ֗ן תְּנָה־לִּי֙ מְק֣וֹם הַגֹּ֔רֶן וְאֶבְנֶה־בּ֥וֹ מִזְבֵּ֖חַ לַיהוָ֑ה בְּכֶ֤סֶף מָלֵא֙ תְּנֵ֣הוּ לִ֔י וְתֵעָצַ֥ר הַמַּגֵּפָ֖ה מֵעַ֥ל הָעָֽם׃ | 22 |
೨೨ದಾವೀದನು ಅವನಿಗೆ, “ನಿನ್ನ ಕಣವನ್ನೂ ಮತ್ತು ಭೂಮಿಯನ್ನು ನನಗೆ ಕೊಡು, ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುತ್ತೇನೆ. ಪೂರ್ಣಕ್ರಯ ತೆಗೆದುಕೊಂಡು ಅದನ್ನು ಕೊಡು” ಎಂದು ಹೇಳಿದನು.
וַיֹּ֨אמֶר אָרְנָ֤ן אֶל־דָּוִיד֙ קַֽח־לָ֔ךְ וְיַ֛עַשׂ אֲדֹנִ֥י הַמֶּ֖לֶךְ הַטּ֣וֹב בְּעֵינָ֑יו רְאֵה֩ נָתַ֨תִּי הַבָּקָ֜ר לָֽעֹל֗וֹת וְהַמּוֹרִגִּ֧ים לָעֵצִ֛ים וְהַחִטִּ֥ים לַמִּנְחָ֖ה הַכֹּ֥ל נָתָֽתִּי׃ | 23 |
೨೩ಆಗ ಒರ್ನಾನನು ದಾವೀದನಿಗೆ, “ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಯಜ್ಞಮಾಡೋಣವಾಗಲಿ. ಇಲ್ಲಿ ಯಜ್ಞಕ್ಕೆ ಹೋರಿಗಳೂ, ಸೌದೆಗೆ ಹಂತೀಕುಂಟೆಗಳೂ, ನೈವೇದ್ಯಕ್ಕೋಸ್ಕರ ಗೋದಿಯೂ ಇರುತ್ತವೆ. ಇವೆಲ್ಲವನ್ನೂ ಕೊಡುತ್ತೇನೆ” ಎಂದು ಹೇಳಿದನು.
וַיֹּ֨אמֶר הַמֶּ֤לֶךְ דָּוִיד֙ לְאָרְנָ֔ן לֹ֕א כִּֽי־קָנֹ֥ה אֶקְנֶ֖ה בְּכֶ֣סֶף מָלֵ֑א כִּ֠י לֹא־אֶשָּׂ֤א אֲשֶׁר־לְךָ֙ לַיהוָ֔ה וְהַעֲל֥וֹת עוֹלָ֖ה חִנָּֽם׃ | 24 |
೨೪ಅರಸನಾದ ದಾವೀದನು ಒರ್ನಾನನಿಗೆ “ಹಾಗಲ್ಲ ನಾನು ನಿನ್ನಿಂದ ಪೂರ್ಣ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ ನಿನಗೆ ಸೇರಿದ್ದನ್ನು ಕ್ರಯವಿಲ್ಲದೆ ತೆಗೆದುಕೊಂಡು ಯೆಹೋವನಿಗೆ ಯಜ್ಞವಾಗಿ ಅರ್ಪಿಸುವುದಿಲ್ಲ” ಎಂದು ಹೇಳಿದನು.
וַיִּתֵּ֥ן דָּוִ֛יד לְאָרְנָ֖ן בַּמָּק֑וֹם שִׁקְלֵ֣י זָהָ֔ב מִשְׁקָ֖ל שֵׁ֥שׁ מֵאֽוֹת׃ | 25 |
೨೫ದಾವೀದನು ಆ ಭೂಮಿಗೋಸ್ಕರ ಅವನಿಗೆ ಆರುನೂರು ಶೆಕಲ್ ಬಂಗಾರವನ್ನು ಕೊಟ್ಟನು.
וַיִּבֶן֩ שָׁ֨ם דָּוִ֤יד מִזְבֵּ֙חַ֙ לַיהוָ֔ה וַיַּ֥עַל עֹל֖וֹת וּשְׁלָמִ֑ים וַיִּקְרָא֙ אֶל־יְהוָ֔ה וַיַּֽעֲנֵ֤הוּ בָאֵשׁ֙ מִן־הַשָּׁמַ֔יִם עַ֖ל מִזְבַּ֥ח הָעֹלָֽה׃ פ | 26 |
೨೬ಅಲ್ಲಿ ದಾವೀದನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿ, ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ, ಆಕಾಶದಿಂದ ಯಜ್ಞವೇದಿಯ ಮೇಲೆ ಬೆಂಕಿಯನ್ನು ಸುರಿಸಿ,
וַיֹּ֤אמֶר יְהוָה֙ לַמַּלְאָ֔ךְ וַיָּ֥שֶׁב חַרְבּ֖וֹ אֶל־נְדָנָֽהּ׃ | 27 |
೨೭ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದನು. ಅವನು ಹಾಗೆಯೇ ಮಾಡಿದನು.
בָּעֵ֣ת הַהִ֔יא בִּרְא֤וֹת דָּוִיד֙ כִּי־עָנָ֣הוּ יְהוָ֔ה בְּגֹ֖רֶן אָרְנָ֣ן הַיְבוּסִ֑י וַיִּזְבַּ֖ח שָֽׁם׃ | 28 |
೨೮ಮೋಶೆಯು ಅರಣ್ಯದಲ್ಲಿ ಮಾಡಿಸಿದ ಯೆಹೋವನ ಗುಡಾರ ಮತ್ತು ಯಜ್ಞವೇದಿಯು ಆ ಕಾಲದಲ್ಲಿ ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದವು.
וּמִשְׁכַּ֣ן יְ֠הוָה אֲשֶׁר־עָשָׂ֨ה מֹשֶׁ֧ה בַמִּדְבָּ֛ר וּמִזְבַּ֥ח הָעוֹלָ֖ה בָּעֵ֣ת הַהִ֑יא בַּבָּמָ֖ה בְּגִבְעֽוֹן׃ | 29 |
೨೯ಆದರೂ ದಾವೀದನು ಯೆಹೋವನ ದೂತನ ಕತ್ತಿಗೆ ಹೆದರಿ ದೇವದರ್ಶನಕ್ಕಾಗಿ ಅಲ್ಲಿಗೆ ಹೋಗಲಾರದೆ, ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಯಜ್ಞವನ್ನು ಅರ್ಪಿಸಿದನು.
וְלֹא־יָכֹ֥ל דָּוִ֛יד לָלֶ֥כֶת לְפָנָ֖יו לִדְרֹ֣שׁ אֱלֹהִ֑ים כִּ֣י נִבְעַ֔ת מִפְּנֵ֕י חֶ֖רֶב מַלְאַ֥ךְ יְהוָֽה׃ ס | 30 |
೩೦ಆ ಕಾಲದಲ್ಲಿ ದಾವೀದನಿಗೆ ಯೆಹೋವನಿಂದ ಸದುತ್ತರ ದೊರಕಿತು.