< 1 שְׁמוּאֵל 3 >
וְהַנַּ֧עַר שְׁמוּאֵ֛ל מְשָׁרֵ֥ת אֶת־יְהוָ֖ה לִפְנֵ֣י עֵלִ֑י וּדְבַר־יְהוָ֗ה הָיָ֤ה יָקָר֙ בַּיָּמִ֣ים הָהֵ֔ם אֵ֥ין חָז֖וֹן נִפְרָֽץ׃ ס | 1 |
೧ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆಮಾಡುತ್ತಿದ್ದನು. ಆ ಕಾಲದಲ್ಲಿ ದೈವೋಕ್ತಿಗಳು ವಿರಳವಾಗಿದ್ದವು; ದೇವದರ್ಶನಗಳು ಅಪರೂಪವಾಗಿದ್ದವು.
וַֽיְהִי֙ בַּיּ֣וֹם הַה֔וּא וְעֵלִ֖י שֹׁכֵ֣ב בִּמְקֹמ֑וֹ ועינו הֵחֵ֣לּוּ כֵה֔וֹת לֹ֥א יוּכַ֖ל לִרְאֽוֹת׃ | 2 |
೨ಏಲಿಯ ಕಣ್ಣುಗಳು ದಿನದಿನಕ್ಕೆ ಮೊಬ್ಬಾಗುತ್ತಾ ಬಂದು ಸರಿಯಾಗಿ ಕಾಣಿಸದೆಹೋಗಿದ್ದವು. ಅವನು ಒಂದು ರಾತ್ರಿ ತನ್ನ ಸ್ಥಳದಲ್ಲಿ ಮಲಗಿದ್ದನು;
וְנֵ֤ר אֱלֹהִים֙ טֶ֣רֶם יִכְבֶּ֔ה וּשְׁמוּאֵ֖ל שֹׁכֵ֑ב בְּהֵיכַ֣ל יְהוָ֔ה אֲשֶׁר־שָׁ֖ם אֲר֥וֹן אֱלֹהִֽים׃ פ | 3 |
೩ಸಮುವೇಲನು ಯೆಹೋವನ ಮಂದಿರದಲ್ಲಿ ದೇವರ ಮಂಜೂಷವಿದ್ದ ಸ್ಥಳದಲ್ಲಿ ಮಲಗಿದ್ದನು. ಆಗ ದೇವದೀಪವು ಇನ್ನೂ ಉರಿಯುತ್ತಿತ್ತು.
וַיִּקְרָ֧א יְהוָ֛ה אֶל־שְׁמוּאֵ֖ל וַיֹּ֥אמֶר הִנֵּֽנִי׃ | 4 |
೪ಯೆಹೋವನು ಸಮುವೇಲನನ್ನು ಕರೆದನು; ಸಮುವೇಲನು “ಇಗೋ ಬಂದೆ” ಎಂದು ಉತ್ತರಕೊಟ್ಟು ಒಡನೆ ಏಲಿಯ ಬಳಿಗೆ ಹೋಗಿ,
וַיָּ֣רָץ אֶל־עֵלִ֗י וַיֹּ֤אמֶר הִנְנִי֙ כִּֽי־קָרָ֣אתָ לִּ֔י וַיֹּ֥אמֶר לֹֽא־קָרָ֖אתִי שׁ֣וּב שְׁכָ֑ב וַיֵּ֖לֶךְ וַיִּשְׁכָּֽב׃ ס | 5 |
೫“ಇಗೋ ಬಂದಿದ್ದೇನೆ; ನೀನು ನನ್ನನ್ನು ಕರೆದೆಯಲ್ಲವೇ?” ಅಂದನು. ಆಗ ಏಲಿಯು, “ನಾನು ನಿನ್ನನ್ನು ಕರೆಯಲಿಲ್ಲ, ಹೋಗಿ ಮಲಗಿಕೋ” ಅಂದನು. ಸಮುವೇಲನು ಹೋಗಿ ಮಲಗಿದನು.
וַיֹּ֣סֶף יְהוָ֗ה קְרֹ֣א עוֹד֮ שְׁמוּאֵל֒ וַיָּ֤קָם שְׁמוּאֵל֙ וַיֵּ֣לֶךְ אֶל־עֵלִ֔י וַיֹּ֣אמֶר הִנְנִ֔י כִּ֥י קָרָ֖אתָ לִ֑י וַיֹּ֛אמֶר לֹֽא־קָרָ֥אתִי בְנִ֖י שׁ֥וּב שְׁכָֽב׃ | 6 |
೬ಯೆಹೋವನು ತಿರುಗಿ, “ಸಮುವೇಲನೇ” ಎಂದು ಕರೆದನು. ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ, “ಇಗೋ, ಬಂದಿದ್ದೇನೆ; ನೀನು ನನ್ನನ್ನು ಕರೆದೆಯಲ್ಲಾ” ಅನ್ನಲು ಅವನು, “ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲಾ, ಹೋಗಿ ಮಲಗಿಕೋ” ಎಂದನು.
וּשְׁמוּאֵ֕ל טֶ֖רֶם יָדַ֣ע אֶת־יְהוָ֑ה וְטֶ֛רֶם יִגָּלֶ֥ה אֵלָ֖יו דְּבַר־יְהוָֽה׃ | 7 |
೭ಆವರೆಗೂ ಸಮುವೇಲನಿಗೆ ಯೆಹೋವನ ಅನುಭವವಿರಲಿಲ್ಲ; ಅವನು ದೈವೋಕ್ತಿಗಳನ್ನು ಹೊಂದಿರಲಿಲ್ಲ.
וַיֹּ֨סֶף יְהוָ֥ה קְרֹא־שְׁמוּאֵל֮ בַּשְּׁלִשִׁית֒ וַיָּ֙קָם֙ וַיֵּ֣לֶךְ אֶל־עֵלִ֔י וַיֹּ֣אמֶר הִנְנִ֔י כִּ֥י קָרָ֖אתָ לִ֑י וַיָּ֣בֶן עֵלִ֔י כִּ֥י יְהוָ֖ה קֹרֵ֥א לַנָּֽעַר׃ | 8 |
೮ಯೆಹೋವನು ಸಮುವೇಲನನ್ನು ಮೂರನೆಯ ಸಾರಿ ಕರೆದನು. ಅವನು ತಟ್ಟನೆ ಏಲಿಯ ಹತ್ತಿರ ಹೋಗಿ, “ಇಗೋ, ಬಂದಿದ್ದೇನೆ, ನನ್ನನ್ನು ಕರೆದಿಯಲ್ಲಾ” ಅನ್ನಲು, ಹುಡುಗನನ್ನು ಕರೆದವನು ಯೆಹೋವನೇ ಎಂದು ಏಲಿಯು ತಿಳಿದು ಅವನಿಗೆ, “ಹೋಗಿ ಮಲಗಿಕೋ;
וַיֹּ֨אמֶר עֵלִ֣י לִשְׁמוּאֵל֮ לֵ֣ךְ שְׁכָב֒ וְהָיָה֙ אִם־יִקְרָ֣א אֵלֶ֔יךָ וְאָֽמַרְתָּ֙ דַּבֵּ֣ר יְהוָ֔ה כִּ֥י שֹׁמֵ֖עַ עַבְדֶּ֑ךָ וַיֵּ֣לֶךְ שְׁמוּאֵ֔ל וַיִּשְׁכַּ֖ב בִּמְקוֹמֽוֹ׃ | 9 |
೯ಪುನಃ ಆತನು ನಿನ್ನನ್ನು ಕರೆದರೆ ಯೆಹೋವನೇ, ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ” ಎಂದು ಹೇಳು ಅಂದನು. ಸಮುವೇಲನು ತಿರುಗಿ ಹೋಗಿ ತನ್ನ ಸ್ಥಳದಲ್ಲಿ ಮಲಗಿಕೊಂಡನು.
וַיָּבֹ֤א יְהוָה֙ וַיִּתְיַצַּ֔ב וַיִּקְרָ֥א כְפַֽעַם־בְּפַ֖עַם שְׁמוּאֵ֣ל ׀ שְׁמוּאֵ֑ל וַיֹּ֤אמֶר שְׁמוּאֵל֙ דַּבֵּ֔ר כִּ֥י שֹׁמֵ֖עַ עַבְדֶּֽךָ׃ פ | 10 |
೧೦ಯೆಹೋವನು ಪ್ರತ್ಯಕ್ಷನಾಗಿ ಮುಂಚಿನಂತೆಯೇ “ಸಮುವೇಲನೇ, ಸಮುವೇಲನೇ” ಅಂದನು. ಸಮುವೇಲನು, “ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ” ಎಂದನು.
וַיֹּ֤אמֶר יְהוָה֙ אֶל־שְׁמוּאֵ֔ל הִנֵּ֧ה אָנֹכִ֛י עֹשֶׂ֥ה דָבָ֖ר בְּיִשְׂרָאֵ֑ל אֲשֶׁר֙ כָּל־שֹׁ֣מְע֔וֹ תְּצִלֶּ֖ינָה שְׁתֵּ֥י אָזְנָֽיו׃ | 11 |
೧೧ಯೆಹೋವನು ಸಮುವೇಲನಿಗೆ “ನಾನು ಇಸ್ರಾಯೇಲ್ಯರಲ್ಲಿ ಒಂದು ವಿಶೇಷಕಾರ್ಯವನ್ನು ನಡೆಸುವೆನು; ಅದರ ವಿಷಯ ಕೇಳುವವರ ಎರಡು ಕಿವಿಗಳೂ ನಿಮಿರುವುವು.
בַּיּ֤וֹם הַהוּא֙ אָקִ֣ים אֶל־עֵלִ֔י אֵ֛ת כָּל־אֲשֶׁ֥ר דִּבַּ֖רְתִּי אֶל־בֵּית֑וֹ הָחֵ֖ל וְכַלֵּֽה׃ | 12 |
೧೨ಏಲಿಯ ಮನೆಯನ್ನು ಕುರಿತು ತಿಳಿಸಿದ್ದೆಲ್ಲವನ್ನೂ ಆ ದಿನದಲ್ಲಿ ತಪ್ಪದೆ ನೆರವೇರಿಸುವೆನು.
וְהִגַּ֣דְתִּי ל֔וֹ כִּֽי־שֹׁפֵ֥ט אֲנִ֛י אֶת־בֵּית֖וֹ עַד־עוֹלָ֑ם בַּעֲוֺ֣ן אֲשֶׁר־יָדַ֗ע כִּֽי־מְקַֽלְלִ֤ים לָהֶם֙ בָּנָ֔יו וְלֹ֥א כִהָ֖ה בָּֽם׃ | 13 |
೧೩ಅವನ ಮಕ್ಕಳು ಶಾಪಗ್ರಸ್ತರಾದರೆಂದು ಅವನಿಗೆ ತಿಳಿದು ಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿಮಿತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.
וְלָכֵ֥ן נִשְׁבַּ֖עְתִּי לְבֵ֣ית עֵלִ֑י אִֽם־יִתְכַּפֵּ֞ר עֲוֺ֧ן בֵּית־עֵלִ֛י בְּזֶ֥בַח וּבְמִנְחָ֖ה עַד־עוֹלָֽם׃ | 14 |
೧೪ಏಲಿಯ ಮನೆಯವರ ಅಪರಾಧಕ್ಕೆ ಯಜ್ಞ ಅಥವಾ ನೈವೇದ್ಯಗಳಿಂದ ಎಂದಿಗೂ ಪ್ರಾಯಶ್ಚಿತ್ತವಾಗುವುದಿಲ್ಲ ಎಂಬುದಾಗಿ ಆಣೆಯಿಟ್ಟಿದ್ದೇನೆ” ಎಂದು ಹೇಳಿದನು.
וַיִּשְׁכַּ֤ב שְׁמוּאֵל֙ עַד־הַבֹּ֔קֶר וַיִּפְתַּ֖ח אֶת־דַּלְת֣וֹת בֵּית־יְהוָ֑ה וּשְׁמוּאֵ֣ל יָרֵ֔א מֵהַגִּ֥יד אֶת־הַמַּרְאָ֖ה אֶל־עֵלִֽי׃ | 15 |
೧೫ಅನಂತರ ಸಮುವೇಲನು ಮಲಗಿ ಮುಂಜಾನೆಯಲ್ಲೇ ಎದ್ದು ಯೆಹೋವನ ಮಂದಿರದ ಬಾಗಿಲುಗಳನ್ನು ತೆರೆದನು. ಅವನು ತಾನು ಕಂಡದ್ದನ್ನು ಏಲಿಗೆ ತಿಳಿಸುವುದಕ್ಕೆ ಭಯಪಟ್ಟನು.
וַיִּקְרָ֤א עֵלִי֙ אֶת־שְׁמוּאֵ֔ל וַיֹּ֖אמֶר שְׁמוּאֵ֣ל בְּנִ֑י וַיֹּ֖אמֶר הִנֵּֽנִי׃ | 16 |
೧೬ಆದರೆ ಏಲಿಯು, “ನನ್ನ ಮಗನೇ, ಸಮುವೇಲನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು.
וַיֹּ֗אמֶר מָ֤ה הַדָּבָר֙ אֲשֶׁ֣ר דִּבֶּ֣ר אֵלֶ֔יךָ אַל־נָ֥א תְכַחֵ֖ד מִמֶּ֑נִּי כֹּ֣ה יַעֲשֶׂה־לְּךָ֤ אֱלֹהִים֙ וְכֹ֣ה יוֹסִ֔יף אִם־תְּכַחֵ֤ד מִמֶּ֙נִּי֙ דָּבָ֔ר מִכָּל־הַדָּבָ֖ר אֲשֶׁר־דִּבֶּ֥ר אֵלֶֽיךָ׃ | 17 |
೧೭ಆಗ ಏಲಿಯು ಅವನಿಗೆ, “ಯೆಹೋವನು ನಿನಗೆ ತಿಳಿಸಿದ್ದೇನು? ಆತನ ಮಾತುಗಳಲ್ಲಿ ಒಂದನ್ನಾದರೂ ಮುಚ್ಚಿಡಬೇಡ; ಮುಚ್ಚಿಟ್ಟರೆ ಆತನು ಬೇಕಾದ ಹಾಗೆ ನಿನ್ನನ್ನು ದಂಡಿಸಲಿ” ಎಂದು ಹೇಳಲು
וַיַּגֶּד־ל֤וֹ שְׁמוּאֵל֙ אֶת־כָּל־הַדְּבָרִ֔ים וְלֹ֥א כִחֵ֖ד מִמֶּ֑נּוּ וַיֹּאמַ֕ר יְהוָ֣ה ה֔וּא הַטּ֥וֹב בְּעֵינָ֖ו יַעֲשֶֽׂה׃ פ | 18 |
೧೮ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನು ತಿಳಿಸಿದನು. ಏಲಿಯು ಅದನ್ನು ಕೇಳಿ, “ಆತನು ಯೆಹೋವನು; ತನಗೆ ಸರಿಕಾಣುವುದನ್ನು ಮಾಡಲಿ” ಎಂದನು.
וַיִּגְדַּ֖ל שְׁמוּאֵ֑ל וַֽיהוָה֙ הָיָ֣ה עִמּ֔וֹ וְלֹֽא־הִפִּ֥יל מִכָּל־דְּבָרָ֖יו אָֽרְצָה׃ | 19 |
೧೯ಸಮುವೇಲನು ದೊಡ್ಡವನಾಗುತ್ತಾ ಬಂದನು. ಯೆಹೋವನು ಅವನೊಡನೆ ಇದ್ದುದ್ದರಿಂದ ಅವನ ಪ್ರವಾದನೆಗಳಲ್ಲಿ ಒಂದೂ ಬಿದ್ದುಹೋಗಲಿಲ್ಲ.
וַיֵּ֙דַע֙ כָּל־יִשְׂרָאֵ֔ל מִדָּ֖ן וְעַד־בְּאֵ֣ר שָׁ֑בַע כִּ֚י נֶאֱמָ֣ן שְׁמוּאֵ֔ל לְנָבִ֖יא לַיהוָֽה׃ | 20 |
೨೦ಯೆಹೋವನು ಅವನನ್ನು ತನ್ನ ಪ್ರವಾದಿಯನ್ನಾಗಿ ನೇಮಿಸಿಕೊಂಡದ್ದು ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲಾ ಇಸ್ರಾಯೇಲರಿಗೆ ಗೊತ್ತಾಯಿತು.
וַיֹּ֥סֶף יְהוָ֖ה לְהֵרָאֹ֣ה בְשִׁלֹ֑ה כִּֽי־נִגְלָ֨ה יְהוָ֧ה אֶל־שְׁמוּאֵ֛ל בְּשִׁל֖וֹ בִּדְבַ֥ר יְהוָֽה׃ פ | 21 |
೨೧ಯೆಹೋವನು ಶೀಲೋವಿನಲ್ಲಿ ದರ್ಶನಕೊಡುವುದಕ್ಕೆ ಪ್ರಾರಂಭಿಸಿ ತನ್ನ ವಾಕ್ಯದಿಂದ ಸಮುವೇಲನಿಗೆ ತನ್ನನ್ನು ಪ್ರಕಟಿಸಿಕೊಳ್ಳುತ್ತಾ ಬಂದನು. ಸಮುವೇಲನು ಇಸ್ರಾಯೇಲರೆಲ್ಲರಿಗೆ ದೈವೋತ್ತರಗಳನ್ನು ತಿಳಿಸುತ್ತಿದ್ದನು.