< 1 שְׁמוּאֵל 9 >
וַֽיְהִי־אִ֣ישׁ מבן־ימין וּ֠שְׁמוֹ קִ֣ישׁ בֶּן־אֲבִיאֵ֞ל בֶּן־צְר֧וֹר בֶּן־בְּכוֹרַ֛ת בֶּן־אֲפִ֖יחַ בֶּן־אִ֣ישׁ יְמִינִ֑י גִּבּ֖וֹר חָֽיִל׃ | 1 |
೧ಬೆನ್ಯಾಮೀನ್ ಕುಲದಲ್ಲಿ ಕೀಷನೆಂಬ ಒಬ್ಬ ಐಶ್ವರ್ಯವಂತ ಮತ್ತು ಪ್ರಭಾವಶಾಲಿಯಾದ ಮನುಷ್ಯನಿದ್ದನು. ಕೀಷನು ಅಬೀಯೇಲನ ಮಗ, ಅಬೀಯೇಲನು ಚೆರೋರನ ಮಗ, ಬೆಕೋರತನ ಮೊಮ್ಮಗ ಹಾಗೂ ಅಫೀಹನ ಮರಿಮಗನು.
וְלוֹ־הָיָ֨ה בֵ֜ן וּשְׁמ֤וֹ שָׁאוּל֙ בָּח֣וּר וָט֔וֹב וְאֵ֥ין אִ֛ישׁ מִבְּנֵ֥י יִשְׂרָאֵ֖ל ט֣וֹב מִמֶּ֑נּוּ מִשִּׁכְמ֣וֹ וָמַ֔עְלָה גָּבֹ֖הַּ מִכָּל־הָעָֽם׃ | 2 |
೨ಕೀಷನಿಗೆ ಸೌಲನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಈ ಸೌಲನು ಯೌವನಸ್ಥನೂ, ಎಲ್ಲಾ ಇಸ್ರಾಯೇಲ್ಯರಲ್ಲಿ ಅತಿಸುಂದರನೂ ಆಗಿದ್ದನು. ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾಗಿದ್ದನು.
וַתֹּאבַ֙דְנָה֙ הָאֲתֹנ֔וֹת לְקִ֖ישׁ אֲבִ֣י שָׁא֑וּל וַיֹּ֨אמֶר קִ֜ישׁ אֶל־שָׁא֣וּל בְּנ֗וֹ קַח־נָ֤א אִתְּךָ֙ אֶת־אַחַ֣ד מֵֽהַנְּעָרִ֔ים וְק֣וּם לֵ֔ךְ בַּקֵּ֖שׁ אֶת־הָאֲתֹנֹֽת׃ | 3 |
೩ಒಂದು ದಿನ ಸೌಲನ ತಂದೆಯಾದ ಕೀಷನ ಕತ್ತೆಗಳು ತಪ್ಪಿಸಿಕೊಂಡು ಹೋದುದರಿಂದ ಅವನು ತನ್ನ ಮಗನಾದ ಸೌಲನಿಗೆ, “ನೀನೆದ್ದು ಆಳುಗಳಲ್ಲಿ ಒಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕುವುದಕ್ಕೆ ಹೋಗು” ಎಂದು ಹೇಳಿದನು.
וַיַּעֲבֹ֧ר בְּהַר־אֶפְרַ֛יִם וַיַּעֲבֹ֥ר בְּאֶֽרֶץ־שָׁלִ֖שָׁה וְלֹ֣א מָצָ֑אוּ וַיַּעַבְר֤וּ בְאֶֽרֶץ־שַׁעֲלִים֙ וָאַ֔יִן וַיַּעֲבֹ֥ר בְּאֶֽרֶץ־יְמִינִ֖י וְלֹ֥א מָצָֽאוּ׃ | 4 |
೪ಅದರಂತೆಯೇ ಅವನು ಹೊರಟು ಎಫ್ರಾಯೀಮ್ ಪರ್ವತಪ್ರಾಂತ್ಯ, ಶಾಲಿಷಾ ದೇಶ ಇವುಗಳಲ್ಲಿ ಸಂಚರಿಸಿ ಹುಡುಕಿದರೂ ಅವು ಸಿಕ್ಕಲಿಲ್ಲ. ಶಾಲೀಮ್, ಬೆನ್ಯಾಮೀನ್ ಈ ಪ್ರಾಂತ್ಯಗಳಲ್ಲಿಯೂ ಸಿಕ್ಕಲಿಲ್ಲ.
הֵ֗מָּה בָּ֚אוּ בְּאֶ֣רֶץ צ֔וּף וְשָׁא֥וּל אָמַ֛ר לְנַעֲר֥וֹ אֲשֶׁר־עִמּ֖וֹ לְכָ֣ה וְנָשׁ֑וּבָה פֶּן־יֶחְדַּ֥ל אָבִ֛י מִן־הָאֲתֹנ֖וֹת וְדָ֥אַג לָֽנוּ׃ | 5 |
೫ಕಡೆಗೆ ಅವರು ಚೂಫ್ ದೇಶಕ್ಕೆ ಬಂದಾಗ ಸೌಲನು ತನ್ನ ಆಳಿಗೆ, “ಹಿಂದಿರುಗಿ ಹೋಗೋಣ ನಡಿ; ನಮ್ಮ ತಂದೆಯು ಈಗ ಕತ್ತೆಗಳ ಚಿಂತೆ ಬಿಟ್ಟು ನಮ್ಮ ಚಿಂತೆಯಲ್ಲಿರಬಹುದು” ಅಂದನು
וַיֹּ֣אמֶר ל֗וֹ הִנֵּה־נָ֤א אִישׁ־אֱלֹהִים֙ בָּעִ֣יר הַזֹּ֔את וְהָאִ֣ישׁ נִכְבָּ֔ד כֹּ֥ל אֲשֶׁר־יְדַבֵּ֖ר בּ֣וֹא יָב֑וֹא עַתָּה֙ נֵ֣לֲכָה שָּׁ֔ם אוּלַי֙ יַגִּ֣יד לָ֔נוּ אֶת־דַּרְכֵּ֖נוּ אֲשֶׁר־הָלַ֥כְנוּ עָלֶֽיהָ׃ | 6 |
೬ಆದರೆ ಆ ಆಳು, “ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೇವರ ಮನುಷ್ಯನಿರುತ್ತಾನೆ. ಅವನು ನುಡಿಯುವುದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗತಕ್ಕ ಮಾರ್ಗವನ್ನು ತಿಳಿಸುವನು” ಎಂದನು.
וַיֹּ֨אמֶר שָׁא֜וּל לְנַעֲר֗וֹ וְהִנֵּ֣ה נֵלֵךְ֮ וּמַה־נָּבִ֣יא לָאִישׁ֒ כִּ֤י הַלֶּ֙חֶם֙ אָזַ֣ל מִכֵּלֵ֔ינוּ וּתְשׁוּרָ֥ה אֵין־לְהָבִ֖יא לְאִ֣ישׁ הָאֱלֹהִ֑ים מָ֖ה אִתָּֽנוּ׃ | 7 |
೭ಅದಕ್ಕೆ ಸೌಲನು, “ನಾವು ಅವನ ಬಳಿಗೆ ಹೋಗಬೇಕಾದರೆ ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿಯು ಮುಗಿದುಹೋಯಿತು. ಆ ದೇವರ ಮನುಷ್ಯನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿಲ್ಲವಲ್ಲಾ; ಏನು ಕೊಡಬೇಕು?” ಎನ್ನಲು
וַיֹּ֤סֶף הַנַּ֙עַר֙ לַעֲנ֣וֹת אֶת־שָׁא֔וּל וַיֹּ֕אמֶר הִנֵּה֙ נִמְצָ֣א בְיָדִ֔י רֶ֖בַע שֶׁ֣קֶל כָּ֑סֶף וְנָֽתַתִּי֙ לְאִ֣ישׁ הָאֱלֹהִ֔ים וְהִגִּ֥יד לָ֖נוּ אֶת־דַּרְכֵּֽנוּ ׃ | 8 |
೮ಆಳು, “ಇಗೋ, ನನ್ನ ಕೈಯಲ್ಲಿ ಒಂದು ಪಾವಲಿಯಿದೆ; ಇದನ್ನು ಅವನಿಗೆ ಕೊಡೋಣ; ಅವನು ನಮಗೆ ಮಾರ್ಗ ತೋರಿಸುವನು” ಎಂದು ಉತ್ತರಕೊಟ್ಟನು.
לְפָנִ֣ים ׀ בְּיִשְׂרָאֵ֗ל כֹּֽה־אָמַ֤ר הָאִישׁ֙ בְּלֶכְתּוֹ֙ לִדְר֣וֹשׁ אֱלֹהִ֔ים לְכ֥וּ וְנֵלְכָ֖ה עַד־הָרֹאֶ֑ה כִּ֤י לַנָּבִיא֙ הַיּ֔וֹם יִקָּרֵ֥א לְפָנִ֖ים הָרֹאֶֽה׃ | 9 |
೯(ಪೂರ್ವ ಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ ದೈವೋತ್ತರ ಕೇಳಬೇಕಾದರೆ “ದೇವ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ” ಎನ್ನುವರು. ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು, ಆ ಕಾಲದಲ್ಲಿ ದೇವದರ್ಶಿಗಳೆಂದು ಕರೆಯುತ್ತಿದ್ದರು.)
וַיֹּ֨אמֶר שָׁא֧וּל לְנַעֲר֛וֹ ט֥וֹב דְּבָרְךָ֖ לְכָ֣ה ׀ נֵלֵ֑כָה וַיֵּֽלְכוּ֙ אֶל־הָעִ֔יר אֲשֶׁר־שָׁ֖ם אִ֥ישׁ הָאֱלֹהִֽים׃ | 10 |
೧೦ಆಗ ಸೌಲನು ಆಳಿಗೆ, “ನೀನು ಹೇಳುವುದು ಒಳ್ಳೆಯದು; ಹೋಗೋಣ ನಡಿ” ಅಂದನು.
הֵ֗מָּה עֹלִים֙ בְּמַעֲלֵ֣ה הָעִ֔יר וְהֵ֙מָּה֙ מָצְא֣וּ נְעָר֔וֹת יֹצְא֖וֹת לִשְׁאֹ֣ב מָ֑יִם וַיֹּאמְר֣וּ לָהֶ֔ן הֲיֵ֥שׁ בָּזֶ֖ה הָרֹאֶֽה׃ | 11 |
೧೧ಅವರಿಬ್ಬರೂ ಗುಡ್ಡವನ್ನು ಹತ್ತಿ ದೇವರ ಮನುಷ್ಯನಿದ್ದ ಪಟ್ಟಣವನ್ನು ಸಮೀಪಿಸಲು ನೀರು ಸೇದುವುದಕ್ಕೋಸ್ಕರ ಊರ ಹೊರಗೆ ಬಂದಿದ್ದ ಸ್ತ್ರೀಯರನ್ನು ಕಂಡು, “ದರ್ಶಿಯು ಊರಲ್ಲಿದ್ದಾನೋ” ಎಂದು ಕೇಳಿದರು. ಅವರು, “ಇದ್ದಾನೆ;
וַתַּעֲנֶ֧ינָה אוֹתָ֛ם וַתֹּאמַ֥רְנָה יֵּ֖שׁ הִנֵּ֣ה לְפָנֶ֑יךָ מַהֵ֣ר ׀ עַתָּ֗ה כִּ֤י הַיּוֹם֙ בָּ֣א לָעִ֔יר כִּ֣י זֶ֧בַח הַיּ֛וֹם לָעָ֖ם בַּבָּמָֽה׃ | 12 |
೧೨ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನು ಅರ್ಪಿಸುತ್ತಿರುವುದರಿಂದ ಅವನು ಈಗಲೇ ಇಲ್ಲಿಗೆ ಬಂದಿರುವನು; ಬೇಗನೆ ಹೋಗಿರಿ.
כְּבֹאֲכֶ֣ם הָעִ֣יר כֵּ֣ן תִּמְצְא֣וּן אֹת֡וֹ בְּטֶרֶם֩ יַעֲלֶ֨ה הַבָּמָ֜תָה לֶאֱכֹ֗ל כִּ֠י לֹֽא־יֹאכַ֤ל הָעָם֙ עַד־בֹּא֔וֹ כִּֽי־הוּא֙ יְבָרֵ֣ךְ הַזֶּ֔בַח אַחֲרֵי־כֵ֖ן יֹאכְל֣וּ הַקְּרֻאִ֑ים וְעַתָּ֣ה עֲל֔וּ כִּֽי־אֹת֥וֹ כְהַיּ֖וֹם תִּמְצְא֥וּן אֹתֽוֹ׃ | 13 |
೧೩ಅವನು ಯಜ್ಞಭೋಜನಕ್ಕೋಸ್ಕರ ಗುಡ್ಡಕ್ಕೆ ಹೋಗುವ ಮೊದಲು ನೀವು ಊರೊಳಕ್ಕೆ ಹೋದರೆ ಸಿಕ್ಕುವನು. ಅವನು ಅಲ್ಲಿಗೆ ಹೋಗುವ ವರೆಗೆ ಜನರು ಊಟಮಾಡುವುದಿಲ್ಲ. ಅವನು ಹೋಗಿ ಯಜ್ಞಾಹಾರವನ್ನು ಆಶೀರ್ವದಿಸುತ್ತಾನೆ. ಅನಂತರ ಕರೆಯಲ್ಪಟ್ಟವರು ಊಟಮಾಡುತ್ತಾರೆ. ಈಗಲೇ ಹೋಗಿರಿ. ಅವನು ಸಿಕ್ಕುವ ಸಮಯ ಇದೇ” ಅಂದರು.
וַֽיַּעֲל֖וּ הָעִ֑יר הֵ֗מָּה בָּאִים֙ בְּת֣וֹךְ הָעִ֔יר וְהִנֵּ֤ה שְׁמוּאֵל֙ יֹצֵ֣א לִקְרָאתָ֔ם לַעֲל֖וֹת הַבָּמָֽה׃ ס | 14 |
೧೪ಅವರು ಮೇಲೆ ಹತ್ತಿ ಊರಿಗೆ ಬಂದಾಗ ಸಮುವೇಲನು ಗುಡ್ಡಕ್ಕೆ ಹೋಗುವುದಕ್ಕೋಸ್ಕರ ಹೊರಟು ಅವರೆದುರಿಗೆ ಬಂದನು.
וַֽיהוָ֔ה גָּלָ֖ה אֶת־אֹ֣זֶן שְׁמוּאֵ֑ל י֣וֹם אֶחָ֔ד לִפְנֵ֥י בֽוֹא־שָׁא֖וּל לֵאמֹֽר׃ | 15 |
೧೫ಸೌಲನು ಬರುವುದಕ್ಕೆ ಒಂದು ದಿನ ಮುಂದಾಗಿ ಯೆಹೋವನು ಸಮುವೇಲನಿಗೆ,
כָּעֵ֣ת ׀ מָחָ֡ר אֶשְׁלַח֩ אֵלֶ֨יךָ אִ֜ישׁ מֵאֶ֣רֶץ בִּנְיָמִ֗ן וּמְשַׁחְתּ֤וֹ לְנָגִיד֙ עַל־עַמִּ֣י יִשְׂרָאֵ֔ל וְהוֹשִׁ֥יעַ אֶת־עַמִּ֖י מִיַּ֣ד פְּלִשְׁתִּ֑ים כִּ֤י רָאִ֙יתִי֙ אֶת־עַמִּ֔י כִּ֛י בָּ֥אָה צַעֲקָת֖וֹ אֵלָֽי׃ | 16 |
೧೬“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದ ಒಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಾಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ” ಎಂದು ತಿಳಿಸಿದ್ದನು.
וּשְׁמוּאֵ֖ל רָאָ֣ה אֶת־שָׁא֑וּל וַיהוָ֣ה עָנָ֔הוּ הִנֵּ֤ה הָאִישׁ֙ אֲשֶׁ֣ר אָמַ֣רְתִּי אֵלֶ֔יךָ זֶ֖ה יַעְצֹ֥ר בְּעַמִּֽי׃ | 17 |
೧೭ಸಮುವೇಲನು ಸೌಲನನ್ನು ಕಂಡಾಗ ಯೆಹೋವನು ಅವನಿಗೆ, “ನಾನು ತಿಳಿಸಿದ್ದ ಮನುಷ್ಯನು ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು” ಎಂದು ಸೂಚಿಸಿದನು.
וַיִּגַּ֥שׁ שָׁא֛וּל אֶת־שְׁמוּאֵ֖ל בְּת֣וֹךְ הַשָּׁ֑עַר וַיֹּ֙אמֶר֙ הַגִּֽידָה־נָּ֣א לִ֔י אֵי־זֶ֖ה בֵּ֥ית הָרֹאֶֽה׃ | 18 |
೧೮ಊರಬಾಗಿಲಿಗೆ ಬಂದ ಸೌಲನು ತನ್ನ ಎದುರಿನಲ್ಲಿ ಸಮುವೇಲನನ್ನು ನೋಡಿ, “ದರ್ಶಿಯ ಮನೆ ಎಲ್ಲಿದೆ ಎಂಬುದನ್ನು ದಯವಿಟ್ಟು ತಿಳಿಸುವಿಯೋ?” ಎನ್ನಲು ಸಮುವೇಲನು, “ನಾನೇ ಆ ದರ್ಶಿ.
וַיַּ֨עַן שְׁמוּאֵ֜ל אֶת־שָׁא֗וּל וַיֹּ֙אמֶר֙ אָנֹכִ֣י הָרֹאֶ֔ה עֲלֵ֤ה לְפָנַי֙ הַבָּמָ֔ה וַאֲכַלְתֶּ֥ם עִמִּ֖י הַיּ֑וֹם וְשִׁלַּחְתִּ֣יךָ בַבֹּ֔קֶר וְכֹ֛ל אֲשֶׁ֥ר בִּֽלְבָבְךָ֖ אַגִּ֥יד לָֽךְ׃ | 19 |
೧೯ನೀನು ನನ್ನ ಜೊತೆಯಲ್ಲಿ ಗುಡ್ಡಕ್ಕೆ ಬಾ; ನೀವು ಈ ಹೊತ್ತು ನನ್ನ ಸಂಗಡ ಊಟಮಾಡಬೇಕು. ನಿನ್ನ ಚಿಂತೆಯನ್ನೆಲ್ಲಾ ಪರಿಹರಿಸಿ ನಾಳೆ ಬೆಳಿಗ್ಗೆ ನಿನ್ನನ್ನು ಕಳುಹಿಸಿಕೊಡುವೆನು.
וְלָאֲתֹנ֞וֹת הָאֹבְד֣וֹת לְךָ֗ הַיּוֹם֙ שְׁלֹ֣שֶׁת הַיָּמִ֔ים אַל־תָּ֧שֶׂם אֶֽת־לִבְּךָ֛ לָהֶ֖ם כִּ֣י נִמְצָ֑אוּ וּלְמִי֙ כָּל־חֶמְדַּ֣ת יִשְׂרָאֵ֔ל הֲל֣וֹא לְךָ֔ וּלְכֹ֖ל בֵּ֥ית אָבִֽיךָ׃ ס | 20 |
೨೦ಮೂರು ದಿನಗಳ ಹಿಂದೆ ತಪ್ಪಿಸಿಕೊಂಡ ನಿನ್ನ ಕತ್ತೆಗಳಿಗೋಸ್ಕರ ಚಿಂತೆಮಾಡಬೇಡ; ಅವು ಸಿಕ್ಕಿವೆ. ಇಸ್ರಾಯೇಲರ ಅಭಿಲಾಷೆಯೆಲ್ಲಾ ಯಾರ ಮೇಲೆ ಇರುವುದು, ನಿನ್ನ ಮತ್ತು ನಿನ್ನ ತಂದೆಯ ಕುಟುಂಬದವರಿಗೂ ಸಲ್ಲುವುದು” ಎಂದು ಹೇಳಿದನು.
וַיַּ֨עַן שָׁא֜וּל וַיֹּ֗אמֶר הֲל֨וֹא בֶן־יְמִינִ֤י אָ֙נֹכִי֙ מִקַּטַנֵּי֙ שִׁבְטֵ֣י יִשְׂרָאֵ֔ל וּמִשְׁפַּחְתִּי֙ הַצְּעִרָ֔ה מִכָּֽל־מִשְׁפְּח֖וֹת שִׁבְטֵ֣י בִנְיָמִ֑ן וְלָ֙מָּה֙ דִּבַּ֣רְתָּ אֵלַ֔י כַּדָּבָ֖ר הַזֶּֽה׃ ס | 21 |
೨೧ಅದಕ್ಕೆ ಸೌಲನು, “ನಾನು ಇಸ್ರಾಯೇಲ್ ಕುಲಗಳಲ್ಲಿ ಅಲ್ಪವಾಗಿರುವ ಬೆನ್ಯಾಮೀನ್ ಕುಲದವನಲ್ಲವೋ? ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಯಾಕೆ ಹೇಳುತ್ತೀ?” ಎಂದನು.
וַיִּקַּ֤ח שְׁמוּאֵל֙ אֶת־שָׁא֣וּל וְאֶֽת־נַעֲר֔וֹ וַיְבִיאֵ֖ם לִשְׁכָּ֑תָה וַיִּתֵּ֨ן לָהֶ֤ם מָקוֹם֙ בְּרֹ֣אשׁ הַקְּרוּאִ֔ים וְהֵ֖מָּה כִּשְׁלֹשִׁ֥ים אִֽישׁ׃ | 22 |
೨೨ಸಮುವೇಲನು ಸೌಲನನ್ನೂ ಅವನ ಸೇವಕನನ್ನೂ ಮಂಟಪಕ್ಕೆ ಕರೆದುಕೊಂಡು ಹೋದನು; ಭೋಜನಕ್ಕೆ ಬಂದಿದ್ದ ಸುಮಾರು ಮೂವತ್ತು ಜನರಲ್ಲಿ ಅವರಿಬ್ಬರಿಗೂ ಮುಖ್ಯಸ್ಥಾನವನ್ನು ಕೊಟ್ಟನು. ಅನಂತರ ಸಮುವೇಲನು ಅಡಿಗೆಯವನಿಗೆ,
וַיֹּ֤אמֶר שְׁמוּאֵל֙ לַטַּבָּ֔ח תְּנָה֙ אֶת־הַמָּנָ֔ה אֲשֶׁ֥ר נָתַ֖תִּי לָ֑ךְ אֲשֶׁר֙ אָמַ֣רְתִּי אֵלֶ֔יךָ שִׂ֥ים אֹתָ֖הּ עִמָּֽךְ׃ | 23 |
೨೩“ನಾನು ನಿನಗೆ ಹೇಳಿ ಪ್ರತ್ಯೇಕವಾಗಿ ಇಡಿಸಿದ್ದ ಮಾಂಸಭಾಗವನ್ನು ತಂದಿಡು” ಅಂದನು.
וַיָּ֣רֶם הַ֠טַּבָּח אֶת־הַשּׁ֨וֹק וְהֶעָלֶ֜יהָ וַיָּ֣שֶׂם ׀ לִפְנֵ֣י שָׁא֗וּל וַיֹּ֙אמֶר֙ הִנֵּ֤ה הַנִּשְׁאָר֙ שִׂים־לְפָנֶ֣יךָ אֱכֹ֔ל כִּ֧י לַמּוֹעֵ֛ד שָֽׁמוּר־לְךָ֥ לֵאמֹ֖ר הָעָ֣ם ׀ קָרָ֑אתִי וַיֹּ֧אכַל שָׁא֛וּל עִם־שְׁמוּאֵ֖ל בַּיּ֥וֹם הַהֽוּא׃ | 24 |
೨೪ಅವನು ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟನು. ಆಗ ಸಮುವೇಲನು, “ಇಗೋ, ಇದು ನಿನಗೋಸ್ಕರ ಪ್ರತ್ಯೇಕಿಸಿದ್ದು; ಇದನ್ನು ತಿನ್ನು, ಯಾಕೆಂದರೆ ಜನರನ್ನು ಭೋಜನಕ್ಕೆ ಕರೆದಾಗಿನಿಂದ ಇದು ನಿನಗೋಸ್ಕರವಾಗಿಯೇ ಇಡಲ್ಪಟ್ಟಿತ್ತು” ಎಂದು ಸೌಲನಿಗೆ ಹೇಳಿದನು. ಸೌಲನು ಆ ದಿನ ಸಮುವೇಲನ ಸಂಗಡ ಊಟಮಾಡಿದನು.
וַיֵּרְד֥וּ מֵהַבָּמָ֖ה הָעִ֑יר וַיְדַבֵּ֥ר עִם־שָׁא֖וּל עַל־הַגָּֽג׃ | 25 |
೨೫ಅವರು ಗುಡ್ಡದಿಂದಿಳಿದು ಪಟ್ಟಣಕ್ಕೆ ಬಂದನಂತರ ಸಮುವೇಲನು ಸೌಲನನ್ನು ತನ್ನ ಮನೆಯ ಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಅವನೊಡನೆ ಮಾತನಾಡಿದನು.
וַיַּשְׁכִּ֗מוּ וַיְהִ֞י כַּעֲל֤וֹת הַשַּׁ֙חַר֙ וַיִּקְרָ֨א שְׁמוּאֵ֤ל אֶל־שָׁאוּל֙ הגג לֵאמֹ֔ר ק֖וּמָה וַאֲשַׁלְּחֶ֑ךָּ וַיָּ֣קָם שָׁא֗וּל וַיֵּצְא֧וּ שְׁנֵיהֶ֛ם ה֥וּא וּשְׁמוּאֵ֖ל הַחֽוּצָה׃ | 26 |
೨೬ಮರುದಿನ ಬೆಳಿಗ್ಗೆ ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು, “ಏಳು, ನಿನ್ನನ್ನು ಕಳುಹಿಸಿ ಕೊಡುತ್ತೇನೆ” ಎಂದು ಎಬ್ಬಿಸಲು ಅವನು ಎದ್ದನು. ತರುವಾಯ ಅವರಿಬ್ಬರೂ ಹೊರಟು ಊರ ಹೊರಗೆ ಬಂದಾಗ
הֵ֗מָּה יֽוֹרְדִים֙ בִּקְצֵ֣ה הָעִ֔יר וּשְׁמוּאֵ֞ל אָמַ֣ר אֶל־שָׁא֗וּל אֱמֹ֥ר לַנַּ֛עַר וְיַעֲבֹ֥ר לְפָנֵ֖ינוּ וַֽיַּעֲבֹ֑ר וְאַתָּה֙ עֲמֹ֣ד כַּיּ֔וֹם וְאַשְׁמִיעֲךָ֖ אֶת־דְּבַ֥ר אֱלֹהִֽים׃ פ | 27 |
೨೭ಸಮುವೇಲನು ಸೌಲನಿಗೆ, “ನಿನ್ನ ಸೇವಕನನ್ನು ಮುಂದೆ ಕಳುಹಿಸಿ ನೀನು ಇಲ್ಲಿ ಸ್ವಲ್ಪ ನಿಲ್ಲು; ನಿನಗೆ ತಿಳಿಸಬೇಕಾದ ದೈವೋಕ್ತಿ ಒಂದುಂಟು” ಎಂದನು.