< 2 דִּבְרֵי הַיָּמִים 8 >

וַיְהִ֞י מִקֵּ֣ץ ׀ עֶשְׂרִ֣ים שָׁנָ֗ה אֲשֶׁ֨ר בָּנָ֧ה שְׁלֹמֹ֛ה אֶת־בֵּ֥ית יְהוָ֖ה וְאֶת־בֵּיתֽוֹ׃ 1
ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವನ ಆಲಯವನ್ನೂ ಮತ್ತು ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು.
וְהֶעָרִ֗ים אֲשֶׁ֨ר נָתַ֤ן חוּרָם֙ לִשְׁלֹמֹ֔ה בָּנָ֥ה שְׁלֹמֹ֖ה אֹתָ֑ם וַיּ֥וֹשֶׁב שָׁ֖ם אֶת־בְּנֵ֥י יִשְׂרָאֵֽל׃ 2
ಸೊಲೊಮೋನನು ಹೂರಾಮನಿಂದ ತನಗೆ ದೊರಕಿದ ಪಟ್ಟಣವನ್ನು ಪುನಃ ಕಟ್ಟಿಸಿ ಅವುಗಳಲ್ಲಿ ಇಸ್ರಾಯೇಲರು ವಾಸಿಸುವಂತೆ ಮಾಡಿದನು.
וַיֵּ֤לֶךְ שְׁלֹמֹה֙ חֲמָ֣ת צוֹבָ֔ה וַיֶּחֱזַ֖ק עָלֶֽיהָ׃ 3
ಅನಂತರ ಸೊಲೊಮೋನನು ಚೋಬ ರಾಜ್ಯದ ಹಮಾತಿಗೆ ಬಂದು ಅದನ್ನು ಸ್ವಾಧೀನಮಾಡಿಕೊಂಡನು.
וַיִּ֥בֶן אֶת־תַּדְמֹ֖ר בַּמִּדְבָּ֑ר וְאֵת֙ כָּל־עָרֵ֣י הַֽמִּסְכְּנ֔וֹת אֲשֶׁ֥ר בָּנָ֖ה בַּחֲמָֽת׃ 4
ಮರುಭೂಮಿಯಲ್ಲಿರುವ ತದ್ಮೋರ್ ಪಟ್ಟಣವನ್ನೂ ಹಮಾತಿನಲ್ಲಿ ತಾನು ಕಟ್ಟಿಸಿದ್ದ ಎಲ್ಲಾ ಉಗ್ರಾಣದ ಪಟ್ಟಣಗಳನ್ನೂ ಭದ್ರಪಡಿಸಿದನು.
וַיִּ֜בֶן אֶת־בֵּ֤ית חוֹרוֹן֙ הָֽעֶלְי֔וֹן וְאֶת־בֵּ֥ית חוֹר֖וֹן הַתַּחְתּ֑וֹן עָרֵ֣י מָצ֔וֹר חוֹמ֖וֹת דְּלָתַ֥יִם וּבְרִֽיחַ׃ 5
ಇದಲ್ಲದೆ ಮೇಲಿನ ಮತ್ತು ಕೆಳಗಿನ ಬೇತ್ಹೋರೋನ್ ಎಂಬ ಪಟ್ಟಣಗಳಿಗೆ ಪೌಳಿಗೋಡೆ, ಬಾಗಿಲು, ಅಗುಳಿ ಇವುಗಳನ್ನು ಸಿದ್ಧಪಡಿಸಿ ಕೋಟೆಗಳನ್ನಾಗಿ ಮಾಡಿಕೊಂಡನು.
וְאֶֽת־בַּעֲלָ֗ת וְאֵ֨ת כָּל־עָרֵ֤י הַֽמִּסְכְּנוֹת֙ אֲשֶׁ֣ר הָי֣וּ לִשְׁלֹמֹ֔ה וְאֵת֙ כָּל־עָרֵ֣י הָרֶ֔כֶב וְאֵ֖ת עָרֵ֣י הַפָּרָשִׁ֑ים וְאֵ֣ת ׀ כָּל־חֵ֣שֶׁק שְׁלֹמֹ֗ה אֲשֶׁ֤ר חָשַׁק֙ לִבְנ֤וֹת בִּירֽוּשָׁלִַ֙ם֙ וּבַלְּבָנ֔וֹן וּבְכֹ֖ל אֶ֥רֶץ מֶמְשַׁלְתּֽוֹ׃ 6
ಬಾಲಾತೊರು ಮತ್ತು ಎಲ್ಲಾ ಉಗ್ರಾಣದ ಪಟ್ಟಣ, ಯುದ್ಧರಥಗಳನ್ನಿರಿಸುವ ಪಟ್ಟಣಗಳನ್ನೂ, ರಾಹುತರ ಪಟ್ಟಣಗಳನ್ನೂ ಸೊಲೊಮೋನನು ಕಟ್ಟಿಸಿದನು. ಅಲ್ಲದೆ ಯೆರೂಸಲೇಮಿನಲ್ಲಿಯೂ, ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು.
כָּל־הָ֠עָם הַנּוֹתָ֨ר מִן־הַחִתִּ֜י וְהָאֱמֹרִ֤י וְהַפְּרִזִּי֙ וְהַחִוִּ֣י וְהַיְבוּסִ֔י אֲשֶׁ֛ר לֹ֥א מִיִּשְׂרָאֵ֖ל הֵֽמָּה׃ 7
ಇದಲ್ಲದೆ ಇಸ್ರಾಯೇಲರಿಂದ ಸಂಹೃತರಾಗದೆ, ಕಾನಾನ್ ದೇಶದಲ್ಲಿ ಉಳಿದಿದ್ದ ಹಿತ್ತಿಯ, ಅಮೋರಿಯ, ಪೆರಿಜೀಯ, ಹಿವ್ವಿಯ, ಯೆಬೂಸಿಯ,
מִן־בְּנֵיהֶ֗ם אֲשֶׁ֨ר נוֹתְר֤וּ אַחֲרֵיהֶם֙ בָּאָ֔רֶץ אֲשֶׁ֥ר לֹֽא־כִלּ֖וּם בְּנֵ֣י יִשְׂרָאֵ֑ל וַיַּעֲלֵ֤ם שְׁלֹמֹה֙ לְמַ֔ס עַ֖ד הַיּ֥וֹם הַזֶּֽה׃ 8
ಮೊದಲಾದ ಅನ್ಯ ಜನಾಂಗಗಳನ್ನು, ಇಸ್ರಾಯೇಲ್ಯರು ನಾಶಮಾಡದೆ ಉಳಿಸಿದ ಸಂತಾನದವರೆಲ್ಲರನ್ನೂ ಸೊಲೊಮೋನನು ಬಿಟ್ಟಿ ಕೆಲಸಕ್ಕಾಗಿ ನೇಮಿಸಿದನು. ಅವರು ಇಂದಿನವರೆಗೂ ಬಿಟ್ಟಿ ಕೆಲಸ ಮಾಡುವವರಾಗಿದ್ದಾರೆ.
וּמִן־בְּנֵי֙ יִשְׂרָאֵ֔ל אֲ֠שֶׁר לֹא־נָתַ֧ן שְׁלֹמֹ֛ה לַעֲבָדִ֖ים לִמְלַאכְתּ֑וֹ כִּי־הֵ֜מָּה אַנְשֵׁ֤י מִלְחָמָה֙ וְשָׂרֵ֣י שָׁלִישָׁ֔יו וְשָׂרֵ֥י רִכְבּ֖וֹ וּפָרָשָֽׁיו׃ פ 9
ಆದರೆ ಸೊಲೊಮೋನನು ಬಿಟ್ಟಿ ಕೆಲಸಕ್ಕಾಗಿ ಇಸ್ರಾಯೇಲರನ್ನು ನೇಮಕ ಮಾಡಿಕೊಳ್ಳಲಿಲ್ಲ. ಅವರನ್ನು ಸೈನಿಕರನ್ನಾಗಿಯೂ, ಅಧಿಪತಿಗಳನ್ನಾಗಿಯೂ, ಸರದಾರರನ್ನಾಗಿಯೂ, ರಥಾಶ್ವಬಲಗಳ ನಾಯಕರನ್ನಾಗಿಯೂ ನೇಮಿಸಿಕೊಂಡನು.
וְאֵ֨לֶּה שָׂרֵ֤י הנציבים אֲשֶׁר־לַמֶּ֥לֶךְ שְׁלֹמֹ֖ה חֲמִשִּׁ֣ים וּמָאתָ֑יִם הָרֹדִ֖ים בָּעָֽם׃ 10
೧೦ಈ ಇನ್ನೂರೈವತ್ತು ಮಂದಿ ಅರಸನಾದ ಸೊಲೊಮೋನನ ಮುಖ್ಯಾಧಿಕಾರಿಗಳೂ, ಪ್ರಜೆಗಳ ಮೇಲ್ವಿಚಾರಕರೂ ಆಗಿದ್ದರು.
וְאֶת־בַּת־פַּרְעֹ֗ה הֶעֱלָ֤ה שְׁלֹמֹה֙ מֵעִ֣יר דָּוִ֔יד לַבַּ֖יִת אֲשֶׁ֣ר בָּֽנָה־לָ֑הּ כִּ֣י אָמַ֗ר לֹא־תֵשֵׁ֨ב אִשָּׁ֥ה לִי֙ בְּבֵית֙ דָּוִ֣יד מֶֽלֶךְ־יִשְׂרָאֵ֔ל כִּי־קֹ֣דֶשׁ הֵ֔מָּה אֲשֶׁר־בָּֽאָ֥ה אֲלֵיהֶ֖ם אֲר֥וֹן יְהוָֽה׃ פ 11
೧೧ಸೊಲೊಮೋನನು, “ಯಾವ ಯಾವ ಸ್ಥಳಗಳಲ್ಲಿ ಯೆಹೋವನ ಮಂಜೂಷವಿತ್ತೋ ಅವೆಲ್ಲವೂ ಪವಿತ್ರಸ್ಥಾನಗಳು. ಆದುದರಿಂದ ಇಸ್ರಾಯೇಲರ ಅರಸನಾದ ದಾವೀದನ ಮನೆಯಲ್ಲಿ ಫರೋಹನ ಪುತ್ರಿಯಾದ ನನ್ನ ಹೆಂಡತಿಯು ವಾಸಿಸಬಾರದು” ಅಂದುಕೊಂಡು ಆಕೆಯನ್ನು ದಾವೀದನಗರದಲ್ಲಿರಿಸದೆ, ತಾನು ಆಕೆಗಾಗಿ ಕಟ್ಟಿಸಿದ ಮಂದಿರಕ್ಕೆ ಕರೆದುಕೊಂಡು ಬಂದನು.
אָ֣ז הֶעֱלָ֧ה שְׁלֹמֹ֛ה עֹל֖וֹת לַיהוָ֑ה עַ֚ל מִזְבַּ֣ח יְהוָ֔ה אֲשֶׁ֥ר בָּנָ֖ה לִפְנֵ֥י הָאוּלָֽם׃ 12
೧೨ಆ ಕಾಲದಿಂದ ಸೊಲೊಮೋನನು, ತಾನು ಮಂಟಪದ ಮುಂದೆ ಕಟ್ಟಿಸಿದ ಯೆಹೋವನ ಯಜ್ಞವೇದಿಯ ಮೇಲೆ,
וּבִדְבַר־י֣וֹם בְּי֗וֹם לְהַעֲלוֹת֙ כְּמִצְוַ֣ת מֹשֶׁ֔ה לַשַּׁבָּתוֹת֙ וְלֶ֣חֳדָשִׁ֔ים וְלַמּ֣וֹעֲד֔וֹת שָׁל֥וֹשׁ פְּעָמִ֖ים בַּשָּׁנָ֑ה בְּחַ֧ג הַמַּצּ֛וֹת וּבְחַ֥ג הַשָּׁבֻע֖וֹת וּבְחַ֥ג הַסֻּכּֽוֹת׃ 13
೧೩ಮೋಶೆಯ ಆಜ್ಞೆಯಂತೆ ಸಬ್ಬತ್ ದಿನ, ಅಮಾವಾಸ್ಯೆ, ವಾರೋತ್ಸವ ಜಾತ್ರೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬ, ಪಂಚಾಶತ್ತಮ ದಿನದ ಹಬ್ಬ, ಪರ್ಣಶಾಲೆ ಹಬ್ಬ ಎಂಬ ಮೂರು ವಾರ್ಷಿಕ ಹಬ್ಬಗಳಲ್ಲಿಯೂ ಆಯಾ ದಿನಗಳಿಗೆ ನೇಮಕವಾದ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.
וַיַּעֲמֵ֣ד כְּמִשְׁפַּ֣ט דָּֽוִיד־אָ֠בִיו אֶת־מַחְלְק֨וֹת הַכֹּהֲנִ֜ים עַל־עֲבֹדָתָ֗ם וְהַלְוִיִּ֣ם עַל־מִ֠שְׁמְרוֹתָם לְהַלֵּ֨ל וּלְשָׁרֵ֜ת נֶ֤גֶד הַכֹּֽהֲנִים֙ לִדְבַר־י֣וֹם בְּיוֹמ֔וֹ וְהַשּׁוֹעֲרִ֥ים בְּמַחְלְקוֹתָ֖ם לְשַׁ֣עַר וָשָׁ֑עַר כִּ֣י כֵ֔ן מִצְוַ֖ת דָּוִ֥יד אִישׁ־הָאֱלֹהִֽים׃ 14
೧೪ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.
וְלֹ֣א סָרוּ֩ מִצְוַ֨ת הַמֶּ֜לֶךְ עַל־הַכֹּהֲנִ֧ים וְהַלְוִיִּ֛ם לְכָל־דָּבָ֖ר וְלָאֹצָרֽוֹת׃ 15
೧೫ರಾಜನು ಯಾಜಕರನ್ನೂ, ಲೇವಿಯರನ್ನೂ, ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಸ್ವಲ್ಪವಾದರೂ ಮೀರಲಿಲ್ಲ.
וַתִּכֹּן֙ כָּל־מְלֶ֣אכֶת שְׁלֹמֹ֔ה עַד־הַיּ֛וֹם מוּסַ֥ד בֵּית־יְהוָ֖ה וְעַד־כְּלֹת֑וֹ שָׁלֵ֖ם בֵּ֥ית יְהוָֽה׃ ס 16
೧೬ಈ ಪ್ರಕಾರ ಆಸ್ತಿವಾರ ಮೊದಲುಗೊಂಡು ಸಮಾಪ್ತಿಯವರೆಗೂ ಸೊಲೊಮೋನನ ಎಲ್ಲಾ ಕೆಲಸ ಕಾರ್ಯಗಳೂ ಮುಗಿದು ಯೆಹೋವನ ಆಲಯವು ಪೂರ್ಣಗೊಂಡಿತ್ತು.
אָז֩ הָלַ֨ךְ שְׁלֹמֹ֜ה לְעֶצְיֽוֹן־גֶּ֧בֶר וְאֶל־אֵיל֛וֹת עַל־שְׂפַ֥ת הַיָּ֖ם בְּאֶ֥רֶץ אֱדֽוֹם׃ 17
೧೭ಆನಂತರ, ಸೊಲೊಮೋನನು ಎದೋಮ್ ದೇಶದ ಸಮುದ್ರ ತೀರದಲ್ಲಿರುವ ಎಚ್ಯೋನ್ಗೆಬೆರ್ ಹಾಗೂ ಏಲೋತ್ ಎಂಬ ಊರುಗಳಿಗೆ ಹೋದನು.
וַיִּֽשְׁלַֽח־לוֹ֩ חוּרָ֨ם בְּיַד־עֲבָדָ֜יו אוניות וַעֲבָדִים֮ י֣וֹדְעֵי יָם֒ וַיָּבֹ֜אוּ עִם־עַבְדֵ֤י שְׁלֹמֹה֙ אוֹפִ֔ירָה וַיִּקְח֣וּ מִשָּׁ֔ם אַרְבַּע־מֵא֥וֹת וַחֲמִשִּׁ֖ים כִּכַּ֣ר זָהָ֑ב וַיָּבִ֖יאוּ אֶל־הַמֶּ֥לֶךְ שְׁלֹמֹֽה׃ פ 18
೧೮ಹೂರಾಮನು ಅವನಿಗೆ ತನ್ನ ಆಳುಗಳ ಮುಖಾಂತರ ಹಡುಗುಗಳನ್ನು ಕಳುಹಿಸಿದ್ದಲ್ಲದೆ, ಸಮುದ್ರ ಪ್ರಯಾಣದಲ್ಲಿ ನಿಪುಣರಾದ ನಾವಿಕರನ್ನು ಕಳುಹಿಸಿದನು. ಅವರು ಸೊಲೊಮೋನನ ಸೇವಕರೊಡನೆ ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ಬಂಗಾರವನ್ನು ತಂದುಕೊಟ್ಟರು.

< 2 דִּבְרֵי הַיָּמִים 8 >