< 2 שְׁמוּאֵל 12 >

וַיִּשְׁלַ֧ח יְהוָ֛ה אֶת־נָתָ֖ן אֶל־דָּוִ֑ד וַיָּבֹ֣א אֵלָ֗יו וַיֹּ֤אמֶר לוֹ֙ שְׁנֵ֣י אֲנָשִׁ֗ים הָיוּ֙ בְּעִ֣יר אֶחָ֔ת אֶחָ֥ד עָשִׁ֖יר וְאֶחָ֥ד רָֽאשׁ׃ 1
ಯೆಹೋವ ದೇವರು ದಾವೀದನ ಬಳಿಗೆ ನಾತಾನನನ್ನು ಕಳುಹಿಸಿದರು. ಅವನು ದಾವೀದನ ಬಳಿಗೆ ಬಂದು ಅವನಿಗೆ, “ಒಂದು ಊರಿನಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು.
לְעָשִׁ֗יר הָיָ֛ה צֹ֥אן וּבָקָ֖ר הַרְבֵּ֥ה מְאֹֽד׃ 2
ಐಶ್ವರ್ಯವಂತನಿಗೆ ಕುರಿದನಗಳು ಬಹಳವಾಗಿದ್ದವು.
וְלָרָ֣שׁ אֵֽין־כֹּ֗ל כִּי֩ אִם־כִּבְשָׂ֨ה אַחַ֤ת קְטַנָּה֙ אֲשֶׁ֣ר קָנָ֔ה וַיְחַיֶּ֕הָ וַתִּגְדַּ֥ל עִמּ֛וֹ וְעִם־בָּנָ֖יו יַחְדָּ֑ו מִפִּתּ֨וֹ תֹאכַ֜ל וּמִכֹּס֤וֹ תִשְׁתֶּה֙ וּבְחֵיק֣וֹ תִשְׁכָּ֔ב וַתְּהִי־ל֖וֹ כְּבַֽת׃ 3
ಬಡವನಿಗೆ ತಾನು ಕೊಂಡುಕೊಂಡ ಒಂದು ಚಿಕ್ಕ ಹೆಣ್ಣು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅದು ಅವನ ಸಂಗಡ, ಅವನ ಮಕ್ಕಳ ಸಂಗಡ ಬೆಳೆದು, ಅವನ ಸ್ವಂತ ಆಹಾರ ತಿಂದು, ಅವನ ಪಾತ್ರೆಯಲ್ಲಿ ಕುಡಿದು, ಅವನ ಮಗ್ಗುಲಲ್ಲಿ ಮಲಗಿಕೊಂಡು, ಅವನಿಗೆ ಮಗಳ ಹಾಗಿತ್ತು.
וַיָּ֣בֹא הֵלֶךְ֮ לְאִ֣ישׁ הֶֽעָשִׁיר֒ וַיַּחְמֹ֗ל לָקַ֤חַת מִצֹּאנוֹ֙ וּמִבְּקָר֔וֹ לַעֲשׂ֕וֹת לָאֹרֵ֖חַ הַבָּא־ל֑וֹ וַיִּקַּ֗ח אֶת־כִּבְשַׂת֙ הָאִ֣ישׁ הָרָ֔אשׁ וַֽיַּעֲשֶׂ֔הָ לָאִ֖ישׁ הַבָּ֥א אֵלָֽיו׃ 4
“ಐಶ್ವರ್ಯವಂತನ ಬಳಿಗೆ ಒಬ್ಬ ಪ್ರಯಾಣಿಕನು ಬಂದಾಗ, ಐಶ್ವರ್ಯವಂತನು ಅತಿಥಿಗಾಗಿ ಅಡಿಗೆಯನ್ನು ಮಾಡಿಸುವುದಕ್ಕೆ ತನ್ನ ಕುರಿದನಗಳಲ್ಲಿ ಒಂದನ್ನೂ ತೆಗೆದುಕೊಳ್ಳಲು ಮನಸ್ಸಿಲ್ಲದೆ, ಆ ಬಡವನ ಕುರಿಯನ್ನು ತೆಗೆದುಕೊಂಡು, ತನ್ನ ಬಳಿಗೆ ಬಂದ ಮನುಷ್ಯನಿಗೋಸ್ಕರ ಅದನ್ನು ಅಡಿಗೆ ಮಾಡಿಸಿದನು,” ಎಂದನು.
וַיִּֽחַר־אַ֥ף דָּוִ֛ד בָּאִ֖ישׁ מְאֹ֑ד וַיֹּ֙אמֶר֙ אֶל־נָתָ֔ן חַי־יְהוָ֕ה כִּ֣י בֶן־מָ֔וֶת הָאִ֖ישׁ הָעֹשֶׂ֥ה זֹֽאת׃ 5
ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ, “ಯೆಹೋವ ದೇವರ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು.
וְאֶת־הַכִּבְשָׂ֖ה יְשַׁלֵּ֣ם אַרְבַּעְתָּ֑יִם עֵ֗קֶב אֲשֶׁ֤ר עָשָׂה֙ אֶת־הַדָּבָ֣ר הַזֶּ֔ה וְעַ֖ל אֲשֶׁ֥ר לֹֽא־חָמָֽל׃ 6
ಅವನು ಕನಿಕರಪಡದೆ ಈ ಕಾರ್ಯವನ್ನು ಮಾಡಿದ್ದರಿಂದ, ಆ ಕುರಿಗೋಸ್ಕರವಾಗಿ ನಾಲ್ಕರಷ್ಟು ತಿರುಗಿ ಕೊಡಬೇಕು,” ಎಂದನು.
וַיֹּ֧אמֶר נָתָ֛ן אֶל־דָּוִ֖ד אַתָּ֣ה הָאִ֑ישׁ כֹּה־אָמַ֨ר יְהוָ֜ה אֱלֹהֵ֣י יִשְׂרָאֵ֗ל אָנֹכִ֞י מְשַׁחְתִּ֤יךָֽ לְמֶ֙לֶךְ֙ עַל־יִשְׂרָאֵ֔ל וְאָנֹכִ֥י הִצַּלְתִּ֖יךָ מִיַּ֥ד שָׁאֽוּל׃ 7
ಆಗ ನಾತಾನನು ದಾವೀದನಿಗೆ, “ನೀನೇ ಆ ಮನುಷ್ಯನು! ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ, ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು;
וָאֶתְּנָ֨ה לְךָ֜ אֶת־בֵּ֣ית אֲדֹנֶ֗יךָ וְאֶת־נְשֵׁ֤י אֲדֹנֶ֙יךָ֙ בְּחֵיקֶ֔ךָ וָאֶתְּנָ֣ה לְךָ֔ אֶת־בֵּ֥ית יִשְׂרָאֵ֖ל וִֽיהוּדָ֑ה וְאִ֨ם־מְעָ֔ט וְאֹסִ֥פָה לְּךָ֖ כָּהֵ֥נָּה וְכָהֵֽנָּה׃ 8
ನಿನ್ನ ಯಜಮಾನನ ಮನೆಯನ್ನೂ, ನಿನ್ನ ಯಜಮಾನನ ಹೆಂಡತಿಯರನ್ನೂ ನಿನಗೆ ಕೊಟ್ಟು; ಇಸ್ರಾಯೇಲಿನ ಮನೆಯನ್ನೂ, ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು. ಇದು ಸಾಲದೆ ಇದ್ದರೆ, ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು.
מַדּ֜וּעַ בָּזִ֣יתָ ׀ אֶת־דְּבַ֣ר יְהוָ֗ה לַעֲשׂ֣וֹת הָרַע֮ בעינו אֵ֣ת אוּרִיָּ֤ה הַֽחִתִּי֙ הִכִּ֣יתָ בַחֶ֔רֶב וְאֶ֨ת־אִשְׁתּ֔וֹ לָקַ֥חְתָּ לְּךָ֖ לְאִשָּׁ֑ה וְאֹת֣וֹ הָרַ֔גְתָּ בְּחֶ֖רֶב בְּנֵ֥י עַמּֽוֹן׃ 9
ನೀನು ಯೆಹೋವ ದೇವರ ದೃಷ್ಟಿಗೆ ಈ ಕೆಟ್ಟ ಕಾರ್ಯವನ್ನು ಮಾಡುವಂತೆ ಅವರ ವಾಕ್ಯವನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಖಡ್ಗದಿಂದ ಹೊಡೆದು ಹಾಕಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯಾಗಿ ತೆಗೆದುಕೊಂಡೆ. ಇದಲ್ಲದೆ ಅವನನ್ನು ಅಮ್ಮೋನಿಯರ ಖಡ್ಗದಿಂದ ಕೊಂದು ಹಾಕಿಸಿದೆ.
וְעַתָּ֗ה לֹא־תָס֥וּר חֶ֛רֶב מִבֵּיתְךָ֖ עַד־עוֹלָ֑ם עֵ֚קֶב כִּ֣י בְזִתָ֔נִי וַתִּקַּ֗ח אֶת־אֵ֙שֶׁת֙ אוּרִיָּ֣ה הַחִתִּ֔י לִהְי֥וֹת לְךָ֖ לְאִשָּֽׁה׃ ס 10
ಈಗ ನೀನು ನನ್ನನ್ನು ತಿರಸ್ಕರಿಸಿ, ಹಿತ್ತಿಯನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡದ್ದರಿಂದ, ಖಡ್ಗವು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ತೊಲಗದು.
כֹּ֣ה ׀ אָמַ֣ר יְהוָ֗ה הִנְנִי֩ מֵקִ֨ים עָלֶ֤יךָ רָעָה֙ מִבֵּיתֶ֔ךָ וְלָקַחְתִּ֤י אֶת־נָשֶׁ֙יךָ֙ לְעֵינֶ֔יךָ וְנָתַתִּ֖י לְרֵעֶ֑יךָ וְשָׁכַב֙ עִם־נָשֶׁ֔יךָ לְעֵינֵ֖י הַשֶּׁ֥מֶשׁ הַזֹּֽאת׃ 11
“ಯೆಹೋವ ದೇವರು ಹೇಳುವುದೇನೆಂದರೆ: ‘ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ, ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು, ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲು ಹೊತ್ತಿನಲ್ಲಿಯೇ ಅವರ ಸಂಗಡ ಮಲಗುವನು.
כִּ֥י אַתָּ֖ה עָשִׂ֣יתָ בַסָּ֑תֶר וַאֲנִ֗י אֶעֱשֶׂה֙ אֶת־הַדָּבָ֣ר הַזֶּ֔ה נֶ֥גֶד כָּל־יִשְׂרָאֵ֖ל וְנֶ֥גֶד הַשָּֽׁמֶשׁ׃ ס 12
ಏಕೆಂದರೆ ನೀನು ಮರೆಯಲ್ಲಿ ಅದನ್ನು ಮಾಡಿದೆ. ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲರೆಲ್ಲರ ಮುಂದೆಯೂ, ಹಗಲು ಹೊತ್ತಿನಲ್ಲಿಯೂ ಮಾಡುವೆನು,’” ಎಂದನು.
וַיֹּ֤אמֶר דָּוִד֙ אֶל־נָתָ֔ן חָטָ֖אתִי לַֽיהוָ֑ה ס וַיֹּ֨אמֶר נָתָ֜ן אֶל־דָּוִ֗ד גַּם־יְהוָ֛ה הֶעֱבִ֥יר חַטָּאתְךָ֖ לֹ֥א תָמֽוּת׃ 13
ಆಗ ದಾವೀದನು ನಾತಾನನಿಗೆ, “ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದನು. ನಾತಾನನು ದಾವೀದನಿಗೆ, “ನೀನು ಸಾಯದ ಹಾಗೆ ಯೆಹೋವ ದೇವರು ನಿನ್ನ ಪಾಪವನ್ನು ಪರಿಹರಿಸಿದರು.
אֶ֗פֶס כִּֽי־נִאֵ֤ץ נִאַ֙צְתָּ֙ אֶת־אֹיְבֵ֣י יְהוָ֔ה בַּדָּבָ֖ר הַזֶּ֑ה גַּ֗ם הַבֵּ֛ן הַיִּלּ֥וֹד לְךָ֖ מ֥וֹת יָמֽוּת׃ 14
ಹೇಗಿದ್ದರೂ ಈ ಕಾರ್ಯದಿಂದ ನೀನು ಯೆಹೋವ ದೇವರ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ, ನಿನಗೆ ಹುಟ್ಟಿದ ಮಗುವು ಖಂಡಿತವಾಗಿ ಸಾಯುವುದು,” ಎಂದನು.
וַיֵּ֥לֶךְ נָתָ֖ן אֶל־בֵּית֑וֹ וַיִּגֹּ֣ף יְהוָ֗ה אֶת־הַיֶּ֜לֶד אֲשֶׁ֨ר יָלְדָ֧ה אֵֽשֶׁת־אוּרִיָּ֛ה לְדָוִ֖ד וַיֵּאָנַֽשׁ׃ 15
ನಂತರ ನಾತಾನನು ತನ್ನ ಮನೆಗೆ ಹೋದನು. ಯೆಹೋವ ದೇವರು, ಊರೀಯನ ಹೆಂಡತಿಯು ದಾವೀದನಿಗೆ ಹೆತ್ತ ಕೂಸನ್ನು ಬಾಧಿಸಲು, ಅದು ಬಹಳ ಅಸ್ವಸ್ಥವಾಯಿತು.
וַיְבַקֵּ֥שׁ דָּוִ֛ד אֶת־הָאֱלֹהִ֖ים בְּעַ֣ד הַנָּ֑עַר וַיָּ֤צָם דָּוִד֙ צ֔וֹם וּבָ֥א וְלָ֖ן וְשָׁכַ֥ב אָֽרְצָה׃ 16
ದಾವೀದನು ಕೂಸಿಗೋಸ್ಕರ ದೇವರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪವಾಸ ಮಾಡಿ, ಒಳಗಿನ ಕೋಣೆಯಲ್ಲಿ ನೆಲದ ಮೇಲೆಯೇ ರಾತ್ರಿ ಕಳೆಯುತ್ತಿದ್ದನು.
וַיָּקֻ֜מוּ זִקְנֵ֤י בֵיתוֹ֙ עָלָ֔יו לַהֲקִימ֖וֹ מִן־הָאָ֑רֶץ וְלֹ֣א אָבָ֔ה וְלֹֽא־בָרָ֥א אִתָּ֖ם לָֽחֶם׃ 17
ಅವನನ್ನು ಎಬ್ಬಿಸುವುದಕ್ಕೆ ಅವನ ಮನೆಯ ಹಿರಿಯರು ಅವನ ಬಳಿಗೆ ಬಂದರು. ಆದರೆ ಅವನಿಗೆ ಮನಸ್ಸಿಲ್ಲದೆ ಇತ್ತು. ಅವರ ಸಂಗಡ ಭೋಜನ ಮಾಡದೆ ಇದ್ದನು.
וַיְהִ֛י בַּיּ֥וֹם הַשְּׁבִיעִ֖י וַיָּ֣מָת הַיָּ֑לֶד וַיִּֽרְאוּ֩ עַבְדֵ֨י דָוִ֜ד לְהַגִּ֥יד ל֣וֹ ׀ כִּי־מֵ֣ת הַיֶּ֗לֶד כִּ֤י אָֽמְרוּ֙ הִנֵּה֩ בִהְי֨וֹת הַיֶּ֜לֶד חַ֗י דִּבַּ֤רְנוּ אֵלָיו֙ וְלֹא־שָׁמַ֣ע בְּקוֹלֵ֔נוּ וְאֵ֨יךְ נֹאמַ֥ר אֵלָ֛יו מֵ֥ת הַיֶּ֖לֶד וְעָשָׂ֥ה רָעָֽה׃ 18
ಮಗುವು ಏಳನೆಯ ದಿವಸ ಸತ್ತು ಹೋಯಿತು. ಆಗ ಮಗುವು ಸತ್ತು ಹೋಯಿತೆಂದು ದಾವೀದನ ಸೇವಕರು ಅವನಿಗೆ ತಿಳಿಸುವುದಕ್ಕೆ ಭಯಪಟ್ಟರು. ಏಕೆಂದರೆ, “ಮಗುವು ಇನ್ನೂ ಬದುಕಿರುವಾಗ, ನಾವು ಅವನ ಸಂಗಡ ಮಾತನಾಡಿದಾಗ, ಅವನು ನಮ್ಮ ಮಾತನ್ನು ಕೇಳದೆ ಹೋದನು. ಈಗ ಮಗುವು ಸತ್ತು ಹೋಯಿತೆಂದು ನಾವು ಅವನಿಗೆ ಹೇಳಿದರೆ, ಅವನು ತನಗೆ ಏನಾದರೂ ಕೇಡುಮಾಡಿಕೊಳ್ಳುವನೋ?” ಎಂದುಕೊಂಡರು.
וַיַּ֣רְא דָּוִ֗ד כִּ֤י עֲבָדָיו֙ מִֽתְלַחֲשִׁ֔ים וַיָּ֥בֶן דָּוִ֖ד כִּ֣י מֵ֣ת הַיָּ֑לֶד וַיֹּ֨אמֶר דָּוִ֧ד אֶל־עֲבָדָ֛יו הֲמֵ֥ת הַיֶּ֖לֶד וַיֹּ֥אמְרוּ מֵֽת׃ 19
ಆದರೆ ದಾವೀದನು ತನ್ನ ಸೇವಕರು ಪಿಸುಗುಟ್ಟುವುದನ್ನು ಕಂಡು, ಮಗು ಸತ್ತು ಹೋಯಿತೆಂದು ಗ್ರಹಿಸಿಕೊಂಡನು. ದಾವೀದನು ತನ್ನ ಸೇವಕರಿಗೆ, “ಮಗುವು ಸತ್ತು ಹೋಯಿತೋ?” ಎಂದನು. ಅವರು, “ಸತ್ತು ಹೋಯಿತು,” ಎಂದರು.
וַיָּקָם֩ דָּוִ֨ד מֵהָאָ֜רֶץ וַיִּרְחַ֣ץ וַיָּ֗סֶךְ וַיְחַלֵּף֙ שמלתו וַיָּבֹ֥א בֵית־יְהוָ֖ה וַיִּשְׁתָּ֑חוּ וַיָּבֹא֙ אֶל־בֵּית֔וֹ וַיִּשְׁאַ֕ל וַיָּשִׂ֥ימוּ ל֛וֹ לֶ֖חֶם וַיֹּאכַֽל׃ 20
ಆಗ ದಾವೀದನು ನೆಲದಿಂದ ಎದ್ದು ಸ್ನಾನಮಾಡಿ, ತೈಲವನ್ನು ಹಚ್ಚಿಕೊಂಡವನಾಗಿ, ಬದಲು ವಸ್ತ್ರಗಳನ್ನು ಧರಿಸಿಕೊಂಡು, ಯೆಹೋವ ದೇವರ ಮನೆಗೆ ಹೋಗಿ, ಅವರನ್ನು ಆರಾಧಿಸಿ ತನ್ನ ಮನೆಗೆ ಬಂದನು. ಅವನ ಕೋರಿಕೆಯ ಮೇರೆಗೆ ಅವರು ಅವನಿಗೆ ಆಹಾರವನ್ನು ಬಡಿಸಿದರು ಮತ್ತು ಅವನು ತಿನ್ನುತ್ತಿದ್ದನು.
וַיֹּאמְר֤וּ עֲבָדָיו֙ אֵלָ֔יו מָֽה־הַדָּבָ֥ר הַזֶּ֖ה אֲשֶׁ֣ר עָשִׂ֑יתָה בַּעֲב֞וּר הַיֶּ֤לֶד חַי֙ צַ֣מְתָּ וַתֵּ֔בְךְּ וְכַֽאֲשֶׁר֙ מֵ֣ת הַיֶּ֔לֶד קַ֖מְתָּ וַתֹּ֥אכַל לָֽחֶם׃ 21
ಅವನ ಸೇವಕರು ಅವನಿಗೆ, “ಇದು ಏನು ನೀನು ಮಾಡಿದ್ದು? ಮಗುವು ಜೀವದಿಂದ ಇರುವಾಗ, ನೀನು ಉಪವಾಸವಾಗಿದ್ದು ಅದಕ್ಕೋಸ್ಕರ ಅಳುತ್ತಿದ್ದೆ. ಆದರೆ ಮಗುವು ಸತ್ತಮೇಲೆ ನೀನು ಎದ್ದು ರೊಟ್ಟಿಯನ್ನು ತಿಂದೆ,” ಎಂದರು.
וַיֹּ֕אמֶר בְּעוֹד֙ הַיֶּ֣לֶד חַ֔י צַ֖מְתִּי וָֽאֶבְכֶּ֑ה כִּ֤י אָמַ֙רְתִּי֙ מִ֣י יוֹדֵ֔עַ יחנני יְהוָ֖ה וְחַ֥י הַיָּֽלֶד׃ 22
ಅದಕ್ಕವನು, “ಮಗುವು ಜೀವದಿಂದ ಇರುವಾಗ ಅದು ಬದುಕುವ ಹಾಗೆ ಯೆಹೋವ ದೇವರು ನನಗೆ ದಯಮಾಡುವರೋ ಎಂದು ಉಪವಾಸ ಮಾಡಿ ಅತ್ತೆನು.
וְעַתָּ֣ה ׀ מֵ֗ת לָ֤מָּה זֶּה֙ אֲנִ֣י צָ֔ם הַאוּכַ֥ל לַהֲשִׁיב֖וֹ ע֑וֹד אֲנִי֙ הֹלֵ֣ךְ אֵלָ֔יו וְה֖וּא לֹֽא־יָשׁ֥וּב אֵלָֽי׃ 23
ಆದರೆ ಈಗ ಸತ್ತಿದೆಯಲ್ಲಾ. ನಾನು ಉಪವಾಸ ಮಾಡುವುದು ಏಕೆ? ನಾನು ಅದನ್ನು ತಿರುಗಿ ಬರಮಾಡಬಲ್ಲೆನೋ? ನಾನು ಅದರ ಬಳಿಗೆ ಹೋಗುವೆನು. ಆದರೆ ಅದು ನನ್ನ ಬಳಿಗೆ ತಿರುಗಿ ಬರುವುದಿಲ್ಲ,” ಎಂದನು.
וַיְנַחֵ֣ם דָּוִ֗ד אֵ֚ת בַּת־שֶׁ֣בַע אִשְׁתּ֔וֹ וַיָּבֹ֥א אֵלֶ֖יהָ וַיִּשְׁכַּ֣ב עִמָּ֑הּ וַתֵּ֣לֶד בֵּ֗ן ויקרא אֶת־שְׁמוֹ֙ שְׁלֹמֹ֔ה וַיהוָ֖ה אֲהֵבֽוֹ׃ 24
ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಳನ್ನು ಆಧರಿಸಿ, ಅವಳ ಬಳಿಗೆ ಹೋಗಿ ಅವಳ ಸಂಗಡ ಮಲಗಿದನು. ಅವಳು ಒಬ್ಬ ಮಗನನ್ನು ಹೆತ್ತಳು. ಅವನಿಗೆ ಸೊಲೊಮೋನನೆಂದು ಹೆಸರಿಟ್ಟನು. ಯೆಹೋವ ದೇವರು ಅವನನ್ನು ಪ್ರೀತಿ ಮಾಡಿದರು.
וַיִּשְׁלַ֗ח בְּיַד֙ נָתָ֣ן הַנָּבִ֔יא וַיִּקְרָ֥א אֶת־שְׁמ֖וֹ יְדִ֣ידְיָ֑הּ בַּעֲב֖וּר יְהוָֽה׃ פ 25
ಪ್ರವಾದಿಯಾದ ನಾತಾನನ ಮುಖಾಂತರ ಯೆಹೋವ ದೇವರ ನಿಮಿತ್ತ ಅವನಿಗೆ ಯೆದೀದ್ಯ ಎಂದು ಹೆಸರಿಟ್ಟನು.
וַיִּלָּ֣חֶם יוֹאָ֔ב בְּרַבַּ֖ת בְּנֵ֣י עַמּ֑וֹן וַיִּלְכֹּ֖ד אֶת־עִ֥יר הַמְּלוּכָֽה׃ 26
ಯೋವಾಬನು ಅಮ್ಮೋನಿಯರ ರಬ್ಬತಿನ ಮೇಲೆ ಯುದ್ಧಮಾಡಿ, ಅರಮನೆ ಇದ್ದ ಪಟ್ಟಣವನ್ನು ವಶಪಡಿಸಿಕೊಂಡನು.
וַיִּשְׁלַ֥ח יוֹאָ֛ב מַלְאָכִ֖ים אֶל־דָּוִ֑ד וַיֹּ֙אמֶר֙ נִלְחַ֣מְתִּי בְרַבָּ֔ה גַּם־לָכַ֖דְתִּי אֶת־עִ֥יר הַמָּֽיִם׃ 27
ಯೋವಾಬನು ದಾವೀದನಿಗೆ, “ನಾನು ರಬ್ಬಕ್ಕೆ ವಿರೋಧವಾಗಿ ಯುದ್ಧಮಾಡಿ, ನೀರು ಪೂರೈಕೆಯ ಭಾಗವನ್ನು ಸ್ವಾಧೀನ ಮಾಡಿಕೊಂಡಿದ್ದೇನೆ.
וְעַתָּ֗ה אֱסֹף֙ אֶת־יֶ֣תֶר הָעָ֔ם וַחֲנֵ֥ה עַל־הָעִ֖יר וְלָכְדָ֑הּ פֶּן־אֶלְכֹּ֤ד אֲנִי֙ אֶת־הָעִ֔יר וְנִקְרָ֥א שְׁמִ֖י עָלֶֽיהָ׃ 28
ಈಗ ನಾನು ಪಟ್ಟಣವನ್ನು ಹಿಡಿದು, ಅದು ನನ್ನ ಹೆಸರಿಗೆ ಕೀರ್ತಿ ಬಾರದ ಹಾಗೆ ನೀನು ಜನರನ್ನು ಕೂಡಿಸಿಕೊಂಡು ಬಂದು, ಪಟ್ಟಣವನ್ನು ಮುತ್ತಿಗೆ ಹಾಕಿ ಹಿಡಿ,” ಎಂದು ಹೇಳಿ ದೂತರನ್ನು ಕಳುಹಿಸಿದನು.
וַיֶּאֱסֹ֥ף דָּוִ֛ד אֶת־כָּל־הָעָ֖ם וַיֵּ֣לֶךְ רַבָּ֑תָה וַיִּלָּ֥חֶם בָּ֖הּ וַֽיִּלְכְּדָֽהּ׃ 29
ಹಾಗೆಯೇ ದಾವೀದನು ಜನರೆಲ್ಲರನ್ನು ಕೂಡಿಸಿಕೊಂಡು ರಬ್ಬಕ್ಕೆ ಹೋಗಿ, ಅದರ ಮೇಲೆ ಯುದ್ಧಮಾಡಿ ಅದನ್ನು ವಶಮಾಡಿಕೊಂಡನು.
וַיִּקַּ֣ח אֶת־עֲטֶֽרֶת ־מַלְכָּם֩ מֵעַ֨ל רֹאשׁ֜וֹ וּמִשְׁקָלָ֨הּ כִּכַּ֤ר זָהָב֙ וְאֶ֣בֶן יְקָרָ֔ה וַתְּהִ֖י עַל־רֹ֣אשׁ דָּוִ֑ד וּשְׁלַ֥ל הָעִ֛יר הוֹצִ֖יא הַרְבֵּ֥ה מְאֹֽד׃ 30
ಇದಲ್ಲದೆ ದಾವೀದನು ಅಮ್ಮೋನಿಯರ ಅರಸನ ತಲೆಯ ಮೇಲೆ ಇದ್ದ ಕಿರೀಟವನ್ನು ಸಹ ತೆಗೆದುಕೊಂಡನು. ಅದು ಮೂವತ್ತೈದು ಕಿಲೋಗ್ರಾಂ ತೂಕದ್ದಾಗಿತ್ತು ಅದನ್ನು ಬಂಗಾರದಿಂದಲೂ, ಅಮೂಲ್ಯವಾದ ರತ್ನಗಳಿಂದಲೂ ಅಲಂಕರಿಸಲಾಗಿತ್ತು, ಆ ಕಿರೀಟವನ್ನು ದಾವೀದನ ಶಿರಸ್ಸಿನಲ್ಲಿ ಧರಿಸಲಾಯಿತು. ಆ ಪಟ್ಟಣದೊಳಗಿಂದ ಅತ್ಯಧಿಕವಾದ ಕೊಳ್ಳೆಯನ್ನೂ ತೆಗೆದುಕೊಂಡು ಬಂದನು.
וְאֶת־הָעָ֨ם אֲשֶׁר־בָּ֜הּ הוֹצִ֗יא וַיָּ֣שֶׂם בַּ֠מְּגֵרָה וּבַחֲרִצֵ֨י הַבַּרְזֶ֜ל וּֽבְמַגְזְרֹ֣ת הַבַּרְזֶ֗ל וְהֶעֱבִ֤יר אוֹתָם֙ במלכן וְכֵ֣ן יַעֲשֶׂ֔ה לְכֹ֖ל עָרֵ֣י בְנֵֽי־עַמּ֑וֹן וַיָּ֧שָׁב דָּוִ֛ד וְכָל־הָעָ֖ם יְרוּשָׁלִָֽם׃ פ 31
ಇದಲ್ಲದೆ ಅವನು ಅದರಲ್ಲಿದ್ದ ಜನರನ್ನು ಹೊರಗೆ ತಂದು, ಅವರನ್ನು ಗರಗಸ ಗುದ್ದಲಿ ಕೊಡಲಿಗಳಿಂದ ಕೆಲಸ ಮಾಡುವದಕ್ಕೂ ಇಟ್ಟಿಗೆಗಳನ್ನು ಸುಡುವುದಕ್ಕೂ ಇಟ್ಟನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟಣಗಳಿಗೂ ಮಾಡಿದನು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ತಿರುಗಿಬಂದನು.

< 2 שְׁמוּאֵל 12 >