< 2 שְׁמוּאֵל 20 >
וְשָׁ֨ם נִקְרָ֜א אִ֣ישׁ בְּלִיַּ֗עַל וּשְׁמ֛וֹ שֶׁ֥בַע בֶּן־בִּכְרִ֖י אִ֣ישׁ יְמִינִ֑י וַיִּתְקַ֣ע בַּשֹּׁפָ֗ר וַ֠יֹּאמֶר אֵֽין־לָ֨נוּ חֵ֜לֶק בְּדָוִ֗ד וְלֹ֤א נַֽחֲלָה־לָ֙נוּ֙ בְּבֶן־יִשַׁ֔י אִ֥ישׁ לְאֹהָלָ֖יו יִשְׂרָאֵֽל׃ | 1 |
ಬೆನ್ಯಾಮೀನ್ಯನಾದ ಬಿಕ್ರಿಯ ಮಗ ಶೆಬನೆಂಬ ಹೆಸರುಳ್ಳ ಒಬ್ಬ ನೀಚ ವ್ಯಕ್ತಿ ಅಲ್ಲಿದ್ದನು. ಅವನು ತುತೂರಿಯನ್ನು ಊದಿ ಹೀಗಂದನು, “ನಮಗೆ ದಾವೀದನಲ್ಲಿ ಪಾಲಿಲ್ಲ, ಇಷಯನ ಮಗನ ಬಳಿಯಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಇಸ್ರಾಯೇಲರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ.”
וַיַּ֜עַל כָּל־אִ֤ישׁ יִשְׂרָאֵל֙ מֵאַחֲרֵ֣י דָוִ֔ד אַחֲרֵ֖י שֶׁ֣בַע בֶּן־בִּכְרִ֑י וְאִ֤ישׁ יְהוּדָה֙ דָּבְק֣וּ בְמַלְכָּ֔ם מִן־הַיַּרְדֵּ֖ן וְעַד־יְרוּשָׁלִָֽם׃ | 2 |
ಆಗ ಇಸ್ರಾಯೇಲರೆಲ್ಲರೂ ದಾವೀದನನ್ನು ಬಿಟ್ಟು ಸರಿದು, ಬಿಕ್ರಿಯ ಮಗ ಶೆಬನ ಹಿಂದೆ ಹೋದರು. ಆದರೆ ಯೊರ್ದನಿನಿಂದ ಯೆರೂಸಲೇಮಿನವರೆಗೂ ಇರುವ ಯೆಹೂದ ಜನರು ತಮ್ಮ ಅರಸನನ್ನು ಅಂಟಿಕೊಂಡಿದ್ದರು.
וַיָּבֹ֨א דָוִ֣ד אֶל־בֵּיתוֹ֮ יְרֽוּשָׁלִַם֒ וַיִּקַּ֣ח הַמֶּ֡לֶךְ אֵ֣ת עֶֽשֶׂר־נָשִׁ֣ים ׀ פִּלַגְשִׁ֡ים אֲשֶׁ֣ר הִנִּיחַ֩ לִשְׁמֹ֨ר הַבַּ֜יִת וַֽיִּתְּנֵ֤ם בֵּית־מִשְׁמֶ֙רֶת֙ וַֽיְכַלְכְּלֵ֔ם וַאֲלֵיהֶ֖ם לֹא־בָ֑א וַתִּהְיֶ֧ינָה צְרֻר֛וֹת עַד־י֥וֹם מֻתָ֖ן אַלְמְנ֥וּת חַיּֽוּת׃ ס | 3 |
ದಾವೀದನು ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ಬಂದನು. ಅರಸನು ಮನೆಯಲ್ಲಿ ಕಾಯಲು ಇಟ್ಟ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ತೆಗೆದುಕೊಂಡು, ಅವರನ್ನು ಒಂದು ಕಾವಲಿನಲ್ಲಿರಿಸಿ ಸಾಕುತ್ತಿದ್ದನು. ಅವರಿಗೆ ಅನ್ನವಸ್ತ್ರ ಕೊಡುತ್ತಿದ್ದನು. ಅವರ ಸಂಪರ್ಕ ಮಾಡಲಿಲ್ಲ. ಹಾಗೆಯೇ ಅವರು ಸಾಯುವ ದಿವಸದವರೆಗೂ ವಿಧವೆಯರಂತೆ ಇದ್ದು ಕಾವಲಲ್ಲಿರಬೇಕಾಯಿತು.
וַיֹּ֤אמֶר הַמֶּ֙לֶךְ֙ אֶל־עֲמָשָׂ֔א הַזְעֶק־לִ֥י אֶת־אִישׁ־ יְהוּדָ֖ה שְׁלֹ֣שֶׁת יָמִ֑ים וְאַתָּ֖ה פֹּ֥ה עֲמֹֽד׃ | 4 |
ಅರಸನು ಅಮಾಸನಿಗೆ, “ನೀನು ಮೂರು ದಿವಸಗಳೊಳಗೆ ಯೆಹೂದ ಜನರನ್ನು ಕೂಡಿಸಿಕೊಂಡು ನನ್ನ ಬಳಿಗೆ ಬಾ ಮತ್ತು ನೀನೇ ಇಲ್ಲಿ ಇರು,” ಎಂದನು.
וַיֵּ֥לֶךְ עֲמָשָׂ֖א לְהַזְעִ֣יק אֶת־יְהוּדָ֑ה וייחר מִן־הַמּוֹעֵ֖ד אֲשֶׁ֥ר יְעָדֽוֹ׃ ס | 5 |
ಹಾಗೆಯೇ ಅಮಾಸನು ಯೆಹೂದ ಜನರನ್ನು ಕೂಡಿಸಲು ಹೋದನು. ಆದರೆ ಅವನು ತನಗೆ ನೇಮಿಸಿದ ಕಾಲಕ್ಕಿಂತ ಬಾರದೆ ಹೆಚ್ಚು ತಡಮಾಡಿದನು.
וַיֹּ֤אמֶר דָּוִד֙ אֶל־אֲבִישַׁ֔י עַתָּ֗ה יֵ֧רַֽע לָ֛נוּ שֶׁ֥בַע בֶּן־בִּכְרִ֖י מִן־אַבְשָׁל֑וֹם אַ֠תָּה קַ֞ח אֶת־עַבְדֵ֤י אֲדֹנֶ֙יךָ֙ וּרְדֹ֣ף אַחֲרָ֔יו פֶּן־מָ֥צָא ל֛וֹ עָרִ֥ים בְּצֻר֖וֹת וְהִצִּ֥יל עֵינֵֽנוּ׃ | 6 |
ಆದ್ದರಿಂದ ದಾವೀದನು ಅಬೀಷೈಯನಿಗೆ, “ಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಪಟ್ಟಣಗಳನ್ನು ಸಂಪಾದಿಸಿಕೊಂಡು, ನಮ್ಮಿಂದ ತಪ್ಪಿಸಿಕೊಳ್ಳದೆ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತೆಗೆದುಕೊಂಡು ಹೊರಟು ಅವನನ್ನು ಹಿಂದಟ್ಟು,” ಎಂದನು.
וַיֵּצְא֤וּ אַֽחֲרָיו֙ אַנְשֵׁ֣י יוֹאָ֔ב וְהַכְּרֵתִ֥י וְהַפְּלֵתִ֖י וְכָל־הַגִּבֹּרִ֑ים וַיֵּֽצְאוּ֙ מִיר֣וּשָׁלִַ֔ם לִרְדֹּ֕ף אַחֲרֵ֖י שֶׁ֥בַע בֶּן־בִּכְרִֽי׃ | 7 |
ಹಾಗೆಯೇ ಅವನ ಹಿಂದೆ ಯೋವಾಬನ ಜನರೂ, ಕೆರೇತ್ಯರೂ, ಪೆಲೇತ್ಯರೂ, ಸಮಸ್ತ ಪರಾಕ್ರಮಶಾಲಿಗಳೂ ಅಬೀಷೈಯನ ನೇತೃತ್ವದಲ್ಲಿ ಬಿಕ್ರಿಯ ಮಗ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು.
הֵ֗ם עִם־הָאֶ֤בֶן הַגְּדוֹלָה֙ אֲשֶׁ֣ר בְּגִבְע֔וֹן וַעֲמָשָׂ֖א בָּ֣א לִפְנֵיהֶ֑ם וְיוֹאָ֞ב חָג֣וּר ׀ מִדּ֣וֹ לְבֻשׁ֗וּ ועלו חֲג֥וֹר חֶ֙רֶב֙ מְצֻמֶּ֤דֶת עַל־מָתְנָיו֙ בְּתַעְרָ֔הּ וְה֥וּא יָצָ֖א וַתִּפֹּֽל׃ ס | 8 |
ಅವರು ಗಿಬ್ಯೋನಿನ ಸಮೀಪದಲ್ಲಿರುವ ದೊಡ್ಡ ಕಲ್ಲಿನ ಬಳಿಗೆ ಬಂದಾಗ, ಅಮಾಸನು ಅವರೆದುರಿಗೆ ಬಂದನು. ಯೋವಾಬನು ತಾನು ಧರಿಸಿದ್ದ ಅಂಗಿಯ ಮೇಲೆ ಒಂದು ನಡುಕಟ್ಟನ್ನು ಕಟ್ಟಿಕೊಂಡಿದ್ದನು. ಅದರಲ್ಲಿ ಒರೆಯ ಸಂಗಡ ಒಂದು ಕಠಾರಿ ಅವನ ನಡುವಿನಲ್ಲಿ ತೂಗುತ್ತಿತ್ತು. ಅವನು ನಡೆಯುವಾಗ ಕಠಾರಿ ಒರೆಯಿಂದ ಕೆಳಗೆ ಬಿದ್ದಿತು.
וַיֹּ֤אמֶר יוֹאָב֙ לַעֲמָשָׂ֔א הֲשָׁל֥וֹם אַתָּ֖ה אָחִ֑י וַתֹּ֜חֶז יַד־יְמִ֥ין יוֹאָ֛ב בִּזְקַ֥ן עֲמָשָׂ֖א לִנְשָׁק־לֽוֹ׃ | 9 |
ಆಗ ಯೋವಾಬನು ಅಮಾಸನಿಗೆ, “ನನ್ನ ಸಹೋದರನೇ, ಕ್ಷೇಮವೋ?” ಎಂದನು. ಯೋವಾಬನು ಅವನನ್ನು ಮುದ್ದಿಟ್ಟುಕೊಳ್ಳಲು ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು.
וַעֲמָשָׂ֨א לֹֽא־נִשְׁמַ֜ר בַּחֶ֣רֶב ׀ אֲשֶׁ֣ר בְּיַד־יוֹאָ֗ב וַיַּכֵּהוּ֩ בָ֨הּ אֶל־הַחֹ֜מֶשׁ וַיִּשְׁפֹּ֨ךְ מֵעָ֥יו אַ֛רְצָה וְלֹא־שָׁ֥נָה ל֖וֹ וַיָּמֹ֑ת ס וְיוֹאָב֙ וַאֲבִישַׁ֣י אָחִ֔יו רָדַ֕ף אַחֲרֵ֖י שֶׁ֥בַע בֶּן־בִּכְרִֽי׃ | 10 |
ಆದರೆ ಅಮಾಸನು ಯೋವಾಬನ ಕೈಯಲ್ಲಿ ಕಠಾರಿ ಇದ್ದುದರಿಂದ ಎಚ್ಚರಿಕೆ ತೆಗೆದುಕೊಳ್ಳದಿರುವಾಗ, ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಹೊಟ್ಟೆಯಲ್ಲಿ ತಿವಿದನು. ಎರಡನೆಯ ಸಾರಿ ಹೊಡೆಯಲಿಲ್ಲ. ಅವನು ಸತ್ತನು. ಯೋವಾಬನೂ, ಅವನ ಸಹೋದರನಾದ ಅಬೀಷೈಯನೂ ಬಿಕ್ರಿಯ ಮಗ ಶೆಬನನ್ನು ಹಿಂದಟ್ಟಿದರು.
וְאִישׁ֙ עָמַ֣ד עָלָ֔יו מִֽנַּעֲרֵ֖י יוֹאָ֑ב וַיֹּ֗אמֶר מִי֩ אֲשֶׁ֨ר חָפֵ֧ץ בְּיוֹאָ֛ב וּמִ֥י אֲשֶׁר־לְדָוִ֖ד אַחֲרֵ֥י יוֹאָֽב׃ | 11 |
ಯೋವಾಬನ ಜನರಲ್ಲಿ ಒಬ್ಬನು ಸತ್ತವನ ಬಳಿಯಲ್ಲಿ ನಿಂತು, “ಯಾವನು ಯೋವಾಬನ ಮೇಲೆ ಇಷ್ಟವುಳ್ಳವನೋ, ಯಾವನು ದಾವೀದನಿಗೆ ಹೊಂದಿದವನೋ, ಅವನು ಯೋವಾಬನ ಹಿಂದೆ ಹೋಗಲಿ,” ಎಂದನು.
וַעֲמָשָׂ֛א מִתְגֹּלֵ֥ל בַּדָּ֖ם בְּת֣וֹךְ הַֽמְסִּלָּ֑ה וַיַּ֨רְא הָאִ֜ישׁ כִּֽי־עָמַ֣ד כָּל־הָעָ֗ם וַיַּסֵּב֩ אֶת־עֲמָשָׂ֨א מִן־הַֽמְסִלָּ֤ה הַשָּׂדֶה֙ וַיַּשְׁלֵ֤ךְ עָלָיו֙ בֶּ֔גֶד כַּאֲשֶׁ֣ר רָאָ֔ה כָּל־הַבָּ֥א עָלָ֖יו וְעָמָֽד׃ | 12 |
ಆದರೆ ಅಮಾಸನು ರಾಜಮಾರ್ಗದೊಳಗೆ ರಕ್ತದಲ್ಲಿ ಹೊರಳಾಡುತ್ತಾ ಇದ್ದನು. ಜನರೆಲ್ಲರು ನಿಂತಿರುವುದನ್ನು ಆ ಮನುಷ್ಯನು ಕಂಡಾಗ, ಅವನು ಅಮಾಸನನ್ನು ದಾರಿಯಿಂದ ಹೊಲಕ್ಕೆ ಎಳೆದು ಹಾಕಿ, ಅವನ ಮೇಲೆ ಒಂದು ವಸ್ತ್ರವನ್ನು ಹಾಕಿದನು.
כַּאֲשֶׁ֥ר הֹגָ֖ה מִן־הַֽמְסִלָּ֑ה עָבַ֤ר כָּל־אִישׁ֙ אַחֲרֵ֣י יוֹאָ֔ב לִרְדֹּ֕ף אַחֲרֵ֖י שֶׁ֥בַע בֶּן־בִּכְרִֽי׃ | 13 |
ಶವವನ್ನು ರಾಜಮಾರ್ಗದಿಂದ ಎಳೆದು ಆಚೆ ಹಾಕಿದ ತರುವಾಯ ಜನರೆಲ್ಲರೂ ಮುಂದಕ್ಕೆ ಹೋಗಿ, ಬಿಕ್ರಿಯ ಮಗನಾದ ಶೆಬನನ್ನು ಹಿಂದಟ್ಟಿ ಯೋವಾಬನ ಹಿಂದೆ ಹೋದರು.
וַֽיַּעֲבֹ֞ר בְּכָל־שִׁבְטֵ֣י יִשְׂרָאֵ֗ל אָבֵ֛לָה וּבֵ֥ית מַעֲכָ֖ה וְכָל־הַבֵּרִ֑ים ס ויקלהו וַיָּבֹ֖אוּ אַף־אַחֲרָֽיו׃ | 14 |
ಶೆಬನು ಇಸ್ರಾಯೇಲಿನ ಎಲ್ಲಾ ಗೋತ್ರಗಳಲ್ಲಿ ಹಾದು ಬೇತ್ ಮಾಕದ ಆಬೇಲಿಗೆ ಬಂದು, ಬೇರ‍್ಯರ ಪ್ರದೇಶದ ಮಾರ್ಗವಾಗಿ ಹೋದನು. ಆಗ ಬೇರ‍್ಯರು ಕೂಡಿಕೊಂಡು ಅವನ ಸಂಗಡ ಹೋದರು.
וַיָּבֹ֜אוּ וַיָּצֻ֣רוּ עָלָ֗יו בְּאָבֵ֙לָה֙ בֵּ֣ית הַֽמַּעֲכָ֔ה וַיִּשְׁפְּכ֤וּ סֹֽלְלָה֙ אֶל־הָעִ֔יר וַֽתַּעֲמֹ֖ד בַּחֵ֑ל וְכָל־הָעָם֙ אֲשֶׁ֣ר אֶת־יוֹאָ֔ב מַשְׁחִיתִ֖ם לְהַפִּ֥יל הַחוֹמָֽה׃ | 15 |
ಯೋವಾಬನ ಜೊತೆಗಿದ್ದ ಸೈನಿಕರು ಬಂದು ಆಬೇಲ್ ಬೇತ್ ಮಾಕಾ ಊರಿಗೆ ಮುತ್ತಿಗೆ ಹಾಕಿ, ಪಟ್ಟಣಕ್ಕೆದುರಾಗಿ ಊರು ಗೋಡೆಯವರೆಗೆ ಮಣ್ಣಿನ ದಿಬ್ಬವನ್ನು ಮಾಡಿದರು. ಯೋವಾಬನ ಸಂಗಡದಲ್ಲಿರುವ ಜನರೆಲ್ಲರೂ ಗೋಡೆಯನ್ನು ಕೆಡವಿಬಿಡುವುದಕ್ಕೆ ಪ್ರಯತ್ನಿಸಿದರು.
וַתִּקְרָ֛א אִשָּׁ֥ה חֲכָמָ֖ה מִן־הָעִ֑יר שִׁמְע֤וּ שִׁמְעוּ֙ אִמְרוּ־נָ֣א אֶל־יוֹאָ֔ב קְרַ֣ב עַד־הֵ֔נָּה וַאֲדַבְּרָ֖ה אֵלֶֽיךָ׃ | 16 |
ಆಗ ಜ್ಞಾನವುಳ್ಳ ಒಬ್ಬ ಸ್ತ್ರೀಯು ಪಟ್ಟಣದಲ್ಲಿಂದ, “ಕೇಳಿರಿ, ಕೇಳಿರಿ. ನಾನು ಯೋವಾಬನ ಸಂಗಡ ಮಾತನಾಡುವ ಹಾಗೆ ಅವನು ಇಲ್ಲಿಗೆ ಸಮೀಪಿಸಲು ಬರಹೇಳಿರಿ,” ಎಂದು ಕೂಗಿ ಬೇಡಿಕೊಂಡಳು.
וַיִּקְרַ֣ב אֵלֶ֔יהָ וַתֹּ֧אמֶר הָאִשָּׁ֛ה הַאַתָּ֥ה יוֹאָ֖ב וַיֹּ֣אמֶר אָ֑נִי וַתֹּ֣אמֶר ל֗וֹ שְׁמַע֙ דִּבְרֵ֣י אֲמָתֶ֔ךָ וַיֹּ֖אמֶר שֹׁמֵ֥עַ אָנֹֽכִי׃ | 17 |
ಅವನು ಅವಳ ಬಳಿಗೆ ಸಮೀಪಿಸಿ ಬಂದಾಗ, ಆ ಸ್ತ್ರೀಯು, “ನೀನು ಯೋವಾಬನೋ?” ಎಂದಳು. ಅದಕ್ಕೆ ಅವನು, “ಹೌದು, ನಾನೇ,” ಎಂದು ಉತ್ತರಕೊಟ್ಟನು. ಆಕೆ, “ನಿನ್ನ ದಾಸಿಯ ಮಾತನ್ನು ಕೇಳಿ,” ಎಂದಳು. ಅದಕ್ಕೆ ಅವನು, “ನಾನು ಕೇಳುತ್ತೇನೆ,” ಎಂದನು.
וַתֹּ֖אמֶר לֵאמֹ֑ר דַּבֵּ֨ר יְדַבְּר֤וּ בָרִֽאשֹׁנָה֙ לֵאמֹ֔ר שָׁאֹ֧ל יְשָׁאֲל֛וּ בְּאָבֵ֖ל וְכֵ֥ן הֵתַֽמּוּ׃ | 18 |
ಅವಳು ಮಾತನಾಡುತ್ತಾ, “ಪೂರ್ವಕಾಲದಲ್ಲಿ, ‘ಆಬೇಲಿನವರ ಉತ್ತರ ಪಡೆಯಿರಿ’ ಎಂದು ಹೇಗೆ ವ್ಯಾಜ್ಯ ತೀರಿಸಿಕೊಳ್ಳುತ್ತಿದ್ದರು.
אָנֹכִ֕י שְׁלֻמֵ֖י אֱמוּנֵ֣י יִשְׂרָאֵ֑ל אַתָּ֣ה מְבַקֵּ֗שׁ לְהָמִ֨ית עִ֤יר וְאֵם֙ בְּיִשְׂרָאֵ֔ל לָ֥מָּה תְבַלַּ֖ע נַחֲלַ֥ת יְהוָֽה׃ פ | 19 |
ಹಾಗೆ ನಾವು ಇಸ್ರಾಯೇಲಿನಲ್ಲಿ ಸಮಾಧಾನವುಳ್ಳವರೂ, ನಂಬಿಗಸ್ತರೂ ಆಗಿದ್ದೇವೆ. ಇಸ್ರಾಯೇಲಿನ ತಾಯಿಯಂತಿರುವ ನಮ್ಮ ಪಟ್ಟಣವನ್ನು ಹಾಳುಮಾಡಲು ಯೆಹೋವ ದೇವರ ಸೊತ್ತನ್ನು ಕಬಳಿಸುವುದಕ್ಕೆ ಏಕೆ ಪ್ರಯತ್ನಿಸುತ್ತಿದ್ದೀರಿ?” ಎಂದಳು.
וַיַּ֥עַן יוֹאָ֖ב וַיֹּאמַ֑ר חָלִ֤ילָה חָלִ֙ילָה֙ לִ֔י אִם־אֲבַלַּ֖ע וְאִם־אַשְׁחִֽית׃ | 20 |
ಅದಕ್ಕೆ ಯೋವಾಬನು ಉತ್ತರವಾಗಿ, “ನಾನು ಅದನ್ನು ಎಂದಿಗೂ ಮಾಡುವುದಿಲ್ಲ. ನುಂಗುವುದನ್ನೂ ಹಾಳುಮಾಡುವುದನ್ನೂ ನಾನು ಎಂದಿಗೂ ಮಾಡುವುದಿಲ್ಲ.
לֹא־כֵ֣ן הַדָּבָ֗ר כִּ֡י אִישׁ֩ מֵהַ֨ר אֶפְרַ֜יִם שֶׁ֧בַע בֶּן־בִּכְרִ֣י שְׁמ֗וֹ נָשָׂ֤א יָדוֹ֙ בַּמֶּ֣לֶךְ בְּדָוִ֔ד תְּנֽוּ־אֹת֣וֹ לְבַדּ֔וֹ וְאֵלְכָ֖ה מֵעַ֣ל הָעִ֑יר וַתֹּ֤אמֶר הָֽאִשָּׁה֙ אֶל־יוֹאָ֔ב הִנֵּ֥ה רֹאשׁ֛וֹ מֻשְׁלָ֥ךְ אֵלֶ֖יךָ בְּעַ֥ד הַחוֹמָֽה׃ | 21 |
ಕಾರ್ಯವು ಹಾಗಲ್ಲ. ಏಕೆಂದರೆ ಬಿಕ್ರಿಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯೀಮ್ ಬೆಟ್ಟದವನಾದ ಒಬ್ಬ ಮನುಷ್ಯನು, ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ. ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು,” ಎಂದನು. ಆ ಸ್ತ್ರೀಯು ಯೋವಾಬನಿಗೆ, “ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಕಡೆಗೆ ಎಸೆಯಲಾಗುವುದು,” ಎಂದಳು.
וַתָּבוֹא֩ הָאִשָּׁ֨ה אֶל־כָּל־הָעָ֜ם בְּחָכְמָתָ֗הּ וַֽיִּכְרְת֞וּ אֶת־רֹ֨אשׁ שֶׁ֤בַע בֶּן־בִּכְרִי֙ וַיַּשְׁלִ֣כוּ אֶל־יוֹאָ֔ב וַיִּתְקַע֙ בַּשּׁוֹפָ֔ר וַיָּפֻ֥צוּ מֵֽעַל־הָעִ֖יר אִ֣ישׁ לְאֹהָלָ֑יו וְיוֹאָ֛ב שָׁ֥ב יְרוּשָׁלִַ֖ם אֶל־הַמֶּֽלֶךְ׃ ס | 22 |
ಆ ಸ್ತ್ರೀಯು ತನ್ನ ಜ್ಞಾನದಿಂದ ಸಮಸ್ತ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರಿಯ ಮಗ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ, ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನೂ ತಮ್ಮ ತಮ್ಮ ಮನೆಗಳಿಗೆ ಹೋದರು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂದಿರುಗಿ ಬಂದನು.
וְיוֹאָ֕ב אֶ֥ל כָּל־הַצָּבָ֖א יִשְׂרָאֵ֑ל וּבְנָיָה֙ בֶּן־יְה֣וֹיָדָ֔ע עַל־הכרי וְעַל־הַפְּלֵתִֽי׃ | 23 |
ಯೋವಾಬನು ಇಸ್ರಾಯೇಲಿನ ಸಮಸ್ತ ಸೈನ್ಯದ ಅಧಿಪತಿಯಾಗಿದ್ದನು. ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು.
וַאֲדֹרָ֖ם עַל־הַמַּ֑ס וִיהוֹשָׁפָ֥ט בֶּן־אֲחִיל֖וּד הַמַּזְכִּֽיר׃ | 24 |
ಅದೋನೀರಾಮನು ದಾಸರ ಮೇಲೆ ಉಸ್ತುವಾರಿ ವಹಿಸಿದ್ದನು. ಅಹೀಲೂದನ ಮಗ ಯೆಹೋಷಾಫಾಟನು ಆಸ್ಥಾನದ ಆಗುಹೋಗುಗಳನ್ನು ದಾಖಲಿಸುವವನಾಗಿದ್ದನು.
ושיא סֹפֵ֑ר וְצָד֥וֹק וְאֶבְיָתָ֖ר כֹּהֲנִֽים׃ | 25 |
ಶೆವನು ಕಾರ್ಯದರ್ಶಿಯಾಗಿದ್ದನು. ಚಾದೋಕನೂ ಅಬಿಯಾತರನೂ ಯಾಜಕರಾಗಿದ್ದರು.
וְגַ֗ם עִירָא֙ הַיָּ֣אִרִ֔י הָיָ֥ה כֹהֵ֖ן לְדָוִֽד׃ ס | 26 |
ಯಾಯೀರಿನವನಾದ ಈರನೂ ದಾವೀದನ ಯಾಜಕನಾಗಿದ್ದನು.