< אֶסְתֵר 2 >

אַחַר֙ הַדְּבָרִ֣ים הָאֵ֔לֶּה כְּשֹׁ֕ךְ חֲמַ֖ת הַמֶּ֣לֶךְ אֲחַשְׁוֵר֑וֹשׁ זָכַ֤ר אֶת־וַשְׁתִּי֙ וְאֵ֣ת אֲשֶׁר־עָשָׂ֔תָה וְאֵ֥ת אֲשֶׁר־נִגְזַ֖ר עָלֶֽיהָ׃ 1
ಇದಾದನಂತರ ಅರಸನಾದ ಅಹಷ್ವೇರೋಷನು ಕೋಪವನ್ನು ಬಿಟ್ಟು ವಷ್ಟಿಯನ್ನೂ, ಆಕೆ ಮಾಡಿದ್ದನ್ನೂ ಮತ್ತು ಆಕೆಯ ವಿಷಯದಲ್ಲಿ ಮಾಡಿದ ತೀರ್ಪನ್ನೂ ನೆನಪುಮಾಡಿಕೊಳ್ಳುತ್ತಿದ್ದನು.
וַיֹּאמְר֥וּ נַעֲרֵֽי־הַמֶּ֖לֶךְ מְשָׁרְתָ֑יו יְבַקְשׁ֥וּ לַמֶּ֛לֶךְ נְעָר֥וֹת בְּתוּל֖וֹת טוֹב֥וֹת מַרְאֶֽה׃ 2
ಆಗ ಅವನ ಸೇವೆಮಾಡುತ್ತಿದ್ದ ರಾಜಪರಿವಾರದವರು ಅರಸನಿಗೆ, “ಅರಸನಿಗೋಸ್ಕರ ಸುಂದರಿಯರಾದ ಕನ್ಯೆಯರನ್ನು ಹುಡುಕುವುದಕ್ಕೆ ಅಪ್ಪಣೆಮಾಡಬೇಕು.
וְיַפְקֵ֨ד הַמֶּ֣לֶךְ פְּקִידִים֮ בְּכָל־מְדִינ֣וֹת מַלְכוּתוֹ֒ וְיִקְבְּצ֣וּ אֶת־כָּל־נַעֲרָֽה־בְ֠תוּלָה טוֹבַ֨ת מַרְאֶ֜ה אֶל־שׁוּשַׁ֤ן הַבִּירָה֙ אֶל־בֵּ֣ית הַנָּשִׁ֔ים אֶל־יַ֥ד הֵגֶ֛א סְרִ֥יס הַמֶּ֖לֶךְ שֹׁמֵ֣ר הַנָּשִׁ֑ים וְנָת֖וֹן תַּמְרוּקֵיהֶֽן׃ 3
ಅರಸನು ತನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಿಗೆ ಕಾರ್ಯನಿರ್ವಾಹಕರನ್ನು ಕಳುಹಿಸಬೇಕು; ಅವರು ಸುಂದರಿಯರಾದ ಎಲ್ಲಾ ಕನ್ಯೆಯರನ್ನು ಶೂಷನ್ ಕೋಟೆಯ ಅಂತಃಪುರದಲ್ಲಿ ಕೂಡಿಸಿ, ಅಂತಃಪುರದ ಪಾಲಕನೂ ರಾಜಕಂಚುಕಿಯೂ ಆದ ಹೇಗೈಯ ವಶಕ್ಕೆ ಕೊಡಲಿ. ಅವನು ಅವರಿಗೆ ಕಾಂತಿಯನ್ನು ಹೆಚ್ಚಿಸುವ ಲೇಪನ ದ್ರವ್ಯಗಳನ್ನು ಹಂಚಲಿ.
וְהַֽנַּעֲרָ֗ה אֲשֶׁ֤ר תִּיטַב֙ בְּעֵינֵ֣י הַמֶּ֔לֶךְ תִּמְלֹ֖ךְ תַּ֣חַת וַשְׁתִּ֑י וַיִּיטַ֧ב הַדָּבָ֛ר בְּעֵינֵ֥י הַמֶּ֖לֶךְ וַיַּ֥עַשׂ כֵּֽן׃ ס 4
ಅರಸನು ಯಾವ ಕನ್ಯೆಯನ್ನು ಇಷ್ಟಪಡುವನೋ ಆ ಕನ್ಯೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ” ಎಂದು ಹೇಳಿದರು. ಅರಸನು ಅವರ ಅಭಿಪ್ರಾಯಕ್ಕೆ ಸಮ್ಮತಿಸಿ ಅದರಂತೆಯೇ ಮಾಡಿದನು.
אִ֣ישׁ יְהוּדִ֔י הָיָ֖ה בְּשׁוּשַׁ֣ן הַבִּירָ֑ה וּשְׁמ֣וֹ מָרְדֳּכַ֗י בֶּ֣ן יָאִ֧יר בֶּן־שִׁמְעִ֛י בֶּן־קִ֖ישׁ אִ֥ישׁ יְמִינִֽי׃ 5
ಶೂಷನ್ ಕೋಟೆಯಲ್ಲಿ ಮೊರ್ದೆಕೈ ಎಂಬ ಒಬ್ಬ ಯೆಹೂದ್ಯ ಮನುಷ್ಯನು ವಾಸಮಾಡುತ್ತಿದ್ದನು. ಇವನು ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಗೀಯ ಮೊಮ್ಮಗನೂ, ಯಾಯೀರನ ಮಗನೂ ಆಗಿದ್ದನು.
אֲשֶׁ֤ר הָגְלָה֙ מִיר֣וּשָׁלַ֔יִם עִם־הַגֹּלָה֙ אֲשֶׁ֣ר הָגְלְתָ֔ה עִ֖ם יְכָנְיָ֣ה מֶֽלֶךְ־יְהוּדָ֑ה אֲשֶׁ֣ר הֶגְלָ֔ה נְבוּכַדְנֶאצַּ֖ר מֶ֥לֶךְ בָּבֶֽל׃ 6
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದರಾಜನಾದ ಯೆಹೋಯಾಕೀನನೊಡನೆ ಸೆರೆಯಾಗಿ ಒಯ್ಯಲ್ಪಟ್ಟವರಲ್ಲಿ ಇವನೂ ಒಬ್ಬನು.
וַיְהִ֨י אֹמֵ֜ן אֶת־הֲדַסָּ֗ה הִ֤יא אֶסְתֵּר֙ בַּת־דֹּד֔וֹ כִּ֛י אֵ֥ין לָ֖הּ אָ֣ב וָאֵ֑ם וְהַנַּעֲרָ֤ה יְפַת־תֹּ֙אַר֙ וְטוֹבַ֣ת מַרְאֶ֔ה וּבְמ֤וֹת אָבִ֙יהָ֙ וְאִמָּ֔הּ לְקָחָ֧הּ מָרְדֳּכַ֛י ל֖וֹ לְבַֽת׃ 7
ಇವನು ಎಸ್ತೇರ್ ಎಂಬ ಹೆಸರಿನ ಹದೆಸ್ಸಾ ಎಂಬ ತನ್ನ ಚಿಕ್ಕಪ್ಪನ ಅನಾಥಳಾದ ಮಗಳನ್ನು ತಂದೆತಾಯಿಗಳು ಸತ್ತಂದಿನಿಂದ ಪುತ್ರಿಯನ್ನಾಗಿ ಸ್ವೀಕರಿಸಿ ಸಾಕುತ್ತಿದ್ದನು. ಆಕೆಯು ರೂಪವತಿಯೂ ಲಾವಣ್ಯವತಿಯೂ ಆಗಿದ್ದಳು.
וַיְהִ֗י בְּהִשָּׁמַ֤ע דְּבַר־הַמֶּ֙לֶךְ֙ וְדָת֔וֹ וּֽבְהִקָּבֵ֞ץ נְעָר֥וֹת רַבּ֛וֹת אֶל־שׁוּשַׁ֥ן הַבִּירָ֖ה אֶל־יַ֣ד הֵגָ֑י וַתִּלָּקַ֤ח אֶסְתֵּר֙ אֶל־בֵּ֣ית הַמֶּ֔לֶךְ אֶל־יַ֥ד הֵגַ֖י שֹׁמֵ֥ר הַנָּשִֽׁים׃ 8
ಅರಸನ ನಿರ್ಣಯವೂ, ಆಜ್ಞೆಯೂ ಪ್ರಕಟಿಸಲ್ಪಟ್ಟ ತರುವಾಯ ಕಾರ್ಯನಿರ್ವಾಹಕರು ಅನೇಕಾನೇಕ ಕನ್ಯೆಯರನ್ನು ಕೂಡಿಸಿ ಶೂಷನ್ ಕೋಟೆಯಲ್ಲಿ ಹೇಗೈಯ ವಶಕ್ಕೆ ಒಪ್ಪಿಸಿದಾಗ ಎಸ್ತೇರಳೂ ಅರಮನೆಗೆ ಬಂದು ಅಂತಃಪುರ ಪಾಲಕನಾದ ಹೇಗೈಯ ಪರಾಂಬರಿಕೆಯಲ್ಲಿದ್ದಳು.
וַתִּיטַ֨ב הַנַּעֲרָ֣ה בְעֵינָיו֮ וַתִּשָּׂ֣א חֶ֣סֶד לְפָנָיו֒ וַ֠יְבַהֵל אֶת־תַּמְרוּקֶ֤יהָ וְאֶת־מָנוֹתֶ֙הָ֙ לָתֵ֣ת לָ֔הּ וְאֵת֙ שֶׁ֣בַע הַנְּעָר֔וֹת הָרְאֻי֥וֹת לָֽתֶת־לָ֖הּ מִבֵּ֣ית הַמֶּ֑לֶךְ וַיְשַׁנֶּ֧הָ וְאֶת־נַעֲרוֹתֶ֛יהָ לְט֖וֹב בֵּ֥ית הַנָּשִֽׁים׃ 9
ಹೇಗೈಯು ಆಕೆಯನ್ನು ಮೆಚ್ಚಿ, ತನ್ನ ದಯೆಗೆ ಪಾತ್ರಳಾದ ಆಕೆಗೋಸ್ಕರ ತಕ್ಕ ಲೇಪನದ್ರವ್ಯಗಳನ್ನೂ ಮತ್ತು ಭೋಜನವನ್ನು ಒದಗಿಸಿದನು. ಅವನು ಆಕೆಗೊಸ್ಕರ ಏಳು ಮಂದಿ ಸೇವಕಿಯರನ್ನೂ ಅರಮನೆಯಿಂದ ಆರಿಸಿಕೊಂಡು ಆಕೆಯನ್ನೂ ಮತ್ತು ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು.
לֹא־הִגִּ֣ידָה אֶסְתֵּ֔ר אֶת־עַמָּ֖הּ וְאֶת־מֽוֹלַדְתָּ֑הּ כִּ֧י מָרְדֳּכַ֛י צִוָּ֥ה עָלֶ֖יהָ אֲשֶׁ֥ר לֹא־תַגִּֽיד׃ 10
೧೦ಎಸ್ತೇರಳು ತಾನು ಇಂಥ ಜನಾಂಗದವಳು, ಇಂಥ ಕುಲದವಳು ಎಂಬುದನ್ನು ತೋರ್ಪಡಿಸಿಕೊಳ್ಳಲಿಲ್ಲ; ಮೊರ್ದೆಕೈಯು ಹೀಗೆ ಅಪ್ಪಣೆಕೊಟ್ಟಿದ್ದನು.
וּבְכָל־י֣וֹם וָי֔וֹם מָרְדֳּכַי֙ מִתְהַלֵּ֔ךְ לִפְנֵ֖י חֲצַ֣ר בֵּית־הַנָּשִׁ֑ים לָדַ֙עַת֙ אֶת־שְׁל֣וֹם אֶסְתֵּ֔ר וּמַה־יֵּעָשֶׂ֖ה בָּֽהּ׃ 11
೧೧ಅವನು ಆಕೆಯ ಕ್ಷೇಮವನ್ನು ಮತ್ತು ಆಕೆ ಮುಂದೆ ಏನು ಮಾಡಬೇಕು ಎಂದು ವಿಚಾರಿಸುವುದಕ್ಕಾಗಿ ಪ್ರತಿದಿನವೂ ಅಂತಃಪುರದ ಪ್ರಾಕಾರದ ಮುಂದೆ ತಿರುಗಾಡುತ್ತಿದ್ದನು.
וּבְהַגִּ֡יעַ תֹּר֩ נַעֲרָ֨ה וְנַעֲרָ֜ה לָב֣וֹא ׀ אֶל־הַמֶּ֣לֶךְ אֲחַשְׁוֵר֗וֹשׁ מִקֵּץ֩ הֱי֨וֹת לָ֜הּ כְּדָ֤ת הַנָּשִׁים֙ שְׁנֵ֣ים עָשָׂ֣ר חֹ֔דֶשׁ כִּ֛י כֵּ֥ן יִמְלְא֖וּ יְמֵ֣י מְרוּקֵיהֶ֑ן שִׁשָּׁ֤ה חֳדָשִׁים֙ בְּשֶׁ֣מֶן הַמֹּ֔ר וְשִׁשָּׁ֤ה חֳדָשִׁים֙ בַּבְּשָׂמִ֔ים וּבְתַמְרוּקֵ֖י הַנָּשִֽׁים׃ 12
೧೨ಕನ್ಯೆಯರ ಲೇಪನಕಾಲವು ಪೂರೈಸುವುದಕ್ಕೆ ಗಂಧರಸಪ್ರಯೋಗದಲ್ಲಿ ಆರು ತಿಂಗಳೂ, ಪರಿಮಳದ್ರವ್ಯ ಕಾಂತಿವರ್ಧಕದ್ರವ್ಯಗಳ ಪ್ರಯೋಗದಲ್ಲಿ ಆರು ತಿಂಳಗಳೂ ಅಂತು ಹನ್ನೆರಡು ತಿಂಗಳು ಕಳೆದವು. ಈ ಕಾಲ ಮುಗಿದನಂತರ ರಾಜನ ಅರಮನೆಯ ನಿಯಮದ ಮೇರೆಗೆ ತನ್ನನ್ನು ಸಿದ್ಧಪಡಿಸಿಕೊಂಡ ಪ್ರತಿಯೊಬ್ಬ ಕನ್ಯೆಯು ಅರಸನಾದ ಅಹಷ್ವೇರೋಷನ ಬಳಿಗೆ ಹೋಗಬೇಕಾಗಿತ್ತು.
וּבָזֶ֕ה הַֽנַּעֲרָ֖ה בָּאָ֣ה אֶל־הַמֶּ֑לֶךְ אֵת֩ כָּל־אֲשֶׁ֨ר תֹּאמַ֜ר יִנָּ֤תֵֽן לָהּ֙ לָב֣וֹא עִמָּ֔הּ מִבֵּ֥ית הַנָּשִׁ֖ים עַד־בֵּ֥ית הַמֶּֽלֶךְ׃ 13
೧೩ಅರಸನ ಬಳಿಗೆ ಹೋಗುವ ಸರದಿ ಯಾರಿಗೆ ಬರುವುದೋ ಆಕೆಯು ಅಂತಃಪುರದಿಂದ ಅರಮನೆಗೆ ತೆಗೆದುಕೊಂಡು ಹೋಗುವುದಕ್ಕೋಸ್ಕರ ಏನು ಕೇಳಿದರೂ ಕೊಡಲ್ಪಡುವುದು.
בָּעֶ֣רֶב ׀ הִ֣יא בָאָ֗ה וּ֠בַבֹּקֶר הִ֣יא שָׁבָ֞ה אֶל־בֵּ֤ית הַנָּשִׁים֙ שֵׁנִ֔י אֶל־יַ֧ד שַֽׁעֲשְׁגַ֛ז סְרִ֥יס הַמֶּ֖לֶךְ שֹׁמֵ֣ר הַפִּֽילַגְשִׁ֑ים לֹא־תָב֥וֹא עוֹד֙ אֶל־הַמֶּ֔לֶךְ כִּ֣י אִם־חָפֵ֥ץ בָּ֛הּ הַמֶּ֖לֶךְ וְנִקְרְאָ֥ה בְשֵֽׁם׃ 14
೧೪ಆಕೆಯು ಅಲ್ಲಿಗೆ ಸಾಯಂಕಾಲ ಹೋದವಳು ಮರುದಿನ ಬೆಳಿಗ್ಗೆ ಅರಸನ ಉಪಪತ್ನಿಯರ ಪಾಲಕನಾದ ಶವಷ್ಗಜನೆಂಬ ರಾಜಕಂಚುಕಿಯ ವಶದಲ್ಲಿದ್ದ ಎರಡನೆಯ ಅಂತಃಪುರಕ್ಕೆ ಬರುವಳು. ಅರಸನು ಅವಳನ್ನು ಮೆಚ್ಚಿ ಹೆಸರು ಹೇಳಿ ಕರೆಯಿಸಿದ ಹೊರತಾಗಿ ಒಬ್ಬಳೂ ಅರಸನ ಬಳಿಗೆ ಪುನಃ ಹೋಗುವ ಹಾಗಿರಲಿಲ್ಲ.
וּבְהַגִּ֣יעַ תֹּר־אֶסְתֵּ֣ר בַּת־אֲבִיחַ֣יִל דֹּ֣ד מָרְדֳּכַ֡י אֲשֶׁר֩ לָקַֽח־ל֨וֹ לְבַ֜ת לָב֣וֹא אֶל־הַמֶּ֗לֶךְ לֹ֤א בִקְשָׁה֙ דָּבָ֔ר כִּ֠י אִ֣ם אֶת־אֲשֶׁ֥ר יֹאמַ֛ר הֵגַ֥י סְרִיס־הַמֶּ֖לֶךְ שֹׁמֵ֣ר הַנָּשִׁ֑ים וַתְּהִ֤י אֶסְתֵּר֙ נֹשֵׂ֣את חֵ֔ן בְּעֵינֵ֖י כָּל־רֹאֶֽיהָ׃ 15
೧೫ಅರಸನ ಬಳಿಗೆ ಹೋಗುವುದಕ್ಕೆ ಮೊರ್ದೆಕೈಯ ದತ್ತುಪುತ್ರಿಯೂ ಅವನ ಚಿಕ್ಕಪ್ಪನಾದ ಅಬೀಹೈಲನ ಮಗಳೂ ಆದ ಎಸ್ತೇರಳ ಸರದಿ ಬಂದಾಗ, ಅಂತಃಪುರ ಪಾಲಕನಾದ ಹೇಗೈ ಎಂಬ ರಾಜಕಂಚುಕಿಯು ನೇಮಿಸಿದ್ದನ್ನೇ ಹೊರತು ಆಕೆ ಬೇರೇನೂ ಕೇಳಲಿಲ್ಲ. ನೋಡುವವರೆಲ್ಲರೂ ಆಕೆಯನ್ನು ಮೆಚ್ಚುತ್ತಿದ್ದರು.
וַתִּלָּקַ֨ח אֶסְתֵּ֜ר אֶל־הַמֶּ֤לֶךְ אֲחַשְׁוֵרוֹשׁ֙ אֶל־בֵּ֣ית מַלְכוּת֔וֹ בַּחֹ֥דֶשׁ הָעֲשִׂירִ֖י הוּא־חֹ֣דֶשׁ טֵבֵ֑ת בִּשְׁנַת־שֶׁ֖בַע לְמַלְכוּתֽוֹ׃ 16
೧೬ಅರಸನಾದ ಅಹಷ್ವೇರೋಷನ ಬಳಿಗೆ ಅವನ ಆಳ್ವಿಕೆಯ ಏಳನೆಯ ವರ್ಷದ ಹತ್ತನೆಯ ತಿಂಗಳಾದ ಪುಷ್ಯ ಮಾಸದಲ್ಲಿ ಆಕೆಯನ್ನು ರಾಜಗೃಹಕ್ಕೆ ಕರೆದುಕೊಂಡು ಬಂದರು.
וַיֶּאֱהַ֨ב הַמֶּ֤לֶךְ אֶת־אֶסְתֵּר֙ מִכָּל־הַנָּשִׁ֔ים וַתִּשָּׂא־חֵ֥ן וָחֶ֛סֶד לְפָנָ֖יו מִכָּל־הַבְּתוּלֹ֑ת וַיָּ֤שֶׂם כֶּֽתֶר־מַלְכוּת֙ בְּרֹאשָׁ֔הּ וַיַּמְלִיכֶ֖הָ תַּ֥חַת וַשְׁתִּֽי׃ 17
೧೭ಅರಸನು ಎಲ್ಲಾ ಸ್ತ್ರೀಯರಲ್ಲಿ ಎಸ್ತೇರಳನ್ನು ಮೆಚ್ಚಿದನು. ಎಲ್ಲಾ ಕನ್ಯೆಯರಲ್ಲಿ ಆಕೆಯು ಅವನ ದಯೆಗೂ, ಪ್ರೀತಿಗೂ ಪಾತ್ರಳಾದುದರಿಂದ ಅವನು ರಾಜ ಮುಕುಟವನ್ನು ಆಕೆಯ ತಲೆಯ ಮೇಲಿಟ್ಟು, ಆಕೆಯನ್ನು ವಷ್ಟಿಗೆ ಬದಲಾಗಿ ರಾಣಿಯನ್ನಾಗಿ ಮಾಡಿಕೊಂಡನು.
וַיַּ֨עַשׂ הַמֶּ֜לֶךְ מִשְׁתֶּ֣ה גָד֗וֹל לְכָל־שָׂרָיו֙ וַעֲבָדָ֔יו אֵ֖ת מִשְׁתֵּ֣ה אֶסְתֵּ֑ר וַהֲנָחָ֤ה לַמְּדִינוֹת֙ עָשָׂ֔ה וַיִּתֵּ֥ן מַשְׂאֵ֖ת כְּיַ֥ד הַמֶּֽלֶךְ׃ 18
೧೮ಅವನು ತನ್ನ ಎಲ್ಲಾ ಸರದಾರರಿಗೂ ಮತ್ತು ಪರಿವಾರದವರಿಗೂ ಎಸ್ತೇರಳ ಔತಣ ಎಂದು ದೊಡ್ಡ ಔತಣವನ್ನು ಮಾಡಿಸಿ, ಎಲ್ಲಾ ಸಂಸ್ಥಾನಗಳಲ್ಲಿಯೂ ಸೆರೆಯವರನ್ನು ಬಿಡಿಸಿ, ರಾಜರ ಘನತೆಗೆ ತಕ್ಕಂತೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು.
וּבְהִקָּבֵ֥ץ בְּתוּל֖וֹת שֵׁנִ֑ית וּמָרְדֳּכַ֖י יֹשֵׁ֥ב בְּשַֽׁעַר־הַמֶּֽלֶךְ ׃ 19
೧೯ಎರಡನೆಯ ಬಾರಿ ಕನ್ಯೆಯರನ್ನು ಸೇರಿಸುತ್ತಿದ್ದಾಗ ಮೊರ್ದೆಕೈಯು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತುಕೊಂಡಿದ್ದನು.
אֵ֣ין אֶסְתֵּ֗ר מַגֶּ֤דֶת מֽוֹלַדְתָּהּ֙ וְאֶת־עַמָּ֔הּ כַּאֲשֶׁ֛ר צִוָּ֥ה עָלֶ֖יהָ מָרְדֳּכָ֑י וְאֶת־מַאֲמַ֤ר מָרְדֳּכַי֙ אֶסְתֵּ֣ר עֹשָׂ֔ה כַּאֲשֶׁ֛ר הָיְתָ֥ה בְאָמְנָ֖ה אִתּֽוֹ׃ ס 20
೨೦ಎಸ್ತೇರಳಾದರೋ ಮೊರ್ದೆಕೈಯ ಪರಾಂಬರಿಕೆಯಲ್ಲಿದ್ದ ದಿನಗಳಲ್ಲಿ ಹೇಗೋ ಹಾಗೆ ಆಗಲೂ ಅವನ ಆಜ್ಞೆಯನ್ನು ಅನುಸರಿಸುವವಳಾಗಿ ತಾನು ಇಂಥ ಕುಲದವಳು, ಇಂಥ ಜನಾಂಗದವಳು ಎಂಬುದನ್ನು ಯಾರಿಗೂ ತೋರ್ಪಡಿಸಿಕೊಳ್ಳಲಿಲ್ಲ.
בַּיָּמִ֣ים הָהֵ֔ם וּמָרְדֳּכַ֖י יֹשֵׁ֣ב בְּשַֽׁעַר־הַמֶּ֑לֶךְ קָצַף֩ בִּגְתָ֨ן וָתֶ֜רֶשׁ שְׁנֵֽי־סָרִיסֵ֤י הַמֶּ֙לֶךְ֙ מִשֹּׁמְרֵ֣י הַסַּ֔ף וַיְבַקְשׁוּ֙ לִשְׁלֹ֣חַ יָ֔ד בַּמֶּ֖לֶךְ אֲחַשְׁוֵֽרֹשׁ׃ 21
೨೧ಆ ದಿನಗಳಲ್ಲಿ ಮೊರ್ದೆಕೈಯು ಅರಮನೆಯ ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ರಾಜಕಂಚುಕಿಯರು ಕೋಪವುಳ್ಳವರಾಗಿ ಅರಸನಾದ ಅಹಷ್ವೇರೋಷನಿಗೆ ವಿರುದ್ಧವಾಗಿ ಕೈಯೆತ್ತಬೇಕೆಂದು ಒಳಸಂಚು ಮಾಡಿದ್ದರು.
וַיִּוָּדַ֤ע הַדָּבָר֙ לְמָרְדֳּכַ֔י וַיַּגֵּ֖ד לְאֶסְתֵּ֣ר הַמַּלְכָּ֑ה וַתֹּ֧אמֶר אֶסְתֵּ֛ר לַמֶּ֖לֶךְ בְּשֵׁ֥ם מָרְדֳּכָֽי׃ 22
೨೨ಈ ಸಂಗತಿಯು ಮೊರ್ದೆಕೈಗೆ ಗೊತ್ತಾದಾಗ ಅವನು ಅದನ್ನು ಎಸ್ತೇರ್ ರಾಣಿಗೆ ತಿಳಿಸಿದನು. ಆಕೆಯು ಅವನ ಹೆಸರನ್ನು ಅರಸನಿಗೆ ಹೇಳಿ ಆ ಸಂಗತಿಯನ್ನು ತಿಳಿಸಿದಳು.
וַיְבֻקַּ֤שׁ הַדָּבָר֙ וַיִּמָּצֵ֔א וַיִּתָּל֥וּ שְׁנֵיהֶ֖ם עַל־עֵ֑ץ וַיִּכָּתֵ֗ב בְּסֵ֛פֶר דִּבְרֵ֥י הַיָּמִ֖ים לִפְנֵ֥י הַמֶּֽלֶךְ׃ פ 23
೨೩ಈ ವಿಷಯವು ವಿಚಾರಣೆಗೆ ಬಂದಾಗ ಅದು ನಿಜವೆಂದು ಸಾಬೀತಾದುದರಿಂದ ಆ ಇಬ್ಬರನ್ನೂ ಗಲ್ಲಿಗೆ ಹಾಕಿಸಿದರು. ಆ ಸಂಗತಿಯು ರಾಜನ ದಿನಚರಿಪುಸ್ತಕದಲ್ಲಿ ಬರೆದು ದಾಖಲಿಸಲಾಯಿತು.

< אֶסְתֵר 2 >