< יְחֶזְקֵאל 19 >
וְאַתָּה֙ שָׂ֣א קִינָ֔ה אֶל־נְשִׂיאֵ֖י יִשְׂרָאֵֽל׃ | 1 |
೧“ಇಸ್ರಾಯೇಲಿನ ರಾಜರ ವಿಷಯವಾಗಿ ಈ ಶೋಕ ಗೀತೆಯನ್ನು ಹಾಡು,
וְאָמַרְתָּ֗ מָ֤ה אִמְּךָ֙ לְבִיָּ֔א בֵּ֥ין אֲרָי֖וֹת רָבָ֑צָה בְּת֥וֹךְ כְּפִרִ֖ים רִבְּתָ֥ה גוּרֶֽיהָ׃ | 2 |
೨‘ಆಹಾ, ನಿನ್ನ ತಾಯಿಯು ಸಿಂಹಗಳ ಮಧ್ಯೆ ಸಿಂಹಿಣಿ, ಸಾಕಿದಳು ತನ್ನ ಮರಿಗಳನ್ನು, ಯುವ ಸಿಂಹಗಳ ನಡುವೆ ವಾಸಿಸಿ.
וַתַּ֛עַל אֶחָ֥ד מִגֻּרֶ֖יהָ כְּפִ֣יר הָיָ֑ה וַיִּלְמַ֥ד לִטְרָף־טֶ֖רֶף אָדָ֥ם אָכָֽל׃ | 3 |
೩ಅವಳು ಬೆಳೆಯಿಸಿದ ಒಂದು ಮರಿಯು ಪ್ರಾಯದ ಸಿಂಹವಾಗಿ, ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಲಾರಂಭಿಸಿತು.
וַיִּשְׁמְע֥וּ אֵלָ֛יו גּוֹיִ֖ם בְּשַׁחְתָּ֣ם נִתְפָּ֑שׂ וַיְבִאֻ֥הוּ בַֽחַחִ֖ים אֶל־אֶ֥רֶץ מִצְרָֽיִם׃ | 4 |
೪ಜನಾಂಗಗಳು ಈ ವಾರ್ತೆಯನ್ನು ಕೇಳಿ, ಅದಕ್ಕೆ ಗುಂಡಿ ತೋಡಲು ಅದು ಅಲ್ಲಿ ಸಿಕ್ಕಿಬಿದ್ದಿತು; ಅದನ್ನು ಸರಪಣಿಗಳಿಂದ ಬಿಗಿದು ಐಗುಪ್ತ ದೇಶಕ್ಕೆ ಒಯ್ದರು.
וַתֵּ֙רֶא֙ כִּ֣י נֽוֹחֲלָ֔ה אָבְדָ֖ה תִּקְוָתָ֑הּ וַתִּקַּ֛ח אֶחָ֥ד מִגֻּרֶ֖יהָ כְּפִ֥יר שָׂמָֽתְהוּ׃ | 5 |
೫ಆ ಸಿಂಹಿಣಿಯು ತಾನು ಕಾದುಕೊಂಡಿದ್ದರೂ, ತನ್ನ ನಿರೀಕ್ಷೆಯು ಹಾಳಾಯಿತೆಂದು ತನ್ನ ಮರಿಗಳಲ್ಲಿ ಇನ್ನೊಂದನ್ನು ತೆಗೆದು ಸಾಕಿ, ಪ್ರಾಯಕ್ಕೆ ತಂದಳು.
וַיִּתְהַלֵּ֥ךְ בְּתוֹךְ־אֲרָי֖וֹת כְּפִ֣יר הָיָ֑ה וַיִּלְמַ֥ד לִטְרָף־טֶ֖רֶף אָדָ֥ם אָכָֽל׃ | 6 |
೬ಅದು ಪ್ರಾಯದ ಸಿಂಹವಾಗಿ, ಸಿಂಹಗಳ ನಡುವೆ ತಿರುಗುತ್ತಾ ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಲಾರಂಭಿಸಿತು.
וַיֵּ֙דַע֙ אַלְמְנוֹתָ֔יו וְעָרֵיהֶ֖ם הֶחֱרִ֑יב וַתֵּ֤שַׁם אֶ֙רֶץ֙ וּמְלֹאָ֔הּ מִקּ֖וֹל שַׁאֲגָתֽוֹ׃ | 7 |
೭ಅದು ಪಟ್ಟಣಗಳನ್ನು ಹಾಳುಮಾಡಿ, ಬಹಳ ಮಂದಿ ವಿಧವೆಯರಾದವರನ್ನು ಕೆಡಿಸಿತು, ಅದರ ಗರ್ಜನೆಯ ಶಬ್ದಕ್ಕೆ ದೇಶವು ಮತ್ತು ಅದರಲ್ಲಿದ್ದದ್ದೆಲ್ಲವೂ ಕ್ಷೀಣವಾದವು.
וַיִּתְּנ֨וּ עָלָ֥יו גּוֹיִ֛ם סָבִ֖יב מִמְּדִינ֑וֹת וַֽיִּפְרְשׂ֥וּ עָלָ֛יו רִשְׁתָּ֖ם בְּשַׁחְתָּ֥ם נִתְפָּֽשׂ׃ | 8 |
೮ಆಗ ಜನಾಂಗಗಳು ಸುತ್ತಲಿನ ರಾಷ್ಟ್ರಗಳಿಂದ ಕೂಡಿ ಬಂದು, ಅದಕ್ಕೆ ವಿರುದ್ಧವಾಗಿ ನಿಂತು, ಬಲೆಯೊಡ್ಡಿ ಗುಂಡಿ ತೋಡಲು, ಅದು ಅಲ್ಲಿ ಸಿಕ್ಕಿಬಿದ್ದಿತು.
וַֽיִּתְּנֻ֤הוּ בַסּוּגַר֙ בַּֽחַחִ֔ים וַיְבִאֻ֖הוּ אֶל־מֶ֣לֶךְ בָּבֶ֑ל יְבִאֻ֙הוּ֙ בַּמְּצֹד֔וֹת לְמַ֗עַן לֹא־יִשָּׁמַ֥ע קוֹל֛וֹ ע֖וֹד אֶל־הָרֵ֥י יִשְׂרָאֵֽל׃ פ | 9 |
೯ಅದನ್ನು ಸರಪಣಿಗಳಿಂದ ಬಿಗಿದು, ಪಂಜರದಲ್ಲಿ ಹಾಕಿ, ಬಾಬೆಲಿನ ಅರಸನ ಬಳಿಗೆ ತಂದವು. ಅದರ ಧ್ವನಿಯು ಇಸ್ರಾಯೇಲಿನ ಪರ್ವತಗಳಲ್ಲಿ ಇನ್ನು ಕೇಳಿಸದಂತೆ ಅದನ್ನು ಕೋಟೆಯೊಳಗೆ ಸೇರಿಸಿ ಬಿಟ್ಟವು.
אִמְּךָ֥ כַגֶּ֛פֶן בְּדָמְךָ֖ עַל־מַ֣יִם שְׁתוּלָ֑ה פֹּֽרִיָּה֙ וַֽעֲנֵפָ֔ה הָיְתָ֖ה מִמַּ֥יִם רַבִּֽים׃ | 10 |
೧೦“‘ನಿನ್ನ ಹೆತ್ತ ತಾಯಿ ನೀರಾವರಿಯಲ್ಲಿ ನಾಟಿಕೊಂಡಿದ್ದ ದ್ರಾಕ್ಷಾಲತೆಯಾಗಿದ್ದಳು, ಆ ಲತೆಯು ತುಂಬಾ ನೀರಾವರಿಯಿಂದ ಫಲವತ್ತಾಗಿಯೂ, ಪೊದೆಯಾಗಿಯೂ ಬೆಳೆದಿತ್ತು.
וַיִּֽהְיוּ־לָ֞הּ מַטּ֣וֹת עֹ֗ז אֶל־שִׁבְטֵי֙ מֹֽשְׁלִ֔ים וַתִּגְבַּ֥הּ קֽוֹמָת֖וֹ עַל־בֵּ֣ין עֲבֹתִ֑ים וַיֵּרָ֣א בְגָבְה֔וֹ בְּרֹ֖ב דָּלִיֹּתָֽיו׃ | 11 |
೧೧ಅದರಲ್ಲಿ ಆಳುವವರ ರಾಜದಂಡಗಳಿಗೆ ಯೋಗ್ಯವಾದ ಗಟ್ಟಿಕೊಂಬೆಗಳಿದ್ದವು, ಅವುಗಳ ಎತ್ತರವು ಉಳಿದ ರೆಂಬೆಗಳಿಗಿಂತ ಹೆಚ್ಚಾಗಿತ್ತು, ಬಹಳ ರೆಂಬೆಗಳ ಮಧ್ಯದಲ್ಲಿ ಉದ್ದುದ್ದವಾಗಿ ಕಾಣಿಸಿದವು.
וַתֻּתַּ֤שׁ בְּחֵמָה֙ לָאָ֣רֶץ הֻשְׁלָ֔כָה וְר֥וּחַ הַקָּדִ֖ים הוֹבִ֣ישׁ פִּרְיָ֑הּ הִתְפָּרְק֧וּ וְיָבֵ֛שׁוּ מַטֵּ֥ה עֻזָּ֖הּ אֵ֥שׁ אֲכָלָֽתְהוּ׃ | 12 |
೧೨ಆದರೆ ಆ ಲತೆಯು ರೋಷದಲ್ಲಿ ಕೀಳಲ್ಪಟ್ಟು, ನೆಲದ ಮೇಲೆ ಬಿಸಾಡಲ್ಪಟ್ಟಿತು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿ ಕೊಂಬೆಗಳು ಮುರಿದು ಒಣಗಿ ಹೋದವು, ಬೆಂಕಿಯು ಅವುಗಳನ್ನು ನುಂಗಿತು.
וְעַתָּ֖ה שְׁתוּלָ֣ה בַמִּדְבָּ֑ר בְּאֶ֖רֶץ צִיָּ֥ה וְצָמָֽא׃ | 13 |
೧೩ಈಗ ಅದು ನೀರಿಲ್ಲದೆ ಬೆಂಗಾಡಿನಲ್ಲಿ ನಾಟಿಕೊಂಡಿದೆ.
וַתֵּצֵ֨א אֵ֜שׁ מִמַּטֵּ֤ה בַדֶּ֙יהָ֙ פִּרְיָ֣הּ אָכָ֔לָה וְלֹא־הָ֥יָה בָ֛הּ מַטֵּה־עֹ֖ז שֵׁ֣בֶט לִמְשׁ֑וֹל קִ֥ינָה הִ֖יא וַתְּהִ֥י לְקִינָֽה׃ פ | 14 |
೧೪ಬೆಂಕಿಯು ಅದರ ಕೊಂಬೆಗಳಿಂದ ಹೊರಟು ಅದರ ಫಲವನ್ನು ನುಂಗಿ ಬಿಟ್ಟಿದೆ. ಆದುದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿ ಕೊಂಬೆಯೂ ಅದರಲ್ಲಿ ಉಳಿದಿಲ್ಲ.’ ಇದು ಶೋಕ ಗೀತೆ, ಶೋಕ ಗೀತೆಯಾಗಿ ವಾಡಿಕೆಯಲ್ಲಿದೆ.”