< בְּרֵאשִׁית 12 >
וַיֹּ֤אמֶר יְהוָה֙ אֶל־אַבְרָ֔ם לֶךְ־לְךָ֛ מֵאַרְצְךָ֥ וּמִמּֽוֹלַדְתְּךָ֖ וּמִבֵּ֣ית אָבִ֑יךָ אֶל־הָאָ֖רֶץ אֲשֶׁ֥ר אַרְאֶֽךָּ׃ | 1 |
ಯೆಹೋವ ದೇವರು ಅಬ್ರಾಮನಿಗೆ ಹೀಗೆ ಹೇಳಿದರು, “ನೀನು ನಿನ್ನ ಸ್ವದೇಶದಿಂದಲೂ ಬಂಧುಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರಬಂದು, ನಾನು ನಿನಗೆ ತೋರಿಸುವ ನಾಡಿಗೆ ಹೋಗು.
וְאֶֽעֶשְׂךָ֙ לְג֣וֹי גָּד֔וֹל וַאֲבָ֣רֶכְךָ֔ וַאֲגַדְּלָ֖ה שְׁמֶ֑ךָ וֶהְיֵ֖ה בְּרָכָֽה׃ | 2 |
“ನಾನು ನಿನ್ನನ್ನು ದೊಡ್ಡ ಜನಾಂಗದವನನ್ನಾಗಿ ಮಾಡಿ, ನಿನ್ನನ್ನು ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಸಿದ್ಧ ಮಾಡುವೆನು. ನೀನು ಆಶೀರ್ವಾದವಾಗಿ ಇರುವಿ.
וַאֲבָֽרֲכָה֙ מְבָ֣רְכֶ֔יךָ וּמְקַלֶּלְךָ֖ אָאֹ֑ר וְנִבְרְכ֣וּ בְךָ֔ כֹּ֖ל מִשְׁפְּחֹ֥ת הָאֲדָמָֽה׃ | 3 |
ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು. ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.”
וַיֵּ֣לֶךְ אַבְרָ֗ם כַּאֲשֶׁ֨ר דִּבֶּ֤ר אֵלָיו֙ יְהוָ֔ה וַיֵּ֥לֶךְ אִתּ֖וֹ ל֑וֹט וְאַבְרָ֗ם בֶּן־חָמֵ֤שׁ שָׁנִים֙ וְשִׁבְעִ֣ים שָׁנָ֔ה בְּצֵאת֖וֹ מֵחָרָֽן׃ | 4 |
ಆದ್ದರಿಂದ ಯೆಹೋವ ದೇವರು ತನಗೆ ಹೇಳಿದ ಪ್ರಕಾರ, ಅಬ್ರಾಮನು ಹೊರಟುಹೋದನು. ಲೋಟನು ಅವನೊಂದಿಗೆ ಹೋದನು. ಅಬ್ರಾಮನು ಹಾರಾನಿನಿಂದ ಹೊರಟಾಗ ಎಪ್ಪತ್ತೈದು ವರ್ಷದವನಾಗಿದ್ದನು.
וַיִּקַּ֣ח אַבְרָם֩ אֶת־שָׂרַ֨י אִשְׁתּ֜וֹ וְאֶת־ל֣וֹט בֶּן־אָחִ֗יו וְאֶת־כָּל־רְכוּשָׁם֙ אֲשֶׁ֣ר רָכָ֔שׁוּ וְאֶת־הַנֶּ֖פֶשׁ אֲשֶׁר־עָשׂ֣וּ בְחָרָ֑ן וַיֵּצְא֗וּ לָלֶ֙כֶת֙ אַ֣רְצָה כְּנַ֔עַן וַיָּבֹ֖אוּ אַ֥רְצָה כְּנָֽעַן׃ | 5 |
ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ಸಹೋದರನ ಮಗ ಲೋಟನನ್ನೂ, ತಾವು ಕೂಡಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ, ಹಾರಾನಿನಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಜನರನ್ನೂ ತಮ್ಮ ಸಂಗಡ ಕರೆದುಕೊಂಡು ಕಾನಾನ್ ದೇಶಕ್ಕೆ ಸೇರಿದನು.
וַיַּעֲבֹ֤ר אַבְרָם֙ בָּאָ֔רֶץ עַ֚ד מְק֣וֹם שְׁכֶ֔ם עַ֖ד אֵל֣וֹן מוֹרֶ֑ה וְהַֽכְּנַעֲנִ֖י אָ֥ז בָּאָֽרֶץ׃ | 6 |
ಅಬ್ರಾಮನು ಆ ದೇಶದಲ್ಲಿ ಶೆಕೆಮ್ ಎಂಬ ಸ್ಥಳದ ಮೋರೆ ಎಂಬ ಮಹಾವೃಕ್ಷದವರೆಗೆ ಪ್ರಯಾಣಮಾಡಿದನು. ಆಗ ಕಾನಾನ್ಯರು ಆ ದೇಶದಲ್ಲಿ ಇದ್ದರು.
וַיֵּרָ֤א יְהוָה֙ אֶל־אַבְרָ֔ם וַיֹּ֕אמֶר לְזַ֨רְעֲךָ֔ אֶתֵּ֖ן אֶת־הָאָ֣רֶץ הַזֹּ֑את וַיִּ֤בֶן שָׁם֙ מִזְבֵּ֔חַ לַיהוָ֖ה הַנִּרְאֶ֥ה אֵלָֽיו׃ | 7 |
ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.
וַיַּעְתֵּ֨ק מִשָּׁ֜ם הָהָ֗רָה מִקֶּ֛דֶם לְבֵֽית־אֵ֖ל וַיֵּ֣ט אָהֳלֹ֑ה בֵּֽית־אֵ֤ל מִיָּם֙ וְהָעַ֣י מִקֶּ֔דֶם וַיִּֽבֶן־שָׁ֤ם מִזְבֵּ֙חַ֙ לַֽיהוָ֔ה וַיִּקְרָ֖א בְּשֵׁ֥ם יְהוָֽה׃ | 8 |
ಅಲ್ಲಿಂದ ಅವರು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ, ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರೂ ಇರುವ ಹಾಗೆ ತನ್ನ ಗುಡಾರವನ್ನು ಹಾಕಿಕೊಂಡನು. ಅಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಯೆಹೋವ ದೇವರ ಹೆಸರನ್ನು ಆರಾಧಿಸಿದನು.
וַיִּסַּ֣ע אַבְרָ֔ם הָל֥וֹךְ וְנָס֖וֹעַ הַנֶּֽגְבָּה׃ פ | 9 |
ಅಬ್ರಾಮನು ಪ್ರಯಾಣಮಾಡಿ, ನೆಗೆವ ಕಡೆಗೆ ಹೊರಟನು.
וַיְהִ֥י רָעָ֖ב בָּאָ֑רֶץ וַיֵּ֨רֶד אַבְרָ֤ם מִצְרַ֙יְמָה֙ לָג֣וּר שָׁ֔ם כִּֽי־כָבֵ֥ד הָרָעָ֖ב בָּאָֽרֶץ׃ | 10 |
ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ, ಅಬ್ರಾಮನು ಈಜಿಪ್ಟಿನಲ್ಲಿ ಕೆಲವು ಸಮಯ ಇರಲು ಇಳಿದು ಹೋದನು. ಏಕೆಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.
וַיְהִ֕י כַּאֲשֶׁ֥ר הִקְרִ֖יב לָב֣וֹא מִצְרָ֑יְמָה וַיֹּ֙אמֶר֙ אֶל־שָׂרַ֣י אִשְׁתּ֔וֹ הִנֵּה־נָ֣א יָדַ֔עְתִּי כִּ֛י אִשָּׁ֥ה יְפַת־מַרְאֶ֖ה אָֽתְּ׃ | 11 |
ಅವನು ಈಜಿಪ್ಟನ್ನು ಸಮೀಪಿಸುತ್ತಿದ್ದಾಗ, ತನ್ನ ಹೆಂಡತಿ ಸಾರಯಳಿಗೆ, “ನೀನು ನೋಡುವುದಕ್ಕೆ ರೂಪವತಿಯೆಂದು ನನಗೆ ತಿಳಿದಿದೆ.
וְהָיָ֗ה כִּֽי־יִרְא֤וּ אֹתָךְ֙ הַמִּצְרִ֔ים וְאָמְר֖וּ אִשְׁתּ֣וֹ זֹ֑את וְהָרְג֥וּ אֹתִ֖י וְאֹתָ֥ךְ יְחַיּֽוּ׃ | 12 |
ಹೀಗಿರುವುದರಿಂದ ಈಜಿಪ್ಟಿನವರು ನಿನ್ನನ್ನು ಕಂಡು, ‘ಈಕೆಯು ಅವನ ಹೆಂಡತಿ’ ಎಂದು ಹೇಳಿ, ನನ್ನನ್ನು ಕೊಂದುಹಾಕಿ, ನಿನ್ನನ್ನು ಉಳಿಸುವರು.
אִמְרִי־נָ֖א אֲחֹ֣תִי אָ֑תְּ לְמַ֙עַן֙ יִֽיטַב־לִ֣י בַעֲבוּרֵ֔ךְ וְחָיְתָ֥ה נַפְשִׁ֖י בִּגְלָלֵֽךְ׃ | 13 |
ನಿನ್ನ ದೆಸೆಯಿಂದ ನನಗೆ ಒಳ್ಳೆಯದಾಗಿ, ನನ್ನ ಪ್ರಾಣವು ಉಳಿಯುವಂತೆ ನೀನು ನನ್ನ ಸಹೋದರಿ ಎಂದು ದಯಮಾಡಿ ಹೇಳಬೇಕು,” ಎಂದು ಹೇಳಿದನು.
וַיְהִ֕י כְּב֥וֹא אַבְרָ֖ם מִצְרָ֑יְמָה וַיִּרְא֤וּ הַמִּצְרִים֙ אֶת־הָ֣אִשָּׁ֔ה כִּֽי־יָפָ֥ה הִ֖וא מְאֹֽד׃ | 14 |
ಅಬ್ರಾಮನು ಈಜಿಪ್ಟಿಗೆ ಬಂದಾಗ, ಈಜಿಪ್ಟಿನವರು, ಆ ಸಾರಯಳು ಬಹಳ ಸುಂದರಿ ಎಂದುಕೊಂಡರು.
וַיִּרְא֤וּ אֹתָהּ֙ שָׂרֵ֣י פַרְעֹ֔ה וַיְהַֽלְל֥וּ אֹתָ֖הּ אֶל־פַּרְעֹ֑ה וַתֻּקַּ֥ח הָאִשָּׁ֖ה בֵּ֥ית פַּרְעֹֽה׃ | 15 |
ಫರೋಹನ ಅಧಿಕಾರಿಗಳು ಆಕೆಯನ್ನು ನೋಡಿ, ಫರೋಹನ ಮುಂದೆ ಆಕೆಯನ್ನು ಹೊಗಳಿ, ಆ ಸ್ತ್ರೀಯನ್ನು ಅವನ ಅರಮನೆಗೆ ಕರೆದುಕೊಂಡು ಹೋದರು.
וּלְאַבְרָ֥ם הֵיטִ֖יב בַּעֲבוּרָ֑הּ וַֽיְהִי־ל֤וֹ צֹאן־וּבָקָר֙ וַחֲמֹרִ֔ים וַעֲבָדִים֙ וּשְׁפָחֹ֔ת וַאֲתֹנֹ֖ת וּגְמַלִּֽים׃ | 16 |
ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೆಯದನ್ನು ಮಾಡಿದನು. ಅವನಿಗೆ ಕುರಿ, ಎತ್ತು, ಕತ್ತೆಗಳೂ ದಾಸದಾಸಿಯರೂ ಹೆಣ್ಣು ಕತ್ತೆಗಳೂ ಒಂಟೆಗಳೂ ದೊರೆತವು.
וַיְנַגַּ֨ע יְהוָ֧ה ׀ אֶת־פַּרְעֹ֛ה נְגָעִ֥ים גְּדֹלִ֖ים וְאֶת־בֵּית֑וֹ עַל־דְּבַ֥ר שָׂרַ֖י אֵ֥שֶׁת אַבְרָֽם׃ | 17 |
ಆದರೆ ಯೆಹೋವ ದೇವರು ಫರೋಹನನ್ನೂ, ಅವನ ಮನೆಯನ್ನೂ ಅಬ್ರಾಮನ ಹೆಂಡತಿ ಸಾರಯಳಿಗಾಗಿ ಭಯಂಕರವಾದ ರೋಗಗಳಿಂದ ಬಾಧಿಸಿದರು.
וַיִּקְרָ֤א פַרְעֹה֙ לְאַבְרָ֔ם וַיֹּ֕אמֶר מַה־זֹּ֖את עָשִׂ֣יתָ לִּ֑י לָ֚מָּה לֹא־הִגַּ֣דְתָּ לִּ֔י כִּ֥י אִשְׁתְּךָ֖ הִֽוא׃ | 18 |
ಅನಂತರ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿ ಎಂದು ಯಾಕೆ ನನಗೆ ತಿಳಿಸಲಿಲ್ಲ?
לָמָ֤ה אָמַ֙רְתָּ֙ אֲחֹ֣תִי הִ֔וא וָאֶקַּ֥ח אֹתָ֛הּ לִ֖י לְאִשָּׁ֑ה וְעַתָּ֕ה הִנֵּ֥ה אִשְׁתְּךָ֖ קַ֥ח וָלֵֽךְ׃ | 19 |
‘ಆಕೆಯು ನನ್ನ ಸಹೋದರಿ,’ ಎಂದು ಯಾಕೆ ಹೇಳಿದೆ? ನೀನು ಹಾಗೆ ಹೇಳಿದ್ದರಿಂದ ಆಕೆಯನ್ನು ನನಗೆ ಹೆಂಡತಿಯಾಗಿ ಇಟ್ಟುಕೊಳ್ಳುವುದರಲ್ಲಿದ್ದೆನು. ಆದರೆ ಈಗ, ನಿನ್ನ ಹೆಂಡತಿ, ಈಕೆಯನ್ನು ನೀನು ಕರೆದುಕೊಂಡು ಹೋಗು,” ಎಂದನು.
וַיְצַ֥ו עָלָ֛יו פַּרְעֹ֖ה אֲנָשִׁ֑ים וַֽיְשַׁלְּח֥וּ אֹת֛וֹ וְאֶת־אִשְׁתּ֖וֹ וְאֶת־כָּל־אֲשֶׁר־לֽוֹ׃ | 20 |
ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಆಜ್ಞಾಪಿಸಲು, ಅವರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗಿದ್ದ ಎಲ್ಲದರ ಸಮೇತ ಅಲ್ಲಿಂದ ಕಳುಹಿಸಿಬಿಟ್ಟನು.