< בְּרֵאשִׁית 15 >

אַחַ֣ר ׀ הַדְּבָרִ֣ים הָאֵ֗לֶּה הָיָ֤ה דְבַר־יְהוָה֙ אֶל־אַבְרָ֔ם בַּֽמַּחֲזֶ֖ה לֵאמֹ֑ר אַל־תִּירָ֣א אַבְרָ֗ם אָנֹכִי֙ מָגֵ֣ן לָ֔ךְ שְׂכָרְךָ֖ הַרְבֵּ֥ה מְאֹֽד׃ 1
ಇವುಗಳಾದ ಮೇಲೆ ಯೆಹೋವ ದೇವರ ವಾಕ್ಯವು ಅಬ್ರಾಮನಿಗೆ ದರ್ಶನದಲ್ಲಿ ಉಂಟಾಗಿ ಹೇಳಿದ್ದೇನೆಂದರೆ: “ಅಬ್ರಾಮನೇ, ಭಯಪಡಬೇಡ. ನಾನು ನಿನಗೆ ಗುರಾಣಿಯಾಗಿದ್ದೇನೆ. ನಾನೇ ನಿನಗೆ ಅತ್ಯಧಿಕ ಬಹುಮಾನವಾಗಿದ್ದೇನೆ.”
וַיֹּ֣אמֶר אַבְרָ֗ם אֲדֹנָ֤י יֱהוִה֙ מַה־תִּתֶּן־לִ֔י וְאָנֹכִ֖י הוֹלֵ֣ךְ עֲרִירִ֑י וּבֶן־מֶ֣שֶׁק בֵּיתִ֔י ה֖וּא דַּמֶּ֥שֶׂק אֱלִיעֶֽזֶר׃ 2
ಅದಕ್ಕೆ ಅಬ್ರಾಮನು, “ಸಾರ್ವಭೌಮ ಯೆಹೋವ ದೇವರೇ, ಮಕ್ಕಳಿಲ್ಲದವನಾಗಿರುವ ನನಗೆ ಏನು ಕೊಡುವಿರಿ? ಈ ದಮಸ್ಕದ ಎಲೀಯೆಜೆರನಿಗೆ ನನ್ನ ಆಸ್ತಿ ಪಾಲಾಗಿಬಿಡುವುದು,” ಎಂದನು.
וַיֹּ֣אמֶר אַבְרָ֔ם הֵ֣ן לִ֔י לֹ֥א נָתַ֖תָּה זָ֑רַע וְהִנֵּ֥ה בֶן־בֵּיתִ֖י יוֹרֵ֥שׁ אֹתִֽי׃ 3
ಅನಂತರ ಅಬ್ರಾಮನು, “ನೀವು ನನಗೆ ಸಂತಾನವನ್ನು ಕೊಡಲಿಲ್ಲ. ನನ್ನ ಮನೆಯಲ್ಲಿರುವ ದಾಸನೇ ಉತ್ತರಾಧಿಕಾರಿಯಾಗಿರುವನು,” ಎಂದನು.
וְהִנֵּ֨ה דְבַר־יְהוָ֤ה אֵלָיו֙ לֵאמֹ֔ר לֹ֥א יִֽירָשְׁךָ֖ זֶ֑ה כִּי־אִם֙ אֲשֶׁ֣ר יֵצֵ֣א מִמֵּעֶ֔יךָ ה֖וּא יִֽירָשֶֽׁךָ׃ 4
ಆಗ ಯೆಹೋವ ದೇವರ ವಾಕ್ಯವು, “ಈ ಮನುಷ್ಯನು ನಿನ್ನ ಉತ್ತರಾಧಿಕಾರಿಯಾಗುವುದಿಲ್ಲ. ನಿನ್ನಿಂದಲೇ ಹುಟ್ಟಿಬರುವ ನಿನ್ನ ಮಗನು ನಿನ್ನ ವಾರಸುದಾರನಾಗುವನು,” ಎಂದು ಹೇಳಿ,
וַיּוֹצֵ֨א אֹת֜וֹ הַח֗וּצָה וַיֹּ֙אמֶר֙ הַבֶּט־נָ֣א הַשָּׁמַ֗יְמָה וּסְפֹר֙ הַכּ֣וֹכָבִ֔ים אִם־תּוּכַ֖ל לִסְפֹּ֣ר אֹתָ֑ם וַיֹּ֣אמֶר ל֔וֹ כֹּ֥ה יִהְיֶ֖ה זַרְעֶֽךָ׃ 5
ಯೆಹೋವ ದೇವರು ಅವನನ್ನು ಹೊರಗೆ ಕರೆದುಕೊಂಡು ಬಂದು, “ಈಗ ನೀನು ಆಕಾಶವನ್ನು ದೃಷ್ಟಿಸಿ, ನಕ್ಷತ್ರಗಳನ್ನು ಲೆಕ್ಕಿಸಲು ನಿನ್ನಿಂದಾದರೆ, ಲೆಕ್ಕಿಸು. ಅದರಂತೆಯೇ ನಿನ್ನ ಸಂತತಿಯು ಆಗುವುದು,” ಎಂದು ಹೇಳಿದರು.
וְהֶאֱמִ֖ן בַּֽיהוָ֑ה וַיַּחְשְׁבֶ֥הָ לּ֖וֹ צְדָקָֽה׃ 6
ಅಬ್ರಾಮನು ಯೆಹೋವ ದೇವರನ್ನು ನಂಬಿದನು, ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು.
וַיֹּ֖אמֶר אֵלָ֑יו אֲנִ֣י יְהוָ֗ה אֲשֶׁ֤ר הוֹצֵאתִ֙יךָ֙ מֵא֣וּר כַּשְׂדִּ֔ים לָ֧תֶת לְךָ֛ אֶת־הָאָ֥רֶץ הַזֹּ֖את לְרִשְׁתָּֽהּ׃ 7
ದೇವರು ಅವನಿಗೆ, “ಈ ದೇಶವನ್ನು ಸೊತ್ತಾಗಿ ನಿನಗೆ ಕೊಡಲು, ಕಸ್ದೀಯರ ಊರ್ ಎಂಬ ಪ್ರದೇಶದಿಂದ ನಿನ್ನನ್ನು ಹೊರಗೆ ತಂದ ಯೆಹೋವ ದೇವರು ನಾನೇ,” ಎಂದು ಹೇಳಿದರು.
וַיֹּאמַ֑ר אֲדֹנָ֣י יֱהוִ֔ה בַּמָּ֥ה אֵדַ֖ע כִּ֥י אִֽירָשֶֽׁנָּה׃ 8
ಅದಕ್ಕೆ ಅವನು, “ಸಾರ್ವಭೌಮ ಯೆಹೋವ ದೇವರೇ ನಾನು ಅದನ್ನು ನನ್ನ ಸೊತ್ತಾಗಿ ಹೊಂದುವೆನೆಂದು ಯಾವುದರಿಂದ ತಿಳಿದುಕೊಳ್ಳಲಿ?” ಎಂದನು.
וַיֹּ֣אמֶר אֵלָ֗יו קְחָ֥ה לִי֙ עֶגְלָ֣ה מְשֻׁלֶּ֔שֶׁת וְעֵ֥ז מְשֻׁלֶּ֖שֶׁת וְאַ֣יִל מְשֻׁלָּ֑שׁ וְתֹ֖ר וְגוֹזָֽל׃ 9
ಅದಕ್ಕೆ ಯೆಹೋವ ದೇವರು ಅಬ್ರಾಮನಿಗೆ, “ಮೂರು ವರ್ಷದ ಕಡಸನ್ನು, ಮೂರು ವರ್ಷದ ಮೇಕೆಯನ್ನು, ಮೂರು ವರ್ಷದ ಟಗರನ್ನು, ಒಂದು ಬೆಳವಕ್ಕಿಯನ್ನು, ಒಂದು ಪಾರಿವಾಳವನ್ನು ನನಗಾಗಿ ತೆಗೆದುಕೊಂಡು ಬಾ,” ಎಂದರು.
וַיִּֽקַּֽח־ל֣וֹ אֶת־כָּל־אֵ֗לֶּה וַיְבַתֵּ֤ר אֹתָם֙ בַּתָּ֔וֶךְ וַיִּתֵּ֥ן אִישׁ־בִּתְר֖וֹ לִקְרַ֣את רֵעֵ֑הוּ וְאֶת־הַצִפֹּ֖ר לֹ֥א בָתָֽר׃ 10
ಅನಂತರ ಅವನು ಇವುಗಳನ್ನೆಲ್ಲಾ ಯೆಹೋವ ದೇವರಿಗಾಗಿ ತೆಗೆದುಕೊಂಡು ಬಂದು ಎರಡೆರಡು ಹೋಳುಮಾಡಿ, ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು. ಆದರೆ ಅವನು ಪಕ್ಷಿಗಳನ್ನು ತುಂಡು ಮಾಡಲಿಲ್ಲ.
וַיֵּ֥רֶד הָעַ֖יִט עַל־הַפְּגָרִ֑ים וַיַּשֵּׁ֥ב אֹתָ֖ם אַבְרָֽם׃ 11
ರಣಹದ್ದುಗಳು ಆ ಶವಗಳ ಮೇಲೆ ಇಳಿದು ಬಂದಾಗ, ಅಬ್ರಾಮನು ಅವುಗಳನ್ನು ಓಡಿಸಿದನು.
וַיְהִ֤י הַשֶּׁ֙מֶשׁ֙ לָב֔וֹא וְתַרְדֵּמָ֖ה נָפְלָ֣ה עַל־אַבְרָ֑ם וְהִנֵּ֥ה אֵימָ֛ה חֲשֵׁכָ֥ה גְדֹלָ֖ה נֹפֶ֥לֶת עָלָֽיו׃ 12
ಸೂರ್ಯನು ಅಸ್ತಮಿಸಲಾಗಿ ಅಬ್ರಾಮನಿಗೆ ಗಾಢನಿದ್ರೆ ಹತ್ತಿತ್ತು. ಭೀಕರವಾದ ಕಾರ್ಗತ್ತಲು ಅವನ ಮೇಲೆ ಕವಿಯಿತು.
וַיֹּ֣אמֶר לְאַבְרָ֗ם יָדֹ֨עַ תֵּדַ֜ע כִּי־גֵ֣ר ׀ יִהְיֶ֣ה זַרְעֲךָ֗ בְּאֶ֙רֶץ֙ לֹ֣א לָהֶ֔ם וַעֲבָד֖וּם וְעִנּ֣וּ אֹתָ֑ם אַרְבַּ֥ע מֵא֖וֹת שָׁנָֽה׃ 13
ಯೆಹೋವ ದೇವರು ಅಬ್ರಾಮನಿಗೆ, “ನಿನ್ನ ಸಂತತಿಯವರು ತಮ್ಮದಲ್ಲದ ದೇಶದಲ್ಲಿ ಪ್ರವಾಸಿಗಳಾಗಿರುವರು, ಅವರು ಗುಲಾಮರಾಗಿ ನಾಲ್ಕುನೂರು ವರ್ಷಗಳವರೆಗೆ ದಬ್ಬಾಳಿಕೆಗೆ ಗುರಿಯಾಗುವರು ಎಂಬುದನ್ನು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು.
וְגַ֧ם אֶת־הַגּ֛וֹי אֲשֶׁ֥ר יַעֲבֹ֖דוּ דָּ֣ן אָנֹ֑כִי וְאַחֲרֵי־כֵ֥ן יֵצְא֖וּ בִּרְכֻ֥שׁ גָּדֽוֹל׃ 14
ಆದರೆ ಅವರು ಗುಲಾಮರಾಗಿ ಸೇವೆ ಸಲ್ಲಿಸುತ್ತಿದ್ದ ದೇಶಕ್ಕೆ ನಾನು ನ್ಯಾಯತೀರಿಸುವೆನು. ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು.
וְאַתָּ֛ה תָּב֥וֹא אֶל־אֲבֹתֶ֖יךָ בְּשָׁל֑וֹם תִּקָּבֵ֖ר בְּשֵׂיבָ֥ה טוֹבָֽה׃ 15
ನೀನಾದರೋ ಸಮಾಧಾನದಿಂದ ನಿನ್ನ ಪಿತೃಗಳ ಬಳಿಗೆ ಸೇರುವೆ. ಬಹಳ ಮುದಿ ಪ್ರಾಯದವನಾಗಿ ಮರಣಹೊಂದುವೆ.
וְד֥וֹר רְבִיעִ֖י יָשׁ֣וּבוּ הֵ֑נָּה כִּ֧י לֹא־שָׁלֵ֛ם עֲוֺ֥ן הָאֱמֹרִ֖י עַד־הֵֽנָּה׃ 16
ಆಗ ನಾಲ್ಕನೆಯ ಸಂತಾನದವರು ಇಲ್ಲಿಗೆ ತಿರುಗಿ ಬರುವರು. ಏಕೆಂದರೆ ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ,” ಎಂದು ಹೇಳಿದರು.
וַיְהִ֤י הַשֶּׁ֙מֶשׁ֙ בָּ֔אָה וַעֲלָטָ֖ה הָיָ֑ה וְהִנֵּ֨ה תַנּ֤וּר עָשָׁן֙ וְלַפִּ֣יד אֵ֔שׁ אֲשֶׁ֣ר עָבַ֔ר בֵּ֖ין הַגְּזָרִ֥ים הָאֵֽלֶּה׃ 17
ಇದಾದ ಮೇಲೆ ಹೊತ್ತು ಮುಳುಗಿ ಕತ್ತಲಾಗುತ್ತಿರಲು, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಆ ತುಂಡುಗಳ ಮಧ್ಯದಲ್ಲಿ ಹಾದು ಹೋದವು.
בַּיּ֣וֹם הַה֗וּא כָּרַ֧ת יְהוָ֛ה אֶת־אַבְרָ֖ם בְּרִ֣ית לֵאמֹ֑ר לְזַרְעֲךָ֗ נָתַ֙תִּי֙ אֶת־הָאָ֣רֶץ הַזֹּ֔את מִנְּהַ֣ר מִצְרַ֔יִם עַד־הַנָּהָ֥ר הַגָּדֹ֖ל נְהַר־פְּרָֽת׃ 18
ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ
אֶת־הַקֵּינִי֙ וְאֶת־הַקְּנִזִּ֔י וְאֵ֖ת הַקַּדְמֹנִֽי׃ 19
ಕೇನ್ಯರೂ ಕೆನಿಜ್ಜೀಯರೂ ಕದ್ಮೋನಿಯರೂ
וְאֶת־הַחִתִּ֥י וְאֶת־הַפְּרִזִּ֖י וְאֶת־הָרְפָאִֽים׃ 20
ಹಿತ್ತಿಯರೂ ಪೆರಿಜೀಯರೂ ರೆಫಾಯರೂ
וְאֶת־הָֽאֱמֹרִי֙ וְאֶת־הַֽכְּנַעֲנִ֔י וְאֶת־הַגִּרְגָּשִׁ֖י וְאֶת־הַיְבוּסִֽי׃ ס 21
ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ,” ಎಂದು ಹೇಳಿದರು.

< בְּרֵאשִׁית 15 >