< בְּרֵאשִׁית 31 >

וַיִּשְׁמַ֗ע אֶת־דִּבְרֵ֤י בְנֵֽי־לָבָן֙ לֵאמֹ֔ר לָקַ֣ח יַעֲקֹ֔ב אֵ֖ת כָּל־אֲשֶׁ֣ר לְאָבִ֑ינוּ וּמֵאֲשֶׁ֣ר לְאָבִ֔ינוּ עָשָׂ֕ה אֵ֥ת כָּל־הַכָּבֹ֖ד הַזֶּֽה׃ 1
“ನಮ್ಮ ತಂದೆಯ ಆಸ್ತಿಯೆಲ್ಲಾ ಯಾಕೋಬನ ಪಾಲಾಯಿತು, ನಮ್ಮ ತಂದೆಯ ಆಸ್ತಿಯಿಂದಲೇ ಅವನಿಗೆ ಇಷ್ಟೊಂದು ಐಶ್ವರ್ಯವುಂಟಾಯಿತು” ಎಂಬುದಾಗಿ ಲಾಬಾನನ ಮಕ್ಕಳು ಹೇಳಿಕೊಳ್ಳುವ ಮಾತುಗಳು ಯಾಕೋಬನ ಕಿವಿಗೆ ಬಿದ್ದವು.
וַיַּ֥רְא יַעֲקֹ֖ב אֶת־פְּנֵ֣י לָבָ֑ן וְהִנֵּ֥ה אֵינֶ֛נּוּ עִמּ֖וֹ כִּתְמ֥וֹל שִׁלְשֽׁוֹם׃ 2
ಇದಲ್ಲದೆ ಯಾಕೋಬನು ಲಾಬಾನನ ಮುಖಭಾವವನ್ನು ನೋಡಿದಾಗ ಅದು ಮೊದಲಿದ್ದಂತೆ ತೋರಲಿಲ್ಲ.
וַיֹּ֤אמֶר יְהוָה֙ אֶֽל־יַעֲקֹ֔ב שׁ֛וּב אֶל־אֶ֥רֶץ אֲבוֹתֶ֖יךָ וּלְמוֹלַדְתֶּ֑ךָ וְאֶֽהְיֶ֖ה עִמָּֽךְ׃ 3
ಮತ್ತು ಯೆಹೋವನು ಯಾಕೋಬನಿಗೆ, “ನೀನು ನಿನ್ನ ತಂದೆಯ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನೊಂದಿಗೆ ಇರುವೆನು” ಎಂದು ಹೇಳಿದನು.
וַיִּשְׁלַ֣ח יַעֲקֹ֔ב וַיִּקְרָ֖א לְרָחֵ֣ל וּלְלֵאָ֑ה הַשָּׂדֶ֖ה אֶל־צֹאנֽוֹ׃ 4
ಹೀಗಿರುವುದರಿಂದ ಯಾಕೋಬನು ರಾಹೇಲಳನ್ನೂ, ಲೇಯಳನ್ನೂ, ತನ್ನ ಆಡುಕುರಿಗಳ ಹಿಂಡನ್ನು ಮೇಯಿಸುತ್ತಿದ್ದ ಅಡವಿಗೆ ಕರೆಕಳುಹಿಸಿ
וַיֹּ֣אמֶר לָהֶ֗ן רֹאֶ֤ה אָנֹכִי֙ אֶת־פְּנֵ֣י אֲבִיכֶ֔ן כִּֽי־אֵינֶ֥נּוּ אֵלַ֖י כִּתְמֹ֣ל שִׁלְשֹׁ֑ם וֵֽאלֹהֵ֣י אָבִ֔י הָיָ֖ה עִמָּדִֽי׃ 5
ಅವರಿಗೆ ಹೇಳಿದ್ದೇನಂದರೆ, “ನಿಮ್ಮ ತಂದೆಯ ಮುಖಭಾವವು ನನ್ನ ವಿಷಯದಲ್ಲಿ ಮೊದಲಿದ್ದಂತೆ ಇಲ್ಲವೆಂದು ತೋರಿಬಂತು. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾನೆ.
וְאַתֵּ֖נָה יְדַעְתֶּ֑ן כִּ֚י בְּכָל־כֹּחִ֔י עָבַ֖דְתִּי אֶת־אֲבִיכֶֽן׃ 6
ನಾನು ನಿಮ್ಮ ತಂದೆಯ ಸೇವೆಯನ್ನು ಪೂರ್ಣಬಲದಿಂದ ಮಾಡಿದ್ದೇನೆ, ನೀವೂ ಅದನ್ನು ಬಲ್ಲಿರಿ.
וַאֲבִיכֶן֙ הֵ֣תֶל בִּ֔י וְהֶחֱלִ֥ף אֶת־מַשְׂכֻּרְתִּ֖י עֲשֶׂ֣רֶת מֹנִ֑ים וְלֹֽא־נְתָנ֣וֹ אֱלֹהִ֔ים לְהָרַ֖ע עִמָּדִֽי׃ 7
ಆದರೆ ನಿಮ್ಮ ತಂದೆಯು ನನ್ನನ್ನು ವಂಚಿಸಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು, ನನಗೆ ಕೇಡುಮಾಡುವುದಕ್ಕೆ ದೇವರು ಅವನಿಗೆ ಅವಕಾಶಕೊಡಲಿಲ್ಲ.
אִם־כֹּ֣ה יֹאמַ֗ר נְקֻדִּים֙ יִהְיֶ֣ה שְׂכָרֶ֔ךָ וְיָלְד֥וּ כָל־הַצֹּ֖אן נְקֻדִּ֑ים וְאִם־כֹּ֣ה יֹאמַ֗ר עֲקֻדִּים֙ יִהְיֶ֣ה שְׂכָרֶ֔ךָ וְיָלְד֥וּ כָל־הַצֹּ֖אן עֲקֻדִּֽים׃ 8
ನಿಮ್ಮ ತಂದೆ ನನಗೆ, ‘ಚುಕ್ಕೆಯುಳ್ಳದ್ದು ನಿನ್ನ ಸಂಬಳವಾಗಿರಲಿ’ ಎಂದು ಅವನು ಹೇಳಿದಾಗ ಹಿಂಡಿನ ಆಡುಕುರಿಗಳೆಲ್ಲವೂ ಚುಕ್ಕೆಯುಳ್ಳದ್ದನ್ನೇ ಈಯಿತು. ಅವನು ‘ರೇಖೆಯುಳ್ಳದ್ದು ನಿನ್ನ ಸಂಬಳವಾಗಿರಲಿ’ ಎಂದು ಹೇಳಿದಾಗ ಆಡುಕುರಿಗಳೆಲ್ಲವೂ ರೇಖೆಯುಳ್ಳ ಮರಿಗಳನ್ನೇ ಈದವು.
וַיַּצֵּ֧ל אֱלֹהִ֛ים אֶת־מִקְנֵ֥ה אֲבִיכֶ֖ם וַיִּתֶּן־לִֽי׃ 9
ಹೀಗೆ ದೇವರು ನಿಮ್ಮ ತಂದೆಯ ಆಡುಕುರಿಗಳನ್ನು, ಪಶುಪ್ರಾಣಿಗಳನ್ನು ಅವನಿಂದ ತೆಗೆದು ನನಗೆ ಕೊಟ್ಟನು.
וַיְהִ֗י בְּעֵת֙ יַחֵ֣ם הַצֹּ֔אן וָאֶשָּׂ֥א עֵינַ֛י וָאֵ֖רֶא בַּחֲל֑וֹם וְהִנֵּ֤ה הָֽעַתֻּדִים֙ הָעֹלִ֣ים עַל־הַצֹּ֔אן עֲקֻדִּ֥ים נְקֻדִּ֖ים וּבְרֻדִּֽים׃ 10
೧೦“ಕುರಿಗಳು ಗರ್ಭಧರಿಸುವ ಕಾಲದಲ್ಲಿ ನಾನು ಕನಸಿನಲ್ಲಿ ಕಣ್ಣೆತ್ತಿ ನೋಡಿದಾಗ ಕುರಿಗಳೊಂದಿಗೆ ಸಂಗಮಿಸಿದ ಆಡುಗಳೆಲ್ಲವೂ ರೇಖೆ, ಚುಕ್ಕೆ ಮಚ್ಚೆಗಳುಳ್ಳವುಗಳಾಗಿ ಕಾಣಿಸಿದವು.
וַיֹּ֨אמֶר אֵלַ֜י מַלְאַ֧ךְ הָאֱלֹהִ֛ים בַּחֲל֖וֹם יַֽעֲקֹ֑ב וָאֹמַ֖ר הִנֵּֽנִי׃ 11
೧೧ಆ ಕನಸಿನಲ್ಲಿ ದೇವದೂತನು, ‘ಯಾಕೋಬನೇ’ ಎಂದು ಕರೆಯಲು ನಾನು, ‘ಇದ್ದೇನೆ’ ಎಂದು ಹೇಳಿದಾಗ
וַיֹּ֗אמֶר שָׂא־נָ֨א עֵינֶ֤יךָ וּרְאֵה֙ כָּל־הָֽעַתֻּדִים֙ הָעֹלִ֣ים עַל־הַצֹּ֔אן עֲקֻדִּ֥ים נְקֻדִּ֖ים וּבְרֻדִּ֑ים כִּ֣י רָאִ֔יתִי אֵ֛ת כָּל־אֲשֶׁ֥ר לָבָ֖ן עֹ֥שֶׂה לָּֽךְ׃ 12
೧೨ಆತನು ನನಗೆ, ‘ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ, ಆದುದರಿಂದ ನೀನು ಕಣ್ಣೆತ್ತಿ ಕುರಿಗಳೊಂದಿಗೆ ಸಂಗಮಿಸುವ ಆಡುಗಳನ್ನು ನೋಡು. ರೇಖೆಯೂ, ಚುಕ್ಕೆಯೂ, ಮಚ್ಚೆಯೂ ಉಳ್ಳವುಗಳಾಗಿವೆ.
אָנֹכִ֤י הָאֵל֙ בֵּֽית־אֵ֔ל אֲשֶׁ֨ר מָשַׁ֤חְתָּ שָּׁם֙ מַצֵּבָ֔ה אֲשֶׁ֨ר נָדַ֥רְתָּ לִּ֛י שָׁ֖ם נֶ֑דֶר עַתָּ֗ה ק֥וּם צֵא֙ מִן־הָאָ֣רֶץ הַזֹּ֔את וְשׁ֖וּב אֶל־אֶ֥רֶץ מוֹלַדְתֶּֽךָ׃ 13
೧೩ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೂ ಬಂಧುಗಳ ಬಳಿಗೂ ಹಿಂತಿರುಗಿ ಹೋಗು’” ಎಂದು ಹೇಳಿದನು.
וַתַּ֤עַן רָחֵל֙ וְלֵאָ֔ה וַתֹּאמַ֖רְנָה ל֑וֹ הַע֥וֹד לָ֛נוּ חֵ֥לֶק וְנַחֲלָ֖ה בְּבֵ֥ית אָבִֽינוּ׃ 14
೧೪ಯಾಕೋಬನು ಈ ಮಾತುಗಳನ್ನಾಡಿದಾಗ ರಾಹೇಲಳು ಮತ್ತು ಲೇಯಳು, “ನಮ್ಮ ತಂದೆಯ ಮನೆಯಲ್ಲಿ ನಮಗೆ ಪಾಲೂ ಸ್ವಾಸ್ತ್ಯತೆ ಇನ್ನೇನಿದೆ?
הֲל֧וֹא נָכְרִיּ֛וֹת נֶחְשַׁ֥בְנוּ ל֖וֹ כִּ֣י מְכָרָ֑נוּ וַיֹּ֥אכַל גַּם־אָכ֖וֹל אֶת־כַּסְפֵּֽנוּ׃ 15
೧೫ಅವನು ನಮ್ಮನ್ನು ಅನ್ಯರೆಂದು ಎಣಿಸುತ್ತಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಮೂಲಕ ಸಿಕ್ಕಿದ ಹಣವನ್ನು ತಾನೇ ನುಂಗಿಬಿಟ್ಟನಲ್ಲಾ.
כִּ֣י כָל־הָעֹ֗שֶׁר אֲשֶׁ֨ר הִצִּ֤יל אֱלֹהִים֙ מֵֽאָבִ֔ינוּ לָ֥נוּ ה֖וּא וּלְבָנֵ֑ינוּ וְעַתָּ֗ה כֹּל֩ אֲשֶׁ֨ר אָמַ֧ר אֱלֹהִ֛ים אֵלֶ֖יךָ עֲשֵֽׂה׃ 16
೧೬ಆದ್ದರಿಂದ ದೇವರು ನಮ್ಮ ತಂದೆಯಿಂದ ತೆಗೆದುಕೊಂಡ ಆಸ್ತಿಯನ್ನೆಲ್ಲಾ ನಮಗೂ, ನಮ್ಮ ಮಕ್ಕಳಿಗೂ ಕೊಟ್ಟನಲ್ಲಾ, ದೇವರು ನಿನಗೆ ಹೇಳಿದಂತೆಯೇ ಮಾಡು” ಎಂದು ಉತ್ತರ ಕೊಟ್ಟರು.
וַיָּ֖קָם יַעֲקֹ֑ב וַיִּשָּׂ֛א אֶת־בָּנָ֥יו וְאֶת־נָשָׁ֖יו עַל־הַגְּמַלִּֽים׃ 17
೧೭ಆಗ ಯಾಕೋಬನು ತನ್ನ ಮಕ್ಕಳನ್ನೂ, ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿದನು.
וַיִּנְהַ֣ג אֶת־כָּל־ מִקְנֵ֗הוּ וְאֶת־כָּל־רְכֻשׁוֹ֙ אֲשֶׁ֣ר רָכָ֔שׁ מִקְנֵה֙ קִנְיָנ֔וֹ אֲשֶׁ֥ר רָכַ֖שׁ בְּפַדַּ֣ן אֲרָ֑ם לָב֛וֹא אֶל־יִצְחָ֥ק אָבִ֖יו אַ֥רְצָה כְּנָֽעַן׃ 18
೧೮ತಾನು ಸಂಪಾದಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ, ಪದ್ದನ್ ಅರಾಮ್ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಪಶುಪ್ರಾಣಿಗಳನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ತನ್ನ ತಂದೆಯಾದ ಇಸಾಕನ ಬಳಿಗೆ ಹೋಗುವುದಕ್ಕಾಗಿ ಹೊರಟನು.
וְלָבָ֣ן הָלַ֔ךְ לִגְזֹ֖ז אֶת־צֹאנ֑וֹ וַתִּגְנֹ֣ב רָחֵ֔ל אֶת־הַתְּרָפִ֖ים אֲשֶׁ֥ר לְאָבִֽיהָ׃ 19
೧೯ಆಗ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.
וַיִּגְנֹ֣ב יַעֲקֹ֔ב אֶת־לֵ֥ב לָבָ֖ן הָאֲרַמִּ֑י עַל־בְּלִי֙ הִגִּ֣יד ל֔וֹ כִּ֥י בֹרֵ֖חַ הֽוּא׃ 20
೨೦ಆದರೆ ಯಾಕೋಬನು ತಾನು ಹೋಗುತ್ತೇನೆಂದು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ಅವನನ್ನು ಮೋಸಗೊಳಿಸಿ ಹೊರಟುಬಿಟ್ಟನು.
וַיִּבְרַ֥ח הוּא֙ וְכָל־אֲשֶׁר־ל֔וֹ וַיָּ֖קָם וַיַּעֲבֹ֣ר אֶת־הַנָּהָ֑ר וַיָּ֥שֶׂם אֶת־פָּנָ֖יו הַ֥ר הַגִּלְעָֽד׃ 21
೨೧ಹೀಗೆ ಅವನು ತನ್ನ ಆಸ್ತಿಯನ್ನೆಲ್ಲಾ ತೆಗೆದುಕೊಂಡು ಯೂಫ್ರೆಟಿಸ್ ಮಹಾ ನದಿಯನ್ನು ದಾಟಿ ಗಿಲ್ಯಾದೆಂಬ ಬೆಟ್ಟದ ಸೀಮೆಯ ದಾರಿಯನ್ನು ಹಿಡಿದನು.
וַיֻּגַּ֥ד לְלָבָ֖ן בַּיּ֣וֹם הַשְּׁלִישִׁ֑י כִּ֥י בָרַ֖ח יַעֲקֹֽב׃ 22
೨೨ಯಾಕೋಬನು ಹೊರಟುಹೋದ ವರ್ತಮಾನವು ಮೂರನೆಯ ದಿನದಲ್ಲಿ ಲಾಬಾನನಿಗೆ ತಿಳಿದುಬರಲು,
וַיִּקַּ֤ח אֶת־אֶחָיו֙ עִמּ֔וֹ וַיִּרְדֹּ֣ף אַחֲרָ֔יו דֶּ֖רֶךְ שִׁבְעַ֣ת יָמִ֑ים וַיַּדְבֵּ֥ק אֹת֖וֹ בְּהַ֥ר הַגִּלְעָֽד׃ 23
೨೩ಅವನು ತನ್ನ ಬಂಧುಗಳನ್ನು ಕೂಡಿಸಿಕೊಂಡು, ಏಳು ದಿನ ಪ್ರಯಾಣಮಾಡಿ ಯಾಕೋಬನನ್ನು ಹಿಂದಟ್ಟಿ ಗಿಲ್ಯಾದ್ ಬೆಟ್ಟದ ಸೀಮೆಯಲ್ಲಿ ಅವನನ್ನು ಸಂಧಿಸಿದನು.
וַיָּבֹ֧א אֱלֹהִ֛ים אֶל־לָבָ֥ן הָאֲרַמִּ֖י בַּחֲלֹ֣ם הַלָּ֑יְלָה וַיֹּ֣אמֶר ל֗וֹ הִשָּׁ֧מֶר לְךָ֛ פֶּן־תְּדַבֵּ֥ר עִֽם־יַעֲקֹ֖ב מִטּ֥וֹב עַד־רָֽע׃ 24
೨೪ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು” ಎಂದನು.
וַיַּשֵּׂ֥ג לָבָ֖ן אֶֽת־יַעֲקֹ֑ב וְיַעֲקֹ֗ב תָּקַ֤ע אֶֽת־אָהֳלוֹ֙ בָּהָ֔ר וְלָבָ֛ן תָּקַ֥ע אֶת־אֶחָ֖יו בְּהַ֥ר הַגִּלְעָֽד׃ 25
೨೫ತರುವಾಯ ಲಾಬಾನನೂ ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹ ತನ್ನವರೊಡನೆ ಅದೇ ಗಿಲ್ಯಾದ್ ಬೆಟ್ಟದಲ್ಲಿ ಗುಡಾರವನ್ನು ಹಾಕಿಕೊಂಡನು.
וַיֹּ֤אמֶר לָבָן֙ לְיַעֲקֹ֔ב מֶ֣ה עָשִׂ֔יתָ וַתִּגְנֹ֖ב אֶת־לְבָבִ֑י וַתְּנַהֵג֙ אֶת־בְּנֹתַ֔י כִּשְׁבֻי֖וֹת חָֽרֶב׃ 26
೨೬ಲಾಬಾನನು ಯಾಕೋಬನಿಗೆ, “ಇದೇನು ನೀನು ಮಾಡಿದ್ದು? ನೀನು ನನ್ನ ಹೆಣ್ಣುಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದವರಂತೆ ತೆಗೆದುಕೊಂಡು ನನಗೆ ಏನೂ ಹೇಳದೆ ಹೊರಟುಬಂದೆಯಲ್ಲಾ.
לָ֤מָּה נַחְבֵּ֙אתָ֙ לִבְרֹ֔חַ וַתִּגְנֹ֖ב אֹתִ֑י וְלֹא־הִגַּ֣דְתָּ לִּ֔י וָֽאֲשַׁלֵּחֲךָ֛ בְּשִׂמְחָ֥ה וּבְשִׁרִ֖ים בְּתֹ֥ף וּבְכִנּֽוֹר׃ 27
೨೭ಯಾಕೆ ನನ್ನನ್ನು ಮೋಸಗೊಳಿಸಿ ಕಳ್ಳತನದಿಂದ ಹೊರಟು ಬಂದಿ? ನನಗೆ ತಿಳಿಸಿದ್ದರೆ ನಾನು ಸಂತೋಷದಿಂದ ಹಾಡು, ವೀಣೆ, ತಾಳ ಮುಂತಾದ ವಾದ್ಯಗಳೊಡನೆ ನಿನ್ನನ್ನು ಕಳುಹಿಸುತ್ತಿದ್ದೆನು.
וְלֹ֣א נְטַשְׁתַּ֔נִי לְנַשֵּׁ֥ק לְבָנַ֖י וְלִבְנֹתָ֑י עַתָּ֖ה הִסְכַּ֥לְתָּֽ עֲשֽׂוֹ׃ 28
೨೮ಆದರೆ ನೀನು ನನ್ನ ಹೆಣ್ಣು ಮಕ್ಕಳಿಗೂ ಮೊಮ್ಮಕ್ಕಳಿಗೂ, ಮುದ್ದಿಡುವುದಕ್ಕಾದರೂ ಆಗದಂತೆ ಮಾಡಿದಿ. ನೀನು ಮಾಡಿದ್ದು ಹುಚ್ಚು ಕೆಲಸ.
יֶשׁ־לְאֵ֣ל יָדִ֔י לַעֲשׂ֥וֹת עִמָּכֶ֖ם רָ֑ע וֵֽאלֹהֵ֨י אֲבִיכֶ֜ם אֶ֣מֶשׁ ׀ אָמַ֧ר אֵלַ֣י לֵאמֹ֗ר הִשָּׁ֧מֶר לְךָ֛ מִדַּבֵּ֥ר עִֽם־יַעֲקֹ֖ב מִטּ֥וֹב עַד־רָֽע׃ 29
೨೯ನಿಮಗೆ ಕೇಡುಮಾಡುವುದಕ್ಕೆ ನನ್ನಲ್ಲಿ ಸಾಮರ್ಥ್ಯ ಇದೆ. ಆದರೆ ಕಳೆದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು, ‘ಯಾಕೋಬನಿಗೆ ಒಳ್ಳೆಯದನ್ನಾಗಲೀ, ಕೆಟ್ಟದನ್ನಾಗಲಿ ಹೇಳದ ಹಾಗೆ ಎಚ್ಚರವಾಗಿರು’ ಎಂದು ಹೇಳಿದನು.
וְעַתָּה֙ הָלֹ֣ךְ הָלַ֔כְתָּ כִּֽי־נִכְסֹ֥ף נִכְסַ֖פְתָּה לְבֵ֣ית אָבִ֑יךָ לָ֥מָּה גָנַ֖בְתָּ אֶת־אֱלֹהָֽי׃ 30
೩೦ಆದರೆ ತಂದೆಯ ಮನೆಗೆ ಹೋಗುವುದಕ್ಕೆ ನಿನಗೆ ಬಹಳ ಆಶೆಯಿರುವುದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದು ಕೇಳಿದನು.
וַיַּ֥עַן יַעֲקֹ֖ב וַיֹּ֣אמֶר לְלָבָ֑ן כִּ֣י יָרֵ֔אתִי כִּ֣י אָמַ֔רְתִּי פֶּן־תִּגְזֹ֥ל אֶת־בְּנוֹתֶ֖יךָ מֵעִמִּֽי׃ 31
೩೧ಅದಕ್ಕೆ ಯಾಕೋಬನು ಲಾಬಾನನಿಗೆ, “ನೀನು ನಿನ್ನ ಹೆಣ್ಣು ಮಕ್ಕಳನ್ನು ಬಲಾತ್ಕಾರದಿಂದ ಹಿಂದಕ್ಕೆ ತೆಗೆದುಕೊಳ್ಳುವಿ ಎಂದು ಭಯಪಟ್ಟು ಹೊರಟು ಬಂದೆನು.
עִ֠ם אֲשֶׁ֨ר תִּמְצָ֣א אֶת־אֱלֹהֶיךָ֮ לֹ֣א יִֽחְיֶה֒ נֶ֣גֶד אַחֵ֧ינוּ הַֽכֶּר־לְךָ֛ מָ֥ה עִמָּדִ֖י וְקַֽח־לָ֑ךְ וְלֹֽא־יָדַ֣ע יַעֲקֹ֔ב כִּ֥י רָחֵ֖ל גְּנָבָֽתַם׃ 32
೩೨ನಿನ್ನ ದೇವರುಗಳು ಯಾರ ಬಳಿಯಲ್ಲಿ ಸಿಕ್ಕುತ್ತವೆಯೋ ಅವರು ಸಾಯಲಿ. ನಮ್ಮ ಬಂಧುಗಳ ಮುಂದೆಯೇ ನನ್ನ ಆಸ್ತಿಯನ್ನು ಪರೀಕ್ಷಿಸಬಹುದು. ಅದರಲ್ಲಿ ನಿನ್ನದೇನಾದರೂ ಸಿಕ್ಕಿದರೆ ಅದನ್ನು ತೆಗೆದುಕೋ” ಎಂದು ಹೇಳಿದನು. ರಾಹೇಲಳು ಆ ದೇವರುಗಳನ್ನು ಕದ್ದದ್ದು ಯಾಕೋಬನಿಗೆ ತಿಳಿದಿರಲಿಲ್ಲ.
וַיָּבֹ֨א לָבָ֜ן בְּאֹ֥הֶל יַעֲקֹ֣ב ׀ וּבְאֹ֣הֶל לֵאָ֗ה וּבְאֹ֛הֶל שְׁתֵּ֥י הָאֲמָהֹ֖ת וְלֹ֣א מָצָ֑א וַיֵּצֵא֙ מֵאֹ֣הֶל לֵאָ֔ה וַיָּבֹ֖א בְּאֹ֥הֶל רָחֵֽל׃ 33
೩೩ಲಾಬಾನನು ಯಾಕೋಬನ ಗುಡಾರದಲ್ಲಿಯೂ, ಲೇಯಳ ಗುಡಾರದಲ್ಲಿಯೂ, ಆ ಇಬ್ಬರು ದಾಸಿಯರ ಗುಡಾರದಲ್ಲಿಯೂ ಹುಡುಕಿದನು. ಆದರೂ ಅವನಿಗೇನೂ ಸಿಕ್ಕಲ್ಲಿಲ್ಲ. ಲೇಯಳ ಗುಡಾರವನ್ನು ಬಿಟ್ಟು ರಾಹೇಲಳ ಗುಡಾರಕ್ಕೆ ಬಂದನು.
וְרָחֵ֞ל לָקְחָ֣ה אֶת־הַתְּרָפִ֗ים וַתְּשִׂמֵ֛ם בְּכַ֥ר הַגָּמָ֖ל וַתֵּ֣שֶׁב עֲלֵיהֶ֑ם וַיְמַשֵּׁ֥שׁ לָבָ֛ן אֶת־כָּל־הָאֹ֖הֶל וְלֹ֥א מָצָֽא׃ 34
೩೪ರಾಹೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು (ತಡಿಯ ಚೀಲದಲ್ಲಿ) ಅವುಗಳ ಮೇಲೆ ಕುಳಿತ್ತಿದ್ದಳು. ಲಾಬಾನನು ಗುಡಾರದಲ್ಲಿದ್ದ ವಸ್ತುಗಳನ್ನೆಲ್ಲಾ ನೋಡಿದರೂ ಅವುಗಳನ್ನು ಕಾಣಲಿಲ್ಲ.
וַתֹּ֣אמֶר אֶל־אָבִ֗יהָ אַל־יִ֙חַר֙ בְּעֵינֵ֣י אֲדֹנִ֔י כִּ֣י ל֤וֹא אוּכַל֙ לָק֣וּם מִפָּנֶ֔יךָ כִּי־דֶ֥רֶךְ נָשִׁ֖ים לִ֑י וַיְחַפֵּ֕שׂ וְלֹ֥א מָצָ֖א אֶת־הַתְּרָפִֽים׃ 35
೩೫ರಾಹೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೆ ಹೋದರೂ ಕೋಪಿಸಿಕೊಳ್ಳಬೇಡ, ನಾನು ಮೈಲಿಗೆಯಾಗಿದ್ದೇನೆ” ಎಂದು ಹೇಳಿದಳು. ಅವನು ಚೆನ್ನಾಗಿ ಹುಡುಕಿದರೂ ಆ ವಿಗ್ರಹಗಳನ್ನು ಕಂಡುಕೊಳ್ಳದೆ ಹೊರಟು ಹೋದನು.
וַיִּ֥חַר לְיַעֲקֹ֖ב וַיָּ֣רֶב בְּלָבָ֑ן וַיַּ֤עַן יַעֲקֹב֙ וַיֹּ֣אמֶר לְלָבָ֔ן מַה־פִּשְׁעִי֙ מַ֣ה חַטָּאתִ֔י כִּ֥י דָלַ֖קְתָּ אַחֲרָֽי׃ 36
೩೬ಆಗ ಯಾಕೋಬನು ಕೋಪಗೊಂಡು ಲಾಬಾನನನ್ನು ಗದರಿಸಿ, “ನೀನು ಇಷ್ಟು ಆತುರ ಪಟ್ಟು ನನ್ನನ್ನು ಹಿಂದಟ್ಟಿ ಬರುವಂತೆ ನಾನೇನು ದ್ರೋಹ ಮಾಡಿದೆನು?
כִּֽי־מִשַּׁ֣שְׁתָּ אֶת־כָּל־כֵּלַ֗י מַה־מָּצָ֙אתָ֙ מִכֹּ֣ל כְּלֵי־בֵיתֶ֔ךָ שִׂ֣ים כֹּ֔ה נֶ֥גֶד אַחַ֖י וְאַחֶ֑יךָ וְיוֹכִ֖יחוּ בֵּ֥ין שְׁנֵֽינוּ׃ 37
೩೭ನನ್ನ ವಸ್ತುಗಳನ್ನೆಲ್ಲಾ ಪರೀಕ್ಷಿಸಿ ನೋಡುವಂತೆ ನಾನೇನು ತಪ್ಪುಮಾಡಿದೆನು? ನಿನ್ನ ಸೊತ್ತು ಏನಾದರೂ ನನ್ನಲ್ಲಿ ಸಿಕ್ಕಿದೆಯೋ? ನನ್ನ ಬಳಗದವರ ಮುಂದೆಯೂ ನಿನ್ನ ಬಂಧುಗಳ ಮುಂದೆಯೂ ಅದನ್ನು ತಂದು ಇಡು. ಇವರೇ ನಮ್ಮಿಬ್ಬರ ನ್ಯಾಯವನ್ನು ತೀರಿಸಲಿ.
זֶה֩ עֶשְׂרִ֨ים שָׁנָ֤ה אָנֹכִי֙ עִמָּ֔ךְ רְחֵלֶ֥יךָ וְעִזֶּ֖יךָ לֹ֣א שִׁכֵּ֑לוּ וְאֵילֵ֥י צֹאנְךָ֖ לֹ֥א אָכָֽלְתִּי׃ 38
೩೮“ನಾನು ಇಪ್ಪತ್ತು ವರ್ಷ ನಿನ್ನ ಸಂಗಡ ಇದ್ದೆನು. ನಿನ್ನ ಹಿಂಡಿನ ಹೆಣ್ಣು ಆಡುಕುರಿಗಳನ್ನು ಕಂದು ಹಾಕಲಿಲ್ಲ. ನಿನ್ನ ಹಿಂಡಿನ ಟಗರುಗಳನ್ನು ನಾನೇನೂ ತಿಂದುಬಿಡಲಿಲ್ಲ.
טְרֵפָה֙ לֹא־הֵבֵ֣אתִי אֵלֶ֔יךָ אָנֹכִ֣י אֲחַטֶּ֔נָּה מִיָּדִ֖י תְּבַקְשֶׁ֑נָּה גְּנֻֽבְתִ֣י י֔וֹם וּגְנֻֽבְתִ֖י לָֽיְלָה׃ 39
೩೯ಕಾಡುಮೃಗಗಳಿಂದ ಕೊಲ್ಲಲ್ಪಟ್ಟ ಕುರಿ, ಆಡುಗಳನ್ನು ನಿನ್ನ ಭಾಗಕ್ಕೆ ಹಾಕದೆ ನಾನೇ ನಷ್ಟವನ್ನು ಹೊತ್ತೆನು. ಹಗಲಿನಲ್ಲಿ, ಇರುಳಿನಲ್ಲಿ ಕಳೆದು ಹೋದದ್ದರ ಲೆಕ್ಕವನ್ನು ನನ್ನಿಂದ ತೆಗೆದುಕೊಂಡೆ.
הָיִ֧יתִי בַיּ֛וֹם אֲכָלַ֥נִי חֹ֖רֶב וְקֶ֣רַח בַּלָּ֑יְלָה וַתִּדַּ֥ד שְׁנָתִ֖י מֵֽעֵינָֽי׃ 40
೪೦ಹಗಲಿನಲ್ಲಿ ಬಿಸಿಲಿನಿಂದಲೂ, ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು, ನಿದ್ದೆಮಾಡುವುದಕ್ಕಾದರೂ ಅವಕಾಶ ಸಿಗಲಿಲ್ಲ, ನನ್ನ ಸ್ಥಿತಿ ಹೀಗಿತ್ತು.
זֶה־לִּ֞י עֶשְׂרִ֣ים שָׁנָה֮ בְּבֵיתֶךָ֒ עֲבַדְתִּ֜יךָ אַרְבַּֽע־עֶשְׂרֵ֤ה שָׁנָה֙ בִּשְׁתֵּ֣י בְנֹתֶ֔יךָ וְשֵׁ֥שׁ שָׁנִ֖ים בְּצֹאנֶ֑ךָ וַתַּחֲלֵ֥ף אֶת־מַשְׂכֻּרְתִּ֖י עֲשֶׂ֥רֶת מֹנִֽים׃ 41
೪೧ಇಪ್ಪತ್ತು ವರ್ಷ ನಿನ್ನ ಮನೆಯಲ್ಲಿದ್ದೆನು. ನಿನ್ನ ಇಬ್ಬರು ಹೆಣ್ಣು ಮಕ್ಕಳಿಗೋಸ್ಕರ ಹದಿನಾಲ್ಕು ವರ್ಷವೂ ನಿನ್ನ ಆಡು ಕುರಿಗಳಿಗೋಸ್ಕರ ಆರು ವರ್ಷವೂ ಸೇವೆಮಾಡಿದೆನು. ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದೆ.
לוּלֵ֡י אֱלֹהֵ֣י אָבִי֩ אֱלֹהֵ֨י אַבְרָהָ֜ם וּפַ֤חַד יִצְחָק֙ הָ֣יָה לִ֔י כִּ֥י עַתָּ֖ה רֵיקָ֣ם שִׁלַּחְתָּ֑נִי אֶת־עָנְיִ֞י וְאֶת־יְגִ֧יעַ כַּפַּ֛י רָאָ֥ה אֱלֹהִ֖ים וַיּ֥וֹכַח אָֽמֶשׁ׃ 42
೪೨ನನ್ನ ತಂದೆಯ ದೇವರೂ, ಅಬ್ರಹಾಮನ ದೇವರೂ, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸಿಬಿಡುತ್ತಿದ್ದೆ, ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸ ಗೊತ್ತಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು” ಎಂದನು.
וַיַּ֨עַן לָבָ֜ן וַיֹּ֣אמֶר אֶֽל־יַעֲקֹ֗ב הַבָּנ֨וֹת בְּנֹתַ֜י וְהַבָּנִ֤ים בָּנַי֙ וְהַצֹּ֣אן צֹאנִ֔י וְכֹ֛ל אֲשֶׁר־אַתָּ֥ה רֹאֶ֖ה לִי־ה֑וּא וְלִבְנֹתַ֞י מָֽה־אֶֽעֱשֶׂ֤ה לָאֵ֙לֶּה֙ הַיּ֔וֹם א֥וֹ לִבְנֵיהֶ֖ן אֲשֶׁ֥ר יָלָֽדוּ׃ 43
೪೩ಅದಕ್ಕೆ ಲಾಬಾನನು ಯಾಕೋಬನಿಗೆ, “ಈ ಪುತ್ರಿಯರು ನನ್ನ ಪುತ್ರಿಯರಲ್ಲವೇ, ಈ ಮಕ್ಕಳು ನನ್ನ ಮೊಮ್ಮಕ್ಕಳಲ್ಲವೇ, ಈ ಹಿಂಡುಗಳೂ ನನ್ನವೇ, ನಿನ್ನ ಕಣ್ಣು ಮುಂದೆ ಇರುವುದೆಲ್ಲವೂ ನನ್ನದೇ. ಹಾಗಾದರೆ ಈ ನನ್ನ ಪುತ್ರಿಯರಿಗೋಸ್ಕರವೂ, ಇವರು ಹೆತ್ತ ಮಕ್ಕಳಿಗೋಸ್ಕರವೂ ಈಗ ನಾನೇನು ಮಾಡಲಿ?
וְעַתָּ֗ה לְכָ֛ה נִכְרְתָ֥ה בְרִ֖ית אֲנִ֣י וָאָ֑תָּה וְהָיָ֥ה לְעֵ֖ד בֵּינִ֥י וּבֵינֶֽךָ׃ 44
೪೪ಆದುದರಿಂದ ನಾವಿಬ್ಬರು ಸೇರಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳೋಣ ಬಾ, ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ” ಎಂದು ಹೇಳಿದನು.
וַיִּקַּ֥ח יַעֲקֹ֖ב אָ֑בֶן וַיְרִימֶ֖הָ מַצֵּבָֽה׃ 45
೪೫ಆಗ ಯಾಕೋಬನು ಒಂದು ಕಲ್ಲನ್ನು ತೆಗೆದುಕೊಂಡು ಸ್ತಂಭವಾಗಿ ನಿಲ್ಲಿಸಿದನು.
וַיֹּ֨אמֶר יַעֲקֹ֤ב לְאֶחָיו֙ לִקְט֣וּ אֲבָנִ֔ים וַיִּקְח֥וּ אֲבָנִ֖ים וַיַּֽעֲשׂוּ־גָ֑ל וַיֹּ֥אכְלוּ שָׁ֖ם עַל־הַגָּֽל׃ 46
೪೬ಯಾಕೋಬನು ತನ್ನ ಕಡೆಯವರಿಗೆ, “ಕಲ್ಲುಗಳನ್ನು ಕೂಡಿಸಿರಿ” ಎಂದು ಹೇಳಲು ಅವರು ಕಲ್ಲುಗಳನ್ನು ಕೂಡಿಸಿ ಗುಡ್ಡೆ ಮಾಡಿದರು. ಅವರೆಲ್ಲರೂ ಆ ಗುಡ್ಡೆಯ ಬಳಿಯಲ್ಲಿ ಭೋಜನವನ್ನು ಮಾಡಿದರು.
וַיִּקְרָא־ל֣וֹ לָבָ֔ן יְגַ֖ר שָׂהֲדוּתָ֑א וְיַֽעֲקֹ֔ב קָ֥רָא ל֖וֹ גַּלְעֵֽד׃ 47
೪೭ಆ ಗುಡ್ಡೆಗೆ ಲಾಬಾನನು “ಯಗರಸಾಹದೂತ” ಎಂದೂ ಯಾಕೋಬನು “ಗಲೇದ್” ಎಂದೂ ಹೆಸರಿಟ್ಟರು.
וַיֹּ֣אמֶר לָבָ֔ן הַגַּ֨ל הַזֶּ֥ה עֵ֛ד בֵּינִ֥י וּבֵינְךָ֖ הַיּ֑וֹם עַל־כֵּ֥ן קָרָֽא־שְׁמ֖וֹ גַּלְעֵֽד׃ 48
೪೮ಆಗ ಲಾಬಾನನು, “ಈ ಹೊತ್ತು ನಿನಗೂ ನನಗೂ ಆದ ಒಡಂಬಡಿಕೆಗೆ ಈ ಗುಡ್ಡೆಯೇ ಸಾಕ್ಷಿ” ಎಂದು ಹೇಳಿದುದರಿಂದ ಅದಕ್ಕೆ ಗಲೇದ್ ಎಂದು ಹೆಸರಾಯಿತು.
וְהַמִּצְפָּה֙ אֲשֶׁ֣ר אָמַ֔ר יִ֥צֶף יְהוָ֖ה בֵּינִ֣י וּבֵינֶ֑ךָ כִּ֥י נִסָּתֵ֖ר אִ֥ישׁ מֵרֵעֵֽהוּ׃ 49
೪೯ಅದಲ್ಲದೆ ಅವನು, “ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವನೇ ನಮ್ಮಿಬ್ಬರನ್ನೂ ನೋಡಿಕೊಳ್ಳುತ್ತಾ ಇರುವನು” ಎಂದು ಹೇಳಿದ್ದರಿಂದ ಅದಕ್ಕೆ ಮಿಚ್ಪಾ ಎಂದು ಹೆಸರಾಯಿತು
אִם־תְּעַנֶּ֣ה אֶת־בְּנֹתַ֗י וְאִם־תִּקַּ֤ח נָשִׁים֙ עַל־בְּנֹתַ֔י אֵ֥ין אִ֖ישׁ עִמָּ֑נוּ רְאֵ֕ה אֱלֹהִ֥ים עֵ֖ד בֵּינִ֥י וּבֵינֶֽךָ׃ 50
೫೦ಮತ್ತು ಲಾಬಾನನು, “ನೀನು ನನ್ನ ಇಬ್ಬರು ಹೆಣ್ಣುಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ಮನುಷ್ಯರೊಳಗೆ ಯಾರೂ ಇಲ್ಲದಿದ್ದರೂ ದೇವರೇ ನಮ್ಮ ಒಡಂಬಡಿಕೆಗೆ ಸಾಕ್ಷಿ” ಎಂದನು.
וַיֹּ֥אמֶר לָבָ֖ן לְיַעֲקֹ֑ב הִנֵּ֣ה ׀ הַגַּ֣ל הַזֶּ֗ה וְהִנֵּה֙ הַמַצֵּבָ֔ה אֲשֶׁ֥ר יָרִ֖יתִי בֵּינִ֥י וּבֵינֶֽךָ׃ 51
೫೧ಇದಲ್ಲದೆ ಲಾಬಾನನು ಯಾಕೋಬನಿಗೆ, “ನಿನಗೂ ನನಗೂ ನಡುವೆ ನಾನು ನಿಲ್ಲಿಸಿರುವ ಈ ಸ್ತಂಭವನ್ನು ನೋಡು, ಈ ಗುಡ್ಡೆಯನ್ನೂ ನೋಡು.
עֵ֚ד הַגַּ֣ל הַזֶּ֔ה וְעֵדָ֖ה הַמַּצֵּבָ֑ה אִם־אָ֗נִי לֹֽא־אֶֽעֱבֹ֤ר אֵלֶ֙יךָ֙ אֶת־הַגַּ֣ל הַזֶּ֔ה וְאִם־אַ֠תָּה לֹא־תַעֲבֹ֨ר אֵלַ֜י אֶת־הַגַּ֥ל הַזֶּ֛ה וְאֶת־הַמַּצֵּבָ֥ה הַזֹּ֖את לְרָעָֽה׃ 52
೫೨ನಾನು ಕೇಡು ಮಾಡುವುದಕ್ಕೋಸ್ಕರ ಈ ಗುಡ್ಡೆಯನ್ನು, ದಾಟಿ ನಿನ್ನ ಬಳಿಗೆ ಬರುವುದಿಲ್ಲ. ಹಾಗೆಯೇ ನೀನು ಈ ಗುಡ್ಡೆಯನ್ನೂ ಈ ಸ್ತಂಭವನ್ನು ದಾಟಿ ನನ್ನ ಬಳಿಗೆ ಬರಕೂಡದು. ಇದಕ್ಕೆ ಈ ಗುಡ್ಡೆಯೂ ಸ್ತಂಭವೂ ಸಾಕ್ಷಿಯಾಗಿರಲಿ.
אֱלֹהֵ֨י אַבְרָהָ֜ם וֵֽאלֹהֵ֤י נָחוֹר֙ יִשְׁפְּט֣וּ בֵינֵ֔ינוּ אֱלֹהֵ֖י אֲבִיהֶ֑ם וַיִּשָּׁבַ֣ע יַעֲקֹ֔ב בְּפַ֖חַד אָבִ֥יו יִצְחָֽק׃ 53
೫೩ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ” ಎಂದನು. ಅದೇ ಪ್ರಕಾರ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.
וַיִּזְבַּ֨ח יַעֲקֹ֥ב זֶ֙בַח֙ בָּהָ֔ר וַיִּקְרָ֥א לְאֶחָ֖יו לֶאֱכָל־לָ֑חֶם וַיֹּ֣אכְלוּ לֶ֔חֶם וַיָּלִ֖ינוּ בָּהָֽר׃ 54
೫೪ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಊಟಮಾಡಲು ಕರೆಯಿಸಿದನು. ಅವರು ಊಟ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು.
וַיַּשְׁכֵּ֨ם לָבָ֜ן בַּבֹּ֗קֶר וַיְנַשֵּׁ֧ק לְבָנָ֛יו וְלִבְנוֹתָ֖יו וַיְבָ֣רֶךְ אֶתְהֶ֑ם וַיֵּ֛לֶךְ וַיָּ֥שָׁב לָבָ֖ן לִמְקֹמֽוֹ׃ 55
೫೫ಮುಂಜಾನೆ ಲಾಬಾನನು ಎದ್ದು ತನ್ನ ಹೆಣ್ಣು ಮಕ್ಕಳಿಗೂ, ಮೊಮ್ಮಕ್ಕಳಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿ ತನ್ನ ಮನೆಗೆ ಹಿಂತಿರುಗಿ ಹೋದನು.

< בְּרֵאשִׁית 31 >