< בְּרֵאשִׁית 33 >

וַיִּשָּׂ֨א יַעֲקֹ֜ב עֵינָ֗יו וַיַּרְא֙ וְהִנֵּ֣ה עֵשָׂ֣ו בָּ֔א וְעִמּ֕וֹ אַרְבַּ֥ע מֵא֖וֹת אִ֑ישׁ וַיַּ֣חַץ אֶת־הַיְלָדִ֗ים עַל־לֵאָה֙ וְעַל־רָחֵ֔ל וְעַ֖ל שְׁתֵּ֥י הַשְּׁפָחֽוֹת׃ 1
ಯಾಕೋಬನು ಕಣ್ಣೆತ್ತಿ ನೋಡಿದಾಗ, ಏಸಾವನು ನಾನೂರು ಮಂದಿ ಮನುಷ್ಯರ ಸಂಗಡ ಬರುತ್ತಿದ್ದನು. ಆಗ ಅವನು ಲೇಯಳಿಗೂ, ರಾಹೇಲಳಿಗೂ, ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ, ಅವರನ್ನು ಬೇರೆ ಬೇರೆ ಮಾಡಿದನು.
וַיָּ֧שֶׂם אֶת־הַשְּׁפָח֛וֹת וְאֶת־יַלְדֵיהֶ֖ן רִֽאשֹׁנָ֑ה וְאֶת־לֵאָ֤ה וִֽילָדֶ֙יהָ֙ אַחֲרֹנִ֔ים וְאֶת־רָחֵ֥ל וְאֶת־יוֹסֵ֖ף אַחֲרֹנִֽים׃ 2
ದಾಸಿಯರನ್ನೂ, ಅವರ ಮಕ್ಕಳನ್ನೂ ಮುಂದುಗಡೆಯಲ್ಲಿಯೂ; ಅವರ ಹಿಂದೆ ಲೇಯಳನ್ನೂ, ಆಕೆಯ ಮಕ್ಕಳನ್ನೂ; ಕಟ್ಟಕಡೆಯಲ್ಲಿ ರಾಹೇಲಳನ್ನೂ, ಯೋಸೇಫನನ್ನೂ ಇರಿಸಿದನು.
וְה֖וּא עָבַ֣ר לִפְנֵיהֶ֑ם וַיִּשְׁתַּ֤חוּ אַ֙רְצָה֙ שֶׁ֣בַע פְּעָמִ֔ים עַד־גִּשְׁתּ֖וֹ עַד־אָחִֽיו׃ 3
ತಾನೇ ಅವರ ಮುಂದಾಗಿ ಹೋಗಿ ತನ್ನ ಸಹೋದರನ ಬಳಿಗೆ ಬರುವವರೆಗೆ ಏಳು ಸಾರಿ ನೆಲದವರೆಗೆ ಬಗ್ಗಿದನು.
וַיָּ֨רָץ עֵשָׂ֤ו לִקְרָאתוֹ֙ וַֽיְחַבְּקֵ֔הוּ וַיִּפֹּ֥ל עַל־צַוָּארָ֖ו וַׄיִּׄשָּׁׄקֵ֑ׄהׄוּׄ וַיִּבְכּֽוּ׃ 4
ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು, ಅವನನ್ನು ಅಪ್ಪಿಕೊಂಡು, ಅವನ ಕೊರಳಿನ ಮೇಲೆ ಬಿದ್ದು, ಅವನಿಗೆ ಮುದ್ದಿಟ್ಟನು. ಅವರಿಬ್ಬರೂ ಅತ್ತರು.
וַיִּשָּׂ֣א אֶת־עֵינָ֗יו וַיַּ֤רְא אֶת־הַנָּשִׁים֙ וְאֶת־הַיְלָדִ֔ים וַיֹּ֖אמֶר מִי־אֵ֣לֶּה לָּ֑ךְ וַיֹּאמַ֕ר הַיְלָדִ֕ים אֲשֶׁר־חָנַ֥ן אֱלֹהִ֖ים אֶת־עַבְדֶּֽךָ׃ 5
ಆಗ ಏಸಾವನು ತನ್ನ ದೃಷ್ಟಿ ಹರಿಸಿ, ಆ ಸ್ತ್ರೀಯರನ್ನೂ, ಮಕ್ಕಳನ್ನೂ ನೋಡಿ, “ನಿನ್ನ ಜೊತೆಯಲ್ಲಿರುವ ಇವರು ಯಾರು?” ಎಂದು ಕೇಳಿದನು. ಅದಕ್ಕವನು, “ದೇವರು ನಿನ್ನ ದಾಸನಿಗೆ ಕೃಪೆಯಿಂದ ಕೊಟ್ಟ ಮಕ್ಕಳು,” ಎಂದನು.
וַתִּגַּ֧שְׁןָ הַשְּׁפָח֛וֹת הֵ֥נָּה וְיַלְדֵיהֶ֖ן וַתִּֽשְׁתַּחֲוֶֽיןָ׃ 6
ಆಗ ದಾಸಿಯರೂ, ಅವರ ಮಕ್ಕಳೂ ಹತ್ತಿರ ಬಂದು ಅವನಿಗೆ ಅಡ್ಡಬಿದ್ದರು.
וַתִּגַּ֧שׁ גַּם־לֵאָ֛ה וִילָדֶ֖יהָ וַיִּֽשְׁתַּחֲו֑וּ וְאַחַ֗ר נִגַּ֥שׁ יוֹסֵ֛ף וְרָחֵ֖ל וַיִּֽשְׁתַּחֲוֽוּ׃ 7
ಲೇಯಳು ಸಹ ತನ್ನ ಮಕ್ಕಳೊಂದಿಗೆ ಹತ್ತಿರ ಬಂದು ಅಡ್ಡಬಿದ್ದಳು. ತರುವಾಯ ಯೋಸೇಫನೂ, ರಾಹೇಲಳೂ ಬಂದು ಅಡ್ಡಬಿದ್ದರು.
וַיֹּ֕אמֶר מִ֥י לְךָ֛ כָּל־הַמַּחֲנֶ֥ה הַזֶּ֖ה אֲשֶׁ֣ר פָּגָ֑שְׁתִּי וַיֹּ֕אמֶר לִמְצֹא־חֵ֖ן בְּעֵינֵ֥י אֲדֹנִֽי׃ 8
ಆಗ ಏಸಾವನು, “ನಾನು ದಾರಿಯಲ್ಲಿ ಕಂಡ ಪಶುಗಳ ಮಂದೆಗಳೆಲ್ಲಾ ಏತಕ್ಕೆ?” ಎಂದು ಕೇಳಿದನು. ಯಾಕೋಬನು, “ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ದಯೆ ದೊರಕುವುದಕ್ಕೋಸ್ಕರ,” ಎಂದನು.
וַיֹּ֥אמֶר עֵשָׂ֖ו יֶשׁ־לִ֣י רָ֑ב אָחִ֕י יְהִ֥י לְךָ֖ אֲשֶׁר־לָֽךְ׃ 9
ಅದಕ್ಕೆ ಏಸಾವನು, “ನನ್ನ ಸಹೋದರನೇ, ನನಗೆ ಸಾಕಷ್ಟು ಇದೆ. ನಿನಗೆ ಇದ್ದದ್ದು ನೀನೇ ಇಟ್ಟುಕೋ,” ಎಂದನು.
וַיֹּ֣אמֶר יַעֲקֹ֗ב אַל־נָא֙ אִם־נָ֨א מָצָ֤אתִי חֵן֙ בְּעֵינֶ֔יךָ וְלָקַחְתָּ֥ מִנְחָתִ֖י מִיָּדִ֑י כִּ֣י עַל־כֵּ֞ן רָאִ֣יתִי פָנֶ֗יךָ כִּרְאֹ֛ת פְּנֵ֥י אֱלֹהִ֖ים וַתִּרְצֵֽנִי׃ 10
ಆಗ ಯಾಕೋಬನು, “ಹಾಗಲ್ಲ, ಈಗ ನಿನ್ನ ದೃಷ್ಟಿಯಲ್ಲಿ ನಾನು ದಯೆ ಹೊಂದಿದ್ದೆನಾದರೆ, ನನ್ನ ಕಾಣಿಕೆಯನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು. ಏಕೆಂದರೆ ನಾನು ದೇವರ ಮುಖವನ್ನು ಕಂಡಂತೆ, ನಿನ್ನ ಮುಖವನ್ನು ಕಂಡದ್ದಕ್ಕಾಗಿಯೂ, ನೀನು ನನ್ನನ್ನು ಮೆಚ್ಚಿದ್ದಕ್ಕಾಗಿಯೂ,
קַח־נָ֤א אֶת־בִּרְכָתִי֙ אֲשֶׁ֣ר הֻבָ֣את לָ֔ךְ כִּֽי־חַנַּ֥נִי אֱלֹהִ֖ים וְכִ֣י יֶשׁ־לִי־כֹ֑ל וַיִּפְצַר־בּ֖וֹ וַיִּקָּֽח׃ 11
ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಸ್ವೀಕರಿಸಬೇಕೆಂದು ಬೇಡುತ್ತೇನೆ. ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇವೆ,” ಎಂದು ಹೇಳಿ, ಅವನನ್ನು ಬಲವಂತ ಮಾಡಿದ್ದರಿಂದ ಏಸಾವನು ಅದನ್ನು ತೆಗೆದುಕೊಂಡನು.
וַיֹּ֖אמֶר נִסְעָ֣ה וְנֵלֵ֑כָה וְאֵלְכָ֖ה לְנֶגְדֶּֽךָ׃ 12
ತರುವಾಯ ಏಸಾವನು, “ನಾವು ಮುಂದಕ್ಕೆ ಪ್ರಯಾಣವನ್ನು ಬೆಳೆಸೋಣ. ನಾನು ನಿನ್ನ ಮುಂದೆ ಹೋಗುವೆನು,” ಎಂದನು.
וַיֹּ֣אמֶר אֵלָ֗יו אֲדֹנִ֤י יֹדֵ֙עַ֙ כִּֽי־הַיְלָדִ֣ים רַכִּ֔ים וְהַצֹּ֥אן וְהַבָּקָ֖ר עָל֣וֹת עָלָ֑י וּדְפָקוּם֙ י֣וֹם אֶחָ֔ד וָמֵ֖תוּ כָּל־הַצֹּֽאן׃ 13
ಅದಕ್ಕೆ ಯಾಕೋಬನು ಅವನಿಗೆ, “ಮಕ್ಕಳು ಎಳೆಯ ಪ್ರಾಯದವರಿದ್ದಾರೆ, ಇದಲ್ಲದೆ ಎಳೆಯ ದನಕುರಿಗಳು ನನ್ನ ಬಳಿಯಲ್ಲಿರುವುದು ನನ್ನ ಒಡೆಯನಿಗೆ ತಿಳಿದಿದೆ. ಒಂದು ದಿನ ಹೆಚ್ಚಾಗಿ ಅವುಗಳನ್ನು ನಡೆಸಿದರೆ, ಎಲ್ಲಾ ಮಂದೆಯು ಸತ್ತು ಹೋದಾವು.
יַעֲבָר־נָ֥א אֲדֹנִ֖י לִפְנֵ֣י עַבְדּ֑וֹ וַאֲנִ֞י אֶֽתְנָהֲלָ֣ה לְאִטִּ֗י לְרֶ֨גֶל הַמְּלָאכָ֤ה אֲשֶׁר־לְפָנַי֙ וּלְרֶ֣גֶל הַיְלָדִ֔ים עַ֛ד אֲשֶׁר־אָבֹ֥א אֶל־אֲדֹנִ֖י שֵׂעִֽירָה׃ 14
ಆದ್ದರಿಂದ ನನ್ನ ಒಡೆಯನೇ, ನೀನು ನಿನ್ನ ಸೇವಕನಿಗಿಂತಲೂ ಮುಂಚೆ ಹೋಗಬಹುದು. ನಾನು ನನ್ನ ಒಡೆಯನ ಬಳಿಗೆ ಸೇಯೀರಿಗೆ ಬರುವವರೆಗೆ, ನನ್ನ ಮುಂದಿರುವ ಮಂದೆಗಳ ನಡಿಗೆಗೂ, ಮಕ್ಕಳ ನಡಿಗೆಗೂ ತಕ್ಕ ಹಾಗೆ ಮೆಲ್ಲಗೆ ನಡೆದು ಬರುವೆನು,” ಎಂದನು.
וַיֹּ֣אמֶר עֵשָׂ֔ו אַצִּֽיגָה־נָּ֣א עִמְּךָ֔ מִן־הָעָ֖ם אֲשֶׁ֣ר אִתִּ֑י וַיֹּ֙אמֶר֙ לָ֣מָּה זֶּ֔ה אֶמְצָא־חֵ֖ן בְּעֵינֵ֥י אֲדֹנִֽי׃ 15
ಅದಕ್ಕೆ ಏಸಾವನು, “ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ,” ಅನ್ನಲು. ಯಾಕೋಬನು, “ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ,” ಎಂದನು.
וַיָּשָׁב֩ בַּיּ֨וֹם הַה֥וּא עֵשָׂ֛ו לְדַרְכּ֖וֹ שֵׂעִֽירָה׃ 16
ಹೀಗೆ ಏಸಾವನು ಆ ದಿನವೇ ತನ್ನ ಮಾರ್ಗವಾಗಿ ಸೇಯೀರಿಗೆ ಹಿಂದಿರುಗಿ ಹೋದನು.
וְיַעֲקֹב֙ נָסַ֣ע סֻכֹּ֔תָה וַיִּ֥בֶן ל֖וֹ בָּ֑יִת וּלְמִקְנֵ֙הוּ֙ עָשָׂ֣ה סֻכֹּ֔ת עַל־כֵּ֛ן קָרָ֥א שֵׁם־הַמָּק֖וֹם סֻכּֽוֹת׃ ס 17
ಯಾಕೋಬನು ಪ್ರಯಾಣಮಾಡಿ, ಸುಕ್ಕೋತಿಗೆ ಹೋಗಿ, ಮನೆಯನ್ನು ಕಟ್ಟಿಸಿಕೊಂಡನು. ಇದಲ್ಲದೆ ತನ್ನ ಪಶುಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದ್ದರಿಂದ ಆ ಸ್ಥಳಕ್ಕೆ ಸುಕ್ಕೋತ್ ಎಂದು ಹೆಸರಾಯಿತು.
וַיָּבֹא֩ יַעֲקֹ֨ב שָׁלֵ֜ם עִ֣יר שְׁכֶ֗ם אֲשֶׁר֙ בְּאֶ֣רֶץ כְּנַ֔עַן בְּבֹא֖וֹ מִפַּדַּ֣ן אֲרָ֑ם וַיִּ֖חַן אֶת־פְּנֵ֥י הָעִֽיר׃ 18
ಯಾಕೋಬನು ಪದ್ದನ್ ಅರಾಮಿನಿಂದ ಬಂದು, ಕಾನಾನ್ ದೇಶದ ಶೆಕೆಮ್ ಪಟ್ಟಣವನ್ನು ಸೇರಿ, ಅದರ ಮುಂದೆ ತನ್ನ ಗುಡಾರಗಳನ್ನು ಹಾಕಿದನು.
וַיִּ֜קֶן אֶת־חֶלְקַ֣ת הַשָּׂדֶ֗ה אֲשֶׁ֤ר נָֽטָה־שָׁם֙ אָהֳל֔וֹ מִיַּ֥ד בְּנֵֽי־חֲמ֖וֹר אֲבִ֣י שְׁכֶ֑ם בְּמֵאָ֖ה קְשִׂיטָֽה׃ 19
ಅವನು ತನ್ನ ಗುಡಾರಗಳನ್ನು ಹಾಕಿದ ಭೂಮಿಯನ್ನು ಶೆಕೆಮಿನ ತಂದೆ ಹಮೋರನ ಮಕ್ಕಳ ಕೈಯಿಂದ ನೂರು ನಾಣ್ಯಗಳಿಗೆ ಕೊಂಡುಕೊಂಡನು.
וַיַּצֶּב־שָׁ֖ם מִזְבֵּ֑חַ וַיִּ֨קְרָא־ל֔וֹ אֵ֖ל אֱלֹהֵ֥י יִשְׂרָאֵֽל׃ ס 20
ಅಲ್ಲಿ ಬಲಿಪೀಠವನ್ನು ಕಟ್ಟಿಸಿ ಅದಕ್ಕೆ, ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.

< בְּרֵאשִׁית 33 >